Home Blog Page 3209

ವಿಜಯದಶಮಿ ಹಿನ್ನೆಲೆ: ಇಂದು ಬನಶಂಕರಿಗೆ ವಿಶೇಷ ಅಲಂಕಾರ

0

ಬೆಂಗಳೂರು;- ವಿಜಯದಶಮಿ ಹಿನ್ನೆಲೆ, ಸಿಲಿಕಾನ್ ಸಿಟಿ ಬೆಂಗಳೂರಿನ ಬನಶಂಕರಿಗೆ ಇಂದು ವಿಶೇಷ ಅಲಂಕಾರ ಮಾಡಲಾಗಿದೆ. ವಿಶೇಷ ಅಲಂಕಾರವನ್ನ ಮಾಡಿ ನಂತರ ಭಕ್ತದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಚಂಡಿಕಾಹೋಮ ಇರಲಿದ್ದು, ಮಧ್ಯಹ್ನದ ನಂತರ ಬನ್ನಿ ಪೂಜೆ ಆರಂಭವಾಗಲಿದೆ. ಇಂದು ದೇವಸ್ಥಾನಕ್ಕೆ 40 ಸಾವಿರಕ್ಕು ಹೆಚ್ಚು ಜನರು ಬರುವ ನಿರೀಕ್ಷೆ ಇದ್ದು, ಬರುವ ಭಕ್ತದಿಗಳಿಗೆ ಅನ್ನ, ಪ್ರಸಾದ, ಪ್ರಸಾದ ವಿತರಣೆ ನಡೆಯಲಿದೆ. ಬನಶಂಕರಿ ದೇವಸ್ಥಾನಕ್ಕೆ ಜನಸಾಗರ ಬರುತ್ತಿದೆ.

ಬೀದರ್ ಪೊಲೀಸ್‌ರಿಂದ ದಸರಾ ಹಬ್ಬದ ಭರ್ಜರಿ ಭೇಟೆ: ಒಂಬತ್ತು ಪ್ರಕರಣ ಭೇದಿಸಿದ ಪೋಲಿಸರು

0

ಬೀದರ್: ಬೀದರ್ ಪೊಲೀಸರು (Bidar Police) ಅಂತರ್ ರಾಜ್ಯ ದರೋಡೆಕೋರರ (Robbery) ಹೆಡೆ ಮುರಿ ಕಟ್ಟಿದ್ದಾರೆ. ಬೀದರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ, ದರೋಡೆ, ಮನೆಗಳ್ಳತನ ಸೇರಿ ಒಟ್ಟು ಐದು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು 9 ದರೋಡೆಕೋರರನ್ನು ಬಂಧಿಸಿದ್ದಾರೆ. ಹಾಗೂ 94 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಕಂಟೆನರ್ ಡ್ರೈವರ್‌ಗೆ ಮತ್ತು ಬರುವ ಇಂಜೆಕ್ಷನ್ ಚುಚ್ಚಿ ಲಾರಿ ಕದ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಲಾರಿಯಲ್ಲಿ ಸಾಗಿಸುತ್ತಿದ್ದ 50 ಲಕ್ಷ 76 ಸಾವಿರ ಮೌಲ್ಯದ 694 ಫ್ಯಾನ್ ಬಾಕ್ಸ್ ಹಾಗೂ ಲಾರಿ ವಶಕ್ಕೆ ಪಡೆಯಲಾಗಿದೆ. 12 ಲಕ್ಷ 82 ಸಾವಿರ ಮೌಲ್ಯದ 180 ಗ್ರಾಮ್ ಬಂಗಾರದ ಆಭರಣ, ಎರಡು ಕೆಜಿಯಷ್ಟು ಬೆಳ್ಳಿಯ ಆಭರಣ ಒಂದು ಬೈಕ್ 20 ಸಾವಿರ ನಗದು ಹಣ ವಶಕ್ಕೆ ಪಡೆಯಲಾಗಿದೆ.

ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಗಾಂಜಾ ಪ್ರಕರಣ ಭೇದಿಸಿದ್ದಾರೆ. ಔರಾದ್ ತಾಲೂಕಿನ ವಿಜಯನಗರ ತಾಂಡಾದಲ್ಲಿ ರೈತ ತೊಗರಿ ಹೊಲದಲ್ಲಿ ಅಕ್ರಮವಾಗಿ 63.86 ಕೆಜಿಯಷ್ಟು 79 ಗಾಂಜಾ ಗಿಡಗಳನ್ನು ಬೆಳೆಸಿದ್ದ. ದಾಳಿ ಮಾಡಿದ ಪೊಲೀಸರು 25 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಒಟ್ಟು ಐದು ಪ್ರಕರಣದಲ್ಲಿ 94 ಲಕ್ಷ ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ.

ಶೋಭಾ ಕರಂದ್ಲಾಜೆ ರಾಜ್ಯಾಧ್ಯಕ್ಷರಾಗ್ತಾರೆ ಎಂಬ ಚರ್ಚೆ ವಿಚಾರ: ಎಂಪಿ ರೇಣುಕಾಚಾರ್ಯ ಹೇಳಿದ್ದೇನು..?

0

 ದಾವಣಗೆರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು, “ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕುಎಂದು ತಿಳಿಸಿದರು.

ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಆದರೆ, ಅದು ಆಗಲಿಲ್ಲಎಂದರು.

ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯಕ್ಕೆ ಅವರಂತಹ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ; ರಾಜ್ಯದಲ್ಲಿ ಬಿಎಸ್ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆಎಂದರು.

ಕಾಂಗ್ರೆಸ್ ಮುಖಂಡನ ಹತ್ಯೆ ಕೇಸ್: ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು ಗೊತ್ತಾ!?

0

ಕೋಲಾರ : ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಯ ಬಳಿ ಮಾತನಾಡಿದ ಅವರು, ಮೃತ ಶ್ರೀನಿವಾಸ ,ಜಿ.ಪಂ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು. ಜನಮನ್ನಣೆ ಗಳಿಸಿದ್ದ ವ್ಯಕ್ತಿಯ ನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಪೋಲಿಸರು ಟೀಂ ರೆಡಿ ಮಾಡಿ ತನಿಖೆ ಶುರು ಮಾಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕೊಲೆಗೆ ಯಾವುದರ ಲಿಂಕ್ ಇದೆ ಅನ್ನೋದು ಈಗಲೇ ಹೇಳೋಕೆ ಆಗಲ್ಲ. ಶೀಘ್ರವೇ ಬಂಧಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.

ಮುಂದುವರಿದ ಬಿಬಿಎಂಪಿ ಅಧಿಕಾರಿಗಳ ಕಾರ್ಯಚರಣೆ: ಪಬ್, ಬಾರ್ ಮೇಲೆ ದಾಳಿ

0

ಬೆಂಗಳೂರು;- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳಿಂದ ಕಾರ್ಯಚರಣೆ ಮುಂದುವರಿದಿದ್ದು, ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.

ನಿಯಮ ಉಲ್ಲಂಘನೆ ಮಾಡಿದ ಪಬ್ ,ಬಾರ್ ನೋಟಿಸ್ ಜಾರಿ ಮಾಡಿದ್ದು, 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳಿಂದ ತಪಾಸಣೆ ನಡೆಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದೆ. ನಿನ್ನೆ ಪಾಲಿಕೆ ವ್ಯಾಪ್ತಿಯಲ್ಲಿ 79 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 26 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಗಿದೆ. 05 ಉದ್ದಿಮೆಗಳನ್ನು ಮುಚ್ಚಲಾಗಿರುತ್ತದೆ. ಇಂದು ಪರಿಶೀಲನೆ ಕಾರ್ಯವನ್ನ ಅಧಿಕಾರಿಗಳು ಮುಂದುವರೆಸಿದ್ದಾರೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜನರ ಸಹಭಾಗಿತ್ವ ಅಗತ್ಯ – ಯು.ಟಿ.ಖಾದರ್

0

ತೀರ್ಥಹಳ್ಳಿ;- ಸ್ಪೀಕರ್ ಆದವರು ಹೆಚ್ಚು ಮಾತನಾಡದೇ ಪ್ರತಿಪಕ್ಷದ ಸ್ನೇಹಿತರಂತೆ ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಆಗುಂಬೆ ಸಮೀಪದ ಹಸಿರುಮನೆ ಗ್ರಾಮದ ತಾಲೂಕು ಎಪಿಎಂಸಿ ಮಾಜಿ ಅಧ್ಯಕ್ಷ ಮಹಾಬಲೇಶ್ ಮನೆ ಆವರಣದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಂವಿಧಾನವೇ ನಮ್ಮ ಪಕ್ಷ ಮತ್ತು ಧರ್ಮವಾಗಿದ್ದು, ಅದಕ್ಕೆ ನಿಷ್ಠರಾಗಿ ಶಿಷ್ಠಾಚಾರಕ್ಕೆ ಅಪಚಾರವಾಗದಂತೆ ಕಾರ್ಯನಿರ್ವಹಿಸುವ ಬದ್ಧತೆ ನಮ್ಮ ಮೇಲಿದೆ. ಆಡಳಿತವನ್ನು ಎಚ್ಚರಿಸುವ ಸಲುವಾಗಿ ವಿರೋಧ ಪಕ್ಷದವರಿಗೆ ಹೆಚ್ಚಿನ ಅವಕಾಶವನ್ನೂ ಕಲ್ಪಿಸಬೇಕಾಗುತ್ತದೆ ಎಂದರು.

ಇನ್ನೂ ವಿಧ್ಯಾರ್ಥಿಗಳ ಕೊರತೆಯಿಂದ ಬಡವಿದ್ಯಾರ್ಥಿಗಳು ಓದುವ ಸರ್ಕಾರಿ ಶಾಲೆಗಳು ಸೊರಗದಂತೆ ಅಭಿವೃದ್ಧಿಪಡಿಸಲು ಎಸ್‍ಡಿಎಂಸಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಅನಿವಾರ್ಯವಾಗಿದೆ. ಶೈಕ್ಷಣಿಕ ಅಭಿವೃದ್ದಿಯಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ ಎಂದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ತಾಲೂಕಿನ ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆಗೆ ಶನಿವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಸಾರ್ವಜನಿಕರ ಸಹಕಾರದಿಂದ ಶಾಲೆಯೊಂದು ಅಭಿವೃದ್ಧಿ ಹೊಂದಬಹುದು ಎಂಬುದಕ್ಕೆ ಗುಡ್ಡೇಕೇರಿಯ ಈ ಶಾಲೆ ಮಾದರಿಯಾಗಿದೆ ಎಂದರು.

ಬರಗಾಲ ಸ್ಥಿತಿ: ರಾಜಕಾರಣಿಗಳು ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತಿಸಿ – ಬಸವರಾಜ ಹೊರಟ್ಟಿ

0

ಹುಬ್ಬಳ್ಳಿ;-ರಾಜಕಾರಣಿಗಳು ಕೇವಲ ಆರೋಪ, ಪ್ರತ್ಯಾರೋಪಗಳಲ್ಲಿ ಕಾಲ ಕಳೆಯುತ್ತಿರುವುದು ಆತಂಕಕಾರಿ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂಬಂಧ ಮಾತನಾಡಿದ ಅವರು, ಇಂದು ರಾಜಕೀಯ ಸಂಪೂರ್ಣವಾಗಿ ಕಲುಷಿತಗೊಂಡಿದೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸದೇ ಕೇವಲ ಆರೋಪ, ಪ್ರತ್ಯಾರೋಪಗಳಲ್ಲಿ ಕಾಲ ಕಳೆಯುತ್ತಿರುವುದು ಆತಂಕಕಾರಿ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಈಗಾಗಲೇ ಅನಾವೃಷ್ಟಿ ಉದ್ಭವವಾಗಿದೆ. ಇಂತಹ ಸಮಯದಲ್ಲಿ ಜನಪ್ರತಿನಿಧಿಗಳು ರಾಜಕಾರಣ ಮಾಡುವುದನ್ನು ಕೈ ಬಿಡಬೇಕು. ರಾಜ್ಯದ ಅಭಿವೃದ್ಧಿಯ ಬಗ್ಗೆ, ಜನರ ಹಿತಾಸಕ್ತಿಯ ಬಗ್ಗೆ ಗಮನಹರಿಸಬೇಕಿದೆ. ಆದರೆ, ಇದು ಆಗದಿರುವುದು ಕಳವಳಕಾರಿ ಸಂಗತಿ ಎಂದು ವಿಷಾಧಿಸಿದರು.

ಮುಳುಗಡೆ ರೈತರಿಗೆ ಭೂಮಿ ನೀಡದಿದ್ದರೆ ತಿನ್ನುವ ಅನ್ನಕ್ಕೆ ದ್ರೋಹ ಬಗೆದಂತೆ – ಮಧು ಬಂಗಾರಪ್ಪ

0

ಬ್ಯಾಕೋಡ;- ಮುಳುಗಡೆ ರೈತರಿಗೆ ಭೂಮಿ ನೀಡದಿದ್ದರೆ ತಿನ್ನುವ ಅನ್ನಕ್ಕೆ ದ್ರೋಹ ಬಗೆದಂತೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಮಲೆನಾಡಿಗರು ಫಲವತ್ತಾದ ಹೊಲ- ಗದ್ದೆಗಳನ್ನು ಮತ್ತು ತಮ್ಮ ಬದುಕನ್ನು ನೀರಿನಲ್ಲಿ ಮುಳುಗಿಸಿ ನಾಡಿಗೆ ಬೆಳಕು ನೀಡಲು ಕಾರಣರಾಗಿದ್ದಾರೆ. ಅವರಿಗೆ ಭೂಮಿ ಹಕ್ಕನ್ನು ನೀಡದೇ ಹೋದರೆ, ನಾವು ತಿನ್ನುವ ಅನ್ನಕ್ಕೆ ದ್ರೋಹ ಬಗೆದಂತೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಮುಳುಗಡೆ ರೈತರಿಗೆ, ಅರಣ್ಯ ಹಕ್ಕು ಕಾಯಿದೆ ಸಂಬಂಧಿತ ಅರ್ಜಿಗಳನ್ನು ಪುನರ್ ಪರಿಶೀಲಿಸಿ, 94 ಸಿಸಿ ಮತ್ತು ಬಗರ್‌ಹುಕುಂ ಸಾಗುವಳಿದಾರರಿಗೆ ಭೂ ಮಂಜೂರಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲಾಗುವುದು. ಕೃಷಿಗೆ ಸಂಬಂಧಿಸಿದಂತೆ ನಿರಂತರ 5 ಗಂಟೆ ಉಚಿತ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ.

ಮಂತ್ರಿಯಾದ ನಂತರ ಶೈಕ್ಷಣಿಕವಾಗಿ ₹35 ಸಾವಿರ ಕೋಟಿ ಖರ್ಚು ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ ಎಂದರು. ರಾಜ್ಯದಲ್ಲಿ 40 ಸಾವಿರ ಶಿಕ್ಷಕರ ಕೊರತೆ ಇದ್ದು, ಈಗಾಗಲೇ 9000 ಶಿಕ್ಷಕರ ಆಯ್ಕೆ ಪ್ರಕ್ರಿಯೆ ಮುಗಿದಿದೆ.

ದಸರಾ ರಜೆ ಮುಗಿಸಿ ಶಾಲೆಗಳನ್ನು ಪುನರಾರಂಭ ಮಾಡುವ ಹೊತ್ತಿನಲ್ಲಿ ಶಿಕ್ಷಕರು ಶಾಲೆಗೆ ಹಾಜರಾಗಲಿದ್ದಾರೆ. ಅತಿ ಶೀಘ್ರದಲ್ಲಿ ಉಳಿದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ನಮ್ಮ ಸರ್ಕಾರ ಬೀಳುವ ತಿರುಕನ ಕನಸು ಬಿಜೆಪಿ ಕಾಣ್ತಾ ಇದೆ – ಜಗದೀಶ್ ಶೆಟ್ಟರ್

0

ಕಾರಟಗಿ;- ನಮ್ಮ ಸರ್ಕಾರ ಬೀಳುವ ತಿರುಕನ ಕನಸು ಬಿಜೆಪಿ ಕಾಣ್ತಾ ಇದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸೋಲಿನ ಹತಾಶೆ ಬಿಜೆಪಿಯನ್ನು ಇನ್ನೂ ಕಾಡುತ್ತಿದೆ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಷ್ಟು ಪಕ್ಷ ಕುಸಿದಿದೆ. ಆದರೂ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಅವರಿಗೆ ಸರ್ಕಾರ ಬೀಳುತ್ತದೆ ಎನ್ನುವ ಭ್ರಮೆ ಇನ್ನೂ ಹೋಗಿಲ್ಲ ಎಂದರು.

ವಿರೋಧ ಪಕ್ಷದ ನಾಯಕನನ್ನು ಮೊದಲು ಬಿಜೆಪಿ ಆಯ್ಕೆ ಮಾಡಿಕೊಳ್ಳಲಿ. ಜತೆಗೆ ಒಬ್ಬ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಿಕೊಳ್ಳಲಿ. ಚೇತರಿಸಿಕೊಳ್ಳದ ಸ್ಥಿತಿಯಲ್ಲಿರುವ ಬಿಜೆಪಿ ಕಾರ್ಯಕರ್ತರನ್ನು ಮೇಲೇಳಿಸುವ ಕೆಲಸವನ್ನು ಈಶ್ವರಪ್ಪ ಮೊದಲು ಮಾಡಲಿ. ಅದು ಬಿಟ್ಟು ಸದೃಢವಾಗಿರುವ ಕಾಂಗ್ರೆಸ್‌ನ ಭವಿಷ್ಯದ ಮಾತನಾಡುವುದು ಬಿಡಲಿ ಎಂದು ತಾಕೀತು ಮಾಡಿದರು.

ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸರ್ಕಾರ ತನ್ನ ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಒಟ್ಟು ಲೋಕಸಭಾ ಸ್ಥಾನಗಳಲ್ಲಿ 12-15 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಒಂದು ವೇಳೆ ಬಿಜೆಪಿ ಕೇಂದ್ರ ನಾಯಕರು ವಿಧಾನಸಭಾ ಚುನಾವಣೆಯಲ್ಲಿ ಮಾಡಿದಂತೆ ಹಿರಿಯ ನಾಯಕರನ್ನು ತುಳಿದರೆ ಆ ಪಕ್ಷಕ್ಕೆ 5-10 ಸ್ಥಾನ ಮಾತ್ರ ಕಾಯಂ ಆಗುವ ಸಾಧ್ಯತೆ ಇದೆ ಎಂದರು.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಗೆ ಯಾವುದೇ ಅರ್ಥ ಕಲ್ಪಿಸಬಾರದು. ಇನ್ನು ಅವರ ಭೇಟಿಯಲ್ಲಿ ಉಭಯ ಕುಶಲೋಪರಿ ಇತ್ತೇ ಹೊರತು ರಾಜಕೀಯದ ಮಾತುಕತೆಗೆ ಅವಕಾಶ ಇದ್ದಿಲ್ಲ ಎಂದರು.

ಆಪರೇಷನ್ ಕಮಲ ವಿಚಾರ: ಗೋವಿಂದ ಕಾರಜೋಳ ಹೇಳಿದ್ದೇನು..!?

0

ಬಾಗಲಕೋಟೆ;- ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್‌ ಸರ್ಕಾರದ ಆಯಸ್ಸು ಕಡಿಮೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ರಚನೆಯಾಗುವುದೇ ಎಂಬ ಪ್ರಶ್ನೆಗೆ ಅವರವರ ಹೊಡೆದಾಟದಿಂದಾಗಿಯೇ ಸರ್ಕಾರ ಬೀಳಲಿದೆ ಎಂದು ಹೇಳಿದರು.

ನಮ್ಮದು ರಾಜಕೀಯ ಪಕ್ಷವಾಗಿದ್ದು, ಎಣ್ಣೆ ಬಂದಾಗ ಕಣ್ಣು ಮುಚ್ಚಿ ಕೂರುವುದಿಲ್ಲ. ರಾಜಕೀಯ ಪಕ್ಷವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಹೇಳಿದರು. ಆಪರೇಷನ್ ಕಮಲ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮಗೆ ಆಪರೇಷನ್ ಕಮಲ ಮಾಡುವ ಅವಶ್ಯಕತೆಯಿಲ್ಲ. ಪಕ್ಷಕ್ಕೆ ಯಾರನ್ನು ಕರೆ ತರುವ ಅವಶ್ಯಕತೆಯೂ ನಮಗಿಲ್ಲ. ಅವರವರೇ ಕಚ್ಚಾಡಿ ಇಂದು ಬೀದಿಗೆ ಬಂದಿದ್ದಾರೆ. ಹಾಲು ಕುಡಿದು ಸಾಯುವವರಿಗೆ ವಿಷ ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.

ಸರ್ಕಾರ ಕೆಡವಲು ಬಿಜೆಪಿ ಮುಂದಾಗಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಉತ್ತರಿಸಿದ ಅವರು, ಬಿಜೆಪಿ ಮೇಲೆ ಆರೋಪ ಮಾಡಲು ಅವರ ಬಳಿ ಯಾವುದೇ ಆಧಾರಗಳು ಇಲ್ಲ. ಅವರಿಗೆ ಅಭದ್ರತೆ ಕಾಡುತ್ತಿದೆ. ಅದಕ್ಕಾಗಿಯೇ ಇಂಥ ಮಾತು ಆಡುತ್ತಿದ್ದಾರೆ. ಅವರಲ್ಲೇ ಕಚ್ಚಾಡಿ ನೆಲಕಚ್ಚುತ್ತಿದ್ದಾರೆ. ಅದನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು

error: Content is protected !!