Home Blog Page 3220

ಕೆರೆಯ ಕುಡಿಯುವ ನೀರು ಭತ್ತದ ಗದ್ದೆಗೆ: ಅಧಿಕಾರಿಗಳ ದಿವ್ಯ ಮೌನ

0

ಬಳ್ಳಾರಿ;- ನಗರದಲ್ಲಿ ಕುಡಿಯುವ ನೀರಿಗೆ ಮಾತ್ರ ರಕ್ಷಣೆ ಇಲ್ಲದಂತಾಗಿದೆ. ಕುಡಿಯುವ ಕೆರೆ ನೀರು ಭತ್ತದ ಗದ್ದೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ. ಕುಡಿಯಲು ಸಂಗ್ರಹಿಸಿರುವ ನೀರನ್ನು ಕೆಲ ಸ್ಥಳೀಯರ ಪ್ರಭಾವದಿಂದ ಭತ್ತದ ಗದ್ದೆಗೆ,

ಬಳಕೆ ಮಾಡಲಾಗುತ್ತಿದೆ. ಪೈಪ್ ಹಾಕುವ ಮುಖಾಂತರ ಕೆರೆಯ ನೀರನ್ನು ಭತ್ತದ ಗದ್ದೆಗೆ ರವಾನೆ ಮಾಡಲಾಗಿದೆ. ಕೆರೆಯ ಸುತ್ತ ಸೂಕ್ತ ರಕ್ಷಣೆಯಿಲ್ಲ, ಸ್ಥಳೀಯ ಆಡಳಿತದ ಪ್ರಭಾವದಿಂದ ಸ್ಥಳೀಯರು ಹೆಸರು ಹೇಳುತ್ತಿಲ್ಲ. ಈ ಕುರಿತು ಅಧಿಕಾರಿಗಳು ಗಮನ ಹರಿಸದೆ ಹೋದರೆ ಬೇಸಿಗೆಗೆ ಕುಡಿಯುವ ನೀರಿನ ಅಭಾವ ಗ್ಯಾರಂಟಿ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಬಿಜೆಪಿ ಷಡ್ಯಂತ್ರಕ್ಕೆ ಕೋರ್ಟ್‌ನಲ್ಲಿ ಉತ್ತರ ಕೊಡುವೆ: ಡಿಕೆಶಿ

0

ಬೆಂಗಳೂರು;- ಬಿಜೆಪಿ ಷಡ್ಯಂತ್ರಕ್ಕೆ ಉತ್ತರ ಕೊಡುವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ ಕುರಿತಂತೆ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇ. 90 ರಷ್ಟು ತನಿಖೆ ಪೂರ್ಣಗೊಳಿಸಿದ್ದೇವೆ ಎಂದು ಸಿಬಿಐ ಹೇಳಿದೆ. ಆದರೆ, ನನ್ನದು ಹಾಗೂ ನನ್ನ ಕುಟುಂಬದವರ ಆಸ್ತಿ ಯಾವುದು ಎಂಬ ಬಗ್ಗೆ ವಿವರವನ್ನು ಸಿಬಿಐ ಹೇಳಬೇಕಿದೆ.

ಅದಕ್ಕಾಗಿ ನನ್ನನ್ನು ಕರೆಸು ಮತ್ತು ನನ್ನಿಂದ ಮಾಹಿತಿಯನ್ನೂ ಪಡೆದಿಲ್ಲ. ಹೀಗಿರುವಾಗ ಶೇ. 90ರಷ್ಟು ತನಿಖೆ ಹೇಗೆ ಪೂರ್ಣಗೊಂಡಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ದುರುದ್ದೇಶ ಪೂರ್ವಕವಾಗಿ, ರಾಜಕೀಯ ಉದ್ದೇಶದಿಂದ ನನ್ನ ವಿರುದ್ಧ ತನಿಖೆಗೆ ಆದೇಶ ನೀಡಿದರು. ಆದರೆ, ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿಯಿಲ್ಲ ಎಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದೆ. ಈಗ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. ನನಗೆ ನ್ಯಾಯಾಲಯದ ಮೇಲೆ ಗೌರವ, ನಂಬಿಕೆಯಿದೆ. ನನ್ನ ವಿರುದ್ಧ ಷಡ್ಯಂತ್ರಕ್ಕೆ ಸೂಕ್ತ ಸಂದರ್ಭದಲ್ಲಿ ಉತ್ತರ ನೀಡುತ್ತೇನೆ. ಎಲ್ಲದಕ್ಕೂ ಕಾನೂನು ಚೌಕಟ್ಟಿನಲ್ಲೇ ಹೋರಾಟ ಮಾಡುತ್ತೇನೆ ಎಂದಿದ್ದಾರೆ

Bengaluru: ರುಪ್ಸಾ ಸಂಘಟನೆ ಹೆಸರಿಗಾಗಿ 2 ಬಣಗಳ ಕಿತ್ತಾಟ

0

ಬೆಂಗಳೂರು ;- ಖಾಸಗಿ ಶಾಲೆಗಳ ಆಡಳಿತ ಮತ್ತು ಒಳಿತಿಗಾಗಿ ಮೀಸಲಿರುವ ರೂಪ್ಸಾ ಸಂಘಟನೆಗಾಗಿ ಎರಡು ಬಣಗಳಿಂದ ಗುದ್ದಾಟ ನಡೆದಿದೆ. ಖಾಸಗೀ ಶಾಲಾ ಸಂಘಟನೆ ಹೆಸರಿಗಾಗಿ ಎರಡು ಬಣಗಳಿಂದ ಪೀಕಲಾಟ ಶುರುವಾಗಿದೆ. ಒಂದು ಕಡೆ ಲೋಕೇಶ್ ತಾಳಿಕಟ್ಟೆ ಮತ್ತೊಂದು ಕಡೆ ಆಲನೂರಿ ಲೇಪಾಕ್ಷಿಯಿಂದ ಹೋರಾಟ ನಡೆಯುತ್ತಿದೆ.

ರುಪ್ಸಾ (RUPSA) ಸಂಘಟನೆ ಹೆಸರಿಗಾಗಿ ಎರಡು ಬಣಗಳು ಕೋರ್ಟ್ ಮೆಟ್ಟಿಲೇರಿವೆ. ರುಪ್ಸಾ ಸಂಘಟನೆ ನಿಮ್ಮದಲ್ಲ ನಮ್ಮದು ಎಂದು ಕೆಸರೆರಚಾಟ ನಡೆಯುತ್ತಿದೆ. ಸಧ್ಯ ಇದೀಗ ಈ ಕೆಸರೆರಚಾಟ ಮತ್ತೊಮ್ಮೆ ಕೋರ್ಟ್ ಗೆ ಹೋಗುವ ಸಾಧ್ಯತೆ ಇದೆ.

ಹೌದು, ಆಲನೂರು ಲೇಪಾಕ್ಷಿ ಎಂಬುವವರಿಂದ ರುಪ್ಸಾ ಕರ್ನಾಟಕ ಸಂಘಟನೆ ಹೆಸರು ಬಳಸಿಕೊಂಡು ಅಧಿಕಾರಿಗಳ ಬಳಿ ಧಮ್ಕಿ ಆರೋಪ ಕೇಳಿ ಬಂದಿದೆ. ರುಪ್ಸಾ ಸಂಘಟನೆಯಲ್ಲಿ ಸದಸ್ಯರೇ ಅಲ್ಲದಿದ್ರೂ ನಕಲಿ ಪತ್ರ ಬಳಕೆ ಮಾಡಿ ಸಿಎಂ ಗೆ ದೂರು ನೀಡಿದ್ದಾರೆ. ಆಲನೂರು ಲೇಪಾಕ್ಷಿಯಿಂದ ನಕಲಿ ರುಪ್ಸಾ ಕರ್ನಾಟಕ ಲೆಟರ್ ಮೂಲಕ ಪತ್ರ ಬರೆದಿದ್ದು, ಹೀಗಾಗಿ ರುಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆಯಿಂದ ದೂರು ದಾಖಲಾಗಿದೆ. ಪಶ್ಚಿಮ ವಿಭಾಗದ ಪೊಲೀಸ್ ಉಪ ಆಯುಕ್ತರಿಗೆ ದೂರು ತಾಳಿಕಟ್ಟೆ ಸಲ್ಲಿಸಿದ್ದಾರೆ. ರುಪ್ಸಾ ಸಂಘಟನೆ ಹೆಸರು ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳ ಬಳಿ ಲಂಚ ಕೇಳಲಾಗ್ತಿದೆ. ಆಲನೂರು ಲೇಪಾಕ್ಷಿ ರುಪ್ಸಾ ಕರ್ನಾ ಸಂಘಟನೆಯ ಸದಸ್ಯರೇ ಅಲ್ಲ. ಹೀಗಾಗಿ ಅವರ ವಿರುದ್ದ ಕೂಡಲೇ ಕ್ರಮಕ್ಕೆ ಮುಂದಾಗುವಂತೆ ಒತ್ತಾಯ ಮಾಡಲಾಗಿದೆ.

Bengaluru: ಡಿ.4 ರಿಂದ 15 ದಿನಗಳ ಕಾಲ ಚಳಿಗಾಲ ಅಧಿವೇಶನ

0

ಬೆಂಗಳೂರು;- ರಾಜ್ಯ ಸರ್ಕಾರವು ಡಿಸೆಂಬರ್ 4ರಿಂದ ಡಿಸೆಂಬರ್ 15 ರವರೆಗೆ ಚಳಿಗಾಲ ಅಧಿವೇಶನ ನಡೆಸುವುದಾಗಿ ಹೇಳಿದೆ.ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಈ ಹಿಂದೆ ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭಿಸಿ, ಬೆಂಗಳೂರಿನಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ನಡೆದಿತ್ತು ಎನ್ನಲಾಗಿತ್ತು. ಆದರೆ ನಿನ್ನೆ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸುವುದಾಗಿ ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಲಾಗಿದೆ.

ಆಧಾಯಕ್ಕಾಗಿ ಜಾಹೀರಾತಿಗೆ ಮಣೆಹಾಕಿದ ಪಾಲಿಕೆ : ಹೈಕೋರ್ಟ್ ಆದೇಶಕ್ಕೆ ಇಲ್ಲದ ಬೆಲೆ

0

ಬೆಂಗಳೂರು;- ನಗರದಲ್ಲಿ ಚಿಕ್ಕ ಪುಟ್ಟ ಕಾರ್ಯಕ್ರಮಗಳಿಂದ ಆರಂಭಿಸಿ, ಅಂಗಡಿಮುಂಗಟ್ಟುಗಳವರೆಗೆ ಎಲ್ಲದಕ್ಕೂ ಜಾಹೀರಾತು ಫಲಕ ಹಾಕೋದು ಕಾಮನ್. ಇದರಲ್ಲಿ ನೂರು ಅಧಿಕೃತವಾದರೇ, ಸಾವಿರ ಅನಧಿಕೃತ. ಆದರೆ ನಗರದಲ್ಲಿ ಅನಧಿಕೃತ ಜಾಹೀರಾತಿಗೆ ಕಡಿವಾಣ ಹಾಕಲು ಹಾಗೂ ಬಿಬಿಎಂಪಿ ಖಜಾನೆ ಭರ್ತಿ ಮಾಡಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಇದಕ್ಕಾಗಿ ಜಾಹೀರಾತು ಬೈಲಾಗೆ ತಿದ್ದುಪಡಿ ಮಾಡಲು ಬಿಬಿಎಂಪಿ ಸಿದ್ಧವಾಗಿದೆ. ನಗರದ ಸೌಂದರ್ಯ ಮತ್ತು ಪರಿಸರ ಹಾಳು ಮಾಡುತ್ತಿರುವ ಜಾಹೀರಾತು ಪ್ರದರ್ಶನವನ್ನು ಈ ಹಿಂದೆ ನಿಷೇಧಿಸಲಾಗಿತ್ತು. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಕೆಲ ಸಂದರ್ಭಗಳನ್ನು ಹೊರತುಪಡಿಸಿ ಜಾಹೀರಾತು ಪ್ರದರ್ಶನ ಸಂಪೂರ್ಣ ನಿಷೇಧಿಸಲಾಗಿದೆ.

ಅದರೂ ಕೂಡ ರಾಜಕೀಯ ಪಕ್ಷಗಳು ಸೇರಿ ಖಾಸಗಿಯವರು ಎಲ್ಲೆಂದರಲ್ಲಿ ಫ್ಲೆಕ್ಸ್ , ಬ್ಯಾನರ್‌ ಗಳನ್ನು ಅಳವಡಿಸಿ ಬಿಬಿಎಂಪಿ ನಿಯಮ ಹಾಗೂ ಹೈಕೋರ್ಟ್ ಆದೇಶ ಉಲ್ಲಂಘನೆ ನಡೆಯುತ್ತಲೇ ಇತ್ತು. ಈಗ ಅದಕ್ಕೊಂದು ಉಪಾಯ ಕಂಡುಕೊಂಡಿದೆ ಪಾಲಿಕೆ. ಈ ರೂಲ್ಸ್ ಪ್ರಕಾರ ಬಿಬಿಎಂಪಿಯ ಬೊಕ್ಕಸ ತುಂಬಿಸಿಕೊಳ್ಳೋದು ಪ್ಲ್ಯಾನ್.

ಇದಕ್ಕಾಗಿ ಬಿಬಿಎಂಪಿ ಬೈಲಾಗೇ ತಿದ್ದುಪಡಿ ತಂದು ಬಿಬಿಎಂಪಿ ಹೊಸ ಜಾಹೀರಾತು ಪಾಲಿಸಿ ರೂಪಿಸಲು ಮುಂದಾಗಿದೆ. ಇದಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಅಳವಡಿಕೆ ಬೈಲಾದಲ್ಲಿ ತಿದ್ದುಪಡಿ ತರಲಾಗುತ್ತಿದೆ. ಈ ತಿದ್ದುಪಡಿ ಬಳಿಕ ಬಿಬಿಎಂಪಿಯ ಜಾಹೀರಾತು ದರ ಕಳೆದ ಅವಧಿಗಿಂತ 50% ರಷ್ಟು ದರ ಏರಿಕೆಮಾಡೋ ಲೆಕ್ಕಾಚಾರದಲ್ಲಿದೆ ಪಾಲಿಕೆ.

ಇದಲ್ಲದೇ ಬಿಬಿಎಂಪಿ ಒಡೆತನದ ಜಾಗಗಳಲ್ಲಿ ಮಾತ್ರ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂಬ ನಿಯಮ ರೂಪಿಸಲು ಮುಂದಾಗಿದೆ. ಅಲ್ಲದೇ ಜಾಹೀರಾತು ಪ್ರದರ್ಶನದಿಂದ ಆದಾಯ ಹೆಚ್ಚಿಸಿಕೊಳ್ಳಲು ವಲಯಗಳ ನಿಗದಿ ಮಾಡಲಾಗುತ್ತಿದೆ. ಬಿಬಿಎಂಪಿ ವಲಯ ಅನುಸಾರವಾಗಿ ಪ್ರತ್ಯೇಕ ದರ ನಿಗದಿ ಮಾಡಬೇಕು ಎಂದು ನಿಯಮ ರೂಪಿಸಲಾಗುತ್ತಿದೆ.

ಬರದ ಪರಿಸ್ಥಿತಿ: ಕೇಂದ್ರಕ್ಕೆ 5,326 ಕೋಟಿ ರೂ.ಪರಿಹಾರ ಕೋರಿ ಕೇಂದ್ರಕ್ಕೆ ರಾಜ್ಯದಿಂದ ಪ್ರಸ್ತಾವ

0

ಬೆಂಗಳೂರು;- ಮಳೆಯ ಕೊರತೆ ಹಿನ್ನೆಲೆ 5,326 ಕೋಟಿ ರೂ.ಪರಿಹಾರ ಕೋರಿ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೆ ಘೋಷಿಸಲಾಗಿದೆ. ಇದರ ಜೊತೆಗೆ ಇನ್ನೂ 21 ತಾಲೂಕುಗಳನ್ನು ಅ.12ರಂದು ಬರಪೀಡಿತ ಎಂದು ಘೋಷಿಸಿ ಹೊರಡಿಸಿದ್ದ ಆದೇಶಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.

ಬರಪರಿಸ್ಥಿತಿಯಿಂದಾಗಿ ಅಂದಾಜು 33,770 ಕೋಟಿ ರೂ.ಗಳಷ್ಟು ಕೃಷಿ ಬೆಳೆ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಎನ್‍ಡಿಆರ್ ಎಫ್ ನಿಯಮಾವಳಿಗಳ ಪ್ರಕಾರ 4,414 ಕೋಟಿ ರೂ.ಗಳ ಬೆಳೆ ಪರಿಹಾರ, ಜಾನುವಾರುಗಳಿಗೆ ಸಂಬಂಧಿಸಿದಂತೆ 355 ಕೋಟಿ ರೂ., ಕುಡಿಯುವ ನೀರು ಸರಬರಾಜು ಮಾಡಲು 554 ಕೋಟಿ ರೂ.ಸೇರಿದಂತೆ 5326.87 ಕೋಟಿ ರೂ.ಗಳ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ರಸಗೊಬ್ಬರ ಬಫರ್ ಸ್ಟಾಕ್ ದಾಸ್ತಾನು ಮಾಡಲು ರಾಜ್ಯ ಸಹಕಾರ ಮಾರಾಟ ಮಂಡಳಿಗೆ 200 ಕೋಟಿ ರೂ. ಹಾಗೂ ರಾಜ್ಯ ಬೀಜ ನಿಗಮಕ್ಕೆ 200 ಕೋಟಿ ರೂ.ಗಳ ಬ್ಯಾಂಕ್ ಸಾಲಕ್ಕೆ ಸರಕಾರದ ಖಾತ್ರಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಹಂಗಾಮಿ ಅಧ್ಯಕ್ಷರು ಅಂತಾ ಯಾವ ಆಧಾರದಲ್ಲಿ ಮಾಡಿದ್ದೀರಿ?: ಸಿಎಂ ಇಬ್ರಾಹಿಂ

0

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ವಿಸರ್ಜನೆ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ ವಾಗ್ದಾಳಿ ನಡೆಸಿದ ಸಿಎಂ ಇಬ್ರಾಹಿಂ, ಹಂಗಾಮಿ ಅಧ್ಯಕ್ಷರು ಅಂತಾ ಯಾವ ಆಧಾರದಲ್ಲಿ ಮಾಡಿದ್ದೀರಿ? ದೇವರು ಮತ್ತು ಜನ ನನ್ನ ಕೈಹಿಡಿಯುತ್ತಾರೆ. ಎಲ್ಲವನ್ನೂ ಹೊರಗೆ ತಂದರೆ ಒಳ್ಳೆಯದಲ್ಲ, ವಿಸರ್ಜನೆ ತಪ್ಪು. ಆದೇಶ ವಾಪಸ್ ಪಡೆದು ಪಕ್ಷದ ಸಭೆ ಕರೆಯಿರಿ.

ನಾನು ಹೋಗದೇ ಇದ್ದರೆ ಚನ್ನಪಟ್ಟಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಗೆಲ್ಲುತ್ತಿದ್ದರಾ? ಯಾವ ಒಕ್ಕಲಿಗ ನಾಯಕರನ್ನು ಬೆಳೆಸಿದ್ದೀರಿ ನೀವು? ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಾನು ಹಾಸನ, ಮಂಡ್ಯ, ಹೊಳೆನರಸೀಪುರಕ್ಕೆ ಹೋಗಿ ಸಭೆ ಮಾಡುತ್ತೇನೆ ಎಂದರು.

ಸ್ಥಾನಮಾನಕ್ಕಿಂತ ಕಾನೂನು ದೊಡ್ಡದು: ಬಿವೈ ರಾಘವೇಂದ್ರ

0

ಶಿವಮೊಗ್ಗ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ, ಕಾನೂನು ಚೌಕಟ್ಟಿನಲ್ಲಿ ಯಾರು ಕೂಡ ದೊಡ್ಡವರಲ್ಲ. ಸ್ಥಾನಮಾನಕ್ಕಿಂತ ಕಾನೂನು ದೊಡ್ಡದು. ಕಾನೂನು ಚೌಕಟ್ಟಿನಲ್ಲಿ ಯಾರು ಏನು ಎದುರಿಸಬೇಕು ಅದನ್ನ ಎದುರಿಸಬೇಕು. ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ‌ ತೆರವುಗೊಳಿಸುವ ಕೆಲಸ ಆಗಿದೆ. ಕಾನೂನು ಪ್ರಕ್ರಿಯೆ ಏನು ಇದೆ ಅದು ಆಗುತ್ತದೆ ಎಂದರು.

ಶರಣಪ್ರಕಾಶ್ ಪಾಟೀಲ್ ನೈತಿಕಹೊಣೆ ಹೊತ್ತು ರಾಜೀನಾಮೆ ಕೊಡಬೇಕು: ಭಗವಂತ ಖೂಬಾ

0

ಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್​(35) ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಕೇಂದ್ರ ಸಚಿವ ಭಗವಂತ ಖೂಬಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸ‌ ಆಗುತ್ತಿದೆ. ಬಿಜೆಪಿ ಮುಖಂಡ ಶಿವಕುಮಾರ್​ಗೆ ‘ಕೈ’ ಕಾರ್ಯಕರ್ತರು ಥಳಸಿದ್ದಾರೆ.

ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಆಡಿಯೋ ರೇಕಾರ್ಡ್ ಮಾಡಿದ್ದಾನೆ. ಸಚಿವ ಶರಣಪ್ರಕಾಶ್ ಪಾಟೀಲ್ ವಿರುದ್ದ ಆಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾತನಾಡುತ್ತಿಲ್ಲ. ಶರಣಪ್ರಕಾಶ್ ಪಾಟೀಲ್ ನೈತಿಕಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಡಿಕೆಶಿ ರಾಜೀನಾಮೆ ನೀಡಬೇಕು ಅನ್ನೋದು ನಮ್ಮ ಪಕ್ಷದ ಆಗ್ರಹ: ಅಶ್ವತ್ಥನಾರಾಯಣ

0

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್​ ಅಸ್ತು ಎಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಡಾ. ಅಶ್ವಥ್ ನಾರಾಯಣ, ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದರೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು. ನಮ್ಮ ಮೇಲೆ ಪೇ ಸಿಎಂ ಆರೋಪ ಮಾಡಿದ್ದರು. ಈಗ ಉಪಮುಖ್ಯಮಂತ್ರಿ ಆಗಿರುವ ಡಿ.ಕೆ. ಶಿವಕುಮಾರ್ ಮೇಲೆ ಬಂದಿರುವ ಆರೋಪದ ಬಗ್ಗೆ ಮುಕ್ತ ತನಿಖೆ ಆಗಬೇಕಿದೆ. ಹೀಗಾಗಿ ಡಿಕೆಶಿ ರಾಜೀನಾಮೆ ನೀಡಬೇಕು ಅನ್ನೋದು ನಮ್ಮ ಪಕ್ಷದ ಆಗ್ರಹ ಎಂದರು.

error: Content is protected !!