ತುಮಕೂರು;- ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಬನಸಿರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಗೃಹಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಘಟನೆ ಜರುಗಿದೆ. ಬಿಇ ಮೂರನೇ ಸೆಮಿಸ್ಟರ್ ನ ಐಎಸ್ ವಿಭಾಗದಲ್ಲಿ ಓದುತ್ತಿದ್ದ ಬನಸಿರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಡಿವೈಎಸ್ ಪಿ ಚಂದ್ರಶೇಖರ್, ತಿಲಕ್ ಪಾರ್ಕ್ ಸರ್ಕಲ್ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪರೀಕ್ಷೆಯಲ್ಲಿ ಕೆಲ ಸಬ್ಜೆಕ್ಟ್ಗಳು ಬ್ಯಾಕ್ ಉಳಿದ ಕಾರಣ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಬನಸಿರಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಮೂಲದವರಾಗಿದ್ದಾರೆ.
ಮೈಸೂರು: ಮನೆಯಲ್ಲಿ ಅಕ್ರಮವಾಗಿ ಆನೆ ಹಲ್ಲು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಉದಯಗಿರಿಯ ಮನೆ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದು ಅಭಿರಾಮ ಸುಂದರಂ ಎಂಬಾತನನ್ನು ಬಂಧಿಸಿದ್ದಾರೆ. ಡಿಸಿಎಫ್ ಡಾ. ಬಸವರಾಜ್, ಎಸಿಎಫ್ ಲಕ್ಷ್ಮಿಕಾಂತ್,
ಮಾರ್ಗದರ್ಶನದಲ್ಲಿ ಆರ್ ಎಫ್ ಓ ಸುರೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಆನೆ ದಂತ ವಶಕ್ಕೆ ಪಡೆದಿದ್ದಾರೆ. ಆನೆ ಹಲ್ಲು ಆರೋಪಿಗೆ ಎಲ್ಲಿ ದೊರೆಯಿತು, ಯಾವ ಕಾರಣಕ್ಕೆ ಸಂಗ್ರಹಿಸಿಟ್ಟಿದ್ದ ಅನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ವನ್ಯಜೀವಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ.
ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು.
ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಹಿನ್ನೆಲೆ ಸಂಗೀತ, ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ಈ ತಂಡ ಹೊಸ ಪ್ರಾಜೆಕ್ಟ್ ಗೆ ಒಂದಾಗಿದೆ.
ಸೂರರೈ ಪೋಟ್ರೂ ಮೂಲಕ ಧಮಾಕ ಎಬ್ಬಿಸಿದ್ದ ಸೂರ್ಯ ಹಾಗೂ ಸುಧಾ ಕೊಂಗರ ಹೊಸ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಮಾಲಿವುಡ್ ಹ್ಯಾಂಡ್ಸಮ್ ಹಂಕ್ ದುಲ್ಕರ್ ಸಲ್ಮಾನ್, ನಜ್ರಿಯಾ ಫಹದ್ ಹಾಗೂ ವಿಜಯ್ ವರ್ಮಾ ಸೂರ್ಯ 43 ಚಿತ್ರದ ಭಾಗವಾಗಿದ್ದಾರೆ.
ತಾತ್ಕಾಲಿಕವಾಗಿ #Suriya43 ಎಂದು ಟೈಟಲ್ ಇಡಲಾಗಿದೆ. ಸೂರ್ಯ ಒಡೆತನದ 2D ಎಂಟರ್‌ಟೈನ್‌ಮೆಂಟ್ ನಡಿ ಜ್ಯೋತಿಕಾ, ಸೂರ್ಯ ಮತ್ತು ರಾಜಶೇಖರ್ ಕರ್ಪೂರ ಸುಂದರಪಾಂಡಿಯನ್ ನಿರ್ಮಿಸಲಿದ್ದಾರೆ.
ಮ್ಯೂಸಿಕ್ ಮಾಂತ್ರಿಕ ಜಿವಿ ಪ್ರಕಾಶ್ ಸಂಗೀತ ನಿರ್ದೇಶಿಸ್ತಿರುವ 100 ಚಿತ್ರ ಇದಾಗಿರೋದು ಮತ್ತೊಂದು ವಿಶೇಷ..ಸೂರರೈ ಪೋಟ್ರೂ ಮೂಲಕ ಮೋಡಿ ಮಾಡಿದ್ದ ಸೂರ್ಯ, ಸುಧಾ ಹಾಗೂ ಜಿವಿ ಪ್ರಕಾಶ್ ಹೊಸ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ.
ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದ್ದು, ಇದರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದ್ದರು. ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಹೀಗಾಗಿ ನಮ್ಮ ರಾಜ್ಯದ ಈ ಹೊಸ ಖಾಸಗಿ ಪ್ರಶಸ್ತಿಗೆ ಅದೇ ಹೆಸರಿಟ್ಟಿರೋದು ನೋಡಿ ಇದಕ್ಕೂ ಆಂಧ್ರದ ಅವಾರ್ಡ್‌ಗೂ ಸಂಬಂಧ ಇದೆ ಎಂದುಕೊಳ್ಳಬೇಡಿ. ಇವೆರಡೂ ಸಂಪೂರ್ಣವಾಗಿ ಬೇರೆಯೇ ಆಗಿವೆ.
ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದ ಅದೇ ಪದವನ್ನು ಇಲ್ಲಿ ಆಯ್ಕೆ ಮಾಡಲಾಗಿದೆ ಅಷ್ಟೇ. ಇನ್ನು ನಂದಿ ಅವಾರ್ಡ್ ಅನೌನ್ಸ್ ಆಗ್ತಿದ್ದಂತೆ ಚೊಚ್ಚಲ ನಂದಿ ಪ್ರಶಸ್ತಿಯನ್ನು ಕನ್ನಡದ ಯಾವೆಲ್ಲಾ ಕಲಾವಿದರು, ತಂತ್ರಜ್ಞರು ಪಡೆಯಬಹುದು. ಯಾವಾಗ ನಡೆಯಲಿದೆ ಈ ಸಮಾರಂಭ? ಎಷ್ಟು ಕೆಟಗರಿ, ಎಷ್ಟು ಪ್ರಶಸ್ತಿ ಎನ್ನುವ ವಿವರಗಳನ್ನೆಲ್ಲವನ್ನು ಸುದ್ದಿಗೋಷ್ಠಿ ನಡೆಸಿ ‘ನಂದಿ ಫಿಲ್ಮಂ ಅವಾರ್ಡ್’ ಸಂಸ್ಥಾಪಕರ ತಂಡ ತೀರ್ಮಾನಿಸಿ ಮಾಧ್ಯಮದವರಿಗೆ ತಿಳಿಸಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷರಾದ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿ ಸಂಸ್ಥಾಪರಾಗಿದ್ದು, ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಆಶೋಕ್ ಡೈರೆಕ್ಟರ್ಸ್ ಗಳಾಗಿದ್ದಾರೆ. ಪ್ರಶಸ್ತಿ ಸಮಾರಂಭದ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕರಾದ ನಿತ್ಯಾನಂದ ಪ್ರಭು, ಕರ್ನಾಟಕ ನಂದಿ ಫಿಲ್ಮಂ ಅವಾರ್ಡ್-2023 ಅಂತಾ ನಾವು ಏನೂ ಹಮ್ಮಿಕೊಂಡಿದ್ದೇವೋ ಅದು 2022ನೇ ಸಾಲಿನ ಸಿನಿಮಾಗಳಿಗೆ ಅನ್ವಯಿಸುತ್ತದೆ. ಸೌತ್ ಇಂಡಿಯಾದಲ್ಲಿ ನಂದಿ ಅವಾರ್ಡ್ ಅಂತಾ ನಡೆಯುತ್ತಿತ್ತು. 2016ರಲ್ಲಿ ನಿಲ್ಲಿಸಲಾಗಿದೆ.
ತೆಲುಗಿನಲ್ಲಿ ನಂದಿ ಫಿಲ್ಮಂ ಅವಾರ್ಡ್ ನಡೆಯುತ್ತಿದೆ. ಕನ್ನಡ ಇಂಡಸ್ಟ್ರೀಗೆ ಪ್ರತ್ಯಕ್ಷವಾಗಿ ನಂದಿ ಅವಾರ್ಡ್ಸ್ ನೀಡಲಾಗುವುದು. ಕನ್ನಡ ಸಿನಿಮಾಗಳು, ಪ್ರಾದೇಶಿಕವಾಗಿ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಭಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ.ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಅವಾರ್ಡ್ ಕೊಡುವ ನಿರ್ಧಾರ ಮಾಡಿದೆ. ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ಡಿಸೆಂಬರ್ ತಿಂಗಳ 6ರಂದು ಸಮಾರಂಭ ನಡೆಯಲಿದ್ದು, 50 ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿದೆ.
ಡಾಲಿ ಧನಂಜಯ್ ನಿರ್ಮಾಣದ ಟಗರು ಪಲ್ಯ ಚಿತ್ರದ ಪ್ರಚಾರ ಶುರು ಆಗಿದೆ. ಇದೇ ವಾರವೇ ಸಿನಿಮಾ ರಿಲೀಸ್ ಆಗುತ್ತಿದೆ. ನಿರ್ಮಾಪಕ ಧನಂಜಯ್ ಹಾಗೂ ಇಡೀ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಸಾಕಷ್ಟು ವಿಷಯ ಹಂಚಿಕೊಂಡಿದೆ.
ವಿತರಕ ಕಾರ್ತಿಕ್ ಗೌಡ ಮಾತನಾಡಿ, 45 ದಿನ ಮೊದಲೇ ಸಿನಿಮಾ ತೋರಿಸಿದ್ದರು. ಬಡವ ರಾಸ್ಕಲ್ ಕೂಡ ರಿಲೀಸ್ ಗೂ ಮುನ್ನ ಎರಡು ಮೂರು ತಿಂಗಳು ಮೊದಲೇ ತೋರಿಸಿದ್ದರು. ವಾಸುಕಿ ಆಗ ಒಂದು ಮಾತು ಹೇಳಿದ್ದರು.
ಒಟಿಟಿ ನೋಡಿ ನಮ್ಮಲ್ಲೇ ಈ ರೀತಿ ಸಿನಿಮಾ ಬರಲ್ಲ ಅಂತಾರೇ. ಇದು ಎಲ್ಲಾರ ಮೆಚ್ಚುಗೆಗೆ ಸೇರುವ ಸಿನಿಮಾ. ಸಂಪ್ರದಾಯ, ಕನ್ನಡ ಭಾಷೆ ಎಲ್ಲವೂ ಚಿತ್ರದಲ್ಲಿ ಚೆನ್ನಾಗಿದೆ. ಪ್ರತಿ ಪಾತ್ರವೂ ಅದ್ಭುತವಾಗಿ ನಟಿಸಿದ್ದಾರೆ. ಮನರಂಜನೆ ಜೊತೆಗೆ ನಮ್ಮ ರಾಜ್ಯದ ಒಂದು ಭಾಗದ ಸಂಪ್ರದಾಯವನ್ನು ಅಚ್ಚುಕಟ್ಟಾಗಿ ತೋರಿಸಿದ್ದಾರೆ.
ನಾವು ಈ ವರ್ಷದಲ್ಲಿ ವಿತರಣೆ ಮಾಡ್ತಿರುವ ಬೆಸ್ಟ್ ಸಿನಿಮಾ ಎಂದರು. 175 ಥಿಯೇಟರ್ ನಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಸಿಎಂ ಟಗರು ಪಲ್ಯ ನೋಡಲು ಬರ್ತಾರೆ ಎಂದರು.
ನಿರ್ಮಾಪಕ ಧನಂಜಯ್ ಮಾತನಾಡಿ, ಕೆಲವೊಂದು ಯಾಕೆ ಘಟಿಸುತ್ತದೆ. ಹೇಗೆ ಘಟಿಸುತ್ತದೆ ಗೊತ್ತಿಲ್ಲ. ಬಡವ ರಾಸ್ಕಲ್ ಪ್ರೊಡಕ್ಷನ್ ಮಾಡಿದ್ವಿ. ಹೆಡ್ ಬುಷ್ ಪ್ರೊಡಕ್ಷನ್ ಮಾಡಿದ್ವಿ.
ಕಳೆದ ವರ್ಷ ನನ್ನ ಬರ್ತ್ ಡೇಯಲ್ಲಿ ಕಾರ್ತಿಕ್ ಜೊತೆ ಚರ್ಚೆ ಮಾಡುವಾಗ ಪ್ರೊಡಕ್ಷನ್ ಕಂಟಿನ್ಯೂ ಮಾಡಬೇಕು. ಒಳ್ಳೆ ಕಥೆ ನಿರ್ಮಾಣ ಮಾಡಬೇಕು ಎಂದಾಗ. ಆಗ ಆಡಿಯನ್ಸ್ ಗೆ ಪ್ರಾಮಿಸ್ ಮಾಡಿ. ಹೊಸಬರಿಗೆ ವರ್ಷಕ್ಕೆ ಒಂದು ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದು ಅವತ್ತು ಅವರು ಹೇಳಿದಾಗ ನಿಜ ಅನಿಸಿತು. ಅದನ್ನು ನನ್ನ ಹುಟ್ಟುಹಬ್ಬದಲ್ಲಿ ಅನೌನ್ಸ್ ಮಾಡಿದೆ. ಸಿನಿಮಾಗೆ ಒಂದೊಳ್ಳೆ ಕಥೆಗೆ ಏನ್ ಬೇಕು ಅದೆಲ್ಲವನ್ನೂ ಟಗರು ಪಲ್ಯಗೆ ಒದಗಿಸಿದ್ದೇವೆ.
ಈ ಚಿತ್ರವನ್ನು ಯಾಕೆ ನೋಡಿಕ್ಕೆ ಬನ್ನಿ ಎಂದು ರಿಕ್ವೆಸ್ಟ್ ಮಾಡಿಕೊಳ್ತೀವಿ ಎಂದರೆ, ನಮ್ಮ ಸಂಸ್ಥೆ ಕಡೆಯಿಂದ ನಾವೆಲ್ಲರೂ ಸೇರಿ ಒಂದೊಳ್ಳೆ ಪ್ರಾಡೆಕ್ಟ್ ಹೆಮ್ಮೆಯಿಂದ ಅರ್ಪಿಸುತ್ತಿದ್ದೇವೆ. ನಮ್ಮಗೆ ತುಂಬಾ ಕನೆಕ್ಟ್ ಆಗುವ ಸಬ್ಜೆಕ್ಟ್. ಬೇರೆ ಭಾಷೆ ಸಿನಿಮಾ ನೋಡಿದಾಗ ನಮ್ಮಲ್ಲಿ ಬರಬೇಕು ಅಂತೀವಲ್ಲ. ಆ ರೀತಿ ಕಥೆ ಇದು.
ಬಡವರ ಮನೆ ಮಕ್ಕಳು ಬೆಳೆಯಬೇಕು ಎಂದು ನಾನು ಯಾವತ್ತೂ ನನಗೋಸ್ಕರ ಹೇಳಿಕೊಂಡಿಲ್ಲ. ಅದು ಬೇರೆಯವರಿಗೆ ಸ್ಫೂರ್ತಿ ಆಗಲಿ ಎಂದು. ಯಾವುದೇ ಬ್ಯಾಗ್ ಗ್ರೌಂಡ್ ಇಲ್ಲದೇ ಬಂದವರು ನಮ್ಮ ಪ್ರೊಡಕ್ಷನ್ ನಿಂದ ಮೂವರು ಜನ ನಿರ್ದೇಶಕರು ಬಂದಿದ್ದಾರೆ ಅನ್ನೋದು ನಮ್ಮ ಹೆಮ್ಮೆ ಎಂದರು.
ನಟಿ ತಾರಾ ಅನುರಾಧಾ ಮಾತನಾಡಿ, ದಸರಾ ಹಬ್ಬ ಆದ ತಕ್ಷಣ ಸಖತ್ ಊಟ ಅಂದರೆ ಅದು ಟಗರು ಪಲ್ಯ. ನಿರ್ಮಾಪಕನಿಗೆ ವಯಸ್ಸು ಮುಖ್ಯ ಅಲ್ಲ. ಅವನ ಕೆಲಸ ಮುಖ್ಯ. ಡಾಲಿಗೆ ಇಡೀ ತಂಡದ ಪರವಾಗಿ ಧನ್ಯವಾದ. ಉಮೇಶ್ ಎಲ್ಲಿಯೂ ತಾನೊಬ್ಬ ಹೊಸ ನಿರ್ದೇಶಕ ಅನಿಸದೇ ಇರುವಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ. ಅಮೃತಾ ಹೊಸ ಹುಡುಗಿ ಅನಿಸುವುದಿಲ್ಲ. ತುಂಬಾ ಚೆನ್ನಾಗಿ ನಟಿಸಿದ್ದಾಳೆ. ನಾಗು ಒಳ್ಳೆ ಆಕ್ಟರ್. ನಮ್ಮ ಅದೃಷ್ಟ ಏನೂ ನಾನು ರಘು ಮಾಡಿದ ಎಲ್ಲಾ ಚಿತ್ರಗಳು ಚೆನ್ನಾಗಿ ಆಗುತ್ತಿವೆ ಎಂದರು.
ಉಮೇಶ್ ಕೃಪ ಆಕ್ಷನ್ ಕಟ್ ಹೇಳಿರೋ ‘ಟಗರು ಪಲ್ಯ’ ಇದೇ ಶುಕ್ರವಾರ ತೆರೆ ಮೇಲೆ ಮೂಡಿ ಬರಲಿದೆ. ಹೀಗಾಗಿ ಟಗರು ಪಲ್ಯ ಪ್ರಮೋಷನ್ ಗಾಗಿ ಟ್ರಕ್ ಹತ್ತಿ ಹೊರಟಿದ್ದಾರೆ ಡಾಲಿ. ಕ್ಯಾಂಟರ್ ಓಡಿಸಿರೋ ಡಾಲಿ ಊರೂರು ಸುತ್ತಿದ್ದಾರೆ. ಆ ವೀಡಿಯೋ ವೈರಲ್ ಆಗಿದೆ.
ಟಗರು ಪಲ್ಯ ಚಿತ್ರವನ್ನು ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿ ನಟ ಧನಂಜಯ್ ನಿರ್ಮಿಸಿದ್ದಾರೆ. ಉಮೇಶ್ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿ ಅಮೃತಾ ತಂದೆ ಪಾತ್ರದಲ್ಲಿ ರಂಗಾಯಣ ರಘು ಹಾಗೂ ತಾಯಿ ಪಾತ್ರದಲ್ಲಿ ತಾರಾ ಅನುರಾಧಾ ನಟಿಸಿದ್ದಾರೆ.
ಟ್ರೇಲರ್ ನೋಡಿ ಸಿನಿಪ್ರಿಯರು ಕೂಡಾ ಮೆಚ್ಚಿದ್ದಾರೆ. ಅಕ್ಟೋಬರ್ 27 ರಂದು ಸಿನಿಮಾ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಇಕ್ಕಟ್ ಖ್ಯಾತಿಯ ನಾಗಭೂಷಣ್, ಮೈಸೂರು ಆರ್ಕೆಸ್ಟ್ರಾ ಖ್ಯಾತಿಯ ಪೂರ್ಣಚಂದ್ರ, ವೈಜನಾಥ್ ಬಿರಾದಾರ್, ಚಿತ್ರಾ ಶೆಣೈ, ಶ್ರೀನಾಥ್ ವಸಿಷ್ಠ ಹಾಗೂ ಇನ್ನಿತರರು ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದು ಅವರೂ ಕೂಡಾ ಒಂದು ಪಾತ್ರದಲ್ಲಿ ನಟಿಸಿದ್ದಾರೆ
ಬೆಂಗಳೂರು;- ರಾಜಧಾನಿ ಬೆಂಗಳೂರಿನ ನಾಯಂಡಹಳ್ಳಿಯ ಪಂತರ ಪಾಳ್ಯದ ನಂದಿ ಲಿಂಕ್ ಮೈದಾನದಲ್ಲಿ ಐ ನೆಟ್ ವರ್ತಿಂಗ್ ಸಂಸ್ಥೆಯು ಇದೇ 27ರಿಂದ 29ರವರೆಗೆ ತಿಂಡಿಪೋತರ ಹಬ್ಬ’ ಹಮ್ಮಿಕೊಂಡಿದೆ.
ಈ ಬಗ್ಗೆ ಹಬ್ಬದ ಆಯೋಜಕ ಡಿ. ನರೇಶ್ ಬಾಬು, ‘ಮೂರು ದಿನಗಳ ಈ ಹಬ್ಬದಲ್ಲಿ 80ಕ್ಕೂ ಅಧಿಕ ಮಳಿಗೆಗಳು ಇರಲಿದ್ದು, ಸಾವಿರಕ್ಕೂ ಹೆಚ್ಚು ಬಾಣಸಿಗರ ಕೈರುಚಿಯನ್ನು ಆಸ್ವಾದಿಸಬಹುದಾಗಿದೆ.
ಇಲ್ಲಿ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. 600ಕ್ಕೂ ಹೆಚ್ಚು ಬಗೆಯ ವಿವಿಧ ಸಸ್ಯಹಾರಿ ಆಹಾರ ಖಾದ್ಯಗಳನ್ನು ಸವಿಯಬಹುದು. ಕೆಲವರು ಸ್ಥಳದಲ್ಲಿಯೇ ತಿನಿಸುಗಳನ್ನು ತಯಾರಿಸಿ ವಿತರಿಸುತ್ತಾರೆ’ ಎಂದು ಹೇಳಿದರು.
‘ಮೂರು ದಿನಗಳ ಈ ಹಬ್ಬದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ದಕ್ಷಿಣ ಭಾರತ, ಉತ್ತರ ಭಾರತದ ವಿವಿಧ ದೇಸಿ ಮತ್ತು ವಿದೇಶಿ ಆಹಾರಗಳು ಇಲ್ಲಿರುತ್ತವೆ’ ಎಂದು ತಿಳಿಸಿದರು.
ಇನ್ನೊಬ್ಬ ಆಯೋಜಕ ಡಿ.ಡಿ. ಪ್ರಶಾಂತ್, ‘ಈ ಹಬ್ಬದಲ್ಲಿ ಪರಿಸರಸ್ನೇಹಿ ವಸ್ತುಗಳಿಗೆ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತದೆ. ಹಾಡು, ನೃತ್ಯ ಸೇರಿ ವಿವಿಧ ಮನೋರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಚಿಕ್ಕಬಳ್ಳಾಪುರ ;- ನಗರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಎದುರು ಬೆಳಿಗ್ಗೆ 7ರ ಸುಮಾರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ.
ಟಾಟಾ ಸುಮೊ ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಒಂದು ಮಗು, ಮೂವರು ಮಹಿಳೆಯರು, ಎಂಟು ಮಂದಿ ಪುರುಷರು ಮೃತರಲ್ಲಿ ಇದ್ದಾರೆ. ಮೃತರೆಲ್ಲ ಕೂಲಿಕಾರರಾಗಿದ್ದು, ಆಂಧ್ರಪ್ರದೇಶದ ಗೊರಂಟ್ಲ, ಪೆನುಗೊಂಡದವರು ಎಂದು ತಿಳಿದುಬಂದಿದೆ. ನಾಲ್ಕು ಜನರ ಸ್ಥಿತಿ ಚಿಂತಾಜನಕವಾಗಿದೆ.
ಇನ್ನೂ ಸ್ಥಳಕ್ಕೆ ಎಸ್ ಪಿ ನಾಗೇಶ್ ವಿವರ ಪಡೆದು ಮಾದ್ಯಮಗಳಿಗೆ ಹೇಳಿಕೆ ಕೊಡದೆ ವಾಪಸ್ಸಾದ್ರು. ನಾಗಾಲ್ಯಾಂಡ್ ರಾಜ್ಯದ ನೊಂದಣೆ ಸಿಮೆಂಟ್ ಟ್ಯಾಂಕರ್ ಗೆ ಹಿಂಬದಿಯಿಂದ ಬಂದು ಟಾಟಾ ಸುಮೋ ಡಿಕ್ಕಿ ಹೊಡೆದಿದೆ.
ಪರಿಣಾಮ, ಟಾಟಾ ಸುಮೋದಲ್ಲಿದ್ದ ಎಲ್ಲರೂ ಬೆಂಗಳೂರಿನವರು ಇರಬಹುದು ಎಂದು ಅಂದಾಜಿಸಲಾಗುತ್ತಿದೆ. ಅಫಘಾತ ಸ್ಥಳದಲ್ಲಿ ಎಲ್ಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮೋದಲ್ಲಿ ಸಿಕ್ಕಿಹಾಕಿಕೊಂಡಿದ್ದ ಶವಗಳನ್ನು ಡೋರ್ ಗಳು ಕಿತ್ತು ಹೊರತೆಗೆಯಲಾಯಿತು. ಮೃತಪಟ್ಟ ಎಲ್ಲರನ್ನೂ ನಾಲ್ಕು ಅಂಬುಲೆನಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಅಪಘಾತವಾಗಿದ್ದ ಸುಮೋವನ್ನ ಕ್ರೈನ್ ಮೂಲಕ ಸಾಗಿಸಿ ಪೊಲೀಸರು ರಸ್ತೆ ತೆರವು ಗೊಳಿಸಿದ್ದಾರೆ.
ಇನ್ನೂ ಕೂಡಲೆ ಸರ್ವೀಸ್ ರಸ್ತೆ ಮಾಡುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.
ಮೃತರು ಆಂದ್ರಪ್ರದೇಶದವರಾಗಿದ್ದು, ಜನರು ಹಬ್ಬ ಮುಗಿಸಿ ಕೂಲಿ ಕೆಲಸಕ್ಕೆ ಬೆಂಗಳೂರು ಗೆ ಹೊರಟಿದ್ದರು ಎನ್ನಲಾಗಿದೆ…
ಆನೇಕಲ್ ;- ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ರಾಮಚಂದ್ರರಾವ್ ಎಂಬಾತನ ಮೇಲೆ ಅಟ್ಯಾಕ್ ನಡೆದಿದ್ದು, ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಮಗುವಿನೊಂದಿಗೆ ವಾಕ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ.
ಈ ಮೈ ನಡುಗಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು ಕಂಡು ಪಟ್ಟಣದ ಜನತೆ ಬೆಚ್ಚಿದ್ದಾರೆ. ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯ ಭೀಮ್ ರಾವ್ ಲೇವೆಟ್ನನಲ್ಲಿ ನಡೆದ ಘಟನೆ ಜರುಗಿದೆ. ಕೂದಲೇಳೆ ಅಂತರದಲ್ಲಿ ರಾಮಚಂದ್ರ ರಾವ್ ಬಚಾವ್ ಆಗಿದ್ದಾರೆ. ಬೈಕ್ ನಲ್ಲಿ ಬಂದು ದುಶ್ಕರ್ಮಿಗಳು ಏಕಾಏಕಿ ಲಾಂಗ್ ಬೀಸಿದ್ದಾರೆ.
ಲಾಂಗ್ ಬೀಸಿದ ಸಿದ್ದಾರ್ಥ ಮತ್ತು ದರ್ಶನ್ ಆನೇಕಲ್ ಪೊಲೀಸರ ವಶಕ್ಕೆ ಪಡೆಯಲಾಗಿದೆ.
ಮೂವರಲ್ಲಿ ಇನ್ನೊಬ್ಬ ಅನಿಲ್ ಎಂಬುವವನು ಎಸ್ಕೇಪ್ ಆಗಿದ್ದು, ರಾಮಚಂದ್ರ ಮೀಸ್ಸಾಗಿದ್ದಕ್ಕೆ ಅಂಗಡಿಯ ಗಾಜುಗಳನ್ನ ಪುಡಿ ರೌಡಿಗಳು ಪುಡಿ ಮಾಡಿದ್ದಾರೆ. ಹುಡುಗಿಯರನ್ನು ಚುಡಾಯಿಸುತ್ತಿದ್ದಕ್ಕೆ ರಾಮಚಂದ್ರ ಬುದ್ದಿ ಹೇಳಿದ್ದ. ಆನೇಕಲ್ ಪೊಲೀಸರು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ
President Draupadi Murmu will visit Bangalore today
ಬೆಂಗಳೂರು;- ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ.
ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಂತರ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುವರ್ಣ ಮಹೋತ್ಸವ ಆಚರಣೆಗ ಚಾಲನೆ ನೀಡಿ ಮಾತನಾಡಲಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ಐಐಎಂ ಬಿ ಕ್ಯಾಂಪಸ್ ಕುರಿತ ಪುಸ್ತಕ ಬಿಡುಗಡೆ ಮತ್ತು ಐಐಎಂಬಿ ಕುರಿತಾದ ಸಾಕ್ಷ್ಯಚಿತ್ರವನ್ನೂ ಪ್ರದರ್ಶಿಸಲಾಗುತ್ತದೆ ಎಂದು ಐಐಎಂ ಬೆಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಯುವ ವೈದ್ಯೆ ಒಬ್ಬರು ನೇಣಿಗೆ ಶರಣಾದ ಘಟನೆ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆದರೆ ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಬುಧವಾರ ಮುಂಜಾನೆ ಈ ಘಟನೆ ಜರುಗಿದೆ.
ಡಾ. ಗೀತಾ (ಧನಗರ್) ಕುಶಾಲ್ ಕೋರಿ (40) ನೇಣಿಗೆ ಶರಣಾದ ವೈದ್ಯಾಧಿಕಾರಿ.
(ಆರ್‌ಬಿಎಸ್‌ಕೆ ) ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯಾಗಿ ಗದಗನ ಟಿಎಚ್ಒದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಮೂಲತಃ ಕಲಬುರಗಿ ಜಿಲ್ಲೆಯ ಡಾ. ಗೀತಾ ಧನಗರ್ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಡಾ. ಕುಶಾಲ್ ಕೋರಿ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ.
ಸುದ್ದಿ ತಿಳಿದು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗೋಡೆಯ ಮೇಲೆ ಸಾವಿನ ಬಗ್ಗೆ ಬರಹವಿದ್ದು, ಅದನ್ನು ಬರೆದವರು ಯಾರು ಎಂಬುದು ಮಾಹಿತಿ ಲಭ್ಯವಾಗಿಲ್ಲ. ಈ ಘಟನೆ ಕುರಿತು ಮಾಹಿತಿ ಪಡೆಯಲು ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಮ್.ಎಮ್. ನದಾಫ್ ಅವರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಡಾ. ಗೀತಾ ಆತ್ಮಹತ್ಯೆ ಮಾಡಿಕೊಂಡ್ರಾ ಅಥವಾ ಕೊಲೆ ಮಾಡಿ ನೇಣು ಹಾಕಲಾಗಿದೆಯೋ ಎಂಬ ಮಾಹಿತಿ ಲಭ್ಯವಾಗಿಲ್ಲ.