Home Blog Page 3190

ಕರ್ನಾಟಕ ಸಂಭ್ರಮ -50: ಶಾಲಾ ಮಕ್ಕಳಿಂದ ಪ್ರಭಾತ ಪೇರಿ

0

ಲಕ್ಷ್ಮೇಶ್ವರ: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದ ಕರ್ನಾಟಕ ಸಂಭ್ರಮ-50 ಸಂಭ್ರಮದ ಹಿನ್ನೆಲೆಯಲ್ಲಿ ಗದಗ ಜಿಲ್ಲಾದ್ಯಾಂತ ಸಂಭ್ರಮ ಮನೆ ಮಾಡಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮತ್ತು ಗಂಡು ಮಕ್ಕಳ ಅವಳಿ ಶಾಲೆಗಳ ಮಕ್ಕಳಿಂದ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಹಾಗೂ ಪ್ರಭಾತ ಪೇರಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅವಳಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕ ಸಿಬ್ಬಂದಿಗಳು, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಕರ್ನಾಟಕ ಸಂಭ್ರಮ -50: ಶಾಲಾ ಮಕ್ಕಳಿಂದ ಪ್ರಭಾತ ಪೇರಿ

0

ಲಕ್ಷ್ಮೇಶ್ವರ: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದ ಕರ್ನಾಟಕ ಸಂಭ್ರಮ-50 ಸಂಭ್ರಮದ ಹಿನ್ನೆಲೆಯಲ್ಲಿ ಗದಗ ಜಿಲ್ಲಾದ್ಯಾಂತ ಸಂಭ್ರಮ ಮನೆ ಮಾಡಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮತ್ತು ಗಂಡು ಮಕ್ಕಳ ಅವಳಿ ಶಾಲೆಗಳ ಮಕ್ಕಳಿಂದ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಹಾಗೂ ಪ್ರಭಾತ ಪೇರಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅವಳಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕ ಸಿಬ್ಬಂದಿಗಳು, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಕರ್ನಾಟಕ ಸಂಭ್ರಮ -50: ಶಾಲಾ ಮಕ್ಕಳಿಂದ ಪ್ರಭಾತ ಪೇರಿ

0

ಲಕ್ಷ್ಮೇಶ್ವರ: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದ ಕರ್ನಾಟಕ ಸಂಭ್ರಮ-50 ಸಂಭ್ರಮದ ಹಿನ್ನೆಲೆಯಲ್ಲಿ ಗದಗ ಜಿಲ್ಲಾದ್ಯಾಂತ ಸಂಭ್ರಮ ಮನೆ ಮಾಡಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮತ್ತು ಗಂಡು ಮಕ್ಕಳ ಅವಳಿ ಶಾಲೆಗಳ ಮಕ್ಕಳಿಂದ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಹಾಗೂ ಪ್ರಭಾತ ಪೇರಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅವಳಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕ ಸಿಬ್ಬಂದಿಗಳು, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ವಸಂತಕಾಲದ ಹೂವುಗಳಿಗೆ ಜೊತೆಯಾದ ಧ್ರುವ ಸರ್ಜಾ

0

ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತಕಾಲದ ಹೂಗಳು’ ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.

“ಇದು ಸಣ್ಣ ತಂಡವೊಂದು ಶ್ರದ್ಧೆಯಿಂದ ಬರಿ ಕಥೆಯನ್ನಷ್ಟೆ ನಂಬಿ ಮಾಡಿದ ಒಂದು ಅಚ್ಚುಕಟ್ಟಾದ ಚಿತ್ರ. ವಿಭಿನ್ನ ಕಂಟೆಂಟ್ ನೊಂದಿಗೆ ಬರುತ್ತಿರುವ ಹೊಸಬರ ಚಿತ್ರಗಳಿಗೆ ಉತ್ತೇಜನ ಕೊಡುವುದು ಈ ಹೊತ್ತಿನ ಅಗತ್ಯ ಎಂದು ನನಗನಿಸುತ್ತದೆ.

ಹೀಗಾಗಿ ಈ ಉತ್ಸಾಹಿ ಯುವ ತಂಡಕ್ಕೆ, ಮುಖ್ಯವಾಗಿ ಒಂದು ಉತ್ತಮ ಚಿತ್ರಕ್ಕೆ ಬೆಂಬಲ ನೀಡುವ ಸಲುವಾಗಿ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದೇನೆ.

ಉತ್ತರ ಕರ್ನಾಟಕದ ಪರಿಸರ, ಕಾಲೇಜು ದಿನಗಳು, ತರಲೆ ಫ್ರೆಂಡ್ಸ್, ಮುದ್ದಾದ ಲವ್ ಸ್ಟೋರಿಗಳು ಇದನ್ನೆಲ್ಲ ನೀವು ಈ ಚಿತ್ರದಲ್ಲಿ ನೋಡಬಹುದು.

ನಿಮ್ಮ ಟೀನೇಜ್ ಲೈಫ್ ಗೆ ಮತ್ತೆ ಹೋಗಿ ಆ ನೆನಪುಗಳನ್ನು ಮೆಲುಕು ಹಾಕೋ ಹಾಗೆ ಈ ಚಿತ್ರ ಮಾಡುತ್ತದೆ ಎನ್ನುವ ನಂಬಿಕೆ ನನಗಿದೆ” ಎನ್ನುತ್ತಾರೆ ಧ್ರುವ ಸರ್ಜಾ.

“ಒಂದು ಚಿತ್ರವನ್ನು ತಯಾರಿಸುವುದು ಎಷ್ಟು ಕಷ್ಟವೋ ಅದಕ್ಕಿಂತ ಹೆಚ್ಚಿನ ಕಷ್ಟ ಜನರಿಗೆ ಆ ಚಿತ್ರವನ್ನು ತಲುಪಿಸುವುದರಲ್ಲಿದೆ. ಈ ನಿಟ್ಟಿನಲ್ಲಿ ನಾವು ಚಿತ್ರವನ್ನು ಪ್ರೆಸೆಂಟ್ ಮಾಡಲು ಧ್ರುವ ಸರ್ಜಾ ಅವರನ್ನು ಸಂಪರ್ಕಿಸಿದೆವು.

ಚಿತ್ರದ ಕಂಟೆಂಟ್ ಮೆಚ್ಚಿ ಅವರು ಚಿತ್ರವನ್ನು ಪ್ರೆಸೆಂಟ್ ಮಾಡಲು ಮುಂದೆ ಬಂದರು. ಇದು ನಮ್ಮ ಇಡೀ ತಂಡಕ್ಕೆ ಹೊಸ ಹುಮ್ಮಸ್ಸು ತಂದಿದೆ. ಇದೇ ಉತ್ಸಾಹದಲ್ಲಿ ನವೆಂಬರ್ 10ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ” – ನಿರ್ದೇಶಕ ಸಚಿನ್ ಶೆಟ್ಟಿ.

ವಸಂತಕಾಲದ ಹೂಗಳು ಚಿತ್ರದಲ್ಲಿ ಸಚಿನ್ ರಾಠೋಡ್ ಮತ್ತು ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಅಶೋಕ ರಾಠೋಡ್ ಹಾಗೂ ಸಿದ್ದು ರಸೂರೆ ನಿರ್ಮಾಣ ಮಾಡಿದ್ದಾರೆ. ಟೀನೇಜ್ ಲವ್ ಸ್ಟೋರಿ ಹೊಂದಿರುವ ಈ ಚಿತ್ರ ಸಂಪೂರ್ಣವಾಗಿ ಬಿಜಾಪುರದಲ್ಲಿ ಚಿತ್ರೀಕರಣಗೊಂಡಿದೆ.

ಸರ್ಕಾರಿ ಬಸ್ ಕದ್ದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

0

ವಿಜಯನಗರ: ಸರ್ಕಾರಿ ಬಸ್ ಕದ್ದು ಪರಾರಿಯಾಗಿದ್ದ ಭೂಪನನ್ನ ಮರಿಯಮ್ಮಮಹಳ್ಳಿ ಪೊಲೀಸರು ಬಂದಿಸಿದ್ದಾರೆ.

ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಬಸ್ ನಿಲ್ದಾಣದಲ್ಲಿ ಬಸ್ ನ್ನು ನಿಲ್ಲಿಸಲಾಗಿತ್ತು.

ಡ್ರೈವರ್ ಮತ್ತು ಕಂಡಕ್ಟರ್ ಬಸ್ ನಿಲ್ಲಿಸಿ ಕೊಠಡಿಯಲ್ಲಿ ಮಲಗಿದ್ದರು. ಇದನ್ನು ಗಮನಿಸಿದ ಖದೀಮ ಬಸ್ ನ್ನ ಕದ್ದು ಪರಾರಿಯಾಗಿದ್ದ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಹುಡುಕಾಟ ನಡೆಸಿದ್ದರು.

ಹಾರುವನಹಳ್ಳಿ ಗ್ರಾಮದ ಬಳಿ ಡಾಭಾದ ಹತ್ತಿರ ಬಸ್ ನಿಲ್ಲಿಸಿ ಪರಾರಿಯಾಗಿದ್ದ ಹೆಚ್.ಕೆಂಚಪ್ಪನನ್ನು (37)  ಪೊಲೀಸರು ಬಂಧಿಸಿದ್ದಾರೆ. ಈತ ಮಗಿಮಾವಿನಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

56 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಒತ್ತಾಯಗಳನ್ನು ಕೇಳಲು ನಾನು ಬಂದಿದ್ದೇನೆ: ಸಿದ್ದರಾಮಯ್ಯ

0

ಮಂಡ್ಯ ಅ 31: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ.

ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ.

ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ.

ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ.

ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ.

ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು.

ವೃದ್ದನ ಮೇಲೆ ನಾಯಿಗಳ ದಾಳಿ: ಸ್ಥಳದಲ್ಲೇ ಸಾವನ್ನಪ್ಪಿದ ಅಪರಿಚಿತ ವೃದ್ದ

0

ಮಂಡ್ಯ:  ಬೀದಿ ನಾಯಿಗಳು ಅಟ್ಯಾಕ್ ಮಾಡಿದ ಪರಿಣಾಮ ಅಪರಿಚಿತ ವೃದ್ದನೋರ್ವ  ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿಯ ಬಾರ್ ಒಂದರ ಬಳಿ ನಡೆದಿದೆ.

ಮದ್ಯಪಾನ ಮಾಡಿ ರಸ್ತೆಯಲ್ಲೆ ಬಿದ್ದಿದ್ದ ಅಪರಿಚಿತ ವೃದ್ದನ ಮೇಲೆ ನಾಯಿಗಳು ದಾಳಿ ಮಾಡಿವೆ. ಈ ವೇಳೆ ನಾಯಿಗಳ ದಾಳಿಯಿಂದ ವೃದ್ದ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ವೃದ್ದನ ಗುರುತು ಹಾಗೂ ವಿಳಾಸ ಪತ್ತೆಗಾಗಿ ಪೊಲೀಸರು ಮುಂದಾಗದ್ದಾರೆ.

 

ಮಾರಕಾಸ್ತ್ರಗಳಿಂದ ಕಾಂಗ್ರೆಸ್ ಮುಖಂಡನ ಹತ್ಯೆ: 12 ಜನರ ವಿರುದ್ಧ ಪ್ರಕರಣ ದಾಖಲು

0

ರಾಯಚೂರು: ಬೆಳ್ಳಂಬೆಳಿಗ್ಗೆ ಬಿಸಿಲು ನಾಡು ರಾಯಚೂರಿನಲ್ಲಿ ಕಾಂಗ್ರೆಸ್ ಮುಖಂಡನ ಕೊಲೆಯ ಬಗ್ಗೆ ವರದಿಯಾಗಿದೆ.

ಬೆಳಿಗ್ಗೆ ಹೊಲಕ್ಕೆ ನೀರು ಕಟ್ಟಲು ಹೋದಾಗ ಏಕಾಏಕಿ ಬಂದ ನಾಲ್ಕೈದು ದುಷ್ಕರ್ಮಿಗಳಿಂದ ಕೈ ಮುಖಂಡ ಪ್ರಸಾದ್‌ನ ಕೊಲೆಯಾಗಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ್ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು,

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆಯ ದ್ವೇಷಕ್ಕೆ ಕೊಲೆಯ ಮಾಡಿರುವ ಶಂಕೆಯಿದ್ದು,

ರೊಚ್ಚಿಗೆದ್ದ ಗ್ರಾಮಸ್ಥರು ಮಾನ್ವಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಘಟನಾ ಸಂಬಂಧ ಮಾನ್ವಿ ಠಾಣೆಯಲ್ಲಿ 12 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿಗಳಾಗಿ ಪತ್ತೆ ಕಾರ್ಯ ಮುಂದುವರೆದಿದೆ.

ಮೆಡಿಕಲ್ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಅರೆಸ್ಟ್

0

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಭ್ಯರ್ಥಿಗಳಿಂದ ಪಡೆದಿದ್ದ 47.80 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ತೆಲಂಗಾಣ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದೆ. ನೀಟ್ ಪರೀಕ್ಷೆಯ ಫಲಿತಾಂಶದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಗಾಳ ಹಾಕುತ್ತಿದ್ದ.

ಪರೀಕ್ಷೆಯಲ್ಲಿ ಕಡಿಮೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಒಳ್ಳೆಯ ಕಾಲೇಜ್‍ನಲ್ಲಿ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭಿಕ ತನಿಖೆಯಲ್ಲಿ ಇದೇ ಮಾದರಿಯಲ್ಲಿ 20ಕ್ಕೂ ಅಧಿಕ ಮಂದಿಗೆ ವಂಚನೆ (Fraud Case) ಮಾಡಿರುವುದು ಬೆಳಕಿಗೆ ಬಂದಿದೆ.

ಹಣ ಕಳೆದುಕೊಂಡವರಲ್ಲಿ ಕೆಲವರು ದೂರು ದಾಖಲಿಸಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ವಿಷ ಆಹಾರ ಸೇವನೆ, ನಾಲ್ಕು ರಾಸುಗಳ ಸಾವು

0

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಆರೋಗ್ಯವಾಗಿದ್ದ ನಾಲ್ಕು ಹಸುಗಳು ಪಶು ಆಹಾರ ಸೇವಿಸಿ ಮೃತಪಟ್ಟಿವೆ. ರೈತ ಜಯಕೃಷ್ಣನಿಗೆ ಸೇರಿದ ಸುಮಾರು 3ಲಕ್ಷ ಮೌಲ್ಯದ ಹಸುಗಳು ಮೃತಪಟ್ಟಿವೆ.

ಹಸುಗಳು ಸಧ್ರಡವಾಗಿ ಬೆಳೆಯಲು ಕುಟುಂಬಸ್ಥರು ಪಶು ಆಹಾರ ನೀಡಿದ್ದರು. ಪಶು ಆಹಾರ ಸೇವಿಸಿದ್ದ ಕೂಡಲೇ ತೀವೃ ಅಸ್ವಸ್ಥವಾದ ನಾಲ್ಕು ಹಸುಗಳು ಅಸ್ವಸ್ಥವಾದ ಕೆಲವೇ ಹೊತ್ತಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿವೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!