Home Blog Page 3199

3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ..!

0

ಚಿಕ್ಕಮಗಳೂರು: 3 ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಹೌದು ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂಜಾಟದ ಗುಂಪಿನ ಮೇಲೆ ಪೊಲೀಸರ ದಾಳಿ: ಇಂಜಿನಿಯರ್ ಸೇರಿ 9ಜನರ ಬಂಧನ

0

ಪೊಲೀಸರ ಕಾರ್ಯಾಚರಣೆ…

ಗದಗ:- ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್- ಬಾಹರ್ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ ಗುಂಪೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಒಬ್ಬ ಇಂಜಿನಿಯರ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿರುವ ಘಟನೆ ತಾಲೂಕಿನ ಕೋಟಮುಚಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಂತೆಬಯಲಿನ ಹತ್ತಿರ ಇರುವ ದುರುಗಮ್ಮ ಗುಡಿ ಹತ್ತಿರದ ಸಾರ್ವಜನಿಕ ಬಯಲು ಜಾಗದಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್- ಬಾಹರ್ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ ಬೆಟಗೇರಿಯ ಪ್ರಕಾಶ್ ಬಸವಣ್ಣೆಪ್ಪ ಮಾನೆ, ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮ ನಿವಾಸಿ ತಾಯಪ್ಪ ಪರಸಪ್ಪ ಕೆಂಗಾರ್, ಕೋಟುಮಚಗಿ ನಿವಾಸಿಗಳಾದ ಶೇಖಪ್ಪ ಶಿವಪ್ಪ ರಮಾಣಿ, ಮುತ್ತಣ್ಣ ಮಲ್ಲಪ್ಪ ರಮಾಣಿ, ಶರಣಪ್ಪ ಅಂದಪ್ಪ ಬೇವಿನಕಟ್ಟೆ, ಶಂಕರಪ್ಪ ಕರಿಯಪ್ಪ ವಡ್ಡರ್, ಶಿವಪ್ಪ ಬಸಪ್ಪ ವಡ್ಡರ್, ಈರಪ್ಪ ಹುಚ್ಚಪ್ಪ ಬೆಂಡಿಹಾಳ್ ಹಾಗೂ ಮುದಿಯಪ್ಪ ರಾಮಪ್ಪ ಕಮ್ಮಾರ್ ಎಂಬುವವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ರೂ. 9,520ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.


ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಅಪರಾಧ ಸಂಖ್ಯೆ: 0313/2023ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಉರುಳಿಗೆ ಸಿಲುಕಿ ಸಾವನ್ನಪ್ಪಿದ ಹೆಣ್ಣು ಚಿರತೆ

0

ಕೋಲಾರ;- ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿದ ಹೆಣ್ಣು ಚಿರತೆಯೊಂದು ಮೃತಪಟ್ಟ ಘಟನೆ ಜಿಲ್ಲೆಯ ಖಾಜಿಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿರತೆಯ ಸೊಂಟದ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಮೃತಪಟ್ಟಿದೆ. ಉರುಳಿಗೆ ಸಿಲುಕಿ ಒದ್ದಾಡುವುದನ್ನು ಕಂಡು ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ವಿಷಯ ಮುಟ್ಟಿಸಿದ್ದರು.

ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಪ್ರಯತ್ನ ನಡೆಯಿತು. ತೀವ್ರ ಪೆಟ್ಟಾಗಿದ್ದ ಕಾರಣ ಚಿರತೆ ಮೃತಪಟ್ಟಿದೆ.

ಆರ್​ಎಫ್​ಒ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ

0

ಬೆಂಗಳೂರು;- ವಲಯ ಅರಣ್ಯಾಧಿಕಾರಿ ಮುನಿರಾಜ್ ಕೂಡ ಹುಲಿ ಉಗುರು ಧರಿಸಿರುವ ಕುರಿತು ದೂರು ದಾಖಲಾಗಿದೆ. ಕಾನೂನು ಪಾಲಿಸಬೇಕಾದ ಅರಣ್ಯಾಧಿಕಾರಿಗಳಿಂದಲೇ ಕಾನೂನು ಉಲ್ಲಂಘನೆ ಆರೋಪ ಈಗ ಕೇಳಿಬಂದಿದೆ. ಈ ವಿಚಾರವಾಗಿ ವನ್ಯಜೀವಿ ಸ್ವಯಂ ಸೇವಕ ಬಾಬು ಎಂಬವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇಮೇಲ್ ಮುಖಾಂತರ ದೂರು ನೀಡಲಾಗಿದ್ದು, ವಲಯ ಅರಣ್ಯಾಧಿಕಾರಿ ಮುನಿರಾಜ್ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ರಾಜ್ಯದಾದ್ಯಂತ ಈಗ ಹುಲಿ ಉಗುರಿನ ಸದ್ದೇ ಜೋರಾಗಿದೆ. ರಿಯಾಲಿಟಿ ಶೋದಲ್ಲಿ ಹುಲಿ ಉಗುರು ಧರಿಸಿದ ಪ್ರಕರಣದ ಬೆನ್ನಲ್ಲೇ ಚಿತ್ರರಂಗದ ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರಿಂದ ಪೆಂಡೆಂಟ್​ ವಶಪಡಿಸಿ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ರಾಜಕಾರಣಿಗಳು, ಉದ್ಯಮಿಗಳು ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಇದೀಗ ಅರಣ್ಯಾಧಿಕಾರಿಗಳ ವಿರುದ್ಧವೇ ಆರೋಪ ಕೇಳಿಬಂದಿದೆ!

ಅಭಿಷೇಕ್ ಅಂಬರೀಶ್ ಪತ್ನಿ ಸೋದರನ ಹುಚ್ಚಾಟ – ಅರೆಸ್ಟ್

0

ಬೆಂಗಳೂರು;-ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಬಿಡಪ ಸಹೋದರ ಆಯಡಂ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದು ಮಾತ್ರವಲ್ಲದೆ, ಎಲ್ಲರ ಎದುರು ದುರ್ವರ್ತನೆ ತೋರಿದ್ದಾರೆ. ಪೊಲೀಸರ ಎದುರು ಕೂಗಾಟ ನಡೆಸಿದ್ದಾರೆ. ಈ ಹಿನ್ನೆಲೆ ಎಫ್​ಐಆರ್​ ದಾಖಲಿಸಿ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದು, ಆಯಡಂ ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಾರೆ. ವರ್ತನೆಯ ಮೇಲೆ ನಿಯಂತ್ರಣ ಇರಲ್ಲಿಲ್ಲ. ಪೊಲೀಸರಿಗೂ ಅವರನ್ನು ನಿಯಂತ್ರಿಸಲು ಹೆಚ್ಚು ಸಮಯ ಹಿಡಿದಿದೆ. ಅಕ್ಟೋಬರ್ 25 ರಾತ್ರಿ ಯಲಹಂಕ ನ್ಯೂಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಯಂಡಂ ರೈಲ್​ ವ್ಹೀಲ್​ ಫ್ಯಾಕ್ಟರಿ ಬಳಿ ಯರ್ರಾಬಿರ್ರಿ ಕಾರು ಚಾಲನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಆಯಡಂ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದಾಗ ಹಿಂಬದಿ ವಾಹನ ಸವಾರ ಹಾರನ್ ಮಾಡಿದ್ದಾರೆ. ವಾಹನ ಅಡ್ಡಗಟ್ಟಿ ಸವಾರನಿಗೆ ಆಯಡಂ ಬಿದ್ದಪ್ಪ ಬೆದರಿಕೆ ಹಾಕಿದ್ದಾರೆ. ಕೂಡಲೇ ವಾಹನ ಸವಾರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರ ಜೊತೆಯೂ ಆಯಡಂ ದುರ್ವರ್ತನೆ ತೋರಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರಿಗೂ ಕಷ್ಟ ಆಗಿದೆ ಎಂದಿದ್ದಾರೆ.ವಾಹನ ಸವಾರನ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಯಚೂರು: ಜಿಂಕೆ ಬಲಿ ಪಡೆದ ಚಿರತೆ- ಭಯದಲ್ಲಿ ಗ್ರಾಮಸ್ಥರು

0

ರಾಯಚೂರು;- ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ಜಿಲ್ಲೆಯ ಮಾನ್ವಿ ತಾಲೂಕಿನ ಯರಮಲದೊಡ್ಡಿ ಗ್ರಾಮದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಜೀವ ಭಯದಲ್ಲಿದ್ದಾರೆ.

ಯರಮಲದೊಡ್ಡಿ ಗ್ರಾಮದ ಜಮೀನಿನಲ್ಲಿ ಮೇಕೆಯನ್ನು ಬೇಟೆಯಾಡಿ ಚಿರತೆ ತಿಂದು ಹಾಕಿದೆ. ಇದು ತೋಳದ ಹೆಜ್ಜೆಯ ಗುರುತು ಎಂದು ಹೇಳಿ ಜಾರಿಕೊಳ್ಳಲು ಅರಣ್ಯಾಧಿಕಾರಿ ಯತ್ನಿಸಿದ್ದಾರೆ. ಮರುದಿನ ಭಾರಿ ಗಾತ್ರದ ಜಿಂಕೆಯನ್ನು ಬೇಟೆ ಆಡಿ ಚಿರತೆ ಕೊಂದು ಹಾಕಿದೆ. ಬಾರಿ ಗಾತ್ರದ ಜಿಂಕೆಯನ್ನು ನೋಡಿ ಇದು ಚಿರತೆಯ ಕೆಲಸ ಎಂದು ಅರಣ್ಯ ಅಧಿಕಾರಿ ಯೂ ಟರ್ನ್ ಹೊಡೆದಿದ್ದಾರೆ.

ಜಮೀನಿಗೆ ಹೋಗಲು ಯರಮಲ ಗ್ರಾಮದ ಜನ ಭಯಭೀತರಾಗಿದ್ದಾರೆ. ಸತತ ಎರಡು ದಿನ ಬೇಟೆಯಾಡಿ ಎರಡು ಪ್ರಾಣಿಗಳನ್ನು ಚಿರತೆ ಕೊಂದು ಹಾಕಿದೆ. ಜನರ ಜೀವ ಹೋಗುವ ಮೊದಲು ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಗ್ರಾಮಸ್ಥರು ಗರಮ್ ಆಗಿದ್ದಾರೆ.

ಕಿಡಿಗೇಡಿಗಳ ಪುಂಡಾಟ; ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ

0

ಬೀದರ್;- ಜಗಳ ತಡೆಯಲು ಹೋಗಿದ್ದ ಪೊಲೀಸರ ಮೇಲೆ ಯುವಕರ ಗುಂಪು ಅಟ್ಯಾಕ್ ಮಾಡಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಬಟಗೇರಾದಲ್ಲಿ ಜರುಗಿದೆ.ಮಹಾಲಕ್ಷ್ಮಿ ಜಾತ್ರೆಯ ಮೆರವಣಿಗೆ ವೇಳೆ ಯುವಕರ ಎರಡು ಗುಂಪುಗಳ ಮಧ್ಯ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಗಲಾಟೆ ತಡೆಯಲು ಪೊಲೀಸರ ತಂಡ ಆಗಮಿಸಿದೆ. ಈ ವೇಳೆ ಪುಂಡರ ಗುಂಪು ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದುಷ್ಕೃತ್ಯ ಮೆರೆದಿದ್ದಾರೆ.

ಕಲ್ಲೂ ತೂರಾಟದಲ್ಲಿ ಇಬ್ಬರು ಪೇದೆಗಳಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ಈರುಳ್ಳಿ ದರ ಕೇಳಿ ಗ್ರಾಹಕರು ಶಾಕ್

0

ಬೆಂಗಳೂರು;- ಮಳೆಯ ಅಭಾವದಿಂದ ಇಳುವರಿ ಕಡಿಮೆಯಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ಕೇಳಿ ಗ್ರಾಹಕರು ಶಾಕ್ ಆಗಿದ್ದಾರೆ. ನಗರದ ಅನೇಕ ಅಂಗಡಿಗಳಲ್ಲಿ ಬೆಲೆಗಳು ಶೇಕಡಾ 50 ಕ್ಕಿಂತ ಹೆಚ್ಚಿವೆ, ಮಾರಾಟಗಾರರು ಈರುಳ್ಳಿಯನ್ನು ಸಮರ್ಪಕವಾಗಿ ಪೂರೈಸಲು ಸಾಕಷ್ಟು ದಾಸ್ತಾನು ಇಲ್ಲದೆ ಪರದಾಡುತ್ತಿದ್ದಾರೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ನಲ್ಲಿ ಕಳೆದೆರಡು ವಾರಗಳಿಂದ ನಿರಂತರವಾಗಿ 35 ರಿಂದ 40 ರೂ.ಗಳ ನಡುವೆ ಇದ್ದ ಈರುಳ್ಳಿಯ ಸಗಟು ಬೆಲೆ ಗುರುವಾರದ ವೇಳೆಗೆ ಕೆಜಿಗೆ 65 ರೂಪಾಯಿಗೆ ಹೆಚ್ಚಳವಾಗಿದೆ.

ಒಂದು ವಾರದಿಂದ ಬೆಲೆ ಏರಿಕೆ

ಬೆಂಗಳೂರು ಆಲೂಗೆಡ್ಡೆ ಮತ್ತು ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ರವಿಶಂಕರ್ ಬಿ ಮಾತನಾಡಿ, ಈ ವಾರದ ಆರಂಭದಿಂದಲೂ ಬೆಲೆ ಏರಿಕೆಯಾಗುತ್ತಿದೆ ಎಂದು ತಿಳಿಸಿರುವುದಾಗಿ ಡಿಹೆಚ್ ವರದಿ ಮಾಡಿದೆ.

ಕಳೆದ ಎರಡು ವರ್ಷಗಳಿಂದ ಪೂರೈಕೆ ಕುಸಿಯುತ್ತಿದೆಯಾದರೂ, ಈ ಋತುವಿನಲ್ಲಿ ಪರಿಸ್ಥಿತಿ ಸಾಕಷ್ಟು ಕೆಟ್ಟದಾಗಿದೆ” ಎಂದು ರವಿಶಂಕರ್ ಡಿಹೆಚ್‌ಗೆ ತಿಳಿಸಿದ್ದಾರೆ.

“ಕೆಲವು ವರ್ಷಗಳ ಹಿಂದೆ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಪ್ರತಿದಿನ 500 ರಿಂದ 1,000 ಟ್ರಕ್‌ಲೋಡ್‌ಗಳು ದಾಸ್ತಾನು ಸಗಟು ಈರುಳ್ಳಿ ಮಾರುಕಟ್ಟೆಗೆ ಬರುತ್ತಿತ್ತು ಅದು ಈಗ ಪ್ರತಿದಿನ ಜಿಲ್ಲೆಗಳಿಂದ ಕೇವಲ 100 ಟ್ರಕ್‌ಲೋಡ್ ಅಥವಾ ಸರಿಸುಮಾರು 1,000 ಟನ್ ತಾಜಾ ಈರುಳ್ಳಿ ಮಾತ್ರ ಪೂರೈಕೆಯಾಗುತ್ತಿದೆ” ಎಂದು ಹೇಳಿದ್ದಾರೆ.

ಹುಲಿ ಉಗುರು ಕೇಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ʼಗೆ ನೋಟಿಸ್ ಜಾರಿ

0

ಬೆಂಗಳೂರು;- ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ಗೆ ಕಚೇರಿ ಮೇಲೆ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೆಂಡೆಂಟ್ ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಆರ್ಯವರ್ಧನ್ ಕೂಡ ಬಿಗ್ ಬಾಸ್ ಸ್ಪರ್ಧಿಯಾಗಿದ್ದರು. ಆ ಸಮಯದಲ್ಲೇ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಈಗ ಅದನ್ನು ಪತ್ತೆ ಹಚ್ಚಲಾಗಿದೆ. ಆರ್ಯವರ್ಧನ್ ಕಚೇರಿಗೆ ಆಗಮಿಸಿದ ಅರಣ್ಯಾಧಿಕಾರಿಗಳು, ನೋಟಿಸ್ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರ್ಯವರ್ಧನ್ ಕುತ್ತಿಗೆಯಲ್ಲಿ ವ್ಯಾಘ್ರನಖ ಹಾಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಚಿನ್ನದ ಪೆಂಡೆಂಟ್ ಆಗಿರುವ ಕಾರಣದಿಂದಾಗಿ ಅರಣ್ಯಾಧಿಕಾರಿಗಳು ಅದನ್ನು ಪರಿಶೀಲಿಸುತ್ತಿದ್ದಾರೆ.

ಹುಲಿ ಉಗುರನ್ನು ಮಾತ್ರ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಇದು ಮೂರು ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನದ ಚೈನಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾನೂನಿನ ಮುಂದೆ ಎಲ್ಲರೂ ಒಂದೇ. ಅವರು ಯಾವುದೇ ಪಕ್ಷದಲ್ಲಿ ಇರಲಿ, ಎಂತಹ ಗಣ್ಯ ವ್ಯಕ್ತಿಗಳೇ ಆಗಿರಲಿ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರೆ ಕ್ರಮ ತಗೆದುಕೊಳ್ಳಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಇಂತಹ ಪ್ರಕರಣವನ್ನು ಅರಣ್ಯ ಸಚಿವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ರಾಜ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಇದೆ ಹುಲಿ ಉಗುರಿನ ಪೆಂಡೆಂಟ್!

0

ಬೆಳಗಾವಿ ;- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದೆ. ಈ ಬಗ್ಗೆ ವರದಿ ಬೆನ್ನಲ್ಲೇ ಬೆಳಗಾವಿ ಅರಣ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಧರಿಸಿರುವ ಹುಲಿ ಉಗುರಿನ ಬಗ್ಗೆ ಶೀಘ್ರದಲ್ಲೇ ಪರಿಶೀಲಿಸಲಾಗುತ್ತದೆ. ಮಾಧ್ಯಮದ ಮೂಲಕ ಸಚಿವರ ಪುತ್ರನ ಪೆಂಡೆಂಟ್ ಬಗ್ಗೆ ಮಾಹಿತಿ ಸಿಕ್ಕಿದೆ. ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಪರಿಶೀಲನೆ ನಡೆಸುವಂತೆ ಅರಣ್ಯ ಇಲಾಖೆಯ ಕೆಳಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇಂದು ಸಂಜೆಯೊಳಗೆ ಹುಲಿ ಉಗುರಿನ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತೇವೆ. ಏನಾದರೂ ತಪ್ಪು ಕಂಡುಬಂದರೆ ಸರ್ಕಾರದ ಸಮಿತಿಗೆ ವರದಿ ನೀಡುತ್ತೇವೆ ಎಂದು ಬೆಳಗಾವಿ ಡಿಸಿಎಫ್ ಶಂಕರ ಕಲ್ಲೋಳಕರ್ ಮಾಹಿತಿ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಲಾಕೆಟ್ ಬಗ್ಗೆ ಚರ್ಚೆ ಶುರುವಾಗಿತ್ತು. ಮದುವೆ ಸಮಯದಲ್ಲಿ ಫೋಟೋ ಶೂಟ್ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಫೋಟೋ ವೈರಲ್ ಆಗಿತ್ತು.

error: Content is protected !!