ಸಂಜೆ ಸುರಿದ ಭಾರಿ ಮಳೆ ಸಹಿತ ಬಿರುಗಾಳಿಗೆ ಪಟ್ಟಣದ ಜನನಿಬೀಡ ಪ್ರದೇಶದಲ್ಲಿ ಹೆಚ್ಚು ಮರಗಳು ನೆಲಕ್ಕುರುಳಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಸಂಜೆ ಬೀಸಿದ ಬಿರುಗಾಳಿಗೆ ಪಟ್ಟಣದ ಮಿನಿ ವಿಧಾನಸೌದ, ಮಾಡೆಲ್ ಹೈಸ್ಕೂಲ್ ಆವರಣ ಹಾಗೂ ಲಿಂಗರಾಜ ವೃತ್ತದ ಬಳಿಯ ರೈತ ಭವನದ ಮುಂದೆ ಗಿಡಗಳು ನೆಲಕ್ಕುರಳಿದ್ದು ಕಂಡುಬಂತು.
ಇದರಿಂದಾಗಿ ಘಟನಾ ಸ್ಥಳಗಳಿಗೆ ಆಗಮಿಸಿದ್ದ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬದ ಮೇಲೆ ಬಿದ್ದಿದ್ದ ಮರಗಳನ್ನು ತ್ವರಿತವಾಗಿ ತೆರವು ಕಾರ್ಯಾಚರಣೆ ಮಾಡುತ್ತಿರುವುದು ಕಂಡುಬಂತು.
ಆದರೂ 4 ಗಂಟೆಗೂ ಹೆಚ್ಚುಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಕಂಡುಬಂತು.
ತಾಲೂಕಿನ ಬಿಂಕದಕಟ್ಟಿ ಮೃಗಾಲಯದಲ್ಲಿ ಮೊಸಳೆ ಕಚ್ಚಿ ಮೃಗಾಲಯದ ಪ್ರಾಣಿಪಾಲಕ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಗದಗ ತಾಲೂಕಿನ ಬಿಂಕದಕಟ್ಟಿ ಮೂಲದ ಮೃತ್ಯುಂಜಯ ಬಸಯ್ಯ ಹಿರೇಮಠ ಎಂಬ ಪ್ರಾಣಿಪಾಲಕ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂದಿನಂತೆ ಶನಿವಾರ ಮೊಸಳೆ ಮನೆ ಸ್ವಚ್ಚಗೊಳಿಸಲು ಹೋದಾಗ ದೊಡ್ಡ ಮೊಸಳೆ ಪ್ರಾಣಿಪಾಲಕ ಮೃತ್ಯುಂಜಯ ಅವರ ಮೇಲೆ ದಾಳಿ ನಡೆಸಿ ತಲೆಗೆ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ಅಲ್ಲಿಯೇ ಇದ್ದ ಇನ್ನಿತರ ಸಿಬ್ಬಂದಿಗಳು ಕಟ್ಟಿಗೆಯಿಂದ ಮೊಸಳೆಗೆ ಹೊಡೆದು ಬಿಡಿಸಿದ್ದಾರೆ. ಬಡ ಕುಟುಂಬದ ಮೃತ್ಯುಂಜಯ ಅವರು ಬಿಂಕದಕಟ್ಟಿ ಮೃಗಾಯಲದಲ್ಲಿ ಕಳೆದ 20 ವರ್ಷಗಳಿಂದ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಆರ್ ಎಫ್ ಒ ಚೈತ್ರಾ ಮೆಣಸಿನಕಾಯಿ, ‘ಗದಗ ಮೃಗಾಲಯದಲ್ಲಿ ಪ್ರಾಣಿ ಪಾಲಕ ಮೃತ್ಯುಂಜಯ ಅವರು ಮೊಸಳೆ ಮನೆ ಸ್ವಚ್ಛಗೊಳಿಸಲು ಹೋದಾಗ ಮೊಸಳೆ ದಾಳಿ ಮಾಡಿದ್ದು, ತಕ್ಷಣ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 20 ವರ್ಷದಿಂದ ಮೃತ್ಯುಂಜಯ ಅವರೇ ಮೊಸಳೆ ಮನೆ ಸ್ವಚ್ಚಗೊಳಿಸುವುದು, ಮೊಸಳೆಗೆ ಆಹಾರ ನೀಡುವುದನ್ನು ಮಾಡುತ್ತಿದ್ದರು. ಯಾವತ್ತೂ ಹೀಗೆ ಆಗಿರಲಿಲ್ಲ. ಆದರೆ, ದುರದೃಷ್ಟವಶಾತ್ ಶನಿವಾರ ಈ ಘಟನೆ ನಡೆದಿದೆ’ ಎಂದರು.
‘ಮೃಗಾಲಯದಲ್ಲಿರುವ ಮೊಸಳೆ ಮನೆಯಲ್ಲಿ ಎರಡು ಭಾಗ ಮಾಡಲಾಗಿದೆ. ಒಂದು ಭಾಗಕ್ಕೆ ಮೊಸಳೆಯನ್ನು ಸ್ಥಳಾಂತರಿಸಿದ ಮೇಲೆಯೇ ಆ ಮನೆಯನ್ನು ಸ್ಪಚ್ಚಗೊಳಿಸಲಾಗುತ್ತದೆ. ಆದರೆ, ಮೃಗಾಲಯದಲ್ಲಿ ಇವತ್ತು ಬಹಳ ಗದ್ದಲ ಇದ್ದಿದ್ದರಿಂದ ಅವರೊಬ್ಬರೆ ಸ್ವಚ್ಛಗೊಳಿಸಲು ಹೋಗಿದ್ದರು. ಈ ವೇಳೆ ದೊಡ್ಡ ಮೊಸಳೆ ದಾಳಿ ಮಾಡಿದೆ. ಇಪ್ಪತ್ತು ವರ್ಷಗಳಿಂದ ಕೆಲಸ ಮಾಡುತ್ತಿರುವುದರಿಂದ ಜಾಗೃತಿ ವಹಿಸದೆ ನಿಷ್ಕಾಳಜಿ ತೋರಿರಬಹುದು. ಆದರೆ, ಈ ಘಟನೆ ಹೇಗಾಯಿತು ಎಂಬುವುದರ ಬಗ್ಗೆ ಮಾಹಿತಿ ತೆಗೆದುಕೊಳ್ಳಲಾಗಿದೆ’ ಎಂದು ತಿಳಿಸಿದರು.
‘ಕಳೆದ ಇಪ್ಪತ್ತು ವರ್ಷಗಳಿಂದ ಮೃತ್ಯುಂಜಯ ಅವರೇ ಮೊಸಳೆ ಮನೆ ಸ್ವಚ್ಚಗೊಳಿಸುತ್ತಾ ಬಂದಿದ್ದಾರೆ. ಶನಿವಾರ ಸ್ವಚ್ಛಗೊಳಿಸಲು ಹೋದಾಗ ಮನೆಯಲ್ಲಿದ್ದ ಹುಲ್ಲಿನ ಮೇಲಿದ್ದ ಮೊಸಳೆ ದಾಳಿ ನಡೆಸಿ ಗಾಯಗೊಳಿಸಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಸದ್ಯ ಆರೋಗ್ಯವಾಗಿದ್ದಾರೆ’ ಎಸಿಎಫ್ ಪರಿಮಳ ತಿಳಿಸಿದರು.
ಮರಳು ಸಾಗಿಸಲು ಅಧಿಕೃತ ದಾಖಲೆಗಳನ್ನು ಹೊಂದಿರುವ ಲಾರಿಗಳನ್ನು ಹಿಡಿದು ಪ್ರಕರಣ ದಾಖಲಿಸುವುದು, ಪರವಾನಿಗೆ ಇಲ್ಲದೇ ಮರಳು ಸಾಗಿಸುವ ಲಾರಿಗಳನ್ನು ಹಿಡಿದು ತಮಗಿಷ್ಟ ಬಂದಂತೆ ಪೊಲೀಸ್ ಇಲಾಖೆಯವರು ಬಿಟ್ಟು ಕಳಿಸುವುದನ್ನು ಖಂಡಿಸಿ ಲಾರಿ ಹಾಗೂ ಟಿಪ್ಪರ್ ಮಾಲಿಕರ ಸಂಘದವರು ಪೊಲೀಸ್ ಠಾಣೆಯ ಎದುರು ಶನಿವಾರ ಪ್ರತಿಭಟನೆ ಮಾಡಿದರು.
ಮರಳು ಸಾಗಿಸಲು ಪರವಾನಿಗೆ ಹೊಂದಿರದ ಹಾಗೂ ಹೇವಿ ಲೋಡ್ ಹಾಕಿಕೊಂಡು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದನ್ನು (ಕೆಎ26 ಎ 5742) ಪೊಲೀಸ್ ಅಧಿಕಾರಿಗಳು ಶುಕ್ರವಾರ ರಾತ್ರಿ ಹಿಡಿದು ಯಾವುದೇ ಪ್ರಕರಣವನ್ನು ದಾಖಲಿಸದೇ ಮೌಖಿಕವಾಗಿ ಮಾತುಕತೆ ನಡೆಸಿ ಬಿಟ್ಟು ಕಳುಹಿಸುತ್ತಿದ ಸಂದರ್ಭದಲ್ಲಿ ಸ್ಥಳೀಯ ಲಾರಿ ಹಾಗೂ ಟಿಪ್ಪರ್ ಮಾಲಿಕರ ಸಂಘದವರು ಪೊಲೀಸ್ ಠಾಣೆಯ ಎದುರು ಲಾರಿ ತಡೆದು ಪ್ರತಿಭಟನೆ ನಡೆಸಿದರು.
ಪೊಲೀಸ್ ಅಧಿಕಾರಿಗಳು ತಮಗಿಷ್ಟ ಬಂದಂತೆ ಮರಳು ಸಾಗಿಸುವ ಲಾರಿಗಳನ್ನು ಹಿಡಿಯುತ್ತಾರೆ, ಮಾತುಕತೆ ಸಫಲವಾದರೆ ಬಿಟ್ಟು ಕಳಿಸುತ್ತಾರೆ, ಮಾತುಕತೆ ಸಫಲವಾಗದಿದ್ದರೆ ಪ್ರಕರಣ ದಾಖಲಿಸುತ್ತಿದ್ದು, ಇದು ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಅಧಿಕೃತ ಪರವಾನಿಗೆ ಹೊಂದಿರುವ ಪ್ರಾಮಾಣಿಕ ಟಿಪ್ಪರ್ ಮಾಲಿಕರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಪೊಲೀಸರ ವಿರುದ್ದ ಹರಿಹಾಯ್ದರು. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬಂದು ನ್ಯಾಯ ಒದಗಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು ಹಿಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಿಪಿಐ ಚಂದ್ರಶೇಖರ ಮಠಪತಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‍ನ ದಾಖಲೆಗಳನ್ನು ಪರಿಶೀಲಿಸಿದಾಗ ಮರಳು ಸಾಗಿಸುವ ಯಾವುದೇ ಪರವಾನಿಗೆ ಹೊಂದಿರದ ಕಾರಣ ಗಣಿ ಮತ್ತು ಭೂವಿಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಹೇಳಿ ಟಿಪ್ಪರನ್ನು ಪೊಲೀಸ್ ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
ಪ್ರತಿಭಟನೆಯಲ್ಲಿ ಲಾರಿ ಹಾಗೂ ಟಿಪ್ಪರ್ ಮಾಲಿಕರ ಸಂಘದ ಗೌರವಾಧ್ಯಕ್ಷ ರಾಜೇಸಾಬ ಹಂಚಿನಾಳ, ಅಧ್ಯಕ್ಷ ಖಾಜೆಸಾಬ ಹಂಚಿನಾಳ, ಉಪಾಧ್ಯಕ್ಷ ಸಿದ್ದಪ್ಪ ಹಿರಶೆಡ್ಡಿ, ಕಾರ್ಯದರ್ಶಿ ಆನಂದ ಕುಮ್ಮಿ, ಬಸವರಾಜ ಕರಮಳ್ಳಿ, ಲಿಯಾಕಲ್ ಕಾಸ್ತರ, ಹೈದರಲಿ ಜಮಖಾನ, ಸಿದ್ದಪ್ಪ ಮೇಲಿನಮನಿ ಪಾಲ್ಗೊಂಡಿದ್ದರು.
ಸಿನಿಮಾ: RRR ಪಾತ್ರವರ್ಗ: ಜ್ಯೂ.ಎನ್ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಮುಂತಾದವರು ನಿರ್ದೇಶನ: ಎಸ್.ಎಸ್. ರಾಜಮೌಳಿ ಛಾಯಾಗ್ರಹಣ: ಕೆ.ಕೆ.ಸೆಂಥಿಲ್‌ಕುಮಾರ್ ಸಂಗೀತ: ಎಂ.ಎಂ.ಕೀರವಾಣಿ ನಿರ್ಮಾಣ: ಡಿವಿವಿ ದಾನಯ್ಯ ಪ್ರದರ್ಶನ: ಶ್ರೀ ಶಿವ ಚಿತ್ರಮಂದಿರ, ಕೊಪ್ಪಳ ರೇಟಿಂಗ್: 3.5/5
-ಬಸವರಾಜ ಕರುಗಲ್. ರಾಜಮೌಳಿ ನಿರ್ದೇಶನದ ಸಿನಿಮಾ ಅಂದ್ರೆ ನಿರೀಕ್ಷೆಯ ರೇಂಜೇ ಬೇರೆ. ಅದರಲ್ಲೂ ಅವರ ನಿರ್ದೇಶನದ ಮಲ್ಟಿ ಸ್ಟಾರ್ ಸಿನಿಮಾ ಅಂದ್ರೆ ಕೇಳ್ತಿರಾ? ಇಂಥ ದೊಡ್ಡ ನಿರೀಕ್ಷೆ ಇಟ್ಟುಕೊಂಡು ಥೇಟರ್‌ಗೆ ಹೋದರೆ ಕೊಂಚ ನಿರಾಸೆಯಾಗೊದಂತು ಖಚಿತ.
ಅವರ ಹಿಂದಿನ ಸಿನಿಮಾಗಳು, ಮೇಕಿಂಗ್ ಬಗ್ಗೆ ಎಲ್ಲರಿಗೂ ಗೊತ್ತಿರೋದೇ. ಆರ್‌ಆರ್‌ಆರ್ ಬಗ್ಗೆ ಸಹ ಅಂಥದ್ದೇ ಕಲ್ಪನೆ ಮೂಡೋದು ಸಹಜ. ರಾಜಮೌಳಿ ಬೋರ್ ಆಗದಂತೆ ಕಥೆ ಹೆಣೆದಿದ್ದಾರೆ. ದೃಶ್ಯ ವೈಭವ, ಮೇಕಿಂಗ್ ನ ಸೆಳೆಯೋದು ಕ್ಲೈಮ್ಯಾಕ್ಸ್‌ನಲ್ಲಿ ಮಾತ್ರ.
ಇದೊಂದು ಸ್ವಾತಂತ್ರ್ಯಪೂರ್ವ ಹಿನ್ನೆಲೆಯ ಗೆಳೆತನ ಮತ್ತು ಹಗೆತನದ ಕಥೆ. ನೀರು, ಬೆಂಕಿ ಮತ್ತು ರೌದ್ರದ ಸಾಮ್ಯತೆಯನ್ನು ಸೂಕ್ಷ್ಮವಾಗಿ ತೆರೆದುಕೊಳ್ಳುತ್ತಲೇ ಕಥೆ ಶುರುವಾಗುತ್ತದೆ.
ಕಾಡಿನ ಎಳೆಯ ಹಾಡಿನ ಹಕ್ಕಿಯನ್ನು ಬ್ರಿಟಿಷರು ಎಳೆದೊಯ್ಯುವ ಮೂಲಕ ಲಾಲಾಲಜಪತ್ ರಾಯ್ ಉಲ್ಲೇಖದ ಮುಖಾಂತರ ಇದೊಂದು ಸ್ವಾತಂತ್ರ್ಯ ಸಂಗ್ರಾಮ ಸಮಯದ ಕಥೆ ಎಂದು ಸುಳಿವು ಸಿಗುತ್ತದೆ. ಬ್ರಿಟಿಷರಲ್ಲಿ ಬಂಧಿಯಾದ ಚಿಕ್ಕ ಹುಡುಗಿಯನ್ನು ಬಿಡಿಸಿಕೊಂಡು ಬರಲು ಕಾಡಿನಲ್ಲೇ ಬೆಳೆದ ಕೊಮರಮ್ ಭೀಮ್ (ಜ್ಯೂ. ಎನ್ಟಿಆರ್) ದೆಹಲಿ ಕಡೆಗೆ ಮುಸ್ಲಿಂ ವೇಷದಲ್ಲಿ ಪಯಣ ಬೆಳೆಸುತ್ತಾನೆ. ಈತನನ್ನೇ ಹಿಡಿಯಲು ಮಾರುವೇಷದಲ್ಲಿ ಬಂದ ಬ್ರಿಡಿಷ್ ಅಧಿಕಾರಿ ಅಲ್ಲುರಿ ಸೀತಾರಾಮ್ (ರಾಮಚರಣ್) ಆತನೊಂದಿಗೇನೇ ಗಾಢವಾದ ಗೆಳೆತನ. ಇಂಟರ್‌ವೆಲ್ ವೇಳೆಗೆ ಇಬ್ಬರ ಅಸಲಿ ವೇಷ ತೆರೆದುಕೊಳ್ಳುತ್ತಲೇ ದುಷ್ಮನ್. ಕ್ಲೈಮ್ಯಾಕ್ಸ್‌ನಲ್ಲಿ ಮತ್ತೇ ದೋಸ್ತಿಯಾಗಿ ಜಂಟೀ ಕಾರ್ಯಾಚರಣೆ ಮೂಲಕ ಬ್ರಿಟಿಷರ ಪಡೆಯನ್ನು ಉಡೀಸ್ ಮಾಡಿ ಸಂಪೂರತಣ ಧ್ವಂಸಗೊಳಿಸುತ್ತಾರೆ.
ಈ ಮಧ್ಯೆ ಬ್ರಿಟಿಷ್ ಅಧಿಕಾರಿಯಾಗಿದ್ದವ ಏಕೆ ಅವರ ವಿರುದ್ದ ತಿರುಗಿ ಬಿದ್ದ, ಇಂಗ್ಲಿಷರ ವಶದಲ್ಲಿ ಕಾಡಿನ ಹಾಡು ಹಕ್ಕಿ (ಚಿಕ್ಕ ಹುಡುಗಿ) ಏನಾದಳು ಎಂಬುದನ್ನ ತೆರೆಯ ಮೇಲೆ ನೋಡೀನೇ ತಿಳಿದುಕೊಳ್ಳಬೇಕು.
ಹಲವು ದೃಶ್ಯಗಳನ್ನು ಸಾಂಕೇತಿಕವಾಗಿ, ಸಾಮ್ಯತಾನುಸಾರ ಮಾಡಿದ್ದಾರೆ ರಾಜಮೌಳಿ. ಅವರ ಬುದ್ಧಿವಂತಿಕೆಗೆ ಭೇಷ್ ಎನ್ನಲೇಬೇಕು. ಸಿನಿಮಾದ ಕಥೆ ಸ್ವಾತಂತ್ರ್ಯ ಪೂರ್ವದ ಹಿನ್ನೆಲೆ ಹೊಂದಿದ್ದರೂ ಗೆಖೆತನ, ಹಗೆತನದ ಸರಳವಾದ ಕಥೆ. ಇಂಥ ಅನೇಕ ಸಿನಿಮಾಗಳು ಎಲ್ಲ ಭಾಷೆಯಲ್ಲೂ ಬಂದಿವೆ. ಗೆದ್ದದ್ದು ವಿರಳ. ಸ್ವಾತಂತ್ರ್ಯದ ಕಥೆ ಎಂದಾಕ್ಷಣ ಕೆಲವರಿಗೆ ಡಾಕ್ಯುಮೆಂಟರಿ ಎನ್ನುವ ಭಯ. ಆದರೆ ಇದು ಕಾಲ್ಪನಿಕ ಕಥೆ. ಸಿಂಪಲ್ ಕಥೆಯಾದರೂ, ಅದ್ದೂರಿ ದೃಶ್ಯವೈಭವ, ಎಲ್ಲರನ್ನೂ ಮೆಚ್ವಿಸುವ ಗ್ರಾಫಿಕ್ಸ್‌ಗಳ ಸಡಗರ.
ಸಿನಿಮಾ ಮೂರು ಗಂಟೆ ಇರುವುದರಿಂದ ಸಿನಿಮಾ ಪ್ರೇಕ್ಷಕನಿಂದ ಕೊಂಚ ತಾಳ್ಮೆ ಕೇಳಬಹುದು. ಕೆಲವೊಮ್ಮೆ ಸ್ಕ್ರಿಪ್ಟ್ ಮೀರಿ ಮೇಕಿಂಗ್ ಹೈಲೈಟ್ ಆಗಿ ಬಿಡುತ್ತದೆ. ಇಡೀ ಚಿತ್ರದಲ್ಲಿ ಹೈಲೈಟ್ ಅಂದ್ರೆ ರಾಮ್‌ಚರಣ್, ಜ್ಯೂ.ಎನ್ಟಿಆರ್.
ರಾಮ್ ಚರಣ್ ಹಾಗೂ ಜ್ಯೂ. ಎನ್ಟಿಆರ್ ನಟನೆ ಇಡೀ ಚಿತ್ರವನ್ನು ಆವರಿಸಿಕೊಂಡಿದೆ. ಅಲ್ಲುರಿ ಸೀತಾರಾಮ್ ಪಾತ್ರದಲ್ಲಿ ರಾಮ್ ಚರಣ್ ಮಿಂಚಿದ್ದಾರೆ. ಆ್ಯಕ್ಷನ್ ದೃಶ್ಯಗಳಲ್ಲಿ ಅವರು ಅಂಕ ಗಿಟ್ಟಿಸಿಕೊಳ್ಳುತ್ತಾರೆ. ಒಂದೇ ಮಾತಲ್ಲಿ ಹೇಳೋದಾದರೆ ಬೆಂಕಿಯಂತೆ ಪ್ರಜ್ವಲಿಸಿದ್ದಾರೆ. ಜ್ಯೂ.ಎನ್ಟಿಆರ್ ಭೀಮ್ ಆಗಿ ಗಮನ ಸೆಳೆದಿದ್ದಾರೆ. ಕುಟುಂಬದ ವಿಚಾರಕ್ಕೆ ಬಂದರೆ ಎಲ್ಲವನ್ನೂ ನುಂಗಿ ಹಾಕುವ ಸುನಾಮಿಯಾಗಿ ಜ್ಯೂ.ಎನ್ಟಿಆರ್ ಗಮನ ಸೆಳೆಯುತ್ತಾರೆ. ರಾಮ್ ಚರಣ್ ಪಾತ್ರಕ್ಕೆ ಹೆಚ್ಚು ಆದ್ಯತೆ ಇದೆ.
ಆರಂಭದಲ್ಲಿ ಬರುವ ದೃಶ್ಯದಲ್ಲಿ ರಾಮ್ ಚರಣ್-ಜ್ಯೂ.ಎನ್ಟಿಆರ್ ಕಣ್ಣಿನಲ್ಲೇ ಮಾತನಾಡಿಕೊಳ್ಳುವುದು, ಹುಲಿಯನ್ನು ಎದುರು ಹಾಕಿಕೊಳ್ಳುವುದು ಸೇರಿ ಹಲವು ದೃಶ್ಯಗಳು ಗಮನ ಸೆಳೆಯುತ್ತದೆ. ಇಬ್ಬರೂ ಜತೆಯಾಗಿ ಸ್ಟೆಪ್ ಹಾಕಿರೋ ‘ಹಳ್ಳಿ ನಾಟು..’ ಸಾಂಗ್ ಸಿನಿಮಾದ ಎನರ್ಜಿ ಹೆಚ್ಚಿಸಿದೆ. ಆಲಿಯಾ ಭಟ್ ಹಾಗೂ ಅಜಯ್ ದೇವಗನ್ ಹೆಚ್ಚು ಹೊತ್ತು ತೆರೆಮೇಲೆ ಬರುವುದಿಲ್ಲ. ಆದಾಗ್ಯೂ, ಎರಡೂ ಪಾತ್ರಗಳು ಕಥೆಗೆ ದೊಡ್ಡ ತಿರುವು ನೀಡುತ್ತವೆ. ಬ್ರಿಟಿಷರಾಗಿ ಕಾಣಿಸಿಕೊಂಡ ವಿದೇಶಿ ಕಲಾವಿದರು ಗಮನ ಸೆಳೆಯುತ್ತಾರೆ.
ಕೆ.ಕೆ. ಸೆಂಥಿಲ್ ಕುಮಾರ್ ಛಾಯಾಗ್ರಹಣ ಚಿತ್ರದ ಮೆರುಗನ್ನು ಹೆಚ್ಚಿಸಿದೆ. ಇಂಟರ್ವಲ್ಗೂ ಮೊದಲು ಬರುವ ಫೈಟ್ ಸೇರಿ ಬಹುತೇಕ ದೃಶ್ಯಗಳನ್ನು ಅದ್ಭುತವಾಗಿ ಸೆರೆಹಿಡಿದಿದ್ದಾರೆ. ಎಂ.ಎಂ. ಕೀರವಾಣಿ ಹಿನ್ನೆಲೆ ಸಂಗೀತ ಹೆಚ್ಚು ಅಂಕ ಗಿಟ್ಟಿಸಿಕೊಳ್ಳುತ್ತದೆ. ಸಾಂಗ್ ವಿಚಾರದಲ್ಲಿ ಕೀರವಾಣಿ ಡಲ್ಲು. ಸಿನಿಮಾ ಅದ್ದೂರಿಯಾಗಿ ಮೂಡಿಬರೋಕೆ ನಿರ್ಮಾಪಕ ದಾನಯ್ಯ ರಾಜಮೌಳಿ ಮೇಲೆ ಭರವಸೆ ಇಟ್ಟು ಆರ್‌ಆರ್‌ಆರ್‌ಗೆ ಹಣ ಸುರಿದಿದ್ದಾರೆ. ಬಂಡವಾಳಕ್ಕಂತು ಮೋಸ ಇಲ್ಲ ಎನ್ನಬಹುದು.
ಒಟ್ಟಾರೆಯಾಗಿ ಬಾಹುಬಲಿ ಹ್ಯಾಂಗೋವರ್ ಬಿಟ್ಟು ಥೇಟರ್‌ಗೆ ಹೋಗುವುದಾದರೆ ಎಲ್ಲ ವರ್ಗದ ಜನರು ಆರ್‌ಆರ್‌ಆರ್ ಸಿನಿಮಾ ಎಂಜಾಯ್ ಮಾಡಬಹುದು.
ಪಟ್ಟಣದ ಹೊರವಲಯದಲ್ಲಿರುವ ಪ್ಯಾಟಿಗೌಡ್ರ ಕಣದಲ್ಲಿ ಆಯೋಜಿಸಲಾಗಿರುವ ಜೆಡಿಎಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಚಿತ್ರನಟ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಆಗಮಿಸಲಿದ್ದಾರೆ.
ರಟ್ಟೀಹಳ್ಳಿ, ಹಿರೇಕೆರೂರ ತಾಲ್ಲೂಕಿನ ಜೆಡಿಎಸ್ ಅಭಿಮಾನಿಗಳು, ಕಾರ್ಯಕರ್ತರು, ರೈತರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಯಾನಂದ ಜಾವಣ್ಣನವರ್ ( ಜೆ. ಕೆ ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನ ಕಾಂಗ್ರೆಸ್ ಸ್ವಾಗತಿಸುತ್ತದೆ. ಭಗವದ್ಗೀತೆ ನಮ್ಮ ದೇಶದ ಅಸ್ಮೀತೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಕೊಪ್ಪಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.
ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿಕೊಟ್ಟಿದ್ದೇ ಕಾಂಗ್ರೆಸ್. ದೂರದರ್ಶನದ ಮೂಲಕ ಭಗವದ್ಗೀತೆಯನ್ನ ಪ್ರಚಾರ ಮಾಡಿದ್ದು ನಮ್ಮ ಪಕ್ಷ. ಇದರ ಜೊತೆಗೆ ದೇಶದ ಎಲ್ಲಾ ಧರ್ಮವನ್ನ ಕಾಂಗ್ರೆಸ್ ಗೌರವಿಸಿತ್ತದೆ ಎಂದು ಡಿಕೆಶಿ ಹೇಳಿದರು.
ನಮ್ಮ ನಿರೀಕ್ಷೆಯಷ್ಟು ಡಿಜಿಟಲ್ ಸದಸ್ಯತ್ವ ಮಾಡಿಸುತ್ತೇವೆ. ಇನ್ನೂ 7 ದಿನ ಸಮಯ ಇದೆ. ನಾವು ನಿರೀಕ್ಷೆ ರೀಚ್ ಮಾಡುತ್ತೇವೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.
-ಇನ್ನೊಬ್ಬರನ್ನ ಟೀಕೆ ಮಾಡೊ ಬದಲು ನಮ್ಮನೆ ಸುಭದ್ರವಾಗಿ ಕಟ್ಟೋಣ
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ರಾಜ್ಯ, ದೇಶದಲ್ಲಿ ನಿತ್ಯ ಪಿಕ್ ಪಾಕೆಟ್ ನಡೀತಾ ಇದೆ. ಪೆಟ್ರೋಲ್, ಗ್ಯಾಸ್ ಬೆಲೆ ಹೆಚ್ಚಳ ಮಾಡುವ ಮೂಲಕ ಆಡಳಿತದಲ್ಲಿರುವ ಸರಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಕೊಪ್ಪಳದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್‌ನ ಡಿಜಿಟಲ್ ಸದಸ್ಯತ್ವ ನೋಂದಣಿಯ ಪ್ರಗತಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ರಾಜ್ಯದಲ್ಲೇ ಹೆಚ್ಚಾಗಿರುವುದು ಸಂತೋಷದ ಸಂಗತಿ. ಅದರಲ್ಲೂ ಗಂಗಾವತಿ ವಿಧಸನಸಭಾ ಕ್ಷೇತ್ರ, ರಾಮನಗರವನ್ನೇ ಮೀರಿಸಿದೆ ಎಂದರೆ ಜನ ಬಿಜೆಪಿ ಆಡಳಿತದಿಂದ ಎಷ್ಟು ರೋಸಿ ಹೋಗಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು ಎಂದರು.
ಬಿಜೆಪಿಯದ್ದು ಭ್ರಷ್ಟ ಸರಕಾರ. ಎಲ್ಲದರಲ್ಲೂ ಪರ್ಸಂಟೇಜ್. ಜನರಿಗೆ ಕರೆಂಟ್ ಕಟ್. ಜನರ ಜೇಬೂ ಕಟ್. ಈಗ ಪುನೀತ್ ಸಿನಿಮಾ ಜೇಮ್ಸ್ ಕಿತ್ತು ಹಾಕಲು ಹೊರಟಿದ್ದಾರೆ. ಇದು ಕನ್ನಡದ ಸ್ವಾಭಿಮಾನದ ಪ್ರಶ್ನೆ. ಬಿಜೆಪಿ ಬೆಲೆ ತೆರಬೇಕಾಗುತ್ತೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.
ಇವತ್ತಿನವರೆಗೆ ಕೊಪ್ಪಳ ಜಿಲ್ಲೆಯಲ್ಲಿ 1,84,302 ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿಯಾಗಿದೆ. ಅತಿ ಹೆಚ್ಚು ಜನರನ್ನು ನೋಂದಣಿ ಮಾಡಿದವರನ್ನು ಇಲ್ಲೇ ಸನ್ಮಾನ ಮಾಡುವುದು ದೊಡ್ಡ ವಿಷಯವಲ್ಲ, ಇನ್ನೂ 7 ದಿನ ಸಮಯಾವಕಾಶ ಇದೆ. ಈ ಸಮಯವನ್ನು ಕಾಂಗ್ರೆಸ್ ಬಂಧುಗಳು ಸದುಪಯೋಗ ಪಡೆದುಕೊಳ್ಳಬೇಕು. ಅತಿ ಹೆಚ್ಚು ಸದಸ್ಯತ್ವ ನೋಂದಣೊ ಮಾಡಿಸಿದವರನ್ನು ರಾಜಧಾನಿ ಬೆಂಗಳೂರಿಗೆ ಆಹ್ವಾನಿಸಿ ಗೌರವಿಸುವುದಾಗಿ ಭರವಸೆ ನೀಡಿದರು.
ಅವರಿವರನ್ನು ಟೀಕೆ ಮಾಡುವ ಬದಲು ಮೊದಲಿಗೆ ನಮ್ಮ ಮನೆಯನ್ನು ಸುಭದ್ರವಾಗಿ ಕಟ್ಟೋಣ. ಆನಂತರ ಇನ್ನೊಬ್ಬರ ಮನೆ ವಿಚಾರದ ಬಗ್ಗೆ ಮಾತಾಡೋಣ. ಮುಂಬರುವ 7 ದಿನಗಳಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ 1 ಲಕ್ಷ ಸದಸ್ಯತ್ವ ನೋಂದಣಿಯಾಗಲಿ. ಬಿಜೆಪಿ, ದಳ ಸೇರಿದಂತೆ ಎಲ್ಲ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಕರೆ ತನ್ನಿ. ನಮ್ಮಷ್ಟಕ್ಕೆ ನಾವೇ ಕಾಲು ಎಳೆಯದಿದ್ದರೆ ಜಿಲ್ಲೆಯ 5ಕ್ಕೆ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಸದಸ್ಯತ್ವ ನೋಂದಣಿ ಮಾಡಿಸಿದ ಗಂಗಾವತಿ ವಿಧಾನಸಭಾ ಕ್ಷೇತ್ರದ ಮುಖಂಡರು, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಮಾತನಾಡಿ, ಸದಸ್ಯತ್ವ ನೋಂದಣಿಗೆಂದು ಮನೆ ಮನೆಗೆ ತೆರಳುವ ನಮ್ಮ ಕಾಂಗ್ರೆಸ್ ಮುಖಂಡರಿಗೆ ಜನರಿಂದ ಅದ್ದೂರಿ ಸ್ವಾಗತ ಸಿಗುತ್ತಿದೆ. ಬಿಜೆಪಿಯವರು ಜಾತಿ ಹೆಸರಿನಲ್ಲಿ ಮೋಸ ಮಾಡಿದ್ದಾರೆ ಎಂದು ಹೇಳಿ ಸಂತೋಷದಿಂದ ಕಾಂಗ್ರೆಸ್ ಸದಸ್ಯತ್ವ ಪಡೆಯುತ್ತಿದ್ದಾರೆ. ಸದಸ್ಯತ್ವ ನೋಂದಣಿಯ ಸಾಧನೆಯಲ್ಲಿ ಪಾಲ್ಗೊಂಡ ಎಲ್ಲರನ್ನೂ ಅಭಿನಂದಿಸುವುದಾಗಿ ತಿಳಿಸಿದರು.
ಡಿ.ಕೆ ಬದಲು ಎಚ್.ಡಿ!! ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮಾತನಾಡುವಾಗ ಜಿಲ್ಲಾಧ್ಯಕ್ಷ ತಂಗಡಗಿ ಸಮಯ ಬಹಳ ಇಲ್ಲ ಎಂದು ಕಿವಿಯಲ್ಲಿ ಹೇಳಿದ್ದೇ ತಡ, ಕ್ಷಣ ಅವಕ್ಕಾದ ಅನ್ಸಾರಿ. ಸಹಕಾರ ನೀಡಿದ ಡಿ.ಕೆ.ಯವರಿಗೆ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳುವಾಗ ಡಿ.ಕೆ. ಬದಲು ಎಚ್.ಡಿ. ಎಂದು ಉಚ್ಛರಿಸಿ, ಆನಂತರ ಸರಿಪಡಿಸಿಕೊಂಡರು.
4 ಗಂಟೆ ಲೇಟ್!: ಮಧ್ಯಾಹ್ನ 3 ಗಂಟೆಗೆ ಆರಂಭವಾಗಬೇಕಿದ್ದ ಕಾಂಗ್ರೆಸ್ ಕಾರ್ಯಕ್ರಮ ಶುರುವಾಗಿದ್ದು ಬರೋಬ್ಬರಿ 4 ಗಂಟೆ ತಡವಾಗಿ. ಇದಕ್ಕಾಗಿ ಡಿ.ಕೆ.ಶಿವಕುಮಾರ್ ಕ್ಷಮಾಪಣೆ ಕೇಳಿದರು.
ಕಾರ್ಯಕರ್ತರಿಂದ ಉದ್ಘಾಟನೆ: ಸಾಮಾನ್ಯವಾಗಿ ಇಂಥ ಕಾರ್ಯಕ್ರಮಗಳನ್ನು ಪಕ್ಷದ ವರಿಷ್ಠರು ಉದ್ಘಾಟಿಸುತ್ತಾರೆ. ಆದರೆ ಕೊಪ್ಪಳದ ಕಾರ್ಯಕ್ರಮವನ್ನು ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅತಿ ಹೆಚ್ಚು ನೋಂದಣಿ ಮಾಡಿಸಿದ ಜಿಲ್ಲೆಯ 5 ಕ್ಷೇತ್ರಗಳ ಕಾರ್ಯಕರ್ತರಿಂದ ಉದ್ಘಾಟಿಸಿದ್ದು ವಿಶೇಷವಾಗಿತ್ತು.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಹಾಫ್ ನಾಲೆಡ್ಜ್ ಇಸ್ ಡೇಂಜರ್. ಮಂತ್ರಿಯಾದವರಿಗೆ ಯಾವುದೇ ವಿಷಯದ ಬಗ್ಗೆ ಹಾಫ್ ನಾಲೆಡ್ಜ್ ಇರಬಾರದು. ಅದು ರಾಜ್ಯಕ್ಕಾಗುವ ಅವಮಾನ. ಹಾಲಪ್ಪ ಆಚಾರ್ ಈಗ ಬರೀ ಶಾಸಕ ಅಲ್ಲ, ಮಂತ್ರಿಯಾಗಿದ್ದಾರೆ. ಮಾತನಾಡುವಾಗ ಅರ್ದಂಬರ್ಧ ಮಾತನಾಡಬಾರದು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಲೇವಡಿ ಮಾಡಿದರು.
ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ ಬಿ ಸ್ಕೀಮ್‌ಗೆ ಸಂಬಂಧಿಸಿದಂತೆ 1997-98ರಿಂದಲೂ ಹೋರಾಟ ಮಾಡುತ್ತಾ ಬಂದಿದ್ದೇನೆ. ಈಗಲೂ ಅಧಿಕೃತ ದಾಖಲೆಗಳು ನನ್ನ ಬಳಿ ಇವೆ. ಕೊಪ್ಪಳ ಭಾಗಕ್ಕೆ ಬಿ ಸ್ಕೀಂನಡಿ ನೀರಾವರಿ ಮಾಡಲು ಅಡ್ಡಿಯಾಗಿದ್ದೇ ಬಿಜೆಪಿ. ತಮ್ಮ ತಪ್ಪನ್ನು ಮರೆ ಮಾಚಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸಕ್ಕೆ ಕೈ ಹಾಕಿದೆ ಎಂದು ರಾಯರಡ್ಡಿ ಕಿಡಿ ಕಾರಿದರು.
ಕೃಷ್ಣಾ ನ್ಯಾಯಾಧೀಕರಣದ ನೀರನ್ನು ಈ ಭಾಗಕ್ಕೆ ಹರಿಸಲು ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಮೊದಲು ಒತ್ತಾಯಿಸಿದ್ದೇ ನಾನು ಎಂದ ಅವರು ಹೇಳಿದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಈ ಬಗ್ಗೆ ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ತೆರಳಲು ಕರೆ ನೀಡಿದರೆ, ವಿರೋಧಿಸಿದ್ದ ಬಿಜೆಪಿ, ಈಗ ಚುನಾವಣೆ ಹತ್ತಿರವಾಗುತ್ತಿದ್ದು, ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಬಿಜೆಪಿ ಸರಕಾರಕ್ಕೆ ಈಗ ಬಂದಿದೆ. ಬಿಜೆಪಿಗೆ ಈಗಲಾದರೂ ಬುದ್ಧಿ ಬಂದಿದೆ. ಆದರೆ ತುಂಬಾ ತಡವಾಗಿ ಬುದ್ಧಿ ಬಂದಿದೆ. ಪರವಾಗಿಲ್ಲ. ಈ ವಿಷಯದಲ್ಲಿ ಬಿಜೆಪಿಯ ನಿಲುವನ್ನು ಸ್ವಾಗತಿಸುವುದಾಗಿ ರಾಯರಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಪಂ ಮಾಜಿ ಸದಸ್ಯರಾದ ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು ಹಾಗೂ ವಕ್ತಾರ ರವಿ ಕುರಗೋಡ ಇದ್ದರು.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಬಿಜೆಪಿಯವರು ಮಾಡಿದ ಒಂದಾದರೂ ಉತ್ತಮ ಕೆಲಸ ಇದೆಯಾ? ರಾಜ್ಯದಲ್ಲಿ ಸಾಮರಸ್ಯ ಕೆಡಿಸೋದು, ಜಾತಿಗಳ ನಡುವೆ ಜಗಳ ಹಚ್ಚೋದೇ ಬಿಜೆಪಿ ಕೆಲಸ ಎಂದು ಮಾಜಿ ಸಚಿವ, ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಕಿಡಿಕಾರಿದರು.
ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹಿಂದು ದೇವಸ್ಥಾನದ ಬಳಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರುವುದು ಸಮಂಜಸವಲ್ಲ, ಇಷ್ಟು ದಿನ ಇರದ ಕಾನೂನು, ಕ್ರಮ ಈಗೇಕೆ ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಅವರಿಗೆ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಇಂಥ ಕಾರ್ಯಗಳ ಮೂಲಕ ಜನರನ್ನು ಒಡೆದು ಆಳುವ ನೀತಿಗೆ ಕೈ ಹಾಕಿರುವ ಬಿಜೆಪಿ, ಮುಂಬರುವ ಚುನಾವಣೆಯಲ್ಲಿ ತಕ್ಕ ಶಾಸ್ತಿ ಅನುಭವಿಸುತ್ತದೆ ಎಂದು ಟೀಕಿಸಿದರು.
ಕರ್ನಾಟಕದ ಹೆಮ್ಮೆಯ ನಟ ಡಾ.ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ಅತ್ಯುತ್ತಮವಾಗಿ ಪ್ರದರ್ಶನ ಕಾಣುತ್ತಿದ್ದರೂ ಥೇಟರ್‌ಗಳಲ್ಲಿ ಜೇಮ್ಸ್ ಸಿನಿಮಾ ತೆಗೆದು ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಪ್ರದರ್ಶನಕ್ಕೆ ಸಿಎಂ ಸೇರಿದಂತೆ ಬಿಜೆಪಿಯವರು ಅತ್ಯುತ್ಸಾಹ ತೋರುತ್ತಿದ್ದಾರೆ. ಇದು ದಿವಂಗತ ನಟ ಡಾ.ಪುನೀತ್‌ಗೆ ಮಾಡುವ ಅವಮಾನ. ಈಗಾಗಲೇ ರಾಜ್ಯಾದ್ಯಂತ ಪುನೀತ್ ಅಭಿಮಾನಿಗಳು ಸರಕಾರದ ವಿರುದ್ಧ ಬಂಡೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಪಾಠ ಕಲಿಸಲು ಜನ ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದಸ್ಯತ್ವ ನೋಂದಣಿಯಲ್ಲಿ ರಾಜ್ಯಕ್ಕೆ ಪ್ರಥಮ: ಕಾಂಗ್ರೆಸ್ ಸದಸ್ಯತ್ವ ನೋಂದಣಿಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದು ತಂಗಡಗಿ ತಿಳಿಸಿದರು.
ಮಾರ್ಚ್ 22ರ ರಾತ್ರಿಯವರೆಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ 22,462, ಕನಕಗಿರಿ ತಾಲೂಕಿನಲ್ಲಿ 49,118, ಗಂಗಾವತಿ ತಾಲ್ಲೂಕಿನಲ್ಲಿ 61,544, ಕೊಪ್ಪಳ ತಾಲೂಕಿನಲ್ಲಿ 19,703 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 20,932 ಸದಸ್ಯತ್ವ ನೋಂದಣಿಯಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 1,73,459 ಜನ ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.
ಮಾರ್ಚ್ 24ರಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಕಾಂಗ್ರೆಸ್ ಸದಸ್ಯತ್ವ ನೋಂದಣಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 24ರ ಮಧ್ಯಾಹ್ನ 3 ಗಂಟೆಗೆ ಕೊಪ್ಪಳದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಪಕ್ಷದ ವರಿಷ್ಠರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ, ವಕ್ತಾರ ರವಿ ಕುರಗೋಡ, ಜಿಪಂ ಮಾಜಿ ಸದಸ್ಯ ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು ಇತರರು ಇದ್ದರು.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಹಾಫ್ ನಾಲೆಡ್ಜ್ ಇಸ್ ಡೇಂಜರ್. ಮಂತ್ರಿಯಾದವರಿಗೆ ಯಾವುದೇ ವಿಷಯದ ಬಗ್ಗೆ ಹಾಫ್ ನಾಲೆಡ್ಜ್ ಇರಬಾರದು. ಅದು ರಾಜ್ಯಕ್ಕಾಗುವ ಅವಮಾನ. ಹಾಲಪ್ಪ ಆಚಾರ್ ಈಗ ಬರೀ ಶಾಸಕ ಅಲ್ಲ, ಮಂತ್ರಿಯಾಗಿದ್ದಾರೆ. ಮಾತನಾಡುವಾಗ ಅರ್ದಂಬರ್ಧ ಮಾತನಾಡಬಾರದು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಲೇವಡಿ ಮಾಡಿದರು.
ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ ಬಿ ಸ್ಕೀಮ್‌ಗೆ ಸಂಬಂಧಿಸಿದಂತೆ 1997-98ರಿಂದಲೂ ಹೋರಾಟ ಮಾಡುತ್ತಾ ಬಂದಿದ್ದೇನೆ. ಈಗಲೂ ಅಧಿಕೃತ ದಾಖಲೆಗಳು ನನ್ನ ಬಳಿ ಇವೆ. ಕೊಪ್ಪಳ ಭಾಗಕ್ಕೆ ಬಿ ಸ್ಕೀಂನಡಿ ನೀರಾವರಿ ಮಾಡಲು ಅಡ್ಡಿಯಾಗಿದ್ದೇ ಬಿಜೆಪಿ. ತಮ್ಮ ತಪ್ಪನ್ನು ಮರೆ ಮಾಚಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸಕ್ಕೆ ಕೈ ಹಾಕಿದೆ ಎಂದು ರಾಯರಡ್ಡಿ ಕಿಡಿ ಕಾರಿದರು.
ಕೃಷ್ಣಾ ನ್ಯಾಯಾಧೀಕರಣದ ನೀರನ್ನು ಈ ಭಾಗಕ್ಕೆ ಹರಿಸಲು ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಮೊದಲು ಒತ್ತಾಯಿಸಿದ್ದೇ ನಾನು ಎಂದ ಅವರು ಹೇಳಿದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಈ ಬಗ್ಗೆ ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ತೆರಳಲು ಕರೆ ನೀಡಿದರೆ, ವಿರೋಧಿಸಿದ್ದ ಬಿಜೆಪಿ, ಈಗ ಚುನಾವಣೆ ಹತ್ತಿರವಾಗುತ್ತಿದ್ದು, ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಬಿಜೆಪಿ ಸರಕಾರಕ್ಕೆ ಈಗ ಬಂದಿದೆ. ಬಿಜೆಪಿಗೆ ಈಗಲಾದರೂ ಬುದ್ಧಿ ಬಂದಿದೆ. ಆದರೆ ತುಂಬಾ ತಡವಾಗಿ ಬುದ್ಧಿ ಬಂದಿದೆ. ಪರವಾಗಿಲ್ಲ. ಈ ವಿಷಯದಲ್ಲಿ ಬಿಜೆಪಿಯ ನಿಲುವನ್ನು ಸ್ವಾಗತಿಸುವುದಾಗಿ ರಾಯರಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಪಂ ಮಾಜಿ ಸದಸ್ಯರಾದ ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು ಹಾಗೂ ವಕ್ತಾರ ರವಿ ಕುರಗೋಡ ಇದ್ದರು.