Home Blog Page 3420

ಕೃಷಿ ಕಾಯ್ದೆ‌ ವಿರೋಧಿಸಿ ರೈತರ ಪ್ರತಿಭಟನೆ; ಪೊಲೀಸರ ಜೊತೆ ಮಾತಿನ ಚಕಮಕಿ

ವಿಜಯಸಾಕ್ಷಿ ಸುದ್ದಿ, ಗದಗ

ಕೇಂದ್ರ ಸರಕಾರದ ಕೃಷಿ ವಿರೋಧಿ ಕಾಯ್ದೆ‌ ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಗದಗ ಜಿಲ್ಲೆಯಲ್ಲಿ ವಿವಿಧ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಬೆಳಿಗ್ಗೆಯಿಂದ ಅವಳಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಂದ್ ನ ಬಿಸಿ ಇರಲಿಲ್ಲ.

ಮುಂಜಾನೆ 11 ಗಂಟೆಯ‌ ನಂತರ ಗದಗನ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಸೇರಿದ ನೂರಾರು ರೈತರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ತೆರೆದಿದ್ದ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿಸಿದರು.

ನಂತರ ಸರ್ಕಲ್ ನಲ್ಲಿ ಅಡುಗೆ ಮಾಡಲು ಮುಂದಾದರು. ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ಇದ್ದ ಪೊಲೀಸರು, ಬೆಂಕಿ ಹಚ್ಚಲು ಅವಕಾಶ ನೀಡಲ್ಲ ಎಂದಾಗ ಪೊಲೀಸರು, ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ನಂತರ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ‌ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಮುಳಗುಂದ ನಾಕಾದಲ್ಲಿ ಕೆಲಹೊತ್ತು ರಸ್ತೆ ತಡೆ‌ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಭಾರತ ಬಂದ್ ಗೆ ಕರವೇ ರೈತ ಘಟಕ ಬೆಂಬಲ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಖಂಡಿಸಿ ಸೆಪ್ಟಂಬರ್ 27ರಂದು ಕರೆ ನೀಡಿರುವ ಭಾರತ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಬೆಂಬಲ ನೀಡಲಿದೆ ಎಂದು ಜಿಲ್ಲಾಧ್ಯಕ್ಷ ಪಾಪು ಧಾರೆ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ ಮೋರ್ಚಾದಿಂದ ನೀಡಿರುವ ಭಾರತ ಬಂದ್ ಕರೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ನೈತಿಕ ಬೆಂಬಲ ಕೊಡಲಾಗುವುದು.

ಜನರು ಕೋವಿಡ್ ಸಾಂಕ್ರಾಮಿಕದ ನಂತರ ಈಗ ತಾನೆ ಸುಧಾರಿಸಿಕೊಳ್ಳುತ್ತಿದ್ದಾರೆ. ರಾಜ್ಯದ ಆರ್ಥಿಕತೆ ಸಹ ಸಹಜ ಸ್ಥಿತಿಗೆ ಬರುತ್ತಿದೆ. ಮತ್ತೆ ಶಾಲಾ ಕಾಲೇಜು ಹಾಗೂ ಸಣ್ಣ ಪುಟ್ಟ ವ್ಯಾಪಾರಸ್ಥರ ವ್ಯಾಪಾರ ಸುಮಾರು 2ವರ್ಷದ ನಂತರ ಪ್ರಾರಂಭವಾಗಿವೆ. ಇವುಗಳಿಗೆ ವ್ಯತಯ ಆಗಬಾರದು ಎಂಬ ಕಾರಣದಿಂದಾಗಿ ಕರ್ನಾಟಕ ರಕ್ಷಣಾ ವೇದಿಕೆ ರಸ್ತೆಗಿಳಿದು ಬಂದ್ ಗೆ ಬೆಂಬಲ ನೀಡದೆ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಮನವಿ ನೀಡುವ ಮೂಲಕ ಬೆಂಬಲ ನೀಡುತ್ತದೆ ಎಂದು ಪಾಪು ಧಾರೆ ಹೇಳಿದ್ದಾರೆ.

ಸಿಎಂ ಕಾರ್ಯಕ್ರಮದಿಂದ ದೂರ ಉಳಿದ ಜಾರಕಿಹೊಳಿ ಬ್ರದರ್ಸ್

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದರೂ ಜಾರಕಿಹೊಳಿ ಬ್ರದರ್ಸ್ ಮಾತ್ರ ಕಾಣಿಸಿಕೊಳ್ಳದೇ ಅಚ್ಚರಿ ಮೂಡಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಸ್ವಾಗತಕ್ಕೆ ಜಿಲ್ಲೆಯ ಹಲವು ಶಾಸಕರು ಉಪಸ್ಥಿತರಿದ್ದರು.

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಸಂಜೆ ನಡೆದ ಹೊಸ ಬಸ್ ನಿಲ್ದಾಣ ಉದ್ಘಾಟನೆ, ಪುರಸಭೆ ನೂತನ ಕಾರ್ಯಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಸಾರಿಗೆ ಶ್ರೀರಾಮುಲು, ಕೃಷಿ ಸಚಿವ ಉಮೇಶ ಕತ್ತಿ, ಹಜ್ ಮತ್ತು ವಕ್ಫ್ ಸಚಿವೆ ಶಿಕಲಾ ಜೊಲ್ಲೆ ಸೇರಿದಂತೆ ಹಲವು ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.

ಆದರೆ, ಮಾಜಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತ್ರ ಅತ್ತ ಸುಳಿಯದಿರುವುದು ಅನುಮಾನಕ್ಕೆ ಕಾರಣವಾಗಿದೆ‌.

ಡಂಬಳ ಐತಿಹಾಸಿಕ ಕಲ್ಯಾಣಿಯಲ್ಲಿ ಋಷಿಮುನಿಗಳ ಪಾದುಕೆ, ರುದ್ರಾಕ್ಷಿ ಪತ್ತೆ

0

ವಿಜಯಸಾಕ್ಷಿ ಸುದ್ದಿ, ಡಂಬಳ

ಗ್ರಾಮದ ಐತಿಹಾಸಿಕ ಬೀಗರ ಬಾವಿ (ಕಲ್ಯಾಣಿ) ಸ್ವಚ್ಛತೆ ವೇಳೆ ಋಷಿಮುನಿಗಳ ಪಾದುಕೆ ಹಾಗೂ ರುದ್ರಾಕ್ಷಿಗಳು ದೊರೆತಿವೆ.

ಧರ್ಮಪುರ ಗ್ರಾಮೀಣ ಅಭಿವೃದ್ಧಿ ವಿವಿಧೋದ್ದೇಶಗಳ ಸೇವಾ ಸಂಸ್ಥೆಯಿಂದ ಗ್ರಾಮದ ಬಸವೇಶ್ವರ ವೃತ್ತದ ಹತ್ತಿರವಿರುವ ಐತಿಹಾಸಿಕ ಬೀಗರ ಬಾವಿ(ಕಲ್ಯಾಣಿ)ಯ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದ್ದು, ಏಳನೆ ದಿನವಾದ ಶನಿವಾರ ಸಂಸ್ಥೆಯ ಸದಸ್ಯರ ಸಮ್ಮುಖದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದಾಗ ಪಾದುಕೆಗಳು ಪತ್ತೆಯಾಗಿರುವುದು ಗ್ರಾಮಸ್ಥರ ಕುತೂಹಲಕ್ಕೆ ಕಾರಣವಾಗಿದೆ.

ಕಲ್ಯಾಣಿಗಳ ಸ್ವಚ್ಛತೆಗೆ ಆಗ್ರಹ

ಐತಿಹಾಸಿಕ ಗ್ರಾಮವಾದ ಡಂಬಳ ಗ್ರಾಮದ ಐತಿಹಾಸಿಕ ಹಿನ್ನೆಲೆಯುಳ್ಳ ಕಲ್ಯಾಣಿಗಳನ್ನು, ಪುರಾತನ ದೇವಾಲಯ ಹಾಗೂ ಮಸೀದಿಗಳನ್ನು ಸ್ಥಳೀಯ ಆಡಳಿತ ಮಂಡಳಿಯವರು, ಭಾರತೀಯ ಪುರಾತತ್ವ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯವರು ಸಂರಕ್ಷಣೆ ಮಾಡಿ ಅಭಿವೃದ್ಧಿ ಪಡಿಸಬೇಕೆಂದು ಧರ್ಮಪುರ ಗ್ರಾಮೀಣ ಅಭಿವೃದ್ಧಿ ವಿವಿಧೋದ್ದೇಶಗಳ ಸೇವಾ ಸಂಸ್ಥೆಯ ಮುಖ್ಯಸ್ಥರಾದ ಮುದುಕೇಶ ತಳಗೇರಿ, ರಾಘವೇಂದ್ರ ಜಂಗಳಿ, ಗೋಪಾಲ ಅಡಿವಿಬೋವಿ, ಇಬ್ರಾಹಿಂ ಹೊಸಪೇಟೆ ಆಗ್ರಹಿಸಿದ್ದಾರೆ.

ಪೊಲೀಸರ ಕಾರ್ಯಾಚರಣೆ; ಕುಖ್ಯಾತ ಕಳ್ಳನ ಬಂಧನ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ

ಮೂರು ಪ್ರತ್ಯೇಕ ಮನೆಕಳ್ಳತನ ಪ್ರಕರಣ ಬೇಧಿಸಿರುವ ಲಕ್ಷ್ಮೇಶ್ವರ ಪೊಲೀಸರು ಆರೋಪಿಯನ್ನು ಬಂಧಿಸಿ 153 ಗ್ರಾಂ ಚಿನ್ನದ ಆಭರಣ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ಶಿವಕುಮಾರ ವಿರುಪಾಕ್ಷಪ್ಪ ಗರಡ್ಡಿ ಬಂಧಿತ ಆರೋಪಿ.

ಕಳೆದ ಫೆ.28ರಂದು ಶಿಗ್ಲಿ ಗ್ರಾಮದಲ್ಲಿ ಉಮಾ ಚೆನ್ನಯ್ಯ ಹಿರೇಮಠ ಎಂಬುವವರ ಮನೆ ಕಳ್ಳತನವಾಗಿ 37 ಗ್ರಾಂ ಚಿನ್ನಾಭರಣ, ಕೊಕ್ಕರಗುಂದಿ ಗ್ರಾಮದ ವಸಂತಗೌಡ ಪಾಟೀಲ ಅವರ ಮನೆಗೆ ಕನ್ನ ಹಾಕಿ 10 ಗ್ರಾಂ ಚಿನ್ನಾಭರಣ, ಲಕ್ಷ್ಮೇಶ್ವರ ನಗರದ ಜಯಶ್ರೀ ಮತ್ತಿಕಟ್ಟಿ ಅವರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣ ಲಕ್ಷ್ಮೇಶ್ವರ ಠಾಣೆಯಲ್ಲಿ ದಾಖಲಾಗಿದ್ದವು.

ಕಳ್ಳರ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಶಿರಹಟ್ಟಿ ಸಿಪಿಐ ವಿಕಾಸ ಲಮಾಣಿ ಅವರ ಮಾರ್ಗದರ್ಶನದಲ್ಲಿ ಪಿಎಸ್ ಐ ಪ್ರಕಾಶ ಡಿ. ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಖಚಿತ ಮಾಹಿತಿ ಆಧರಿಸಿ ಪಿಎಸ್ ಐ ಪ್ರಕಾಶ ಡಿ, ಸಿಬ್ಬಂದಿ ಎಂ.ಡಿ ಲಮಾಣಿ, ಎಂ.ಬಿ.ವಡ್ಡಟ್ಟಿ, ಎಚ್.ಐ.ಕಲ್ಲಣ್ಣವರ ಅವರೊಂದಿಗೆ ಸೆ.25ರಂದು ಕಾರ್ಯಾಚರಣೆ ನಡೆಸಿ ಲಕ್ಷ್ಮೇಶ್ವರದ ಹುಬ್ಬಳ್ಳಿ ರಸ್ತೆಯ ಹೊರವಲಯದಲ್ಲಿ ಸಂಶಯಾಸ್ಪದ ವ್ಯಕ್ತಿಯನ್ನು ಬಂಧಿಸಿ ಠಾಣೆ ಕರೆದೊಯ್ದು ವಿಚಾರಣೆ ನಡೆಸಿದಾಗ ಲಕ್ಷ್ಮೇಶ್ವರ, ಶಿಗ್ಲಿ, ಕೊಕ್ಕರಗುಂದಿ, ಗದಗ ನಗರದಲ್ಲಿ‌ ಮನೆಕಳ್ಳತನ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ.

ಬಂಧಿತನಿಂದ 7 ಲಕ್ಷ 65 ಸಾವಿರ ರೂ. ಮೌಲ್ಯದ 153 ಗ್ರಾಮ ಚಿನ್ನಾಭರಣ, ಹಾಗೂ ಬೈಕ್ ಜಪ್ತಿ ಮಾಡಲಾಗಿದೆ.

ಕಳ್ಳತನ ಪ್ರಕರಣ ಭೇದಿಸುವಲ್ಲಿ ನೆರವಾದ ಎಎಸ್ ಐಗಳಾದ ವಾಯ್ ಎಸ್ ಕೂಬಿಹಾಳ, ಎಸ್ ಎಚ್ ಬೆಟಗೇರಿ, ಜಿ ಎಂ ಬೂದಿಹಾಳ, ಆರ್ ಎಸ್ ನಿಂಗೋಜಿ, ಸಿಬ್ಬಂದಿಗಳಾದ ಎ ಪಿ ದೊಡ್ಡಮನಿ, ಎನ್ ಡಿ ಹುಬ್ಬಳ್ಳಿ, ಆರ್ ಎಸ್ ಯರಗಟ್ಟಿ, ಪಿ‌ ಡಿ ಮ್ಯಾಗೇರಿ, ಎಚ್ ಬಿ ಗುಡ್ಡಣ್ಣವರ, ಡಿ ಎಸ್ ನದಾಫ್, ಬಿ ಎಸ್ ಮಠಪತಿ, ಎ ಆರ್ ಕಮ್ಮಾರ, ಎಂ ಎಸ್ ಬಳ್ಳಾರಿ, ಎಸ್ ಎಫ್ ತಡಸಿ, ಎಸ್ ಬಿ ಹಸವಿಮಠ, ರಾಮು ನಾಯಕ, ಕೆ‌ ಬಿ ಹುಲಗೂರು, ಮಹಾದೇವ ಲಮಾಣಿಗೆ ಎಸ್ಪಿ ಯತೀಶ್ ಎನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಯಿಗೆ ಕಲ್ಲು ಹೊಡೆದಿದ್ದನ್ನು ಕೇಳಿದ ಮಾಲೀಕನ ಬರ್ಬರ ಹತ್ಯೆ

0

ವಿಜಯಸಾಕ್ಷಿ ಸುದ್ದಿ, ಕಲಬುರಗಿ

ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿ ನಡೆದಿದೆ. ಗುರುರಾಜ್ ಕುಲಕರ್ಣಿ (35) ಕೊಲೆಯಾದ ವ್ಯಕ್ತಿ.

ಪಕ್ಕದ ಮನೆಯ ಪವನ್ ಜಾಗಿರದಾರ್ ಎಂಬಾತ ಗುರುರಾಜ್ ನ ಮನೆಯ ನಾಯಿಗೆ ಕಲ್ಲು ಹೊಡೆಯುತ್ತಿದ್ದ. ಇದೇ ವಿಚಾರಕ್ಕೆ ಎರಡು ತಿಂಗಳ ಹಿಂದೆ ಇಬ್ಬರ ಮಧ್ಯೆ ಗಲಾಟೆಯಾಗಿತ್ತು.

ನಿನ್ನೆ ರಾತ್ರಿ ಸಂಧಾನ ಮಾಡಿಕೊಳ್ಳಲು ಗುರುರಾಜ್‌ನನ್ನು ಕರೆಸಿಕೊಂಡಿದ್ದ ಪವನ್ ಜಾಗಿರದಾರ್, ತನ್ನ ಸ್ನೇಹಿತರೊಂದಿಗೆ ಸೇರಿ ಹತ್ತೆಗೈದಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವರ ಮೂರ್ತಿ ಮೇಲೆ ಕಾಲಿಟ್ಟ ಯುವಕ; ಗ್ರಾಮಸ್ಥರಿಂದ ಧರ್ಮದೇಟು

0

ವಿಜಯಸಾಕ್ಷಿ ಸುದ್ದಿ, ತುಮಕೂರು

ದೇವರ ಮೂರ್ತಿ ಮೇಲೆ ಕಾಲಿಟ್ಟು ವಿಕೃತಿ ಮೆರೆದ ಯುವಕನಿಗೆ ಗ್ರಾಮಸ್ಥರು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶ್ರೀಸ್ವಾಮಿ ಕೋಟೆ ಕಲ್ಲಪ್ಪನ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟು ದುರ್ವರ್ತನೆ ತೋರಿದ್ದು, ಯುವಕನ ವರ್ತನೆ ಕಂಡು ಆಕ್ರೋಶಗೊಂಡ ಗ್ರಾಮಸ್ಥರು ಯುವಕನನ್ನು ಹಿಡಿದು ಥಳಿಸಿದ್ದಾರೆ.

ಥಳಿತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧುಗಿರಿ ತಾಲೂಕಿನ ದಬ್ಬೆಗಟ್ಟ ಗ್ರಾಮದ ಶ್ರೀಕಾಂತ ಈ ದುಷ್ರ್ಕತ್ಯ ಎಸೆಗಿದಾತ ಎಂಬುದು ತಿಳಿದು ಬಂದಿದೆ. ಯುವಕನ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಗೆ ಗ್ರಾಮಸ್ಥರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ತಾಲೂಕು ವೈದ್ಯಾಧಿಕಾರಿ ನೇತೃತ್ವದಲ್ಲಿ ದಾಳಿ; ಇಬ್ಬರು ನಕಲಿ‌ ವೈದ್ಯರ ಬಂಧನ

0

ವಿಜಯಸಾಕ್ಷಿ ಸುದ್ದಿ, ಯಾದಗಿರಿ

ಸುರಪೂರ ತಾಲೂಕು ವೈದ್ಯಾಧಿಕಾರಿ ಆರ್. ವಿ‌. ನಾಯಕ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರು ನಕಲಿ ವೈದ್ಯರನ್ನು ಬಂಧಿಸಿದ್ದಾರೆ. ಶಿವಾನಂದ ಹಿರೇಮಠ, ಸದ್ದಾಮ್ ಹುಸೇನ್‌ ಬಂಧಿತ ಆರೋಪಿಗಳು.

ಆರೋಪಿಗಳು ಯಾದಗಿರಿಯ ಸುರಪುರದ ದೇವತ್ಕಲ ಗ್ರಾಮದಲ್ಲಿ ರೋಗಿಗಳಿಗೆ ಆಲೋಪಥಿ ಚಿಕಿತ್ಸೆ ನೀಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಾಲೂಕು ವೈದ್ಯಾಧಿಕಾರಿಗಳು ಹಾಗೂ ತಂಡ ಇಬ್ಬರನ್ನೂ ಬಂಧಿಸಿ ಅಲೋಪಥಿ ಔಷಧ ಜಫ್ತಿ ಮಾಡಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಸುರಪೂರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಖಾಸಗೀಯ ವೈದಕೀಯ ನೋಂದಣಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ

ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ತಮಟಕಲ್ಲ ಸಮೀಪ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿ ಸಿಲುಕಿದ್ದ ಮೃತರ ದೇಹ ಹೊರತೆಗೆಯಲು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ನಡೆಸಬೇಕಾಯಿತು.

ನಿದ್ದೆ ಮಂಪರಿನಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲಂಚ ಸ್ವೀಕರಿಸುತ್ತಿದ್ದ ನೀರು ಸರಬರಾಜು-ನೈರ್ಮಲ್ಯ ಇಲಾಖೆ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

0

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಇಇ ಹಾಗೂ ಕಚೇರಿಯ ಮ್ಯಾನೇಜರ್ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಇಇ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಇವರು ಇಲಾಖೆಯ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರರೊಬ್ಬರಿಂದ ಶೇ.3 ರಷ್ಟು ಅಂದರೆ, 68,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಕುರಿತು ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಇಂದು ಲಂಚದ ಹಣ ಸ್ವೀಕರಿಸುವಾಗ ಎಸಿಬಿ ಎಸ್ಪಿ ಬಿ.ಎಸ್. ನ್ಯಾಮಗೌಡರ ಮಾರ್ಗದರ್ಶನ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ, ಸುನಿಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದಿರುವ ಎಸಿಬಿ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.