Home Blog Page 3193

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗಗೆ ಹೊತ್ತಿ ಉರಿದ ಬಸ್ ಗಳು

0

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಿಂತಿರೋ ಬಸ್ ಗಳಿಗೆ ತಗುಲಿರೋ ಬೆಂಕಿ ಹೊತ್ತಿದ ಪರಿಣಾಮ ಬಸ್‌ ಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ವೀರಭದ್ರದ ನಗರದಲ್ಲಿ ಈ ಘಟನೆ ನಡೆದಿದೆ. ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು,

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಈ ಘಟನೆಗೆ ಕಾರಣ ಏನು ಎಂಬುದನ್ನು ಅಗ್ನಿ ಶಾಮಕ ಸಿಬ್ಬಂದಿ ಪೊಲೀಸರು ತನಿಖೆ ನಡೆಸುತ್ತಿದ್ದು, ವಿದ್ಯುತ್ ಶಾಕ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರವ ಬಗ್ಗೆ ಶಂಕೆ ವ್ಯಕ್ತವಾಗಿದೆ.

 

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ

0

ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.‌

ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು.

ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ಐಶ್ವರ್ಯ ಅವರು ಈಗಾಗಲೇ ನಟಿಯಾಗಿ ಜನಪ್ರಿಯರಾಗಿದ್ದು, ಉಮಾಪತಿ ಅವರು ನಟನಾಗಿ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರವೊಂದನ್ನು ನಿರ್ದೇಶನ ಕೂಡ ಮಾಡಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಉಮಾಪತಿ ಅವರ ತಂದೆ ತಂಬಿ ರಾಮಯ್ಯ ಹೆಸರಾಂತ ಹಾಸ್ಯನಟರಾಗಿ ಜನಮನ್ನಣೆ ಪಡೆದಿದ್ದಾರೆ.

ನಿಶ್ಚಿತಾರ್ಥದಲ್ಲಿ ಉಮಾಪತಿ ಹಾಗೂ ಐಶ್ವರ್ಯ ಅವರ ಸುಂದರ ಉಡುಗೆ ಎಲ್ಲರ ಗಮನ ಸೆಳೆಯಿತ್ತು. ಉಮಾಪತಿ ಅವರಿಗೆ ಮನೀಶ್ ಮಲ್ಹೋತ್ರ ಹಾಗೂ ಐಶ್ವರ್ಯ ಅವರಿಗೆ ಜಯಂತಿ ರೆಡ್ಡಿ ಅವರು ವಸ್ತ್ರವಿನ್ಯಾಸ ಮಾಡಿದ್ದರು.

ಆಕರ್ಷಕವಾಗಿದ್ದ ರೂಬಿ ಹರಳಿನ ಬಂಗಾರದ ನಿಶ್ಚಿತಾರ್ಥದ ಉಂಗುರಗಳನ್ನು ಜೈಪುರದಿಂದ ತರಿಸಲಾಗಿತ್ತು. 2024 ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರ ಕಲ್ಯಾಣ ಮಹೋತ್ಸವ ನೆರವೇರಲಿದೆ ಎಂದು ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ.

ಪೊಲೀಸರು ಕಾರ್ಯಚರಣೆ: ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್

0

ಮಡಿಕೇರಿ;- ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ಕೆ.ಜಿ. ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಗಾಂಜಾ ಗಿಡಗಳನ್ನು ಬೆಳಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್‌. ಮೋಹನ್‌ ಕುಮಾರ್‌, ಗೋಣಿಕೊಪ್ಪ ವೃತ್ತದ ಗೋವಿಂದರಾಜು, ಪಿಎಸ್‌ಐ ರೂಪಾದೇವಿ ಬಿರಾದರ್‌ ಹಾಗೂ ಸಿಬಂದಿ ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಬೊಮ್ಮನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಇಲಾಖೆ ಕಟ್ಟೆಚ್ಚರ

0

ಬೆಂಗಳೂರು;- ರಾತ್ರಿ ವೇಳೆ ಚಿರತೆಯೊಂದು ರಾಜಧಾನಿ ಬೆಂಗಳೂರಿನ ಹೊರ ವಲಯದ ಬೊಮ್ಮನಹಳ್ಳಿ ಭಾಗದಲ್ಲಿ ಪ್ರತ್ಯಕ್ಷವಾಗಿದೆ. ಸಿಂಗಸಂದ್ರದ AECS ಲೇಔಟ್ ನಲ್ಲಿ ಪ್ರತ್ಯಕ್ಷವಾಗಿದೆ.

ಹೀಗಾಗಿ ಅರಣ್ಯ ಅಧಿಕಾರಿಗಳಿಂದ ಚಿರತೆ ಸೆರೆಗೆ ಹುಡುಕಾಟ ನಡೆದಿದೆ. ಜನ ಎಚ್ಚರಿಕೆಯಿಂದ ಇರಲು ಅರಣ್ಯ ಅಧಿಕಾರಿಗಳು ಸಂದೇಶ ನೀಡಿದ್ದು, ಮೈಕ್ ಮೂಲಕ ಚಿರತೆ ಇದೆ‌, ಜನ ಎಚ್ಚರಿಕೆಯಿಂದ ಓಡಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ.

ಬೆಳ್ಳಂ ಬೆಳಗ್ಗೆ ಲೋಕಾ ಬೇಟೆ- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಾಳಿ!

0

ಬೆಂಗಳೂರು;- ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಭ್ರಷ್ಟರ ಚಳಿ ಬಿಡಿಸಿದ್ದಾರೆ. ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇನ್ನೂ ಬೆಂಗಳೂರು ಒಂದರಲ್ಲೇ ಒಟ್ಟು 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೆಆರ್‌ ಪುರದಲ್ಲಿನ ಎಆರ್‌ಒ ಎಆರ್ ಓ ಚಂದ್ರಪ್ಪ ಬಿರಜ್ಜನವರ್ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಆರ್‌ಒಗೆ ಸಂಬಂಧಪಟ್ಟ ಮೂರು ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ ನ ಆರ್.ಆರ್.ನಗರ ವಲಯಾಧಿಕಾರಿಯಾಗಿರುವ ಚಂದ್ರಪ್ಪ. ಕೆ.ಆರ್.ಪುರಂ ನಿವಾಸದಲ್ಲಿ ದಾಳಿ ನಡೆಸಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ

ಹಾವೇರಿಯಲ್ಲಿ ಲೋಕಾಯುಕ್ತ ಕಾರ್ಯಚರಣೆ – ಬೆಳ್ಳಂ ಬೆಳಗ್ಗೆ 9 ಕಡೆ ದಾಳಿ

0

ಹಾವೇರಿ ;- ಲೋಕಾ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗೆ ಶಾಕ್ ನೀಡಿದ್ದಾರೆ.ಇಬ್ಬರು ಆರ್ ಎಫ್ ಓ ಗಳ ಮನೆ, ಸೇರಿದಂತೆ 9 ಕಡೆ ಲೋಕಾ ದಾಳಿ ನಡೆದಿದೆ. ಆರ್ ಎಪ್ ಓ ಪರಮೇಶ್ವರ ಪೇಲನವರ, ಆರ್ ಎಫ್ ಓ ಮಹಾಂತೇಶ ನ್ಯಾಮತಿ ಗೆ ಸೇರಿದ 9 ಕಡೆ ದಾಳಿ ನಡೆದಿದೆ.

ಹಾವೇರಿ, ಕುರಬಗೊಂಡ ಗ್ರಾಮದಲ್ಲಿ ದಾಳಿ ನಡೆದಿದ್ದು, ಪರಮೇಶ್ವರ ಪೇಲನವರಗೆ ಸೇರಿದ ಮೂರು ಮನೆ ಸೇರಿದಂತೆ 6 ಕಡೆ ದಾಳಿ ನಡೆದಿದೆ. ನ್ಯಾಮತಿಗೆ ಸೇರಿದ ಮನೆ ಸೇರಿದಂತೆ ಮೂರು ಕಡೆ ದಾಳಿ ನಡೆದಿದೆ.ಹಾವೇರಿಯ ಶಿವಾಜಿನಗರ, ವರದಾನೇಶ್ವರಿ ನಗರ, ಕುರುಬಗೊಂಡ ಗ್ರಾಮದ ಮನೆ, ಫಾಮ್೯ ಹೌಸ್ ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರಲು 26 ಜನ ಅರ್ಜಿ – ಆರ್ ವಿ ದೇಶಪಾಂಡೆ

0

ಕಾರವಾರ;- ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರುತ್ತಿರುವ 26 ಜನರ ಅರ್ಜಿ ನನ್ನ ಬಳಿಯಿದೆ ಎಂದು ಹೇಳಿದ್ದಾರೆ.ಈ ಸಂಬಂಧ ಅಂಕೋಲದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರಲು ಸಜ್ಜಾಗಿ 26 ಜನ ಅರ್ಜಿ ಹಾಕಿದ್ದಾರೆ. ಆ ಅರ್ಜಿಗಳೆಲ್ಲವೂ ನನ್ನ ಬಳಿಯಿದೆ. ಅವರೆಲ್ಲರೂ ಕಾಂಗ್ರೆಸ್‌ಗೆ ಬರೋದು ಖಚಿತ. ಸೂಕ್ತ ಸಮಯದಲ್ಲಿ ಯಾರು ಬರುತ್ತಾರೆ ಎಂಬುದು ಗೊತ್ತಾಗಲಿದೆ.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಿ ಏನು ಮಾಡಬೇಕಿದೆ? ಬಿಜೆಪಿಗೆ ಸರ್ಕಾರ ನಡೆಸುವ ಶಕ್ತಿ ಇಲ್ಲ. ಅಲ್ಲಿಗೆ ಹೋಗಿ ಸರ್ಕಾರ ಮಾಡಲು ಸಾಧ್ಯವೇ? ಯಾರೂ ಹೋಗುವುದಿಲ್ಲ, ಕಾಂಗ್ರೆಸ್‌ ದಿನೇ ದಿನೇ ಬಲಿಷ್ಠವಾಗುತ್ತಿದೆ. ಅದಕ್ಕಾಗಿ ಬಿಜೆಪಿಯ ಪ್ರಮುಖ ನಾಯಕರೇ ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಾತನಾಡಿ, ಅದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ನಾನು ಶಾಸಕನಾಗಿ ಇದ್ದರೆ ತಪ್ಪಿಲ್ಲ, ಇಷ್ಟು ವರ್ಷ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ, ನಾನು ಸುಖವಾಗಿದ್ದೇನೆ. ನಾನು ಲೋಕಸಭೆಗೆ ಸ್ಪರ್ಧೆ ಸಹ ಮಾಡುವುದಿಲ್ಲ. ನನ್ನ ಮಕ್ಕಳು ಸಹ ಸ್ಪರ್ಧೆ ಮಾಡುವುದಿಲ್ಲ. ಸದ್ಯ ನಾನು ವಿಶ್ರಾಂತಿ ಕಣದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಮಾಲ್ ನಲ್ಲಿ ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಅಂಕಲ್..!

0

ಬೆಂಗಳೂರು;- ನಗರದ ಪ್ರತಿಷ್ಟಿತ ಮಾಲ್ ನಲ್ಲಿ ಕಾಮುಕ ಅಂಕಲ್ ಪುಂಡಾಟ ಮೆರೆದಿದ್ದಾನೆ. ಯುವತಿ ಮೈ ಮುಟ್ಟಿ ಅಸಭ್ಯವಾಗಿ ಅಂಕಲ್ ವರ್ತಿಸಿದ ಘಟನೆ ಬೆಂಗಳೂರಿನ ಲೂಲು ಮಾಲ್‌ನಲ್ಲಿ ನಡೆದಿದೆ. ಅರವತ್ತರ ಆಸುಪಾಸಿನ ಅಂಕಲ್ ನಿಂದ ಹೀನ ಕೃತ್ಯ ನಡೆದಿದೆ. ಯುವತಿಯ ಹಿಂಬದಿ ಬೇಕಂತಲೇ ಕಾಮುಕ ಅಂಕಲ್ ಹಿಡಿದಿದ್ದಾನೆ. ಅಂಕಲ್ ಕಳ್ಳಾಟ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ. ವಿಡಿಯೋವನ್ನ Xಮೂಲಕ ಬೆಂಗಳೂರು ಪೊಲೀಸ್ರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿದೆ.

ತುಮಕೂರು: ಬಾವಲಿ ಬೇಟೆಗಾರರ ಬಂಧನ

0

ತುಮಕೂರು: ಕುಣಿಗಲ್ ತಾಲ್ಲೂಕಿನ ಕಾಡರಾಮನಹಳ್ಳಿಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದಿದ್ದ ನಾಲ್ವರನ್ನು ಕುಣಿಗಲ್ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಮಾಗಡಿ ತಾಲ್ಲೂಕಿನ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಬಂಧಿತ ಆರೋಪಿಗಳಾಗಿದ್ದು,

ಕಾಡರಾಮನಹಳ್ಳಿ ಜಮೀನೊಂದರ ಮರದಲ್ಲಿದ್ದ ಎಂಟು ಬಾವಲಿಗಳನ್ನು ಆರೋಪಿಗಳು ಹೊಡೆದು ಹಾಕಿದ್ದರು.. ಖಚಿತ ಮಾಹಿತಿ ಮೇರೆಗೆ ಹುಲಿಯೂರುದುರ್ಗ ವಲಯ ಅರಣ್ಯ ಅಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸತ್ತ ಬಾವಲಿಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ..

ಬೆಳಗಾವಿಯಲ್ಲಿ AEE M.S.ಬಿರಾದಾರ ಮನೆ ಮೇಲೆ ದಿಢೀರ್ ಲೋಕಾಯುಕ್ತರ ದಾಳಿ

0

ಬೆಳಗಾವಿ: ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ M.S.ಬಿರಾದಾರ ಮನೆ ಮೇಲೆ ಲೋಕಾ ದಾಳಿ ಮಾಡಿದೆ. ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂರ್ಟ್​ನಲ್ಲಿ ಇರುವ ನಿವಾಸದ ಮೇಲೆ ದಾಳಿ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳ ಮೂರು ತಂಡದಿಂದ ಶೋಧ ಕಾರ್ಯ ಮುಂದುವರೆಸಿದ್ದು,

ಲೋಕಾಯುಕ್ತ ಎಸ್​ಪಿ ಹನುಮಂತರಾಯ್ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಅತ್ತ ಕಲಬುರಗಿ ಜಿಲ್ಲೆಯ ಟೌನ್ ಪ್ಲ್ಯಾನರ್ ಅಪ್ಪಾಸಾಹೇಬ್ ಕಾಂಬಳೆ ಮನೆ ಮೇಲು ದಾಳಿ ಮಾಡಲಾಗಿದೆ. ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಇರೋ ಕಾರ್ಖಾನೆ ಮೇಲೆ ದಾಳಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

error: Content is protected !!