Home Blog Page 3198

ಹೆಚ್ ಡಿ ಕುಮಾರಸ್ವಾಮಿ ಆರೋಪ ಸುಳ್ಳು -ಎಂ.ಲಕ್ಷ್ಮಣ

0

ಮಡಿಕೇರಿ;- ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅವರು, ರಾಜ್ಯದಲ್ಲಿ ವಿದ್ಯುತ್‌ನ ಕೃತಕ ಅಭಾವ ಸೃಷ್ಟಿಯಾಗಿದೆ ಎಂಬ ಆರೋಪ ಸುಳ್ಳು ಎಂದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್‌ನ ಕೃತಕ ಅಭಾವ ಸೃಷ್ಟಿಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯುತ್‌ನ ಬಳಕೆ ಹೆಚ್ಚಾಗಿರುವುದರಿಂದ ಕೊರತೆ ಎದುರಾಗಿದೆ ಎಂದರು.

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕಮಿಷನ್‌ಗಾಗಿ ವಿದ್ಯುತ್ ಖರೀದಿಸಲು ಕೃತಕ ಅಭಾವ ಸೃಷ್ಟಿಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರದ ಗ್ರಿಡ್‌ ಮೂಲಕವೇ ಕೊರತೆಯಾದ ವಿದ್ಯುತ್‌ನ್ನು ಖರೀದಿಸುತ್ತಿದೆ. ಕೇಂದ್ರದ ಗ್ರಿಡ್‌ ಕಮಿಷನ್ ಕೊಡಲು ಸಾಧ್ಯವೇ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ರಾಜ್ಯಸರ್ಕಾರ ಇದುವರೆಗೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಿಲ್ಲ. ಹಾಗಿದ್ದ ಮೇಲೆ ಕಮಿಷನ್‌ ಪಡೆಯುವ ಪ‍್ರಶ್ನೆಯೇ ಎದುರಾಗುವುದಿಲ್ಲ. ಇದರ ಕನಿಷ್ಠ ಜ್ಞಾನವೂ ಕುಮಾರಸ್ವಾಮಿ ಅವರಿಗೆ ಇಲ್ಲ ಎಂದು ಹೇಳಿದರು.

ಆದರೆ, ಬಿಜೆಪಿ ಸರ್ಕಾರವಿದ್ದಾಗ 2022ರಲ್ಲೇ ವಿದ್ಯುತ್ ತಯಾರಿಸುವ ಸಾಮರ್ಥ್ಯವಿದ್ದರೂ ಖಾಸಗಿ ಕಂಪನಿಯಿಂದ ಸರ್ಕಾರ ವಿದ್ಯುತ್ ಖರೀದಿಸಿತ್ತು ಎಂದು ಅಂದಿನ ಕೆಪಿಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಪತ್ರ ಬರೆದಿದ್ದರು. ಖಾಸಗಿ ಕಂಪನಿಯಿಂದ ವಿದ್ಯುತ್ ಖರೀದಿಸಿದ್ದು ಬಿಜೆಪಿ ಸರ್ಕಾರವೇ ಹೊರತು ಕಾಂಗ್ರೆಸ್ ಅಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರವೀಣ್ ಹತ್ಯೆ ಪ್ರಕರಣ : ನೌಶಾದ್ ಸುಳಿವಿಗೆ 2ಲಕ್ಷ ರೂ. ಬಹುಮಾನ ಘೋಷಿಸಿದ NIA..!

0

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ನಂ.23ನೇ ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್‌ಐಎ (NIA) ಘೋಷಿಸಿದೆ.

ಈ ಸಂಬಂಧ ಎನ್‌ಐಎ ರಿವಾರ್ಡ್‌ ವಾಂಟೆಡ್‌ ನೋಟಿಸ್‌ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ಹಮೀದ್ ಮಗ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಇದುವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಕರ್ನಾಟಕದ ಹಲವೆಡೆ ನಾಳೆಯಿಂದ ಭಾರೀ ಮಳೆ – ಹವಮಾನ ಇಲಾಖೆ

0

ಬೆಂಗಳೂರು;- ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಕೆಲವು ರಾಜ್ಯಗಳಲ್ಲಿ ಅ. 21ರಿಂದಲೇ ಹಿಂಗಾರು ಮಳೆಯ ಪ್ರವೇಶವಾಗಿದೆ. ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತವೂ ಎದ್ದಿರುವುದರಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ.

ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಅಬಕಾರಿ ಇಲಾಖೆಗೆ ನೂತನ ಕಾನೂನು !? ಸಚಿವ ತಿಮ್ಮಾಪುರ ಹೇಳಿದ್ದೇನು!?

0

ಹುಬ್ಬಳ್ಳಿ: ಅಬಕಾರಿ ಇಲಾಖೆಯಲ್ಲಿ ಹೊಸ ಹೊಸ ಕಾನೂನುಗಳಿಗೆ ತಿದ್ದುಪಡಿ ತರುವ ಚಿಂತನೆ ನಡೆದಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದರು.

ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಇಲಾಖೆಯಲ್ಲಿ ಸಾಕಷ್ಟು ಬದಲಾಣೆ ಆಗಬೇಕಿದ್ದುಈಗಿರುವ ಐದು ವರ್ಷಗಳ ಕಾಲದ ಪ್ರತಿ ವರ್ಷದ ಅವಧಿಯ ಲೈಸನ್ಸ್ ನವೀಕರಣವನ್ನ ಐದು ವರ್ಷಗಳ ಕಾಲ ವಿಸ್ತರಣೆ ಹಳೆ ಲೈಸನ್ಸ್ ಗಳಿಗಳನ್ನ ನವೀಕರಣ ಮಾಡಲು ಅವಕಾಶ ಕೊಡುವುದು.

ಇದರ ಜೊತೆಗೆ ಕಾರಣಾಂತರಗಳಿಂದ ರದ್ದಾದ ಹಳೇ ಲೈಸನ್ಸ್ ದಾರರು ಬಾಕಿ ಹಣ ತುಂಬಿದರೆ ಲೈಸನ್ಸ್ ರಿನಿವಲ್ ಮಾಡುವುದು ಯಾರು ಹಣ ತುಂಬಿದರೇ ಪರವಾನಿಗೆ ಕೊಡಲಾಗುವುದು ಎಂದ ಅವರು, ಜನರ ಬೇಡಿಕೆ ಮತ್ತು ಸಪ್ಲಾಯ್ ಆಧಾರದ ಮೇಲೆ ಕೊಡಲಾಗುವುದು.

ಹೊರ ರಾಜ್ಯದಿಂದ ಯಾವುದೇ ರೀತಿಯ ಮದ್ಯ ಆಮುದು ಆಗದಂತೆ ನೋಡಿಕೊಳ್ಳಲಾಗುವುದು ಯಾವುದೇ ಕಾರಣಕ್ಕೋ ಈಗ ಹೊಸ ಲೈಸನ್ಸ್ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಭಾರತೀಯ ಜನತಾ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡತಾ ಇದ್ದಾರೆ. ಈ ಕುರಿತು ಕೆಲವರು ಇಲಾಖೆಯ ಬಗ್ಗೆ ಇಲ್ಲ ಸಲ್ಲದ ಗುಲ್ಲು ಎಬ್ಬಿಸತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗತ್ತಾರೆ ಎಂದು ಮದ್ದೂರು ಶಾಸಕ ಉದಯ ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಮ್ಮಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನ ಕಾಂಗ್ರೆಸ್ ವರ್ಕಿಂಗ್ ಪಾರ್ಟಿ ಹಾಗೂ ಹಿರಿಯ ನಾಯಕರು ನೋಡಿಕೊಳ್ಳತ್ತಾರೆ. ಈ ಕುರಿತು ನಾನು ಹೆಚ್ಚಿಗೆ ಏನು ಹೇಳಲಾರೆ ಎಂದರು. ಇನ್ನೂ ಬರ, ಕಾವೇರಿ, ಅಭಿವೃದ್ಧಿ ಕಾಮಗಾರಿ ಮರೆಮಾಚಲು ಹುಲಿ ಉಗುರು ವಿವಾದ ಮುನ್ನೇಲೆ ತರಲಾಗಿದೆ ಎಂಬ ಆರೋಪ ಹಿನ್ನೆಲೆ ಕುರಿತು ಸಹ ತೀಕ್ಷ್ಣವಾಗಿ ಪ್ರತಿಕ್ರಿಯೆ ಕೊಟ್ಟಿದ್ದು, ನಾವು ಯಾವುದೇ ವಿವಾದ ಮಾಡತಾ ಇಲ್ಲ ಎಂದರು.

ಬಸ್‌ನಲ್ಲಿದ್ದಾಗಲೇ ಉಸಿರಾಟದ ಸಮಸ್ಯೆ: ಮಹಿಳೆ ನೆರವಿಗೆ ಧಾವಿಸಿದ ಕಂಡಕ್ಟರ್, ಡ್ರೈವರ್

0

ತುಮಕೂರು;- ಬಸ್‌ನಲ್ಲಿದ್ದಾಗಲೇ ಉಸಿರಾಟದ ಸಮಸ್ಯೆ ಬಂದ ಹಿನ್ನೆಲೆ, ಮಹಿಳೆ ನೆರವಿಗೆ ಕಂಡಕ್ಟರ್, ಡ್ರೈವರ್ ಧಾವಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ ಚಾಲಕ ಹಾಗೂ ನಿರ್ವಾಹಕ ಕರುಣಾಮಯಿ ಆಗಿದ್ದಾರೆ.

ರಾಯಚೂರಿನಿಂದ ಬೆಂಗಳೂರಿಗೆ ಸರ್ಕಾರಿ ಬಸ್ ಹೋಗುತ್ತಿತ್ತು. ಬಸ್ ನಲ್ಲಿದ್ದ ಸುಮಾರು 47 ವರ್ಷದ ಮಹಿಳೆಗೆ ಶ್ವಾಸಕೋಶದ ಸಮಸ್ಯೆ ಯಿಂದ ಉಸಿರಾಟ ಏರುಪೇರಾಗಿದೆ. ಇದನ್ನ ಕಂಡ ಚಾಲಕ ಶಾಂತಪ್ಪ ಕೂಡಲೇ ಆಸ್ಪತ್ರೆಯತ್ತ ಸಾಗಿದ್ದಾರೆ.

ತುಮಕೂರಿನ ಶಿರಾ ಗೇಟ್ ಸಮೀಪದ ಶ್ರೀ ದೇವಿ ಆಸ್ಪತ್ರೆಗೆ ದಾಖಲಿಸಿ ಸರ್ಕಾರಿ ಬಸ್ ಚಾಲಕ ಮಾನವೀಯತೆ ಮೆರೆದಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದ್ದು, ಬಸ್ ಚಾಲಕನ ಕೆಲಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ‌ ವ್ಯಕ್ತವಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್

0

ಬಿ.ಸಿ.ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ “ಗರಡಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆಯಲಿದೆ.

ಈಗಾಗಲೇ ಸಮಾರಂಭಕ್ಕೆ ಅದ್ದೂರಿ ತಯಾರಿ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ‌. ದರ್ಶನ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲೂ ನಟಿಸಿದ್ದಾರೆ.

ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾಪತ್ರ ನೀಡಿದೆ‌. “ಗರಡಿ” ನವೆಂಬರ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸೌಮ್ಯ ಫಿಲಂಸ್ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.

ನಿರಂಜನ್ ಬಾಬು ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಅವರ ಸಂಕಲನವಿರುವ “ಗರಡಿ” ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸೃಷ್ಟಿ ಪಾಟೀಲ್. ಸೂರ್ಯ ನಾಯಕರಾಗಿ ನಟಿಸಿದ್ದಾರೆ. ಬಿ.ಸಿ.ಪಾಟೀಲ್, ಸೋನಾಲ್ ಮೊಂತೆರೊ, ರವಿಶಂಕರ್, ಧರ್ಮಣ್ಣ, ಸುಜಯ್ ಬೇಲೂರ್, ರಾಘವೇಂದ್ರ, ಚೆಲುವರಾಜ್, ಬಲ ರಾಜವಾಡಿ, ತೇಜಸ್ವಿನಿ ಪ್ರಕಾಶ್, ನಯನ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ. ನಿಶ್ವಿಕಾ ನಾಯ್ಡು ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

ನೆಲ್ಸನ್’ ಆಗಿ ಬಂದ ಮರಿ ಟೈಗರ್…ಸಖತ್ ಮಾಸ್ ಆಗಿದೆ ಟೀಸರ್

0

ಗೊಂಬೆಗಳ ಲವ್‌ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್‌ ಕುಮಾರ್ ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಇಂದು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ.

ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಉಪೇಂದ್ರ ಮಾತನಾಡಿ, ಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್ಟ್ರಾಡಿನರಿಯಾಗಿದೆ.

ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆ ಎಂದರು.

ನಟ ವಿನೋದ್ ಪ್ರಭಾಕರ್ ಮಾತನಾಡಿ, ಉಪೇಂದ್ರ ಅಣ್ಣ ಟೀಸರ್ ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು.

ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ‌ ಮಾಡಿದ್ದೀರಿ ಎಂದರು.

ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ಲಾಕ್ ಡೌನ್ ಆದ್ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು.

ಮಲಯಾಳಂ, ತಮಿಳು ಇಂಡಸ್ಟ್ರೀಗೆ ಕಥೆ ತೆಗೆದುಕೊಂಡು. ಆದರೆ ನನಗೆ ತೃಪ್ತಿಯಾಗಲಿಲ್ಲ. ಇಲ್ಲೇ ಏನಾದರೂ ಆಗಬೇಕು ಅದಕ್ಕೆ ಬಂದೆ. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು. ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ.

ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆ ಎಂದರು.

ನಿರ್ಮಾಪಕ ಬಿ.ಎಂ.ಶ್ರೀರಾಮ್ (ಕೋಲಾರ) ಮಾತನಾಡಿ, ಉಪ್ಪಿ ಕಾರ್ಯಕ್ರಮಕ್ಕೆ ಬಂದಿದ್ದು ಬಹಳ ಖುಷಿ ಆಯ್ತು. ನಾವು ತುಂಬ ಬಡತನದಿಂದ ಮೇಲೆ ಬಂದವರು. ನಾವು ಈ ಮಟ್ಟದಲ್ಲಿ ಬೆಳೆಯಲು ಐದು ಜನರನ್ನು ಸ್ಫೂರ್ತಿಯಾಗಿ ತೆಗೆದುಕೊಂಡೆ.

ಅದರಲ್ಲಿ ಉಪ್ಪಿ ಸರ್ ಕೂಡ ಒಬ್ಬರು. ತಂದೆ ತಾಯಿ ಆಶೀರ್ವಾದ ಮಾರ್ಗದರ್ಶನದಿಂದ ಈ ಮಟ್ಟಕ್ಕೆ ಇದ್ದೀವಿ. ಅರುಣ್ ಅವರನ್ನು ನನ್ನ ಸ್ನೇಹಿತರು ರೆಫರ್ ಮಾಡಿದ್ದರು. ಇದು ಚಾಮರಾಜನಗ ಆಚಾರ, ವಿಚಾರ ಅಂಶಗಳು ಇರುವುದರಿಂದ ಕಥೆ ಒಪ್ಪಿಕೊಂಡೆ. ವಿನೋದ್ ಸರ್ ಅಪ್ರೋಚ್ ಮಾಡಿದ್ವಿ. ಕಥೆ ಹೇಳಿದ್ವಿ ಒಪ್ಪಿಕೊಂಡರು. ಟೀಸರ್ ಮಾಡಿದ್ಮೇಲೆ ಅರುಣ್ ಟೀ ಮೇಲೆ ಭರವಸೆ ಹೆಚ್ಚಾಯ್ತು ಎಂದರು.

‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ನೈಜ ಘಟನೆಯ ಕಥಾಹಂದರದ ಸಿನಿಮಾ. ಚಾಮರಾಜನಗರ ಜಿಲ್ಲೆಯಲ್ಲಿ 60ರಿಂದ 90ರ ದಶಕದಲ್ಲಿ ನಡೆಯುವ ಗ್ಯಾಗ್‌ಸ್ಟರ್‌ ಕಥೆ.

ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ.

ವಿಶೇಷ ಅಂದರೆ ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್ ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತವೂ ಗಮನಸೆಳೆಯುತ್ತಿದೆ.

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ.

ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ. ಆಕ್ಷನ್ ಟೀಸರ್ ಧಮಾಕ ಎಬ್ಬಿಸಿರುವ ಚಿತ್ರತಂಡ ನವೆಂಬರ್ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.

3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ..!

0

ಚಿಕ್ಕಮಗಳೂರು: 3 ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಹೌದು ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂಜಾಟದ ಗುಂಪಿನ ಮೇಲೆ ಪೊಲೀಸರ ದಾಳಿ: ಇಂಜಿನಿಯರ್ ಸೇರಿ 9ಜನರ ಬಂಧನ

0

ಪೊಲೀಸರ ಕಾರ್ಯಾಚರಣೆ…

ಗದಗ:- ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್- ಬಾಹರ್ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ ಗುಂಪೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಒಬ್ಬ ಇಂಜಿನಿಯರ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿರುವ ಘಟನೆ ತಾಲೂಕಿನ ಕೋಟಮುಚಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಂತೆಬಯಲಿನ ಹತ್ತಿರ ಇರುವ ದುರುಗಮ್ಮ ಗುಡಿ ಹತ್ತಿರದ ಸಾರ್ವಜನಿಕ ಬಯಲು ಜಾಗದಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್- ಬಾಹರ್ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ ಬೆಟಗೇರಿಯ ಪ್ರಕಾಶ್ ಬಸವಣ್ಣೆಪ್ಪ ಮಾನೆ, ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮ ನಿವಾಸಿ ತಾಯಪ್ಪ ಪರಸಪ್ಪ ಕೆಂಗಾರ್, ಕೋಟುಮಚಗಿ ನಿವಾಸಿಗಳಾದ ಶೇಖಪ್ಪ ಶಿವಪ್ಪ ರಮಾಣಿ, ಮುತ್ತಣ್ಣ ಮಲ್ಲಪ್ಪ ರಮಾಣಿ, ಶರಣಪ್ಪ ಅಂದಪ್ಪ ಬೇವಿನಕಟ್ಟೆ, ಶಂಕರಪ್ಪ ಕರಿಯಪ್ಪ ವಡ್ಡರ್, ಶಿವಪ್ಪ ಬಸಪ್ಪ ವಡ್ಡರ್, ಈರಪ್ಪ ಹುಚ್ಚಪ್ಪ ಬೆಂಡಿಹಾಳ್ ಹಾಗೂ ಮುದಿಯಪ್ಪ ರಾಮಪ್ಪ ಕಮ್ಮಾರ್ ಎಂಬುವವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ರೂ. 9,520ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.


ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಅಪರಾಧ ಸಂಖ್ಯೆ: 0313/2023ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಉರುಳಿಗೆ ಸಿಲುಕಿ ಸಾವನ್ನಪ್ಪಿದ ಹೆಣ್ಣು ಚಿರತೆ

0

ಕೋಲಾರ;- ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿದ ಹೆಣ್ಣು ಚಿರತೆಯೊಂದು ಮೃತಪಟ್ಟ ಘಟನೆ ಜಿಲ್ಲೆಯ ಖಾಜಿಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿರತೆಯ ಸೊಂಟದ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಮೃತಪಟ್ಟಿದೆ. ಉರುಳಿಗೆ ಸಿಲುಕಿ ಒದ್ದಾಡುವುದನ್ನು ಕಂಡು ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ವಿಷಯ ಮುಟ್ಟಿಸಿದ್ದರು.

ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಪ್ರಯತ್ನ ನಡೆಯಿತು. ತೀವ್ರ ಪೆಟ್ಟಾಗಿದ್ದ ಕಾರಣ ಚಿರತೆ ಮೃತಪಟ್ಟಿದೆ.

error: Content is protected !!