Home Blog Page 3214

ರಾಜ್ಯದ ನೇಕಾರರಿಗೆ ಗುಡ್ ನ್ಯೂಸ್: 250 ಯುನಿಟ್‌ ಉಚಿತ ವಿದ್ಯುತ್‌ ಘೋಷಿಸಿದ ಸರ್ಕಾರ

0

ವಿಜಯಪುರ;- ರಾಜ್ಯದ ನೇಕಾರರಿಗೆ 250 ಯುನಿಟ್‌ ಉಚಿತ ವಿದ್ಯುತ್‌ ನೀಡುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ವಿಜಯಪುರದಲ್ಲಿ ಮಾತನಾಡಿದ ಸಕ್ಕರೆ, ಜವಳಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ನಮ್ಮ ಪಕ್ಷ ಚುನಾವಣೆ ಸಂದರ್ಭದಲ್ಲಿ ನೇಕಾರರಿಗೆ ಉಚಿತ ವಿದ್ಯುತ್‌ ನೀಡುವುದಾಗಿ ಘೋಷಣೆ ಮಾಡಿತ್ತು.

ಈ ಘೋಷಣೆಯನ್ನು ಅನುಷ್ಠಾನಗೊಳಿಸಲು ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ. ಇದು ನೇಕಾರರಿಗೆ ದಸರಾ ಹಾಗೂ ದೀಪಾವಳಿಯ ಬಂಪರ್‌ ಕೊಡುಗೆಯಾಗಿದೆ ಎಂದು ಹೇಳಿದರು.

0ದಿಂದ 10 ಎಚ್‌ಪಿವರೆಗಿನ 250 ಯುನಿಟ್‌ ವರೆಗೆ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್‌ ನೀಡಲಾಗುವುದು. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. 35ರಿಂದ 40 ಸಾವಿರ ನೇಕಾರರ ಕುಟುಂಬಗಳಿಗೆ ಈ ಯೋಜನೆಯಿಂದ ಲಾಭವಾಗಲಿದೆ. ₹129ರಿಂದ ₹149 ಕೋಟಿವರೆಗೆ ಈ ಯೋಜನೆ ಅನುಷ್ಠಾನಕ್ಕೆ ವೆಚ್ಚವಾಗಲಿದೆ ಎಂದು ಹೇಳಿದರು.

ದೊಡ್ಡ ನೇಕಾರರಿಗೂ 500 ಯುನಿಟ್‌ ವರೆಗೆ ₹1.25 ನಂತೆ ರಿಯಾಯ್ತಿ ದರದಲ್ಲಿ ವಿದ್ಯುತ್‌ ಪೂರೈಕೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ 1ರಿಂದ 10ರಷ್ಟು ಎಚ್‌ಪಿ ಹೊಂದಿದ ನೇಕಾರರು ಶೇ.80ರಷ್ಟು ಇದ್ದಾರೆ. ಶೇ.20ರಷ್ಟು ದೊಡ್ಡ ನೇಕಾರರಿದ್ದಾರೆ. ಶೇ. 80ರಷ್ಟು ನೇಕಾರರಿಗೆ ಉಚಿತ ವಿದ್ಯುತ್‌ ಪ್ರಯೋಜನ ದೊರೆಯಲಿದೆ ಎಂದು ಹೇಳಿದರು.

ವೆಸ್ಟ್ಎಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ – ಸಿಎಂ

0

ಬೆಂಗಳೂರು;- ವೆಸ್ಟ್​ಎಂಡ್ ಹೋಟೆಲ್​ನಲ್ಲಿ ಕೂತು ನಡೆಸುತ್ತಿಲ್ಲ ಸರ್ಕಾರ ನಡೆಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಮಿಷನ್​ಗಾಗಿ ಕೃತಕ ವಿದ್ಯುತ್ ಕೊರತೆ ಸೃಷ್ಟಿಸಲಾಗುತ್ತಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ. ನಾವು ವೆಸ್ಟ್​ಎಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಸಿಎಂ ತಿರುಗೇಟು ನೀಡಿದರು.

ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಎಕ್ಸ್ ಮೂಲಕ ಪೋಸ್ಟ್ ಮಾಡಿದ್ದಾರೆ. ರೈತರಿಗೆ ಮೂರು ಪಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್‌ ಪೂರೈಕೆಗೆ ಸೂಚನೆ ನೀಡಲಾಗಿದೆ. ಉತ್ತರ ಪ್ರದೇಶದಿಂದ 300 ಮೆ.ವ್ಯಾ. ಮತ್ತು ಪಂಜಾಬ್‌ನಿಂದ 600 ಮೆ.ವ್ಯಾ. ವಿದ್ಯುತ್ ಖರೀದಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿ, ರಾಜ್ಯದ ಎಲ್ಲಾ ವಿದ್ಯುತ್‌ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್‌ ಉತ್ಪಾದಿಸಿ ರಾಜ್ಯದ ಗ್ರಿಡ್​​ಗೆ ಪೂರೈಸುವಂತೆ ಆದೇಶಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಿಗೆ ಮರುಚಾಲನೆ ನೀಡಲಾಗಿದೆ. ಈ ಎಲ್ಲ ಕಲ್ಲಿದ್ದಲು ಸಂಸ್ಥೆಗಳಿಂದ 15 ಲಕ್ಷ ಮೆಟ್ರಿಕ್ ಟನ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಪಾವಧಿ ಆಧಾರದಲ್ಲಿ 1300 ಮೆ.ವ್ಯಾ. ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗುತ್ತಿದೆ. ಕೆಪಿಸಿಎಲ್​ನ ಅನಿಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ಆರಂಭಕ್ಕೆ ಕ್ರಮ ವಹಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ

ಕಲ್ಲಕ್ವಾರಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರ ಸಾವು..!

0

ಬೀದರ್: ಕಲ್ಲಕ್ವಾರಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ 27ನೇ ವಾರ್ಡ್‌ನ ಫಾತ್ಮಾಪುರ್‌ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ಮಹ್ಮದ್‌ ಖಾಜಾ ಇಸೂಫ್ (20), ಸೈಯದ್‌ ಸಮೀರ್‌ (20) ಸಾಕೀನ ಫಾತ್ಮಾಪುರ್‌ ಎಂದು ಗುರುತು ಪತ್ತೆಯಾಗಿದ್ದು,

ಶನಿವಾರ ಬೆಳಗಿನ ಜಾವ ಈಜಾಡಲು ಹೊಂಡದಲ್ಲಿ ಇಳಿದಿದ್ದ ಯುವಕರು ನೀರಪಾಲಾಗಿದ್ದಾರೆ.

ಈಜಲು ನೀರಿಗಿಳಿದ ಯುವಕರು ಮೇಲೆ ಬರದೆ ಇದ್ದಾಗ ಅಗ್ನ ಶಾಮಕ ಠಾಣೆಗೆ ಮಾಹಿತಿ ನೀಡಲಾಯಿತು. ನಂತರ ಸಾರ್ವಜನಿಕರ ನೆರವಿನೊಂದಿಗೆ ಶವಗಳನ್ನು ಹೊರ ತೆಗೆಯಲಾಯಿತು. ಈ‌ ಕುರಿತು ಚಿಟಗುಪ್ಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನೂ ಸ್ಥಳದಲ್ಲಿ ಸಂಬಂಧಿಕರ ಅಕ್ರಂಧನ ಮುಗಿಲು ಮುಟ್ಟಿದೆ.

ನನ್ನ ಮೌನವೂ ವೀಕ್ನೆಸ್ ಅಲ್ಲ’: ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

0

ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎನ್ನುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಬಂಡಾಯದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ‌.

ಮೊನ್ನೆಯಷ್ಟೇ ಖಾಸಗಿ ಮಾಧ್ಯಮದ ಜೊತೆ ಮಾತನಾಡುತ್ತಿದ್ದ ವೇಳೆ ನನ್ನ ಮೌನ ನನ್ನ ವೀಕ್ನೆಸ್ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ಈ ವಿಚಾರದ ಬಗ್ಗೆ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಉತ್ತರಿಸಿದರು.

ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಒಂದು ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ನಾವೆಲ್ಲಾ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. 135 ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು.

ಬೆಳಗಾವಿ ಜಿಲ್ಲೆಯ ಎಲ್ಲಾ ಶಾಸಕರು ಮೈಸೂರು ಹೋಗಲು ಪ್ಲಾನ್ ಮಾಡಲಾಗಿತ್ತು. ಆದರೆ, ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೋಗಲು ಆಗಲಿಲ್ಲ. ಇದರಲ್ಲಿ ಏನೂ ವಿಶೇಷತೆ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಶಾಸಕರ ಪ್ರವಾಸಕ್ಕೆ ಹೈಕಮಾಂಡ್ ಯಾಕೆ ತಡೆಯಿತು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಈ ಬಗ್ಗೆ ಸತೀಶ್ ಜಾರಕಿಹೊಳಿ ಅವರನ್ನೇ ಕೇಳಿ. ಜಿಲ್ಲೆಯ ಎಲ್ಲಾ ಶಾಸಕರು ಮೈಸೂರಿಗೆ ಹೋಗಬೇಕೆಂದು ಮಾತಾಡಿಕೊಂಡಿದ್ದೆವು. ಇದರಲ್ಲಿ ಯಾವುದೇ ರೀತಿ ಬಂಡಾಯ ಇರಲಿಲ್ಲ.

ಮುಂದಿನ ಎಪಿಸೋಡ್ ಸತೀಶ್ ಅವರನ್ನೇ ಕೇಳಿ ಎಂದು ಕುಟುಕಿದರು.ಡಿಸಿಎಂ ಡಿ ಕೆ ಶಿವಕುಮಾರ್ ಅವರ ಭೇಟಿಗೆ ಶಾಸಕರು, ಜಿಲ್ಲಾಧ್ಯಕ್ಷರು ಬಾರದಿರುವ ವಿಚಾರಕ್ಕೆ, ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲ ಇತ್ತು. ಆದರೂ ಯಾರಾದರೂ ಬಂದು ಸ್ವಾಗತಿಸಿ, ಗೌರವ ಸೂಚಿಸುವ ಕೆಲಸ ಮಾಡಬೇಕಿತ್ತು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು.

ಕೆಲ ದಿನಗಳ ಹಿಂದೆಯೂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ತಮ್ಮ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಸತೀಶಣ್ಣ ಬಹಳ ಅನುಭವ ಇರುವವರು, ನಾವೆಲ್ಲಾ ಅವರ ನೇತೃತ್ವದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ನಾನು ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಹಾಕಿದಾಗ ಅವರು ಯೆಸ್ ಎನ್ನುತ್ತಾರೆ. ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ಇದು ನಮ್ಮಿಬ್ಬರ ನಡುವಿನ ಕಾಂಪ್ರಮೈಸ್ ಅಷ್ಟೆ ಎಂದು ಹೇಳಿದ್ದರು.

ಡಿಕೆಶಿ ಸಂಕಷ್ಟಕ್ಕೆ ಸಿಲುಕಿದರೆ ಸಿದ್ದರಾಮಯ್ಯಗೆ ಖುಷಿ – ಮುರುಗೇಶ್ ನಿರಾಣಿ

0

ಬೆಂಗಳೂರು;- ಡಿಕೆಶಿ ಸಂಕಷ್ಟಕ್ಕೆ ಸಿಲುಕಿದರೆ ಸಿದ್ದರಾಮಯ್ಯ ಒಳಗೊಳಗೇ ಖುಷಿ ಪಡ್ತಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಒಳಜಗಳ ಹಾವು ಮುಂಗುಸಿಯಂತಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಪ್ರಕರಣದಲ್ಲಿ ಡಿಕೆಶಿ ನೂರಕ್ಕೆ ನೂರು ಜೈಲಿಗೆ ಹೋಗುತ್ತಾರೆ ಎಂದರು.

ಡಿಕೆಶಿ ವರ್ಚಸ್ಸನ್ನು ಕಡಿಮೆ ಮಾಡಲು ಅವರದೆ ಪಕ್ಷದ ವಿವಿಧ ಸಮಾಜದ ನಾಯಕರನ್ನು ಎತ್ತಿಕಟ್ಟುವ ಕಾರ್ಯ ನಡೆದಿದೆ. ಡಿಕೆಶಿ ಸಂಕಷ್ಟಕ್ಕೆ ಸಿಲುಕಿದರೆ ಸಿಎಂ ಸಿದ್ದರಾಮಯ್ಯ ಒಳಗೊಳಗೆ ಖುಷಿ ಪಡುತ್ತಾರೆ ಎಂದ ಅವರು, ಕಾಂಗ್ರೆಸ್ ಮುಳುಗುವ ಹಡಗು ಇದ್ದಂತೆ. ಲೋಕಸಭಾ ಚುನಾವಣಾ ನಂತರ ಏನಾಗುತ್ತೆ ಎಂಬುದನ್ನು ನೀವೇ ನೋಡ್ತಾ ಇರಿ ಎಂದು ಹೇಳಿದರು.

ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ. ಬಿಟ್ಟಿ ಭಾಗ್ಯಗಳನ್ನು ತಮ್ಮ ಮನೆಯಿಂದ ದುಡ್ಡು ತಂದು ಕೊಟ್ಟಿದ್ದಾರೆಯೇ? ಜನರ ದುಡ್ಡನ್ನು ಜನರಿಗೆ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಕಾಂಗ್ರೆಸ್‌ನವರಿಗೆ ಕಿವಿ, ಮೂಗು, ಚರ್ಮ ದಪ್ಪವಾಗಿದೆ ಎಂದು ಟೀಕಿಸಿದರು.

ಜನರಲ್ಲಿ ದುಡಿದು ತಿನ್ನುವ ಪ್ರವೃತ್ತಿ ಬೆಳೆಸಬೇಕು, ಮನೆಯಲ್ಲಿ ಕೂಡ್ರಿಸಿ ತಿನ್ನಿಸುವ ಪ್ರವೃತ್ತಿ ಸರಿಯಲ್ಲ, ವಿಶ್ವೇಶ್ವರಯ್ಯನಮಹ ಮಹಾನ್ ನಾಯಕರು ಶಿಕ್ಷಣ, ಆರೋಗ್ಯ, ನ್ಯಾಯ ಇವು ಜನರಿಗೆ ಉಚಿತವಾಗಿ ಸಿಗುವಂತಾಗಬೇಕು ಎಂದು ಹೇಳಿದ್ದಾರೆ. ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

Fraud case: ಅಭಿನವ ಹಾಲಶ್ರೀ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ

0

ಬೆಂಗಳೂರು;- ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಜಾಮೀನು ಕೋರಿ ಬೆಂಗಳೂರಿನ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರಕಾರಕ್ಕೆ ನೊಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಬೆಂಗಳೂರಿನ ಮ್ಯಾಜಿಸ್ಟ್ರೇಟ್, ನಗರದ ಸೆಷನ್ಸ್ ನ್ಯಾಯಾಲಯ ಈ ಎರಡು ಕೋರ್ಟ್‍ಗಳೂ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್‍ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ ಮಾಡುತ್ತೇವೆ: ಶಿವಗಂಗಾ ಬಸವರಾಜ್

0

ದಾವಣಗೆರೆ: ಡಿಕೆ ಶಿವಕುಮಾರ್ ಪ್ರಕರಣ ಸಂಬಂಧ ಸಿಬಿಐ ತನಿಖೆನಾದರೂ ಮಾಡಲಿ ಅಥವಾ ಖುದ್ದು ಗೃಹಮಂತ್ರಿ ಅಮಿತಾ ಶಾ ತನಿಖೆ ಮಾಡಲಿ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ ಮಾಡುತ್ತೇವೆ. ನಾವು ಹೆದರುವಂತಹ ಅವಶ್ಯಕತೆ ಇಲ್ಲ. ಲೋಕಸಭಾ ಚುನಾವಣೆ ಬಂತು, ಸಾಲು ಸಾಲು ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ.

ಇದನ್ನು ನೋಡಿ ಸಹಿಸಲಾರದೇ ಬಿಜೆಪಿ ಮಾಡುತ್ತಿರುವ ಕುತಂತ್ರ ಇದು. ಇನ್ನು ಮುಂದೆ ಕಾಂಗ್ರೆಸ್ನವರ ಮನೆ ಮೇಲೆ ಐಟಿ ದಾಳಿ ನಡೆಯುತ್ತದೆ ಎಂದರು. ಕೆಲವೊಂದು ಶಾಸಕರು ಡಿಕೆ ಶಿವಕುಮಾರ್ ಬೆಳಗಾವಿಗೆ ಬಂದಾಗ ಹೋಗಿಲ್ಲ, ಅದಕ್ಕೆ ಬೇರೆಯದ್ದೇ ಕಾರಣ ಇದೆ. ನಾವು 60 ಜನ ಯುವ ಶಾಸಕರು ಡಿಕೆಶಿಯವರ ಬೆಂಬಲಕ್ಕೆ ಇದ್ದೇವೆ. ನಾವೆಲ್ಲಾ ಎಲ್ಲಾ ರೀತಿಯ ಬೆಂಬಲಕ್ಕೆ ಸಿದ್ದರಿದ್ದೇವೆ. ನೂತನ ಶಾಸಕರೆ ಡಿಕೆಶಿ ಬೆಂಬಲಕ್ಕೆ ಇದ್ದೇವೆ. ಹಿರಿಯ ಶಾಸಕರು ಮತ್ತು ನಮ್ಮ ನಡುವೆ ಅಂತರವಿದೆ. ಅದನ್ನೇಲ್ಲಾ ಕೇಳಲು ಆಗಲ್ಲ ಎಂದು ಶಿವಗಂಗಾ ಬಸವರಾಜ್ ಹೇಳಿದರು.

ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.

ಕಳೆದ ಸೋಮವಾರ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಓಪನ್ ಹಾರ್ಟ್ ಸರ್ಜರಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿಯವರು ವಾರ್ಡ್ ಗೆ ಶಿಫ್ಟ್ ಆಗಿದ್ದಾರೆ. ಕಳೆದ ನಾಲ್ಕು ದಿನದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅತೀ ಶೀಘ್ರದಲ್ಲೇ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ – ಬಿವೈ ವಿಜಯೇಂದ್ರ

0

ಬೆಂಗಳೂರು;- ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಅತಿ ಶೀಘ್ರದಲ್ಲೇ ಆಗುತ್ತೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.ಬಿಎಸ್​ ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬಿ.ವೈ.ವಿಜಯೇಂದ್ರಗೆ ಉತ್ತರಿಸಿದ್ದಾರೆ. ಖಂಡಿತ ಇಲ್ಲ ಯಡಿಯೂರಪ್ಪ ಹಿರಿಯ ನಾಯಕರಿದ್ದಾರೆ, ಅವರು ಸ್ಚತಂತ್ರರು. ಅವರಿಗೆ ಯಾವಾಗ ಸರಿ ಅನಿಸುತ್ತೆ ಆಗ ಪ್ರವಾಸ ಮಾಡುತ್ತಾರೆ.

ಬಿಎಸ್​ ಯಡಿಯೂರಪ್ಪ ಎಲ್ಲಿ ಬೇಕಾದಲ್ಲಿ ಪ್ರವಾಸ ಮಾಡುತ್ತಾರೆ. ಯಾರೂ ಕೂಡ ಅದನ್ನ ತಡೆಯುವಂತಹ ಪ್ರಯತ್ನ ಮಾಡುವುದಿಲ್ಲ, ಮಾಡುವ ಅವಶ್ಯಕತೆಯೂ ಇಲ್ಲ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನ ಎರಡೂ ಒಟ್ಟಿಗೆ ಅತಿ ಶೀಘ್ರದಲ್ಲೇ ಆಗುತ್ತೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಸತ್ತರೆ ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ, ಇದು ನೂರಕ್ಕೆ ನೂರು ಸತ್ಯ: ಕಾಂಗ್ರೆಸ್‌ ಶಾಸಕ ರಾಜು ಕಾಗೆ

0

ಬೆಳಗಾವಿ: ನಾವು ಸಾಯುವವರೆಗೂ ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ. ಇದು ನೂರಕ್ಕೆ ನೂರು ಸತ್ಯ. ಸತ್ತರೆ ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಅವರು, ಮರಳಿ ಬಿಜೆಪಿ‌ ಸೇರ್ಪಡೆಯಾಗುತ್ತೀರಾ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಮೈಸೂರು ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ಏನೂ ಇಲ್ಲ, ಪ್ರವಾಸಕ್ಕೆ ಹೋಗಿದ್ದೆವು. ಜೀವನದಲ್ಲಿ ಎಂದೂ ಮೈಸೂರಿಗೆ ಹೋಗಿರಲಿಲ್ಲ. ಹಾಗಾಗಿ, ಜೀವನದಲ್ಲಿ ಇದೇ ಮೊದಲ ಬಾರಿಗೆ ಮೈಸೂರಿಗೆ ಹೋಗಿದ್ದೆವು. ಸಚಿವ ಸತೀಶ ಜಾರಕಿಹೊಳಿ ಅವರು ನಮ್ಮ ಜತೆ ಇರಲಿಲ್ಲ. ಕಥೆ ಕಟ್ಟಿ ನೀವೇ (ಮಾಧ್ಯಮದವರು) ಅದಕ್ಕೆ ಹೆಚ್ಚು ಮಹತ್ವ ಕೊಡುತ್ತಿದ್ದೀರಿ. ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಜನ ಶಾಸಕರಿದ್ದು, ಪ್ರವಾಸ ಮಾಡಿದೆವು. ನಮಗೆ ಸತೀಶ್ ಜಾರಕಿಹೊಳಿ ಭೇಟಿ ಆಗಿಯೇ ಇಲ್ಲ ಎಂದರು.

ಸರ್ಕಾರದ ಪರ, ವಿರುದ್ಧ ಮಾತನ್ನೇ ನಾವು ಆಡಿಲ್ಲ. ಟೂರ್ ಮುಗಿಸಿ ಬಂದಿದ್ದೇವೆ ಅಷ್ಟೇ. ನಾಲ್ಕು ವರ್ಷ ಮತಕ್ಷೇತ್ರದಲ್ಲಿ ಸಾಯಬೇಕು. ಪ್ರತಿ ದಿನ ಜನರ ಸೇವೆ ಮಾಡುತ್ತಾ ಇರುತ್ತೇವೆ. ಎರಡು ದಿನ ವಿಶ್ರಾಂತಿಗೆ ಅಂತ ಹೋಗಿದ್ದೆವು. ಇದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸುವುದು ಬೇಡ. ನಾನು ಆಡಳಿತ ಚುರುಕಾಗಲಿ ಎಂದು ಹೇಳಿದ್ದು ತಪ್ಪಾ?. 5ನೇ ಸಲ ಎಂಎಲ್ಎ ಆಗಿದ್ದೇನೆ. ಜನರ ಬೇಡಿಕೆ, ಅಪೇಕ್ಷೆಗಳು ಹೆಚ್ಚಾಗಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕಿದೆ. ಜನರಿಗೆ ಸ್ಪಂದಿಸಲು ಹೆಚ್ಚು ಅನುದಾನ ಕೊಡಬೇಕು ಎಂದು ಹೇಳಿದ್ದು ತಪ್ಪಾ? ಕ್ಷೇತ್ರದ ಅಭಿವೃದ್ಧಿ ಪ್ರಶ್ನೆ ಬಂದಾಗ ಮಾತಾಡಬೇಕಲ್ಲ ಎಂದರು.

ಎಲ್ಲಾ ಶಾಸಕರನ್ನು ಸಮಾನ ದೃಷ್ಟಿಯಿಂದ ನಮ್ಮ ಪಕ್ಷ ನೋಡುತ್ತಿದೆ. 135 ಶಾಸಕರನ್ನು ಮನೆ ಮಕ್ಕಳಂತೆ ಸಿಎಂ, ಡಿಸಿಎಂ ನೋಡಿಕೊಳ್ಳುತ್ತಿದ್ದಾರೆ. ಸಚಿವರಾದ ಸತೀಶ್​ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​, ಶಾಸಕಾರ ಲಕ್ಷಣ ಸವದಿ, ಬಾಬಾಸಾಹೇಬ್ ಪಾಟೀಲ್ ಸೇರಿ ನಾವೆಲ್ಲಾ ಒಂದೇ ಮನೆಯ ಮಕ್ಕಳು. ಯಾವುದೇ ವ್ಯತ್ಯಾಸ ನಮ್ಮ ಬಳಿ ಇಲ್ಲ ಎಂದು ತಿಳಿಸಿದರು.

ಮಾಜಿ ಸಿಎಂ ಜಗದೀಶ ಶೆಟ್ಟರ್ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ಬಗ್ಗೆ ಮಾತನಾಡಿ ಇಬ್ಬರು ಭೇಟಿಯಾಗಿರುವುದು ಅವರ ವೈಯಕ್ತಿಕ ವಿಚಾರ. ನನಗೆ ಅದೂ ಗೊತ್ತೂ ಇಲ್ಲ. ರಾಜಕೀಯದಲ್ಲಿ ಯಾರೂ ಶತ್ರುಗಳೂ ಇಲ್ಲ, ಮಿತ್ರರೂ ಇಲ್ಲ. ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿಗೆ ಕರೆ ತರುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಆ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ನಾನು ಇನ್ನೂ ಸಣ್ಣವನು ಎಂದಷ್ಟೇ ಹೇಳಿದರು.

ಸರ್ಕಾರ ಅಭಿವೃದ್ದಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಬಸವೇಶ್ವರ ಏತನೀರಾವರಿ ಯೋಜನೆಗೆ ಇನ್ನೂ 100 ಕೋಟಿ ರೂ ಖರ್ಚು ಮಾಡಿದರೆ, ರೈತರಿಗೆ ತುಂಬಾ ಅನುಕೂಲ ಆಗಲಿದ್ದು, ದೇಶಕ್ಕೂ ಆಸ್ತಿ ಆಗಲಿದೆ‌. ಇದಕ್ಕೆ ಸಹಕಾರ ಮಾಡಿ ಎಂದು ಕೇಳಿದ್ದೇವೆ. ಈ ಬಗ್ಗೆ ಸಭೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದೇವೆ. ಇನ್ನೂ 20 ವರ್ಷ ನಾವೇ ಆಡಳಿತ ಮಾಡುತ್ತೇವೆ. ಶರೀರ ಎಂದ ಮೇಲೆ ನೆಗಡಿ, ಕೆಮ್ಮು, ಜ್ವರ ಇರ್ತಾವೆ. ಅದನ್ನೆಲ್ಲಾ ಸರಿ ಮಾಡಿಕೊಳ್ಳುತ್ತೇವೆ. ಮನೆ ಎಂದ ಮೇಲೆ ಸಣ್ಣ, ಪುಟ್ಟ ವ್ಯತ್ಯಾಸ ಇರುತ್ತವೆ, ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ ಎಂದು ರಾಜು ಕಾಗೆ ಉತ್ತರಿಸಿದರು.

error: Content is protected !!