Home Blog Page 3195

ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ..ಯಾವಾಗ ಬರಲಿದೆ ಅಭಿಷೇಕ್-ಅನೀಶ್ ಕಾಂಬೋದ ಸಿನಿಮಾ..?

0

ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷ್ ನಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

ನಟ ಅನೀಶ್ ಮಾತನಾಡಿ, ಪ್ರತಿಯೊಂದು ಅಂತ್ಯದಲ್ಲೊಂದು ಆರಂಭ ಇರುತ್ತದೆ ಎಂಬ ಹಾಗೇ ಬೆಂಕಿ ಕಲೆಕ್ಷನ್ ಎಲ್ಲಾ ನೋಡಿ ಎಂಡ್ ಪಾಯಿಂಟ್ ನಲ್ಲಿ ಇದ್ದೇನಾ ಅನಿಸಿತು. ನನ್ನಿಂದ ಪ್ರೇಕ್ಷಕರು ಬೇರೆಯದ್ದನ್ನೂ ನಿರೀಕ್ಷೆ ಮಾಡುತ್ತಿದ್ದಾರೆ ಎಂಬುವುದು ಗೊತ್ತಾಯಿತು. ನನಗೆ ಅಂತಾ ಮಾಡಿಕೊಂಡ ಸಬ್ಜೆಕ್ಟ್ ನ್ನು ನಿನಗೆ ಅಂತಾ ಹೇಳುತ್ತೇನೆ. ಆರಾಮ್ ಅರವಿಂದ್ ಸ್ವಾಮಿ ಎಂದು ಅನೌನ್ಸ್ ಮಾಡಿದ್ದೇನೆ ಎಂದು ಅಭಿಷೇಕ್ ಶೆಟ್ಟಿ ಹೇಳಿದರು. ನಿನಗೆ ಅಂತಾ ಮಾಡಿಕೊಂಡಿದ್ದನ್ನೂ ನನಗೆ ಯಾಕೆ ಹೇಳುತ್ತೀಯಾ? ಅಂದಾಗ, ಇಲ್ಲ ನಿಮಗೆ ಮಾಡುತ್ತೇನೆ ಎಂದು ಕಥೆ ಹೇಳಿದರು. ಕಥೆ ಇಷ್ಟವಾಯ್ತು 15 ನಿಮಿಷದಲ್ಲಿ ಸಿನಿಮಾ ಮಾಡೋಣಾ ಎಂದು ರೆಡಿಯಾದೆವು. ಸಿನಿಮಾ ಹುಚ್ಚಿರುವ ಎಲ್ಲರೂ ಸೇರಿ ಮಾಡಿರುವ ಸಿನಿಮಾವೇ ಆರಾಮ್ ಅರವಿಂದ್ ಸ್ವಾಮಿ ಎಂದರು.

ನಟಿ ಮಿಲನಾ ನಾಗರಾಜ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಕಥೆಯನ್ನು ಅಭಿಷೇಕ್ ಅವರು ಬಂದು ಕಥೆ ಹೇಳಿದರು. ಅನೀಶ್ ಅವರ ಜೊತೆ ಸಿನಿಮಾ ಮಾಡೋದು..ಈ ಎರಡು ನನಗೆ ಎಕ್ಸೈಟ್ ಅನಿಸಿತು. ಇಲ್ಲಿವರೆಗೂ ಮಾಡಿದ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ನನ್ನ ವಿಭಿನ್ನವಾಗಿದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವ ಅನುಭವ ನನಗೆ. ನಾನು ಸಿನಿಮಾ ನೋಡಿಲ್ಲ. ಸಿನಿಮಾ ನೋಡಲು ನಾನು ಎಕ್ಸೈಟ್ ಆಗಿದ್ದಾನೆ. ಅನೀಶ್ ಅವರಿಗೆ ಈ ಕಥೆ ವಿಭಿನ್ನವಾಗಿದೆ ಅನಿಸುತ್ತದೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿದೆ ಎಂದರು.

ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾತನಾಡಿ, ಗುಳ್ಟು ಪ್ರೊಡ್ಯೂಸರ್ ಹಾಗೂ ಅಕೀರಾ ಸಿನಿಮಾ ಪ್ರೊಡ್ಯೂಸರ್ ಒಂದೊಳ್ಳೆ ಕಥೆ ಇದ್ದ ಹೇಳಿ ಎಂದರು. ಕಥೆ ಹೇಳಿದೆ. ಅನೀಶ್ ಅವರಿಗೆ ಕಥೆ ಹುಡುಕುತ್ತಿರುವುದು ಎಂದು ಗೊತ್ತಾಯಿತು. ನಾನು ಒಂದು ಮಾಸ್ ಕಥೆ ಮಾಡಿಕೊಂಡು ಬಂದು ಹೇಳಿದೆ. ಒಪ್ಪಿಕೊಳ್ತಾರೆ ಎಂದುಕೊಂಡಿದ್ದರು, ಅವರು ಔಟ್ ಆಫ್ ದಿ ಬಾಕ್ಸ್ ಕಥೆ ಮಾಡಲು ರೆಡಿ ಇದ್ದರು. ಆಗ ಹೇಳಿದ್ದೇ ಆರಾಮ್ ಅರವಿಂದ್ ಸ್ವಾಮಿ ಕಥೆ. ಎಲ್ಲರೂ ಬಂದು ಆರಾಮ್ ಗೆ ಇದ್ದೀಯಾ ಅಂದು ಕೇಳ್ತಾರೆ. ಯಾರಿಗೂ ನಮ್ಮ ಕಷ್ಟ ಹೇಳೋದಿಕ್ಕೆ ಆಗಲ್ಲ. ಹೇಳಿದ್ರೆ ಸಹಾಯ ಮಾಡ್ತೀಯಾ ಅನ್ನುತ್ತೇವೆ. ಅವರು ನಕ್ಕು ಸುಮ್ಮನೇ ಆಗುತ್ತಾರೆ. ಈ ಬೇಸ್ ಲೈನ್ ಮೇಲೆ ಶುರುವಾದ ಕಥೆ..ಅದ್ಭುತವಾಗಿ ಸಿನಿಮಾ ಬಂದಿದೆ. ಎರಡು ಸಿನಿಮಾ ಆದಾಗ ಎಲ್ಲರೂ ಒಳ್ಳೆ ಭವಿಷ್ಯವಿದೆ ಎನ್ನುವರು. ಆದರೆ ಆರಾಮ್ ಅರವಿಂದ್ ಸ್ವಾಮಿಯೇ ನನ್ನ ಭವಿಷ್ಯ. ಈ ಸಿನಿಮಾದಿಂದ ನನ್ನ ಭವಿಷ್ಯ ಶುರುವಾಗ್ತಿದೆ. ಸಿನಿಮಾಗೆ ಏನೂ ಬೇಕು ಎಲ್ಲವನ್ನೂ ನಿರ್ಮಾಪಕರು ಕೊಟ್ಟಿದ್ದಾರೆ. ಪಾತ್ರ ವರ್ಗ ಎಲ್ಲಾ ಅಭಿನಯವೂ ಚೆನ್ನಾಗಿದೆ ಎಂದರು.

ನಟಿ ಹೃತಿಕಾ ಶ್ರೀನಿವಾಸ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ನನ್ನ ಎರಡನೇ ಸಿನಿಮಾ. ನನ್ನ ಪಾತ್ರ ಬಹಳ ವಿಭಿನ್ನವಾಗಿದೆ. ನನ್ನ ಪಾತ್ರ ಕೇಳಿದಾಗಲೇ ಥ್ರಿಲ್ ಆಗಿದ್ದೇ. ಪ್ರಾಕ್ಟೀಸ್ ಮಾಡಿ, ಹರ್ಡ್ ವರ್ಕ್ ಪಾತ್ರ ಮಾಡಿದ್ದೇನೆ,. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ಆರಾಮ್ ಅರವಿಂದ್ ಸ್ವಾಮಿ ಒಂದೊಳ್ಳೆ ಸಿನಿಮಾ. ನಿಮ್ಮ ಬೆಂಬಲ ಚಿತ್ರದ ಮೇಲೆ ಇರಲಿ ಎಂದರು.

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರ್ತಿದ್ದು, ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ. ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಅವರಿಗೆ ಆರಾಮ್ ಅರವಿಂದ್ ಸ್ವಾಮಿ ಮೂನರೇ ಸಿನಿಮಾ. ಈ ಚಿತ್ರದ ಮೂಲಕ ಅನೀಶ್ ತೇಜೇಶ್ವರ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೆಂಗಳೂರು, ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮುಂದಿನ ತಿಂಗಳು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲಿರುವ ಚಿತ್ರತಂಡ ಜನವರಿ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲಿದೆ.

ಬರಗಾಲ ಹಾಗೂ ಸಾಲಬಾಧೆಗೆ ರೈತ ಆತ್ಮಹತ್ಯೆಗೆ ಶರಣು

0

ವಿಜಯಪುರ: ಬರಗಾಲ ಹಾಗೂ ಸಾಲಬಾಧೆಗೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ನಂದಗೇರಿ ಗ್ರಾಮದಲ್ಲಿ ನಡೆದಿದೆ.

ಸಿದ್ದನಗೌಡ ಬಿರಾದಾರ (32) ಆತ್ಮಹತ್ಯಗೆ ಶರಣಾದ ರೈತನಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಸಿದ್ದನಗೌಡ ಮಳೆಯಾಗದೇ ಬರದಿಂದ ಬೆಳೆ ಬಂದಿಲ್ಲವೆಂದು ನೊಂದಿದ್ದರು.

ಅದಲ್ಲದೆ ಖಾಸಗಿ ವ್ಯಕ್ತಿಗಳ ಬಳಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಫಸಲು ಬಾರದ ಕಾರಣ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ ದಿ. ಪುನೀತ್ ರಾಜಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ

0

ದಾವಣಗೆರೆ: ನಟ ಪುನೀತ್ ರಾಜ್‍ಕುಮಾರ್ 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಪುನೀತ್ ರಾಜ್‌ಕುಮಾರ್ ಸಮಾಧಿಗೆ ರಾಜ್ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಅದೇ ರೀತಿ ದಾವಣಗೆರೆಯಲ್ಲಿ ದಿ. ಪುನಿತ್ ರಾಜಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಕುಂದವಾಡ ಕೆರೆ ಬಳಿಯ ಪಾರ್ಕ್‌ನಲ್ಲಿ ಸೂಪರ್ ಮಾಮ್ಸ್ ಆಫ್ ಗ್ರೂಪ್ ಹಾಗೂ ದಾವಣಗೆರೆಯ ಕುಂದುವಾಡ ಕೆರೆ ವಾಯುವಿಹಾರ ಬಳಗದಿಂದ ಪುಣ್ಯತಿಥಿ ಆಚರಣೆ ಮಾಡಿದ್ದಾರೆ.

ಅಪ್ಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೊಂಬೆ ಹೇಳುತೈತೆ ಸಾಂಗ್ ಹಾಡುವ ಮೂಲಕ ಅಭಿಮಾನಿಗಳು ಅಪ್ಪು ಸ್ಮರಣೆ ಮಾಡಿದರು.

ಚಂದ್ರ ಗ್ರಹಣ ಮುಕ್ತಾಯ – ಶ್ರೀರಂಗಪಟ್ಟಣಗ ನಿಮಿಷಾಂಬ ದೇವಸ್ಥಾನ ಓಪನ್

0

ಮಂಡ್ಯ;- ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನವು ಚಂದ್ರ ಗ್ರಹಣ ಮುಕ್ತಾಯ ಹಿನ್ನೆಲೆ ಓಪನ್ ಆಗಿದೆ.

ಇಂದು ಬೆಳಗ್ಗೆ 6.30ಕ್ಕೆ ದೇವಸ್ಥಾನದ ಬಾಗಿಲು ಓಪನ್ ಆಗಿದ್ದು, ದೇವಸ್ಥಾನದ ಸಿಬ್ಬಂದಿಗಳೆಲ್ಲಾ ಸೇರಿ ದೇವಸ್ಥಾನ ಶುದ್ಧೀಕರಣ ಮಾಡಿದ್ದಾರೆ. ಬಳಿಕ ನಿಮಿಷಾಂಬ ದೇವಿಗೆ ಪೂಜೆ ಮಾಡಲಾಗಿದ್ದು, ಪೂಜೆಯ ಬಳಿಕ ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಲಾಗಿದೆ.

ಇನ್ನೂ ಶನಿವಾರ ಚಂದ್ರಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಬಂದ್ ಮಾಡಲಾಗಿದ್ದು, ಇದೀಗ ಗ್ರಹಣ ಮುಕ್ತಾಯ ಹಿನ್ನೆಲೆ, ಎಂದಿನಂತೆ ಪೂಜೆ ಪುನಸ್ಕಾರ ನಡೆಯುತ್ತಿದೆ.

ಚಾಮರಾಜನಗರ: ಗ್ರಾಮಕ್ಕೆ ನುಗ್ಗಿದ ಕರಡಿ, ಗ್ರಾಮಸ್ಥರು ಕಕ್ಕಾಬಿಕ್ಕಿ

0

ಚಾಮರಾಜನಗರ;- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಡಳ್ಳಿ ಗ್ರಾಮದಲ್ಲಿ ಕರಡಿ ನುಗ್ಗಿದ ಹಿನ್ನೆಲೆ ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಜರುಗಿದೆ.

ರಾತ್ರಿ ವೇಳೆಯಲ್ಲಿ ಗ್ರಾಮದೊಳಗೆ ಕರಡಿ ಬಂದಿದ್ದು, ಕರಡಿ ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ ಕರಡಿಯ ಚಲನ ವಲನವನ್ನು ಮೊಬೈಲಿನಲ್ಲಿ ಯುವಕರು ಸೆರೆ ಹಿಡಿದಿದ್ದಾರೆ.

ಗ್ರಾಮದೊಳಗೆ ರಾಜಾರೋಷವಾಗಿ ಅಡ್ಡಾಡುತ್ತಿರುವ ಜಾಂಭವಂತನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೂಡಲೆ ಕರಡಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

RD ಪಾಟೀಲ್ ಗೆ ಮತ್ತೆ ಸಂಕಷ್ಟ : KPSC ಪರೀಕ್ಷೆಯಲ್ಲೂ ಅಕ್ರಮದ ಲಿಂಕ್!?

0

ಕಲಬುರಗಿ;-RD ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಪಿಎಸ್‌ಐ ಪರೀಕ್ಷೆಯ ಅಕ್ರಮದ ರುವಾರಿಗೆ KPSC ಪರೀಕ್ಷೆಯಲ್ಲೂ ಲಿಂಕ್ ಇರುವ ಮಾಹಿತಿ ಹೊರ ಬಿದ್ದಿದೆ.

ಬ್ಲೂಟೂತ್ ಐಡಿಯಾ ಕೊಟ್ಟಿದ್ದ RD ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಿನ್ನೆ ಸಿಕ್ಕಿಬಿದ್ದ ಗಿರಾಕಿಗಳೇ RD ಪಾಟೀಲ್ ಹೆಸ್ರು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಕಲಬುರಗಿಯ ಅಫಜಲಪುರ ಮೂಲದವರಾಗಿರುವ RD ಪಾಟೀಲ್ ವಿರುದ್ಧ ಅಭ್ಯರ್ಥಿಗಳಿಂದ ಹಣ ಪಡೆದು ಬ್ಲುಟೂತ್ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ.

ಇನ್ನೂ ಹಣದ ವಹಿವಾಟಿನ ಬಗ್ಗೆ ಪೊಲೀಸರು ಮಾಹಿತಿ ಕೆದಕಲಿದ್ದಾರೆ. ಖುದ್ದು ಪೊಲೀಸ್ ಕಮೀಷನರ್ ಮಾಹಿತಿ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಶತಕೋಟಿ ರಾಮತಾರಕ ಮಂತ್ರ ಜಪ

0

ಕಲಬುರ್ಗಿ;- ಕಲಬುರಗಿಯಲ್ಲಿ ಶತಕೋಟಿ ರಾಮತಾರಕ ಮಂತ್ರ ಜಪ ಮಾಡಲಾಗುತ್ತಿದೆ.. ಅಯ್ಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ ಉದ್ಘಾಟನೆಗೆ ಮಹೂರ್ತ ಫಿಕ್ಸ್ ಆಗ್ತಿದ್ದಂತೆ ಇತ್ತ ಕಲಬುರಗಿಯಲ್ಲಿ ಶತಕೋಟಿ ರಾಮತಾರಕ ಮಂತ್ರ ಜಪ ಮಾಡಲಾಗುತ್ತಿದೆ.

ಪ್ರಶಾಂತ ನಗರದ ಹನುಮಾನ್ ಮಂದಿರದಲ್ಲಿ ನಿತ್ಯವೂ ಮಂತ್ರ ಜಪ ಮಾಡಲಾಗುತಿದ್ದು ಮೊನ್ನೆ ವಿಜಯದಶಮಿ ಹಬ್ಬದಿಂದ ಆರಂಭವಾಗಿದೆ..ಜನೆವರಿ 22 ರವರೆಗೂ ರಾಮತಾರಕ ಮಂತ್ರದ ಜಪ ನಡೆಯಲಿದ್ದು ಮಂದಿರ ಉದ್ಘಾಟನೆಯ ದಿನ ರಾಮತಾರಕ ಹೋಮ ಹಮ್ಮಿಕೊಳ್ಳಲಾಗಿದೆ ಅಂತ ಪಂಡಿತ್ ಗುಂಡಾಚಾರ್ ಜೋಶಿ ನರಿಬೋಳ್ ತಿಳಿಸಿದ್ದಾರೆ..

ಬ್ಲೂಟೂತ್ ಬಳಸಿ ಪರೀಕ್ಷೆ ಅಕ್ರಮ- ಅಜ್ಞಾತ ಸ್ಥಳದಿಂದ ಆರೋಪಿಗಳನ್ನು ಠಾಣೆಗೆ ಕರೆತಂದ ಖಾಕಿ

0

ಯಾದಗಿರಿ;- ನಗರದಲ್ಲಿ ಬ್ಲೂಟೂತ್ ಡಿವೈಸ್ ಬಳಸಿ FDA ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜ್ಞಾತ ಸ್ಥಳದಿಂದ ಆರೋಪಿಗಳನ್ನು ಪೊಲೀಸರು ಕರೆ ತಂದಿದ್ದಾರೆ.

16 ಆರೋಪಿಗಳನ್ನ ಯಾದಗಿರಿ ನಗರ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ನಿನ್ನೆ ಮದ್ಯಾಹ್ನದಿಂದ ಆರೋಪಿಗಳನ್ನ ಪೊಲೀಸರು ವಿಚಾರಣೆ ನಡೆಸಿದ್ದು, ಸತತ 8 ಗಂಟೆಗಳ ಕಾಲ ವಿಚಾರಣೆ ಮಾಡಿದ್ದಾರೆ.

ದಾವಣಗೆರೆ ಪೊಲೀಸರ ಕಾರ್ಯಚರಣೆ: 20 ಲಕ್ಷ ಮೌಲ್ಯದ ಮೊಬೈಲ್ ಪತ್ತೆ

0

ದಾವಣಗೆರೆ;- ದಾವಣಗೆರೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 20 ಲಕ್ಷ ರೂ. ಮೌಲ್ಯದ ಮೊಬೈಲ್ ಪತ್ತೆ ಮಾಡಿದ್ದಾರೆ.

ಮಾರ್ಚ್ ನಿಂದ ಇಲ್ಲಿವರೆಗೆ 520 ಮೊಬೈಲ್ ಗಳ ಪತ್ತೆ ಮಾಡಲಾಗಿದ್ದು, ಮೊಬೈಲ್ ಕಳೆದುಕೊಂಡ ಸಂತ್ರಸ್ತರಿಗೆ ಹಿಂದುರಿಗಿಸಿದ್ದಾರೆ. ಇದೀಗ ಪತ್ತೆಯಾದ 130 ವಿವಿಧ ಕಂಪನಿಗಳ ಮೊಬೈಲ್ ಗಳನ್ನ ವಾರಸುದಾರರಿಗೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ಹಸ್ತಾಂತರ ಮಾಡಿದ್ದಾರೆ.

ಸಿಇಐಆರ್ ಪೋರ್ಟಲ್ ನಿಂದ ಇಲ್ಲಿವರೆಗೆ 20 ಲಕ್ಷ ಮೌಲ್ಯದ 520 ಮೊಬೈಲ್ ಗಳ ಪತ್ತೆ ಆಗಿದೆ ಎಂದು ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.

ಧ್ವಜಸ್ಥಂಬ ನೆಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

0

ಬೆಳಗಾವಿ;- ಧ್ವಜಸ್ಥಂಬ ನೆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ಬೈಲಹೊಂಗಲ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ.

ಪ್ರಜ್ವಲ್ ಚನಗೌಡ ಮುನೇಪ್ಪನವರ (18) ಮೃತ ದುರ್ದೈವಿ. ನವೆಂಬರ್ 1ರಂದು ಅದ್ದೂರಿ ರಾಜ್ಯೋತ್ಸವಕ್ಕೆ ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನೆಡುವಾಗ ಅವಘಡ ಸಂಭವಿಸಿದೆ.

ಕನ್ನಡ ರಾಜ್ಯೋತ್ಸವದ ನಿಮಿತ್ತ ಧ್ವಜ ಸ್ಥಂಭ ನಿರ್ಮಿಸಿ ಅದ್ದೂರಿ ಧ್ವಜಾರೋಹಣಕ್ಕೆ ಗ್ರಾಮದ ಯುವಕರು ಸಿದ್ಧತೆ ನಡೆಸಿದ್ದರು.

ಧ್ವಜಸ್ತಂಭ ನೆಡುವಾಗ ಅಲ್ಲಿಯೇ ಹಾಯ್ದು ಹೋಗಿದ್ದ ಸರ್ವೀಸ್ ವಾಯರ್ ಗೆ ಕಂಬ ತಾಗಿ ಅನಾಹುತ ನಡೆದಿದೆ. ಪ್ರಜ್ವಲ್ ಗೆ ವಿದ್ಯುತ್ ಪ್ರವಹಿಸಿದ ತಕ್ಷಣ ಆತನನ್ನು ಬೈಲಹೊಂಗಲ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ.

ಮನೆ ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!