Home Blog Page 3197

ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿಕೆ ಶಿವಕುಮಾರ್

0

ಬೆಂಗಳೂರು : ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಶನಿವಾರ ಹೈದರಾಬಾದ್‌ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು ತಿಳಿಸಿದರು.

ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೇ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತೆಲಂಗಾಣ ಚುನಾವಣೆ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ತೆರಳಿದರು.

ಬೆಳಗ್ಗೆ 9.15ರ ಇಂಡಿಗೋ ವಿಮಾನದಲ್ಲಿ ಡಿಕೆ ಶಿವಕುಮಾರ್ ಪ್ರಯಾಣ ಬೆಳೆಸಿದರು. ಇದಕ್ಕೂ ಮುನ್ನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ಸಿಎಂ ಇಬ್ಬರೂ ಈ ಬಗ್ಗೆ ನಿನ್ನೆ ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ. ನಿಗಮ ಮಂಡಳಿ ಆಯ್ಕೆ ಎರಡು ಭಾಗವಾಗಿ ಮಾಡಬೇಕಿದೆ. ಯಾರಿಗೆಲ್ಲ ಕೊಡಬೇಕು ಎಂದು ಈಗಾಗಲೇ ಪಟ್ಟಿ ಮಾಡಿದ್ದೇವೆ. ಯಾಕೆಂದರೆ ಬಹಳ ಸೀನಿಯರ್ ಲೀಡರ್‌ಗಳಿಗೆ ಸ್ಥಾನಮಾನ ಕೊಡಬೇಕಿದೆ.

ನಮ್ಮ ಕಾಂಗ್ರೆಸ್ ಕಾರ್ಯದರ್ಶಿಗಳು ಇಲ್ಲಿಗೆ ಬರಬೇಕಿದೆ. ಅವರು ಪಟ್ಟಿಯನ್ನು ಪರಿಶೀಲನೆ ಮಾಡಲಿದ್ದಾರೆ. ಬಳಿಕ ಯಾರಿಗೆಲ್ಲ ನೀಡಬಹುದೆಂದು ನೋಡುತ್ತಾರೆ.

ಮಧ್ಯಪ್ರದೇಶ ಚುನಾವಣೆ ಘೋಷಣೆ ಆಗಿದೆ. ನಮ್ಮ ಉಸ್ತುವಾರಿಗಳು ಮಧ್ಯಪ್ರದೇಶ ಚುನಾವಣೆ ನೋಡಿಕೊಂಡು ರಾಜ್ಯಕ್ಕೆ ಬರುತ್ತಾರೆ. ಬಳಿಕ ನಿಗಮ ಮಂಡಳಿ ಪಟ್ಟಿಯನ್ನು ಘೋಷಣೆ ಮಾಡುತ್ತೇವೆ ಎಂದು ಹೇಳಿದರು.

ಬಸವಣ್ಣ ಜಿಲ್ಲೆ ವಿಚಾರವಾಗಿ ಡಿಕೆ ಪ್ರತಿಕ್ರಿಯಿಸಿ, ಈ ವಿಚಾರ ನನಗೆ ಗೊತ್ತಿಲ್ಲ. ಮುಂದೆ ಮಾತನಾಡುವೆ ಎಂದು ಹೇಳಿ ತೆರಳಿದರು.

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಸವಾರ ಸಾವು

0

ಆನೇಕಲ್;-ಆನೇಕಲ್ಲಿನ ಕಾವಲ ಹೊಸಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.

ಬುಲೆಟ್ ಹಾಗೂ ಆರ್ ಒನ್ ಫೈವ್ ಯಮಹ ಬೈಕ್ ನಡುವೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ಗಳು ನಜ್ಜುಗುಜ್ಜಾಗಿದೆ. ಮೃತ ದೇಹ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಗಾಯಗೊಂಡ ಬೈಕ್ ಸವಾರರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

PM ಮೋದಿಗೆ ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? – ಸಿದ್ದರಾಮಯ್ಯ

0

ಬೆಂಗಳೂರು;- ಸಿಎಂ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಕೇಂದ್ರ ಬರ ಅಧ್ಯಯನ ತಂಡ ಅಧ್ಯಯನ ಮಾಡಿ ವಾಸ್ತವಿಕತೆಯ ವರದಿ ನೀಡಿದ್ದರೂ ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರ ಬಿಡುಗಡೆಯಾಗಿಲ್ಲ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಜಗತ್ತಿನ ಕಷ್ಟ-ದುಃಖಗಳೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟು ಕಟುಕವಾಗಿರುವುದು ಯಾಕೆ?’

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ 2019ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ರಾಜ್ಯ ಸಾವು ನೋವಿನಲ್ಲಿ ಮುಳುಗಿತು. ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಬೀದಿ ಪಾಲಾದವು, ಆದರೂ ನೀವು ಕರ್ನಾಟಕಕ್ಕೆ ಬರಲಿಲ್ಲ.

ರಾಜ್ಯದ ಜನರಿಗಾದ ಅಪಾರ ನಷ್ಟಕ್ಕೆ ಕೇಂದ್ರದ ನೆರವಿನ ಮೊರೆ ಹೋದರೆ ಮತ್ತೆ ಕನ್ನಡಿಗರಿಗೆ ಸಿಕ್ಕಿದ್ದು ಬಿಡಿಗಾಸು ಮಾತ್ರ. ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆಯಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಎಂದು ಪ್ರಶ್ನೆ ಮಾಡಿದ್ದಾರೆ.

2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ರಾಜ್ಯದಲ್ಲಿ ಅಂದಾಜು 30 ಸಾವಿರ ಕೋಟಿ ರು. ನಷ್ಟ ಉಂಟಾದರೆ 1,435 ಕೋಟಿ ರು. ಪರಿಹಾರ ಬಿಡುಗಡೆಯಾಯಿತು.

ಅದೇ ಮಹಾರಾಷ್ಟ್ರ ರಾಜ್ಯಕ್ಕೆ 8,195 ಕೋಟಿ ರು. ಹಾಗೂ ಗುಜರಾತ್‌ಗೆ 4,894 ಕೋಟಿ ರು. ಬಿಡುಗಡೆ ಮಾಡಿದ್ದೀರಿ. ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂದಿ ಗಿರಿಧಾಮ ರೋಪ್ ವೇ ಕಾಮಗಾರಿ ಶೀಘ್ರ ಆರಂಭ – ಸಚಿವ ಎಂ.ಸಿ.ಸುಧಾಕರ್‌

0

ಚಿಕ್ಕಾಬಳ್ಳಾಪುರ;- ಸಚಿವ ಎಂ.ಸಿ.ಸುಧಾಕರ್‌ ಅವರು, ನಂದಿ ಗಿರಿಧಾಮ ರೋಪ್‌ವೇ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ವಿಶ್ವ ವಿಖ್ಯಾತ ಪ್ರವಾಸಿತಾಣ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮೂರು ಕಿ.ಮೀ ಉದ್ಧದ ರೋಪ್ ವೇ ಅಳವಡಿಸಲು ಅಗತ್ಯವಿರುವ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದರು.

ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ನಂದಿ ಗಿರಿಧಾಮದಲ್ಲಿರುವ ಎಲ್ಲಾ ಆಸ್ತಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ.

ರೋಪ್ ವೇ ನಿರ್ಮಾಣಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ 9 ಎಕರೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರಕ್ಕೆ ಸೇರಿದ 7 ಎಕರೆ ಜಮೀನನ್ನು ಹಸ್ತಾಂತರ ಮಾಡುವ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ.18 ತಿಂಗಳ ಅವಧಿಯಲ್ಲಿ ರೋಪ್ ವೇ ನಿರ್ಮಾಣವಾಗಲಿದೆ ಎಂದರು.

ಬಂಡವಾಳ ಹೂಡುವ ರೋಪ್ ವೇ ನಿರ್ಮಾಣ ಸಂಸ್ಥೆಗೇ 30 ವರ್ಷಗಳ ಕಾಲ ನಿರ್ವಹಣೆ ಜವಾಬ್ದಾರಿಯನ್ನು ನೀಡಲಾಗಿದೆ. ಮೂರು ಕಿ.ಮೀ ಉದ್ದದ ರೋಪ್ ವೇ ನಲ್ಲಿ 50 ಕೇಬಲ್ ಕಾರ್ ಗಳು ಹೋಗುವ ಮತ್ತು 50 ಕೇಬಲ್ ಕಾರ್ ಗಳು ಬರುವ ವ್ಯವಸ್ಥೆಯಿದ್ದು, ಪ್ರತಿ ಕಾರ್ ನಲ್ಲಿ ಆರು ಜನರು ಕುಳಿತುಕೊಳ್ಳಲು ಅವಕಾಶವಿರುತ್ತದೆ ಎಂದರು.

ಹುಲಿ ಉಗುರು ಧರಿಸುತ್ತಿರುವುದು ಹೊಸದೇನಲ್ಲ – ಸಿಟಿ ರವಿ

0

ಬೆಂಗಳೂರು;- ಹುಲಿಯ ಉಗುರನ್ನು ಬಹಳ ಜನ ನೂರಾರು ವರ್ಷಗಳಿಂದ ರಾಜ್ಯಾದಾದ್ಯಂತ ಆಭರಣವಾಗಿ ಧರಿಸುತ್ತಿದ್ದದ್ದು ಹೊಸದೇನಲ್ಲ ಎಂದು ಮಾಜಿ ಶಾಸಕ ಸಿಟಿ ರವಿ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಅರಣ್ಯ ಇಲಾಖೆ ಅಧಿಕಾರಿಗಳು ಕಾಣದೆ ಇದ್ದದ್ದೂ ಅಲ್ಲ. ಈಗ ಸರ್ಕಾರದ ಆಡಳಿತಾತ್ಮಕ ವೈಫಲ್ಯ, ಬೋಗಸ್ ಭರವಸೆಗಳ ಮೇಲಿನ ಜನರ ಆಕ್ರೋಶ,

ರೈತರಿಗೆ ವಿದ್ಯುತ್ ಪೂರೈಸಲಾಗದೆ ನೀಡಿದ ಕತ್ತಲೆ ಭಾಗ್ಯ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ನಿಮ್ಮ ಸರಕಾರದ ಮಂತ್ರಿಗಳು ತೆರೆದ ನಕಲಿ ದಾಖಲೆಗಳ ಇಲಾಖೆ, ಶಾಸಕರು ಬಂಡಾಯದ ಬಸ್ ಹತ್ತುತ್ತಿರುವ ಬೇಗುದಿ ಮತ್ತು ಇವೆಲ್ಲಕ್ಕಿಂತ ಮುಖ್ಯವಾಗಿ ಪಂಚ ರಾಜ್ಯ ಚುನಾವಣೆಗೆ ನಡೆಸಿದ ಕಲೆಕ್ಷನ್ ಐಟಿ ಇಲಾಖೆ ಪಾಲಾಗಿ ಜನರ ಎದುರು ತಲೆಯೆತ್ತಿ ನಡೆಯಲಾಗದು ಎನ್ನುವ ಕಾರಣಕ್ಕೆ “ಹುಲಿಯುಗುರು” ಎಂಬ ಸದಾರಮೆ ನಾಟಕ ಆಡುತ್ತಿರುವುದು ಸ್ಪಷ್ಟ ಎಂದು ಕಟುವಾಗಿ ಟೀಕಿಸಿದ್ದಾರೆ.

ಒಮ್ಮೆ ನಿಮ್ಮ ಮಂತ್ರಿಮಂಡಲದ ಒಳಗೆ ಇಣುಕಿ ಅಲ್ಲಿ ಬಹಳಷ್ಟು ಜನ ಕಾಡು ಪ್ರಾಣಿಗಳನ್ನು ಬಂಧನದಲ್ಲಿರಿಸಿದವರು, ಕಾಡು ಪ್ರಾಣಿಗಳನ್ನು ಹತ್ಯೆ ಮಾಡಿದವರು ಸಿಗಬಹುದು.

ಅಂತವರನ್ನು ಬಿಟ್ಟು ಹುಲಿಯುಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ಕ್ರಮ ಕೈಗೊಳ್ಳಲು ಹೊರಟಿರುವುದು, ಅದರಲ್ಲೂ ಜನಸಾಮಾನ್ಯರಿಗೆ ನೇರ ಎಫ್‌ಎಸ್‌ಎಲ್‌ ವರದಿ ಬರುವುದಕ್ಕೆ ಮುಂಚೆಯೇ ಬಂಧನ , ಇನ್ನು ಸೆಲೆಬ್ರಿಟಿಗಳಿಗೆ ನೋಟಿಸ್ ಇದೆಲ್ಲವೂ ಈ ನಾಟಕದ ಭಾಗವಲ್ಲವೇ ?, ಇದು ನಿಮ್ಮ ಸರ್ಕಾರದ ಪ್ರಾಮಾಣಿಕತೆಯ ಬಗ್ಗೆ ಸಂಶಯ ಮೂಡಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಬೀಳಿಸುವುದು ಅಷ್ಟು ಸುಲಭದ ಮಾತಲ್ಲ – ಕದಲೂರು ಉದಯ್

0

ಮಂಡ್ಯ: ಶಾಸಕ ಕದಲೂರು ಉದಯ್ ಅವರು, ಸರ್ಕಾರ ಬೀಳಿಸಲು ಕಾಂಗ್ರೆಸ್ ಶಾಸಕರಿಗೆ 50ಕೋಟಿ ಆಫರ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಬೀಳಿಸುವುದು ಅಷ್ಟು ಸುಲಭದ ಮಾತಲ್ಲ. ಮೂರೇ ಮೂರು ಶಾಸಕರನ್ನ ಸೆಳೆಯುವುದು ಅಸಾಧ್ಯ.

136 ಜನ ಕಾಂಗ್ರೆಸ್ ಶಾಸಕರಿದ್ದಾರೆ, ಸ್ವತಂತ್ರ ಸರ್ಕಾರ ಇದೆ. ಹೀಗಿರುವಾಗ ಸರ್ಕಾರ ಬೀಳಿಸುವುದು ಅಸಾಧ್ಯದ ಮಾತು ಎಂದರು. ಇನ್ನೂ ಈ ಹಿಂದೆ ಮೈತ್ರಿ ಸರ್ಕಾರದ ಬೀಳಿಸಲು ನೀವು ಶ್ರಮಪಟ್ಟಿದ್ರಿ ಎಂಬ ಮಾತಿಗೆ ಉದಯ್ ನಸು ನಕ್ಕರು. ಅದೆಲ್ಲಾ ಮುಗಿದ ಅಧ್ಯಾಯ, ಹಿಂದೆ ಇದ್ದ ಸರ್ಕಾರಕ್ಕೆ ಬಹುಮತ ಇರಲಿಲ್ಲ.

ಇಂದಿನ ಸರ್ಕಾರಕ್ಕೆ ಜನರೇ ಬಹುಮತ ಕೊಟ್ಟಿದ್ದಾರೆ. ಹೆಚ್ಡಿಕೆಗೆ ಸರ್ಕಾರ ಬೀಳಿಸುವ ತಾಕತ್ತು ಇಲ್ಲ. ತನ್ನ ಕೈಲಿದ್ದ ಸರ್ಕಾರವನ್ನೇ ಉಳಿಸಿಕೊಳ್ಳಲು ಅವರಿಂದ ಆಗಿಲ್ಲ. ಇನ್ನ ಸರ್ಕಾರ ಬೀಳಿಸುವ ತಾಕತ್ ಅವರಿಗೆ ಇಲ್ಲ.

ಇನ್ನೊಬ್ಬರ ಕೆಡುಕನ್ನು ಬಯಸುವ ಕೆಲಸ ಮಾಡಬಾರದು‌‌. ಅದಕ್ಕಾಗೇ ಅವರು ಸರ್ಕಾರ ಕಳೆದುಕೊಂಡು, ಅಲ್ಲಿದ್ದಾರೆ. ನಾನು ಗೆದ್ದು ಆಡಳಿತ ಪಕ್ಷದಲ್ಲಿದ್ದೇನೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಶಾಸಕನಾಗಿ ಆಯ್ಕೆ ಆಗಿದ್ದೇನೆ. ಮೊದಲು ನನ್ನ ವ್ಯಾಪ್ತಿಯಲ್ಲಿ ಏನೆಲ್ಲಾ ಕೆಲಸ ಮಾಡಬಹುದೊ ಮಾಡ್ತೇನೆ ಎಂದರು.

ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ

0

ದೇವನಹಳ್ಳಿ;- ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೋಲೆರೋ ವಾಹನ ಡಿಕ್ಕಿ ಹೊಡೆದ ಘಟನೆ ಜರುಗಿದೆ. ಡಿಕ್ಕಿಯ ರಭಸಕ್ಕೆ ಚಾಲಕ ರಘುಮೇನಹಳ್ಳಿ‌ ನರಸೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾ.ಜಿಲ್ಲೆ ದೇವನಹಳ್ಳಿ ತಾಲ್ಲೂಕು ಚಪ್ಪರಕಲ್ಲು ಬಳಿ ಅಪಘಾತ ಸಂಭವಿಸಿದೆ.

ಘಟನೆ ಪರಿಣಾಮ ಬೋಲೆರೋ ವಾಹನ ನಜ್ಜುಗುಜ್ಜಾಗಿದ್ದು, ಚಾಲಕನ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಲಘುಮೇನಹಳ್ಳಿಯ ನರಸೇಗೌಡ ಮೃತ ದುರ್ದೈವಿ. ಕೂದಲೆಳೆ ಅಂತರದಲ್ಲಿ ಪಾರಾಗಿರೊ ಬುಲೆರೋ ಚಾಲಕನ ಪಕ್ಕದಲ್ಲಿದ್ದ ವ್ಯಕ್ತಿ. ನೆನ್ನೆಯಷ್ಟೆ ಚಿಕ್ಕಬಳ್ಳಾಪುರದ ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ 13 ಜನ‌ರ ಸಾವಾಗಿತ್ತು. ಈ ದುರಂತ ಮಾಸುವ ಮುನ್ನವೇ ನಿಂತಿದ್ದ ಲಾರಿಗೆ ಬೋಲೆರೊ ಡಿಕ್ಕಿ ಹೊಡೆದಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ವಾಹನ ಕೆಟ್ಟು ನಿಲ್ಲುತ್ತಿದ್ದು, ಈ ರೀತಿಯ ವಾಹನಗಳಿಂದ ಅಪಘಾತ ಹೆಚ್ಚುತ್ತಿದೆ ಎನ್ನುವ ಆರೋಪ ಸಾರ್ವಜನಿಕರದ್ದಾಗಿದೆ.

ಗಾಂಜಾ ಬೆಳೆದ ಆರೋಪಿ ಅರೆಸ್ಟ್

0

ಚಾಮರಾಜನಗರ;- ಜಿಲ್ಲೆಯಲ್ಲಿ ಗಾಂಜಾ ಬೆಳೆದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ತಾಲ್ಲೂಕಿನ ಚಂದಕವಾಡಿ ಹೋಬಳಿಯ ಮಲ್ಲದೇವನಹಳ್ಳಿ ಗ್ರಾಮದ ಸರ್ದಾರ್ ಷರೀಫ್ ಬಿನ್ ಮಹಮದ್ ಷರೀಫ್ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಸರ್ದಾರ್ ಷರೀಫ್ ಜಮೀನನ್ನು ನೋಡಿಕೊಳ್ಳುತ್ತಿದ್ದ ಲೋಕೇಶ್ ಬಿನ್ ಮರಿಚಿಕ್ಕೆಗೌಡ ಎಂಬ ಆರೋಪಿ ಬಂಧಿಸಲಾಗಿದೆ.

ಲೋಕೇಶ್ ಎಂಬ ಆರೋಪಿ ಮಾಲೀಕನಿಗೆ ತಿಳಿಯದೆ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದಿರುತ್ತಾರೆ ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರಾದ ಆರ.ನಾಗಶಯನ, ಅಬಕಾರಿ ಉಪ ಅಧೀಕ್ಷಕ, ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದೆ.

545 ಗ್ರಾಂ ತೂಕದ ಗಾಂಜಾ ಗಿಡ ವಶ ಹಾಗೂ ಆರೋಪಿಯನ್ನು ದಸ್ತಗಿರಿಗೊಳಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ದಾಳಿಯ ಕಾರ್ಯದಲ್ಲಿ ಅಬಕಾರಿ ನಿರೀಕ್ಷಕರು ಉಮಾಶಂಕರ್, ಚಾಮರಾಜನಗರ ಉಪವಿಭಾಗ ಉಪನಿರೀಕ್ಷಕರು ನಂದಿನಿ ಬಿ.ಪಿ ಕಾನ್ ಸ್ಟೇಬಲ್ ರವಿ, ನಾಗೇಶ್ ಹಾಗೂ ವಾಹನ ಚಾಲಕರಾದ ವೀರತಪ್ಪ ರವರು ಭಾಗವಹಿಸಿದ್ದರು. ಪ್ರಕರಣವನ್ನು ಅಬಕಾರಿ ಉಪನಿರೀಕ್ಷಕರಾದ ನಂದಿನಿ ಬಿ.ಪಿ ದಾಖಲಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಆರೋಪ ಸುಳ್ಳು -ಎಂ.ಲಕ್ಷ್ಮಣ

0

ಮಡಿಕೇರಿ;- ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅವರು, ರಾಜ್ಯದಲ್ಲಿ ವಿದ್ಯುತ್‌ನ ಕೃತಕ ಅಭಾವ ಸೃಷ್ಟಿಯಾಗಿದೆ ಎಂಬ ಆರೋಪ ಸುಳ್ಳು ಎಂದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್‌ನ ಕೃತಕ ಅಭಾವ ಸೃಷ್ಟಿಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯುತ್‌ನ ಬಳಕೆ ಹೆಚ್ಚಾಗಿರುವುದರಿಂದ ಕೊರತೆ ಎದುರಾಗಿದೆ ಎಂದರು.

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕಮಿಷನ್‌ಗಾಗಿ ವಿದ್ಯುತ್ ಖರೀದಿಸಲು ಕೃತಕ ಅಭಾವ ಸೃಷ್ಟಿಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರದ ಗ್ರಿಡ್‌ ಮೂಲಕವೇ ಕೊರತೆಯಾದ ವಿದ್ಯುತ್‌ನ್ನು ಖರೀದಿಸುತ್ತಿದೆ. ಕೇಂದ್ರದ ಗ್ರಿಡ್‌ ಕಮಿಷನ್ ಕೊಡಲು ಸಾಧ್ಯವೇ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ರಾಜ್ಯಸರ್ಕಾರ ಇದುವರೆಗೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಿಲ್ಲ. ಹಾಗಿದ್ದ ಮೇಲೆ ಕಮಿಷನ್‌ ಪಡೆಯುವ ಪ‍್ರಶ್ನೆಯೇ ಎದುರಾಗುವುದಿಲ್ಲ. ಇದರ ಕನಿಷ್ಠ ಜ್ಞಾನವೂ ಕುಮಾರಸ್ವಾಮಿ ಅವರಿಗೆ ಇಲ್ಲ ಎಂದು ಹೇಳಿದರು.

ಆದರೆ, ಬಿಜೆಪಿ ಸರ್ಕಾರವಿದ್ದಾಗ 2022ರಲ್ಲೇ ವಿದ್ಯುತ್ ತಯಾರಿಸುವ ಸಾಮರ್ಥ್ಯವಿದ್ದರೂ ಖಾಸಗಿ ಕಂಪನಿಯಿಂದ ಸರ್ಕಾರ ವಿದ್ಯುತ್ ಖರೀದಿಸಿತ್ತು ಎಂದು ಅಂದಿನ ಕೆಪಿಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಪತ್ರ ಬರೆದಿದ್ದರು. ಖಾಸಗಿ ಕಂಪನಿಯಿಂದ ವಿದ್ಯುತ್ ಖರೀದಿಸಿದ್ದು ಬಿಜೆಪಿ ಸರ್ಕಾರವೇ ಹೊರತು ಕಾಂಗ್ರೆಸ್ ಅಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರವೀಣ್ ಹತ್ಯೆ ಪ್ರಕರಣ : ನೌಶಾದ್ ಸುಳಿವಿಗೆ 2ಲಕ್ಷ ರೂ. ಬಹುಮಾನ ಘೋಷಿಸಿದ NIA..!

0

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ನಂ.23ನೇ ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್‌ಐಎ (NIA) ಘೋಷಿಸಿದೆ.

ಈ ಸಂಬಂಧ ಎನ್‌ಐಎ ರಿವಾರ್ಡ್‌ ವಾಂಟೆಡ್‌ ನೋಟಿಸ್‌ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ಹಮೀದ್ ಮಗ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಇದುವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

error: Content is protected !!