Home Blog Page 3203

ಕಂಡು ಕೇಳರಿಯದ ಬರ ಜನರನ್ನು, ರೈತರನ್ನು ಕಾಡುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

0

ಉಡುಪಿ: 6 ತಿಂಗಳ ಆಡಳಿತದಲ್ಲಿ ಸಿದ್ದರಾಮಯ್ಯ (Siddaramaiah) ಸರ್ಕಾರ ಸಂಪೂರ್ಣ ವಿಫಲವಾಗಿ ಕುಸಿತ ಕಂಡಿದೆ. ಕಂಡು ಕೇಳರಿಯದ ಬರ ಜನರನ್ನು, ರೈತರನ್ನು ಕಾಡುತ್ತಿದೆ. ರಾಜ್ಯದ 195 ತಾಲೂಕಿನಲ್ಲಿ ಬರ ಘೋಷಣೆ ಮಾಡಿದ್ದರೂ ಪರಿಹಾರಕ್ಕೆ ಬಿಡಿಗಾಸು ಬಿಡುಗಡೆ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹೇಳಿದ್ದಾರೆ.

ಮಳೆ ಕೊರತೆಯಿಂದ 30 ಸಾವಿರ ಕೋಟಿ ರೂ. ನಷ್ಟ ಎಂದು ಸರ್ಕಾರ ವರದಿಯಲ್ಲಿ ನೀಡಿದೆ. ತಕ್ಷಣ ಕನಿಷ್ಟ 5 ಸಾವಿರ ಕೋಟಿ ರೂ. ಕೂಡಾ ಬಿಡುಗಡೆ ಮಾಡಿಲ್ಲ. ಕೇಂದ್ರಕ್ಕೆ ಮನವಿ ಕೊಟ್ಟಿದ್ದೇವೆ ಎಂದು ಹೇಳೋದ್ರಲ್ಲೇ ತಲ್ಲೀನವಾಗಿದೆ. ಸರ್ಕಾರ ರೈತರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡುತ್ತಿಲ್ಲ. ಬೀಜ ವಿತರಿಸಿ ಗೊಬ್ಬರ ಖರೀದಿಗೆ ಅನುದಾನ ಕೊಡಿ, ನೀರಾವರಿ ವ್ಯವಸ್ಥೆ ಮಾಡಿ ಗೋಶಾಲೆ ತೆರೆಯಿರಿ ಎಂದು ಸಲಹೆ ನೀಡಿದರು. ಅಧ್ಯಯನ ಮಾಡೋದರಲ್ಲೇ ಕಾಲ ಕಳೆಯಬೇಡಿ ಎಂದರು.

ವಿದ್ಯುತ್ ಕೊರತೆಯಾಗಿದೆ. ದಿನಕ್ಕೆ 7 ಗಂಟೆ 3 ಫೇಸ್ ಪವರ್ ಎಂದು ಘೋಷಿಸಿ 2 ಗಂಟೆಗೆ ಇಳಿಸಿದ್ದಾರೆ. ರೈತರು ಕಂಗಾಲಾಗಿದ್ದರೂ ಸಿದ್ದರಾಮಯ್ಯ ಸ್ಪಂದಿಸುತ್ತಿಲ್ಲ. ಕಿಸಾನ್ ಸಮ್ಮಾನ್ ಯೋಜನೆಗೆ 1 ರೂ.ಯನ್ನೂ ಬಿಡುಗಡೆ ಮಾಡಿಲ್ಲ. ಬಿಜೆಪಿ ಸರ್ಕಾರ ರಾಜ್ಯದಿಂದ 4 ಕೇಂದ್ರದಿಂದ 6 ಸಾವಿರ ರೂ. ಕೊಡುತ್ತಿದ್ದನ್ನು ನಿಲ್ಲಿಸಿ ರೈತರ ಖಾತೆಯ ಹಣಕ್ಕೆ ಕನ್ನ ಹಾಕಿದ್ದಾರೆ. ರೈತರ ಮೇಲೆ ಬದ್ಧತೆ ಇದ್ದರೆ ಹಣ ಬಿಡುಗಡೆ ಮಾಡಿ ಎಂದು ಶ್ರೀನಿವಾಸ ಪೂಜಾರಿ ಉಡುಪಿಯಲ್ಲಿ ವಾಗ್ದಾಳಿ ನಡೆಸಿದರು.

ಮತ್ತೆ ಜಿಲ್ಲೆಯ ಜನರು ಬಯಸಿದರೇ ಜಿಲ್ಲೆ ಒಂದು ಮಾಡುತ್ತೇವೆ: ಸಚಿವ ಬಿ ನಾಗೇಂದ್ರ

0

 ಬಳ್ಳಾರಿಜಿಲ್ಲಾ ವಿಭಜನೆಯ ಬಳಿಕ ಅವಿಭಜಿತ ಬಳ್ಳಾರಿ ಜಿಲ್ಲೆ ತನ್ನ ಹೃದಯವನ್ನೇ ಕಳೆದುಕೊಂಡಿದ್ದು ಇದೀಗ ವಿಜಯನಗರ ಜಿಲ್ಲೆಯ ಜನರು ಬಯಸಿದರೆ ಮತ್ತೆ ವಿಲೀನ ಮಾಡುವುದಾಗಿ ಸಚಿವ ಬಿ ನಾಗೇಂದ್ರ ತಿಳಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಆನಂದ್ ಸಿಂಗ್ ಅವರ ಮುತುವರ್ಜಿಯಲ್ಲಿ ವಿಜಯನಗರವನ್ನು ಬಳ್ಳಾರಿಯಿಂದ ಬೇರ್ಪಡಿಸಿ ನೂತನ ಜಿಲ್ಲೆಯನ್ನು ರಚಿಸಲಾಗಿತ್ತು. ಈ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಸುದ್ದಿಗಾರರ ಪ್ರಶ್ನಗಳಿಗೆ ಉತ್ತರಿಸಿದ ಅವರು,

ಬಳ್ಳಾರಿ ಜಿಲ್ಲಾ ವಿಭಜನೆ ವಿಚಾರಕ್ಕೆ, ಕಾಲವೇ ಉತ್ತರ ನೀಡಲಿದೆ ಎಂದರು. ವಿಜಯನಗರ ಜಿಲ್ಲೆಯ ಜನರು ಮತ್ತೆ ಬಳ್ಳಾರಿಗೆ ಸೇರುತ್ತವೆ ಎಂದರೆ ನಾವು ಜಿಲ್ಲೆ ಒಂದು ಮಾಡುತ್ತೆವೆ. ಅಖಂಡ ಜಿಲ್ಲೆಗೆ ಹಂಪಿ ಮತ್ತು ತುಂಗಭದ್ರಾ ಜಲಾಶಯ ಒಂದು ಮುಕುಟದಂತೆ ಇತ್ತು. ಆದರೆ ಜಿಲ್ಲಾ ವಿಭಜನೆ ಮಾಡಿದ್ದು, ಅಖಂಡ ಜಿಲ್ಲೆ ತನ್ನ ಹೃದಯ ಕಳೆದುಕೊಂಡಿದೆ. ಮತ್ತೆ ಜಿಲ್ಲೆಯ ಜನರು ಬಯಸಿದರೇ ಜಿಲ್ಲೆ ಒಂದು ಮಾಡುತ್ತೆವೆ ಎಂದು ತಿಳಿಸಿದರು.

ಹುಲಿ ಉಗುರು ವಿವಾದ: ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ

0

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ಹೆಸರೂ ಕೇಳಿಬಂದಿದೆ. ನಿಖಿಲ್ ಕುಮಾರಸ್ವಾಮಿಯವರು ತಮ್ಮ ಮದುವೆಯ ಸಂದರ್ಭದಲ್ಲಿ ಹುಲಿಯುಗುರನ್ನು ಧರಿಸಿದ್ದಾರೆಂದು ಆರೋಪಿಸಲಾಗಿದೆ. ನಿಖಿಲ್ ಅವರು ತಮ್ಮ ವಿವಾಹದ ಸಂದರ್ಭದಲ್ಲಿ ಹುಲಿಯುಗುರನ್ನು ಧರಿಸಿದ್ದರು ಎಂಬುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವಿಷಯ ತಿಳಿಯುತ್ತಲೇ ನಿಖಿಲ್ ಅವರು ತಮ್ಮ ಟ್ವಿಟರ್ ಖಾತೆಯ ಮೂಲಕ ಇದಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. “ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ.

ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ” ಎಂದು ಅವರು ತಿಳಿಸಿದ್ದಾರೆ. ಜೊತೆಗೆ, “ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.’’ ಎಂದು ಅವರು ಹೇಳಿದ್ದಾರೆ.

ಆಡಳಿತದ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ: ಸಿ.ಪಿ.ಯೋಗೇಶ್ವರ್

0

ಆಡಳಿತದ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ. ಸರ್ಕಾರಿ ಕೆಲಸಕ್ಕೆ ಬೆಂಗಳೂರಿಗೆ ಬಂದು ಹೋಗೋದು ದೊಡ್ಡ ಸವಾಲು. ಬೆಂಗಳೂರು ನಗರದಲ್ಲಿ ಒಕ್ಕಲಿಗ ಸಮುದಾಯದವರು ಜಾಸ್ತಿ ಇದ್ದಾರೆ. ಆಡಳಿತದ ಹತೋಟಿ ಕೈತಪ್ಪಿ ಹೋಗುತ್ತೆ ಅಂತಾ ಮನಸ್ಸಿನಲ್ಲಿ ಇರಬಹುದು.

ಅದು ರಾಜಕೀಯ ‌ಮಹಾತ್ವಾಕಾಂಕ್ಷೆ ಇರುವ ವ್ಯಕ್ತಿ ಆಡುವ ಮಾತು. ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಏನು ತೊಂದರೆ ಇದೆ ಅಂತಾ ಗೊತ್ತಿಲ್ಲ. ಮುಂದೆ ರಾಮನಗರ ಜಿಲ್ಲೆಯ ಜನರು ಪ್ರತಿಭಟನೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಪ್ರಾಣಿಗಳ ಚರ್ಮ, ಉಗುರು, ಹಲ್ಲು ಸಂಗ್ರಹ ಅಥವಾ ಮಾರಾಟಕ್ಕೆ ಅವಕಾಶವಿಲ್ಲ: ಈಶ್ವರ ಖಂಡ್ರೆ

0

ಕಲಬುರ್ಗಿ: ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಹುಲಿ ಉಗುರು, ಆನೆ ದಂತ ಸಂಗ್ರಹಣೆ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿ ಅಪರಾಧ. ಹುಲಿ ಉಗುರು, ಆನೆ ದಂತ,

ಹುಲಿ ಚರ್ಮ, ಜಿಂಕೆ ಚರ್ಮ ಅಥವಾ ಇನ್ಯಾವುದೇ ಪ್ರಾಣಿಗಳ ಚರ್ಮ, ಉಗುರು, ಹಲ್ಲು ಸಂಗ್ರಹ ಅಥವಾ ಮಾರಾಟಕ್ಕೆ ಅವಕಾಶವಿಲ್ಲ. ಇವುಗಳನ್ನು ಸಂಗ್ರಹಿಸುವುದು, ಧರಿಸುವುದು ಕೂಡ ಅಪರಾಧವಾಗಿದೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಹುಲಿ ಉಗುರು ಇಟ್ಟುಕೊಂಡವರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಹುಲಿ ಉಗುರು ಧರಿಸಿದ್ದ ಹಿನ್ನೆಲೆ; ನಟ ಜಗ್ಗೇಶ್ ವಿರುದ್ಧ ದೂರು ದಾಖಲು

0

ಬೆಂಗಳೂರು: ನಟ ದರ್ಶನ್, ವಿನಯ್ ಗುರೂಜಿ, ಧನಂಜಯ ಗುರೂಜಿ ಬಳಿಕ ಈಗ ನಟ ಜಗ್ಗೇಶ್ ಸರದಿಯಾಗಿದೆ. ಹೌದು ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಸ್ಯಾಂಡಲ್ ವುಡ್ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ದೂರು ದಾಖಲಾಗಿದೆ. ಹುಲಿ ಉಗುರು ಧರಿಸಿದ್ದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಇರುವವರಿಗೆ ಕಾನೂನು ಸಂಕಷ್ಟ ಎದುರಾಗಿದೆ.

ನಟ ಜಗ್ಗೇಶ್ ಹುಲಿ ಉಗುರು ಧರಿಸಿದ್ದ ಲಾಕೆಟ್ ವಿಡಿಯೋ ವೈರಲ್ ಆಗಿತ್ತು. ಅಲ್ಲದೇ ‘ನಾನು 20 ವರ್ಷದವನಿದ್ದಾಗ ಇದು ನನ್ನ ಅಮ್ಮ ಕೊಟ್ಟಿದ್ದರು’ ಎಂದು ಸಂದರ್ಶನವೊಂದರಲ್ಲಿ ಈ ಹಿಂದೆ ಹೇಳಿದ್ದ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಈಗ ಮಾಜಿ ಎಂಎಲ್ ಸಿ ಪಿ.ಆರ್.ರಮೇಶ್, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ. ಜಗ್ಗೇಶ್ ಬಳಿ ಇರುವ ಹುಲಿ ಉಗುರು ಅಸಲಿಯೋ, ನಕಲಿಯೋ? ಈ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ – ಶೋಭಾ ಕರಂದ್ಲಾಜೆ

0

ಬೆಂಗಳೂರು;- ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ, ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದರು. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ತಾವಿಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದರು.

ನಾನು ಕೇಂದ್ರದಲ್ಲೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ನನಗೆ ಯಾವ ವರಿಷ್ಠರಿಂದಲೂ, ಯಾವ ಸೂಚನೆಯೂ ಬಂದಿಲ್ಲ. ಯಾವ ಚರ್ಚೆಯೂ ಆಗಿಲ್ಲ. ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ನನ್ನ ಇಚ್ಛೆ ಇರುವುದು ಮುಂದಿನ ಬಾರಿಯೂ ಮೋದಿ ಪ್ರಧಾನಿ ಆಗಬೇಕು ಎಂಬುದು. ಆ ಕುರಿತೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ: ಸಿಎಂ ಸಿದ್ದರಾಮಯ್ಯ

0

ಮೈಸೂರು: ಇದು ಎಟಿಎಂ ಸರಕಾರ ಎಂಬ ಬಿಜೆಪಿ ಟ್ವೀಟ್ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ? ಕೋಟ್ಯಾಂತರ ರೂಪಾಯಿ ಹಣದಲ್ಲಿ ಆಪರೇಷನ್ ಕಮಲ ಮಾಡಿದವರು ನಮ್ಮ ಬಗ್ಗೆ ಮಾತಾಡುತ್ತಾರೆ ? ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ.

ಬಿಜೆಪಿಯವರು ಸಾಲ ಮಾಡಿ ಅರ್ಥಿಕವಾಗಿ ರಾಜ್ಯ ದಿವಾಳಿ ಮಾಡಿ ಹೋಗಿದ್ದಾರೆ. ಹಣ ಇರದಿದ್ದರು ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡೀಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿತ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ. ಹೈಕಮಾಂಡ್ ಗೆ ದುಡ್ಡು ಕಳಿಸುತ್ತೇವೆ ಎಂಬುದು ಸುಳ್ಳು. ನಾವು ಯಾರಿಗೂ ಒಂದು ಪೈಸೆ ಕೊಟ್ಟಿಲ್ಲ ಎಂದು ಹೇಳಿದರು.

ಮುಸ್ಲಿಂ ಯುವಕರಿಂದ ಪಾಕ್ ಪ್ರೇಮ: ಯುವಕರ ದುಷ್ಕೃತ್ಯಕ್ಕೆ ವ್ಯಾಪಕ ಖಂಡನೆ

0

ಬಾಗಲಕೋಟೆ:- ಜಿಲ್ಲೆಯ ಜಮಖಂಡಿ ನಗರದ ಮುಸ್ಲಿಂ ಯುವಕರು ವೈರಿ ರಾಷ್ಟ್ರ ಪಾಕಿಸ್ತಾನ ಪರ ಪ್ರೀತಿ ತೋರಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನಡೆದ ಪಾಕಿಸ್ತಾನದ ಹಾಗೂ ಅಫಘಾನಿಸ್ತಾನ ಕ್ರಿಕೆಟ್ ಪಂದ್ಯ ವೀಕ್ಷಣೆಗಾಗಿ ಜಮಖಂಡಿ ನಗರದ ಹರ್ಷಿದ್ ಅವಟಿ ಹಾಗೂ ಸ್ನೇಹಿತ ಯುವಕರು ಚೆನೈ ಗೆ ತೆರಳಿದ್ರು. ಅಲ್ಲಿ ವೈರಿರಾಷ್ಟ್ರ ಪಾಕಿಸ್ತಾನದ ಕ್ರಿಕೆಟ್ ಟೀಶರ್ಟ್ ಧರಿಸಿ, ಮುಖಕ್ಕೆ ಅಫಘನಿಸ್ತಾನದ ಧ್ವಜದ ಚಿತ್ರ ಹಾಕಿಕೊಂಡು ಸಂಭ್ರಮಿಸಿದ್ರು.

ನಂತ್ರ ತಾವು ಹಾಕಿಕೊಂಡಿರುವ ಪಾಕ್ ಪಾಕ್ ಟೀಶರ್ಟ್ ಇರುವ ಪೊಟೊಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ರು. ಈ ಯುವಕರ ಕಿಡಿಗೇಡಿತನಕ್ಕೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳು ಹಾಗೂ ಹಿಂದೂಪರ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲೇ ಈ ಕಿಡಿಗೇಡಿ ಯುವಕರ ವಿರುದ್ಧ ಆಕ್ರೋಶ ಹೊರಹಾಕಿದ್ರು. ಟಿಪ್ಪು ಮೇಲಿನ ಪ್ರೇಮ ಒಕೆ ಪಾಕಿಸ್ತಾನ ಪ್ರೇಮ ಯಾಕೆ, ಗುಲಾಮರೆ ನಿಮ್ಮ ಬಾಂದವರ ಪ್ರೇಮ ಯಾರ ಮೇಲಿದೆ ಎಂಬ ಬರಹಳನ್ನ ಬರೆದು ಕಿಡಿಗೇಡಿ ಯುವಕರಿಗೆ ತರಾಟೆಗೆ ತಗೆದುಕೊಂಡಿದ್ದಾರೆ.

ಈ ದೇಶದಲ್ಲಿದ್ದು ಪಾಕಿಸ್ತಾನದ ಕ್ರಿಕೆಟ್ ಟಿ-ಶರ್ಟ್ ಧರಿಸಲು ನಿಮಗೆ ನಾಚಿಕಯಾಗಲ್ವಾ? ನೀವು ಹುಷಾರ್ ಆಗಿರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಧ್ಯ ಕಿಡಿಗೇಡಿ ಯುವಕರ ವಿರುದ್ಧ ಜಿಲ್ಲೆಯ ಹಿಂದೂ ಸಂಘಟನೆಗಳು ವ್ಯಾಪಕ ಖಂಡನೆ ಮಾಡಿದ್ದಲ್ಲದೇ, ದೇಶದ್ರೋಹದಡಿ ಇವ್ರ ವಿರುದ್ಧ ದೂರು ದಾಖಲಿಸಿ ಎಂದು ಪೊಲೀಸ್ ಇಲಾಖೆಗೆ ಆಗ್ರಹಿಸುತ್ತಿದ್ದಾರೆ.

ಅನಾವಶ್ಯಕ ವಿವಾಧಗಳಿಗೆ ಮಾಧ್ಯಮಗಳು ಪ್ರಚಾರ ಕೊಡ್ತಿದ್ದಾರೆ: ಸಚಿವ ಎಚ್ ಕೆ ಪಾಟೀಲ್

0

ಗದಗ: ಯಾವುದಾದರೂ ಜಿಲ್ಲೆ ಮಾಡೋದ್ರಿಂದ ಭೂಮಿ ಬೆಲೆ ಏರಿಕೆ ಆಗಲ್ಲ ಎಂದು ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಿಸುವ ವಿಚಾರ ಕುರಿತು ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಜಿಲ್ಲೆಯಲ್ಲಿ ಅಭಿವೃದ್ಧಿ ಆಗುತ್ತೆ, ಯಾವ ಜಿಲ್ಲೆಯಲ್ಲಿ ರಚನಾತ್ಮಕ ಕೆಲಸ ಆಗುತ್ತೆ ಅಲ್ಲಿ ಆಸ್ತಿ ಮೌಲ್ಯ ಜಾಸ್ತಿಯಾಗಿ ಆಗಸೂಕ್ತವಾದ ಬೆಲೆ ಏರಿಕೆ ಆಗುತ್ತೆ.

ಆದ್ರೆ ಅನಾವಶ್ಯಕ ವಿವಾಧಗಳಿಗೆ ಮಾಧ್ಯಮಗಳು ಪ್ರಚಾರ ಕೊಡ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಜಿಲ್ಲೆ ಹೆಚ್ಚು ಕಡಿಮೆ ಆಗುವುದರಿಂದ ಬೆಂಗಳೂರು ಸಮೀಪ ದೂರ ವ್ಯಾತ್ಯಾಸವಾಗುತ್ತಾ..? ವಿಷಯ ಬರಲಿ, ಚರ್ಚೆ ಆಗಲಿ ಆಗ ರಿಯಾಕ್ಷನ್ ಮಾಡೋಣ. ಬೇಕಾದ್ರೆ ಸ್ವಾರ್ಥದ ಕಾರಣಗಳು ಏನು ಅಂತ ಡಿಕೆಶಿ, ಎಚ್ ಡಿಕೆ ಅವರನ್ನೇ ಕೇಳಿ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು

error: Content is protected !!