Home Blog Page 448

IPL 2026: RCB ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ! ಬೆಂಗಳೂರಲ್ಲಿ ಇಂದು ಹೇಗಿರುತ್ತೆ ವಾತಾವರಣ?

0

ಕ್ರಿಕೆಟ್ ಅಭಿಮಾನಿಗಳ ಬಹುಕಾಲದ ನಿರೀಕ್ಷೆಗೆ ಇಂದು ತೆರೆ ಬೀಳುತ್ತಿದೆ. ಐಪಿಎಲ್ ಸೀಸನ್ 19ರ ಉದ್ಘಾಟನಾ ಪಂದ್ಯದಲ್ಲಿ RCB ಮತ್ತು SRH ತಂಡಗಳು ಮುಖಾಮುಖಿಯಾಗುತ್ತಿವೆ.

ಈ ಹೈವೋಲ್ಟೇಜ್ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇತ್ತೀಚೆಗೆ ನಿಷೇಧದಿಂದ ಮುಕ್ತಗೊಂಡ ಬಳಿಕ ಇದೇ ಮೈದಾನದಲ್ಲಿ ಪಂದ್ಯ ಆಯೋಜಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಶನಿವಾರ ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆ ಇದೆ. ಮಧ್ಯಾಹ್ನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದರೂ, ಸಂಜೆ ಪಂದ್ಯದ ವೇಳೆಯಲ್ಲಿ ಮಳೆಯ ಸಾಧ್ಯತೆ ಕೇವಲ 5 ಶೇಕಡಾ ಮಾತ್ರ. ಹೀಗಾಗಿ ಪಂದ್ಯ ರದ್ದಾಗುವ ಸಾಧ್ಯತೆ ಬಹಳ ಕಡಿಮೆ. ಆದರೆ, ಮಳೆ ಕಾರಣದಿಂದ ಸ್ವಲ್ಪ ಸಮಯ ವ್ಯತ್ಯಯ ಉಂಟಾಗಬಹುದು.

ಕಳೆದ ಸೀಸನ್‌ನಲ್ಲಿ ಇದೇ ಮೈದಾನದಲ್ಲಿ ನಡೆದ 5 ಪಂದ್ಯಗಳಲ್ಲಿ ಆರ್ಸಿಬಿ 2ರಲ್ಲಿ ಗೆದ್ದು, 3ರಲ್ಲಿ ಸೋಲು ಕಂಡಿತ್ತು. ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಅವರು ಇಲ್ಲಿ ಆಡಿದ 106 ಇನ್ನಿಂಗ್ಸ್‌ಗಳಲ್ಲಿ 3618 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ಬಾರಿ ಉದ್ಘಾಟನಾ ಸಮಾರಂಭ ಇರುವುದಿಲ್ಲ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ ಸಂಜೆ 7:00ಕ್ಕೆ ನಡೆಯಲಿದೆ.

ಅಪರಾಧ ಪತ್ತೆಯಲ್ಲಿ ನಿಪುಣತೆ: ಜಾಫರ್ ಬಚ್ಚೇರಿಗೆ ಸಿಎಂ ಪದಕ

0

ಗದಗ: ಅಪರಾಧ ಪತ್ತೆ ಕಾರ್ಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ಜಾಫರ್ ಬಚ್ಚೇರಿ ಅವರು 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.

ಸುಮಾರು ಹದಿನಾಲ್ಕು ವರ್ಷಗಳಿಂದ ಪೊಲೀಸ್ ಇಲಾಖೆಯ ಅಪರಾಧ ಪತ್ತೆ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಜಾಫರ್ ಬಚ್ಚೇರಿ ಅವರು ತಮ್ಮ ಕರ್ತವ್ಯನಿಷ್ಠೆ, ಚಾತುರ್ಯ ಹಾಗೂ ಚಾಣಾಕ್ಷ ನಿರ್ಧಾರ ಸಾಮರ್ಥ್ಯದಿಂದ ಅನೇಕ ಕ್ಲಿಷ್ಟ ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚುವಲ್ಲಿ ನೆರವಾಗಿದ್ದಾರೆ.

ವಿಶೇಷವಾಗಿ ಕಳ್ಳತನ, ದರೋಡೆ ಹಾಗೂ ಕೊಲೆ ಪ್ರಕರಣಗಳಲ್ಲಿ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಅವರು ತೋರಿದ ಕಾರ್ಯಕ್ಷಮತೆ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆದಿದೆ.

ಅಪರಾಧ ಪತ್ತೆಯಲ್ಲಿನ ಸೂಕ್ಷ್ಮ ಪರಿಶೀಲನೆ, ಮಾಹಿತಿ ಸಂಗ್ರಹಣೆಯಲ್ಲಿನ ಚಾಣಾಕ್ಷತನ ಹಾಗೂ ತಂಡದೊಂದಿಗೆ ಸಮನ್ವಯ ಸಾಧಿಸುವ ಸಾಮರ್ಥ್ಯ ಇವರನ್ನು ಇತರರಿಂದ ವಿಭಿನ್ನಗೊಳಿಸಿದೆ.

ಹಲವು ಪ್ರಕರಣಗಳಲ್ಲಿ ಕಡಿಮೆ ಸಮಯದಲ್ಲೇ ಸುಳಿವುಗಳನ್ನು ಪಡೆದು ಆರೋಪಿಗಳನ್ನು ಬಂಧಿಸುವಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಇಂತಹ ವಿಶಿಷ್ಟ ವ್ಯಕ್ತಿತ್ವ ಹೊಂದಿದ ಜಾಫರ್ ಬಚ್ಚೇರಿ ಅವರು ಸಾರ್ವಜನಿಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸ್ ಸೇವೆಯಲ್ಲಿನ ತಮ್ಮ ಪ್ರಾಮಾಣಿಕತೆ, ಶಿಸ್ತಿನ ಪಾಲನೆ ಹಾಗೂ ಕರ್ತವ್ಯನಿಷ್ಠೆಗಾಗಿ ಜಾಫರ್ ಬಚ್ಚೇರಿ ಅವರು ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ಗಳಿಸಿದ್ದು, ಸಹೋದ್ಯೋಗಿಗಳಿಗೂ ಪ್ರೇರಣೆಯಾಗಿ ಪರಿಣಮಿಸಿದ್ದಾರೆ. ಅವರ ಸೇವಾ ಮನೋಭಾವ ಹಾಗೂ ಪರಿಶ್ರಮವನ್ನು ಗುರುತಿಸಿ ರಾಜ್ಯ ಸರ್ಕಾರ ಈ ಗೌರವಾನ್ವಿತ ಮುಖ್ಯಮಂತ್ರಿಗಳ ಪದಕವನ್ನು ಪ್ರದಾನ ಮಾಡಿದೆ.

ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರಭುಗೌಡ ಕಿರೇದಳ್ಳಿ, ಮುರ್ತಾಜಾ ಖಾದ್ರಿ, ಮಹಾಂತೇಶ ಸಜ್ಜನ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಾಫರ್ ಬಚ್ಚೇರಿ ಅವರನ್ನು ಅಭಿನಂದಿಸಿ ಶುಭಾಶಯ ಕೋರಿದ್ದಾರೆ.

ಜಾಫರ್ ಬಚ್ಚೇರಿ ಅವರ ಈ ಸಾಧನೆ ಪೊಲೀಸ್ ಇಲಾಖೆಯ ಇತರ ಸಿಬ್ಬಂದಿಗೆ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಪ್ರೋತ್ಸಾಹ ನೀಡಲಿದೆ.

ನವದೆಹಲಿ ಏರ್ ಪೋರ್ಟ್ʼನಲ್ಲಿ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್!

0

ನವದೆಹಲಿ: ಎಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.

ಬೋಯಿಂಗ್ 737 ವಿಮಾನವು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ದೆಹಲಿಗೆ ಪ್ರಯಾಣಿಸುತ್ತಿತ್ತು. ವೇಳೆ ಎಂಜಿನ್ನಲ್ಲಿ ದೋಷ ಕಂಡುಬಂದ ಕಾರಣ ಬೆಳಿಗ್ಗೆ 10:50ಕ್ಕೆ ತುರ್ತು ಭೂಸ್ಪರ್ಶ ಮಾಡಲಾಗಿದೆ.

ತುರ್ತು ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ರನ್ವೇ 28ರಲ್ಲಿ ಎಮರ್ಜೆನ್ಸಿ ಘೋಷಣೆ ಮಾಡಲಾಗಿತ್ತು. ವಿಮಾನದಲ್ಲಿ ಒಟ್ಟು 161 ಪ್ರಯಾಣಿಕರಿದ್ದರು.

ಅಗ್ನಿಶಾಮಕ ಇಲಾಖೆಯ ಪ್ರಕಾರ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದು ಯಾವುದೇ ಅಪಾಯ ಸಂಭವಿಸಿಲ್ಲ. ವಿಮಾನವು ಟರ್ಕಿಯ ಕೊರೆಂಡನ್ ಏರ್ಲೈನ್ಸ್ ಸಂಸ್ಥೆಗೆ ಸೇರಿದ್ದು, ಅದನ್ನು ಇಂಡಿಗೋ ಕಂಪನಿ ಲೀಸ್ಗೆ ಪಡೆದುಕೊಂಡಿತ್ತು.

ತೈಲ ಕೊರತೆಯಿಂದ ರಾಜ್ಯದ ಕೈಗಾರಿಕೆಗಳು ಸಂಕಷ್ಟ ಅನುಭವಿಸುತ್ತಿವೆ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೇ ತೈಲ ಕೊರತೆ ವಿಚಾರವಾಗಿ ಸಚಿವ ಎಂ.ಬಿ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ತೈಲ ಕೊರತೆಯಿಂದ ರಾಜ್ಯದ ಕೈಗಾರಿಕೆಗಳು ಸಂಕಷ್ಟ ಅನುಭವಿಸುತ್ತಿವೆಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಸ್ರೇಲ್ ಪ್ರವಾಸವನ್ನು ಉಲ್ಲೇಖಿಸಿದ ಅವರು, “ಮೋದಿ ಇಸ್ರೇಲ್ಗೆ ಭೇಟಿ ನೀಡಿಫಾದರ್ ಲ್ಯಾಂಡ್ಎಂದು ಹೊಗಳಿದರು. ಆದರೆ ಅವರು ಮರಳಿದ ತಕ್ಷಣವೇ ಯುದ್ಧ ಆರಂಭವಾಯಿತುಎಂದು ಟೀಕಿಸಿದರು.

ಇರಾನ್ ಕುರಿತು ಮಾತನಾಡಿದ ಅವರು, “ಇರಾನ್ ನಮ್ಮ ಹಡಗುಗಳನ್ನು ಬಿಡುಗಡೆ ಮಾಡಿದೆ. ಭಾರತವನ್ನು ಸ್ನೇಹಿತ ರಾಷ್ಟ್ರವೆಂದು ಪರಿಗಣಿಸಿದೆ. ಅವರು ಎಲ್ಪಿಜಿ ಪೂರೈಕೆ ಮಾಡುತ್ತ ಸಹಕಾರ ನೀಡಿದ್ದಾರೆ. ಅದು ಇಲ್ಲದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿತ್ತುಎಂದು ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದ ಅವರು, “ಮೋದಿ ಅವರ ವಿದೇಶಾಂಗ ನೀತಿ ವಿಫಲವಾಗಿದೆ. ಇರಾನ್ ನಮ್ಮ ಮಿತ್ರ ರಾಷ್ಟ್ರವಾಗಿರುವುದರಿಂದಲೇ ನಮ್ಮ ಹಡಗುಗಳಿಗೆ ಅನುಕೂಲವಾಗಿದೆ. ಇಲ್ಲದಿದ್ದರೆ ದೇಶದ ಪರಿಸ್ಥಿತಿ ಕಷ್ಟಕರವಾಗುತ್ತಿತ್ತುಎಂದು ಕಳವಳ ವ್ಯಕ್ತಪಡಿಸಿದರು.

ನಾಗರಹೊಳೆ ಗಡಿಯಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವು; ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಮೂರು ವರ್ಷದ ಗಂಡು ಹುಲಿ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಶಾಖೆ ವ್ಯಾಪ್ತಿಯ ಕಾಡಂಚಿನ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಉರುಳಿಗೆ ಹುಲಿ ಸಿಲುಕಿ ಮೃತಪಟ್ಟಿದೆ. ಈ ಘಟನೆ ಎರಡು ದಿನಗಳ ಹಿಂದೆಯೇ ನಡೆದಿದ್ದು, ಶುಕ್ರವಾರ ಬೆಳಿಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಹುಲಿ ಯೋಜನೆ ನಿರ್ದೇಶಕಿ ಸೀಮಾ, ಎಸಿಎಫ್ ಮಧು ಹಾಗೂ ಅರಣ್ಯಾಧಿಕಾರಿ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪಶುವೈದ್ಯರಾದ ಡಾ. ರಮೇಶ್ ಮತ್ತು ಡಾ. ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿ, ಹುಲಿಯ ಅಂತ್ಯಕ್ರಿಯೆಯನ್ನು ಸ್ಥಳದಲ್ಲೇ ನೆರವೇರಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿ, ಜಮೀನು ಮಾಲೀಕರಾದ ಅಗಸರಹುಂಡಿ ಗ್ರಾಮದ ಶಂಕರ್ ಹಾಗೂ ಜಿ.ಎಂ.ಹಳ್ಳಿಯ ಗಿರೀಶ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಗೆ ಸಂಬಂಧಿಸಿ ಈಶ್ವರ ಬಿ. ಖಂಡ್ರೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸೂಚಿಸಿರುವ ಅವರು, ಗಸ್ತು ಕಾರ್ಯದಲ್ಲಿ ಲೋಪ ಕಂಡುಬಂದರೆ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಅದೇ ವೇಳೆ, ಉರುಳು ಅಳವಡಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಾಡಂಚಿನ ಜಮೀನುಗಳಲ್ಲಿ ಅಕ್ರಮ ಉರುಳು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

ವಾಣಿಜ್ಯ LPG ಹಂಚಿಕೆ ಹೆಚ್ಚಳ: ಉದ್ಯಮ ವಲಯಕ್ಕೆ ಕೇಂದ್ರ ನೆರವು – ಪ್ರಲ್ಹಾದ ಜೋಶಿ

ನವದೆಹಲಿ/ಹುಬ್ಬಳ್ಳಿ: ಜಾಗತಿಕ ಬಿಕ್ಕಟ್ಟು ಮತ್ತು ಸವಾಲಿನ ನಡುವೆಯೂ ಕೇಂದ್ರ ಸರ್ಕಾರ ಕೈಗಾರಿಕಾ ವಲಯಕ್ಕೆ ನೆರವಾಗುವ ಉದ್ದೇಶದಿಂದ ವಾಣಿಜ್ಯ ಎಲ್ಪಿಜಿ ಹಂಚಿಕೆಯನ್ನು ಶೇ.70ರಷ್ಟು ಹೆಚ್ಚಿಸಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.10ರಷ್ಟು ಕಡಿತಗೊಳಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಯುದ್ಧದ ಸಂದಿಗ್ಧ ಪರಿಸ್ಥಿತಿಯಲ್ಲಿ ಇಡೀ ಜಗತ್ತು ಇಂಧನ ಪೂರೈಕೆ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿಯೂ, ಭಾರತದ ಕೈಗಾರಿಕೆಗಳು ಅಡಚಣೆ ಇಲ್ಲದೆ ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹಿನ್ನೆಲೆ ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಹಾಗೂ ವಾಣಿಜ್ಯ ಎಲ್ಪಿಜಿ ಹಂಚಿಕೆ ಹೆಚ್ಚಿಸುವ ಮೂಲಕ ಕೈಗಾರಿಕಾ ಕ್ಷೇತ್ರಕ್ಕೆ ಉತ್ತೇಜನ ನೀಡಲಾಗಿದೆ ಎಂದು ಹೇಳಿದರು.

ದೇಶದಲ್ಲಿ ಕೋವಿಡ್ ಕಾಲದಂತೆ ಲಾಕ್ಡೌನ್ ಜಾರಿಯಾಗಬಹುದು ಎಂಬ ವದಂತಿಗಳನ್ನು ತಳ್ಳಿಹಾಕಿದ ಸಚಿವರು, ಇಂತಹ ಯಾವುದೇ ಪರಿಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಜನರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಮತ್ತು ಆತಂಕಪಡಬಾರದು ಎಂದು ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನಿರ್ದೇಶನದ ಮೇರೆಗೆ ವಾಣಿಜ್ಯ ಎಲ್ಪಿಜಿ ಹಂಚಿಕೆಯನ್ನು ಹೆಚ್ಚಿಸಲಾಗಿದೆ. ಕ್ರಮದಿಂದ ಉಕ್ಕು, ಆಟೋಮೊಬೈಲ್ ಮತ್ತು ಜವಳಿ ಸೇರಿದಂತೆ ವಿವಿಧ ಕೈಗಾರಿಕಾ ವಲಯಗಳಿಗೆ ಹೆಚ್ಚಿನ ನೆರವು ದೊರೆಯಲಿದೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

IPL ಹಿನ್ನೆಲೆ: ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

0

ಬೆಂಗಳೂರು: 2026 ಐಪಿಎಲ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಪಂದ್ಯ ನಡೆಯುವ ದಿನಗಳಲ್ಲಿ ಮೆಟ್ರೋ ಸೇವೆಯನ್ನು ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ ಎಂದು BMRCL ತಿಳಿಸಿದೆ.

ಇಂದು RCB ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ಪಂದ್ಯ ವೀಕ್ಷಿಸಿ ಮನೆಗೆ ಮರಳುವವರಿಗೆ ಅನುಕೂಲವಾಗುವ ಉದ್ದೇಶದಿಂದ ನಿರ್ಧಾರ ಕೈಗೊಳ್ಳಲಾಗಿದೆ.

ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಕೊನೆಯ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಐಪಿಎಲ್ ಪಂದ್ಯ ದಿನಗಳಲ್ಲಿ ಎಲ್ಲಾ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1.30ಕ್ಕೆ ಹೊರಡಲಿದೆ.

ಇನ್ನೂ, ಐಪಿಎಲ್ ಪಂದ್ಯ ಟಿಕೆಟ್ಗಳ ಮೇಲೆ ಮೆಟ್ರೋ ಕ್ಯೂಆರ್ ಕೋಡ್ ಮುದ್ರಣಗೊಂಡಿದ್ದು, ಕ್ರೀಡಾಂಗಣಕ್ಕೆ ಬರುವವರು ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ.

ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

CSKಗೆ ಶಾಕ್: ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್!

0

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ  ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ.

ಸ್ನಾಯು ಸೆಳೆತ ಸಮಸ್ಯೆಯಿಂದ ಬಳಲುತ್ತಿರುವ ಧೋನಿ, ಐಪಿಎಲ್‌ನ ಮೊದಲ ಎರಡು ವಾರಗಳ ಪಂದ್ಯಗಳಲ್ಲಿ ಆಡಲು ಸಾಧ್ಯವಿಲ್ಲ ಎಂದು ವರದಿಯಾಗಿದೆ. ಇದರಿಂದ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಹೆಚ್ಚು.

ಧೋನಿ ಅನುಪಸ್ಥಿತಿಯಲ್ಲಿ ತಂಡದ ವಿಕೆಟ್ ಕೀಪರ್ ಆಗಿ  ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಅವರು ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಗಮನಾರ್ಹವಾಗಿದೆ.

ಇನ್ನೊಂದೆಡೆ, ಧೋನಿ ಸಂಪೂರ್ಣ ಫಿಟ್‌ನೆಸ್ ಹೊಂದಿದರೆ ಏಪ್ರಿಲ್ 19ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅದುವರೆಗೆ ಅವರು ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಪಂದ್ಯಗಳಲ್ಲಿ ‘ಥಲಾ’ ಅಭಿಮಾನಿಗಳಿಗೆ ನಿರಾಶೆ ಎದುರಾಗುವ ಸಾಧ್ಯತೆ ಇದೆ. ಧೋನಿ ಹೊರಗುಳಿದರೆ ಸರ್ಫರಾಝ್ ಖಾನ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

0

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಈ ಅಪಘಾತವು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಬಂಗಾರುಪಾಳ್ಯಂ ಸಮೀಪದ ಪಲಮಕುಲಪಲ್ಲಿ ಬಳಿ ಸಂಭವಿಸಿದೆ. ಬೆಂಗಳೂರು ಮೂಲದ ದಂಪತಿ ಮತ್ತು ಅವರ 4 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಲಮನೇರಿನಿಂದ ಚಿತ್ತೂರಿನತ್ತ ಬರುತ್ತಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ದಂಪತಿ ಹಾಗೂ ಮಗು ಕಾರಿನಲ್ಲೇ ಸಿಲುಕಿ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಕಾರು ಬಸ್‌ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಪೊಲೀಸರು ಜೆಸಿಬಿ ಸಹಾಯದಿಂದ ಹೊರತೆಗೆದಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಮೃತಪಟ್ಟ ಕುಟುಂಬವು ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿಯಲ್ಲಿ ದರ್ಶನಕ್ಕೆ ಟಿಕೆಟ್ ಪಡೆದಿತ್ತು ಎನ್ನಲಾಗಿದೆ. ಪೊಲೀಸರು ಮೃತರ ವಿವರಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಸಿಲಿಂಡರ್ ಅಭಾವ: ಸೌದೆಗೆ ಮೊರೆ ಹೋದ ಹೋಟೆಲ್ ಮಾಲಿಕರು!

0

ಹಗರಿಬೊಮ್ಮನಹಳ್ಳಿ: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್ ಪೂರೈಕೆ ವ್ಯತ್ಯಯಗೊಂಡಿದ್ದು, ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಹೋಟೆಲ್ ಉದ್ಯಮಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ.

ಪಟ್ಟಣದ ಹೃದಯ ಭಾಗದಲ್ಲಿರುವ ವಾಲ್ಮೀಕಿ ಸರ್ಕಲ್ ಸಮೀಪದ ಪ್ರಸಿದ್ಧ ದರ್ಶನ್ ಹೋಟೆಲ್ ಮಾಲಿಕರಾದ ಎಸ್.ಎಂ. ಗಂಗಾಧರಯ್ಯ ಅವರು ಮಾತನಾಡಿ, “ಸಿಲಿಂಡರ್ ಸರಿಯಾದ ಪ್ರಮಾಣದಲ್ಲಿ ಲಭ್ಯವಾಗದೇ ಇರುವುದರಿಂದ ನಾವು ಸೌದೆ ಬಳಸಿ ಅಡುಗೆ ಮಾಡಬೇಕಾದ ಪರಿಸ್ಥಿತಿ ಬಂದಿದೆ” ಎಂದು ತಿಳಿಸಿದರು.

ದರ್ಶನ್ ಹೋಟೆಲ್‌ನಲ್ಲಿ ಇಡ್ಲಿ, ಸಾಂಬಾರ್, ಪೂರಿ, ದೋಸೆ, ಉದ್ದಿನ ವಡೆ, ಮಿರ್ಚಿ, ಉಪ್ಪಿಟ್ಟು, ಅವಲಕ್ಕಿ, ಕೇಸರಿಬಾತ್, ಪಲಾವ್, ಚಿತ್ರಾನ್ನ ಸೇರಿದಂತೆ ಮಧ್ಯಾಹ್ನದ ಊಟವನ್ನೂ ಸೌದೆ ಬಳಸಿ ತಯಾರಿಸಲಾಗುತ್ತಿದೆ.

ಆದರೆ ಸೌದೆ ಒದಗಿಸುವುದು ಹಾಗೂ ಅದನ್ನು ಬಳಸಿ ಅಡುಗೆ ಮಾಡುವುದು ಸವಾಲಿನ ಕೆಲಸವಾಗಿದೆ ಎಂದು ಅವರು ಹೇಳಿದರು. ಕಮರ್ಷಿಯಲ್ ಸಿಲಿಂಡರ್ ಬಳಕೆ ಲಭ್ಯವಿಲ್ಲದ ಕಾರಣ ಸೌದೆ ಅವಲಂಬಿಸಬೇಕಾಗಿದೆ.

ಇದೇ ವೇಳೆ, ಕೆಲವು ಹೋಟೆಲ್ ಮಾಲಿಕರು ದುಬಾರಿ ದರದಲ್ಲಿ ಕಮರ್ಷಿಯಲ್ ಸಿಲಿಂಡರ್ ಖರೀದಿಸಿ, ಪ್ರತಿಯೊಂದು ತಿಂಡಿ ಪದಾರ್ಥದ ಮೇಲೂ ₹10ರವರೆಗೆ ದರ ಹೆಚ್ಚಿಸಿರುವುದು ಗ್ರಾಹಕರಿಗೆ ನೇರ ಹೊರೆ ಆಗುತ್ತಿದೆ. ಸಿಲಿಂಡರ್ ಪೂರೈಕೆ ಸ್ಥಿರವಾಗುವವರೆಗೆ ಈ ಸಮಸ್ಯೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.