Home Blog Page 3360

ಸಿ.ಟಿ. ರವಿ ನಾಲಿಗೆಯನ್ನು ಇಟ್ಟಿಗೆಯಿಂದ ಉಜ್ಜಿ ಸರಿ ಮಾಡಬೇಕಿದೆ

  • ತುಮಕೂರಿನಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ ವಾಗ್ದಾಳಿ.

ವಿಜಯಸಾಕ್ಷಿ ಸುದ್ದಿ, ತುಮಕೂರು

ಸಿಟಿ ರವಿ ನಾಲಿಗೆಯನ್ನು ಇಟ್ಟಿಗೆ ತಗೊಂಡು ಉಜ್ಜಿ ಸರಿ ಮಾಡಬೇಕು ಎಂದು ಕಾಂಗ್ರೆಸ್ ನ ಮಾಜಿ ಕೆ.ಎನ್. ರಾಜಣ್ಣ ವಾಗ್ದಾಳಿ ನಡೆಸಿದ್ದಾರೆ.

ತುಮಕೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜಣ್ಣ, ಆಲಮಟ್ಟಿ ಡ್ಯಾಂಗೆ ಲಾಲ್ ಬಹದ್ದೂರ್ ಶಾಸ್ತ್ರಿ ಹೆಸರು ಬದಲಾಯಿಸಿ ವಾಜಪೇಯಿ ಹೆಸರಿಡೋಕೆ ಆಗುತ್ತಾ? ಬಡವರ ಪರವಾದ ಹೊಸ ಯೋಜನೆ ತಂದು ತಮಗೆ ಬೇಕಾದ ಹೆಸರು ಇಟ್ಟುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ರಾಜೀವ್ ಗಾಂಧಿ ಹೆಸರು ಬದಲಾಯಿಸಿ ಧ್ಯಾನ್ ಚಂದ್ ಹೆಸರಿಡೋದು‌ ಸಣ್ಣ ತನದ ಪರಮಾವಧಿ. ರಾಜೀವ್ ಗಾಂಧಿ ದೇಶಕ್ಕೆ ಕೊಟ್ಟ ಕೊಡುಗೆಗಳಿಗೆ ಅಪಚಾರ ಮಾಡಿದಂತೆ. ಬೇಕಾದರೆ ಬೇರೆ ಪ್ರಶಸ್ತಿ ಮಾಡಿ ಧ್ಯಾನಚಂದ್ ಹೆಸರು ಇಡಲಿ.

ಯಾರ ಬೇಡ ಅಂತಾರೆ. ಇಂದಿರಾ ಗಾಂಧಿ ಹೆಸರು ಇಡೀ ಪ್ರಪಂಚಕ್ಕೆ ಗೊತ್ತು. ಇಂದಿರಾ ಎಂದರೆ ಇಂಡಿಯಾ ಅಂತ. ಅವರು ದೇಶದಲ್ಲಿ ಅತಿ ಹೆಚ್ಚು ಜನಮಾನಸದಲ್ಲಿ ಉಳಿದ ಪ್ರಧಾನಿ.

ಯಾರ್ರೀ ಅವನು ಸಿ.ಟಿ. ರವಿ. ಸ್ವಾತಂತ್ರ್ಯ ಬರೋವಾಗ ಇವನು ಹುಟ್ಟೇ ಇರಲಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಎಷ್ಟು ಕಷ್ಟ ಅನುಭವಿಸಿದ್ದಾರೆಂಬ ಪರಿಚಯ ಇವರನಿಗಿದೆಯೇ ಎಂದು ಪ್ರಶ್ನಿಸಿದ ಅವರು,

ಆರ್ ಎಸ್ ಎಸ್ ಹೇಳಿಕೊಟ್ಟಿದ್ದನ್ನು ಹೇಳಿಕೊಂಡು ಓಡಾಡುತ್ತಾರೆ.‌ ಅದಕ್ಕೆ ಅವರ ನಾಲಿಗೆಗೆ ಇಟ್ಟಿಗೆ ತಗೊಂಡು ಉಜ್ಜಿ ಸರಿ ಮಾಡಬೇಕಿದೆ ಎಂದು ಕುಟುಕಿದರು.

ಮೇಕೆದಾಟು ವಿಚಾರದಲ್ಲಿ ಸಿ.ಟಿ.ರವಿ, ನಾನು ಭಾರತೀಯ ಅಂತಾನೆ. ಅವನು ಕರ್ನಾಟಕದ ಶಾಸಕ. ಮೊದಲು ರಾಜ್ಯದ ನೆಲ, ಜಲ‌, ಜನರ ಹಿತ ಕಾಪಾಡಿ ಬೇರೆಯವರ ಸುದ್ದಿಗೆ ಹೋಗಬೇಕು. ಮೊದಲು ನಮ್ಮ ಜನರ ಹಿತ ಆಮೇಲೆ ಬೇರೆಯವರ ವಿಚಾರ ಎಂದು ಬುದ್ಧಿವಾದ ಹೇಳಿದರು.

ಸಾವಿನಲ್ಲೂ ಒಂದಾದ ದಂಪತಿ

ವಿಜಯಸಾಕ್ಷಿ ಸುದ್ದಿ, ಹಾವೇರಿ

ಪತ್ನಿಯ ಸಾವಿನ ಸುದ್ದಿ ಕೇಳಿ ಪತಿಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಕಂಚಾರಗಟ್ಟಿ ಗ್ರಾಮದಲ್ಲಿ ನಡೆದಿದೆ.

ಹೊನ್ನಮ್ಮ ಶೇಖರಗೌಡ ಹುಳ್ಯಾಳ (60), ಶೇಖರಗೌಡ ಹುಳ್ಯಾಳ (65) ಮೃತ ದಂಪತಿ. ಅನಾರೋಗ್ಯದಿಂದ ಬಳಲುತ್ತಿದ್ದ ಹೊನ್ನಮ್ಮ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಕೊನೆ ಉಸಿರೆಳೆದಿದ್ದರು.

ಪತ್ನಿಯ ಸಾವಿನ ಸುದ್ದಿ ಕೇಳಿದ ಶೇಖರಗೌಡ ಹೃದಯಾಘಾತ ಉಂಟಾಗಿ ತಕ್ಷಣ ಮೃತಪಟ್ಟಿದ್ದಾರೆ. ಬದುಕಿನ ಪಯಣದಲಿ ಸುಖ- ದುಃಖ ಹಂಚಿಕೊಂಡು ಬಾಳಿದ್ದ ಜೋಡಿ ಸಾವಿನಲ್ಲೂ ಒಂದಾಗಿ ಜೀವನದ ಪಯಾಣ ಮುಗಿಸಿದೆ.

ಎರಡು ಹಿರಿಯ ಜೀವಗಳು ಒಟ್ಟಿಗೆ ಅಗಲಿರುವುದು ಹುಲ್ಯಾಳ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ನೆಹರೂ ಹುಕ್ಕಾ ಸೇದಿದ್ದು ತಪ್ಪೋ? ರವಿ ಹೇಳಿದ್ದು ತಪ್ಪೋ?

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

ಹುಕ್ಕಾ ಬಾರಿನ ಬಗ್ಗೆ ಮಾತನಾಡಿದ್ದಕ್ಕೆ ಉರಿ ಹತ್ತಿಕೊಂಡಂತೆ ಮಾತನಾಡುತ್ತಿದ್ದಾರೆ. ನೆಹರೂ ಹುಕ್ಕಾ ಸೇದುತ್ತಿದ್ದದು ತಪ್ಪೋ, ರವಿ ಹೇಳಿದ್ದು ತಪ್ಪೋ? ರವಿ ಹೇಳಿದ್ದು ತಪ್ಪು ಎನ್ನುವುದಾದರೆ ಅವರಿಗೆ ನೆಹರೂ ಬಗ್ಗೆ ಇನ್ನೆಷ್ಟು ಆಕ್ರೋಶ ಇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿರುಗೇಟು ನೀಡಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರೂ ಹುಕ್ಕಾ ಸೇದುವ ನೂರಾರು ಫೋಟೋಗಳಿವೆ. ಕಾಂಗ್ರೆಸಿಗರಿಗೆ ನನ್ನ ಮೇಲೆ ಇಷ್ಟು ದ್ವೇಷ ಇದೆ ಅನ್ನೋದಾದರೆ ನೆಹರೂ ಬಗ್ಗೆ ಎಷ್ಟು ದ್ವೇಷ ಇರಬಹುದು? ನೆಹರೂ, ಇಂದಿರಾ ಬಗ್ಗೆ ನಾನು ಮಾತನಾಡಿದ್ದು ತಪ್ಪು ಅನ್ನುತ್ತಿದ್ದಾರೆ ಎಂದು ಕುಟುಕಿದರು.

ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ ಇಂದಿರಾ ಬಗ್ಗೆ ಮಾತನಾಡಿರುವುದನ್ನು ಕೇಳಿಸಬೇಕಾ? ಇಬ್ರಾಹಿಂ ಇಂದಿರಾ ಗಾಂಧಿಯನ್ನು ಏನೆಂದು ಕರೆದಿದ್ರು? ನಾನು ಆ ಮಟ್ಟಕ್ಕೆ ಇಳಿದಿಲ್ಲ. ನನಗೆ ಕುಡಿಯೋ ಅಭ್ಯಾಸವಿಲ್ಲ, ಕುಡುಕನ ಪಟ್ಟ ಕಟ್ಟಿದರು. ಆದರೆ, ದಿನಾ ಕುಡಿಯುವವರು ಅವರೇ ಎಂದು ತಿರುಗೇಟು ನೀಡಿದರು.

ನಾನು 5 ಗಂಟೆಗೆ ಎದ್ದು ಯೋಗ ಮಾಡುತ್ತೇನೆ. ಇಡೀ ದಿನ ಸಕ್ರಿಯವಾಗಿರುತ್ತೇನೆ. ನಾನು ಆರೆಸ್ಸೆಸ್ ಸ್ವಯಂ ಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ ಎಂದು ಕುಟುಕಿದರು.

ಯಡಿಯೂರಪ್ಪ ದುಡಕಿನ ನಿರ್ಧಾರ ಬೇಡ ಎಂದಿದ್ದಾರೆ; ಸಚಿವ ಆನಂದ ಸಿಂಗ್

ವಿಜಯಸಾಕ್ಷಿ ಸುದ್ದಿ, ವಿಜಯನಗರ

ಯಡಿಯೂರಪ್ಪ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡ ಎಂದಿದ್ದಾರೆ. ಬೊಮ್ಮಾಯಿ ಹೇಗೆ ಸಮಸ್ಯೆ ಬಗೆಹರಿಸುತ್ತಾರೆ ಕಾದು ನೋಡೋಣ ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದರು.

ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಆಶೀರ್ವಾದ ಪಡೆಯಲು ಬೆಂಗಳೂರಿಗೆ ಹೋಗಿದ್ದೆ. ರಾಜಕೀಯ ಮಾತನಾಡಲು ಹೋಗಿರಲಿಲ್ಲ ಎಂದರು.

ವಿಜಯನಗರ ಜನರ ಋಣ ತಿರಿಸಲು ಆಗೋದಿಲ್ಲ. ಜಿಲ್ಲೆ ಮಾಡಿದ ಸಾಧನೆ ತೃಪ್ತಿ ಇದೆ.
ಯಡಿಯೂರಪ್ಪನವರು ಜಿಲ್ಲೆ ಘೋಷಣೆ ಮಾಡಿದರು. ಅವರ ಋಣ ತೀರಿಸಕ್ಕಾಗಲ್ಲ ಎಂದು ಹೇಳಿದ ಅವರು, ವಿಜಯನಗರ ಜಿಲ್ಲೆಯಲ್ಲಿ ಮೊದಲ ಬಾರಿ ಧ್ವಜಾರೋಹಣ ‌ಮಾಡುತ್ತಿದ್ದೇನೆ ಎಂಬ ಖುಷಿ ಇದೆ ಎಂದರು.

ಸಚಿವ ಸ್ಥಾನ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರಿಗೆ ಏನು ಹೇಳಬೇಕು ಹೇಳಿದ್ದಾಗಿದೆ. ದೆಹಲಿಗೆ ‌ಹೋಗುತ್ತೇನೆ ಎಂದು ಹೇಳಿಲ್ಲ. ಹೋಗೋದು ಇಲ್ಲ ಎಂದು ಹೇಳಿದರು.

ಕಾಡಿಬೇಡಿ, ಟಯರ್ ಸುಟ್ಟು ಮಂತ್ರಿಯಾಗಲಾರೆ; ಬಸನಗೌಡ ಪಾಟೀಲ ಯತ್ನಾಳ

ವಿಜಯಸಾಕ್ಷಿ ಸುದ್ದಿ, ವಿಜಯಪುರ

ನಾನು ಕಾಡಿಬೇಡಿ, ಟೈಯರ್ ಸುಟ್ಟು ಮಂತ್ರಿ, ಶಾಸಕ ಆಗುವುದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ನಮ್ಮ‌ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಿತ್ತು. ಈಗ ನಾಯಕತ್ವ ಬದಲಾವಣೆ ಆಗಿದೆ. ಸಿಎಂ ಬೊಮ್ಮಾಯಿ ಬಿಎಸ್ ವೈ ನೆರಳು ಆಗಲ್ಲ. ಅವರಿಗೆ ಸ್ವಲ್ಪ ಟೈಂ ಕೊಡಿ ಎಂದರು.

ನಾನು ಜೀರೋ ಇಂದ ಹೀರೋ ಆದವನು. ಹಿಂದೆ ಜೀರೋ ಆಗಿ ಈಗ ಮತ್ತೆ ಹೀರೋ ಆಗಿದ್ದೇನೆ.
ದೆಹಲಿಯಲ್ಲಿ ಶಾಸಕರ ಲಾಭಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಮಂತ್ರಿ ಸ್ಥಾನಕ್ಕೆ ಲಾಭಿ ನಡೆಸುವುದು ಸರಿಯಲ್ಲ.

ಸೂತ್ರಧಾರರೊಬ್ಬರು ಮಗು ಚೂಟಿ, ತೊಟ್ಟಿಲು ತೂಗುತ್ತಿದ್ದಾರೆ. ಈಗ ಸೂತ್ರಧಾರರ ಶಿಷ್ಯರೇ ಜಗಳ ತೆಗೆಯುತ್ತಿದ್ದಾರೆ ಎಂದು ಪರೋಕ್ಷವಾಗಿ‌ ಮಾಜಿ ಸಿಎಂ ಬಿಎಸ್ ವೈ ಕಾಲೆಳೆದರು.

ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಐ.ಟಿ., ಆಟೋ ಮತ್ತು ಬ್ಯಾಂಕಿಂಗ್ ವಲಯದ ಷೇರುಗಳ ಗಳಿಕೆಯಿಂದಾಗಿ ದೇಶದ ಷೇರುಪೇಟೆಗಳು ಶುಕ್ರವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ವಹಿವಾಟಿನಲ್ಲಿ ಹೊಸ ಎತ್ತರ ಕಂಡು ಸಾರ್ವಕಾಲಿಕ ದಾಖಲೆ ಸೃಷ್ಟಿಸಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ವಹಿವಾಟಿನಲ್ಲಿ 400ಕ್ಕೂ ಅಧಿಕ ಅಂಶ ಏರಿಕೆ ಕಂಡು ಹೊಸ ಎತ್ತರವಾದ 55,270 ಅಂಶ ತಲುಪಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 120 ಅಂಶ ಹೆಚ್ಚಳ ಕಂಡು 16486 ಅಂಶಗಳಿಗೆ ತಲುಪಿತ್ತು.

ಸೆನ್ಸೆಕ್ಸ್‌ನಲ್ಲಿ ಐಟಿ, ಪೇಪರ್ ವಲಯ, ಬ್ಯಾಂಕ್ ನಿಫ್ಟಿ ಷೇರುಗಳು ಉತ್ತಮ ಗಳಿಕೆ ದಾಖಲಿಸಿದವು. ಟಾಟಾ ಕನ್ಸುಮರ್, ಬಜಾಜ್ ಆಟೋ, ಎಲ್ ಟಿ, ಟಿಸಿಎಸ್ ಷೇರುಗಳು ಹೆಚ್ಚಿನ ಗಳಿಕೆ ಕಂಡಿವೆ.

ಕಳೆದ ಎರಡು ದಿನಗಳಿಂದ ಸಂವೇದಿ ಸೂಚ್ಯಂಕ ನಿರಂತರ ಏರಿಕೆ ದಾಖಲಿಸುತ್ತಿದೆ. ಶುಕ್ರವಾರವಂತೂ 400 ಕ್ಕೂ ಅಧಿಕ ಅಂಶ ದಾಖಲಿಸಿತ್ತು. ಅನ್ ಲಾಕ್ ಬಳಿಕ ದೇಶದ ಆರ್ಥಿಕತೆ ಚೇತರಿಕೆಯ ಹಂತಕ್ಕೆ ಮರಳಿದ್ದು, ಇದಕ್ಕೆ ತಕ್ಕಂತೆ ಸಂವೇದಿ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಾಡಿದೆ.

ಮತದಾರರಿಗೆ ಹಣ ಹಂಚಿಕೆ; ಮಾಜಿ ಶಾಸಕನಿಗೆ ಜೈಲು ಶಿಕ್ಷೆ

ವಿಜಯಸಾಕ್ಷಿ ಸುದ್ದಿ, ತೆಲಂಗಾಣ

ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡಿದ ಪ್ರಕರಣದಲ್ಲಿ ಮಾಜಿ ಶಾಸಕರೊಬ್ಬರಿಗೆ ಪ್ರಜಾ ಪ್ರತಿನಿಧಿ ನ್ಯಾಯಾಲಯ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

ಮಾಜಿ ಶಾಸಕ ಪಾಯಂ ವೆಂಕಟೇಶ್ವರಲು ಶಿಕ್ಷೆಗೆ ಗುರಿಯಾದ ಶಾಸಕ.

2018ರ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣದ ಖಮ್ಮಂ ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರ ಪಿನಪಾಕ ಚುನಾವಣೆಯ ವೇಳೆ ಪಾಯಂ ವೆಂಕಟೇಶ್ವರಲು ವೋಟಿಗಾಗಿ ಮತದಾರರಿಗೆ ಹಣ ಹಂಚಿದ್ದ ಆರೋಪ ಕೇಳಿಬಂದಿತ್ತು.

ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೆಲಂಗಾಣ ಪ್ರಜಾ ಪ್ರತಿನಿಧಿ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಪರಸ್ಪರ ಢಿಕ್ಕಿ ಸಂಭವಿಸಿ ರಸ್ತೆಯಲ್ಲೇ ಹೊತ್ತಿ ಉರಿದ ಲಾರಿಗಳು

0

ವಿಜಯಸಾಕ್ಷಿ ಸುದ್ದಿ, ಬೀದರ್

ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ನಡು ರಸ್ತೆಯಲ್ಲೇ ಲಾರಿಗಳು ಹೊತ್ತಿ ಉರಿದ ಘಟನೆ ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಬಳಿ‌ ತಡರಾತ್ರಿ ನಡೆದಿದೆ.

ಅಪಘಾತದಲ್ಲಿ ಒಂದು ಲಾರಿ ಸುಟ್ಟು ಭಸ್ಮವಾದರೆ, ಇನ್ನೊಂದು ಭಾಗಶಃ ಸುಟ್ಟು ಕರಕಲಾಗಿದೆ.

ಮಹಾರಾಷ್ಟ್ರದ ಪು‌ಣೆಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಸಿಮೆಂಟ್ ತುಂಬಿದ ಲಾರಿ, ಮುಂದೆ ಸಾಗುತ್ತಿದ್ದ ಕಂಟೇನರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಲಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆಯೇ ಬಸವಕಲ್ಯಾಣ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ
ಬೆಂಕಿ ನಂದಿಸಿದ್ದಾರೆ. ಸಂಚಾರಿ ಪಿಎಸ್ಐ ಪುಷ್ಪಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾತೆ ಯಾವುದಾದರೂ ಸರ್ಕಾರದ ಯೋಜನೆ ಜನರಿಗೆ ಮುಟ್ಟಿಸುವ ಕೆಲಸ ಮಾಡಬಹುದು

  • ವಿಜಯನಗರದಲ್ಲಿ‌ ಮಾಜಿ ಸಚಿವ ಸಂತೋಷ ಲಾಡ್ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ವಿಜಯನಗರ

ಆನಂದಸಿಂಗ್ ದೊಡ್ಡ ಖಾತೆಗೆ ಬೇಡಿಕೆ ಇಟ್ಟಿರುವುದು ಅವರ ವೈಯಕ್ತಿಕ ವಿಚಾರ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು.
ಹೊಸಪೇಟೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ನನ್ನ ಆತ್ಮೀಯ ಸ್ನೇಹಿತರು. ಈ ಭಾಗದ ಪ್ರಭಾವಿ ನಾಯಕರೂ ಸಹ. ಪ್ರಬಲ ಖಾತೆಗೆ ಪಟ್ಟು ಹಿಡಿದಿರುವುದು ಅವರ ವೈಯಕ್ತಿಕ ವಿಚಾರ.

ಯಾವುದೇ ಖಾತೆ ಕೊಟ್ಟರೂ ನಿಭಾಯಿಸಹಬಹುದು. ಸರ್ಕಾರದ ಕಾರ್ಯಕ್ರಮ ಜನರಿಗೆ ತಲುಪಿಸವಲ್ಲಿ ಯಶಸ್ವಿಯಾಗಿ ಕೆಲಸ ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಕಳೆದ ಮೂರು ವರ್ಷಗಳಿಂದ ಯಡಿಯೂರಪ್ಪ ಅವರ ಸರ್ಕಾರ ಮತ್ತು ಈಗಿನ ಬೊಮ್ಮಾಯಿಯವರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.

ಕೊರೊನಾ ವಿಚಾರದಲ್ಲಿ ಕನಿಷ್ಠ ಸಹಾಯ ಮಾಡಲೂ ಕೂಡ ಆಗುತ್ತಿಲ್ಲ ಎಂದು ಆರೋಪಿಸಿದ ಸಂತೋಷ ಲಾಡ್, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೊರೊನಾ ಸಮಯದಲ್ಲಿ ಜನತೆಯ ಜತೆಗಿದ್ದೇವೆ. ಜನ ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಗೆ ಜನ ಕೈ ಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.


ಬಿಜೆಪಿಯ ಕಾರ್ಯಕ್ರಮಗಳು ಕೇವಲ ಪೇಪರ್ ನಲ್ಲಿ ಮಾತ್ರ ಅನುಷ್ಠಾನಗೊಳ್ಳುತ್ತಿವೆ. ವಿಜಯನಗರ ಜಿಲ್ಲೆ ರಚನೆ ಮಾಡಿದ ನಂತರ ಒಬ್ಬ ವಿಶೇಷ ಅಧಿಕಾರಿ ನೇಮಕ ಮಾಡಿರುವುದನ್ನು ಬಿಟ್ಟರೆ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬರಲಿ, ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.

ಬಾಂಬೆ ಬಾಯ್ಸ್ ನ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರ ಕುರಿತು ಪ್ರತಿಕ್ರಿಸಿದ ಅವರು, ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಂತೋಷ ಲಾಡ್ ಹೇಳಿದರು.

ಸಚಿವ, ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

ವಿಜಯಸಾಕ್ಷಿ ಸುದ್ದಿ, ಕಲಬುರಗಿ

ನಾನೀಗ ಬಿಜೆಪಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನಾನು ಹುದ್ದೆ ಹುಡುಕಿಕೊಂಡು ಹೋಗಿಲ್ಲ. ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.

ಕಲಬುರಗಿಯಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ, ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ.
ಯಡಿಯೂರಪ್ಪನವರು ಕೂಡ ರಾಜೀನಾಮೆ ನೀಡುವಾಗ ಯಾವುದೇ ಬೇಡಿಕೆ ಇಟ್ಟಿರಲಿಲ್ಲ.
ನನಗೆ ಇನ್ನೂ ವಯಸ್ಸಿದೆ. ಸದ್ಯ ಪಕ್ಷದ ಸಂಘಟನೆಗೆ ನಾನು ಹೆಚ್ಚಿನ ಗಮನ ಹರಿಸಲಿದ್ದೇನೆ ಎಂದರು.

ಸಂಪುಟ ರಚನೆ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಎಲ್ಲ ಭಿನ್ನಾಭಿಪ್ರಾಯ ಬಗೆಹರಿಸುತ್ತಾರೆ. ಇತರೆ ಪಕ್ಷಗಳಿಂದ ಬಿಜೆಪಿಗೆ ಬಂದ 17 ಶಾಸಕರಲ್ಲಿ ಆನಂದ ಸಿಂಗ್ ಮೊದಲಿಗರು. ಅವರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ, ಅದನ್ನು ಮುಖ್ಯಮಂತ್ರಿಗಳು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೊಮ್ಮಾಯಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ಸಂಪುಟದಲ್ಲಿ
ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗಬೇಕಿತ್ತು. ಕಲಬುರಗಿಯ ಅಳಿಯನಾಗಿದ್ದು, ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವುದು ನನಗೂ ವೈಯಕ್ತಿಕವಾಗಿ ಬೇಸರ ತಂದಿದೆ. ಇನ್ನೂ ನಾಲ್ಕು ಸಚಿವ ಸ್ಥಾನ ಖಾಲಿಯಿವೆ. ಈ ಭಾಗಕ್ಕೆ ನ್ಯಾಯ ದೊರಕಿಸಲು ಪ್ರಯತ್ನಿಸುತ್ತೇನೆ. ಜಿಲ್ಲೆಗೆ ಸೂಕ್ತ ಸ್ಥಾನಮಾನ ಸಿಗುವ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.

ಕಮಲ‌ ಅರಳಿಸಲು ಪಣ

ಬಿಬಿಎಂಪಿ, ಗುಲ್ಬರ್ಗಾ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆಯಾಗಿದೆ. ಪ್ರತಿ ವಾರ್ಡನಲ್ಲೂ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಿ ಎಲ್ಲಡೆ ಕಮಲ‌ ಅರಳಿಸಲಾಗುವುದು ಎಂದು ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಲಿದೆ. ಮುಂಬರುವ ಸಿಂದಗಿ, ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಜಯಶಾಲಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!