ರಷ್ಯಾ ಉಕ್ರೇನ್ ದೇಶಗಳ ಮಧ್ಯೆ ಯುದ್ಧ ಶುರುವಾಗಿದ್ದು, ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಯುವಕನೋರ್ವ ಸೇರಿದಂತೆ ಅನೇಕ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಇದರಿಂದ ಪಾಲಕರು ಆತಂಕಗೊಂಡಿದ್ದಾರೆ.
ಹೌದು, ಮುಂಡರಗಿ ಪಟ್ಟಣದ ಮಹಾಗಣಪತಿ ಬಿಳಿಮಗ್ಗದ ಎಂಬ ವಿದ್ಯಾರ್ಥಿ ಉಕ್ರೇನ್ ದೇಶದ ಕೀವ್ ರಾಜಧಾನಿಯ ಚೆರ್ನಿವೀಸ್ ನಗರದಲ್ಲಿ ಸಿಲುಕಿಕೊಂಡಿದ್ದು, ತಮ್ಮ ಮಗ ಸುರಕ್ಷಿತವಾಗಿದ್ದಾನೆ ಎಂದು ಪಾಲಕರು ಹೇಳುತ್ತಿದ್ದಾರೆ. ಮಹಾಗಣಪತಿ ಬಿಳಿಮಗ್ಗದ ಚೆರ್ನಿವೀಸ್ ನಗರದ ಬೋಕೋವಿನಿಯನ್ ಸ್ಟೇಟ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ.
ರಷ್ಯಾ ಉಕ್ರೇನ್ ಮಧ್ಯೆ ಯುದ್ಧ ಆರಂಭವಾಗಿರುವುದರಿಂದ ವಿಮಾನಯಾನ ರದ್ದಾಗಿದ್ದು, ಉಕ್ರೇನ್‌ನಲ್ಲಿ ನೆಲೆಸಿರುವ ಭಾರತೀಯ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಿಲ್ಲೆಯ ಕೊಪ್ಪಳ, ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕುಗಳಲ್ಲಿ ಬಾಲ್ಯವಿವಾಹದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಸ್ಥಳಕ್ಕೆ ತೆರಳಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಫೆ. 09 ರಂದು ಕುಕನೂರು ತಾಲ್ಲೂಕಿನ ಬೆಣಕಲ್ ಗ್ರಾಮದ ಬಾಲಕಿಯೊಂದಿಗೆ ಗದಗ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಯುವಕನ ಮದುವೆ ನಿಶ್ಚಯವಾಗಿತ್ತು. ಫೆ.15 ರಂದು ಯಲಬುರ್ಗಾ ತಾಲ್ಲೂಕಿನ ಯಡ್ಡೋಣಿ ಗ್ರಾಮದಲ್ಲಿ ಯುವಕ ಹಾಗೂ ಅದೇ ಗ್ರಾಮದ ಬಾಲಕಿಯೊಂದಿಗೆ ವಿವಾಹ ನಿಶ್ಚಿತವಾಗಿತ್ತು. ಫೆ.16 ರಂದು ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದ ಬಾಲಕಿಯೊಂದಿಗೆ ಅದೇ ಗ್ರಾಮದ ಯುವಕನ ವಿವಾಹ ನಿಶ್ಚಯವಾಗಿತ್ತು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ನಿಗದಿತ ದಿನಾಂಕಗಳಂದು ರಕ್ಷಣಾ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮದುವೆ ಸಿದ್ಧತೆಗಳು ನಡೆದಿರುವುದು ಕಂಡುಬಂದಿದೆ. ನಂತರ ಬಾಲಕಿಯರ ಶಾಲಾ ದಾಖಲಾತಿಗಳನ್ನು ಪರಿಶೀಲಿಸಿದಾಗ ಬಾಲಕಿಯರಿಗೆ 18 ವರ್ಷ ಪೂರ್ಣಗೊಳ್ಳದ ಕಾರಣ ವಿವಾಹಗಳು ಬಾಲ್ಯ ವಿವಾಹವೆಂದು ಖಚಿತಗೊಂಡಿದೆ. ಆದ್ದರಿಂದ ಬಾಲಕಿಯರ ಪೋಷಕರಿಗೆ ತಿಳುವಳಿಕೆ ನೀಡಿ ಬಾಲಕಿಯರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯಾದ ಶಿವಲೀಲಾ ವನ್ನೂರು, ಆಪ್ತ ಸಮಾಲೋಚಕರಾದ ರವಿ ಬಡಿಗೇರ, ಔಟರೀಚ್ ವರ್ಕರ್ ದೇವರಾಜ ತಿಲಗರ, ಮೇಲ್ವಿಚಾರಕಿಯರಾದ ಮಾಧವಿ ವೈದ್ಯ, ಪುಷ್ಪಾ, ಪೊಲೀಸ್ ಇಲಾಖೆಯ ಶರಣಪ್ಪ, ಮಕ್ಕಳ ಸಹಾಯವಾಣಿಯ ಶಾಂತಕುಮಾರ ಅವರ ತಂಡವು ಬಾಲಕಿಯರ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಮುಂಡರಗಿ ತಹಸೀಲ್ದಾರ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸರು ಬುಧವಾರ ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ನ್ಯಾಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಎಂ.ವಿ.ಮಲ್ಲಾಪೂರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಕಂದಾಯ ಇಲಾಖೆಯ ಕಂಪ್ಯೂಟರ್ ಆಪರೇಟರ್ ಎಂ.ಐ.ಉಪ್ಪಾರಟ್ಟಿ ಹಣ ತೆಗೆದುಕೊಳ್ಳುವ ವೇಳೆ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.
ಪ್ರಕರಣದ ವಿವರ
ಮುಂಡರಗಿ ತಾಲೂಕಿನ ಗಂಗಾಪುರ ಗ್ರಾಮದ ಕರಿಯಪ್ಪ ಹನಮಪ್ಪ ಬಂಗಿ ಎಂಬುವವರು ತಮ್ಮ ತಂದೆಯ ಜಮೀನಿನ ಆರ್‌ಟಿಸಿಯಲ್ಲಿ ಕಾಲಂ ಸಂಖ್ಯೆ 11ರಲ್ಲಿ ಓರ್ವರ ಹೆಸರು ತೆಗೆದು ಹಾಕಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ತಹಸೀಲ್ದಾರ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಎಂ.ಐ.ಉಪ್ಪಾರಟ್ಟಿ ಎಂಬ ವ್ಯಕ್ತಿ 12,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಕರಿಯಪ್ಪ ಎಸಿಬಿಗೆ ದೂರು ನೀಡಿದ್ದರು.
ಈ ಪೈಕಿ ಬುಧವಾರ 5,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಎಸಿಬಿ ಪೊಲೀಸರು ಆರೋಪಿ ಉಪ್ಪಾರಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ಎಸಿಬಿ ಸಿಪಿಐ ಆರ್ ಎಫ್ ದೇಸಾಯಿ, ಸಿಬ್ಬಂದಿಗಳಾದ ಎಮ್ ಎಮ್ ಅಯ್ಯನಗೌಡ್ರ, ವೀರೇಶ್ ಜೋಳದ, ನಾರಾಯಣ ತಾಯಣ್ಣವರ್, ವೀರಣ್ಣ ಜಾಲಿಹಾಳ, ಶರೀಫ್ ಮುಲ್ಲಾ, ಮಂಜುನಾಥ್ ಮುಳಗುಂದ, ವೀರೇಶ್ ಬಿಸನಳ್ಳಿ, ನಾರಾಯಣರಡ್ಡಿ ವೆಂಕರಡ್ಡಿ ಹಾಗೂ ತಾರಪ್ಪ ಕಾರ್ಯಾಚರಣೆಯಲ್ಲಿದ್ದರು.
ಜಿಲ್ಲೆಯ ಮುಂಡರಗಿ ತಹಸೀಲ್ದಾರ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸರು ಬುಧವಾರ ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ನ್ಯಾಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಎಂ.ವಿ.ಮಲ್ಲಾಪೂರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಕಂದಾಯ ಇಲಾಖೆಯ ಕಂಪ್ಯೂಟರ್ ಆಪರೇಟರ್ ಎಂ.ಐ.ಉಪ್ಪಾರಟ್ಟಿ ಹಣ ತೆಗೆದುಕೊಳ್ಳುವ ವೇಳೆ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.
ಪ್ರಕರಣದ ವಿವರ
ಮುಂಡರಗಿ ತಾಲೂಕಿನ ಗಂಗಾಪುರ ಗ್ರಾಮದ ಕರಿಯಪ್ಪ ಹನಮಪ್ಪ ಬಂಗಿ ಎಂಬುವವರು ತಮ್ಮ ತಂದೆಯ ಜಮೀನಿನ ಆರ್‌ಟಿಸಿಯಲ್ಲಿ ಕಾಲಂ ಸಂಖ್ಯೆ ೧೧ರಲ್ಲಿ ಓರ್ವರ ಹೆಸರು ತೆಗೆದು ಹಾಕಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ತಹಸೀಲ್ದಾರ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಎಂ.ಐ.ಉಪ್ಪಾರಟ್ಟಿ ಎಂಬ ವ್ಯಕ್ತಿ 12,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಕರಿಯಪ್ಪ ಎಸಿಬಿಗೆ ದೂರು ನೀಡಿದ್ದರು.
ಈ ಪೈಕಿ ಬುಧವಾರ 5,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಎಸಿಬಿ ಪೊಲೀಸರು ಆರೋಪಿ ಉಪ್ಪಾರಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ಎಸಿಬಿ ಸಿಪಿಐ ಆರ್ ಎಫ್ ದೇಸಾಯಿ, ಸಿಬ್ಬಂದಿಗಳಾದ ಎಮ್ ಎಮ್ ಅಯ್ಯನಗೌಡ್ರ, ವೀರೇಶ್ ಜೋಳದ, ನಾರಾಯಣ ತಾಯಣ್ಣವರ್, ವೀರಣ್ಣ ಜಾಲಿಹಾಳ, ಶರೀಫ್ ಮುಲ್ಲಾ, ಮಂಜುನಾಥ್ ಮುಳಗುಂದ, ವೀರೇಶ್ ಬಿಸನಳ್ಳಿ, ನಾರಾಯಣರಡ್ಡಿ ವೆಂಕರಡ್ಡಿ ಹಾಗೂ ತಾರಪ್ಪ ಈ ಕಾರ್ಯಾಚರಣೆಯಲ್ಲಿದ್ದರು.
ರಾಜ್ಯದಲ್ಲಿ ಹಿಜಾಬ್ -ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಈಗಾಗಲೇ ರಾಜ್ಯ ಸರ್ಕಾರ ಫೆ.16 ರವರೆಗೆ ಕಾಲೇಜುಗಳಿಗೆ ರಜೆ ನೀಡಿದೆ. ಇಂದಿನಿಂದ 10ನೇ ತರಗತಿವರೆಗೆ ಶಾಲೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಜಿಲ್ಲೆಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳ, ವಿದ್ಯಾ ಸಂಸ್ಥೆಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ 144 ಕಲಂ ಜಾರಿಗೊಳಿಸಿ ಆದೇಶಿಸಿದ್ದಾರೆ.
ನಿಷೇಧಾಜ್ಞೆ ಜಾರಿ ಹಿನ್ನೆಲೆ ಐದಕ್ಕಿಂತ ಹೆಚ್ಚು ಜನ ಗುಂಪು ಕೂಡುವ ಹಾಗಿಲ್ಲ. ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರ್ಯಾಲಿ, ರಾಜಕೀಯ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶದಲ್ಲಿ ತಿಳಿಸಿದ್ದಾರೆ.
ದೇಶಭಕ್ತಿ ಗೀತೆ ವಂದೇ ಮಾತರಂ ಹಾಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಕಳಿಕೆಗಳು ಭರ್ಜರಿ ಕಾಡಿದವು. ಅಲ್ಲದೇ, ಕಾರ್ಯಕ್ರಮದಲ್ಲಿ ಡಿಕೆಶಿ ಅವರನ್ನು ನಿದ್ರಾದೇವತೆ ಆವರಿಸಿದ್ದಳು.
ರವಿವಾರ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಪ್ರಗತಿ ಪರಿಶೀಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸೇವಾದಳದ ಸದಸ್ಯರು ವಂದೇ ಮಾತರಂ ಗೀತೆ ಹಾಡುತ್ತಿದ್ದರು. ಈ ವೇಳೆ ಗೌರವಾರ್ಥವಾಗಿ ಎಲ್ಲರೂ ಎದ್ದು ನಿಂತಿದ್ದರು. ಶಾಸಕ ಎಚ್.ಕೆ.ಪಾಟೀಲ್ ಮತ್ತು ವಿಪ ಸದಸ್ಯ ಸಲೀಂ ಅಹ್ಮದ್ ಅವರ ಮಧ್ಯೆ ನಿಂತುಕೊಂಡಿದ್ದ ಡಿ.ಕೆ.ಶಿವಕುಮಾರ್ ಭರ್ಜರಿ ಆಕಳಿಕೆ ಹೊಡೆಯುವ ಮೂಲಕ ಒಂದೆ ಮಾತರಂ ಗೀತೆಗೆ ಡಿಕೆಶಿ ನಿರ್ಲಕ್ಷ್ಯ ತೋರಿದರು. ಇನ್ನು ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಡಿ.ಕೆ.ಶಿವಕುಮಾರ್ ನಿದ್ದೆಗೆ ಜಾರಿದರು.
ಕೆಂಪುಕೋಟೆಯ ಮೇಲಿರುವ ತ್ರಿವರ್ಣ ಧ್ವಜ ತೆಗೆದು ಕೇಸರಿ ಧ್ವಜ ಹಾರಿಸುವ ಕಾಲ ಬರುತ್ತದೆ ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.
ರವಿವಾರ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತಲೆಕೆಟ್ಟ ಈಶ್ವರಪ್ಪ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಕಾಲ ಬರುತ್ತದೆ ಎಂದು ಹೇಳಿದರು. ಆದರೆ, ಈ ಬಗ್ಗೆ ಮಾತನಾಡದ ಬಸವರಾಜ್ ಬೊಮ್ಮಾಯಿ ಅವರು ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದಾರೆ ಎಂದು ಹರಿಹಾಯ್ದರು.
‘ನಮ್ಮ ಸರ್ಕಾರವಿದ್ದಾಗ ಯಾರಾದರೂ ಹೀಗೆ ಮಾತನಾಡಿದ್ದರೆ ಹತ್ತು ನಿಮಿಷದಲ್ಲಿ ರಾಜೀನಾಮೆ ಪಡೆಯುತ್ತಿದ್ದೆವು. ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇವೆ. ಈಶ್ವರಪ್ಪ ವಿರುದ್ಧ ರಾಷ್ಟ್ರ ದ್ರೋಹಿ ಪ್ರಕರಣ ದಾಖಲಿಸುತ್ತೇವೆ. ಆದರೆ, ಪೊಲೀಸ್ ಅಧಿಕಾರಿಗಳು ಸರ್ಕಾರಿ ನೌಕರರ ಬದಲು ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತ್ರಿವರ್ಣ ಧ್ವಜ ಕಾಂಗ್ರೆಸ್ ಪಕ್ಷದ ಧ್ವಜವಾಗಿತ್ತು. ಅಶೋಕ ಚಕ್ರ ಸೇರಿ ದೇಶದ ಧ್ವಜವಾಗಿದೆ. ಹೀಗಾಗಿ ರಾಷ್ಟ್ರ ಧ್ವಜವೇ ನಮ್ಮ ಧರ್ಮ’ ಎಂದರು.
ಬಿಜೆಪಿಯ ಅಧಿಕಾರಾವಧಿಯಲ್ಲಿ ಕಾಶ್ಮೀರ ವಿಚಾರ, 371, ಗೋಹತ್ಯೆ, ಮತಾಂತರ ಕಾಯ್ದೆ ಹೀಗೆ ಧರ್ಮಕ್ಕೆ ಸಂಬಂಧಿಸಿದಂತೆ ದೇಶ ಇಬ್ಭಾಗ ಮಾಡುವುದನ್ನು ಬಿಟ್ಟರೆ ಯಾವುದೇ ಜನಪರ ಕಾನೂನು ಜಾರಿಗೆ ತಂದಿಲ್ಲ. ಅಲ್ಲದೇ, ಕೃಷಿ ಕಾಯ್ದೆ ತಂದಿದ್ದನ್ನು ರೈತರ ಹೋರಾಟಕ್ಕೆಮಣಿದು ಬಲಿಷ್ಠ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಿತು.
ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಕೊಡುಗೆ ನೀಡಿದೆ. ಆದರೆ, ಕಾಂಗ್ರೆಸ್ ಆಚಾರ, ವಿಚಾರ ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡದೇ ಚುನಾವಣೆಯಲ್ಲಿ ಸೋತರಿಬಹುದು. ಆದರೆ, ಕಾರ್ಯಕರ್ತರು ಗೆಲ್ಲುವ ಆಸೆ ಕಳೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಲಕ್ಷಣವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮಲ್ಲಿ ಹುಮ್ಮಸ್ಸು, ಉತ್ಸಾಹ, ನಂಬಿಕೆ ಕಾಣುತ್ತಿದೆ. ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ವಿಶ್ವಾಸವಿದೆ. ಉತ್ತರ ಕರ್ನಾಟಕ ಭಾಗದ 60ಕ್ಕೂ ಅಧಿಕ ಸ್ಥಾನಗಳ ಸಮೀಕ್ಷೆ ಬಂದಿದೆ. ಕಾರ್ಯಕರ್ತರು ಚುನಾವಣೆಗೆ ವ್ಯಕ್ತಿ ಮೇಲೆ ಹೋಗದೇ ಪಕ್ಷದ ಮೇಲೆ ಹೋಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ವಿಪ ಸದಸ್ಯ ಸಲೀಂ ಅಹ್ಮದ್, ಆರ್.ವಿ.ವೆಂಕಟೇಶ್, ಬಿ.ಆರ್.ಯಾವಗಲ್, ರಾಮಕೃಷ್ಣ ದೊಡ್ಡಮನಿ, ಡಿ.ಆರ್.ಪಾಟೀಲ್, ಶ್ರೀಶೈಲಪ್ಪ ಬಿದರೂರ, ವ್ಹಿ.ಆರ್.ಗುಡಿಸಾಗರ, ಪರಮೇಶ್ವರ ನಾಯ್ಕ್, ಎಸ್.ಎನ್.ಪಾಟೀಲ್ ಇದ್ದರು.
ನೂತನ ಉಪವಿಭಾಗಾಧಿಕಾರಿ ಬಸಣ್ಯಪ್ಪ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಗಂಗಾವತಿ ಎಪಿಎಂಸಿ ಗೋದಾಮಿನ ಮೇಲೆ ದಾಳಿ ನಡೆಸಿದಾಗ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದು ಪತ್ತೆಯಾಗಿದೆ.
ಗೋದಾಮಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಅಂದಾಜು 200 ಚೀಲ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಅಕ್ಕಿಯ ಅಕ್ರಮ ಸಾಗಣೆಗೆ ಬಳಸಿದ್ದ ಲಾರಿ ಮತ್ತು ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪವಿಭಾಗಾಧಿಕಾರಿ ಬಸಣ್ಯಪ್ಪ ಕಲಶೆಟ್ಟಿ, ಗುರುವಾರ ರಾತ್ರಿ ದಾಳಿ ಮಾಡಿದ್ದು ನಿಜ. ಅದಿನ್ನೂ ತನಿಖೆಯ ಹಂತದಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದರು.
ಮುಳಗುಂದ ನಾಕಾ ಸಮೀಪದ ಕೋಳಿಕೇರಿ ಕ್ರಾಸ್ ಬಳಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 19 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ.
ಸಿದ್ದರಾಮೇಶ್ವರ ನಗರದ ನಿವಾಸಿಯಾಗಿರುವ ರಾಜೇಸಾಬ ಬಸರಿಗಿಡದ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ ಅಗ್ನಿ ದುರಂತ ನಡೆದಿದೆ.
ಗ್ಯಾರೇಜ್ ಮುಂಭಾಗದಲ್ಲಿ ನಿಲ್ಲಿಸಿದ್ದ ಯೋಗ್ಯವಾಗಿದ್ದ 4 ಮತ್ತು ಗುಜರಿಗೆ ಸೇರಿದ್ದ 15 ಸೇರಿ 19 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ. ಅದರಂತೆ, ಗ್ಯಾರೇಜ್ ಹಿಂದೆ ಹಿಂದಿನ ಶೆಡ್ ನಲ್ಲಿನ ಸಿಮೆಂಟ್, ಬಾರ್ ಬೈಂಡಿಂಗ್ ವೈಯರ್ ಸುಟ್ಟಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಇನ್ನು ಗ್ಯಾರೇಜ್ ಪಕ್ಕ ವಿದ್ಯುತ್ ಟಿಸಿ ಇದ್ದು, ಕಿಡಿ ಬಿದ್ದು ಅಗ್ನಿ ಅವಘಡ ಸಂಭವಿಸಿರಬಹುದು. ಇಲ್ಲದಿದ್ದರೆ, ಶಾರ್ಟ್‌ಸರ್ಕ್ಯೂಟ್‌ನಿಂದ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ರಾಯಚೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದನ್ನು ಖಂಡಿಸಿ ಬುಧವಾರ ಗದಗ-ಬೆಟಗೇರಿ ನಗರಸಭೆ ಆವರಣದಲ್ಲಿರುವ ಅಂಬೇಡ್ಕರ್‌ರವರ ಪುತ್ಥಳಿಗೆ ಸಾಮಾಜಿಕ ಕಾರ್ಯಕರ್ತ ಸೈಯದ್ ಖಾಲಿದ್ ಕೊಪ್ಪಳ ಹಾಲಿನ ಅಭಿಷೇಕ ಮಾಡಿದರು.
ಈ ವೇಳೆ ಮಾತನಾಡಿದ ಅವರು, ‘ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಾಧೀಶರನ್ನು ಶೀಘ್ರವೇ ಅಮಾನತು ಮಾಡಬೇಕು. ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಸಂವಿಧಾನ ಬದಲಾವಣೆ ಸೂರ್ಯ ಚಂದ್ರರಿರುವರೆಗೂ ಬದಲಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಹೇಳಿದ ಅವರು, ರಾಜ್ಯದಲ್ಲಿನ ಶಾಂತಿ ಕದಡಿಸುತ್ತಿರುವ ಕೋಮುವಾದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹುಲ್ಲೇಶ್ ಭಜಂತ್ರಿ, ಶಫೀ ನಗರಕಟ್ಡಿ, ಎಂ.ಪಿ.ಮುಳುಗುಂದ, ಅಕ್ಬರ್ ಅಲಿ ಬೇಗ್, ಗಣೇಶ ಹುಬ್ಬಳ್ಳಿ, ಇರ್ಫಾನ್ ಡಂಬಳ, ಲಾಡಸಾಬ್ ಕಿತ್ತೂರ, ಫ್ರಾನ್ಸಿಸ್ ಕಣಯ್ಯ, ಮುಬಾರಕ್ ನರೇಗಲ್, ಮೆಹಬೂಬ್ ಕುರಹಟ್ಟಿ, ಖ್ವಾಜಾ ಸೈಯದ್, ಚಾಂದ್ ಕೊಟ್ಟೂರು, ಚಿದಾನಂದ, ಮಹಮ್ಮದ್, ದಾವಲಸಾಬ್, ತೌಸೀಫ್, ಜಿಶಾನ್ ಖಾಜಿ, ಆಂಜನೇಯ, ವೀರೇಶ್ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.