Home Blog Page 3211

ಹೊಸಬರಿಗೆ ಮಗ್ಗಿ ಪುಸ್ತಕ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

0

ಅದೊಂದು ಕಾಲವಿತ್ತು.. ಕಾದಂಬರಿ ಆಧಾರಿತ ಸಿನಿಮಾ ಎನ್ನುವಾಗಲೇ ಆ ಚಿತ್ರಕ್ಕೊಂದು ತೂಕ ಬಂದು ಬಿಡುತ್ತಿತ್ತು. ಅಷ್ಟೇ ಅಲ್ಲ, ಕೌಟುಂಬಿಕವಾಗಿ, ಸಾಮಾಜಿಕವಾಗಿ ಸಂದೇಶಗಳಿರುತ್ತಿದ್ದವಲ್ಲದೆ, ಜೀವನಕ್ಕೆ ಹತ್ತಿರವಾಗಿದ್ದವು. ಈ ಮೂಲಕ ಓದುವ ಅಭ್ಯಾಸವಿಲ್ಲದವನನ್ನೂ ಕಾದಂಬರಿಗಳು ಮುಟ್ಟುತ್ತಿದ್ದವು. ಹೊಡೆಬಡಿ, ಪ್ರೀತಿ, ಗೀತಿ ಇತ್ಯಾದಿ ವಿಚಾರಗಳು ಬಂದ ಮೇಲೆ ಕತೆಯೇ ಬೇಡ ಎನ್ನುವಂತಾಗಿದೆ.

ಇಂತಹ ಕಾಲ ಘಟ್ಟದಲ್ಲಿ ಅಲ್ಲೊಂದು ಇಲ್ಲೊಂದು ಕಾದಂಬರಿ ಆಧಾರಿತ ಸಿನಿಮಾಗಳ ಬರ್ತಿವೆ. ಅಂತಹದ್ದೇ ಒಂದು ಪ್ರಯತ್ನ ಮಗ್ಗಿ ಪುಸ್ತಕ.

ಎಚ್.ಸಿ.ಹರೀಶ್ ಅವರ ಅವನಿ ಕಾದಂಬರಿ ಆಧರಿಸಿ ಮಗ್ಗಿ ಪುಸ್ತಕ ಎಂಬ ಸಿನಿಮಾವನ್ನು ದೃಶ್ಯ ರೂಪಕ್ಕಿಳಿಸಲಾಗಿದೆ. ದಸರಾ‌ ಮಹೋತ್ಸವದ ಅಂಗವಾಗಿ ಈ ಚಿತ್ರದ ಫಸ್ಟ್ ಲುಕ್ ನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಚಿನ್ನಾಸ್ವಾಮಿ ಫಿಲ್ಮಂ ಸಂಸ್ಥೆಯಡಿ ಚಿನ್ನಾಸ್ವಾಮಿ ಯತಿರಾಜ್ ತಮ್ಮ ಸ್ನೇಹಿತರ ಜೊತೆಗೂಡಿ ಚಿತ್ರ ನಿರ್ಮಿಸುತ್ತಿದ್ದಾರೆ. ಅವನಿ ಕಾದಂಬರಿಕಾರರು ಆಗಿರುವ ಎಚ್ ಸಿ ಹರೀಶ್ ಅವರೇ ಮಗ್ಗಿ ಪುಸ್ತಕ ಸಿನಿಮಾಗೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಮಗ್ಗಿ ಪುಸ್ತಕ ಸಿನಿಮಾದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ದಡ್ಡ ಪ್ರವೀಣ ಖ್ಯಾತಿಯ ರಂಜನ್ ಸಜ್ಜು, ಶ್ರೀರಕ್ಷಾ, ಹಿರಿಯ ಕಲಾವಿದರಾದ ಮೈಸೂರು ರಮಾನಂದ, ರಂಗಾಯಣ ರಘು, ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ಬಿರಾದಾರ, ಮಿಮಿಕ್ರಿ ಗೋಪಿ, ಚಂದ್ರಪ್ರಭಾ, ವಾಣಿ, ರಾನ್ವಿ ಶೇಖರ್, ಕೃಷ್ಣ ಮಹೇಶ್, ವರದ, ಶ್ರೀನಿವಾಸ್ ಗೌಡ, ಮೂಗು ಸುರೇಶ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ಮೈಸೂರು, ಮಂಗಳೂರು, ಎಚ್ ಡಿ ಕೋಟೆ, ನಂಜನಗೂಡು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ನಂದಕುಮಾರ್ ಛಾಯಾಗ್ರಹಣ, ಯಶಸ್ ನಾಚಪ್ಪ ಸಂಗೀತ, ಶರಣ್ ಕುಮಾರ್ ಗಜೇಂದ್ರಗಡ, ಗುರುನಾಥ ಬೋರಗಿ ಸಾಹಿತ್ಯ, ಶಿವಕುಮಾರ್ ಎಂ.ಸಂಕಲನ, ರಸೂಲ್ ನದಾಫ್ ಕಲಾ ನಿರ್ದೇಶನ ಮಗ್ಗಿ ಪುಸ್ತಕ ಸಿನಿಮಾಕ್ಕಿದೆ.

ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮುಂದಿನ ವರ್ಷಕ್ಕೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ಕನ್ನಡಕ್ಕೆ ಮತ್ತೆ ಬಂದ ತಮಿಳು ನಟ….ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ ಚಿತ್ರದಲ್ಲಿ ಬಹುಭಾಷಾ ನಟ ಬಾಬಿ ಸಿಂಹ

0

ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟ ಬಾಬಿ ಸಿಂಹ ಮತ್ತೊಂದು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಜಿಗರ್‌ಥಂಡ’ ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಈ ಪ್ರತಿಭಾವಂತ ಸ್ಟಾರ್ 777 ಚಾರ್ಲಿ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು.

ಇದೀಗ ಬಾಬಿ ಸಿಂಹ ರಘು ಕೋವಿ ನಿರ್ದೇಶನದಲ್ಲಿ ತಯಾರಾಗುತ್ತಿದೆ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಬರಹಗಾರರಾಗಿ ಖ್ಯಾತಿ ಪಡೆದಿರುವ ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ‘ದಿಲ್ ಮಾರ್’ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದಿರುವ ರಾಮ್ ಗೆ ರಘು ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮೊದಲ ಚಿತ್ರ ಬಿಡುಗಡೆಗೂ ಮುನ್ನವೇ ರಾಮ್, ರಘು ಕೋವಿ ನಿರ್ದೇಶನದಲ್ಲಿ ನಟಿಸುತ್ತಿದ್ದು, ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

ಹಂಸಲೇಖ ಕಥಾ ಕಣಜದಿಂದ ಸ್ಯಾಂಡಲ್ ವುಡ್ ಪರಿಚಿತರಾದ ರಘು ಕೋವಿ, ಕೃಷ್ಣಲೀಲಾ ಅತ್ಯುತ್ತಮ ಬರವಣಿಗೆಗೆ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ರಾಜೇಂದ್ರ ಸಿಂಗ್ ಬಾಬು, ಎಸ್.ಎಸ್. ರಾಜಶೇಖರ್ , ಕೆ.ವಿ.ರಾಜ್, ಶಶಾಂಕ್, ಉಪೇಂದ್ರ ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ರಘು ಕೋವಿ ದುಡಿದಿದ್ದಾರೆ. ಇದೀಗ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕಿಳಿದಿದ್ದಾರೆ.

ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರ್ತಿರುವ ಈ ಸಿನಿಮಾದಲ್ಲಿ ರಾಮ್ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬಾಬಿ ಸಿಂಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರ ಏನೂ ಅನ್ನೋದನ್ನು‌ ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ.

ಶೂಟಿಂಗ್ ಹಂತದಲ್ಲಿರುವ ಈ ಸಿನಿಮಾಗೆ ಓ ಮೈ ಗಾಡ್-2 ನಿರ್ಮಾಪಕ ನಿಕುಲ್ ದೇಸಾಯಿ ಕನ್ನಡ ನಿರ್ಮಾಣ ಸಂಸ್ಥೆ ಜೊತೆ ಕೈ ಜೋಡಿಸಿ ಹಣ ಹಾಕುತ್ತಿದ್ದಾರೆ.

ನೈಜ ಘಟನೆಯಾಧಾರಿತ ಕಥಾಹಂದರ ಹೊಂದಿರುವ ಸಿನಿಮಾಗೆ ಯುವರತ್ನ, ರಾಜಕುಮಾರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖ್ಯಾತಿಯ ಎ.ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಚಿತ್ರಕ್ಕಿರಲಿದೆ. ಸದ್ಯ ಶೂಟಿಂಗ್ ನಲ್ಲಿ‌ ನಿರತರಾಗಿರುವ ಚಿತ್ರತಂಡ ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲಿದೆ.

ಅಕ್ರಮ ದಂಧೆಕೋರರಿಗೆ ಕಡಿವಾಣ ಹಾಕಲು ಸಿದ್ಧವಾಗುತ್ತಿದೆ ಆಹಾರ ಇಲಾಖೆಯ ಹೊಸ ಕ್ರಮ `ಅನ್ನಭಾಗ್ಯ’ ಕಳ್ಳರಿಗೆ ಕಾದಿದೆ ಆಪತ್ತು…!?

0

ಗದಗ: ಬಡ ಜನರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದಾರೆ. ಆದರೆ, ಹಲವೆಡೆ, ಈ ಅನ್ನಭಾಗ್ಯ ಯೋಜನೆಯ ಅಕ್ಕಿ ಬಡವರ ಹೊಟ್ಟೆ ತುಂಬುವ ಬದಲಾಗಿ, ಕಾಳದಂಧೆ ನಡೆಸುವವರ ಜೇಬು ಮಾತ್ರ ಭರ್ತಿಯಾಗಿಯೇ ತುಂಬಿಸುತ್ತಿದೆ. ಇದಕ್ಕೆ ಗದಗ ಜಿಲ್ಲೆಯೂ ಹೊರತಾಗಿಲ್ಲ.

ಈ ಹಿಂದೆಯೂ ಅನೇಕ ಬಾರಿ ಈ ಅಕ್ರಮಕ್ಕೆ ಬ್ರೇಕ್ ಹಾಕಲು ಇಲಾಖೆ ಮುಂದಾಗಿ ಕ್ರಮ ಕೈಗೊಂಡರೂ ಕೂಡ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತಿಲ್ಲವೆಂಬುದೂ ಸತ್ಯವೇ.

ಪದೇ ಪದೇ ಅಕ್ರಮವಾಗಿ ಅಕ್ಕಿ ಸಾಗಾಟದಲ್ಲಿ ತೊಡಗಿಕೊಂಡ ಖದೀಮರನ್ನು ಗಡಿಪಾರು ಮಾಡಬೇಕು ಇಲ್ಲವೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲು ಆಹಾರ ಇಲಾಖೆ ಸಜ್ಜಾಗಿರುವುದು ದಂಧೆಕೋರರಲ್ಲಿ ಭಯ ಹುಟ್ಟಿಸಿದೆ.

ಗದಗ ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆಗೆ ಕಡಿವಾಣ ಇಲ್ಲದಂತಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲೇ ಅಕ್ರಮ ಅಕ್ಕಿ ಸಾಗಾಟಕ್ಕೆ ಸಂಬಂಧಿಸಿ ಒಂದು ವಾರದಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದರೆ, ಈ ದಂಧೆ ಯಾವ ಮಟ್ಟಕ್ಕೆ ಬೆಳೆದಿರಬಹುದು ಎಂದು ಅಂದಾಜಿಸಬಹುದು.

ಈ ದಂಧೆಕೋರರು ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಯಾವುದೇ ಭಯವಿಲ್ಲದೇ ರಾಜಾರೋಷವಾಗಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ನಡೆಸಿದ್ದಾರೆ.

ಹೀಗೆ ಅಕ್ರಮವಾಗಿ ಸಂಗ್ರಹಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ರಾತ್ರೋರಾತ್ರಿ ವಾಹನಗಳಲ್ಲಿ ತುಂಬಿ ಸಾಗಾಟ ಮಾಡಲಾಗುತ್ತಿದೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗದಗ ಗ್ರಾಮೀಣ ಪೊಲೀಸ್ ಠಾಣೆ, ಬೆಟಗೇರಿ ಪೊಲೀಸ್ ಠಾಣೆ ಹಾಗೂ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ಪ್ರಕರಣ ದಾಖಲಾಗಿವೆ.

ವಾಹನಗಳಲ್ಲಿ ಸಾಗಾಟ ಹಾಗೂ ಮನೆಯಲ್ಲಿ ಅಕ್ರಮ ಸಂಗ್ರಹ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ತಹಸೀಲ್ದಾರ, ಆಹಾರ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಸಂಗ್ರಹಿಸಿಟ್ಟಿದ್ದ ಅಕ್ಕಿ ದಾಸ್ತಾನನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ದಾಖಲಾದ ನಾಲ್ಕು ಪ್ರಕರಣಗಳಲ್ಲಿ ನೂರಾರು ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ.

ವಿಜಯಕುಮಾರ ಮಟ್ಟಿ, ವೀರಣ್ಣ ಬಡಿಗೇರ, ಶಿವಾನಂದ ಬಡಿಗೇರ, ಖಾಜಾಹುಸೇನ್ ಖಾದರನ್ನವರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಏಪ್ರಿಲ್‌ನಿಂದ ಇಲ್ಲಿಯವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿರುವ ಬಗ್ಗೆ ಆಹಾರ ಇಲಾಖೆ ತಿಳಿಸಿದೆ. ಈ ಎಲ್ಲ ಅಕ್ರಮಕ್ಕೆ ಕಡಿವಾಣ ಹಾಕಲು ಆಹಾರ ಇಲಾಖೆ ಸಜ್ಜಾಗುತ್ತಿದ್ದು, ಪದೇ ಪದೇ ಇಂಥದೇ ಪ್ರಕರಣಗಳಲ್ಲಿ ಶಾಮೀಲಾದ ದಂಧೆಕೋರರ ಪಟ್ಟಿ ಸಿದ್ಧಪಡಿಸುತ್ತಿದ್ದು, ಇಂಥ ದಂಧೆಕೋರರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದು ಇಲ್ಲವೇ ಗಡಿಪಾರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಆಹಾರ ಇಲಾಖೆ ಉಪನಿರ್ದೇಶಕರು ಹೇಳಿದ್ದಾರೆ.

ಕಳೆದ ಬಾರಿ ಅಕ್ರಮ ಅಕ್ಕಿ ದಂಧೆಕೋರನೊಬ್ಬ ಡಿಸಿ, ಎಸ್‌ಪಿಯವರಿಗೂ ನಾನೂ ಕೇರ್ ಮಾಡುವುದಿಲ್ಲ, ಯಾರಿಗೆ ಹೇಳ್ತೀರಿ ಹೇಳಿ ಎಂದು ಧಮಕಿ ಹಾಕಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಅಕ್ರಮ ಅಕ್ಕಿ ದಾಸ್ತಾನು ಮಾಹಿತಿ ನೀಡಿದವರಿಗೆ ಬೆದರಿಕೆ ಹಾಕಿದ ಪ್ರಕರಣಗಳೂ ವರದಿಯಾಗಿದ್ದವು. ಇಂಥವರ ವಿರುದ್ಧ ಶಿಸ್ತಿನ ಹಾಗೂ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಾಗ ಮಾತ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ನಿಜವಾದ ಫಲಾನುಭವಿಗಳ ಹೊಟ್ಟೆ ಸೇರುತ್ತದೆ, ಸರ್ಕಾರದ ಆಶಯವೂ ಇಡೇರಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಗಂಭೀರ ಚಿಂತನೆ ನಡೆಸಬೇಕಿದೆ.

ಗೃಹ ಸಚಿವ ಪರಮೇಶ್ವರ್ ಆಪ್ತ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ..!

0

ಕೋಲಾರ,: ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಎಂ ಶ್ರೀನಿವಾಸ್ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದು, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರೂ ಆಗಿದ್ದರು. ಕೋಲಾರ ಜಿಲ್ಲೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು.

ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಹಲ್ಲೆ ನಡೆದಿದೆ.

ಅಪರಿಚಿತ ದುಷ್ಕರ್ಮಿಗಳು ಶ್ರೀನಿವಾಸ್ ಅವರ ಎದೆ, ತಲೆ, ದೇಹದ ಮೈಮೇಲೆ ಮಾರಕಾಸ್ತ್ರಗಳಿಂದ ಮನಸೋಇಚ್ಚೆ ಹಲ್ಲೆ ಮಾಡಿದ್ದಾರೆ. ಕೋಲಾರದ ಜಾಲಪ್ಪಾ ಆಸ್ಪತ್ರೆಯಲ್ಲಿ ಶ್ರೀನಿವಾಸ್ ಅವರು ಮೃತಪಟ್ಟಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಯುಧ ಪೂಜೆ, ಬೆಂಗಳೂರಿನ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ-ಪುನಸ್ಕಾರ

0

ಬೆಂಗಳೂರು;- ಇಂದು ಬೆಂಗಳೂರು ಸೇರಿ ನಾಡಿನೆಲ್ಲೆಡೆ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದೆ. ಹೀಗಾಗಿ ನಗರದ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ನಡೆಯುತ್ತಿದ್ದು, ನಗರದ ಬನಶಂಕರಿ, ಸರ್ಕಲ್ ಮಾರಮ್ಮ , ಮಲ್ಲೇಶ್ವರಂ ನಾ ಗಂಗಾಬಿಕೆ ದೇವಸ್ತಾನ, ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬೆಳ್ಳಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆ ಶುರುವಾಗಿದ್ದು, ಅದ್ರಲ್ಲೂ ಬನಶಂಕರಿ ದೇವಸ್ಥಾನದಲ್ಲಿ 5 ಗಂಟೆಯಿಂದಲೇ ಪೂಜೆ ಶುರುವಾಗಿದೆ. ಬೆಳ್ಳಗ್ಗೆಯೇ ಪಂಚಾಭಿಷೇಕ ಮಾಡಿ ವಿಷೇಶ ಅಲಂಕಾರದ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಹೀಗಾಗಿ ಬೆಳ್ಳಂ‌ಬೆಳ್ಳಗ್ಗೆಯೇ ಸಾಕಷ್ಟು ಸಂಖ್ಯೆಯಲ್ಲಿ ಭಕ್ತಾದಿಗಳು ಬರುತ್ತಿದ್ದಾರೆ.

ಬಿಜೆಪಿಯವರು ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದಾರೆ: ಸತೀಶ್ ಜಾರಕಿಹೊಳಿ

0

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಪ್ರಮುಖ ಕಡತಗಳೇ ಕಳುವಾಗಿವೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ಕೊಟ್ಟಿದ್ದೇನೆ. ಇದರಲ್ಲಿ ಬಿಜೆಪಿಯರು ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದು, ನಮ್ಮವರೂ ಇದ್ದಾರೆಂಬ ಸಂಶಯವಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪ್ರಮುಖ ಕಡತ ಕಳವು ವಿಚಾರಕ್ಕೆ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನೀಡಿದ್ದು, ಮೇಯರ್ ಅವರು ಸಹಿ ಮಾಡಿರುವ ಕಡತಗಳೇ ಕಾಣೆಯಾಗಿವೆ. ಮಿಸ್ಸಿಂಗ್‌ ಮಾಡಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲು ಆಯುಕ್ತರಿಗೆ ಹೇಳಿದ್ದೇನೆ ಎಂದು ಹೇಳಿದರು.

ದೂರು ನೀಡುವ ವಿಚಾರ ಬಗ್ಗೆ ಚರ್ಚೆಯಾಗುತ್ತಿದೆ. ಅದು ಆಯುಕ್ತರ ಜವಾಬ್ದಾರಿಯೂ ಹೌದು. ಕಡತಗಳು ಕಾರ್ಯದರ್ಶಿಗಳ ಬಳಿ ಇರಬೇಕಿತ್ತು. ಆದರೀಗ ಮೇಯರ್ ಸಹಿ ಮಾಡಿರುವ ಒರಿಜಿನಲ್‌ ಪ್ರತಿಗಳೇ ಕಳವು ಆಗಿದೆ.

ಅದೇ ವಿಚಾರ ಇಟ್ಟುಕೊಂಡು ಬಿಜೆಪಿಯವರು ಆಯುಕ್ತರ ವಿರುದ್ಧ ಆರೋಪ ಮಾಡ್ತಿದ್ದಾರೆ. ಮೊದಲು ತಾವೇ ಸಹಿ ಮಾಡಿದ್ದ ಮಾಡಿರುವುದಾಗಿ ಹೇಳಿದ್ದ ಆಯುಕ್ತರು ಈಗ ಅವರೇ ನಮ್ಮನ್ನು ದೂರುತ್ತಿದ್ದಾರೆ. ಹಾಗಾಗಿ ನಮ್ಮವರೂ ಸಹ ಕೃತ್ಯದಲ್ಲಿ ಭಾಗಿಯಾಗಿರುವ ಸಂಶಯ ಬರುತ್ತಿದೆ. ಆದ್ದರಿಂದ ದೂರು ನೀಡಲು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಗೋವಾದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಮದ್ಯ ಸಾಗಣೆ: ₹43 ಲಕ್ಷ ಮೌಲ್ಯದ ಮದ್ಯ ಜಪ್ತಿ

0

ಬೆಳಗಾವಿ: ಅಬಕಾರಿ ಅಧಿಕಾರಿಗಳು ಭಾನುವಾರ ಬೆಳಿಗ್ಗೆ ಕಾರ್ಯಾಚರಣೆ ಕೈಗೊಂಡಿದ್ದು, ಗೋವಾದಿಂದ ತೆಲಂಗಾಣಕ್ಕೆ ದುಬಾರಿ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣ ಭೇದಿಸಿದ್ದಾರೆ.

43 ಲಕ್ಷ ರೂ. ಮೌಲ್ಯದ ಮದ್ಯ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ಹಿಂದೆ ಪ್ಲೈವುಡ್‌ ಮತ್ತು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಮಧ್ಯೆ ಮದ್ಯದ ಬಾಟಲಿಗಳನ್ನಿಟ್ಟು ಸಾಗಣೆ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ಭೇದಿಸಿದ್ದ ಅಧಿಕಾರಿಗಳು, ಇದೀಗ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದಾರೆ.

ಬೆಳಿಗ್ಗೆ 3.30ರ ಸುಮಾರಿಗೆ ಬೆಳಗಾವಿ ತಾಲೂಕಿನ ಪೀರನವಾಡಿ ಕ್ರಾಸ್‌ ಹತ್ತಿರ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು, ಚಾಲಕ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಲಾರಿ ತಪಾಸಣೆ ನಡೆಸಿದಾಗ ಅಕ್ರಮ ಗೋವಾ ಮದ್ಯ ಸಾಗಿಸುತ್ತಿರುವುದು ಖಚಿತವಾಗಿದೆ. 43,93,700 ರೂ. ಮೌಲ್ಯದ ಮದ್ಯ ಹಾಗೂ ಸಾಗಣೆಗೆ ಉಪಯೋಗಿಸಿದ್ದ 20 ಲಕ್ಷ ರೂ ಮೌಲ್ಯದ ಲಾರಿ ಜಪ್ತಿ ಮಾಡಲಾಗಿದೆ.

ಗೋವಾದಿಂದ ತೆಲಂಗಾಣಕ್ಕೆ ಸಾಗಣೆ ಮಾಡುವ ಉದ್ದೇಶದಿಂದ ಲಾರಿಯಲ್ಲಿ 21 ವಿವಿಧ ಕಂಪನಿಯ ದುಬಾರಿ ಬೆಲೆಯ ಮದ್ಯದ 250 ಬಾಕ್ಸ್‌ಗಳನ್ನು ಮೊದಲಿಗೆ ಇಟ್ಟಿದ್ದಾರೆ. ಈ ಬಾಕ್ಸ್‌ಗಳ ಮೇಲೆ ಯಾರಿಗೂ ಅನುಮಾನ‌ ಬಾರದಂತೆ ಖಾಲಿ ರಟ್ಟು ಮತ್ತು ಪೇಪರ್ಗಳನ್ನು ಹೊಂದಿಸಿಟ್ಟಿದ್ದರು. ಆದರೆ ಅಬಕಾರಿ‌ ಅಧಿಕಾರಿಗಳ ಕರ್ತವ್ಯಪ್ರಜ್ಞೆ, ಚಾಣಾಕ್ಷತನದಿಂದ ದಾಳಿ ಮಾಡಿದ್ದರಿಂದ ಆರೋಪಿಗಳ ಯತ್ನ ವಿಫಲವಾಗಿದೆ.

ಅಪರ ಅಬಕಾರಿ ಆಯುಕ್ತ ಡಾ.ವೈ.ಮಂಜುನಾಥ್, ಜಂಟಿ ಆಯುಕ್ತ ಫಿರೋಜ್ ಖಾನ್ ಕಿಲ್ಲೆದಾರ್, ಉಪ ಆಯುಕ್ತೆ ವನಜಾಕ್ಷಿ ಎಂ. ಮಾರ್ಗದರ್ಶನದ ಮೇರೆಗೆ ದಾಳಿ ಮಾಡಲಾಗಿದೆ.

ಉಪ ಅಧೀಕ್ಷಕ ರವಿ ಮುರಗೋಡ ನೇತೃತ್ವ ವಹಿಸಿದ್ದರು. ತಂಡದಲ್ಲಿ ನಿರೀಕ್ಷಕ‌ ಮಂಜುನಾಥ್ ಮೆಳ್ಳಿಗೇರಿ ಹಾಗೂ ಉಪ ನಿರೀಕ್ಷಕಿ ಜ್ಯೋತಿ ಕುಂಬಾರ, ಪುಷ್ಪಾ ಗಡಾದೆ ಹಾಗೂ ಸಿಬ್ಬಂದಿ ಪರಸಪ್ಪ ತಿಗಡಿ, ಆನಂದ ಪಾಟೀಲ, ವಿನಾಯಕ ಭೋರಣ್ಣವರ, ಬಸವರಾಜ್.ಡಿ. ಭಾಗವಹಿಸಿದ್ದರು.

ಕಳೆದ ಎರಡು ಪ್ರಕರಣಗಳಿಗಿಂತ ಇದು ವಿಶೇಷ ಪ್ರಕರಣವಾಗಿದೆ. ಇದರಲ್ಲಿ ಅತ್ಯಂತ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ತೆಲಂಗಾಣಕ್ಕೆ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿತ್ತು. ಈ ಹಿಂದೆ ದಾಳಿ ಮಾಡಿದ ವೇಳೆಯೂ ಮೊದಲನೇ ಗಾಡಿ ಬಳ್ಳಾರಿ ಮತ್ತು ತೆಲಂಗಾಣಕ್ಕೆ, ಎರಡನೇ ಗಾಡಿ ತೆಲಂಗಾಣ, ಈಗ ಮೂರನೇ ಗಾಡಿಯೂ ತೆಲಂಗಾಣಕ್ಕೆ ಹೊರಟಿದೆ.

ಮದ್ಯ ಜಪ್ತಿ ಮಾಡಿಕೊಳ್ಳಲಾಗಿದ್ದು, ಅಕ್ರಮ ಸಾಗಣೆ ಬಗ್ಗೆ ತನಿಖೆ ಮುಂದುವರಿಸಿದ್ದೇವೆ ಎಂದು ಅಬಕಾರಿ ಅಪರ ಆಯುಕ್ತ ಡಾ.ವೈ.ಮಂಜುನಾಥ ತಿಳಿಸಿದ್ದಾರೆ.

ಪ್ರೀತಿಯ ಬಲೆಗೆ ಬಿದ್ದಿದ್ದ ಪುತ್ರಿ..! ಮಗಳನ್ನ ಮಚ್ಚಿನಿಂದ ಕೊಚ್ಚಿ ಕೊಲೆಗೈದ ತಂದೆ

0

ಬೆಂಗಳೂರು ಗ್ರಾಮಾಂತರ: ಮಗಳನ್ನು ಮಚ್ಚಿನಿಂದ ಕೊಚ್ಚಿ ತಂದೆ ಮರ್ಯಾದಾ ಹತ್ಯೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ನಡೆದ ಘಟನೆ ಭಾನುವಾರ ತಡವಾಗಿ ಬೆಳಕಿಗೆ ಬಂದಿದೆ. 17 ವಯಸ್ಸಿನ ಹುಡುಗಿ ತಂದೆಯಿಂದ ಕೊಲೆಯಾದ ದುರ್ದೈವಿ. ಹೆಚ್.ಡಿ.ಕೋಟೆ ಮೂಲದವರಾದ ಗಣೇಶ್ ಮತ್ತು ಶಾರದಾ ದಂಪತಿ ಪುತ್ರಿ.

ಈಕೆ ಶಾಲೆಗೆ ಹೋಗುವಾಗ ಪ್ರೀತಿಯ ಬಲೆಗೆ ಬಿದ್ದಿದ್ದಳು. ಈ ವಿಚಾರ ತಿಳಿದು ಹೆಚ್.ಡಿ.ಕೋಟೆಯಿಂದ ನಾಗನಾಥಪುರದಲ್ಲಿರುವ ಮಾವನ ಮನೆಗೆ ಕರೆತಂದು ಹುಡುಗಿಯನ್ನು ಬಿಡಲಾಗಿತ್ತು.

ಆದರೆ ಹುಡುಗಿ ನಾಗನಾಥಪುರದ ಮಾವನ ಮನೆಯಿಂದ ಕಾಣೆಯಾಗಿದ್ದಳು. ಪ್ರೀತಿಸಿದ ಹುಡುಗನ ಜೊತೆ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಆರಂಭಿಸಿದ ಪೊಲೀಸರು, ಹುಡುಗಿಯನ್ನು ಪತ್ತೆ ಮಾಡಿ ಕರೆತಂದಿದ್ದರು. ಪೊಲೀಸ್ ಠಾಣೆಯಿಂದ ಆಕೆಯ ಮಾವ ಮನೆಗೆ ಕರೆದೊಯ್ದಿದ್ದರು.

ನಿನ್ನೆ ಬೆಳಿಗ್ಗೆ 10:30 ರ ಸುಮಾರಿಗೆ ನಾಗನಾಥಪುರಕ್ಕೆ ಹುಡುಗಿಯ ತಂದೆ ಬಂದಿದ್ದರು. ಈ ವೇಳೆ ಪತ್ನಿ ಶಾರದಾ ಮತ್ತು ಮಗಳ ಜೊತೆ ಗಲಾಟೆ ತೆಗೆದಿದ್ದಾನೆ. ಗಲಾಟೆ ವಿಕೋಪಕ್ಕೆ ಹೋಗಿ ಮನೆಯಲ್ಲಿದ್ದ ಮಚ್ಚಿನಿಂದ ಕೊಚ್ಚಿ ಮಗಳನ್ನು ಹತ್ಯೆ ಮಾಡಿದ್ದಾನೆ.

ಮೈಸೂರಿನಲ್ಲಿ ಭೀಕರ ಅಪಘಾತ: ಕರಾಟೆಪಟು ಸ್ಥಳದಲ್ಲೇ ಸಾವು

0

ಮೈಸೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಕರಾಟೆ ಪಟುವೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಸಮೀಪ ನಡೆದಿದೆ. ಕಿರಣ್ ರಾಜ್ (22) ಮೃತ ದುರ್ದೈವಿ.

ನಂಜನಗೂಡು ತಾಲೂಕಿನ ನೇರಳೆ ಗ್ರಾಮದ ನಿವಾಸಿಯಾದ ಇವರು ಸ್ನೇಹಿತನಿಗೆ ಬೈಕ್ ನೀಡಲು ಮೈಸೂರಿಗೆ ಹೊರಟಿದ್ದರು.

ಮೈಸೂರು ಸಮೀಪದ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಗರಿ ರಸ್ತೆಗೆ ಬಿದ್ದಿರುವ ಕಿರಣ್ ರಾಜ್, ತೀವ್ರ ಗಾಯಗಳೊಂದಿಗೆ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದಿನಿಂದ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

0

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಪ್ರಯಾಣ ಆರಂಭಿಸಿ ಮೈಸೂರಿಗೆ ತಲುಪಲಿದ್ದಾರೆ. ಮಹಾರಾಣಿ ವಿಜ್ಞಾನ ಕಾಲೇಜಿನ ಹಾಸ್ಟೆಲ್ಗೆ ಭೇಟಿ ನೀಡಲಿದ್ದಾರೆ. ನಂತರ ಇಂದು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನ ವೀಕ್ಷಣೆ ಮಾಡಲಿದ್ದಾರೆ.

ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಅ.24 ಮಧ್ಯಾಹ್ನ 1.46ಕ್ಕೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ.

ಸಂಜೆ 4.40ಕ್ಕೆ ವಿಜಯದಶಮಿ ಮೆರವಣಿಗೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 7.30ಕ್ಕೆ ಪಂಜಿನ ಕವಾಯತು ವೀಕ್ಷಿಸಲಿದ್ದಾರೆ. ಅ.25ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಅ.25ರಂದು ಸಂಜೆ ಮೈಸೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.

error: Content is protected !!