Home Blog Page 3222

ಜಯದ ಓಟದ ಕುದುರೆ ನಿಲ್ಲಿಸಲು ಮಾಡಿದ ಹುನ್ನಾರವಾಗಿದೆ: ಸಚಿವ ನಾಗೇಂದ್ರ

0

ಬಳ್ಳಾರಿ: ದಕ್ಷಿಣ ಭಾರತದಲ್ಲಿ ಅಗ್ರಗಣ್ಯ ನಾಯಕನಾಗಿರೋ ಡಿಕೆಶಿ ತುಳಿಯಲು ಪ್ಲಾನ್ ಮಾಡಲಾಗ್ತಿದೆ ಎಂದು ಬಳ್ಳಾರಿಯಲ್ಲಿ ಬಿಜೆಪಿ ವಿರುದ್ಧ ಸಚಿವ ನಾಗೇಂದ್ರ ಹರಿಹಾಯ್ದಿದ್ದಾರೆ. ಡಿಕೆಶಿ ಸ್ಪೀಡ್ ನಿಯಂತ್ರಣ ಮಾಡಲು ಮತ್ತು ಅವರ ಜಯದ ಓಟದ ಕುದುರೆ ನಿಲ್ಲಿಸಲು ಮಾಡಿದ ‌ಹುನ್ನಾರವಾಗಿದೆ. ಲೋಕಸಭೆ ಚುನಾವಣೆ ಹಿನ್ನಲೆ ಡಿಕೆಶಿ ಮೇಲೆ ಒತ್ತಡ ತರಲು ಹೀಗೆ ಮಾಡ್ತಿದ್ದಾರೆ. ಎಲ್ಲಾ ತನಿಖೆಯಿಂದ‌ ಮುಕ್ತವಾಗಿ ಹೊರಗೆ ಬರುತ್ತಾರೆ. ಎಲ್ಲೋ ರೈಡ್ ಆದ್ರೂ ಇವರ ಮೇಲೆ ಗೂಬೆ ಕುರಿಸುತ್ತಾರೆ.. ಎಲ್ಲಿ ಹಣ ಸಿಕ್ಕರೂ ಡಿಕೆಶಿ ಹಣ ಎನ್ನುತ್ತಾರೆ. ಜೆಡಿಎಸ್ ಬಿಜೆಪಿ ಇಬ್ಬರು ಕುತಂತ್ರ ಮಾಡ್ತಿದ್ದಾರೆ ಎಂದರು.

ಬೆಳಗಾವಿ ರಾಜಕೀಯ ವಿಚಾರ

ಪೂರ್ವ ನಿಯೋಜಿತ ಕಾರ್ಯಕ್ಕೆ ಡಿಕೆಶಿ ಹೋಗಿರಲಿಲ್ಲ, ಅನಿರೀಕ್ಷಿತ ಭೇಟಿ ಹೀಗಾಗಿ ಯಾವ ಶಾಸಕರು ಇರಲಿಲ್ಲ. ಸತೀಶ್ ಜಾರಕಿಹೊಳಿ ವಿಚಾರಕ್ಕೂ ಬೆಳಗಾವಿ ಶಾಸಕರು ಡಿಕೆಶಿ ಜೊತೆಗೆ ಹೋಗದೇ ಇರೋದಕ್ಕೆ ಸಂಬಂಧವಿಲ್ಲ. ಸತೀಶ್ ಜಾರಕಿಹೊಳಿ ಅವರಿಗೆ ಯಾವುದೇ ಗುಂಪು ಮಾಡಿಕೊಂಡಿಲ್ಲ ಎಲ್ಲರೂ ಒಟ್ಟಾಗಿದ್ದೇವೆ. ಸತೀಶ್ ಜಾರಕಿಹೊಳಿ ಪಕ್ಷದ ಹಿರಿಯರು,  ಡಿಕೆಶಿ ಸತೀಶ್ ಜಾರಕಿಹೊಳಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಚಿವ ನಾಗೇಂದ್ರ ಹೇಳಿದರು.

ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ: ದೇವೇಗೌಡ

0

ಬೆಂಗಳೂರು: ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ.

ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ನೇಮಕ ಮಾಡಿದ್ದೇವೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳ ಆರೋಪ; ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

0

ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿ ಕೈ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಮೂರು ಆಡಿಯೋದಲ್ಲಿ ಹೇಳಿದ್ದಾರೆ.

ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಶಿವಕುಮಾರ್ ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ. ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಹಿಂದೂ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಬಾರದು. ಮಾತಾಡಿದರೆ ಇವರಿಗೆ ಬೆಂಕಿ ಬಿಳುತ್ತದೆ.

ಹಾಗಾಗಿ ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆರೋಪಿಸಿ ಆಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ

0

ಶಿವಮೊಗ್ಗ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಶಿವಮೊಗ್ಗದ ರಾಗಿಗುಡ್ಡ ಗಲಭೆಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಪ್ರಮೋದ್ ಮುತಾಲಿಕ್ ಅವರ ಭೇಟಿಗೆ ಜಿಲ್ಲಾಡಳಿತ ಅವಕಾಶ ನೀಡದೇ ನಿರ್ಬಂಧ ವಿಧಿಸಿದೆ.

ಪೊಲೀಸ್ ಇಲಾಖೆಯ ಕೋರಿಕೆ ಮೇರೆಗೆ ಅಕ್ಟೋಬರ್ 17 ರಿಂದ 30 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡದಂತೆ ಮುತಾಲಿಕ್‌ಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಆದೇಶಿಸಿದ್ದಾರೆ.

ಅ.1 ರಂದು ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಹಾನಿಯಾದ ಮನೆಗಳಿಗೆ ಇಂದು ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಮಂಗಳೂರಿನಿಂದ ಶಿವಮೊಗ್ಗಕ್ಕೆ ಮಂಗಳವಾರ ರಾತ್ರಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ತಡರಾತ್ರಿ 2 ಗಂಟೆಗೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಬಳಿ ಬಸ್ ತಡೆದ ಪೊಲೀಸರು, ಮುತಾಲಿಕ್ ಅವರನ್ನು ವಶಕ್ಕೆ ಪಡೆದು ನಿರ್ಬಂಧದ ಆದೇಶ ಪ್ರತಿ ನೀಡಿದರು.

ಆ ನಂತರ ಪೊಲೀಸ್ ಬೆಂಗಾವಲು ವಾಹನದೊಂದಿಗೆ ಪ್ರತ್ಯೇಕ ಕಾರಿನಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ದಾವಣಗೆರೆಗೆ ಪೊಲೀಸರು ಕಳುಹಿಸಿ ಕೊಟ್ಟಿದ್ದಾರೆ

ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ: ಎನ್.ರವಿಕುಮಾರ್

0

ಬೆಂಗಳೂರು: ರಾಜ್ಯದಲ್ಲಿ ಶಿವಾನಂದ ಪಾಟೀಲ್, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ ಹಾಗೂ ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ.

ಇದೆಲ್ಲದರ ಕುರಿತು ಸಿಬಿಐ, ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ರೂ. ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು.

ಅಬಕಾರಿ, ಕೈಗಾರಿಕಾ ವಲಯ, ಎಲ್ಲಾ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1 ರಿಂದ 3 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದರು.

ಭಿಕ್ಷುಕನ ಬ್ಯಾಗ್ ನಲ್ಲಿ ಪತ್ತೆಯಾಯ್ತು 60,000 ದಷ್ಟು ಹಣ..!

0

ತುಮಕೂರು: ಭಿಕ್ಷುಕನ ಬ್ಯಾಗ್ ನಲ್ಲಿ ಪತ್ತೆಯಾಯ್ತು ಸಾವಿರ‌,ಸಾವಿರ ಹಣ ಇದೆ ಅಂದರೆ ನೀವು ನಂಬುತ್ತಿರಾ..? ನೀವು ನಂಬಲೇಬೇಕು. ಯಾಕಂದ್ರೆ ಈ ಸ್ಟೋರಿ ನೋಡಿ.. ಗಾಂಜಾ ಸೊಪ್ಪು ಇರಬಹುದು ಅಂತಾ ಭಿಕ್ಷುಕನ ಬ್ಯಾಗ್ ಚೆಕ್ ಮಾಡಿದ ಪೊಲೀಸರೇ ದಂಗಾಗಿರುವ ಘಟನೆ ತುಮಕೂರು‌ ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಮರೇನಾಯಕನಹಳ್ಳಿಯಲ್ಲಿ ನಡೆದಿದೆ. ಹೌದು

ಹೌದು ವ್ಯಕ್ತಿ ಹೆಸರು ಗುರುಸಿದ್ದಪ್ಪ ಅಸಲಿಗೆ ಕೊರಟಗೆರೆ ತಾಲ್ಲೂಕಿನ ಹೊಸಹಳ್ಳಿ ಗ್ರಾಮದವನಾಗಿರುವ ಗುರುಸಿದ್ದಪ್ಪ ಸುಮಾರು 10 ವರ್ಷಗಳ ಹಿಂದೆ ಯಾವುದೋ ಕಾರಣಕ್ಕೆ ಹೆಂಡತಿ ಜೊತೆ ಜಗಳ ಮಾಡಿ ಮನೆಬಿಟ್ಟು ಹೊರಬಂದವನು ಕೊರಟಗೆರೆ, ತುಮಕೂರು, ಗುಬ್ಬಿ ಮೊದಲಾದ ಕಡೆ ಭಿಕ್ಷೆ ಬೇಡಿಕೊಂಡು ಬದುಕು ಕಳೆಯುತ್ತಿದ್ದ.

ಆದರೆ ಕೊರಟಗೆರೆಯ ಕೆಲ ಜನಕ್ಕೆ ಗುರುಸಿದ್ದಪ್ಪ ಗಾಂಜಾ ಮಾರಾಟ ಮಾಡುವ ಶಂಕೆ ಮೂಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ಅವನನ್ನು ಹಿಡಿದು ತಪಾಸಣೆ ನಡೆಸಿದಾಗ ಅವನ ಬಳಿ ಗಾಂಜಾವೇನೂ ಪತ್ತೆಯಾಗಿಲ್ಲ ಆದರೆ ಭಿಕ್ಷೆಯ ಮೂಲಕ ಸಂಗ್ರಹಿಸಿದ್ದ ರೂ 60,000 ದಷ್ಟು ಹಣ ಸಿಕ್ಕಿದೆ.

ವಿಚಾರಣೆ ನಡೆಸಿದಾಗ ಗುರುಸಿದ್ದಪ್ಪ ತನ್ನ ಹಿನ್ನೆಲೆಯ ಬಗ್ಗೆ ಹೇಳಿದ್ದಾನೆ. ಪೊಲೀಸರು ಅವನ ಹೆಂಡತಿಯನ್ನು ಕರೆಸಿ ಜೊತೆ ಮಾಡಿ, ಮತ್ತೇ ಜಗಳ ಮಾಡದಂತೆ ಬುದ್ಧಿವಾದ ಹೇಳಿ ಅವನ ಗಳಿಸಿದ್ದ ಹಣದೊಂದಿಗೆ ಹೊಸಹಳ್ಳಿಗೆ ಕಳಿಸಿದ್ದಾರೆ.

ಆದಾಯ ಮೀರಿ ಆಸ್ತಿಗಳಿಕೆ ಕೇಸ್: ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅಸ್ತು

0

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ.

ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ – ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

0

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ. ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

 

ಟಗರು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ಡಿಬಾಸ್… ಡಾಲಿ ಬಳಿ ದಚ್ಚು ಇಟ್ಟ ಸ್ವೀಟ್ ಬೇಡಿಕೆ ಏನು.?

ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಮೂರನೇ ಸಿನಿಮಾ ಟಗರು ಪಲ್ಯದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಆಕರ್ಷಕ ಬಿಂದು ಡಿಬಾಸ್.. ಡಾಲಿ ನಿರ್ಮಾಣದ ಟಗಲು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ದಚ್ಚು ಇಡೀ ತಂಡಕ್ಕೆ ಶುಭ ಹಾರೈಸಿದರು. ತಾರಾ, ರಂಗಾಯಣ ರಘು, ಅಮೃತಾ, ನಾಗಭೂಷಣ್ ಸೇರಿದಂತೆ ನೀನಾಸಂ ಸತೀಶ್ ಹಾಗೂ ನೆನಪಿರಲಿ ಪ್ರೇಮ್ ಇವೆಂಟ್ ನಲ್ಲಿ ಭಾಗಿಯಾಗಿದ್ದರು.

ಟ್ರೇಲರ್ ಬಿಡುಗಡೆ ಮಾಡಿ ಮಾತಿಗಿಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ, ಟಗರು ಪಲ್ಯ ತಂಡಕ್ಕೆ ಶುಭಾಶಯ. ಟ್ರೇಲರ್ ನೋಡಿದಾಗ ಖುಷಿ ಆಯಿತು. 7 ಸ್ಟಾರ್ ಸುಲ್ತಾನ್ ಚೆನ್ನಾಗಿ ಆಕ್ಟ್ ಮಾಡಿದೆ. ಅಮೃತಾ ಅವರಿಗೆ ಸ್ವಾಗತ. ನಮ್ಮದು ಚಿಕ್ಕ ಇಂಡಸ್ಟ್ರೀ. ನೀಟ್ ಇಂಡಸ್ಟ್ರೀ. ಇದು ನಮ್ಮ‌ಮಣ್ಣಿನ ಸೊಗಡಿನ ಸಿನಿಮಾ. ಟ್ರೇಲರ್ ನಲ್ಲಿ ಸಿನಿಮಾ ಏನೋ ಅನ್ನೋದು ಹೇಳಬಹುದು. ಪ್ರತಿ ಒಂದು ಸೀನು. ನಗಲು ಏನು ಬೇಕು ಎಲ್ಲವೂ ಇದೆ.

ಸಿನಿಮಾ ಚೆನ್ನಾಗಿ ಆಗಲಿ. ಹೀರೋಗಳು ಏನು ಮಾಡುತ್ತಿದ್ದಾರಯ್ಯ ಅಂತಾ ತುಂಬಾ ಜನ ಕೇಳುತ್ತಾರೆ. ನಾವು ಪ್ರೊಡ್ಯೂಸ್ ಮಾಡ್ತೀವೆ. ಈ ಸಾಲಿನಲ್ಲಿ ಡಾಲಿ ಅವರು ಮೊದಲು ನಿಲ್ಲುತ್ತಾರೆ. ಇದು ಧನಂಜಯ್ ನಿರ್ಮಾಣದ ಮೂರನೇ ಸಿನಿಮಾ. ಆತ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಬಡವರ ಮಕ್ಕಳು ದೊಡ್ಡವರು ಆಗಬೇಕು. ಡಾಲಿ ಪಿಕ್ಚರ್ಸ್ ದೊಡ್ಡ ಪ್ರೊಡಕ್ಷನ್ ಆಗಿ ಬೆಳೆಯಲಿ. ನಾಗಭೂಷಣ್ ಫ್ಯಾನ್ ನಾನು. ನಾವು ಚಿಕ್ಕ ಕಲಾವುದರು ನಿಮ್ಮ ಬ್ಯಾನರ್ ನಡಿ ನನಗೂ ಅವಕಾಶ ಕೊಡಿ‌ ಎಂದು ಧನಂಜಯ್ ಕಾಲೆಳೆದರು.

ಡಾಲಿ ಧನಂಜಯ್ ಮಾತನಾಡಿ, ಎಲ್ಲಾ ಸಂಬಂಧಗಳನ್ನು ನೆನಪಿಸುವ ಸಿನಿಮಾವೇ ಟಗರು ಪಲ್ಯ. ಇಡೀ ತಂಡಕ್ಕೆ ಧನ್ಯವಾದ ಹೇಳಬೇಕು. ನನಗೆ ಉಮೇಶ್ ಅವರು ಕಥೆ ಹೇಳಿದಾಗ ತುಂಬಾ ಇಷ್ವವಾಯಿತು. ಒಳ್ಳೆ ಪ್ರತಿಭೆಗಳಿಗೆ ಬಂಡವಾಳ ಹಾಕುವುದು ಖುಷಿ ನನಗೆ ಇದೆ. ಅವರವರ ಪ್ರತಿಭೆಗಳು ಅವರನ್ನ ಮೇಲೆ ಕರೆದುಕೊಂಡು ಬರುತ್ತಿದೆ. ಇಡೀ ತಂಡ ನನಗೆ ಅದ್ಭುತವಾಗಿ ಕೋ ಆಪರೇಟಿಂಗ್ ಮಾಡಿದರು. ನಾಗಭೂಷಣ್ ಯಾವುದೇ ಪಾತ್ರ ಕೊಟ್ಟರು ತೂಗಿಸಿಕೊಂಡು ಹೋಗುವ ನಟ.

ಟಗರು ಪಲ್ಯದಲ್ಲಿ ನೀವು ಬೇರೆ ನಾಗಭೂಷಣ್ ನೋಡಬಹುದು. ಅಮೃತಾ ಲುಕ್ ಟೆಸ್ಟ್ ಮಾಡಿದಾಗ ಸ್ಯಾಂಡಲ್ ವುಡ್ ಮಹಾಲಕ್ಷ್ಮೀ ತರ ಕಾಣಿಸ್ತಾರೆ. ಚಿತ್ರರಂಗದ ಮಹಾಲಕ್ಷ್ಮಿ ಆಗಿ ಬೆಳಗಲಿ ಎಂದು ಹಾರೈಸಿದ್ದೇವು. ಖಂಡಿತ. ಹಾಗೇ ಆಗುತ್ತಿದೆ. ಸೂರ್ಯಕಾಂತಿ ಸಾಂಗ್ ಹಿಟ್ ಆಗಿದೆ. ನನ್ನ ಬೆನ್ನು ತಟ್ಟಲು ಇವತ್ತು ಒಬ್ಬರು ಅಣ್ಣ ಬಂದಿದ್ದಾರೆ. ಯಾವಾಗ ಸಿಕ್ಕರು ಖುಷಿಯಿಂದ ತಬ್ಬಿಕೊಂಡು ಚೆನ್ನಾಗಿ ಕೆಲಸ ಮಾಡುತ್ತಿದ್ದೀಯಾ.. ಮಾಡು ಖುಷಿಪಡುತ್ತೇನೆ ಎನ್ನುತ್ತಾರೆ ಎಂದು ದರ್ಶನ್ ಅವರ ಬಗ್ಗೆ ಹೇಳಿದರು.

ನಟ ನಾಗಭೂಷಣ್ ಮಾತನಾಡಿ, ನಾನು ಲೀಡ್ ಕ್ಯಾರೆಕ್ಟರ್ ಮಾಡಬೇಕು ಎಂದು ಇಂಡಸ್ಟ್ರೀಗೆ ಬಂದವನಲ್ಲ. ಕ್ಯಾರೆಕ್ಟರ್ ಆರ್ಟಿಸ್ಟ್ ಆಗಬೇಕು ಎಂದು ಬಂದವನು. ನನ್ನ ಪುಣ್ಯ. ಅಂದು ಇಕ್ಕಟ್ ಸಿನಿಮಾ. ಈಗ ಟಗರು ಪಲ್ಯ ಸಿಕ್ಕಿದೆ. ಟಗರು ಪಲ್ಯ ಸಿನಿಮಾದ ಪಾತ್ರ ನನಗೆ ತೃಪ್ತಿ ಕೊಟ್ಟ ಪಾತ್ರ. ನಾನು ಒಬ್ಬ ಹಳ್ಳಿ ಹುಡುಗ. ನಾನು ಬೆಳೆದು ಬಂದ ಪರಿಸರವನ್ನು ಪ್ರತಿನಿಧಿಸುವುದು, ನಮ್ಮೂರು ಕಥೆ ಇರುವುದರಿಂದ ಈ ಸಿನಿಮಾ ಮತ್ತಷ್ಟು ಕನೆಕ್ಟ್ ಆಗಿದೆ. ಹಲವು ವರ್ಷಗಳಿಂದ ಒಂದು ಮಾತು ಹೇಳುತ್ತಿದ್ದೀರಾ.. ಬೇರೆ ಭಾಷೆಯಲ್ಲಿ ಕಡಿಮೆ ಬಜೆಟ್ ನಲ್ಲಿ, ಒಳ್ಳೊಳ್ಳೆ ಕಂಟೆಂಟ್ ಸಿನಿಮಾ ಬರ್ತಿಲ್ಲ ಎನ್ನುತ್ತಿದ್ದರು. ಅದಕ್ಕೆಲ್ಲ ಉತ್ತರ ಟಗರು ಪಲ್ಯ ಎಂದರು.

ನಟಿ ಅಮೃತಾ ಪ್ರೇಮ್ ಮಾತನಾಡಿ, ದರ್ಶನ್ ಸರ್ ಕಡೆಯಿಂದ ನನ್ನ ಮೊದಲ ಟ್ರೇಲರ್ ಬಿಡುಗಡೆಯಾಗಿರುವುದು ಬಹಳ ಖುಷಿ ಇದೆ. ಈ ಕ್ಷಣ ನನಗೆ ಲೈಫ್ ಲಾಂಗ್ ನೆನಪು ಇರುತ್ತದೆ. ಡಾಲಿ ಪಿಕ್ಚರ್ಸ್ ನಡಿ ನನಗೆ ಅವಕಾಶ ಸಿಕ್ಕಿರುವುದು ಎಷ್ಟು ಖುಷಿ ಇದೆಯೋ, ಅದರ ಜೊತೆ ದರ್ಶನ್ ಸರ್ ಟ್ರೇಲರ್ ಲಾಂಚ್ ಮಾಡಿರುವುದು ತುಂಬಾನೇ ಖುಷಿ ಇದೆ. ದರ್ಶನ್ ಸರ್ ನಮ್ಮ ಫ್ಯಾಮಿಲಿಗೆ ಹತ್ತಿರ ಆದವರು. ಅಪ್ಪನ ಸಿನಿಮಾ ಜರ್ನಿಯಿಂದ ಜೊತೆಯಲಿ ಇದ್ದಾರೆ. ನನಗೆ ಮೊದಲ ಸಿನಿಮಾದ ಟ್ರೇಲರ್ ಲಾಂಚ್ ಬಂದಿದ್ದಾರೆ. ಈ ಪಾತ್ರಕ್ಕೆ ಚ್ಯೂಸ್ ಮಾಡಿದ ನಿರ್ದೇಶಕರಿಗೆ, ಡಾಲಿ ಸರ್ ಗೆ ಧನ್ಯವಾದ. ಡಾಲಿ ಪಿಕ್ಚರ್ಸ್… ಈ ಪ್ರೊಡಕ್ಷನ್ ಬಗ್ಗೆ ಹೇಳೋದಾದರೆ,

ಎಷ್ಟೇ ಹೊಸಬರು ಬರುವಾಗ ಡಾಲಿ ಪಿಕ್ಚರ್ಸ್ ಎಂದು ಬರುತ್ತಾರೆ . ಹೋಗುವಾಗ ನಮ್ಮದೇ ಪಿಕ್ಚರ್ಸ್ ಎಂದು ಹೋಗುತ್ತಾರೆ. ಆ ರೀತಿ ಎಲ್ಲರನ್ನೂ ರೀಸಿವ್ ಮಾಡಿಕೊಳ್ಳುತ್ತಾರೆ ಎಂದರು.ಡಾಲಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಡಾಲಿ ಧನಂಜಯ್ ನಿರ್ಮಿಸುತ್ತಿರುವ ‘ಟಗರು ಪಲ್ಯ’ ಸಿನಿಮಾಗೆ ಉಮೇಶ್ ಕೆ ಕೃಪ ಆಕ್ಷನ್ ಕಟ್ ಹೇಳಿದ್ದಾರೆ. ನಾಗಭೂಷಣ, ಅಮೃತಾ ಪ್ರೇಮ್ ಜೊತೆಗೆ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ, ವೈಜನಾಥ್ ಬಿರಾದಾರ್, ವಾಸುಕಿ ವೈಭವ್ ಸೇರಿದಂತೆ ದೊಡ್ಡ ತಾರಾಬಳಗವಿದೆ. ಅಕ್ಟೋಬರ್ 27ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.

ಫುಟ್‌ಪಾತ್ ಗೆ ನುಗ್ಗಿದ ಕಾರು; ಯುವತಿ ದಾರುಣ ಸಾವು; 4 ಮಂದಿಗೆ ಗಂಭೀರ ಗಾಯ

0

ಮಂಗಳೂರು: ನಗರದ ಲೇಡಿಹಿಲ್ ಬಳಿ ಕಾರೊಂದು ಫುಟ್ ಪಾತ್ ಮೇಲೆ ನುಗ್ಗಿದ ಪರಿಣಾಮ ಯುವತಿಯೊಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ರೂಪಶ್ರೀ(23)ಎಂದು ಗುರುತಿಸಲಾಗಿದೆ. ಸುರತ್ಕಲ್ ನ ನಿವಾಸಿಯಾದ ರೂಪಶ್ರೀ ಅವರು ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ರೂಪಶ್ರೀ ಅವರು ಇತರ ನಾಲ್ವರೊಂದಿಗೆ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ವಾಪಸ್ ಬರುವಾಗ ಮಣ್ಣಗುಡ್ಡೆಯಿಂದ ಲೇಡಿಹಿಲ್ ಕಡೆಗೆ ಸಾಗುತ್ತಿದ್ದ ಕಾರು ಫುಟ್ ಪಾತ್ ಗೆ ನುಗ್ಗಿ ಗುಂಪಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರೂಪಾಶ್ರೀ ಅವರು ಸಾವನ್ನಪ್ಪಿದ್ದಾರೆ. ಅವರ ಜತೆ ನಡೆದುಕೊಂಡು ಹೋಗುತ್ತಿದ್ದ ಸ್ವಾತಿ(28), ಹಿತ್ನವಿ(16), ಕೃತಿಕಾ(16) ಮತ್ತು ಯುತಿಕಾ(12) ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಶರಣು: ತಂದೆಯ ಜತೆ ಠಾಣೆಗೆ ಬಂದ ಆರೋಪಿ ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.

error: Content is protected !!