Home Blog Page 3218

ಗಂಡ-ಹೆಂಡತಿ ನಡುವೆ ಜಗಳ: ಮಗನ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

0

ಮಂಡ್ಯ: ಗಂಡ-ಹೆಂಡತಿ ನಡುವೆ ಜಗಳ ಶುರುವಾಗಿ ಮಗನ ಜೊತೆ ಸೇರಿ ಗಂಡನನ್ನೇ ಪತ್ನಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಚಾಪುರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಚಾಪುರದೊಡ್ಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಉಮೇಶ್ (50) ಎನ್ನಲಾಗಿದೆ.

ಪತ್ನಿ ಸವಿತಾ, ಮಗ ಶಶಾಂಕ್ ರಿಂದ ಕೃತ್ಯವೆಸಗಲಾಗಿದೆ. ಮೂರು ತಿಂಗಳ ಇದೆ ಗಂಡನನ್ನ ತೊರೆದು ಬೆಂಗಳೂರಿನಲ್ಲಿ ಮಗನ ಜೊತೆ ವಾಸವಾಗಿದ್ದ ಸವಿತಾ ರಾತ್ರಿ ಪಿತೃಪಕ್ಷ ಹಬ್ಬ ಮಾಡಲು ಊರಿಗೆ ಬಂದಿದ್ದ ಸವಿತಾ. ಚಾಪುರದೊಡ್ಡಿ  ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ಪತ್ನಿಯನ್ನ ಮನೆಯೊಳಗೆ ಸೇರಿಸದರು. ಈ ವೇಳೆ ಮತ್ತೆ ಪತ್ನಿ ಸವಿತಾ ಹಾಗೂ ಮಗ ಶಶಾಂಕ್ ಅವರುಗಳೊಂದಿಗೆ ಜಗಳ ನಡೆದು ದೊಣ್ಣೆ ಹಾಗೂ ಮಚ್ಚುಗಳಿಂದ ಇಬ್ಬರು ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ.

ತೀವ್ರ ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಉಮೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಸವಿತಾ ಹಾಗೂ ಶಶಾಂಕ್ ಸ್ಥಳದಿಂದ ಪರಾರಿಯಾಗಿದ್ದರು. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಇನ್ಸ್ಪೆಕ್ಟರ್ ವೆಂಕಟೇಗೌಡ, ಬೆಸಗರಹಳ್ಳಿ ಪೋಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ: ಡಾ. ಶರಣಪ್ರಕಾಶ ಪಾಟೀಲ್

0

ಕಲಬುರಗಿ: ಸೇಡಂ ಮತಕ್ಷೇತ್ರದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್ ರ ಹೆಸರು ಪ್ರಸ್ತಾಪಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಈಗಾಗಲೇ ನಾನು ಮಾಧ್ಯಮದವರಿಗೆ ಈ ಬಗ್ಗೆ ಹೇಳಿದ್ದೇನೆ. ಆ ವ್ಯಕ್ತಿ ಯಾರು ಎನ್ನುವುದು ನನಗೆ ಗೊತ್ತಿಲ್ಲ. ಅವರ ಮುಖವನ್ನು ನೋಡುತ್ತಿರುವುದು ಇದೇ ಮೊದಲ ಬಾರಿಗೆ. ನನಗೂ ಅದಕ್ಕೂ ಸಂಬಂಧ ಇಲ್ಲ‌” ಎಂದರು. ಸುಖಾ ಸುಮ್ಮನೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನನಗೆ ಗೊತ್ತಿಲ್ಲ. ಯಾಕೆ ನನ್ನ ಹೆಸರು ಹೇಳಿದ ಎನ್ನುವುದೂ ಗೊತ್ತಿಲ್ಲ. ಪೊಲೀಸ್ ತನಿಖೆಯಲ್ಲಿ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಸೂಸೈಡ್ ಕೇಸ್’ಗೆ ಬಿಗ್ ಟ್ವಿಸ್ಟ್

0

ಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು…ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದ. ಆದ್ರೆ, ಇದೀಗ ಈ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸ್ವತಃ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲಾಗಿದೆ..

ತನ್ನ ಪತಿ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಲಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪತಿಯ ಆತ್ಮಹತ್ಯೆ ಕೇಸ್ ನಲ್ಲಿ ಯಾರ ಮೇಲೆ ಕೂಡಾ ಅನುಮಾನ ಇಲ್ಲ ಎಂದು ಉಲ್ಲೇಖವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ನಾನೇ ಪ್ರಧಾನಿ ಮೋದಿ, ಅಮಿತ್ ಶಾಗೆ ಹೇಳಿ ರಾಜೀನಾಮೆ ಕೊಟ್ಟೆ: K.S.ಈಶ್ವರಪ್ಪ

0

ರಾಯಚೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಶರಣಪ್ರಕಾಶ್​​ ಪಾಟೀಲ್ ರಾಜೀನಾಮೆಗೆ K.S.ಈಶ್ವರಪ್ಪ ಆಗ್ರಹಿಸಿದ್ದಾರೆ. ನನ್ನ ಹೆಸರು ಬರೆದಿಟ್ಟು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಕಾಂಗ್ರೆಸ್​ ನಾಯಕರು ನನ್ನ ರಾಜೀನಾಮೆಗೆ ಪಟ್ಟು ಹಿಡಿಯಲಿಲ್ಲ.

ನಾನೇ ಪ್ರಧಾನಿ ಮೋದಿ, ಅಮಿತ್ ಶಾಗೆ ಹೇಳಿ ರಾಜೀನಾಮೆ ಕೊಟ್ಟೆ. ತನಿಖೆ ಬಳಿಕ ನಿರ್ದೋಷಿ ಎಂದು ತೀರ್ಮಾನ ಆಯ್ತು. ‘ನಾನು ಸಚಿವ ಶರಣಪ್ರಕಾಶ್​​ ಪಾಟೀಲ್​ ದೋಷಿ ಅಂತಾ ಹೇಳಲ್ಲ, ಅವರ ಹೆಸರು ಬರೆದಿಟ್ಟು ಸತ್ತಿರುವುದರಿಂದ ರಾಜೀನಾಮೆ ಕೊಡಲಿ. ನಿರ್ದೋಷಿಯಾದ ಬಳಿಕ ನಂತರ ಮಂತ್ರಿ ಆಗಲಿ ಎಂದರು.

Breaking: ಖಾಕಿ ಎದುರೇ ಸಿಗರೇಟ್ ಸೇದಿದ ರೌಡಿ – ಕ್ಯಾರೆ ಎನ್ನದ ಪೊಲೀಸ್ ಸಿಬ್ಬಂದಿ

0

ಬೆಂಗಳೂರು;- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧೂಮಪಾನಿಗಳಿಂ ಸಾರ್ವಜನಿಕರಿಗೆ ತೊಂದರೆಯಾಗ್ತಿದೆ. ಹೀಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಈಗಾಗಲೆ 960 ಕ್ಕೂ ಹೆಚ್ಚು ಕೋಟ್ಪಾ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.ಕೆಳ ಹಂತದ ಸಿಬ್ಬಂದಿಯಿಂದ ಕಾಯ್ದೆಯ ಪಾಲನೆಯಾಗ್ತಿದ್ಯಾ..?ಈ ವಿಡಿಯೋ ನೋಡಿದ್ರೆ ಇಲ್ಲ ಎನ್ನಬಹುದು. ಹೌದು ಕೋಳ ಹಾಕಿಸಿಕೊಂಡ ರೌಡಿ, ಪೊಲೀಸರ ಮುಂದೆ ಸಿಗರೇಟ್ ಸೇದುತ್ತಿದ್ದಾನೆ.

ಕೇಸ್ ಗೆಂದು ಕರೆ ತಂದಾಗ ಪೊಲೀಸರ ಮುಂದೆಯೇ ರೌಡಿಯೊಬ್ಬನ ಕೃತ್ಯ ನಡೆದಿದೆ. ರಾಜಾರೋಷವಾಗಿ ಸಿಗರೇಟ್ ಸೇದುತ್ತಿದ್ದರು ಸಿಬ್ಬಂದಿ ಕ್ಯಾರೆ ಎಂದಿಲ್ಲ. ಕುಖ್ಯಾತ ರೌಡಿಶೀಟರ್ ರಾಹುಲ್ @ ಸ್ಟಾರ್ ರಾಹುಲ್ ನಿಂದ ಕೃತ್ಯ ನಡೆದಿದೆ. ಇನ್ನೂ ಮೀಸೆ ಚಿಗುರದ ಯುವಕ ಅದಾಗಲೇ ಹತ್ತಾರು ಕೇಸುಗಳನ್ನ ಮಾಡಿರುವ ನಟೋರಿಯಸ್.

ಮತ್ತೊಬ್ಬ ನಟೋರಿಯಸ್ ರೌಡಿ ಕುಳ್ಳು ರಿಜ್ವಾನ್ ಸಹಚರನಾಗಿರುವ ಸ್ಟಾರ್ ನವೀನ್ . ಈ ಹಿಂದೆ ಪೊಲೀಸರಿಗೆ ತಾಕತ್ ಇದ್ರೆ ನನ್ನ ಹಿಡಿರಿ ಎಂದು ವಿಡಿಯೋ ಬಿಟ್ಟಿದ್ದ. ವೇಳೆ ಆಗಿನ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ಇನ್ಸ್ ಪೆಕ್ಟರ್ ಗಳ ತಂಡ ಅವನನ್ನ ಹುಡುಕಿ ಕಾಲಿಗೆ ಗುಂಡು ನುಗ್ಗಿಸಿದ್ದರು ಇಂತಹ ನಟೋರಿಯಸ್ ರೌಡಿಗಳಿಗೆ ಯಾವುದೇ ಕೋಟ್ಪಾ ಕಾಯ್ದೆ ಅನ್ವಯವಾಗಲ್ವ …? ಎಂಬ ಪ್ರಶ್ನೆ ಮೂಡಿದೆ.ಸದ್ಯ ಸ್ಟಾರ್ ರಾಹುಲ್ ವಿಡಿಯೋ ನೋಡಿಯಾದ್ರು ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ.

ಹಾಡಹಗಲೇ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ..! ಆರೋಪಿಯ ಬಂಧನ

0

ತುಮಕೂರು: ಆಟೋ ಚಾಲಕನೊಬ್ಬ ಹಾಡಹಗಲೇ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ಸೈಯದ್ (40) ಎಂದು ಗುರುತಿಸಲಾಗಿದ್ದು, ಈತ ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಆರೋಪಿ ಸೈಯದ್, ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನ ಪುಸಲಾಯಿಸಿದ್ದಾನೆ.

ಬಳಿಕ ತನ್ನ ಆಟೋದಲ್ಲಿ ನಿರ್ಜನಕ್ಕೆ ಪ್ರದೇಶಕ್ಕೆ ಕರೆದೊಯ್ದು ಆಟೋದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇತ್ತ ಸೈಯದ್ ಬಾಲಕಿಯನ್ನು ಕರೆದೊಯ್ದಿರುವ ವಿಚಾರ ತಿಳಿದು ಸಾರ್ವಜನಿಕರು ಆತನನ್ನು ಹಿಂಬಾಲಿಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಇತ್ತ ಬಾಲಕಿಯನ್ನ ರಕ್ಷಿಸಿ ಆರೋಪಿಯನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಾಲಕಿ ಅನಾಥಳಾಗಿದ್ದು, ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದಳು.

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

0

ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆಉತ್ತರಿಸಿದ ಸಚಿವರು, ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ,ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಡಿ ಧ್ಚನಿಯಲ್ಲಿ ಸ್ಪಷ್ಟಪಡಿಸ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವರು ಹೇಳಿದರು.

ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೆ ಕೇಳಿ ಎಂದ ಹೆಬ್ಬಾಳಕರ್, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ
ಡಿ.ಕೆ. ಶಿವಕುಮಾರ್ ರನ್ನು ಯಾಕೆ ಎಳೆದು ತರ್ತೀರಾ ಎಂದು ಮಾಧ್ಯಮದವರನ್ನ ಪ್ರಶ್ನಿಸಿದರು. ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಎಂಎಲ್ಎಗಳು ಗೆಲ್ಲುವುದಕ್ಕೆ ತಮ್ಮದೇ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು.

ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ : ಡಿಸಿಎಂ ಡಿಕೆಶಿ

0

ಬೆಳಗಾವಿ: ನಾನು ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಬಯಕೆ ಇದೆ. ಆದರೆ ಪಕ್ಷದ ಹೈಕಮಾಂಡ್ ಯಾವಾಗ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎನ್ನುವುದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ನಮಗೆ ಐದು ವರ್ಷ ಆಡಳಿತ ಮಾಡಲು ಅವಕಾಶ ನೀಡಿದ್ದಾರೆ. ಪಕ್ಷದ ಹೈಕಮಾಂಡ್ ಯಾವಾಗ ತೀರ್ಮಾನ ಮಾಡುತ್ತಾರೆ ಅವರು ಮಾಡುತ್ತಾರೆ. ನಾವು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಜನರ ಆಸೆ, ಬಯಕೆ, ನಾನು ಸಿಎಂ ಆಗಬೇಕು ಎನ್ನುವುದು ಇರುತ್ತದೆ. ಆ ವಿಚಾರ ಆಮೇಲೆ ನಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.

ಮೊದಲು ರಾಜ್ಯದ ಜನರು ನಿರೀಕ್ಷೆ ಮಾಡಿದ ಹಾಗೆ ನಾವು ಆಡಳಿತ ನೀಡಬೇಕು. ಪ್ರಸಕ್ತ ವರ್ಷ ಸ್ವಲ್ಪ ಮಳೆಯಾಗಿದೆ. ಒಂದು ದಿನ ಮಳೆ ಬರದಿದ್ದರೆ ಸರಕಾರಕ್ಕೆ ಒಂದು ಸಾವಿರ ಕೋಟಿ ರೂ. ನಷ್ಟವಾಗುತ್ತದೆ. ವಿದ್ಯುತ್ ಬಿಲ್ ಹೆಚ್ಚಾಗುತ್ತದೆ. ಆದರೆ ನಾವು ರೈತರಿಗೆ ಕಡಿಮೆ ದರದಲ್ಲಿ ನೀಡುತ್ತೇವೆ. ಇಂಧನ ಸಚಿವ ಕೆ.ಜೆ.ಜಾಜ್೯ ಅವರು ಅದನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದರು.

ಈ ಭಾಗದಲ್ಲಿ ಮಳೆ ಬರಲಿ, ಬಾರದೆ ಇರಲಿ. ಮಲ್ಲಪ್ರಭಾ ನದಿ ಒಂದು ಬಿಟ್ಟರೆ ಎಲ್ಲ ಜಲಾಶಗಳಲ್ಲಿ ನೀರಿನ ಸಂಗ್ರಹವಾಗಿದೆ. ಹಳೆ ಮೈಸೂರಿನ ಭಾಗದವರನ್ನು ದೇವರೆ ಕಾಪಾಡಬೇಕು ಎಂದರು. ಈ ಹಿಂದೆ ನಾವು ಇಂಧನ ಸಚಿವನಾಗಿದ್ದಾಗ ಸಾಕಷ್ಟು ಬದಲಾವಣೆ ತಂದಿದ್ದೇನೆ. ರೈತರಿಗೆ ಆರು ಗಂಟೆ ವಿದ್ಯುತ್ ಕೊಡುತ್ತಿದ್ದೇವು. ಅದರೆ ಈಗ ನಮ್ಮ ಸರಕಾರ ಮತ್ತೆ ಬಂದ ಮೇಲೆ ಏಳು ಗಂಟೆ ಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಮಾತನಾಡಿ ತೀರ್ಮಾನ ಮಾಡಿದ್ದೇವು ಎಂದರು.

ರಾಜ್ಯ ಸರಕಾರ ನೀರು ಉಳಿತಾಯ ಮಾಡಲು ದೊಡ್ಡ ಸವಾಲು ಇದೆ. ನೀರಾವರಿ ಬಳಕೆದಾರ ಸಂಘಗಳನ್ನು ಕ್ರಿಯಾಶೀಲ ಮಾಡಿದ್ದೇನೆ. ಎತ್ತಿನಹೋಳೆ ನೀರು ತರಲು ನಿಯಮ ಮಾಡಲಾಗಿದೆ. ಅದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರುವರೆಗೂ ಹೋಗಬೇಕು. ಮಧ್ಯದಲ್ಲಿ ಯಾರಾದರೂ ಪೈಪ್ ಲೈನ್ ಹಾಕಿದರೆ ಕಷ್ಟವಾಗುತ್ತದೆ. ಅದಕ್ಕಾಗಿ ಕಾನೂನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಗಡಿಭಾಗದಲ್ಲಿರುವವರಿಗೆ ಮಹಾರಾಷ್ಟ್ರ ಸರಕಾರ ಆರೋಗ್ಯ ಇಲಾಖೆ ಯೋಜನೆ ಜಾರಿಗೊಳಿಸುವ ಕುರಿತ ಪ್ರಶ್ನೆ ಉತ್ತರಿಸಿದ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಈ ವಿಷಯವನ್ನು ಚರ್ಚೆ ನಡೆಸಿ ಸೂಕ್ತ ಉತ್ತರ ಮಹಾರಾಷ್ಟ್ರ ಸರಕಾರಕ್ಕೆ ನೀಡಲಾಗುವುದು ಎಂದರು.

ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಳಗಾವಿಗೆ ಸ್ಥಳಾಂತರಿಸುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗಡಿ ಭಾಗ ಉಳಿಸಲು ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಲಾಗಿದೆ. ಸುರಕ್ಷಿತ ಕನ್ನಡ ನಾಡು, ಕರ್ನಾಟಕದ ಎರಡನೇ ರಾಜ್ಯಧಾನಿ ಎಂದು ಕರೆಯಲಾಗುತ್ತಿದೆ ಎಂದರು.

ವನ್ಯಜೀವಿಗಳ ಅಕ್ರಮ ಪೋಷಣೆ: ಸಚಿವ ಮಲ್ಲಿಕಾರ್ಜುನ ವಿರುದ್ಧದ ಪ್ರಕರಣ ರದ್ದು

0

ಬೆಂಗಳೂರು;- ವನ್ಯಜೀವಿಗಳನ್ನು ಅಕ್ರಮವಾಗಿ ಪೋಷಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಮಲ್ಲಿಕಾರ್ಜುನ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.ಜತೆಗೆ, ಇಡೀ ಪ್ರಕ್ರಿಯೆಯನ್ನು ತನಿಖಾಧಿಕಾರಿಗಳು ಬುಡಮೇಲು ಮಾಡಿದ್ದಾರೆ. ಪ್ರಕರಣದಲ್ಲಿ ಸರಿಪಡಿಸಲಾಗದಷ್ಟು ದೋಷಗಳು ಕಂಡು ಬಂದಿವೆ. ಹಾಗಾಗಿ ಪ್ರಕರಣದ ವಿಚಾರಣೆಗೆ ಅನುಮತಿ ನೀಡಿದಲ್ಲಿ ಕಾನೂನಿನ ಪ್ರಕ್ರಿಯೆ ದುರುಪಯೋಗ ಪಡಿಸಿದಂತಾಗಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಎಸ್. ಎಸ್. ಮಲ್ಲಿಕಾರ್ಜುನ, ಅವರ ಸಹೋದರ ಎಸ್. ಎಸ್. ಗಣೇಶ್ ಹಾಗೂ ಸಂಪಣ್ಣ ಮುತಾಲಿಕ್ ಹಾಗೂ ಜಿ. ಎಂ. ಕರಿಬಸಪ್ಪ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.ಅಲ್ಲದೆ, ಪ್ರಕರಣ ದಾಖಲಿಸುವಲ್ಲಿ ವನ್ಯಜೀವಿ ಅಪರಾಧ ಕಾಯಿದೆಯ ನಿಯಮಗಳನ್ನು ಅರಣ್ಯಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಲ್ಲಂಘಿಸಿದ್ದಾರೆ. ಜತೆಗೆ, ಅರಣ್ಯಾಧಿಕಾರಿಗಳ ದೂರಿನ ಆಧಾರದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಾಗ್ನಿಜೆನ್ಸ್ ಪಡೆದು ತನಿಖೆಗೆ ಆದೇಶಿಸುವಲ್ಲಿ ಲೋಪವೆಸಗಿದೆ ಎಂದು ನ್ಯಾಯಾಲಯ ಹೇಳಿದೆ.

ಬಿಜೆಪಿಗೆ ಬಿಗ್ ಶಾಕ್: ಇಂದು ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ

0

ಬೆಂಗಳೂರು;- ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮಾಜಿ ಶಾಸಕಿ, ಪೂರ್ಣಿಮಾ ಶ್ರೀನಿವಾಸ್ ಅವರು ಇಂದು ಸೇರ್ಪಡೆಯಾಗಲಿದ್ದಾರೆ. ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿರುವ ಪೂರ್ಣಿಮಾ ಶ್ರೀನಿವಾಸ್. ಪೂರ್ಣಿಮಾ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆ.

ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಕ್ಕೆ ಕಾಡುಗೊಲ್ಲ ಸಮುದಾಯದಿಂದ ವಿರೋಧ ವ್ಯಕ್ತವಾಗಿದೆ. ‘ಕಾಡುಗೊಲ್ಲ ವಿರೋಧಿ’ ಎಂದು ಪೋಸ್ಟ್ ಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿರುವ ಸಮುದಾಯ. ಕಾಡುಗೊಲ್ಲ ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ಪಡೆಯದೇ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಕ್ಕೆ ಅಸಮಾಧಾನ. ಕಾಡುಗೊಲ್ಲ ಸಮುದಾಯದ ನಾಯಕರ ಅಸಮಾಧಾನ ನಡುವೆಯೂ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಪೂರ್ಣಿಮಾ ಶ್ರೀನಿವಾಸ.

error: Content is protected !!