Home Blog Page 3201

ಬೆಂಗಳೂರಿನಲ್ಲಿ ಈರುಳ್ಳಿ ದರ ಕೇಳಿ ಗ್ರಾಹಕರು ಶಾಕ್

0

ಬೆಂಗಳೂರು;- ಮಳೆಯ ಅಭಾವದಿಂದ ಇಳುವರಿ ಕಡಿಮೆಯಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ಕೇಳಿ ಗ್ರಾಹಕರು ಶಾಕ್ ಆಗಿದ್ದಾರೆ. ನಗರದ ಅನೇಕ ಅಂಗಡಿಗಳಲ್ಲಿ ಬೆಲೆಗಳು ಶೇಕಡಾ 50 ಕ್ಕಿಂತ ಹೆಚ್ಚಿವೆ, ಮಾರಾಟಗಾರರು ಈರುಳ್ಳಿಯನ್ನು ಸಮರ್ಪಕವಾಗಿ ಪೂರೈಸಲು ಸಾಕಷ್ಟು ದಾಸ್ತಾನು ಇಲ್ಲದೆ ಪರದಾಡುತ್ತಿದ್ದಾರೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ನಲ್ಲಿ ಕಳೆದೆರಡು ವಾರಗಳಿಂದ ನಿರಂತರವಾಗಿ 35 ರಿಂದ 40 ರೂ.ಗಳ ನಡುವೆ ಇದ್ದ ಈರುಳ್ಳಿಯ ಸಗಟು ಬೆಲೆ ಗುರುವಾರದ ವೇಳೆಗೆ ಕೆಜಿಗೆ 65 ರೂಪಾಯಿಗೆ ಹೆಚ್ಚಳವಾಗಿದೆ.

ಒಂದು ವಾರದಿಂದ ಬೆಲೆ ಏರಿಕೆ

ಬೆಂಗಳೂರು ಆಲೂಗೆಡ್ಡೆ ಮತ್ತು ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ರವಿಶಂಕರ್ ಬಿ ಮಾತನಾಡಿ, ಈ ವಾರದ ಆರಂಭದಿಂದಲೂ ಬೆಲೆ ಏರಿಕೆಯಾಗುತ್ತಿದೆ ಎಂದು ತಿಳಿಸಿರುವುದಾಗಿ ಡಿಹೆಚ್ ವರದಿ ಮಾಡಿದೆ.

ಕಳೆದ ಎರಡು ವರ್ಷಗಳಿಂದ ಪೂರೈಕೆ ಕುಸಿಯುತ್ತಿದೆಯಾದರೂ, ಈ ಋತುವಿನಲ್ಲಿ ಪರಿಸ್ಥಿತಿ ಸಾಕಷ್ಟು ಕೆಟ್ಟದಾಗಿದೆ” ಎಂದು ರವಿಶಂಕರ್ ಡಿಹೆಚ್‌ಗೆ ತಿಳಿಸಿದ್ದಾರೆ.

“ಕೆಲವು ವರ್ಷಗಳ ಹಿಂದೆ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಪ್ರತಿದಿನ 500 ರಿಂದ 1,000 ಟ್ರಕ್‌ಲೋಡ್‌ಗಳು ದಾಸ್ತಾನು ಸಗಟು ಈರುಳ್ಳಿ ಮಾರುಕಟ್ಟೆಗೆ ಬರುತ್ತಿತ್ತು ಅದು ಈಗ ಪ್ರತಿದಿನ ಜಿಲ್ಲೆಗಳಿಂದ ಕೇವಲ 100 ಟ್ರಕ್‌ಲೋಡ್ ಅಥವಾ ಸರಿಸುಮಾರು 1,000 ಟನ್ ತಾಜಾ ಈರುಳ್ಳಿ ಮಾತ್ರ ಪೂರೈಕೆಯಾಗುತ್ತಿದೆ” ಎಂದು ಹೇಳಿದ್ದಾರೆ.

ಹುಲಿ ಉಗುರು ಕೇಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ʼಗೆ ನೋಟಿಸ್ ಜಾರಿ

0

ಬೆಂಗಳೂರು;- ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ಗೆ ಕಚೇರಿ ಮೇಲೆ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೆಂಡೆಂಟ್ ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಆರ್ಯವರ್ಧನ್ ಕೂಡ ಬಿಗ್ ಬಾಸ್ ಸ್ಪರ್ಧಿಯಾಗಿದ್ದರು. ಆ ಸಮಯದಲ್ಲೇ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಈಗ ಅದನ್ನು ಪತ್ತೆ ಹಚ್ಚಲಾಗಿದೆ. ಆರ್ಯವರ್ಧನ್ ಕಚೇರಿಗೆ ಆಗಮಿಸಿದ ಅರಣ್ಯಾಧಿಕಾರಿಗಳು, ನೋಟಿಸ್ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರ್ಯವರ್ಧನ್ ಕುತ್ತಿಗೆಯಲ್ಲಿ ವ್ಯಾಘ್ರನಖ ಹಾಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಚಿನ್ನದ ಪೆಂಡೆಂಟ್ ಆಗಿರುವ ಕಾರಣದಿಂದಾಗಿ ಅರಣ್ಯಾಧಿಕಾರಿಗಳು ಅದನ್ನು ಪರಿಶೀಲಿಸುತ್ತಿದ್ದಾರೆ.

ಹುಲಿ ಉಗುರನ್ನು ಮಾತ್ರ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಇದು ಮೂರು ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನದ ಚೈನಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾನೂನಿನ ಮುಂದೆ ಎಲ್ಲರೂ ಒಂದೇ. ಅವರು ಯಾವುದೇ ಪಕ್ಷದಲ್ಲಿ ಇರಲಿ, ಎಂತಹ ಗಣ್ಯ ವ್ಯಕ್ತಿಗಳೇ ಆಗಿರಲಿ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರೆ ಕ್ರಮ ತಗೆದುಕೊಳ್ಳಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಇಂತಹ ಪ್ರಕರಣವನ್ನು ಅರಣ್ಯ ಸಚಿವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ರಾಜ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಇದೆ ಹುಲಿ ಉಗುರಿನ ಪೆಂಡೆಂಟ್!

0

ಬೆಳಗಾವಿ ;- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದೆ. ಈ ಬಗ್ಗೆ ವರದಿ ಬೆನ್ನಲ್ಲೇ ಬೆಳಗಾವಿ ಅರಣ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಧರಿಸಿರುವ ಹುಲಿ ಉಗುರಿನ ಬಗ್ಗೆ ಶೀಘ್ರದಲ್ಲೇ ಪರಿಶೀಲಿಸಲಾಗುತ್ತದೆ. ಮಾಧ್ಯಮದ ಮೂಲಕ ಸಚಿವರ ಪುತ್ರನ ಪೆಂಡೆಂಟ್ ಬಗ್ಗೆ ಮಾಹಿತಿ ಸಿಕ್ಕಿದೆ. ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಪರಿಶೀಲನೆ ನಡೆಸುವಂತೆ ಅರಣ್ಯ ಇಲಾಖೆಯ ಕೆಳಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇಂದು ಸಂಜೆಯೊಳಗೆ ಹುಲಿ ಉಗುರಿನ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತೇವೆ. ಏನಾದರೂ ತಪ್ಪು ಕಂಡುಬಂದರೆ ಸರ್ಕಾರದ ಸಮಿತಿಗೆ ವರದಿ ನೀಡುತ್ತೇವೆ ಎಂದು ಬೆಳಗಾವಿ ಡಿಸಿಎಫ್ ಶಂಕರ ಕಲ್ಲೋಳಕರ್ ಮಾಹಿತಿ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಲಾಕೆಟ್ ಬಗ್ಗೆ ಚರ್ಚೆ ಶುರುವಾಗಿತ್ತು. ಮದುವೆ ಸಮಯದಲ್ಲಿ ಫೋಟೋ ಶೂಟ್ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಫೋಟೋ ವೈರಲ್ ಆಗಿತ್ತು.

ಕೊನೆಗೂ ಹೆತ್ತಮ್ಮನ ಮಡಿಲು ಸೇರಿದ ಕಂದ – ನವಜಾತ ಶಿಶು ಕದ್ದಿದ್ದವಳು ಅಂದರ್

0

ಕೋಲಾರ;- ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಳುವಾಗಿದ್ದ ಮಗುವನ್ನು‌ ರಕ್ಷಣೆ ಮಾಡಿದ್ದಾರೆ.ಕೋಲಾರ ಗಡಿ ಭಾಗದ ತಮಿಳುನಾಡಿನ ಬೇರಿಕೆ ಬಳಿ ಮಗುವಿನ ರಕ್ಷಣೆ ಮಾಡಲಾಗಿದೆ.

6 ದಿನದ ಕಂದಮ್ಮ ತಾಯಿ ಮಡಿಲು ಸೇರಿದೆ ಮಗು ಕಳ್ಳತನ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮಗುವನ್ನು ರಕ್ಷಣೆ ಮಾಡಿ ತಾಯಿ ಮಡಿಲಿಗೆ ಸೇರಿಸಿದ್ದಾರೆ ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ಮೂವರು ಮಹಿಳೆಯರು ನಿನ್ನೆ ಮಗು ಕಳ್ಳತನ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದರು.

ಕಳ್ಳರ ಜಾಡು ಹಿಡಿದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಓರ್ವ ಮಹಿಳೆಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಹಣ ಕೊಟ್ರೂ ನಮಗೆ ಬೇರೆ ರಾಜ್ಯಗಳಲ್ಲಿ ವಿದ್ಯುತ್ ಸಿಗುತ್ತಿಲ್ಲ – ಸಚಿವ ಕೃಷ್ಣ ಭೈರೇಗೌಡ

0

ಯಾದಗಿರಿ;- ಸಚಿವ ಕೃಷ್ಣ ಭೈರೇಗೌಡರು ಯಾದಗಿರಿಯಲ್ಲಿ ಮಾತನಾಡಿ, ಹಣ ಕೊಡುತ್ತೇವೆ ಅಂದರೂ ಬೇರೆ ರಾಜ್ಯಗಳಿಂದ ವಿದ್ಯುತ್ ಸಿಗುತ್ತಿಲ್ಲ ಎಂದುಬೇಸರ ಹೊರ ಹಾಕಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಸಮಸ್ಯೆ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಬಹಳ ಗಂಭೀರವಾಗಿ ಪರಿಣಿಸಿದ್ದಾರೆ. ಎಲ್ಲಾ ವಿದ್ಯುತ್ ಕಂಪನಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಇಂಧನ ಸಚಿವರು ವಿದ್ಯುತ್ ಖರೀದಿಸಲು ಎಲ್ಲಾ ಕಡೆ ಪ್ರಯತ್ನ ಮಾಡ್ತಿದ್ದಾರೆ. ಯಾದಗಿರಿ ಉಸ್ತುವಾರಿ ಸಚಿವರು ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಇರುವುದರಲ್ಲೇ ವೇರಿಯೇಷನ್ ಮಾಡಿ ವಿದ್ಯುತ್ ನೀಡಲು ಪ್ರಯತ್ನಿಸುತ್ತಿದ್ದಾರೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಕಾಡುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ಜಲವಿದ್ಯುತ್ ಉತ್ಪಾದನೆಗೂ ಸಮಸ್ಯೆಯಾಗಿದೆ. ಈ ಮಧ್ಯೆ, ರಾಜ್ಯಗಳಲ್ಲಿ ವಿದ್ಯುತ್ ಬಳಕೆ ಮಾಡೋದು ಏಕಕಾಲಕ್ಕೆ ಜಾಸ್ತಿ ಆಗಿದೆ.

ಹೀಗಾಗಿ ಬೇರೆ ರಾಜ್ಯಗಳಿಂದಲೂ ಸಿಗುತ್ತಿಲ್ಲ. ಈ ಸಮಸ್ಯೆಗೆ ಸರ್ಕಾರ ಪರಿಹಾರ ಕಂಡುಕೊಳ್ಳಲಿದೆ. ಸಮಸ್ಯೆ ಇಲ್ಲ‌ ಅಂತ‌ ನಾನು ಹೇಳುತ್ತಿಲ್ಲ. ಸಮಸ್ಯೆ ಇದೆ. ಅದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಅ. 29ರಿಂದ ನ. 1ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಸಾದ್ಯತೆ: ಹವಾಮಾನ ಇಲಾಖೆ

0

ಬೆಂಗಳೂರು;- ಅಕ್ಟೋಬರ್ 29ರಿಂದ ನ. 1ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರದಿಂದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಾದ್ಯಂತ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತಕ್ಕಿಂತಲೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಭಾನುವಾರದಿಂದ ಮಳೆ ತೀವ್ರಗೊಳ್ಳಲಿದೆ. ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

0

ತುಮಕೂರು;- ತುಮಕೂರಿನ‌ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಬನಸಿರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಗೃಹಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಘಟನೆ ಜರುಗಿದೆ. ಬಿಇ ಮೂರನೇ ಸೆಮಿಸ್ಟರ್ ನ ಐಎಸ್ ವಿಭಾಗದಲ್ಲಿ ಓದುತ್ತಿದ್ದ ಬನಸಿರಿ‌ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಡಿವೈಎಸ್ ಪಿ ಚಂದ್ರಶೇಖರ್, ತಿಲಕ್ ಪಾರ್ಕ್ ಸರ್ಕಲ್ ಇನ್ಸ್​ ಪೆಕ್ಟರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪರೀಕ್ಷೆಯಲ್ಲಿ ಕೆಲ ಸಬ್ಜೆಕ್ಟ್​​ಗಳು ಬ್ಯಾಕ್ ಉಳಿದ ಕಾರಣ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಬನಸಿರಿ‌ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ‌ಮೂಲದವರಾಗಿದ್ದಾರೆ.

ಮೈಸೂರಿನಲ್ಲಿ ಆನೆ ಹಲ್ಲು ಸಂಗ್ರಹಿಸಿದ್ದ ವ್ಯಕ್ತಿ ಬಂಧನ

0

ಮೈಸೂರು: ಮನೆಯಲ್ಲಿ ಅಕ್ರಮವಾಗಿ ಆನೆ ಹಲ್ಲು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಉದಯಗಿರಿಯ ಮನೆ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದು ಅಭಿರಾಮ ಸುಂದರಂ ಎಂಬಾತನನ್ನು ಬಂಧಿಸಿದ್ದಾರೆ. ಡಿಸಿಎಫ್ ಡಾ. ಬಸವರಾಜ್, ಎಸಿಎಫ್ ಲಕ್ಷ್ಮಿಕಾಂತ್,

ಮಾರ್ಗದರ್ಶನದಲ್ಲಿ ಆರ್ ಎಫ್ ಓ ಸುರೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಆನೆ ದಂತ ವಶಕ್ಕೆ ಪಡೆದಿದ್ದಾರೆ. ಆನೆ ಹಲ್ಲು ಆರೋಪಿಗೆ ಎಲ್ಲಿ ದೊರೆಯಿತು, ಯಾವ ಕಾರಣಕ್ಕೆ ಸಂಗ್ರಹಿಸಿಟ್ಟಿದ್ದ ಅನ್ನುವ ಬಗ್ಗೆ ತನಿಖೆ‌ ನಡೆಯುತ್ತಿದೆ.  ವನ್ಯಜೀವಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮತ್ತೆ ಒಂದಾಯ್ತು ‘ಸೂರರೈ ಪೋಟ್ರು’ ಟೀ…ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್

0

ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ.

ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು.

ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಹಿನ್ನೆಲೆ ಸಂಗೀತ, ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ಈ ತಂಡ ಹೊಸ ಪ್ರಾಜೆಕ್ಟ್ ಗೆ ಒಂದಾಗಿದೆ.

ಸೂರರೈ ಪೋಟ್ರೂ ಮೂಲಕ ಧಮಾಕ ಎಬ್ಬಿಸಿದ್ದ ಸೂರ್ಯ ಹಾಗೂ ಸುಧಾ ಕೊಂಗರ ಹೊಸ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಮಾಲಿವುಡ್ ಹ್ಯಾಂಡ್ಸಮ್ ಹಂಕ್ ದುಲ್ಕರ್ ಸಲ್ಮಾನ್, ನಜ್ರಿಯಾ ಫಹದ್ ಹಾಗೂ ವಿಜಯ್ ವರ್ಮಾ ಸೂರ್ಯ 43 ಚಿತ್ರದ ಭಾಗವಾಗಿದ್ದಾರೆ.

ತಾತ್ಕಾಲಿಕವಾಗಿ #Suriya43 ಎಂದು ಟೈಟಲ್ ಇಡಲಾಗಿದೆ. ಸೂರ್ಯ ಒಡೆತನದ 2D ಎಂಟರ್‌ಟೈನ್‌ಮೆಂಟ್ ನಡಿ ಜ್ಯೋತಿಕಾ, ಸೂರ್ಯ ಮತ್ತು ರಾಜಶೇಖರ್ ಕರ್ಪೂರ ಸುಂದರಪಾಂಡಿಯನ್ ನಿರ್ಮಿಸಲಿದ್ದಾರೆ.

ಮ್ಯೂಸಿಕ್ ಮಾಂತ್ರಿಕ ಜಿವಿ ಪ್ರಕಾಶ್ ಸಂಗೀತ ನಿರ್ದೇಶಿಸ್ತಿರುವ 100 ಚಿತ್ರ ಇದಾಗಿರೋದು ಮತ್ತೊಂದು ವಿಶೇಷ..ಸೂರರೈ ಪೋಟ್ರೂ ಮೂಲಕ ಮೋಡಿ ಮಾಡಿದ್ದ ಸೂರ್ಯ, ಸುಧಾ ಹಾಗೂ ಜಿವಿ ಪ್ರಕಾಶ್ ಹೊಸ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ.

ಡಿಸೆಂಬರ್ 6ಕ್ಕೆ ‘ನಂದಿ ಫಿಲ್ಮಂ ಅವಾರ್ಡ್’ ಸಮಾರಂಭ… ಏನಿದರ ಉದ್ದೇಶ..ಯಾರಿಗೆಲ್ಲಾ ಸಿಗಲಿದೆ ಈ ಗರಿ?

0

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದ್ದು, ಇದರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದ್ದರು. ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಹೀಗಾಗಿ ನಮ್ಮ ರಾಜ್ಯದ ಈ ಹೊಸ ಖಾಸಗಿ ಪ್ರಶಸ್ತಿಗೆ ಅದೇ ಹೆಸರಿಟ್ಟಿರೋದು ನೋಡಿ ಇದಕ್ಕೂ ಆಂಧ್ರದ ಅವಾರ್ಡ್‌ಗೂ ಸಂಬಂಧ ಇದೆ ಎಂದುಕೊಳ್ಳಬೇಡಿ. ಇವೆರಡೂ ಸಂಪೂರ್ಣವಾಗಿ ಬೇರೆಯೇ ಆಗಿವೆ.

ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದ ಅದೇ ಪದವನ್ನು ಇಲ್ಲಿ ಆಯ್ಕೆ ಮಾಡಲಾಗಿದೆ ಅಷ್ಟೇ. ಇನ್ನು ನಂದಿ ಅವಾರ್ಡ್ ಅನೌನ್ಸ್ ಆಗ್ತಿದ್ದಂತೆ ಚೊಚ್ಚಲ ನಂದಿ ಪ್ರಶಸ್ತಿಯನ್ನು ಕನ್ನಡದ ಯಾವೆಲ್ಲಾ ಕಲಾವಿದರು, ತಂತ್ರಜ್ಞರು ಪಡೆಯಬಹುದು. ಯಾವಾಗ ನಡೆಯಲಿದೆ ಈ ಸಮಾರಂಭ? ಎಷ್ಟು ಕೆಟಗರಿ, ಎಷ್ಟು ಪ್ರಶಸ್ತಿ ಎನ್ನುವ ವಿವರಗಳನ್ನೆಲ್ಲವನ್ನು ಸುದ್ದಿಗೋಷ್ಠಿ ನಡೆಸಿ ‘ನಂದಿ ಫಿಲ್ಮಂ ಅವಾರ್ಡ್’ ಸಂಸ್ಥಾಪಕರ ತಂಡ ತೀರ್ಮಾನಿಸಿ ಮಾಧ್ಯಮದವರಿಗೆ ತಿಳಿಸಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷರಾದ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿ ಸಂಸ್ಥಾಪರಾಗಿದ್ದು, ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಆಶೋಕ್ ಡೈರೆಕ್ಟರ್ಸ್ ಗಳಾಗಿದ್ದಾರೆ. ಪ್ರಶಸ್ತಿ ಸಮಾರಂಭದ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕರಾದ ನಿತ್ಯಾನಂದ ಪ್ರಭು, ಕರ್ನಾಟಕ ನಂದಿ ಫಿಲ್ಮಂ ಅವಾರ್ಡ್-2023 ಅಂತಾ ನಾವು ಏನೂ ಹಮ್ಮಿಕೊಂಡಿದ್ದೇವೋ ಅದು 2022ನೇ ಸಾಲಿನ ಸಿನಿಮಾಗಳಿಗೆ ಅನ್ವಯಿಸುತ್ತದೆ. ಸೌತ್ ಇಂಡಿಯಾದಲ್ಲಿ ನಂದಿ ಅವಾರ್ಡ್ ಅಂತಾ ನಡೆಯುತ್ತಿತ್ತು. 2016ರಲ್ಲಿ ನಿಲ್ಲಿಸಲಾಗಿದೆ.

ತೆಲುಗಿನಲ್ಲಿ ನಂದಿ ಫಿಲ್ಮಂ ಅವಾರ್ಡ್ ನಡೆಯುತ್ತಿದೆ. ಕನ್ನಡ ಇಂಡಸ್ಟ್ರೀಗೆ ಪ್ರತ್ಯಕ್ಷವಾಗಿ ನಂದಿ ಅವಾರ್ಡ್ಸ್ ನೀಡಲಾಗುವುದು. ಕನ್ನಡ ಸಿನಿಮಾಗಳು, ಪ್ರಾದೇಶಿಕವಾಗಿ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಭಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ.ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಅವಾರ್ಡ್ ಕೊಡುವ ನಿರ್ಧಾರ ಮಾಡಿದೆ. ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ಡಿಸೆಂಬರ್ ತಿಂಗಳ 6ರಂದು ಸಮಾರಂಭ ನಡೆಯಲಿದ್ದು, 50 ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿದೆ.

error: Content is protected !!