Home Blog Page 51

ಗಂಗಾವತಿ ಭೀಮಪ್ಪ ಪಿಯು ಕಾಲೇಜಿನಲ್ಲಿ 65.15% ಫಲಿತಾಂಶ: ಕಳೆದ ವರ್ಷಕ್ಕಿಂತ 33% ಏರಿಕೆ

0

ಹಗರಿಬೊಮ್ಮನಹಳ್ಳಿ: ಪಟ್ಟಣದ ಶ್ರೀ ಗಂಗಾವತಿ ಭೀಮಪ್ಪನವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 65.15ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಪ್ರಾಚಾರ್ಯ ಎಂ.ಕೆ. ದುರುಗಪ್ಪ ತಿಳಿಸಿದ್ದಾರೆ.

2026ನೇ ಸಾಲಿನ ಫಲಿತಾಂಶದ ಪ್ರಕಾರ ಒಟ್ಟು 746 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 735 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇವರಲ್ಲಿ 486 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು ಶೇಕಡಾ 66.12ರಷ್ಟು ಫಲಿತಾಂಶ ದೊರೆತಿದ್ದು, ಉನ್ನತ ಶ್ರೇಣಿಯಲ್ಲಿ 50, ಪ್ರಥಮ ಶ್ರೇಣಿಯಲ್ಲಿ 285, ದ್ವಿತೀಯ ಶ್ರೇಣಿಯಲ್ಲಿ 123 ಹಾಗೂ ಉತ್ತೀರ್ಣ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕಲಾ ವಿಭಾಗ

ಸೊನ್ನದ ನಾಗರಾಜ – 575, ಎಚ್. ರೇಣುಕಾ – 569, ತಿಪ್ಪಮ್ಮ – 566, ಟಿ. ಸೌಂದರ್ಯ – 566

ವಾಣಿಜ್ಯ ವಿಭಾಗ

ಎಂ.ಎಸ್. ನಿತಿನ್ – 570, ಎಂ. ಸಂಜನಾ – 568, ಪಿ. ಸಿಂಧು – 567

ವಿಜ್ಞಾನ ವಿಭಾಗ

ಎಂ.ಎಂ. ವೀಣಾ – 557, ಪಿ.ಎಂ. ಅಲಿಷ ಬಾನು – 556, ಬಿ. ಲಕ್ಷ್ಮಿ – 549

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 33% ಹೆಚ್ಚು ಫಲಿತಾಂಶ ಕಂಡುಬಂದಿದ್ದು, ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.

ವಿದ್ಯಾನಿಕೇತನ PU ಕಾಲೇಜಿಗೆ 98.28% ಫಲಿತಾಂಶ: ಭಾರ್ಗವಿ ಬೇವಿನಮರ ಜಿಲ್ಲೆಗೆ ಪ್ರಥಮ – ಡಿಸ್ಟಿಂಕ್ಷನ್ʼಗಳಲ್ಲಿ ಪಾಸಾದ ವಿದ್ಯಾರ್ಥಿಗಳು

0

ಹಗರಿಬೊಮ್ಮನಹಳ್ಳಿ: ಪಟ್ಟಣದ ಶ್ರೀ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.28ರಷ್ಟು ಫಲಿತಾಂಶ ದಾಖಲಿಸಿ ವಿಜಯನಗರ ಜಿಲ್ಲೆಯಲ್ಲಿ ಭರ್ಜರಿ ಸಾಧನೆ ಮಾಡಿದೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭಾರ್ಗವಿ ಬೇವಿನಮರ 600 ಅಂಕಗಳಿಗೆ 592 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರೂಪಶ್ರೀ ಎಸ್ 591 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಹರ್ಷಲಾ ಪ್ರೀತಿ 588 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಇನ್ನೂ 7 ವಿದ್ಯಾರ್ಥಿಗಳು 580ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ಒಟ್ಟು 582 ವಿದ್ಯಾರ್ಥಿಗಳಲ್ಲಿ 283 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 266 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟಾರೆ ಅತ್ಯುತ್ತಮ ಫಲಿತಾಂಶ ಸಾಧಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ಸರಾಸರಿ ಫಲಿತಾಂಶ ಸುಮಾರು 86% ಇದ್ದ ಸಂದರ್ಭದಲ್ಲಿ ವಿದ್ಯಾನಿಕೇತನ ಕಾಲೇಜಿನ ಈ ಸಾಧನೆ ವಿಶೇಷ ಗಮನ ಸೆಳೆದಿದೆ. ಹೆಚ್ಚಿನ ವಿದ್ಯಾರ್ಥಿಗಳು ಉನ್ನತ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ವಿದ್ಯಾನಿಕೇತನ ಕಾಲೇಜಿನ ಈ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ಹೆಮ್ಮೆಯ ವಿಷಯವಾಗಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ. ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು, ಪೋಷಕರು ಹಾಗೂ ಸಾರ್ವಜನಿಕರು ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದಾರೆ.

ಈ ಸಾಧನೆ ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಸಮರ್ಪಿತ ಬೋಧನೆ ಹಾಗೂ ಪೋಷಕರ ಸಹಕಾರದ ಫಲವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಚೇರ್ಮನ್ ಶರತ್ ಚಂದ್ರ ಹೇಳಿದ್ದಾರೆ.

ಕಾಲೇಜಿನ ಪ್ರಿನ್ಸಿಪಾಲರಾದ ಶೇಖರ್, ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ಭವಿಷ್ಯದಲ್ಲೂ ಇದೇ ರೀತಿಯ ಶ್ರೇಷ್ಠ ಫಲಿತಾಂಶ ಮುಂದುವರಿಯಲಿ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ವೃಂದಾವನದಲ್ಲಿ ಬೋಟ್ ದುರಂತ: 10 ಮಂದಿ ಸಾವು, ಹಲವರಿಗೆ ಗಾಯ

0

ಲಕ್ನೋ: ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಐವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಪಂಜಾಬ್‌ನಿಂದ ಬಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಕೇಸಿ ಘಾಟ್ ಬಳಿ ಆಳವಾದ ನೀರಿಗೆ ಹೋಗಿ ತೇಲುತ್ತಿದ್ದ ಪಾಂಟೂನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿದ್ದ ಪಾಂಟೂನ್ ಸೇತುವೆಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಆದರೆ ಕೆಲ ಪಾಂಟೂನ್ ಡ್ರಮ್‌ಗಳು ನದಿಯಲ್ಲೇ ಉಳಿದಿದ್ದು, ಅವುಗಳಲ್ಲಿ ಒಂದಕ್ಕೆ ದೋಣಿ ಡಿಕ್ಕಿ ಹೊಡೆದಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಈ ಘಟನೆ ಕುರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ, ಅಗತ್ಯ ಸಹಾಯ ನೀಡುವುದಾಗಿ ತಿಳಿಸಿದ್ದಾರೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಾಗಿ ಎರಡೂ ರಾಜ್ಯಗಳ ಸರ್ಕಾರಗಳು ನಿರಂತರ ಸಂಪರ್ಕದಲ್ಲಿವೆ.

ಮೃತರಲ್ಲಿ ಬಹುತೇಕರು ಲುಧಿಯಾನಾದ ಜಗ್ರಾಂವ್ ಮತ್ತು ದುಗ್ರಿ ಪ್ರದೇಶದವರು ಎಂದು ತಿಳಿದುಬಂದಿದೆ. ಜಗ್ರಾಂವ್‌ನ ಶ್ರೀ ಬಂಕೆ ಬಿಹಾರಿ ಕ್ಲಬ್‌ನಿಂದ ಸುಮಾರು 120 ಯಾತ್ರಿಕರು ಏಪ್ರಿಲ್ 9ರಂದು ಎರಡು ಬಸ್‌ಗಳಲ್ಲಿ ವೃಂದಾವನಕ್ಕೆ ನಾಲ್ಕು ದಿನಗಳ ಪ್ರವಾಸಕ್ಕೆ ಬಂದಿದ್ದರು.

ಮೃತರಾದವರಲ್ಲಿ ಕವಿತಾ ರಾಣಿ (49), ಚರಂಜಿತ್ (40), ಸಪ್ನಾ ಹನ್ಸ್ (55), ರಿಕೇಶ್ ಗುಲಾಟಿ, ಮಧುರ್ ಬೆಹ್ಲ್, ಆಶಾ ರಾಣಿ, ಪಿಂಕಿ ಬೆಹ್ಲ್, ಅಂಜು ಗುಲಾಟಿ, ಇಶಾನ್ ಕಟಾರಿಯಾ ಹಾಗೂ ಮಿನು ಬನ್ಸಾಲ್ ಸೇರಿದ್ದಾರೆ.

ಮಾಣಿಕ್ ಟಂಡನ್, ಪಂಕಜ್ ಮಲ್ಹೋತ್ರಾ, ರಿಷಬ್ ಶರ್ಮಾ, ಯಶ್ ಭಲ್ಲಾ ಮತ್ತು ಮೋನಿಕಾ ಇನ್ನೂ ನಾಪತ್ತೆಯಾಗಿದ್ದಾರೆ.

ಗಾಯಗೊಂಡ 22 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಪಿಂಕಿ, ಮಂಜು, ಸವಿತಾ, ತನೀಶ್ ಜೈನ್, ರೇಖಾ, ರಾಜಿಂದರ್ ಕೌರ್, ಸರೋಜ್ ಮತ್ತು ಡಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಘಟನಾ ಸ್ಥಳದಲ್ಲಿ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ, ನಾಗರಿಕ ರಕ್ಷಣಾ ತಂಡಗಳು, ಸೇನೆ ಹಾಗೂ ಸ್ಥಳೀಯ ಡೈವರ್‌ಗಳು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ!

ಧಾರವಾಡ: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ನನ್ನು ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ತಿಳಿದ ತಕ್ಷಣ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃತ್ಯವನ್ನು ಆರು ಮಂದಿ ಸೇರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮೊಹಮ್ಮದ್ ಶಾ, ಸದ್ದಾಂ, ಗೌಸ್ ಮತ್ತು ಪರ್ವೇಜ್ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿರುವ ಆರೋಪಿಗಳೆಂದು ತಿಳಿದುಬಂದಿದೆ.

ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ಮುಂದುವರಿದಿದೆ.

ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ದೈವಕ್ಕೆ ಅಪಮಾನ: ರಣವೀರ್ ಸಿಂಗ್‌ಗೆ ಮತ್ತೆ ಅಫಿಡವಿಟ್ ಸಲ್ಲಿಸಲು ಹೈಕೋರ್ಟ್ ಸೂಚನೆ!

ಬೆಂಗಳೂರು: ದೈವಕ್ಕೆ ಅಪಮಾನ ಮಾಡಿದ ಆರೋಪ ಸಂಬಂಧ ನಟ ರಣವೀರ್ ಸಿಂಗ್ ಅವರಿಗೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಕಾಂತಾರ ಚಿತ್ರದ ದೈವ ಸಂಪ್ರದಾಯವನ್ನು ಅಪಹಾಸ್ಯ ಮಾಡಿದ ಆರೋಪದಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಪ್ರಕರಣದಲ್ಲಿ, ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಪಡಿಸುವಂತೆ ರಣವೀರ್ ಸಿಂಗ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ನಡೆಯಿತು.

ವಿಚಾರಣೆ ವೇಳೆ ದೂರುದಾರರ ಪರ ವಕೀಲರು, ರಣವೀರ್ ಸಿಂಗ್ ಮನಸಾರೆ ಕ್ಷಮೆ ಕೋರಿಲ್ಲ ಎಂದು ವಾದಿಸಿದರು. ಇದಕ್ಕೆ ಪ್ರತಿಯಾಗಿ ರಣವೀರ್ ಪರ ವಕೀಲರು, ಈಗಾಗಲೇ ಬೇಷರತ್ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಅಗತ್ಯವಿದ್ದರೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ಸಿದ್ಧವಿದ್ದೇವೆ ಎಂದು ಹೇಳಿದರು.

ಇದನ್ನು ಪರಿಗಣಿಸಿದ ನ್ಯಾಯಾಲಯ, ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿದೆ.

ಬೆಂಗಳೂರಿನಲ್ಲಿ ವರುಣನ ಅಬ್ಬರ – ಹಲವು ಕಡೆ ಭಾರೀ ಮಳೆ, ರಸ್ತೆಗಳು ಜಲಾವೃತ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಗುರುವಾರ ವರುಣನ ಅಬ್ಬರ ಕಂಡುಬಂದಿದೆ.

ಮೆಜೆಸ್ಟಿಕ್, ರಾಜಾಜಿನಗರ, ವಸಂತನಗರ, ಕಲಾಸಿಪಾಳ್ಯ, ಟೌನ್‌ಹಾಲ್, ವಿಜಯನಗರ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆಲ ಹೊತ್ತಿನಲ್ಲೇ ರಸ್ತೆಗಳು ಜಲಾವೃತವಾಗಿವೆ.

ಏಕಾಏಕಿ ಸುರಿದ ಮಳೆಯಿಂದ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರ ನಿಧಾನಗೊಂಡಿದೆ. ಸಂಜೆ ವೇಳೆಗೆ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಹಲವೆಡೆ ವಾಹನ ಸವಾರರು ಪರದಾಟ ಅನುಭವಿಸಿದರು.

ಇದೇ ವೇಳೆ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹೆಚ್ಚಾಗುವ ಸಾಧ್ಯತೆ ಇದ್ದು, ಏಪ್ರಿಲ್ 10ರಿಂದ 12ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರದ ಕೆಲ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರದಲ್ಲಿ ಹಗಲಿನ ವೇಳೆ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ಮೋಡಕವಿದ ಆಕಾಶ ಹಾಗೂ ಮಳೆಯ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಾಳಿಯ ವೇಗ ಗಂಟೆಗೆ 6 ರಿಂದ 13 ಕಿಲೋ ಮೀಟರ್ ಇರುವ ಸಾಧ್ಯತೆಯೂ ಇದೆ.

ಮಥುರಾ ಯಮುನಾ ನದಿಯಲ್ಲಿ ಬೋಟ್ ಮಗುಚಿ ದುರಂತ – 10 ಮಂದಿ ಸಾವು

0

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ದುರ್ಘಟನೆ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವರು ನಾಪತ್ತೆಯಾಗಿದ್ದಾರೆ.

ಮಾಹಿತಿಯ ಪ್ರಕಾರ, ಪಂಜಾಬ್‌ನ ಲುಧಿಯಾನದಿಂದ ಬಂದ ಸುಮಾರು 25 ಭಕ್ತರು ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಲು ಬೋಟ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಯಮುನಾ ನದಿಯಲ್ಲಿ ಬೋಟ್ ಮಗುಚಿ ಈ ದುರಂತ ಸಂಭವಿಸಿದೆ.

ಘಟನೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಇದು ಅತ್ಯಂತ ದುಃಖದ ಮತ್ತು ಹೃದಯವಿದ್ರಾವಕ ಘಟನೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಅಧಿಕಾರಿಗಳಿಗೆ ತಕ್ಷಣ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ನಡೆಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ತೆಲಂಗಾಣ ಸರ್ಕಾರ: 1 ಕೋಟಿ ಗಿಳಿ ಹಸಿರು ಸೀರೆ ಆರ್ಡರ್ ಮಾಡಿದ ಸಿಎಂ

0

ಹೈದರಾಬಾದ್: ತೆಲಂಗಾಣ ಸರ್ಕಾರವು ಈ ವರ್ಷವೂ ಮಹಿಳೆಯರಿಗೆ ಉಚಿತ ಸೀರೆ ವಿತರಣಾ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಿದೆ.

ಈ ಬಾರಿ ಸೀರೆಗಳಿಗೆ ಹೊಸ ಬಣ್ಣ ಮತ್ತು ವಿನ್ಯಾಸವನ್ನು ಪರಿಚಯಿಸಲಾಗಿದ್ದು, ನೀಲಿ ಸೀರೆಗಳ ಬದಲು ಗಿಳಿ ಹಸಿರು ಬಣ್ಣಕ್ಕೆ ಕೆಂಪು ಜರಿ ಇರುವ ಸೀರೆಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಈ ಯೋಜನೆಗಾಗಿ ಸುಮಾರು 450 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಸೀರೆಗಳ ಉತ್ಪಾದನೆಗೆ ಟೆಸ್ಕೊಗೆ ಆದೇಶ ನೀಡಲಾಗಿದೆ. ಕಳೆದ ವರ್ಷವೂ ಇದೇ ಯೋಜನೆಯಡಿ ಸುಮಾರು 86 ಲಕ್ಷ ಸೀರೆಗಳನ್ನು ವಿತರಿಸಲಾಗಿತ್ತು.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ನಿರ್ದೇಶನದಂತೆ ಪ್ರತಿ ವರ್ಷ ವಿಭಿನ್ನ ಬಣ್ಣ ಮತ್ತು ವಿನ್ಯಾಸದ ಸೀರೆಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಈ ವರ್ಷದ ಸೀರೆ ವಿತರಣೆಯನ್ನು ಅಕ್ಟೋಬರ್ ವೇಳೆಗೆ ಉತ್ಪಾದನೆ ಪೂರ್ಣಗೊಳಿಸಿ, ನವೆಂಬರ್ 19ರಂದು ನಡೆಯುವ ಇಂದಿರಾ ಗಾಂಧಿ ಜಯಂತಿಯಂದು ವಿತರಿಸಲು ಸರ್ಕಾರ ಯೋಜಿಸಿದೆ.

ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಿಗೆ ಏಕಕಾಲದಲ್ಲಿ ಸೀರೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪೋಷಕರ ಒತ್ತಡಕ್ಕೆ ಮಣಿದ ಸರ್ಕಾರ: ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ!

ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದ ವಯೋಮಿತಿಯಲ್ಲಿ ರಾಜ್ಯ ಸರ್ಕಾರ ಮಹತ್ವದ ಸಡಿಲಿಕೆ ನೀಡಿದೆ. 2026–27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಮಕ್ಕಳ ಪ್ರವೇಶಕ್ಕೆ ಇರುವ 6 ವರ್ಷದ ಕಡ್ಡಾಯ ವಯೋಮಿತಿಯಲ್ಲಿ 60 ದಿನಗಳ ವಿನಾಯಿತಿ ಘೋಷಿಸಲಾಗಿದೆ.

ಇದರಿಂದ ಜೂನ್ 1 ರಿಂದ ಜುಲೈ 30ರೊಳಗೆ 6 ವರ್ಷ ತುಂಬುವ ಮಕ್ಕಳಿಗೂ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಸಿಗಲಿದೆ. ಅಂದರೆ, ಸುಮಾರು 5 ವರ್ಷ 10 ತಿಂಗಳ ವಯಸ್ಸಿನ ಮಕ್ಕಳನ್ನೂ ಶಾಲೆಗೆ ದಾಖಲಿಸಿಕೊಳ್ಳಬಹುದು.

ಪೋಷಕರಿಂದ ಬಂದಿದ್ದ ಮನವಿಗಳನ್ನು ಪರಿಗಣಿಸಿ, ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ಕಲಂ 20ರ ಅಡಿಯಲ್ಲಿ ಈ ವಿಶೇಷ ಆದೇಶ ಹೊರಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ್ದ ಭರವಸೆಯಂತೆ ಈ ನಿರ್ಧಾರ ಜಾರಿಗೆ ಬಂದಿದೆ.

ಈ ಮೊದಲು 6 ವರ್ಷ ಕಡ್ಡಾಯ ವಯೋಮಿತಿ ನಿಯಮಕ್ಕೆ ಪೋಷಕರಿಂದ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳೂ ನಡೆದಿದ್ದವು. ಇದೀಗ ಸರ್ಕಾರದ ಈ ತೀರ್ಮಾನದಿಂದ ಸಾವಿರಾರು ಮಕ್ಕಳಿಗೆ ಶಾಲಾ ಪ್ರವೇಶದ ಅವಕಾಶ ಸಿಗಲಿದೆ.

ಮದುವೆ ತಡ ಆಗ್ತಿದ್ಯಾ!? ಶನಿ, ಮಂಗಳ ದೋಷ ಕಾರಣವಾ!? ಜ್ಯೋತಿಷ್ಯ ಹೇಳುವುದೇನು?

0

ಅನೇಕರು ಜೀವನದಲ್ಲಿ ಉತ್ತಮ ಉದ್ಯೋಗ, ಗೌರವಾನ್ವಿತ ಕುಟುಂಬ ಹಾಗೂ ಸುಸಂಸ್ಕೃತ ಬದುಕು ಹೊಂದಿದ್ದರೂ ಮದುವೆ ವಿಳಂಬವಾಗುತ್ತಿರುವುದನ್ನು ಕಾಣಬಹುದು.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂತಹ ಸ್ಥಿತಿಗೆ ಜಾತಕದ ಗ್ರಹಸ್ಥಿತಿ ಮತ್ತು ದೋಷಗಳು ಪ್ರಮುಖ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಜಾತಕದಲ್ಲಿ ಏಳನೇ ಮನೆ (ವಿವಾಹ ಸ್ಥಾನ) ಅತ್ಯಂತ ಪ್ರಮುಖವಾಗಿದೆ. ಈ ಮನೆಯ ಅಧಿಪತಿ ದುರ್ಬಲವಾಗಿದ್ದರೆ ಅಥವಾ 6, 8, 12ನೇ ಮನೆಗಳಲ್ಲಿ ಸ್ಥಿತಿಯಲ್ಲಿದ್ದರೆ ಮದುವೆ ವಿಳಂಬವಾಗುವ ಸಾಧ್ಯತೆ ಹೆಚ್ಚುತ್ತದೆ. ಜೊತೆಗೆ ಪಾಪ ಗ್ರಹಗಳ ದೃಷ್ಟಿಯೂ ಸಂಬಂಧಗಳಲ್ಲಿ ಅಡೆತಡೆಗಳನ್ನು ಉಂಟುಮಾಡಬಹುದು ಎಂದು ಜ್ಯೋತಿಷ್ಯರು ಹೇಳುತ್ತಾರೆ.

ಶನಿಯ ಪ್ರಭಾವದಿಂದ ಮದುವೆ ತಡವಾಗಬಹುದು ಎಂದು ನಂಬಿಕೆ ಇದೆ. ಆದರೆ ತಡವಾದ ಮದುವೆ ಹೆಚ್ಚು ಸ್ಥಿರವಾಗಿರುತ್ತದೆ ಎಂಬ ಅಭಿಪ್ರಾಯವೂ ಇದೆ. ಮತ್ತೊಂದೆಡೆ, ಮಂಗಳ ದೋಷ (ಕುಜ ದೋಷ) ಇದ್ದರೆ ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಸಮಸ್ಯೆಗಳು ಎದುರಾಗಬಹುದು ಎಂದು ಹೇಳಲಾಗುತ್ತದೆ.

ಅದೇ ರೀತಿ, ರಾಹು ಮತ್ತು ಕೇತುಗಳ ಪ್ರಭಾವದಿಂದ ಸಂಬಂಧಗಳು ಅಂತಿಮ ಹಂತದಲ್ಲಿ ಮುರಿದು ಬೀಳುವ ಸಾಧ್ಯತೆ ಇದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಮದುವೆ ಪ್ರಕ್ರಿಯೆಯಲ್ಲಿ ಗೊಂದಲ ಮತ್ತು ವಿಳಂಬ ಉಂಟಾಗಬಹುದು.

ವಿವಾಹ ಜೀವನ ಸುಗಮವಾಗಲು ಸ್ತ್ರೀಯರ ಜಾತಕದಲ್ಲಿ ಗುರು ಮತ್ತು ಪುರುಷರ ಜಾತಕದಲ್ಲಿ ಶುಕ್ರ ಗ್ರಹಗಳು ಬಲವಾಗಿರಬೇಕು ಎಂದು ಜ್ಯೋತಿಷ್ಯರು ಅಭಿಪ್ರಾಯಪಡುತ್ತಾರೆ. ಈ ಗ್ರಹಗಳು ದುರ್ಬಲವಾಗಿದ್ದರೆ ವಿವಾಹ ಪ್ರಸ್ತಾಪಗಳು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

error: Content is protected !!