Home Blog Page 374

ಮಕ್ಕಳ ವಿಷಯವಾರು ದೌರ್ಬಲ್ಯಗಳನ್ನು ವಿಶ್ಲೇಷಿಸಿ: ಡಾ. ಈಶ್ವರ ಉಳ್ಳಾಗಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ವಿಷಯವಾರು ದೌರ್ಬಲ್ಯಗಳನ್ನು ವಿಶ್ಲೇಷಿಸಿ, ಗುರಿ ನಿರ್ದಿಷ್ಟ ಕಾರ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದರು.

ಗುರುವಾರ ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಹಾಗೂ ಗದಗ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಗುಣಾತ್ಮಕ ಫಲಿತಾಂಶ ತರುವ ಉದ್ದೇಶದಿಂದ ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಶೇಕಡಾವಾರು ಹೆಚ್ಚಿಸುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಗುರುತಿಸಿ, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಬೇಕು ಎಂದು ಸೂಚಿಸಿದರು.

ಶಾಲಾ ಮಟ್ಟದಲ್ಲಿ ನಿಯಮಿತ ಪರೀಕ್ಷೆಗಳು, ಮರುಪಠಣ ತರಗತಿಗಳು ಹಾಗೂ ಪೋಷಕರೊಂದಿಗೆ ಸಮನ್ವಯ ಸಭೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಬೇಕು. ಶಿಕ್ಷಕರು ಸಮಯ ಪಾಲನೆ, ಬದ್ಧತೆ ಮತ್ತು ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ಜಿಲ್ಲೆಯ ಪ್ರತಿಯೊಂದು ಶಾಲೆಯೂ ಫಲಿತಾಂಶ ಸುಧಾರಣೆಗೆ ಸಮಗ್ರ ಪ್ರಯತ್ನ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅಪರ ಆಯುಕ್ತರು ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಾಗಾರದ ಉದ್ದೇಶವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಧಾರವಾಡ) ಅಪರ ಆಯುಕ್ತರ ಕಚೇರಿ ನಿರ್ದೇಶಕರಾದ ಈಶ್ವರ ನಾಯಕ, ಡಯಟ್ ಪ್ರಾಚಾರ್ಯ ಜಿ.ಎಂ. ಮುಂದಿನಮನಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳು, ನೋಡಲ್ ಅಧಿಕಾರಿಗಳು ಹಾಜರಿದ್ದರು.

ಸಂವಾದದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.

ಮುಖ್ಯಾಂಶಗಳು

• ಗದಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಕುರಿತು ಮುಖ್ಯ ಶಿಕ್ಷಕರೊಂದಿಗೆ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಸಂವಾದ.

• ಫಲಿತಾಂಶ ಹೆಚ್ಚಿಸುವುದು ಶಿಕ್ಷಕರ ಸಮೂಹ ಜವಾಬ್ದಾರಿ.

• ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಮತ್ತು ರಿಮಿಡಿಯಲ್ ತರಗತಿಗಳ ಆಯೋಜನೆ.

• ವಿಷಯವಾರು ಗುರಿ ನಿಗದಿ ಮಾಡಿ ನಿಯಮಿತ ಅಭ್ಯಾಸ ಪರೀಕ್ಷೆ ನಡೆಸಲು ಸೂಚನೆ.

• ಉತ್ತರ ಪತ್ರಿಕೆ ವಿಶ್ಲೇಷಣೆ ಮೂಲಕ ವಿದ್ಯಾರ್ಥಿಗಳ ತಪ್ಪು ಸರಿಗಳನ್ನು ಸರಿಪಡಿಸುವ ಕ್ರಮ.

• ಹಾಜರಾತಿ ಹೆಚ್ಚಿಸಲು ಪೋಷಕರೊಂದಿಗೆ ನಿರಂತರ ಸಂಪರ್ಕ.

• ಡಿಜಿಟಲ್ ಹಾಗೂ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳ ಪರಿಣಾಮಕಾರಿ ಬಳಕೆ, ಪ್ರತಿಯೊಂದು ಶಾಲೆಯೂ ಫಲಿತಾಂಶ ಆಧಾರಿತ ಕಾರ್ಯಯೋಜನೆ ರೂಪಿಸಲು ನಿರ್ದೇಶನ.

ಮೇಘಾಲಯ| ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸ್ಫೋಟ; 16 ಕಾರ್ಮಿಕರು ದುರ್ಮರಣ!

0

ಶಿಲ್ಲಾಂಗ್:- ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಜರುಗಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಣಿಯಿಂದ 16 ಶವಗಳನ್ನು ಹೊರತೆಗೆದಿದ್ದು, ಗಾಯಾಳುಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ಪೊಲೀಸರು ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ಸಹಾಯ ಪಡೆದುಕೊಂಡರು.

ಇನ್ನೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆಗಳ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲಾರ ನಗರದಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ!

0

ಕೋಲಾರ:- ನಗರದಲ್ಲಿ ವಾಹನ ದಟ್ಟಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಎಂ.ಆರ್. ರವಿ ಹೊಸ ಆದೇಶ ಹೊರಡಿಸಿದ್ದಾರೆ.

ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಭಾರಿ ವಾಹನಗಳಿಗೆ ನಗರ ಪ್ರವೇಶ ನಿಷೇಧಿಸಲಾಗಿದೆ. ಆದರೆ ಅಗತ್ಯ ಸೇವೆಗಾಗಿ ಹಣ್ಣು, ಹೂವು, ತಕರಾರಿ, ಗ್ಯಾಸ್ ಸಿಲಿಂಡರ್, ನೀರಿನ ಟ್ಯಾಂಕರ್ ಹೀಗೆ ಕೆಲವು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಕಾರ್ಮಿಕರನ್ನು ಸಾಗಿಸುವ ವಾಹನಗಳು ರಸ್ತೆಯ ಬದಿಯಲ್ಲಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

ಈ ನಿರ್ಬಂಧದಿಂದ ನಗರದ ಮುಖ್ಯ ರಸ್ತೆಗಳಲ್ಲಿ ಸಂಚಾರ ಸುಗಮವಾಗುವುದು, ವಾಹನ ದಟ್ಟಣೆ ಕಡಿಮೆಯಾಗುವುದು ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಸಹಾಯವಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ಟಿಕೆಟ್ ದರ ದುಬಾರಿ; ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ; ಮನವಿ ಏನು?

0

ಬೆಂಗಳೂರು:- ಭಾರತದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ.

ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

ಲೆಕ್ಕಾಚಾರಗಳಲ್ಲಿ ವೈಪರೀತ್ಯಗಳು ಕಂಡುಬಂದಿದ್ದು, ಇದರಿಂದ ಗರಿಷ್ಠ ಟಿಕೆಟ್ ದರ 95 ರೂಪಾಯಿಗೆ ಏರಿಸಲಾಗುತ್ತಿದೆ. ಸರ್ಕಾರ ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ಮುಂದುವರಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಸಚಿವ ಎಂ.ಎಲ್​​ ಖಟ್ಟರ್ ಅವರು ತೇಜಸ್ವಿ ಸೂರ್ಯ ಅವರ ಮನವಿಗೆ ಸ್ಪಂದಿಸಿ, ತಾತ್ಕಾಲಿಕವಾಗಿ ದರ ಏರಿಕೆಯನ್ನು ಸ್ಥಗಿತಗೊಳಿಸಲು ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಹೊಸ ಸಮಿತಿಯ ಮೂಲಕ ದರ ಪರಿಷ್ಕರಣೆ ಮಾಡಲು ಭರವಸೆ ನೀಡಿದ್ದಾರೆ.

ಈ ಮೂಲಕ ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹಾಕದಂತೆ ಕ್ರಮ ಕೈಗೊಳ್ಳಲಾಗುವ ನಿರೀಕ್ಷೆ ಇದೆ.

ಭ್ರಷ್ಟರ ಬೆವರಿಳಿಸಿದ ಲೋಕಾ ಅಧಿಕಾರಿಗಳು; ಮೈಸೂರಿನ 7 ಸ್ಥಳಗಳಲ್ಲಿ ದಾಳಿ

0

ಮೈಸೂರು: ನಗರದಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.

ಇಬ್ಬರು ಭ್ರಷ್ಟ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಒಟ್ಟು 7 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆಯ ಜೆ.ಇ. ಕೆ.ಆರ್. ಚಂದ್ರಶೇಖರ್ ಅವರಿಗೆ ಸೇರಿದ ಮೈಸೂರಿನ ವಿಜಯನಗರ ಮತ್ತು ಕೆಜಿ ಕೊಪ್ಪಲು ನಿವಾಸಗಳು ಸೇರಿದಂತೆ ಟಿ.ನರಸೀಪುರ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.

ಈ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 60 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಇದೇ ವೇಳೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಇಲಾಖೆಯ ಡೆಪ್ಯುಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿ ಅವರಿಗೆ ಸೇರಿದ ಎರಡು ನಿವಾಸಗಳು ಹಾಗೂ ಕಚೇರಿಗಳಲ್ಲೂ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದಾರೆ.

ದಾಳಿ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿರುವ ಸಾಧ್ಯತೆ ಇದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಹಾಸನ ಮೆಗಾ ಡೇರಿ ವಿಸ್ತರಣೆಗೆ ಕೇಂದ್ರದ ನೆರವು: ಹೈನುಗಾರಿಕೆ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಚರ್ಚೆ

0

ನವದೆಹಲಿ: ಹಾಸನ ಮೆಗಾ ಡೇರಿ ವಿಸ್ತರಣಾ ಯೋಜನೆಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ (NDDB) ಮೂಲಕ ₹150 ಕೋಟಿ ಸಾಲ ಸೌಲಭ್ಯ ಕೊಡಿಸಲು ಕೇಂದ್ರ ಸರಕಾರ ಸಮ್ಮತಿಸಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮಂತ್ರಿ, ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾದ ಹೆಚ್.ಡಿ. ರೇವಣ್ಣ ಅವರೊಂದಿಗೆ ಕೇಂದ್ರದ ಮೀನುಗಾರಿಕೆ, ಹೈನುಗಾರಿಕೆ ಮತ್ತು ಪಶುಸಂಗೋಪನಾ ಖಾತೆ ಸಚಿವರಾದ ರಾಜೀವ್ ರಂಜನ್ ಸಿಂಗ್ (ಲಲನ್ ಸಿಂಗ್) ಅವರನ್ನು ಭೇಟಿಯಾಗಿ ವಿನಂತಿ ಮಾಡಿದರು.

ಸಚಿವ ಕುಮಾರಸ್ವಾಮಿ ಅವರ ತಕ್ಷಣವೇ ಸ್ಪಂದಿಸಿದ ಸಚಿವರು; ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ಮೂಲಕ ₹150 ಕೋಟಿ ಸಾಲ ಮಂಜೂರು ಮಾಡಲು ಒಪ್ಪಿಗೆ ನೀಡಿದರು. ತಮ್ಮ ಮನವಿಗೆ ಸ್ಪಂದಿಸಿದ ಹೈನುಗಾರಿಕೆ ಸಚಿವರಿಗೆ ಕುಮಾರಸ್ವಾಮಿ ಅವರು ಕೃತಜ್ಞತೆಗಳನ್ನು ಸಲ್ಲಿಸಿದರು.

ಹಾಸನ ಹಾಲು ಒಕ್ಕೂಟವು ಲಾಭದ ದಾರಿಯಲ್ಲಿ ನಡೆಯುತ್ತಿರುವ ಅತ್ಯುತ್ತಮ ಸಹಕಾರ ಒಕ್ಕೂಟವಾಗಿದೆ. ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಹಾಲು ಉತ್ಪಾದಕರಿಗೆ ಅತಿದೊಡ್ಡ ಆಸರೆಯಾಗಿದೆ. 1977ರಲ್ಲಿ ಆರಂಭವಾದ ಈ ಒಕ್ಕೂಟವು ಪ್ರತೀ ದಿನ 14.5ರಿಂದ 15 ಲಕ್ಷ ಲೀಟರ್ ನಷ್ಟು ಹಾಲು ಸಂಗ್ರಹ ಮಾಡುತ್ತದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಹಾಲು ಉತ್ಪಾದಕರಿಗೆ ಜೀವನೋಪಾಯ ಒದಗಿಸಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಸಚಿವ ಲಲನ್ ಸಿಂಗ್ ಅವರಿಗೆ ವಿವರಿಸಿದರು.

ನಿತ್ಯವೂ ಸಂಗ್ರಹ ಆಗುತ್ತಿರುವ ಹಾಲನ್ನು ಸಂಸ್ಕರಿಸಿ ಪ್ಯಾಕೆಟ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿದೆ ಹಾಗೂ ಅನೇಕ ಉಪ ಉತ್ಪನ್ನಗಳ ತಯಾರಿಸಿ ಲಾಭದ ಹಾದಿಯಲ್ಲಿ ಮುಂದೆ ಸಾಗುತ್ತಿದೆ. ಈಗ ಹಾಲು ಸಂಗ್ರಹಣೆಯ ಪ್ರಮಾಣ ಹೆಚ್ಚಾಗುತ್ತದೆ ಹಾಗೂ ಗ್ರಾಮೀಣ ಭಾಗದಲ್ಲಿ ಜೀವನೋಪಾಯ ವೃದ್ಧಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಹಾಸನ ಮೆಗಾಡೇರಿಯನ್ನು ಮತ್ತಷ್ಟು ವಿಸ್ತರಿಸಿ ಸಶಕ್ತಿಗೊಳಿಸಬೇಕಿದೆ. ಹೀಗಾಗಿ ಕೇಂದ್ರ ಸರಕಾರದ ನೆರವು ಅಗತ್ಯವಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಮೊಸಳೆ ಹೊಸಹಳ್ಳಿ, ಮಾವಿನಕೆರೆ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಮನವಿ:

ತಮ್ಮ ತವರು ಜಿಲ್ಲೆಯ ಮೊಸಳೆ ಹೊಸಹಳ್ಳಿ, ಮಾವಿನಕೆರೆ ರೈಲು ನಿಲ್ದಾಣಗಳ ಅಭಿವೃದ್ಧಿ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಬಂದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ ಅವರಿಗೆ ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಿ ಚರ್ಚಿಸಿದರು ಕೇಂದ್ರ ಸಚಿವರು.

ತಾವು ಹುಟ್ಟಿ ಬೆಳೆದ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಹಳ್ಳಿ ಹಾಗೂ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯಕ್ಕೆ ನೇರ ಸಂಪರ್ಕ ಕಲ್ಪಿಸುವ ಮಾವಿನಕೆರೆ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ ಅತ್ಯಾಧುನಿಕವಾಗಿ ಅಭಿವೃದ್ಧಿ ಮಾಡಬೇಕು ಎಂದು ಮಾಜಿ ಪ್ರಧಾನಿಗಳು ವಿನಂತಿ ಮಾಡಿದರು.

ಇದಕ್ಕೆ ಸ್ಪಂದಿಸಿದ ರೈಲ್ವೆ ಸಚಿವರು; ಪ್ರಸಕ್ತ ಸಂಸತ್ ಅಧಿವೇಶನ ಮುಗಿಯುವುದಕ್ಕೆ ಮೊದಲೇ ಈ ಬಗ್ಗೆ ವಿಸ್ತೃತ ವರದಿ ಪಡೆದುಕೊಳ್ಳಲಾಗುವುದು. ಮೊಸಳೆ ಹೊಸಹಳ್ಳಿ ರೈಲು ನಿಲ್ದಾಣವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗುವುದು.

ಧಾರ್ಮಿಕ ಕೇಂದ್ರ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯಕ್ಕೆ ನೇರ ಸಂಪರ್ಕ ಕಲ್ಪಿಸುವ ಮಾವಿನಕೆರೆ ರೈಲು ನಿಲ್ದಾಣವನ್ನು ಪಾರಂಪರಿಕ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿ ಮಾಡಲು ಕ್ರಮ ವಹಿಸಲಾಗುವುದು ಎಂದು ರೈಲ್ವೆ ಸಚಿವರು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಮಂತ್ರಿಗಳಾದ ಹೆಚ್.ಡಿ. ರೇವಣ್ಣ ಅವರು ಉಪಸ್ತಿತರಿದ್ದರು.

Honeymoon Murder: ಗಂಡನನ್ನು ಕೊಂದು ಹಿಟ್ ಅಂಡ್ ರನ್ ಕಥೆ ಕಟ್ಟಿದ ಪತ್ನಿ..! ಮುಂದೇನಾಯ್ತು..?

0

ನವದೆಹಲಿ: ಹನಿಮೂನ್ ಗೆ ತೆರಳಿದ್ದ ವೇಳೆ ಪ್ಲಾನ್ ಮಾಡಿ ಗಂಡನನ್ನು ಕೊಲ್ಲಿಸಿ ಹಿಟ್ ಅಂಡ್ ರನ್ ಕತೆ ಕಟ್ಟಿದ್ದ ನವವಿವಾಹಿತೆಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಘಟನೆ ಆರಂಭದಲ್ಲಿ ರಸ್ತೆ ಅಪಘಾತ ಎಂದು ತೋರಿಸಿದ್ದರೂ, ತನಿಖೆಯಲ್ಲಿ ಇದು ಪೂರ್ವನಿಯೋಜಿತ ಕೊಲೆ ಎಂಬುದು ಬಹಿರಂಗವಾಗಿದೆ.

ಮೃತನನ್ನು ಆಶಿಶ್ ಎಂದು ಗುರುತಿಸಲಾಗಿದ್ದು, ಪತ್ನಿ ಅಂಜಲಿ ಜೊತೆ ರಾತ್ರಿ ವಾಕಿಂಗ್‌ಗೆ ಹೋದ ವೇಳೆ ಅಪಘಾತ ಸಂಭವಿಸಿದೆ ಎಂದು ಅಂಜಲಿ ಪೊಲೀಸರಿಗೆ ತಿಳಿಸಿದ್ದಳು. ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು ಆಶಿಶ್ ಮೃತಪಟ್ಟಿದ್ದು, ಕೆಲವರು ತನ್ನ ಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎಂದು ಆಕೆ ದೂರು ನೀಡಿದ್ದಳು. ಆರಂಭದಲ್ಲಿ ಪೊಲೀಸರು ಇದನ್ನು ಅಪಘಾತ ಪ್ರಕರಣವೆಂದೇ ಪರಿಗಣಿಸಿದ್ದರು.

ಆದರೆ, ಮೇಘಾಲಯದ ಹನಿಮೂನ್ ಕೊಲೆ ಪ್ರಕರಣದ ಹಿನ್ನೆಲೆ ಹಿನ್ನೆಲೆಯಲ್ಲಿ ಅಂಜಲಿ ಹೇಳಿಕೆಯ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಅದೇ ದೃಷ್ಟಿಕೋನದಲ್ಲಿ ತನಿಖೆ ಮುಂದುವರಿಸಿದಾಗ, ಅಂಜಲಿ ತನ್ನ ಪ್ರಿಯಕರ ಸಂಜು ಜೊತೆ ಸೇರಿ ಗಂಡ ಆಶಿಶ್‌ನ ಕೊಲೆಗೆ ಸಂಚು ರೂಪಿಸಿದ್ದಳು ಎಂಬುದು ಬೆಳಕಿಗೆ ಬಂದಿದೆ.

ಜನವರಿ 30ರಂದು ರಾತ್ರಿ 9ರ ಸುಮಾರಿಗೆ ದಂಪತಿ ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಶಿಶ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಪ್ರಕರಣದ ತನಿಖೆಗೆ ಎಫ್‌ಎಸ್‌ಎಲ್ ತಂಡವನ್ನೂ ಸ್ಥಳಕ್ಕೆ ಕರೆಸಲಾಗಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಆಶಿಶ್‌ನ ಕತ್ತು ಹಿಸುಕಿರುವ ಗುರುತುಗಳು ಪತ್ತೆಯಾಗಿದ್ದು, ಅಪಘಾತದ ಕಥೆಗೆ ಬಿರುಕು ಮೂಡಿಸಿತು. ಅಲ್ಲದೆ, ಚಿನ್ನಾಭರಣ ದೋಚಲಾಗಿದೆ ಎಂದರೂ ಅಂಜಲಿಗೆ ಯಾವುದೇ ಗಾಯಗಳಿರದಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಯಿತು.

ತನಿಖೆಯಲ್ಲಿ ಅಂಜಲಿ ತನ್ನ ಮನೆಯ ಸಮೀಪವಿದ್ದ ಸಂಜು ಜೊತೆ ನಿರಂತರ ಸಂಪರ್ಕದಲ್ಲಿದ್ದುದನ್ನು ಫೋನ್ ದಾಖಲೆಗಳು ದೃಢಪಡಿಸಿವೆ. ಮದುವೆಯಿಂದ ಅಸಮಾಧಾನಗೊಂಡಿದ್ದ ಅಂಜಲಿ ತವರು ಮನೆಗೆ ಬಂದಾಗ ಮತ್ತೆ ಸಂಜು ಜೊತೆ ಸಂಬಂಧ ಬೆಳೆಸಿದ್ದಳು. ಈ ವೇಳೆ ಇಬ್ಬರೂ ಆಶಿಶ್‌ನ ಕೊಲೆಗೆ ಸಂಚು ರೂಪಿಸಿದ್ದರು.

ಪ್ಲಾನ್‌ನಂತೆ ಜನವರಿ 30ರಂದು ರಾತ್ರಿ ಊಟದ ನಂತರ ಅಂಜಲಿ ಆಶಿಶ್‌ನನ್ನು ವಾಕಿಂಗ್ ನೆಪದಲ್ಲಿ ನಿರ್ಜನ ರಸ್ತೆಗೆ ಕರೆದುಕೊಂಡು ಹೋಗಿದ್ದಳು. ಅಲ್ಲಿ ಸಂಜು ಹಾಗೂ ಅವನ ಸಹಚರರಾದ ರೋಹಿತ್ ಮತ್ತು ಬಾದಲ್ ಅಡಗಿ ಕುಳಿತಿದ್ದು, ಆಶಿಶ್ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಂದಿದ್ದಾರೆ. ಬಳಿಕ ಇದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾರೆ.

ತನ್ನ ಮೇಲೆ ಅನುಮಾನ ಬಾರದಂತೆ ಅಂಜಲಿ ತನ್ನ ಫೋನ್ ಮತ್ತು ಕಿವಿಯೋಲೆಗಳನ್ನು ಆರೋಪಿಗಳಿಗೆ ನೀಡಿ ದರೋಡೆ ನಡೆದಿದೆ ಎಂದು ನಂಬಿಸಲು ಪ್ರಯತ್ನಿಸಿದ್ದಾಳೆ. ಬಳಿಕ ಪ್ರಜ್ಞಾಹೀನಳಂತೆ ನಟಿಸಿದ್ದಾಳೆ. ಆದರೆ ದೇಹದ ಮೇಲಿದ್ದ ಗಾಯದ ಗುರುತುಗಳು ಕೊಲೆಯ ಸತ್ಯವನ್ನು ಬಯಲಿಗೆಳೆದವು.

ತನಿಖೆ ವೇಳೆ ಅಂಜಲಿ ಹೇಳಿಕೆಗಳನ್ನು ಪದೇಪದೇ ಬದಲಾಯಿಸಿದ್ದರಿಂದ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆ ನಡೆಸಿದರು. ಕೊನೆಗೆ ಅಂಜಲಿ ತಪ್ಪೊಪ್ಪಿಕೊಂಡಿದ್ದು, ಪೊಲೀಸರು ಅಂಜಲಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಿವಿ ಕೇಳದ, ಮಾತು ಬಾರದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ..!

0

ಮುಂಬೈ: ನಗರದ ಕೆಫೆ ಪರೇಡ್ ಪ್ರದೇಶದಲ್ಲಿ ಕಿವಿ ಕೇಳದ ಹಾಗೂ ಮಾತು ಬಾರದ 20 ವರ್ಷದ ಯುವತಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಡಿಎನ್ಎ ಪರೀಕ್ಷೆಯಲ್ಲಿ ಭ್ರೂಣದೊಂದಿಗೆ ತಂದೆಯ ಸಂಬಂಧ ದೃಢಪಟ್ಟ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿ ಐದು ತಿಂಗಳ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿದುಬಂದಿದ್ದು, ಈ ಪ್ರಕರಣವು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರಂಭದಲ್ಲಿ ಯುವತಿ ತನ್ನ ಮೇಲೆ ಮತ್ತೊಬ್ಬ ವ್ಯಕ್ತಿ ಹಾಗೂ 17 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದಾರೆ ಎಂದು ಗುರುತಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆ ಇಬ್ಬರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಇತರರ ಪಾತ್ರವಿದೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಯುವತಿ ಕೈ ಸನ್ನೆಗಳ ಮೂಲಕ ತಾನು ಸುಸ್ತಾಗುತ್ತಿದೆ ಹಾಗೂ ಹೊಟ್ಟೆಯಲ್ಲಿ ಏನೋ ಚಲಿಸುವಂತೆ ಅನುಭವವಾಗುತ್ತಿದೆ ಎಂದು ಅಜ್ಜಿಗೆ ತಿಳಿಸಿದ್ದಳು. ಬಳಿಕ ಆಕೆಯನ್ನು ನಗರದ ಕ್ಯಾಮಾ ಮತ್ತು ಆಲ್ಬ್ಲೆಸ್ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಯುವತಿ ಐದು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿತು. ಆಸ್ಪತ್ರೆ ಆಡಳಿತ ಮಂಡಳಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದೆ.

ಪೊಲೀಸರು ಈ ವಿಚಾರವನ್ನು ಯುವತಿಯ ತಂದೆಗೆ ತಿಳಿಸಿದಾಗ, ಪುತ್ರಿ ಗರ್ಭಿಣಿಯಾಗಿರುವುದನ್ನು ಆತ ತಳ್ಳಿಹಾಕಿದ್ದು, ದೂರು ದಾಖಲಿಸಲು ಸಹ ನಿರಾಕರಿಸಿದ್ದಾನೆ. ನಂತರ ಕೌನ್ಸಿಲಿಂಗ್ ನಡೆಸಿದ ಬಳಿಕ ಯುವತಿ ದೂರು ದಾಖಲಿಸಲು ಒಪ್ಪಿಕೊಂಡಳು.ಯುವತಿ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದರು.

ಬಳಿಕ ಯುವತಿಯ ತಂದೆ ಸೇರಿದಂತೆ ಒಟ್ಟು 17 ಶಂಕಿತರಿಂದ ಡಿಎನ್ಎ ಹಾಗೂ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ಭ್ರೂಣದ ಆನುವಂಶಿಕ ದತ್ತಾಂಶದೊಂದಿಗೆ ಹೋಲಿಕೆ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ಯುವತಿಯ ತಂದೆಯ ಡಿಎನ್ಎ ಮ್ಯಾಚ್ ಆಗಿರುವುದು ದೃಢಪಟ್ಟಿದೆ. ಡಿಎನ್ಎ ವರದಿ ಆಧಾರವಾಗಿ ಪೊಲೀಸರು ಯುವತಿಯ ತಂದೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

ಹೈ ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನು ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

0

ನವದೆಹಲಿ: ರಾಷ್ಟ್ರದ ಅಗತ್ಯಗಳಿಗೆ ಮೀರಿ ಕೇಂದ್ರ ಬಜೆಟ್ ನಲ್ಲಿ ರೈಲ್ವೆ ವಲಯಕ್ಕೆ ಹೆಚ್ಚು ಅನುದಾನ, ಯೋಜನೆಗಳನ್ನು ನೀಡಿರುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿಗಳು; 2026ರ ಬಜೆಟ್‌ನಲ್ಲಿ ಸುಸ್ಥಿರ ಸಾರಿಗೆ ಮತ್ತು ಆರ್ಥಿಕ ಬೆಳವಣಿಗೆಗಾಗಿ ಬೆಳವಣಿಗೆಯ ಕನೆಕ್ಟರ್‌ಗಳಾಗಿ ಸುಮಾರು 4,000 ಕಿ.ಮೀ. ಉದ್ದದ ಏಳು ಹೊಸ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಘೋಷಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಪೈಕಿ ಚೆನ್ನೈ-ಬೆಂಗಳೂರು-ಹೈದರಾಬಾದ್ (ಹೈದರಾಬಾದ್-ಚೆನ್ನೈ ಮತ್ತು ಚೆನ್ನೈ-ಬೆಂಗಳೂರು ವಿಭಾಗಗಳೊಂದಿಗೆ) ದಕ್ಷಿಣ ಭಾಗದಲ್ಲಿ ಹೈ-ಸ್ಪೀಡ್ ತ್ರಿಕೋನವನ್ನು ಸೃಷ್ಟಿಸಲಾಗುತ್ತಿದೆ. ಇದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳು ಮತ್ತು ಅವರ ಚಲನಶೀಲತೆಯ ಅಗತ್ಯಗಳನ್ನು ನೇರವಾಗಿ ಪೂರೈಸುತ್ತದೆ ಮತ್ತು ಕೇರಳ ಮತ್ತು ಪುದುಚೇರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಮಾಜಿ ಪ್ರಧಾನಿಗಳು ಹೇಳಿದ್ದಾರೆ.

ಮುಂಬೈ-ಪುಣೆ, ಪುಣೆ-ಹೈದರಾಬಾದ್, ದೆಹಲಿ-ವಾರಣಾಸಿ ಮತ್ತು ವಾರಣಾಸಿ-ಸಿಲಿಗುರಿಯಂತಹ ಇತರ ಕಾರಿಡಾರ್‌ಗಳು ದೇಶಾದ್ಯಂತದ ಪ್ರಮುಖ ನಗರ, ಕೈಗಾರಿಕಾ ಮತ್ತು ಆಧ್ಯಾತ್ಮಿಕ ಕೇಂದ್ರಗಳನ್ನು ಸಂಪರ್ಕಿಸುತ್ತವೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು 16 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತವೆ.

ಈ ದೂರದೃಷ್ಟಿಯ ಉಪಕ್ರಮವು ವಿಕಸಿತ ಭಾರತ 2047ರ ಉದಾತ್ತ ಕನಸಿನೊಂದಿಗೆ ಸರಾಗವಾಗಿ ಹೊಂದಿಕೆಯಾಗುತ್ತದೆ. ಜಾಗತಿಕ ದರ್ಜೆಯ ಮೂಲಸೌಕರ್ಯದಿಂದ ನಡೆಸಲ್ಪಡುವ ಅಭಿವೃದ್ಧಿ ಹೊಂದಿದ, ಆಧುನಿಕ ಆರ್ಥಿಕತೆಯತ್ತ ನಮ್ಮ ರಾಷ್ಟ್ರದ ಪ್ರಯಾಣವನ್ನು ವೇಗಗೊಳಿಸುತ್ತದೆ ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೀದರ್ ಸೇರಿಸಲು ಮನವಿ:

ಬೆಂಗಳೂರು-ಹೈದರಾಬಾದ್ ಹೈ-ಸ್ಪೀಡ್ ರೈಲ್ವೆ ಕಾರಿಡಾರ್ ಅನ್ನು ಬೀದರ್ ವರೆಗೆ ವಿಸ್ತರಿಸಬೇಕು. ಇದು ಉತ್ತರ ಕರ್ನಾಟಕ ಮತ್ತು ತೆಲಂಗಾಣ ಪ್ರದೇಶಗಳಿಗೆ ಹೆಚ್ಚು ಅನುಕೂಲ ಆಗುತ್ತದೆ ಎಂದು ಮನವಿ ಮಾಡಿರುವ ಮಾಜಿ ಪ್ರಧಾನಿಗಳು; ಈ ಮೂಲಕ ಬೀದರ್ ಭಾಗದ ಅಗತ್ಯಗಳಿಗೆ ಅನುಕೂಲ ಆಗುತ್ತದೆ ಎಂದಿದ್ದಾರೆ.

ಕರ್ನಾಟಕ ರಾಜ್ಯದೊಳಗೆ ಸುಧಾರಿತ ಆಂತರಿಕ ಸಂಪರ್ಕದ ಅಗತ್ಯವಾಗಿದೆ. ಬೆಂಗಳೂರು ಮತ್ತು ಬೆಳಗಾವಿ ನಡುವಿನ ಅಂತರವು ಸುಮಾರು 600 ಕಿ.ಮೀ., ಮತ್ತು ಪ್ರಸ್ತುತ ಪ್ರಯಾಣದ ಸಮಯ – ಸಾಮಾನ್ಯವಾಗಿ ರಸ್ತೆ ಅಥವಾ ರೈಲು ಮೂಲಕ 8-10 ಗಂಟೆಗಳು ಆಗುತ್ತದೆ.

ಈ ದೀರ್ಘ ಪ್ರಯಾಣವು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಪ್ರದೇಶಗಳಿಗೆ ಪ್ರಗತಿಗೆ ತೀವ್ರವಾಗಿ ಅಡ್ಡಿಯಾಗುತ್ತದೆ. ಬೆಂಗಳೂರು- ಬೆಳಗಾವಿ- ಪುಣೆ-ಮುಂಬೈ ಅನ್ನು ಸಂಪರ್ಕಿಸುವ ವೇಗದ ಹೈ-ಸ್ಪೀಡ್ ರೈಲು ಕಾರಿಡಾರ್ ಅಪಾರ ಪ್ರಯೋಜನಕಾರಿ ಆಗಲಿದೆ ಎಂದು ಅವರು ಹೇಳಿದ್ದಾರೆ.

ಚಾಮರಾಜನಗರದಲ್ಲಿ ಎರಡು ದಿನದಲ್ಲಿ 11 ಹಸುಗಳು ಸಾವು

0

ಚಾಮರಾಜನಗರ: ಕೇವಲ ಎರಡು ದಿನಗಳಲ್ಲಿ ಚಾಮರಾಜನಗರದ ಹನೂರು ತಾಲ್ಲೂಕಿನ ಹಸುಗಳು ಅನಿಯಂತ್ರಿತವಾಗಿ ಮೃತರಾಗಿದ್ದು, ಸ್ಥಳೀಯ ರೈತರಲ್ಲಿ ಭಾರೀ ಆತಂಕ ಮೂಡಿಸಿದೆ. ಶೆಟ್ಟಿಹಳ್ಳಿ ಗ್ರಾಮದಲ್ಲಿ 6 ಹಸುಗಳು ಪರಶಿವ ಅವರ ಜಮೀನಿನ ಪಕ್ಕದಲ್ಲಿ ಪತ್ತೆಯಾಗಿದ್ದು, ಮರಣಕ್ಕೆ ವಿಷಪೂರಿತ ಆಹಾರ ಅಥವಾ ನೀರು ಸೇವನೆಯೇ ಕಾರಣವಾಯಿತೆ ಎಂದು ಅಂದುಕೊಳ್ಳಲಾಗುತ್ತಿದೆ. ಇನ್ನೊಂದು ಎರಡು ಹಸುಗಳು ನಾಪತ್ತೆಯಾಗಿರುವುದು ರೈತರಿಗೆ ಮತ್ತಷ್ಟು ಭಯಕಾರಿಯಾಗಿದೆ.

ಗೋಪಿಶೆಟ್ಟಿಯೂರು ಗ್ರಾಮದಲ್ಲೂ 5 ಹಸುಗಳು ನಿಗದಿಯಲ್ಲದೆ ಮೃತಪಟ್ಟಿದ್ದು, ಮಾಲಕರು ಕಣ್ಣೀರಿಟ್ಟಿದ್ದಾರೆ. ಜೀವೋಪಾಯಕ್ಕೆ ಅವಲಂಬಿತವಾಗಿದ್ದ ಹಸುಗಳನ್ನು ಕಳೆದುಕೊಂಡು ಹೃದಯಭಾರದಿಂದ ಮನವಿ ಮಾಡಿದರು, “ಹಸು ಸಾವಿಗೆ ಕಾರಣವಾದರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು.

ಜಿಲ್ಲಾಧಿಕಾರಿ ಭವನದಲ್ಲಿ ನಡೆದ ಸಭೆಗೆ ತಡವಾಗಿ ಬಂದ ಅಧಿಕಾರಿಗಳ ಮೇಲೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಭೆಯಲ್ಲಿ ಕಬಿನಿ ಹಿನ್ನೀರು, ಬಂಡೀಪುರದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಮ್ ಸ್ಟೇ ಮತ್ತು ಹೋಟೆಲ್ ತೆರವು ವಿಚಾರ ಚರ್ಚಿಸಲ್ಪಟ್ಟಿದ್ದರೂ, ಸ್ಥಳದಲ್ಲಿ ಹೈ-ಟೆನ್ಷನ್ ವಾತಾವರಣ ನಿರ್ಮಾಣವಾಯಿತು. ಈ ಸಂದರ್ಭ, ಮಾಧ್ಯಮದವರು ವೀಡಿಯೋ ರೆಕಾರ್ಡ್ ಮಾಡುವುದನ್ನು ನಿಲ್ಲಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

error: Content is protected !!