Home Blog Page 3436

ಅಪಘಾನಿಸ್ಥಾನದಲ್ಲಿ ತಾಲಿಬಾನ್ ಎರಡನೇ ಇನ್ನಿಂಗ್ಸ್ ಆರಂಭ

  • ದೇಶದ ಪ್ರಧಾನಿ ಅಶ್ರಫ್ ಘನಿ ದೇಶ ಬಿಟ್ಟು ಪಲಾಯನ

ವಿಜಯಸಾಕ್ಷಿ ಸುದ್ದಿ, ನವದೆಹಲಿ

ತಿಂಗಳ ಕಾಲದ ಸುದೀರ್ಘ ಸಂಘರ್ಷದ ಬಳಿಕ ಕೊನೆಗೂ ತಾಲಿಬಾನ್ ಉಗ್ರರು ಅಪಘಾನಿಸ್ತಾನವನ್ನು ಸಂಪೂರ್ಣ ವಶಕ್ಕೆ ಪಡೆದಿದ್ದು, ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ತಾಲಿಬಾನ್ ಉಗ್ರರು ಕಾಬೂಲ್ ಮೇಲೆ ದಾಳಿ ಮಾಡುತ್ತಿದ್ದಂತೆಯೇ ಅಪಘಾನಿಸ್ಥಾನ್ ಪ್ರಧಾನಿ ಅಶ್ರಫ್ ಘನಿ ಹಾಗೂ ಸೇನೆಯ ಪ್ರಮುಖರು
ದೇಶದಿಂದ ಪಲಾಯನಗೈದಿದ್ದಾರೆ.

ಆಗಸ್ಟ್ ಮೊದಲ ವಾರದಿಂದ ದೇಶದ ಒಂದೊಂದೇ ಪ್ರಾಂತೀಯ ರಾಜಧಾನಿಗಳನ್ನು ವಶಕ್ಕೆ ಪಡೆಯುತ್ತಾ ಬಂದಿದ್ದ ತಾಲಿಬಾನ್ ಉಗ್ರರು ಎಲ್ಲ ದೊಡ್ಡ ಪ್ರಾಂತಗಳನ್ನು ವಶಕ್ಕೆ ಪಡೆದು ದೇಶದ ರಾಜಧಾನಿ ಕಾಬೂಲ್ ಬಾಗಿಲಿಗೆ ಬಂದು ನಿಂತಿದ್ದರು.

ಕಾಬೂಲ್ ವಶಪಡಿಸಿಕೊಳ್ಳಲು ಭಾರಿ ಸಂಘರ್ಷ ಏರ್ಪಡಲಿದೆ ಎಂದು ಭಾವಿಸಿದ್ದ ವಿಶ್ವ ಸಮುದಾಯದ ಲೆಕ್ಕಾಚಾರವನ್ನು ಉಲ್ಟಾ ಮಾಡಿರುವ ಅಪ್ಘಾನ್ ಸೇನೆ ಶಸ್ತ್ರಾಸ್ತ್ರ ಒಪ್ಪಿಸಿ ಶರಣಾಗಿದೆ.

ಸುಮಾರು 3 ಲಕ್ಷದಷ್ಟು ಸೇನಾ ಬಲ ಹಾಗೂ ಆಧುನಿಕ ಶಸ್ತ್ರಾಸ್ತ್ರ, ವಾಯುಸೇನೆ, ಯುದ್ಧವಿಮಾನ ಹೊಂದಿದ್ದ ಅಪಘಾನ್ ಸೇನೆ ಕೇವಲ ಹತ್ತು ಸಾವಿರದಷ್ಟಿದ್ದ ತಾಲಿಬಾನ್ ಉಗ್ರರ ಎದುರು ಮಂಡಿಯೂರಿ ಅಚ್ಚರಿ ಮೂಡಿಸಿದೆ.

ಕಾಬೂಲ್ ತಾಲಿಬಾನ್ ವಶಕ್ಕೆ ಪಡೆದಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಅಪ್ಘನ್ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಆರಂಭವಾಗಿದೆ.

ತಾಲಿಬಾನ್ ಉಗ್ರರಿಗೆ ಹೆದರಿ ಜನರು ವಾಹನ, ಕಾಲ್ನಡಿಗೆ ಮೂಲಕ ಪಲಾಯನ ಮಾಡಲು ಆರಂಭಿಸಿದ್ದು, ರಸ್ತೆಗಳೆಲ್ಲ ಜಾಮ್ ಆಗಿವೆ.

ಈ ಮಧ್ಯೆ ತಾಲಿಬಾನ್ ಆಡಳಿತ ಜನರ ಪಲಾಯನ ತಡೆಯಲು ಕರ್ಫ್ಯೂ ಜಾರಿಗೊಳಿಸಿದೆ.
ಭಾರತ ಸರ್ಕಾರ ಅಪಘಾನಿಸ್ತಾನದಲ್ಲಿರುವ ರಾಜತಾಂತ್ರಿಕರು ಹಾಗೂ ಭಾರತೀಯರನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದು, ವಿಶೇಷ ವಿಮಾನಗಳು ಕಾಬೂಲ್ ತಲುಪಿವೆ‌.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಗೌರವ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗದಗ ಜಿಲ್ಲಾ ಘಟಕದ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಜಿಲ್ಲಾಡಳಿತ ವತಿಯಿಂದ ಭಾನುವಾರ 75ನೇ ಸ್ವಾತಂತ್ರ‍್ಯೋತ್ಸವದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಎಮ್.ಡಿ. ಸಾಮುದ್ರಿ, ಜಿಲ್ಲಾಡಳಿತ ಮಂಡಳಿ ಹಾಗೂ ರಾಜ್ಯ ನಿರ್ದೇಶಕ ಮಂಡಳಿ ಸದಸ್ಯರಾದ ಡಾ. ಆರ್ ಎನ್ ಗೋಡಬೋಲೆ ಅವರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರ ಸಮ್ಮುಖದಲ್ಲಿ ನೆನಪಿನ ಕಾಣಿಕೆ, ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ ಇತರರು ಇದ್ದರು.

ರೆಡ್ ಕ್ರಾಸ್ ಸಂಸ್ಥೆ ಕೋವಿಡ್ ಒಂದನೇ ಅಲೆ ಹಾಗೂ ಎರಡನೇ ಅಲೆಯಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಹಲವಾರು ದಾನಿಗಳ ಸಹಕಾರದಿಂದ ಜಿಲ್ಲಾದ್ಯಂತ ಸಾಮಾಜಿಕ ಕಾರ್ಯಗಳನ್ನ ಮಾಡುತ್ತಾ ಬಂದಿದೆ.

ಲಾಕ್‌ಡೌನ್ ಅವಧಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ವಿತರಣೆ, ಬಡವರು ಹಾಗೂ ಬಡ ಕೂಲಿ ಕಾರ್ಮಿಕರಿಗೆ ಆಹಾರ ಪೊಟ್ಟಣಗಳ ವಿತರಣೆ, ದಿನಸಿ ಕಿಟ್, ಆಸ್ಪತ್ರೆಗಳಿಗೆ ಆಕ್ಸಿಜನ್ ಕಾನ್ಸ್ಂಟ್ರೇಟರ್ ವಿತರಣೆ ಸೇರಿದಂತೆ ಜನರಲ್ಲಿ ಕೋವಿಡ್ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ.

ಸಿ.ಟಿ.ರವಿ, ಈಶ್ವರಪ್ಪರಿಗೆ ಬಿಜೆಪಿ ವರಿಷ್ಠರು ಬುದ್ದಿವಾದ ಹೇಳಲಿ; ಸತೀಶ ಜಾರಕಿಹೊಳಿ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಸಿ.ಟಿ.ರವಿ, ಈಶ್ವರಪ್ಪ ದೊಡ್ಡ ಹುದ್ದೆಯಲ್ಲಿದ್ದಾರೆ. ಆದರೆ, ಬಾಯಿಗೆ ಬಂದಂತೆ ಹೇಳಿಕೆ ನೀಡಿ‌‌‌‌ ಚಿಕ್ಕವರಾಗುತ್ತಿದ್ದಾರೆ. ಆ ಪಕ್ಷದ ವರಿಷ್ಠರು ಅವರಿಗೆ ಬುದ್ದಿ ಹೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ರವಿವಾರ ಮಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹುಕ್ಕಾ ಬಾರ್ , ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.

ನಮ್ಮದು ಶಿಸ್ತಿನ, ಸಂಸ್ಕೃತಿಯ ಪಕ್ಷ ಎಂದು ಹೇಳುವ ಬಿಜೆಪಿಯವದು ಇದೇ ಸಂಸ್ಕೃತಿನಾ ಎಂದು ಪ್ರಶ್ನಿಸಿದರು.

ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪ್ರೀತಿ ವಿಶ್ವಾಸ ಸಿಕ್ಕಿರಲಿಲ್ಲ, ಸಂಘ ಪರವಾರ ಮತ್ತು ಬಿಜೆಪಿ ಹೈಕಮಾಂಡ್‌ನಿಂದ ನನಗೆ ಹೆಚ್ಚಿನ ಪ್ರೀತಿ ಸಿಕ್ಕಿದೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಸತೀಶ ಜಾರಕಿಹೊಳಿ, ಎಷ್ಟು ಲವ್ ಆಗಿದೆ ಎಂದು ಅವರನ್ನೇ ಕೇಳಿ, ಎಷ್ಟು ಅಪ್ಪಿಕೊಂಡಿದ್ದಾರೆ, ಎಷ್ಟು ಪ್ರೀತಿ ವಿಶ್ವಾಸ ಸಿಕ್ಕಿದೆ. ಅದಕ್ಕಾಗಿಯೆ ಗೋಕಾಕನಿಂದ ಬೆಂಗಳೂರಿಗೆ ಬೆಂಗಳೂರಿನಿಂದ ದೆಹಲಿಗೆ ಅಲೆದಾಡಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ, ಶಶಿಕಲಾ ಜೊಲ್ಲೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ. ಇಂತಹ ಆರೋಪ ಹೊತ್ತವರು ಸಾಕಷ್ಟು ಜನ ಬಿಜೆಪಿಯಲ್ಲಿದ್ದಾರೆ ಎಂದರು.

ಈ ವೇಳೆ ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ರಾಜು ಕಾಗೆ, ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಗಜಾನನ ಮಂಗಸೂಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಒತ್ತು; ಮುತ್ತು ರಾಯರಡ್ಡಿ

ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ

ಅಭಿವೃದ್ಧಿ ಕಾರ್ಯಗಳ ಜೊತೆಗೆ ಇಡೀ ಜಗತ್ತನ್ನು ಕಾಡುತ್ತಿರುವ ಕೊರೊನಾ ಮಹಾಮಾರಿಯಿಂದ ಗ್ರಾಮದ ಪ್ರತಿಯೊಬ್ಬ ನಾಗರಿಕರನ್ನು ರಕ್ಷಿಸಿ ಆರೋಗ್ಯಕರ ಸಮಾಜ ನಿರ್ಮಾಣ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಹೇಳಿದರು.

ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ 75ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷವಾಯಿತು. 1857 ರಿಂದ 1947 ರವರೆಗೆ ಹಲವಾರ ಹೋರಾಟ, ತ್ಯಾಗ ಬಿಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ.

ಅಹಿಂಸೆ, ಸತ್ಯಾಗ್ರಹಗಳಂತಹ ಪರಿಣಾಮಕಾರಿ ಮಾರ್ಗಗಳ ಮೂಲಕ ಸ್ವಾತಂತ್ರ್ಯ ಪಡೆದ ಹೆಮ್ಮೆ ನಮ್ಮದಾಗಿದೆ ಎಂದರು.

ದೇಶದ ನಾಗರಿಕರಾದ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು‌. ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಮಾಜಿ ಸೈನಿಕರಾದ ಉಮೇಶ ಪತ್ತಾರ, ಬುಡ್ನೇಸಾಬ ಯಲಿಗಾರ, ಮಂಜುನಾಥ್ ಮಠಪತಿ ಹಾಗೂ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಕಾವೇರಿ ಹಿರೇಮಠ, ದ್ವಿತೀಯ ಸ್ಥಾನ ಪಡೆದ ಲಕ್ಷ್ಮೀ ಉದುಪುಡಿ, ತೃತೀಯ ಸ್ಥಾನ ಪಡೆದ ಪೂಜಾ ಬಾಗಲೆ ಅವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ನಿಮಿತ್ತ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ 75 ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ಹಾಗೂ ಗ್ರಾಪಂ ಆವರಣ, ಪಶು ಆಸ್ಪತ್ರೆ, ಸರ್ಕಾರಿ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆ ಆವರಣ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಆವರಣದಲ್ಲಿ 75 ಸಸಿ ನೆಡುವ ಕಾರ್ಯಕ್ರಮಕ್ಕೆ ಅಧ್ಯಕ್ಷ ಮುತ್ತು ರಾಯರಡ್ಡಿ ಸದಸ್ಯರೊಂದಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಬಾಪು ಹಿರೇಗೌಡ್ರ, ಶರಣಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಲಕ್ಷ್ಮಣ ಕಂಬಳಿ, ಈರಮ್ಮ ಮುದಿಗೌಡ್ರ, ಶ್ರುತಿ ಬ್ಯಾಳಿ, ಶೋಭಾ ಕೋಣನ್ನವರ, ಶಂಕ್ರಮ್ಮ ಚಲವಾದಿ,

ಪಿಡಿಓ ಶೈನಾಜ್ ಮುಜಾವರ, ಕಾರ್ಯದರ್ಶಿ ಕೆಂಚಪ್ಪ ಮಾದರ, ಮುಖ್ಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಾಲಯ ಹಾಗೂ ಪಂಚಾಯತಿ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

ನಾಗರಾಜ ಹೂಲಿ, ಅನೀಲ ಕಡ್ಲಿಕೊಪ್ಪ ಕಾರ್ಯಕ್ರಮ ನಡೆಸಿ ಕೊಟ್ಟರು.

ಸಿದ್ದರಾಮಯ್ಯನವರಿಗೆ ಸಿಎಂ ಆಗುವ ಹಗಲು ಕನಸು; ಸಚಿವ ಶ್ರೀರಾಮುಲು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ

ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಈಗ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಶೀಘ್ರದಲ್ಲೇ ಸರ್ಕಾರ ಪತನಗೊಳ್ಳಲಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು,

ಎಂಥ ಸಂದರ್ಭ ಬಂದರೂ 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಉದ್ದಗಲಕ್ಕೂ ಜನರಲ್ಲಿ ಉತ್ಸಾಹ ಮೂಡಿಸುತ್ತಿದ್ದಾರೆ. ಕೋವಿಡ್, ನೆರೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ. ಮುಂದೆಯೂ ನಮ್ಮ ಸರ್ಕಾರವೇ ಅಧಿಕಾರದಲ್ಲಿ ಇರಲಿದೆ ಎಂದು ಹೇಳಿದರು.

ಮೇರು ನಾಯಕರನ್ನು ರಾಜಕಾರಣಕ್ಕೆ ಎಳೆದುತರುವುದು ಸರಿಯಲ್ಲ; ಶ್ರೀರಾಮುಲು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ

ವಾಜಪೇಯಿ-ನೆಹರೂ ಇಬ್ಬರೂ ದೇಶದ ಮೇರು ನಾಯಕರು. ಪ್ರಧಾನಿಗಳಾದವರು. ಸದ್ಯ ಅವರು ನಮ್ಮ ನಡುವೆ ಇಲ್ಲ. ಅಂತಹ ನಾಯಕರನ್ನು ರಾಜಕಾರಣದಲ್ಲಿ ಎಳೆದು ತರುವುದು ಸರಿಯಲ್ಲ ಎಂದು ಸಚಿವ ಶ್ರೀರಾಮುಲು ಕಿವಿಮಾತು ಹೇಳಿದರು.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರನ್ನ ಬೇಕಾದರೂ ಟೀಕೆ ಮಾಡಿ ರಾಜಕಾರಣ ಮಾಡುವುದು ಸರಿಯಲ್ಲ.

ರಾಜಕಾರಣದಲ್ಲಿ ಮೌಲ್ಯಗಳು ಉಳಿಯಲ್ಲ, ಎರಡೂ ಕಡೆಯವರು ಈ ವಿಚಾರ ಇಲ್ಲಿಗೆ ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ವಾಜಪೇಯಿ ಮೊರಾರ್ಜಿ ದೇಸಾಯಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದರು. ವಾಜಪೇಯಿ ಅಪಾರ್ಮೆಂಟ್ ಬಳಿ ನೆಹರೂ ಪ್ರತಿಮೆ ಇತ್ತು, ಅದನ್ನ ನಿತ್ಯವೂ ಗಮನಿಸುತ್ತಿದ್ದರು. ಅಧಿಕಾರಿಗಳು ಅದನ್ನು ತೆರವುಗೊಳಿಸಿರುವುದಾಗಿ ತಿಳಿಸಿದಾಗ ಕೇಂದ್ರ ಸಚಿವರಾದ ವಾಜಪೇಯಿ ಅವರು ನೆಹರೂ ಪ್ರತಿಮೆ ಮರು ಸ್ಥಾಪಿಸಿದ್ದರು.

ಈ ವಿಚಾರ ಕಾಂಗ್ರೆಸ್- ಬಿಜೆಪಿ ನಡುವೆ ಕೈ ಮೀರುತ್ತಿದೆ. ಭಾರತದಲ್ಲಿ ಇಬ್ಬರೂ ಮೇರು ನಾಯಕರು. ನಾವೆಲ್ಲ ಒಂದು ಶಕ್ತಿಯಾಗಿ, ಅವರ ಮಾರ್ಗದರ್ಶನದಲ್ಲಿ ರಾಜಕಾರಣ ಮಾಡಬೇಕು ಎಂದು ಸಲಹೆ ನೀಡಿದರು.

ವಾಜಪೇಯಿ, ನೆಹರೂ ಬಗ್ಗೆ ಕೀಳುಮಟ್ಟದ ಭಾಷೆ ಬಳಕೆ ಸಲ್ಲ

ಹಾವೇರಿಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಹಾವೇರಿ

ವಾಜಪೇಯಿ, ನೆಹರು ಅಂಥವರನ್ನು ಯಾರೇ ಆಗಲಿ ಗೌರಿಸಬೇಕಾಗುತ್ತದೆ. ಅಂಥವರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಬಾರದು ಎಂಬುದು ನನ್ನ ವಯಕ್ತಿಕ ಭಾವನೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಬೆಂಗಳೂರಿನಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಸಿಎಂ ಪುತ್ರ ಭಾಗಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಉದ್ಯಮಿಯಾಗಿ ಸಿಎಂ ಪುತ್ರ ಭರತ ಬೊಮ್ಮಾಯಿ ಭಾಗಿಯಾಗಿದ್ದಾರೆ.
ಅದಕ್ಕೂ ಟೀಕೆ ಮಾಡೋದು ಅಂದರೆ ಹೇಗೆ.? ಕಾಂಗ್ರೆಸ್ ನವರಿಗೆ ಟೀಕೆ ಮಾಡೋದು ಬಿಟ್ಟರೆ ಬೇರೆ ಗೊತ್ತಿಲ್ಲ ಎಂದರು.

ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದಾರೆ. ಬಿಜೆಪಿ ಸರಕಾರ ಅಲ್ಲಾಡಿಸಲು ಯಾರಿಂದಲೂ ಆಗೋದಿಲ್ಲ. ನಾವು 118 ಜನ ಬಿಜೆಪಿ ಶಾಸಕರಿದ್ದೇವೆ‌. ಬೊಮ್ಮಾಯಿ ಅವರು ಸಿಎಂ ಆಗಿ ಅವಧಿ ಪೂರ್ಣಗೊಳಿಸಲಿದ್ದಾರೆ.

2023ರಲ್ಲೂ ಬಿಜೆಪಿ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದರು. ಸಿದ್ದರಾಮಯ್ಯ ಭವಿಷ್ಯ ಹೇಳೋಕೆ ಶುರು ಮಾಡಿದ್ದಾರೆ.
ಅವರಿಗೆ ಭವಿಷ್ಯದಲ್ಲಿ ನಂಬಿಕೆ ಇಲ್ಲ. ಅದ್ಹೇಗೆ ಭವಿಷ್ಯ ಹೇಳಲು ಶುರು ಮಾಡಿದರೋ ಗೊತ್ತಿಲ್ಲ ಎಂದು ಹೇಳಿದರು.

ಧ್ವಜ ಸ್ತಂಬ ನೆಡುವಾಗ ವಿದ್ಯುತ್ ತಗುಲಿ‌ ಬಾಲಕ ಸಾವು

ವಿಜಯಸಾಕ್ಷಿ ಸುದ್ದಿ, ತುಮಕೂರು

ಧ್ವಜ ಸ್ತಂಭ ನಿಲ್ಲಿಸುವ ವೇಳೆ ಮೂವರಿಗೆ ವಿದ್ಯುತ್ ತಗುಲಿ, ಓರ್ವ ಬಾಲಕ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ಸಂಭವಿಸಿದೆ.

ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲು ಧ್ವಜ ಸ್ತಂಬ ನಿಲ್ಲಿಸಲು ಹೋದಾಗ ಸ್ತಂಬಕ್ಕೆ ವಿದ್ಯುತ್ ತಂತಿ ತಗುಲಿ ಮೂವರಿಗೆ ಶಾಖ್ ಹೊಡೆದು ಅಸ್ವಸ್ಥರಾಗಿದ್ದಾರೆ.

ಆಸ್ಪತ್ರೆಗೆ ಸಾಗಿಸುವಾಗ 16 ವರ್ಷದ ಚಂದನ್ ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಶಂಕರ್, ಪವನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ಚಂದನ್ ತಂದೆ- ತಾಯಿಗೆ ಒಬ್ಬನೇ ಪುತ್ರ ಎಂದು ತಿಳಿದುಬಂದಿದೆ. ಮೂವರು ವಿದ್ಯಾರ್ಥಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಮೃತ ಬಾಲಕನ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ದುರ್ಘಟನೆಗೆ ಶಾಲಾ ಶಿಕ್ಷಕರ ನಿರ್ಲಕ್ಷವೇ ಕಾರಣ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ಮಾಜಿ ಸೈನಿಕರಿಗೆ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಮಾಜಿ ಸೈನಿಕರಿಗೆ ಬಿಜೆಪಿ ನಗರ ಘಟಕ ವತಿಯಿಂದ, ವಾರ್ಡ್ ಸಂಖ್ಯೆ 29ರ ಬೂತ್ ಕಮಿಟಿ ಅಧ್ಯಕ್ಷರಾದ ಅಮರೇಶ್ ಮುರಲಿಯವರು ಸನ್ಮಾನ ಆಯೋಜಿಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಚಂದ್ರಶೇಖರ್ ಗೌಡ ಪಾಟೀಲ್ ಹಲಿಗೇರಿ ಮಾತನಾಡಿ, ಸವಿಸ್ತಾರವಾಗಿ ಸೈನಿಕರ ಬಲಿದಾನ ಹಾಗೂ ತ್ಯಾಗವನ್ನು ಗುರುತಿಸುವಲ್ಲಿ ಬಿಜೆಪಿಯವರ ವಾಜಪೇಯಿ ಅವರು ಪ್ರಮುಖ ಪಾತ್ರ ವಹಿಸಿದ ಬಗ್ಗೆ ಹಾಗೂ ಸೈನಿಕರನ್ನು ಗುರುತಿಸಿ ಅವರಿಗೆ ದೇಶಾದ್ಯಂತ ಹೆಚ್ಚಿನ ಗೌರವಗಳನ್ನು ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ವಿವರಿಸಿದರು.

ಅದೇ ರೀತಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀಮಾನ್ ನರೇಂದ್ರ ಮೋದಿಜಿ ಅವರು ಮುಂದುವರಿಸಿಕೊಂಡು ಹೋಗುತ್ತಿರುವುದರ ಬಗ್ಗೆ ಪ್ರಾಸ್ತಾವಿಕವಾಗಿ ತಿಳಿಸಿದರು.

ಅದೇ ರೀತಿಯಾಗಿ ಇನ್ನೊಬ್ಬ ಅತಿಥಿಯಾಗಿ ಆಗಮಿಸಿದ ರಾಜ್ಯ ಕಾರ್ಯದರ್ಶಿಗಳಾದ ಹೇಮಲತಾ ನಾಯಕ ರವರು ಮೋದಿ ಸರ್ಕಾರದಲ್ಲಿ ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹಾಗೂ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಹಾಗೂ ಸೈನಿಕರಿಗೆ ಸಿಗಬೇಕಾದ ಎಲ್ಲಾ ಸೌಲತ್ತುಗಳನ್ನು ನಮ್ಮ ಬಿಜೆಪಿ ಸರಕಾರ ಒದಗಿಸಿಕೊಡುತ್ತಿದೆ. ಬಿಜೆಪಿ ಸರ್ಕಾರವು ಸೈನಿಕರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಸವಲತ್ತುಗಳನ್ನು ನೀಡುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸಿದೆ ಎಂದು ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಕ್ರಮದ ಆಯೋಜಕರಾದ ಅಮರೇಶ್ ಮುರಲಿ 75 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಸೈನಿಕರಿಗೆ ಸನ್ಮಾನಿಸುವಯದರಿಂದ ಯಶಸ್ವಿ ಕಾರ್ಯಕ್ರಮ ಆಗಿದೆ ಎಂದು ಈ ಸಂದರ್ಭದಲ್ಲಿ ಸ್ಮರಿಸಿದರು.

ಬಿಜೆಪಿಯ ನಗರ ಘಟಕದ ಅಧ್ಯಕ್ಷ ಸುನಿಲ್ ಹೆಸರೂರು, ಕವಿತಾ ಪಾಟೀಲ್, ನಾಗರತ್ನ ಪಾಟೀಲ್, ಶ್ರೀಧರ್ ಗೌಡ್ರು ಬನ್ನಿಕೊಪ್ಪ, ಶಿವಯೋಗಿ ಹಾವಿನಾಳ, ಗವಿಸಿದ್ದಪ್ಪ ನೆಳಜೇರಿ, ಹುಡುಕೋ ಕಾಲೋನಿಯ ನಿವಾಸಿಗಳಾದ
ಬಸವರಾಜ್ ತಳಗೇರಿ, ಸುನಿಲ್ ಮಹೇಶ್ ಎಲಿಗಾರ್ ಇತರರು ಇದ್ದರು.

ಸನ್ಮಾನಿತ ಮಾಜಿ ಸೈನಿಕರು
ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಾದ ಡಾ.ಬಿ.ಆರ್. ಬೆಳಗಟ್ಟಿ,
ನಿಂಗಪ್ಪ ಗಾಣಿಗೇರ,
ಲಕ್ಷ್ಮಣ್, ವೆಂಕಟೇಶ್,
ಹನುಮಂತಪ್ಪ ಆರೆರ್ ಇವರನ್ನು ಸನ್ಮಾನಿಸಲಾಯಿತು.

ಸಚಿವ ಹಾಲಪ್ಪ ಸುದ್ದಿಗೋಷ್ಠಿ ಬಹಿಷ್ಕರಿಸಿದ ಪತ್ರಕರ್ತರು!

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ರಾಷ್ಟ್ರಧ್ವಜಾರೋಹಣದ ನಂತರ ಆಯೋಜಿಸಿದ್ದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರ ಸುದ್ದಿಗೋಷ್ಠಿಯನ್ನು ಪ್ರಾದೇಶಿಕ ಹಾಗೂ ಸ್ಥಳೀಯ ಪತ್ರಕರ್ತರು ಬಹಿಷ್ಕರಿಸಿದರು.

ಹಾಲಪ್ಪ ಆಚಾರ್ ಸಚಿವರಾದ ನಂತರ ಜಾಹೀರಾತು ನೀಡಿಕೆಯಲ್ಲಿ ಮಾಡುತ್ತಿರುವ ತಾರತಮ್ಯ ಖಂಡಿಸಿ ಮಾಧ್ಯಮಗೋಷ್ಠಿಯ ಕೋಣೆಗೆ ಸಚಿವರು ಆಗಮಿಸುತ್ತಿದ್ದಂತೆ ಅವರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರುತ್ತಾ, ಸಾಂಕೇತಿಕ ಹೋರಾಟದ ರೂಪದಲ್ಲಿ ಹಾಜರಿದ್ದ ಸ್ಥಳೀಯ ಹಾಗೂ ಪ್ರಾದೇಶಿಕ ಪತ್ರಿಕೆಗಳ ವರದಿಗಾರರು ಹೊರ ನಡೆದರು.

ಪತ್ರಕರ್ತರ ಈ ನಡೆಯಿಂದ ಕೆಲ‌ಕ್ಷಣ ಅವಕ್ಕಾದ ಸಚಿವರು ನಂತರ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಂಸದ ಕರಡಿ ಸಂಗಣ್ಣ ಪತ್ರಕರ್ತರ ಮನವೊಲಿಸುವ ಪ್ರಯತ್ನ ಮಾಡಿದರೂ ಫಲ ಸಿಗಲಿಲ್ಲ.

ಈ ವೇಳೆ ಪತ್ರಕರ್ತರಾದ ಹರೀಶ್ ಎಸ್.ಎಚ್.ಸಾದಿಕ್ ಅಲಿ, ದೇವು ನಾಗನೂರು, ಬಸವರಾಜ ಕರುಗಲ್, ನಾಗರಾಜ ವೈ.ಎನ್, ಶಿವರಾಜ ನುಗಡೋಣಿ, ಮೌಲಾಹುಸೇನ್ ಬುಲ್ಡಿಯಾರ್, ರವಿಚಂದ್ರ ಬಡಿಗೇರ, ಸಿದ್ದಪ್ಪ ಹಂಚಿನಾಳ, ಶಿವಕುಮಾರ್ ಹಿರೇಮಠ, ಬಸವರಾಜ ಗುಡ್ಲಾನೂರು, ವೈ.ಬಿ.ಜೂಡಿ, ಫಕೀರಪ್ಪ ಗೋಟೂರು, ಎನ್.ಎಂ.ದೊಡ್ಡಮನಿ, ಮಂಜುನಾಥ ಗೊಂಡಬಾಳ, ಬ್ರಹ್ಮಾನಂದ, ರಾಜಾಸಾಬ್ ಮುಲ್ಲಾರ್, ಕಾಸೀಂಸಾಬ್ ನದಾಫ್, ಪ್ರಭು ಗಾಳಿ ಸೇರಿದಂತೆ ಅನೇಕ ಪತ್ರಕರ್ತರು ಬಹಿಷ್ಕಾರ ಹಾಕಿದರು.