Home Blog Page 3208

ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

0

ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತು ಸಾಗುತ್ತಿದ್ದು,

ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಲಿದೆ. ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.

ಕರ್ನಾಟಕದಾದ್ಯಂತ ಉಷ್ಣಾಂಶ ಏರಿಕೆ : ಅ.29ರಿಂದ ಭಾರಿ ಮಳೆ ಸಾಧ್ಯತೆ

0

ಬೆಂಗಳೂರು;- ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಅಕ್ಟೊಬರ್‌ 29 ರಿಂದ 2 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಇನ್ನೂ ಬೆಂಗಳೂರು ನಗರ, ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಿರುವ ಸಾಧ್ಯತೆ ಇದೆ. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್ನಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ ಕೊಂಚ ಹೆಚ್ಚಳವಾಗುವ ಸಾಧ್ಯತೆ ಇದೆ.

ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೆಲವೇ ಹೊತ್ತಿನಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿರುವ ಸಿಎಂ

0

ಮೈಸೂರು: ಕೆಲವೇ ಹೊತ್ತಿನಲ್ಲಿ ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಚಾಲನೆ ಸಿಗಲಿದೆ. ಹೌದು, ಸಂಜೆ 4.40ರಿಂದ 5 ಗಂಟೆ ಒಳಗೆ ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಲಿದ್ದಾರೆ.

ಮದ್ಯದ ಅಮಲಿನಲ್ಲಿ ಕಾರ್-ಬೈಕ್ ನಡುವೆ ಡಿಕ್ಕಿ- ಚಾಲಕನಿಗೆ ಹಿಗ್ಗಮುಗ್ಗಾ ಥಳಿತ

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡಿದ ಅಮಲಿನಲ್ಲಿ ಕಾರು ಚಾಲನೆ‌ ಮಾಡಿ ಚಲಿಸುತ್ತಿದ್ದ ಮೂರು ಬೈಕ್ ಹಾಗೂ ಕಾರ್ ಗೆ ಡಿಕ್ಕಿ ಹೊಡೆದ ಕಾರು ಚಾಲಕ ಅವಾಂತರ ಸೃಷ್ಟಿ ಮಾಡಿದ್ದಾನೆ. ವಾಸು ಎಂಬ ಚಾಲನ ಕುಡಿದು ಕಾರ್ ಚಾಲನೆ ಬಿಟಿಎಂ ಲೇಔಟ್ ನ 2 ನೇ ಹಂತದಲ್ಲಿ ಅವಾಂತರ ಸೃಷ್ಟಿ ಮಾಡಿದ್ದಾನ. ಕುಡಿದ ಅಮಲಿನಲ್ಲಿ ಕಾರನ್ನ ನಿಯಂತ್ರಣ ಮಾಡದೆ ಮುಂದೆ ಹೋಗುತ್ತಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಕುಡಿದು ಕಾರ್ ಚಾಲನೆ ಮಾಡ್ತಿದ್ದ ಡ್ರೈವರ್ ನ ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬಳಿಕ ಚಾಲಕ ವಾಸುವನ್ನು ಪೊಲೀಸರಿಗೆ ಒಪ್ಪಿಸಿದ್ದು, ಮೈಕೋ ಲೇಔಟ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ವೃದ್ಧ ದಂಪತಿಗೆ ಸೇರಿದ ಕಾರ್ ದಾಗಿದ್ದು, ವಾಸು ದಂಪತಿ ಬಳಿ ಕಾರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುವಾಗ ನಡೆದಿರೋ ಘಟನೆ ಇದಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಟವಾಗಿದೆ – ರಕ್ಷಾ ರಾಮಯ್ಯ

0

ಗುಡಿಬಂಡೆ ;- ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಸಹ ಕಾಂಗ್ರೆಸ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದರು.

ಪಟ್ಟಣದಲ್ಲಿ ಅಂಬೇಡ್ಕರ್ ವೃತ್ತದ ಬಳಿ ದಸರಾ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ದಸರಾ ಗಣೇಶ ಉತ್ಸವದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲೂ ಸಹ ಕಾಂಗ್ರೆಸ್ ಈ ಬಾರಿ ಜಯಗಳಿಸುವುದು ಖಚಿತ. ನಾವೆಲ್ಲರೂ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸೋಣ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒಳ್ಳೆಯ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಗೃಹಲಕ್ಷ್ಮೀ, ಶಕ್ತಿಯೋಜನೆ, ಅನ್ನ ಭಾಗ್ಯ ಸೇರಿದಂತೆ ಅನೇಕ ಜನಪರ ಯೋಜನೆಗಳ ಮೂಲಕ ಬಡವರ ಪರ ಸರ್ಕಾರ ಎನ್ನಿಸಿಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಟವಾಗಿದೆ. ಈ ನಿಟ್ಟಿನಲ್ಲೇ ಲೋಕಸಭಾ ಚುನಾವಣೆಯಲ್ಲೂ ಸಹ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ಬರಗಾಲದಲ್ಲಿಯೂ ಎತ್ತರಕ್ಕೆ ಜಿಗಿದ ಬೋರ್‌ವೆಲ್ ನೀರು – ರೈತರ ಮೊಗದಲ್ಲಿ ಸಂತಸ

0

ಗದಗ;- ಜಿಲ್ಲೆಯ ಶಿರಹಟ್ಟಿ ತಾಲೂಕಿನ ನಾರಾಯಣಪುರ ಗ್ರಾಮ ಸರಹದ್ದಿನಲ್ಲಿ ಬರಗಾಲದಲ್ಲಿಯೂ ಬೋರ್ವೆಲ್ ನೀರು ಭರಪೂರ ಎತ್ತರಕ್ಕೆ ಜಿಗಿದ ಘಟನೆ ಜರುಗಿದೆ.

ಬೆಳ್ಳಟ್ಟಿ ಗ್ರಾಮದ ಪ್ರೇಮ್ ಚಂದ ದೈವಜ್ಞಾಚಾರ್ಯ ಎಂಬುವರಿಗೆ ಸೇರಿದ ಬೋರ್ವೆಲ್ ಇದಾಗಿದ್ದು, ಸುಮಾರು 40 ಅಡಿಯಷ್ಟು ಎತ್ತರಕ್ಕೆ ಬೋರ್‌ವೆಲ್ ನೀರು ಜಿಗಿದಿದೆ. ಬರಗಾಲದಲ್ಲಿಯೂ ಈ ರೀತಿ ಭರಪೂರ ನೀರಿ ಬಿದ್ದಿರೋದಕ್ಕೆ (ನೀರು ಬಂದಿರೋದಕ್ಕೆ) ಜನ ಆಶ್ಚರ್ಯ ಪಟ್ಟಿದ್ದಾರೆ.

ಪಕ್ಕದಲ್ಲಿ ಮೂರ್ನಾಲ್ಕು ಬೋರ್‌ವೆಲ್ ಕೊರೆದರೂ ನೀರು ಬಿದ್ದಿಲ್ಲ. ಈ ಒಂದು ಬೋರ್ ನಲ್ಲಿ ಮಾತ್ರ ಭರಪೂರ ಅಂತರ್ಜಲ ಬಂದಿದ್ದು, ಗಂಗಾಮಾತೆ ಕೈ ಹಿಡಿದಳು ಅಂತಾ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.

ಶ್ರೀನಿವಾಸ್ ಕೊಲೆ ಕೇಸ್- ಆರೋಪಿಗಳ ಮೇಲೆ ಫೈರಿಂಗ್

0

ಕೋಲಾರ;- ಕೋಲಾರದ ಕಾಂಗ್ರೆಸ್ ಮುಖಂಡ, ಶ್ರೀನಿವಾಸ್ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ಬಿದ್ದಿದೆ. ಮತ್ತೊಬ್ಬ ಆರೋಪಿ ಸಂತೋಷ್‌ಗೂ ಗಾಯಗಳಾಗಿವೆ. ಕೋಲಾರ ಜಿಲ್ಲೆ‌ ವೇಮಗಲ್ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ವೆಂಕಟೇಶ್ ಅವರು ಫೈರಿಂಗ್ ಮಾಡಿದ್ದಾರೆ.

ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಯಿತು. ಹಲ್ಲೆ ವೇಳೆ ಇನ್‌ಸ್ಪೆಕ್ಟರ್ ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಬರ ಇದ್ದರೂ ಸಾಲ ಕಟ್ಟಲು ಬ್ಯಾಂಕು ನೋಟಿಸ್‌: ಕಂಗಾಲಾದ ರೈತ

0

ಧಾರವಾಡ;- ಬರಗಾಲದಿಂದ ತತ್ತರಿಸಿರುವ ರೈತರಿಗೆ ಇದೀಗ ಶಾಕ್ ಎದುರಾಗಿದ್ದು, ಬೆಳೆಸಾಲ ತುಂಬುವಂತೆ ಬ್ಯಾಂಕ್‌ ಗಳಿಂದ ನೋಟಿಸ್‌ ಬರುತ್ತಿದೆ. ಇನ್ನೂ ಇಂತಹದೊಂದು ನೋಟಿಸ್‌ಗೆ ನವಲಗುಂದ ತಾಲೂಕಿನ ರೈತನೋರ್ವ ಭಯಗೊಂಡು ಆಸ್ಪತ್ರೆಯಲ್ಲಿ ಹಾಸಿಗೆ ಹಿಡಿಯುವಂತಾಗಿದೆ.

ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ರೈತ ಮಹಾದೇವಪ್ಪ ಜಾವೂರು ಎಂಬುವರು ತಮ್ಮ 19 ಎಕರೆ ಹೊಲದ ಮೇಲೆ ಬೆಳೆ ಸಾಲ ತೆಗೆದುಕೊಂಡಿದ್ದಾರೆ. ಅವರಿಗೀಗ ಬ್ಯಾಂಕ್‌ನಿಂದ ನೋಟಿಸ್‌ ಬಂದಿದೆ. ಮೊರಬ ಗ್ರಾಮದಲ್ಲಿರುವ ಬ್ಯಾಂಕ್‌ನಿಂದ ನೋಟಿಸ್‌ ಬಂದಿದೆ.

2017ರಲ್ಲಿ ₹14.50 ಲಕ್ಷ ಬೆಳೆಸಾಲ ತೆಗೆದುಕೊಂಡಿದ್ದು, ಈ ಸಾಲ ಇದೀಗ ₹34.50 ಲಕ್ಷಕ್ಕೆ ಏರಿಕೆಯಾಗಿದೆ. ಜತೆಗೆ ಬ್ಯಾಂಕಿನ ನಿಯಮಾವಳಿಯಂತೆ ಲಭ್ಯವಿರುವ ಏಕಕಂತು ಸಾಲ ಪರಿಹಾರ ಯೋಜನೆ ಮೂಲಕ ಸಾಲ ತೀರಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದು, ಇದೂ ಆಗದೇ ಹೋದಲ್ಲಿ ನಿಯಮಾವಳಿ ಪ್ರಕಾರ ಕಾನೂನು ಕ್ರಮ ಕೈಗೊಳ್ಳುವುದಾಗಿ ಬ್ಯಾಂಕ್‌ ತನ್ನ ನೋಟಿಸ್‌ನಲ್ಲಿ ಸ್ಪಷ್ಟವಾಗಿ ಹೇಳಿದೆ.

ಏತನ್ಮಧ್ಯೆ ಮಹಾದೇವಪ್ಪ ಅವರ ಪುತ್ರ ಷಣ್ಮುಖ ಜಾವೂರ ಅವರು, ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಬ್ಯಾಂಕ್‌ ಸಿಬ್ಬಂದಿ ಕಡ್ಡಾಯವಾಗಿ ಸಾಲ ತುಂಬಲು ಒತ್ತಾಯಿಸುತ್ತಿದ್ದಾರೆ. ತಂದೆಯವರು ಇದನ್ನು ಕೇಳಿ ಸ್ಥಳದಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಸದ್ಯ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ ತಂದೆಗೆ ಪ್ರಜ್ಞೆ ಬಂದಿಲ್ಲ. ಈಗಾಗಲೇ ₹3 ಲಕ್ಷ ವೆಚ್ಚ ಮಾಡಿದ್ದೇನೆ. ತಂದೆಯವರು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಇತ್ತ ಬ್ಯಾಂಕ್‌ನವರು ಹಣ ತುಂಬಲು ತಾಕೀತು ಮಾಡುತ್ತಿದ್ದಾರೆ. ಆದ್ದರಿಂದ ತಾವು ಮಧ್ಯೆ ಪ್ರವೇಶಿಸಿ ಸಾಲ ಮನ್ನಾ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ವಿಜಯದಶಮಿ ಹಿನ್ನೆಲೆ: ಇಂದು ಬನಶಂಕರಿಗೆ ವಿಶೇಷ ಅಲಂಕಾರ

0

ಬೆಂಗಳೂರು;- ವಿಜಯದಶಮಿ ಹಿನ್ನೆಲೆ, ಸಿಲಿಕಾನ್ ಸಿಟಿ ಬೆಂಗಳೂರಿನ ಬನಶಂಕರಿಗೆ ಇಂದು ವಿಶೇಷ ಅಲಂಕಾರ ಮಾಡಲಾಗಿದೆ. ವಿಶೇಷ ಅಲಂಕಾರವನ್ನ ಮಾಡಿ ನಂತರ ಭಕ್ತದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಚಂಡಿಕಾಹೋಮ ಇರಲಿದ್ದು, ಮಧ್ಯಹ್ನದ ನಂತರ ಬನ್ನಿ ಪೂಜೆ ಆರಂಭವಾಗಲಿದೆ. ಇಂದು ದೇವಸ್ಥಾನಕ್ಕೆ 40 ಸಾವಿರಕ್ಕು ಹೆಚ್ಚು ಜನರು ಬರುವ ನಿರೀಕ್ಷೆ ಇದ್ದು, ಬರುವ ಭಕ್ತದಿಗಳಿಗೆ ಅನ್ನ, ಪ್ರಸಾದ, ಪ್ರಸಾದ ವಿತರಣೆ ನಡೆಯಲಿದೆ. ಬನಶಂಕರಿ ದೇವಸ್ಥಾನಕ್ಕೆ ಜನಸಾಗರ ಬರುತ್ತಿದೆ.

ಬೀದರ್ ಪೊಲೀಸ್‌ರಿಂದ ದಸರಾ ಹಬ್ಬದ ಭರ್ಜರಿ ಭೇಟೆ: ಒಂಬತ್ತು ಪ್ರಕರಣ ಭೇದಿಸಿದ ಪೋಲಿಸರು

0

ಬೀದರ್: ಬೀದರ್ ಪೊಲೀಸರು (Bidar Police) ಅಂತರ್ ರಾಜ್ಯ ದರೋಡೆಕೋರರ (Robbery) ಹೆಡೆ ಮುರಿ ಕಟ್ಟಿದ್ದಾರೆ. ಬೀದರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ, ದರೋಡೆ, ಮನೆಗಳ್ಳತನ ಸೇರಿ ಒಟ್ಟು ಐದು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು 9 ದರೋಡೆಕೋರರನ್ನು ಬಂಧಿಸಿದ್ದಾರೆ. ಹಾಗೂ 94 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಕಂಟೆನರ್ ಡ್ರೈವರ್‌ಗೆ ಮತ್ತು ಬರುವ ಇಂಜೆಕ್ಷನ್ ಚುಚ್ಚಿ ಲಾರಿ ಕದ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಲಾರಿಯಲ್ಲಿ ಸಾಗಿಸುತ್ತಿದ್ದ 50 ಲಕ್ಷ 76 ಸಾವಿರ ಮೌಲ್ಯದ 694 ಫ್ಯಾನ್ ಬಾಕ್ಸ್ ಹಾಗೂ ಲಾರಿ ವಶಕ್ಕೆ ಪಡೆಯಲಾಗಿದೆ. 12 ಲಕ್ಷ 82 ಸಾವಿರ ಮೌಲ್ಯದ 180 ಗ್ರಾಮ್ ಬಂಗಾರದ ಆಭರಣ, ಎರಡು ಕೆಜಿಯಷ್ಟು ಬೆಳ್ಳಿಯ ಆಭರಣ ಒಂದು ಬೈಕ್ 20 ಸಾವಿರ ನಗದು ಹಣ ವಶಕ್ಕೆ ಪಡೆಯಲಾಗಿದೆ.

ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಗಾಂಜಾ ಪ್ರಕರಣ ಭೇದಿಸಿದ್ದಾರೆ. ಔರಾದ್ ತಾಲೂಕಿನ ವಿಜಯನಗರ ತಾಂಡಾದಲ್ಲಿ ರೈತ ತೊಗರಿ ಹೊಲದಲ್ಲಿ ಅಕ್ರಮವಾಗಿ 63.86 ಕೆಜಿಯಷ್ಟು 79 ಗಾಂಜಾ ಗಿಡಗಳನ್ನು ಬೆಳೆಸಿದ್ದ. ದಾಳಿ ಮಾಡಿದ ಪೊಲೀಸರು 25 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಒಟ್ಟು ಐದು ಪ್ರಕರಣದಲ್ಲಿ 94 ಲಕ್ಷ ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ.

error: Content is protected !!