Home Blog Page 491

ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಚಳಿಯಬ್ಬರ; ಇಂದಿನ ಹವಾಮಾನ ಹೀಗಿದೆ!

0

ಬೆಂಗಳೂರು:- ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ತೀವ್ರ ಚಳಿಯೊಂದಿಗೆ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ಶೀತ ವಾತಾವರಣ ಇರಲಿದ್ದು, ಸಾರ್ವಜನಿಕರು ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ. ವರ್ಷಾಂತ್ಯದವರೆಗೂ ರಾಜ್ಯದಲ್ಲಿ ಒಣ ಹವಾಮಾನವೇ ಮುಂದುವರಿಯುವ ಸಾಧ್ಯತೆ ಇದ್ದು, ಹೊಸ ವರ್ಷದ ವೇಳೆಗೆ ಮಳೆಯ ಸೂಚನೆ ಕಾಣಿಸಿಕೊಳ್ಳಬಹುದಾಗಿದೆ.

ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಳಿಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹಿನ್ನೆಲೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ಆಹಾರ ಸೇವಿಸುವುದು ಹಾಗೂ ತಕ್ಕಮಟ್ಟಿನ ಆರೈಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಆರ್‌ಸಿಬಿ ಕಾಲ್ತುಳಿತ ಎಫೆಕ್ಟ್: ಲಾಲ್‌ಬಾಗ್ ಫ್ಲವರ್ ಶೋಗೆ ಬಿಗಿ ಭದ್ರತೆ, ಹೊಸ ರೂಲ್ಸ್ ಜಾರಿ!

0

ಬೆಂಗಳೂರು: ಆರ್‌ಸಿಬಿ ಕಾಲ್ತುಳಿತ ದುರಂತದಿಂದ ಎಚ್ಚೆತ್ತು, ಈ ಬಾರಿ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಪೊಲೀಸ್ ಮತ್ತು ತೋಟಗಾರಿಕೆ ಇಲಾಖೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.

ಗಣರಾಜ್ಯೋತ್ಸವ ಪ್ರಯುಕ್ತ 219ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ ಜನವರಿ 26ರವರೆಗೆ ನಡೆಯಲಿದ್ದು, ಸುಮಾರು 12 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ಸಾಧ್ಯತೆ ಇದೆ. ವೀಕೆಂಡ್ ಹಾಗೂ ರಜಾ ದಿನಗಳಲ್ಲಿ ಜನಸಂದಣಿ ಹೆಚ್ಚುವ ನಿರೀಕ್ಷೆ ಹಿನ್ನೆಲೆ ಎಂಟ್ರಿ–ಎಕ್ಸಿಟ್ ವ್ಯವಸ್ಥೆಗೆ ವಿಶೇಷ ಗಮನ ನೀಡಲಾಗಿದೆ.

ಪ್ರಮುಖ ಆಕರ್ಷಣೆಯಾದ ಗಾಜಿನ ಮನೆ ಸುತ್ತಮುತ್ತ ಈ ಬಾರಿ ‘ನೋ ಮ್ಯಾನ್ ಝೋನ್’ ಘೋಷಿಸಲಾಗಿದ್ದು, ಜನರು ನಿಲ್ಲದೇ ಸಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಒಂದೇ ಕಡೆ ಜನಸಂದಣಿ ಹೆಚ್ಚಾಗಿ ಸಮಸ್ಯೆ ಉಂಟಾಗದಂತೆ ತಡೆಯಲು ಉದ್ದೇಶಿಸಲಾಗಿದೆ. ಲಾಲ್‌ಬಾಗ್ ಆವರಣದಲ್ಲಿ 135ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಜನರನ್ನು ಬೇರೆಡೆಗಳಿಗೆ ಡೈವರ್ಟ್ ಮಾಡುವ ವ್ಯವಸ್ಥೆಯೂ ಮಾಡಲಾಗಿದೆ.

ಈ ಬಾರಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಬದುಕು–ಬರಹ ಆಧಾರಿತ ಪುಷ್ಪವಿನ್ಯಾಸ ಪ್ರಮುಖ ಆಕರ್ಷಣೆಯಾಗಿದ್ದು, 12 ದಿನಗಳ ಕಾಲ ಪ್ರವಾಸಿಗರನ್ನು ಮನಸೂರೆಗೊಳ್ಳಲಿದೆ.

KSRTC ಬಸ್-ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!

0

ಶಿವಮೊಗ್ಗ:- ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಜರುಗಿದೆ.

ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Breaking News; ಪೊಲೀಸ್ ಠಾಣೆ ಸಮೀಪವೇ ರೌಡಿಶೀಟರ್ ಬರ್ಬರ ಹತ್ಯೆ!

0

ಬೆಂಗಳೂರು: ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಮ್ಮನ ಪಾಳ್ಯದಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ರಾತ್ರಿ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ ಶಬ್ಬೀರ್ ಮೇಲೆ ಆಟೋದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಬಂಡೆಪಾಳ್ಯ ಮುಖ್ಯ ರಸ್ತೆಯ ಪಕ್ಕದ ಪೊಲೀಸ್ ಠಾಣೆಗೆ ಸಮೀಪದಲ್ಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಮಂಗಮ್ಮನ ಪಾಳ್ಯ ರಸ್ತೆಯಲ್ಲಿ ಶಬ್ಬೀರ್‌ನನ್ನು ಆಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಮಾಹಿತಿ ಪಡೆದ ಬಂಡೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಎಲ್‌ಪಿಜಿ ಸೋರಿಕೆ ತಡೆಗಟ್ಟಲು ಜಾಗೃತಿ ವಹಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ನಗರ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಹೆಚ್ಚಾಗುತ್ತಿವೆ. ಅದರಲ್ಲೂ ಚಳಿಗಾಲದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಅವಘಡಗಳು ಸಂಭವಿಸುತ್ತಿವೆ. ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು ಎಂದು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.

ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠದ ಆವರಣದಲ್ಲಿ ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆ ಹಾಗೂ ಜಿಲ್ಲೆಯಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅನಿಲ ಸೋರಿಕೆಯಿಂದ ದುರಂತಗಳನ್ನು ಕಡಿಮೆಗೊಳಿಸುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಬಗ್ಗೆ ಏರ್ಪಡಿಸಿದ್ದ ಅಣುಕು ಪ್ರದರ್ಶನ (ಔಜಿಜಿsiಣe ಒoಛಿಞ ಜಡಿiಟಟ → ಆಕ್ಸಿಜನ್ ಆನ್ ಫೈರ್ ಡ್ರಿಲ್) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ 4 ವರ್ಷಗಳಿಗೊಮ್ಮೆ ಅಡುಗೆ ಅನಿಲ ಸಿಲಿಂಡರ್ ಮತ್ತು ಒಲೆಯ ಪೈಪ್ ಬದಲಾಯಿಸಬೇಕು. ಅಗ್ನಿ ಅವಘಡಗಳು ಸಂಭವಿಸಿದಾಗ ಗಾಯಾಳುಗಳಿಗೆ ಯಾವ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದನ್ನು ಸಹ ತಿಳಿಯಪಡಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಡುಗೆ ಅನಿಲ ಸೋರಿಕೆಯಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿಶಾಮಕ ದಳದ ಅಧಿಕಾರಿಗಳು ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪವಾರ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಹುಬ್ಬಳ್ಳಿ ಶಹರ ತಹಸೀಲ್ದಾರ ಮಹೇಶ ಭಗವಂತ ಗಸ್ತೆ, ಹುಬ್ಬಳ್ಳಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಮಚಂದ್ರ ಹೊಸಮನಿ ಹಾಗೂ ಬಾಳು ಮಗಜಿಕೊಂಡಿ, ಸರ್ವಮಂಗಳಾ ಪಾಠಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಶಾಲೆಗಳ ಅಧ್ಯಾಪಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಅಡುಗೆ ಅನಿಲ ಸೋರಿಕೆ ತಡೆಗಟ್ಟುವ ಕ್ರಮಗಳ ಬಗ್ಗೆ ಅಣುಕು ಪ್ರದರ್ಶನದ ಮೂಲಕ ಅಗ್ನಿಶಾಮಕ ದಳದ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಾರೆ. ಅವಘಡಗಳನ್ನು ತಡೆಗಟ್ಟಲು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸಾರ್ವಜನಿಕರು ಅಡುಗೆ ಅನಿಲ ಬಳಕೆ ಮಾಡುವಾಗ ಜಾಗೃತರಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು → ಪ್ರಭು ಹೇಳಿದರು.

ಜನಪರ ಸಿಎಂ ಜನರ ಸಮಸ್ಯೆ ಪರಿಹರಿಸಲಿ: ಸಾಹಿತಿ ಪ್ರೊ. ಕೆ.ಎಸ್. ಭಗವಾನ್

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ನಾನು ಹಳ್ಳಿಯವನು. ರೈತರ ಎಲ್ಲ ಕೆಲಸ ಮಾಡಿದವನು. ರೈತರು ಬೂದಿ, ಹೊಗೆಯಲ್ಲಿ ಹೇಗೆ ಬದುಕಬೇಕು? ಇಡೀ ರಾಜ್ಯದ ಜನರಿಗೆ ವಿಷಯ ತಿಳಿಸುವಂತೆ ಪತ್ರಿಕಾ ಹಾಗೂ ಟಿವಿ ಮಾಧ್ಯಮದವರು ಪೂರ್ಣ ಪ್ರಯತ್ನ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಕೋರಿದರು.

ಅವರು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತ ರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ನಗರಸಭೆ ಎದುರು ಹಮ್ಮಿಕೊಂಡಿರುವ ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ್ ಸುಮಿ, ಎಕ್ಸ್ ಇಂಡಿಯಾ, ತನುಷ್, ದೃವದೇಶ → ಧ್ರುವದೇಶ ಸೇರಿದಂತೆ ಅನೇಕ ಪರಿಸರ ಮಾರಕ ಕಾರ್ಖಾನೆ ವಿರೋಧಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ 75ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈಗಾಗಲೇ ಇರುವ ಕಾರ್ಖಾನೆಗಳ ಸಂಕಷ್ಟವನ್ನೇ ತಡೆದುಕೊಳ್ಳಲು ಸಾಧ್ಯವಿಲ್ಲ. ಇನ್ನಷ್ಟು ಬಂದರೆ ಇಲ್ಲಿನ ಗತಿಯೇನು ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಸಂಪರ್ಕದ ಕೊರತೆ ಇದೆ, ಇಲ್ಲಿ ನಡೆಯುವ ಸಮಸ್ಯೆ ಬೆಂಗಳೂರು ತಲುಪವುದೇ → ತಲುಪುವುದೇ ಇಲ್ಲ. ಆದ್ದರಿಂದ ಹೋರಾಟಗಾರರ ನಿಯೋಗದ ಜೊತೆಗೆ ವಿಧಾನಸೌಧಕ್ಕೆ ಹೋರಾಟವನ್ನು ತಲುಪಿಸೋಣ ಎಂದರು.

ಹಿರಿಯ ವಕೀಲ ರಾಜು ಬಾಕಳೆ ಮಾತನಾಡಿ, ಕಾರ್ಖಾನೆ ಆರಂಭದ ಹಂತದಲ್ಲೇ ನ್ಯಾಯಾಲಯ ಮತ್ತು ರೈತರ ಬಲಪ್ರಯೋಗದಿಂದಲೂ ಸಹ ಅಂದು ಭೂಮಿ ಕಸಿದುಕೊಳ್ಳುವದನ್ನು → ಕಸಿದುಕೊಳ್ಳುವುದನ್ನು ತಡೆಯಲು ಪ್ರಯತ್ನ ಮಾಡಿ, ದಶಕಗಳ ಕಾಲ ನ್ಯಾಯಾಲಯದಲ್ಲಿ ಹೋರಾಡಿ ಸೋತಿದ್ದೇವೆ. ಆದರೆ ಈಗ ಜನಸಂಗ್ರಾಮದ ಮೂಲಕ ಗೆಲವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ ಎಂದರು.

ರೈತ ಮಹಿಳೆ ಗಿರಿಯಮ್ಮ ಕುಣಿಕೇರಿ ಮತ್ತು ಹಾಲವರ್ತಿಯ ಕೃಷಿಕ ಮಾರ್ಕಂಡಯ್ಯ ಹಿರೇಮಠ ಮಾತನಾಡಿ, ಬದುಕಿ ಬಾಳಿದ ಊರು ಬಿಡುವ ಮನಸ್ಸಿಲ್ಲ, ಇದೇ ಕಾರಣಕ್ಕೆ ಇಲ್ಲಿನ ಹಿರಿಯರ ಆರೋಗ್ಯ ಕೆಟ್ಟಿದೆ, ಮಕ್ಕಳು ಸದಾ ಕೆಮ್ಮು ಎನ್ನುತ್ತಿದ್ದರೆ, ಹಲವರಿಗೆ ಕ್ಯಾನ್ಸರ್ ಇದೆ ಎಂದು ಭಾವುಕರಾದರು. ದದೇಗಲ್ ಸದ್ಗುರು ಸಿದ್ಧಾರೂಢ ಮಠದ ಶ್ರೀ ಆತ್ಮಾನಂದ ಸ್ವಾಮೀಜಿಗಳು ಆಶೀರ್ವಚನ ನೀಡಿದರು.

ಧರಣಿಯಲ್ಲಿ ಪ್ರಮುಖರಾದ ಅಲ್ಲಮಪ್ರಭು ಬೆಟ್ಟದೂರು, ಮಲ್ಲಿಕಾರ್ಜುನ ಗೋನಾಳ, ಮಂಜುನಾಥ ಜಿ.ಗೊಂಡಬಾಳ, ಪ್ರಕಾಶಕ ಡಿ.ಎಂ. ಬಡಿಗೇರ, ಎಚ್.ಎಸ್. ಪಾಟೀಲ್, ಎ.ಎಂ. ಮದರಿ, ಡಿ.ಎಚ್. ಪೂಜಾರ, ರಾಜು ಬಾಕಳೆ, ನಜೀರಸಾಬ್ ಮೂಲಿಮನಿ, ಭೀಮಸೇನ ಕಲಕೇರಿ, ಜ್ಯೋತಿ ಎಂ.ಗೊAಡಬಾಳ → ಗೊಂಡಬಾಳ, ಸಾವಿತ್ರಿ ಮುಜುಮದಾರ, ಶಾಯೀದ್ ತಹಸೀಲ್ದಾರ, ದಾನಪ್ಪ ಕವಲೂರು, ಅಲೀಮುದ್ದಿನ್, ಸುರೇಶ ಕುಂಬಾರ, ಶುಕರಾಜ ತಾಳಕೇರಿ, ಮಂಜು ಹಾಲವರ್ತಿ, ಎಚ್.ಬಿ. ಸರೋಜಮ್ಮ, ಎಸ್.ಬಿ. ರಾಜೂರು, ಶಂಭುಲಿAಗಪ್ಪ → ಶಂಭುಲಿಂಗಪ್ಪ ಹರಗೇರಿ, ಎಲ್.ಎಫ್. ಪಾಟೀಲ್, ಮೂಕಪ್ಪ ಮೇಸ್ತಿç → ಮೇಸ್ತಿ ಬಸಾಪುರ, ಶರಣು ಗಡ್ಡಿ, ರವಿ ಕಾಂತನವರ, ಗವಿಸಿದ್ದಪ್ಪ ಹಲಿಗಿ, ಜಿ.ಎಸ್. ಕಡೇಮನಿ, ಮಹಾದೇವಪ್ಪ ಮಾವಿನಮಡು, ಬಸವರಾಜ ನರೇಗಲ್, ಯಮನೂರಪ್ಪ ಹಾಲಳ್ಳಿ ಬಸಾಪುರ, ಮಂಗಳೇಶ ರಾಠೋಡ, ಮಂಜುನಾಥ ಕವಲೂರು, ಸಿ.ಬಿ. ಪಾಟೀಲ್, ಸುಂಕಪ್ಪ ಮೀಸಿ, ಮಲ್ಲಪ್ಪ ಮಾ.ಪಾ, ಗಣೇಶ ವಿಶ್ವಕರ್ಮ, ಸುರೇಶ ಪೂಜಾರ, ಸದಾಶಿವ ಪಾಟೀಲ್ ಮುಂತಾದವರಿದ್ದರು.

ಕೃಷಿ ಬೆಲೆ ಆಯೋಗದ ಸದಸ್ಯ ಡಿ.ಹೆಚ್. ಪೂಜಾರ ಮಾತನಾಡಿ, ಶಾಸಕರು ಮೂರು ತಿಂಗಳಿAದ → ತಿಂಗಳಿನಿಂದ ನಡೆಯುತ್ತಿರುವ ಹೋರಾಟದ ಕಡೆಗೆ ಸೌಜನ್ಯದ ಭೇಟಿ ಸಹ ಮಾಡಿಲ್ಲ. ಕ್ಷೇತ್ರದ ಜನರ ಜೀವನ, ಉಸಿರು, ಬದುಕು ಮತ್ತು ಕೃಷಿ ಮುಖ್ಯ ಎನ್ನಬೇಕೇ ಹೊರತು ಫಲಾಯನವಾದ → ಫಲಾಯನವಾದ ಮಾಡಬಾರದು. ಹೋರಾಟವನ್ನು ಅತೀ ಶೀಘ್ರದಲ್ಲೇ ರಾಜಕ್ಕೆ → ರಾಜ್ಯಕ್ಕೆ ವಿಸ್ತರಿಸಲಾಗುವದು → ವಿಸ್ತರಿಸಲಾಗುವುದು ಎಂದರು.

ಪ್ರಯಾಗರಾಜ್ ಮಾಘ ಮೇಳ ಶಿಬಿರದಲ್ಲಿ ಭಾರಿ ಅಗ್ನಿ ಅವಘಡ; 15 ಡೇರೆ, 20 ಅಂಗಡಿಗಳು ಭಸ್ಮ

0

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಕಿ ಅವಘಡದಲ್ಲಿ ಸುಮಾರು 15 ಡೇರೆಗಳು ಹಾಗೂ 20ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಬೆಂಕಿಯ ಜ್ವಾಲೆ ಸುಮಾರು 3 ಕಿಲೋಮೀಟರ್ ದೂರದಷ್ಟು ವ್ಯಾಪಿಸಿತ್ತು. ಘಟನೆಯಿಂದ ಯಾತ್ರಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡದ ವೇಳೆ ಶಿಬಿರದಲ್ಲಿದ್ದ ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಉಂಟಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯೂ ಸೇರಿದಂತೆ ರಾಜ್ಯಾದ್ಯಂತ ಹಿಂಗಾರು ಹಂಗಾಮಿನಲ್ಲಿ ಕಡಲೆ ಬೆಳೆಯಲಾಗಿದ್ದು, ಈಗಾಗಲೇ ಕಡಲೆ ಕಟಾವು ಮಾಡಲಾಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಗದಗ ಜಿಲ್ಲಾದ್ಯಂತ ಕಡಲೆ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಹಾಗೂ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿ ಕ್ವಿಂಟಾಲ್ ಕಡಲೆಗೆ 10 ಸಾವಿರ ರೂ ಹೊಸ ಬೆಂಬಲ ಬೆಲೆ ನಿಗದಿ ಮಾಡಿ ರೈತರಿಂದ 50 ಕ್ವಿಂಟಾಲ್ ಕಡಲೆ ಕಾಳನ್ನು ಸರ್ಕಾರ ಖರೀದಿಸಬೇಕು. ಕಳೆದ ವರ್ಷ ಕೇಂದ್ರ ಸರ್ಕಾರ ಆದೇಶಿಸಿದ ಹಳೆ ಬೆಲೆಯನ್ನು ರದ್ದುಗೊಳಿಸಿ ಹೊಸ ಬೆಲೆಗೆ ಕಡಲೆ ಖರೀದಿಸಬೇಕು. ಕಡಲೆ ಖರೀದಿಸಿದ ಒಂದು ತಿಂಗಳೊಳಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾವಣೆ ಮಾಡಬೇಕು. ರೈತರು ಮಾರುಕಟ್ಟೆಗೆ ಧಾನ್ಯ ತಂದ ಮೇಲೆ ಖರೀದಿ ಕೇಂದ್ರ ತೆರೆಯುವುದರಲ್ಲಿ ಅರ್ಥವಿಲ್ಲ. ಸರ್ಕಾರ ಇನ್ನೊಂದು ವಾರದೊಳಗೆ ಖರೀದಿ ಪ್ರಕ್ರಿಯೆ ಆರಂಭಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಬಸವರಾಜ ಹೂಗಾರ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಹೆಸರು ಬೆಳೆಗೆ ಬೆಂಬಲ ಪ್ರಯೋಜನವಾಗಲಿಲ್ಲ. ಈಗ ಮೆಕ್ಕೆಜೋಳದ ಬೆಂಬಲ ಬೆಲೆಯಲ್ಲಿಯೂ ಕೂಡ ದಿನಕ್ಕೊಂದು ಹೊಸ ಆದೇಶ ಹೊರಡಿಸಿ ಸರ್ಕಾರದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ ಎಂದರು.

ಸರ್ಕಾರದಿಂದ ಕಡಲೆ ಖರೀದಿ ಕೇಂದ್ರ ತೆರೆಯಲು ವಿಳಂಬವಾದರೆ ರೈತ ಸಂಘದಿಂದ ಉಗ್ರ ಹೋರಾಟ ಮಾಡುವುದಾಗಿ ರೈತ ಸಂಘದ ಹಾವೇರಿ ಅಧ್ಯಕ್ಷ ಯಲ್ಲಪ್ಪ ವಾಲ್ಮೀಕಿ ಎಚ್ಚರಿಸಿದ್ದಾರೆ.

ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ: ಡಿಸಿ ಸಿ.ಎನ್. ಶ್ರೀಧರ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಸಪಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಜರುಗಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸಪಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಲಭ್ಯವಿರುವ ಎಲ್ಲ ಸೌಲಭ್ಯಗಳು ಯಾವುದೇ ವಿಳಂಬವಿಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಸಂಪೂರ್ಣ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಪಾಯಿ ಕರ್ಮಚಾರಿಗಳಿಗೆ ನಿಯಮಾನುಸಾರ ದೊರಕಬೇಕಾದ ಇಎಸ್‌ಐ, ಪಿಎಫ್ ಸೇರಿದಂತೆ ಎಲ್ಲಾ ಭತ್ಯೆಗಳನ್ನು ಸಕಾಲಕ್ಕೆ ಪಾವತಿಸಬೇಕು, ಅವರ ಆರೋಗ್ಯ ರಕ್ಷಣೆಗೆ ವಿಶೇಷ ಒತ್ತು ನೀಡಬೇಕು ಎಂದರು.

ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಿ, ಗುಣಮಟ್ಟದ ಸಂರಕ್ಷಣಾ ಸಾಧನಗಳನ್ನು ವಿತರಿಸಿ, ಆರೋಗ್ಯ ಹಾಗೂ ಸುರಕ್ಷತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಪ್ರತಿಯೊಂದು ತಾಲೂಕು ಮಟ್ಟದಲ್ಲಿ ಸಪಾಯಿ ಕರ್ಮಚಾರಿಗಳ ಸ್ಥಿತಿಗತಿ ಕುರಿತು ತಾಲೂಕುವಾರು ಪ್ರಗತಿ ಪರಿಶೀಲನೆ ನಡೆಸಲಾಗುವುದು. ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ಗೆ ಅವಕಾಶ ಕೊಡಬಾರದು ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ರಮೇಶ್ ಕೊಳೂರ, ಯುವರಾಜ ಬಳ್ಳಾರಿ, ರಮೇಶ್ ಮ್ಯಾಗೇರಿ, ಹಿರಿಯಕ್ಕ ದೊಡ್ಡಮನಿ, ಲಕ್ಷ್ಮವ್ವ ಭಂಗಿ ಸೇರಿದಂತೆ ಇತರರು ಪಾಲ್ಗೊಂಡು, ಸಪಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರಕುವಂತೆ ಮಾಡಬೇಕು ಹಾಗೂ ತಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಬೇಕೆಂದು ಸಭೆಯ ಗಮನ ಸೆಳೆದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಸಮಾಜ ಕಲ್ಯಾಣ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಸಪಾಯಿ ಕರ್ಮಚಾರಿಗಳಿಗೆ ನೀಡಿರುವ ಸೌಲಭ್ಯಗಳು ಹಾಗೂ ಮುಂದಿನ ದಿನಗಳಲ್ಲಿ ನೀಡಬೇಕಾದ ಸವಲತ್ತುಗಳ ಕುರಿತು ವಿವರವಾದ ಪ್ರಗತಿ ವರದಿಯನ್ನು ಸಭೆಯಲ್ಲಿ ಮಂಡಿಸಿದರು.

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಪೂರ್ವಸಿದ್ಧತಾ ಸಭೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜನವರಿ 21ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದಲ್ಲಿಯೂ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಬೇಕು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ ತುಂಬರಮಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

error: Content is protected !!