Home Blog Page 3286

ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ಮಳೆರಾಯ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆರಾಯನ ಅಬ್ಬರ ಶುರುವಾಗಿದೆ. ಇದರ ಮಧ್ಯೆ ಜೂ. 17ರ ವರೆಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಈ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಿಗ್ಗೆಯಿಂದ ಕೂಡ ಕರಾವಳಿ, ಮಲೆನಾಡು ಸೇರಿದಂತ ಹಲವು ಜಿಲ್ಲೆಗಳಲ್ಲಿ ಮಳೆ ಉತ್ತಮವಾಗಿಯೇ ಸುರಿದಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಈ ಮೂರು ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂ. 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉಳಿದ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜೂ. 14 ರಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

38 ಪತ್ನಿಯರನ್ನು ಹೊಂದಿದ್ದ ದೊಡ್ಡ ಸಂಸಾರಸ್ಥ ಇನ್ನಿಲ್ಲ

ವಿಜಯಸಾಕ್ಷಿ ಸುದ್ದಿ, ಐಜಾಲ್

ಈ ವ್ಯಕ್ತಿಗೆ ಬರೋಬ್ಬರಿ 38 ಪತ್ನಿಯರು, 89 ಮಕ್ಕಳು ಹಾಗೂ 33 ಜನ ಮೊಮ್ಮಕ್ಕಳು ಇದ್ದರು. ಈ ಕುಟುಂಬ ಇಡೀ ಜಗತ್ತಿನಲ್ಲಿಯೇ ಅತಿ ದೊಡ್ಡ ಕುಟುಂಬ ಎಂದೇ ಖ್ಯಾತಿ ಪಡೆದಿತ್ತು. ಆದರೆ, ಇಷ್ಟೊಂದು ದೊಡ್ಡ ಕುಟುಂಬ ಸೃಷ್ಟಿಸಿದ್ದ ವ್ಯಕ್ತಿ ಮಾತ್ರ ಇನ್ನಿಲ್ಲದಾಗಿದೆ.

ವಿಶ್ವದ ಅತಿದೊಡ್ಡ ಕುಟುಂಬ ಹೊಂದಿದ್ದ ಜಿಯೋನಾ ಚಾನಾ(78) ಮಿಜೋರಾಂನಲ್ಲಿ ಸಾವನ್ನಪ್ಪಿದ್ದಾರೆ. ಚಾನಾ ಸಾವಿನ ಬಗ್ಗೆ ಮಿಜೋರಾಂ ಸಿಎಂ ಜೊರಾಮ್ತಂಗ ಟ್ವೀಟ್ ಮಾಡಿ ತಿಳಿಸಿದ್ದಾರೆ. 38 ಪತ್ನಿಯರು ಮತ್ತು 89 ಮಕ್ಕಳೊಂದಿಗೆ ವಿಶ್ವದ ಅತಿದೊಡ್ಡ ಕುಟುಂಬದ ಮುಖ್ಯಸ್ಥರೆಂದು ನಂಬಲಾದ ಜಿಯಾನ್-ಎ (76) ಗೆ ಮಿಜೋರಾಂ ಭಾರವಾದ ಹೃದಯದಿಂದ ವಿದಾಯ ಹೇಳಿದೆ. ಮಿಜೋರಾಂ ಮತ್ತು ಬಕ್ತಾಂಗ್ ತ್ಲಾಂಗ್ನುವಾಮ್ನಲ್ಲಿರುವ ಅವರ ಗ್ರಾಮವು ರಾಜ್ಯದ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿತ್ತು ಎಂದು ಸಿಎಂ ಬರೆದುಕೊಂಡಿದ್ದಾರೆ.

ಚಾನಾಗೆ ಸಕ್ಕರೆ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡ ಇತ್ತು. ಚಾನಾ ತಮ್ಮ 17ನೇ ವಯಸ್ಸಿನಲ್ಲಿ ತಮಗಿಂತಲೂ ಮೂರು ವರ್ಷ ದೊಡ್ಡವರನ್ನು ಮದುವೆಯಾಗಿದ್ದರು. ಪರ್ವತದಿಂದ ಕೂಡಿದ ಹಳ್ಳಿಯಲ್ಲಿ ಅವರ ಕುಟುಂಬ 100ಕ್ಕೂ ಹೆಚ್ಚು ಕೊಠಡಿಗಳನ್ನು ಹೊಂದಿತ್ತು ಎಂದು ತಿಳಿದು ಬಂದಿದೆ. ಈ ಎಲ್ಲ ಸದಸ್ಯರು ನಾಲ್ಕು ಅಂತಸ್ತಿನ ಮನೆಯಲ್ಲಿ ವಾಸಿಸುತ್ತಿದ್ದರು. ಇವರ ಮನೆಯೇ ರಾಜ್ಯದ ಪ್ರಮುಖ ಆಕರ್ಷಣೀಯ ಕೇಂದ್ರವಾಗಿತ್ತು.

ಬಬ್ರುವಾಹನ, ಹುಲಿಯ ಹಾಲಿನ ಮೇವು ಖ್ಯಾತಿಯ ನಿರ್ಮಾಪಕ ಇನ್ನಿಲ್ಲ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸ್ಯಾಂಡಲ್ ವುಡ್ ನಲ್ಲಿ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಕೆಸಿಎನ್ ಚಂದ್ರಶೇಖರ್ ನಿಧನರಾಗಿದ್ದಾರೆ.
ಇವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹುಲಿಯ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ತಮ್ಮ ಸಂಸ್ಥೆಯ ಮೂಲಕ ಹಲವು ಯಶಸ್ವಿ ಸಿನಿಮಾಗಳನ್ನು ನೀಡುವ ಮೂಲಕ ಕನ್ನಡಕ್ಕೆ ತಮ್ಮದೆಯಾದ ಕೊಡುಗೆಗಳನ್ನು ನೀಡಿದ್ದಾರೆ.
ಇಂದು ಮಧ್ಯಾಹ್ನ ಚಂದ್ರಶೇಖರ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ನಗರದ ಶಿವಾನಂದ ಸರ್ಕಲ್ ಬಳಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೂಗಿನಲ್ಲಿಯೇ ಮುರಿದ ಸ್ವಾಬ್ ಸ್ಟಿಕ್!

ವಿಜಯಸಾಕ್ಷಿ ಸುದ್ದಿ, ಹೈದರಾಬಾದ್‌

ತೆಲಂಗಾಣದ ಕರೀಂನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೋವಿಡ್ ಟೆಸ್ಟಿಂಗ್ ವೇಳೆ ಅವಘಡವೊಂದು ನಡೆದಿದ್ದು, ಟೆಸ್ಟಿಂಗ್ ಗೆ ಬಳಸುವ ಸ್ವಾಬ್ ಸ್ಟಿಕ್ ವ್ಯಕ್ತಿಯ ಮೂಗಿನೊಳಗೆ ಮುರಿದುಬಿದ್ದಿದೆ.
ಹಳ್ಳಿಯ ಸರಪಂಚ್‌ ಜುವಾಜಿ ಶೇಖರ್‌ ಗ್ರಾಮದ ಜನರಿಗಾಗಿ ರ‌್ಯಾಪಿಡ್‌ ಆಂಟಿಜೆನ್ ಟೆಸ್ಟ್‌ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ತಾವೇ ಮೊದಲು ಪರೀಕ್ಷೆಗೆ ಒಳಗಾಗಿದ್ದರು. ಆಗ ಮೂಗಿನೊಳಗೆ ಸ್ಟಿಕ್‌ ಮುರಿದುಬಿದ್ದಿದ್ದು, ಅದನ್ನು ಹೊರತೆಗೆಯಲು ಸ್ಥಳೀಯ ವೈದ್ಯರು ವಿಫ‌ಲವಾಗಿದ್ದಾರೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಎಂಡೋಸ್ಕೊಪಿ ಮೂಲಕ ಆ ಸ್ವಾಬ್ ಸ್ಟಿಕ್ ಹೊರತೆಗೆಯಲಾಯಿತು. ವೈದ್ಯರಿಗೆ ಕೋವಿಡ್ ಟೆಸ್ಟ್ ಮಾಡುವ ಅನಭವದ ಕೊರತೆಯಿಂದ ಈ ಅನಾಹುತ ನಡೆದಿದೆ ಎಂದು ಚೇತರಿಕೆ ಬಳಿಕೆ ಆ ವ್ಯಕ್ತಿ ಆರೋಪಿಸಿದ್ದಾರೆ.

ಕೊರೊನಾ; ಗದಗ ಜಿಲ್ಲೆಯಲ್ಲಿ ಭಾನುವಾರ 73 ಜನರಿಗೆ ಸೋಂಕು, ಒಬ್ಬರ ಸಾವು

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಭಾನುವಾರ 73 ಜನರಿಗೆ ಸೋಂಕು ತಗುಲಿದೆ.

ಇಂದು 73 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 25397 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -23, ಮುಂಡರಗಿ-07, ನರಗುಂದ-04, ರೋಣ-08, ಶಿರಹಟ್ಟಿ-31, ಹೊರಜಿಲ್ಲೆಯ-00 ಸೇರಿದಂತೆ 73 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ, ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿಯಂತೆ ಇಂದು ಒಬ್ಬರು ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.

ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಿಗ್ಲಿ ನಿವಾಸಿ 73 ವರ್ಷದ ಮಹಿಳೆ ಮೇ-29 ರಂದು ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 11 ರಂದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ.

ಇಂದು 214 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 24381 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 728 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 90 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜೂ. 17ರ ವರೆಗೂ ಮುಂದುವರೆಯಲಿದೆ ಮಳೆರಾಯನ ಅಬ್ಬರ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆರಾಯನ ಅಬ್ಬರ ಶುರುವಾಗಿದೆ. ಇದರ ಮಧ್ಯೆ ಜೂ. 17ರ ವರೆಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಈ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಬೆಳಿಗ್ಗೆಯಿಂದ ಕೂಡ ಕರಾವಳಿ, ಮಲೆನಾಡು ಸೇರಿದಂತ ಹಲವು ಜಿಲ್ಲೆಗಳಲ್ಲಿ ಮಳೆ ಉತ್ತಮವಾಗಿಯೇ ಸುರಿದಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಈ ಮೂರು ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂ. 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉಳಿದ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜೂ. 14 ರಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಚ್ಚಿದ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ಭೂಪ!

ವಿಜಯಸಾಕ್ಷಿ ಸುದ್ದಿ, ಕಂಪ್ಲಿ

ಹಾವು ಕಂಡರೆ ಸಾಕು ಭಯಪಡುವದುಂಟು. ಆದರೆ, ವ್ಯಕ್ತಿಯೊಬ್ಬ ತನಗೆ ಕಚ್ಚಿದ ನಾಗರ ಹಾವನ್ನೇ ಕೈಯಲ್ಲಿ ಹಿಡಿದು, ಆಸ್ಪತ್ರೆಗೆ ಬಂದ ಅಚ್ಚರಿಯ ಘಟನೆ ಕಂಪ್ಲಿ ತಾಲೂಕಿನಲ್ಲಿ ನಡೆದಿದೆ. ಹಾವು ಅಂದರೆ ಸಾಕು, ಮಕ್ಕಳಿಂದ ಹಿಡಿದು ದೊಡ್ಡವರು ಸಹ ಹೆದರುತ್ತಾರೆ. ಇಂತಹ ಸಂದರ್ಭದಲ್ಲಿ ತಾಲೂಕಿನ ಮೆಟ್ಟಿ ಗ್ರಾಪಂ ವ್ಯಾಪ್ತಿಯ ಉಪ್ಪಾರಹಳ್ಳಿ ಗ್ರಾಮದ ಕಾಡಪ್ಪ ಎಂಬ ವ್ಯಕ್ತಿ ತನಗೆ ಕಚ್ಚಿದ ಹಾವನ್ನೇ ಕೈಯಲ್ಲಿ ಹಿಡಿದುಕೊಂಡು ಚಿಕಿತ್ಸೆಗಾಗಿ ಕಂಪ್ಲಿಯ ಸರ್ಕಾರಿ ಆಸ್ಪತ್ರೆಗೆ ಬಂದ ವಿಚಿತ್ರ ಘಟನೆ ನಡೆದಿದೆ.

ಹಾವು ಕಚ್ಚಿಸಿಕೊಂಡ ಕಾಡಪ್ಪ ಹಾವಿನ ತೆಲೆ ಹಿಡಿದುಕೊಂದು ಆಸ್ಪತ್ರೆಗೆ ಧಾವಿಸಿದ್ದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಹಾಗೂ ಜನರು ಹೌಹಾರಿದ್ದಾರೆ. ನಂತರ ಪ್ರಥಮ ಚಿಕಿತ್ಸೆ ನೀಡಿ, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಟ್ಟಿದ್ದಾರೆ. ಈಗ ಕಾಡಪ್ಪ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹಾವು ತನಗೆ ಕಚ್ಚಿದ್ದರಿಂದ ಸಿಟ್ಟಿಗೆದ್ದ ಕಾಡಪ್ಪ, ಅಲ್ಲೇ ಪಕ್ಕದಲ್ಲಿದ್ದ ಹಾವಿನ ತಲೆಗೆ ಕೈಹಾಕಿ ಹಿಡಿದುಕೊಂಡಿದ್ದಾರೆ. ಅಲ್ಲದೆ, ಆಸ್ಪತ್ರೆಗೆ ತೆರಳಲು ತಾತ್ಸಾರ ತೋರಿದ ಕಾಡಪ್ಪನಿಗೆ ಗ್ರಾಮದ ಕೆಲವರು ಬುದ್ಧಿ ಹೇಳಿ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಸಾಮಾನ್ಯವಾಗಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಕಂಡಿದ್ದ ವೈದ್ಯರು, ಜೀವಂತ ಹಾವನ್ನೇ ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ಬಂದರೆ ಏನಾಗಬೇಡ ಹೇಳಿ? ಇಂಥದ್ದೇ ಪ್ರಸಂಗ ಕಂಪ್ಲಿಯಲ್ಲಿ ನಡೆದಿದೆ.

ಹಾವು ಕಚ್ಚಿದ್ದರಿಂದ ಉಪ್ಪಾರಹಳ್ಳಿಯ ಕಾಡಪ್ಪ ತನ್ನ ಕೈಯಲ್ಲಿ ಹಾವು ಹಿಡಿದುಕೊಂಡು ಚಿಕಿತ್ಸೆ ನೀಡುವಂತೆ ಆಸ್ಪತ್ರೆಗೆ ಬಂದಾಗ ವೈದ್ಯರು ಹೌಹಾರಿದ್ದಾರೆ. ಅಲ್ಲದೆ, ಆಸ್ಪತ್ರೆಗೆ ಆಗಮಿಸಿದ್ದ ಜನರೂ ಹೆದರಿಕೊಂಡು ಅಕ್ಕಪಕ್ಕ ಓಡಿದ್ದಾರೆ. ಕೆಲವರು ಹಾವು ಹಿಡಿದುಕೊಂಡಾತನನ್ನು ನೋಡಲು ಮುಗಿಬಿದ್ದಿದ್ದಾರೆ. ಕಾಡಪ್ಪ ಹಿಡಿದುಕೊಂಡಿದ್ದ ಹಾವನ್ನು ಕೊನೆಗೆ ಆಸ್ಪತ್ರೆ ಆವರಣದ ಪಕ್ಕದಲ್ಲಿ ಬಿಟ್ಟುಬಂದ ನಂತರ ಆತನಿಗೆ ವೈದ್ಯರು ಚಿಕಿತ್ಸೆ ನೀಡಿ ನಂತರ ಬಳ್ಳಾರಿ ವಿಮ್ಸ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿದ್ದು ಗುಣಮುಖವಾಗುತ್ತಿದ್ದಾನೆಂದು ತಿಳಿದು ಬಂದಿದೆ.

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ನ್ಯೂಜಿಲೆಂಡ್!

ವಿಜಯಸಾಕ್ಷಿ ಸುದ್ದಿ, ಲಂಡನ್

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ ತಂಡ ಗೆದ್ದು ಬೀಗಿದೆ. ಅಲ್ಲದೇ, ಭಾರತದೊಂದಿಗೆ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಆತ್ಮವಿಶ್ವಾಸ ಬೆಳೆಸಿಕೊಂಡಿದೆ.

ಲಂಡನ್‌ ನಲ್ಲಿ ನಡೆದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿತ್ತು. ಆದರೆ, ಎರಡನೇ ಟೆಸ್ಟ್ ಪಂದ್ಯವನ್ನು ನ್ಯೂಜಿಲೆಂಡ್ ತಂಡ ಗೆದ್ದುಕೊಂಡಿದೆ. ಈ ಮೂಲಕ 1-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿತು.

ಎರಡನೇ ಟೆಸ್ಟ್ ನ ಮೊದಲನೇ ಇನ್ನಿಂಗ್ಸ್ ನಲ್ಲಿ ರಾಯ್ ಬರ್ನ್ಸ್ 81, ಲಾರೆನ್ಸ್ ಅಜೇಯ 81 ಹಾಗೂ ಮಾರ್ಕ್ ವುಡ್ 41 ರನ್ ಗಳಿಂದಾಗಿ ಇಂಗ್ಲೆಂಡ್ ತಂಡ ಎಲ್ಲ ವಿಕೆಟ್‍ ಗಳನ್ನು 303 ರನ್ ಗಳನ್ನು ಗಳಿಸಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ 4, ಮ್ಯಾಟ್ ಹೆನ್ರಿ 3 ಹಾಗೂ ಅಜಜ಼್ ಪಟೇಲ್ 2 ವಿಕೆಟ್ ಪಡೆದು ಮಿಂಚಿದ್ದರು. ಆನಂತರ ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮುಂದುವರೆಸಿದ್ದ ನ್ಯೂಜಿಲೆಂಡ್ 388 ರನ್‌ ಗಳಿಗೆ ಆಲ್ ಔಟ್ ಆಯಿತು. ಈ ಮೂಲಕ ನ್ಯೂಜಿಲೆಂಡ್ ಗೆ 85 ರನ್ ಗಳ ಲೀಡ್ ಸಿಕ್ಕಿತ್ತು. ಇಂಗ್ಲೆಂಡ್ ತಂಡದ ಪರ ಸ್ಟುವರ್ಟ್ ಬ್ರಾಡ್ 4, ಮಾರ್ಕ್ ವುಡ್ 2 ಹಾಗೂ ಓಲಿ ಸ್ಟೋನ್ 2 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ಬೌಲರ್ ಗಳ ಎದುರು ತತ್ತರಿಸಿ ಹೋದರು. ಕೇವಲ 122 ರನ್‌ ಗಳಿಗೆ ಇಂಗ್ಲೆಂಡ್ ಸರ್ವ ಪತನ ಕಂಡಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 2 ವಿಕೆಟ್ ಕಳೆದುಕೊಂಡು 41 ರನ್ ಗಳಿಸುವುದರ ಮೂಲಕ 8 ವಿಕೆಟ್ ಗಳ ಜಯ ಸಾಧಿಸಿತು.

ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮ್ಯಾಟ್ ಹೆನ್ರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ನ್ಯೂಜಿಲೆಂಡ್ ತಂಡದ ಯುವ ಆಟಗಾರ ಡಿವೋನ್ ಕಾನ್ವೆ ಹಾಗೂ ಇಂಗ್ಲೆಂಡ್ ತಂಡದ ರಾಯ್ ಬರ್ನ್ಸ್ ಇಬ್ಬರೂ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಈ ಗೆಲುವಿನ ಮೂಲಕ ನ್ಯೂಜಿಲೆಂಡ್ ತಂಡ ಆತ್ಮವಿಶ್ವಾಸದಲ್ಲಿಯೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತವನ್ನು ಎದುರಿಸಲಿದೆ.

ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಒಯ್ದ ಭೂಪ!

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಯುವಕನೊಬ್ಬ ಆಸ್ಪತ್ರೆಗೆ ಬಂದಿರುವ ಘಟನೆ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಳ್ಳಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗ್ರಾಮದ ಯುವಕ ಕಾಡಪ್ಪನ ಕಾಲಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಎಚ್ಚರಗೊಂಡ ಕಾಡಪ್ಪ ಪಕ್ಕದಲ್ಲಿಯೇ ಇದ್ದ ಹಾವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಗ್ರಾಮದ ಮಧ್ಯದಲ್ಲಿಯೇ ನಡೆದುಕೊಂಡು ಆಸ್ಪತ್ರೆಗೆ ತೆರಳಿದ್ದಾನೆ.
ಅಲ್ಲದೇ, ಈ ಯುವಕ ಹಾವನ್ನು ಕೈಯಲ್ಲಿಯೇ ಹಿಡಿದುಕೊಂಡು ಚಿಕಿತ್ಸೆಗಾಗಿ ಕಾದು ಕುಳಿತಿದ್ದಾನೆ. ಇದನ್ನು ಕಂಡ ವೈದ್ಯರೇ ಗಾಬರಿಗೊಂಡಿದ್ದಾರೆ. ಆ ನಂತರ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕರ್ನಾಟಕದ ಉದ್ಯೋಗ ಕನ್ನಡಿಗರ ಕೈಯಲ್ಲಿಯೇ ಇರಲಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸಾಮಾಜಿಕ ಜಾಲತಾಣದಲ್ಲಿ ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎಂಬ ಅಭಿಯಾನ ಪ್ರಾರಂಭವಾಗಿದೆ.
ಸದ್ಯ ಈ ಹ್ಯಾಶ್ ಟ್ಯಾಗ್ ಟ್ವೀಟರ್ ನಲ್ಲಿ ಟ್ರೆಂಡಿಂಗ್ ಆಗಿದೆ. ರಾಜ್ಯದಲ್ಲಿನ ಉದ್ಯೋಗಗಳು ಬೇರೆಯವರ ಪಾಲಾಗುತ್ತಿವೆ. ರಾಜ್ಯದಲ್ಲಿಯೇ ನಮ್ಮವರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

karnatakaJobsForkannadigas ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ಪ್ರಾರಂಭವಾಗಿದೆ. ಈ ಅಭಿಯಾನಕ್ಕೆ ಸಾಕಷ್ಟು ಕನ್ನಡಿಗರು ಕೈ ಜೋಡಿಸಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸಲಾಗಿದೆ.

error: Content is protected !!