Home Blog Page 3192

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ್ಯ..! ಆತಂಕದಲ್ಲಿ ಜನತೆ

0

ಬೆಂಗಳೂರು: ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರ ನಿದ್ದೆಗೆಡಿಸಿದೆ.

ಬೆಂಗಳೂರಿನ ಕೂಡ್ಲುಗೇಟ್​​ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಭಯದಲ್ಲೇ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಜನ ಓಡಾಡುತ್ತಿದ್ದಾರೆ. ಆದ್ರೆ ಕಳೆದ ಕೆಲದ ದಿನದಿಂದ ಚಿರತೆ ಆತಂಕ ಕಾಡ್ತಿದೆ.

ಹೌದು, ಬೆಂಗಳೂರು ದೊಡ್ಡದಾಗಿ ಬೆಳೆದಂತೆಲ್ಲಾ ಕಾಡು ನಾಶವಾಗುತ್ತಿದೆ. ಅದರಲ್ಲೂ ಈ ಮಹಾನಗರಿ ಬೆಂಗಳೂರು ಬೆಳೆಸಲು, ಕಳೆದ 20 ವರ್ಷದಲ್ಲಿ ಬೆಂಗಳೂರು ಹೊರವಲಯದ ಕಾಡುಗಳನ್ನ ನಾಶ ಮಾಡಲಾಗಿದೆ.

ಇದರ ಪರಿಣಾಮ ಕಾಡು ಪ್ರಾಣಿಗಳು ನಗರಕ್ಕೆ ಬಂದು ಕಾಟ ಕೊಡುತ್ತಿವೆ. ಕೆಲ ವರ್ಷದ ಹಿಂದೆ ಚಿರತೆಯೊಂದು ಸೀದಾ ಅಪಾರ್ಟ್‌ಮೆಂಟ್ ಒಳಗೆ ನುಗ್ಗಿತ್ತು.

ಅದಕ್ಕೂ ಮೊದಲು ರಾತ್ರಿ ಸಮಯಕ್ಕೆ ಸ್ಕೂಲ್ ಒಳಗೆ ಚಿರತೆ ಓಡಾಡುವ ದೃಶ್ಯ ಕಂಡು ಜನ ಶಾಕ್ ಆಗಿದ್ರು.

ಬೆಂಗಳೂರಲ್ಲಿ ಚಿರತೆ ಸ್ಕೂಲ್‌ಗೆ ನುಗ್ಗಿದ್ದ ವಿಡಿಯೋ ಜಗತ್ತಿನಾದ್ಯಂತ ವೈರಲ್ ಆಗಿತ್ತು. ಈಗ ಬೆಂಗಳೂರಿನ ನಡು ರಸ್ತೆಯಲ್ಲೇ ಈ ಚಿರತೆ ರಾಯ ಪ್ರತ್ಯಕ್ಷ್ಯನಾಗಿದ್ದಾನೆ

ಅಪರಿಚಿತ ವಾಹನ-ಕಾರಿನ ನಡುವೆ ಡಿಕ್ಕಿ: ಯುಟ್ಯೂಬರ್​​ ಸಾವು

0

ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪರಿಚಿತ ವಾಹನ-ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಯುಟ್ಯೂಬರ್​​ ಮೃತಪಟ್ಟಿದ್ದಾರೆ.

ಬೆಂಗಳೂರು ಕಡೆಯಿಂದ ತುಮಕೂರು ಕಡೆ ಹೋಗುತ್ತಿದ್ದ ಸ್ವಿಫ್ಟ್​​ ಕಾರಿನಲ್ಲಿದ್ದ ಯುಟ್ಯೂಬರ್​​​​ ವೆಂಕಟೇಶ್(43) ಪ್ರಾಣ ಕಳೆದುಕೊಂಡಿದ್ದಾರೆ.

ಸಂಚಾರಿ ಪೊಲೀಸರಿಂದ ಅಪರಿಚಿತ ವಾಹನಕ್ಕೆ ಶೋಧ ನಡೆಯುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ರೌಡಿ ಗ್ಯಾಂಗ್..!

0

ಚಿಕ್ಕಬಳ್ಳಾಪುರ: 20ಕ್ಕೂ ಹೆಚ್ಚು ರೌಡಿ ಗ್ಯಾಂಗ್ ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನ ದೋಚಿರುವ ಘಟನೆ ಚಿಕ್ಕಬಳ್ಳಾಪುರ ನಗರದ ನಕ್ಕಲಕುಂಟೆ ಬಡಾವಣೆಯಲ್ಲಿ ನಡೆದಿದೆ.

ಬಡಾವಣೆಯ ಬರಕತ್ ಎನ್ನುವಾತನ ಮೇಲೆ 20 ಜನರ ಗ್ಯಾಂಗ್ ಅಟ್ಯಾಕ್ ಮಾಡಿ ನಡು ರಸ್ತೆಯಲ್ಲೇ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.  ಹಲ್ಲೆ ನಡೆಸಿದ ನಂತರ ಮನೆಯಲ್ಲಿದ್ದ ಚಿನ್ನಾಭರಣಗಳು, ಸಿಸಿ ಟಿವಿಯ ಡಿವಿಆರ್ ನ್ನ ಕದ್ದೋಯ್ದಿದ್ದಾರಂತೆ.

ಇದೇ ಅಕ್ಟೋಬರ್ 21 ರಂದು ಘಟನೆ ನಡೆದಿದ್ದು,  ಘಟನೆ ದೃಶ್ಯಾವಳಿಗಳು ಪಕ್ಕದ ಮನೆಗಳಲ್ಲಿನ ಸಿಸಿ ಟಿವಿಯಲ್ಲಿ  ಸೆರೆಯಾಗಿದ್ದು,. ಘಟನೆಯಲ್ಲಿ ಗಾಯಗೊಂಡ ಬರಕತ್ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಸಮೀಯುಲ್ಲಾ, ಅಜ್ಜು@ ಅಮ್ಜದ್ ಪಾಷ, ಶೌಕತ್, ಸದ್ದು ಸೇರಿದಂತೆ 20 ಜನರ ವಿರುದ್ದ ದೂರು ನೀಡಿದ್ದು,  ಪೊಲೀಸರು 12 ಜನ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ,

ಘಟನೆಗೆ ಬರಕತ್ ಹಾಗೂ ಆತನ ಪತ್ನಿಯ ನಡುವಿನ ಕೌಟುಂಬಿಕ ಕಲಹ ಹಾಗೂ ಬಾವಮೈದುರ ಜೊತೆ ಹಣಕಾಸು ವಿಚಾರದಲ್ಲಿ ನಡೆದಿರುವ ವೈಷಮ್ಯ ಕಾರಣ ಎನ್ನಲಾಗಿದೆ.

ಘಟನೆ ಬಗ್ಗೆ ದೂರುದಾರ ಬರಕತ್  ಪ್ರತಿಕ್ರಿಯೆ ನೀಡಿದ್ದು, ತಾನು ಒಬ್ಬನೇ ಇದ್ದಾಗ ಆರೊಪಿಗಳು ರೌಡಿಗಳಂತೆ ಗುಂಪುಕಟ್ಟಿಕೊಂಡು ಮನೆಯ ಬಳಿ ಬಂದು ದಾಂದಲೆ ನಡೆಸಿ ತನ್ನ ಮೇಲೆ ಮನಸೋ ಇಚ್ಚೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಆರೊಪಿಗಳು ತಲೆಮೆರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.  ಬರಕತ್ ಎನ್ನುವವರ ಮೇಲೆ ರೌಡಿಗಳಂತೆ ವರ್ತಿಸಿ ದೌರ್ಜನ್ಯ ಮಾಡಿರೊದು ಬಡಾವಣೆಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್: ಮತ್ತೆ 15 ದಿನ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

0

ನವದೆಹಲಿಕರ್ನಾಟಕ ಸರ್ಕಾರದಿಂದ ಮುಂದಿನ 15 ದಿನಗಳವರೆಗೆ ಪ್ರತಿದಿನ ತಲಾ 2,600 ಕ್ಯೂಸೆಕ್ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶ ಹೊರಡಿಸಿದೆ

ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿ ನೀರಿಲ್ಲದೇ ರೈತರು ಗೋಳಾಡುತ್ತಿದ್ದಾರೆ. ಬರದ ನಡುವೆಯೂ ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರಿಗೆ ಹೊರೆಯಾಗುವಂತೆ ಕರ್ನಾಟಕದಿಂದ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಆದೇಶ ಹೊರಡಿಸಿದೆ.

ನವದೆಹಲಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಸೋಮವಾರ ನಡೆಸಿದ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಆನ್ಲೈನ್ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಕರ್ನಾಟಕ ಹಾಗೂ ತಮಿಳುನಾಡು ವಾದವನ್ನು ಆಲಿಸಿದ ಸಿಡಬ್ಲ್ಯೂಆರ್ಸಿ ಕರ್ನಾಟಕದ ಕಾವೇರಿ ನದಿಯಿಂದ ಮುಂದಿನ 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ. ಮೂಲಕ ಸಂಕಷ್ಟದಲ್ಲಿದ್ದ ಕರ್ನಾಟಕ ಜನತೆಗೆ ಪುನಃ ಸಿಡಬ್ಲ್ಯೂಆರ್ಸಿ ಶಾಕ್ನೀಡಿದೆ.

ಮೂರು ತಿಂಗಳಾದ್ರೂ ಸಭೆ ಕರೆದು ಪ್ರತಿಕ್ರಿಯೆ ಕೊಡಲಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

0

ಗದಗ: ರಾಜ್ಯದಲ್ಲಿ ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ, ಕೇಂದ್ರದ OBC ಮೀಸಲಾತಿಗಾಗಿ ಪಾದಯಾತ್ರೆ ಸೇರಿದಂತೆ ಅನೇಕ ಹೋರಾಟ ಮಾಡಿದ್ದೇವೆ ಎಂದು ಗದಗ ನಗರದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಹೋರಾಟಕ್ಕೆ ಮಣಿದ ಬೊಮ್ಮಾಯಿ ನೇತೃತ್ವದ ಹಿಂದಿನ ಸರ್ಕಾರ 2D ಮೀಸಲಾತಿ ಘೋಷಣೆ ಮಾಡಿದ್ರು. ಮರುದಿನವೇ ನೀತಿಸಂಹಿತೆ ಜಾರಿಗೆ ಬಂತು ಆದ್ರೆ ಹಾಗಾಗಿ ಇದುವರೆಗೂ 2D ಅನುಷ್ಠಾನಕ್ಕೆ ಬಂದಿಲ್ಲ, ಈಗಿನ ಸರ್ಕಾರದ ಮುಖ್ಯಮಂತ್ರಿ ಸಿಧ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡ್ವಿ, ಒಂದು ತಿಂಗಳ ಒಳಗಾಗಿ ಸಿಎಂ ಕಾನೂನು ತಜ್ಞರೊಂದಿಗೆ ಮಾತಾಡಿ ಸಭೆ ಕರೀತೀನಿ ಅಂದ್ರು.

ಮೂರು ತಿಂಗಳಾದ್ರೂ ಸಭೆ ಕರೆದು ಪ್ರತಿಕ್ರಿಯೆ ಕೊಡಲಿಲ್ಲ ಹಾಗಾಗಿ ಸರ್ಕಾರದ ಗಮನ ಸೆಳೆಯಲು ಹೋರಾಟವನ್ನು ಬೆಳಗಾವಿಯಿಂದ ಪ್ರಾರಂಭ ಮಾಡಲಾಗಿದೆ ಎಂದರು.

ಇನ್ನೂ ಸಾಮೂಹಿಕ ಲಿಂಗಪೂಜೆಯೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೋರಾಟ ಮಾಡಲಾಗ್ತಿದೆ. ಇದು ೬ ನೇ ಹಂತದ ಎರಡನೇ ಭಾಗದ ಹೋರಾಟವಾಗಿದ್ದು, ಬೆಳಗಾವಿ, ಬಾಗಲಕೋಟೆ, ವಿಜಾಪುರ, ಕೊಪ್ಪಳ‌, ಧಾರವಾಡ ಯಶಸ್ವಿ ಹೋರಾಟ ಮಾಡಲಾಗಿದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ: ರಮೇಶ್ ಜಾರಕಿಹೊಳಿ

0

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಸಿಡಿ ಮಾಸ್ಟರ್ ಮೈಂಡ್. ಸಿಡಿನೇ ಡಿಕೆಶಿ ಶಕ್ತಿಯಾಗಿದ್ದು ಆತ ಒಬ್ಬ ಪುಕ್ಕಲ, ಮೋಸಗಾರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಡೇಂಜರ್ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗಿದೆ. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ.

ಆಪರೇಷನ್ ಕಮಲ ಎಲ್ಲವೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು. ಗ್ಯಾರಂಟಿ ಯೋಜನೆ ಫೇಲ್ ಆಗಿದೆ. ಹೀಗಾಗಿ ಜನರ ದಿಕ್ಕು ಬದಲು ಮಾಡಲು ಈ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಾಂಬ್ ಸ್ಫೋಟ: ರಾಜ್ಯದ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ ಎಂದ ಡಾ. ಜಿ ಪರಮೇಶ್ವರ್

0

ಬೆಂಗಳೂರು: ಕೇರಳದಲ್ಲಿ‌ ನಡೆದ ಬಾಂಬ್ ಸ್ಫೋಟದ ಹಿನ್ನಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇರಳದ ಘಟನೆ ಹಿನ್ನಲೆಯಲ್ಲಿ ನಾವು ಕೂಟ ಅಲರ್ಟ್ ಆಗಿದ್ದೇವೆ. ನಮ್ಮ ರಾಜ್ಯದಲ್ಲಿ ಅಂತಹ ಯಾವುದೇ ಘಟನೆಗಳು ಆಗದಂತೆ ನೋಡಿಕೊಳ್ತೇವೆ. ಆಗೋದೂ‌‌ ಕೂಡ ಬೇಡ ಎಂದರು.

ಸಿಎಂ ಜೊತೆ ಭೋಜನಕೂಟಕ್ಕೆ ಅನೇಕ ವ್ಯಾಖ್ಯಾನ ಕೇಳಿಬರುತ್ತಿರುವ ವಿಚಾರವಾಗಿ ಮಾತನಾಡಿ, ಇದನ್ನು ಬಿಜೆಪಿಯ ಕೆಲ ಮುಖಂಡರು ಹೇಳ್ತಿರೋದು. ಹೇಳಿಕೆಗಳನ್ನು ತಿರುಚೋದು, ಒಡೆದ ಬಾಗಿಲು ಅನ್ನೋದು, ಮೂರು ಬಾಗಿಲು ಅನ್ನೋದು ಎಲ್ಲವೂ ಬಿಜೆಪಿಯವರೇ ಎಂದು ತಿರುಗೇಟು ನೀಡಿದರು.

ಮನೆ ಕಟ್ಟುವ ವಿಚಾರಕ್ಕೆ ಜಗಳ: ವ್ಯಕ್ತಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

0

ಆನೇಕಲ್: ನಿವೇಶನ ಜಾಗದ ವಿಚಾರಕ್ಕೆ ಪೊಲೀಸ್ ಠಾಣೆ ಹಿಂಭಾಗದ ಏರಿಯಾದಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿಯಲ್ಲಿ ನಡೆದಿದೆ.

ಹೆಬ್ಬಗೋಡಿಯ ರಮೇಶ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಮೇಶ್ ಮನೆಯ ಎದುರು ಮನೆಯವರು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹೆಬ್ಬಗೋಡಿಯಲ್ಲಿ ಮನೆ ಕಟ್ಟುವ ವಿಚಾರಕ್ಕೆ ಮೃತ ರಮೇಶ್ ಹಾಗೂ ಕೊಲೆ ಆರೋಪಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಸರ್ಕಾರದಿಂದ ನೀಡಲಾಗಿದ್ದ ಜಾಗದಲ್ಲಿ ರಮೇಶ್ ನಿನ್ನೆ ಮನೆಗೆ ಅಡಿಪಾಯ ಹಾಕಿದ್ದರು.

ಇದೇ ಜಾಗವನ್ನು ಜಗದೀಶ್ ನನಗೆ ಸೇರಬೇಕು ಎಂದು ಆಗಾಗ ಗಲಾಟೆ ಮಾಡಿದ್ದ.ಹೆಬ್ಬಗೋಡಿ ನಗರಸಭೆಯಿಂದ ಜಾಗ ರಮೇಶ್ಗೆ ಸೇರಿದ್ದು ಎಂದು ದಾಖಲೆ ನೀಡಲಾಗಿತ್ತು. ಇದೇ ವಿಚಾರಕ್ಕೆ ರಾತ್ರಿ 10.30 ಸಮಯದಲ್ಲಿ ಮಾರಕಾಸ್ತ್ರಗಳ ಜೊತೆ ಬಂದು ನಿನ್ನೆ ರಾತ್ರಿ ರಮೇಶ್ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಲೋಕಾಯುಕ್ತ ದಾಳಿ: ಚಿನ್ನ, ಬೆಳ್ಳಿ ಆಭರಣಗಳು ಸೇರಿದಂತೆ ಒಂದೂವರೆ ಲಕ್ಷ ನಗದು ಹಣ ಪತ್ತೆ

0

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಇಂದು ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ದಾಳಿಯಲ್ಲಿ ಸುಮಾರು 400ಗ್ರಾಂ ಚಿನ್ನ, ಬೆಳ್ಳಿ ಆಭರಣಗಳು ಸೇರಿದಂತೆ ಒಂದೂವರೆ ಲಕ್ಷ ನಗದು ಹಣ ಪತ್ತೆಯಾಗಿದ್ದು, ಅಧಿಕಾರಿಗಳು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇಲ್ಲಿ ನೋಡಿದ್ರೆ ಒಂದು ಚೀಲವು ಮೆಕ್ಕೆಜೋಳ ಬರೊಲ್ಲಾ: ಬಿ ಸಿ ಪಾಟೀಲ್

0

ಹಾವೇರಿ: ಇಂದು ರಾಜ್ಯ ಘಟಕದಿಂದ ಬರ ಅಧ್ಯಯನದ ಸಮೀಕ್ಷೆ ಮಾಡಲಾಗುತ್ತಿದೆ. ಚಿಕ್ಕಣ್ಣ ಎಂಬ ರೈತನ ಹೊಲದಲ್ಲಿ ಸಮೀಕ್ಷೆ ಮಾಡಿದ್ದೇವೆ. ಇಲ್ಲಿ ನೋಡಿದ್ರೆ ಒಂದು ಚೀಲವು ಮೆಕ್ಕೆಜೋಳ ಬರೊಲ್ಲಾ, ನಾವು ಇಂತಹ ಬರಗಾಲ ಯಾವತ್ತೂ ನೋಡಿಲ್ಲಾ ಎಂದು ಬರ ಅಧ್ಯಯನದ ಬಳಿಕ ಮಾಜಿ ಸಚಿವ ಬಿ ಸಿ ಪಾಟೀಲ್ ರಾಣೇಬೆನ್ನೂರು ತಾಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಪ್ರತಿಕ್ರೀಯೆ ನೀಡಿದ್ದಾರೆ. ಆದರೆ ಇಷ್ಟಿದ್ದರು ಕೂಡಾ ರಾಜ್ಯ ಸರ್ಕಾರ ಇದುವರೆಗೂ ಪರಿಹಾರ ನೀಡಿಲ್ಲಾ.

ನಮ್ಮ ಸರ್ಕಾರ ಇದ್ದಾಗ 28 ಸಾವಿರದಂತೆ ಹಣವನ್ನು ಪ್ರತಿ ಎಕರೆಗೆ ಕೊಟ್ಟಿದ್ದೇವೂ ಆದರೆ ರಾಜ್ಯ ಸರ್ಕಾರ ಗ್ಯಾರಂಟಿ ಈಡೇರಿಸಿದ್ದೇವೆಂದು ಹೇಳಿಕೊಂಡು ತಿರುಗ್ತಾ ಇದಾರೆ. ಸಿಎಂ ಡಿಸಿಎಂ ಹಾಗೂ ಮಂತ್ರಿಗಳು ಪರಿಹಾರ ಕೊಡ್ತಾ ಇದೆವಿ ಎಂದು ಎಲ್ಲೂ ಹೇಳ್ತಾ ಇಲ್ಲಾ. ಪ್ರಾಣಿಗಳಿಂದ ಬೆಳೆ ಹಾನಿಯಾದರೆ ಕೇವಲ ಐದು ಸಾವಿರ ಹಣ ಕೊಟ್ಟಿದಾರೆ. ಕೇಂದ್ರದ ಕಡೆ ಬೊಟ್ಟು ತೋರಿಸದೆ ನಾವೇ ಪರಿಹಾರ ಕೊಟ್ಟಿದ್ವಿ, ಈ ಸರ್ಕಾರ ಬಂದ್ಮೇಲೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಉದ್ಭವ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

error: Content is protected !!