Home Blog Page 55

ಜಲಪ್ರಳಯಕ್ಕೆ ತತ್ತರಿಸಿದ ನೇಪಾಳ: ಭೀಕರ ಪ್ರವಾಹದಲ್ಲಿ ಸಾವಿನ ಸಂಖ್ಯೆ 469ಕ್ಕೆ ಏರಿಕೆ, 1,500ಕ್ಕೂ ಅಧಿಕ ನಾಪತ್ತೆ!

0

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಭೂಕುಸಿತದಲ್ಲಿ ಬಲಿಯಾದವರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಈವರೆಗೂ 469 ಜನರು ಸಾವನ್ನಪ್ಪಿದ್ದು, 1,500ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ನೇಪಾಳ ಪೊಲೀಸರ ಮಾಹಿತಿ ಪ್ರಕಾರ, ಪ್ರವಾಹದಲ್ಲಿ ಕೊಚ್ಚಿಹೋದ 1,500ಕ್ಕೂ ಅಧಿಕ ಜನರು ಇನ್ನೂ ಪತ್ತೆಯಾಗಿಲ್ಲ. ನಾಪತ್ತೆಯಾದವರಲ್ಲಿ 30ಕ್ಕೂ ಹೆಚ್ಚು ದೇಶಗಳ ವಿದೇಶಿ ಪ್ರಜೆಗಳಿದ್ದು, ಅದರಲ್ಲಿ 288 ಮಂದಿ ಭಾರತೀಯರಾಗಿದ್ದಾರೆ. ಈ ಪೈಕಿ ಪವರ್ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 73 ಮಂದಿ ಭಾರತೀಯರೂ ಕಣ್ಮರೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ನವದೆಹಲಿ ಮತ್ತು ಕಠ್ಮಂಡು ಪರಸ್ಪರ ಸಮನ್ವಯದೊಂದಿಗೆ ನಾಪತ್ತೆಯಾದವರ ಪತ್ತೆ ಕಾರ್ಯ ಹಾಗೂ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನಿರತವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನೇಪಾಳದಲ್ಲಿ ಪ್ರವಾಹದಿಂದಾಗಿ 469 ಮಂದಿ ಸಾವನ್ನಪ್ಪಿದ್ದರೆ, ಟಿಬೆಟ್‌ನಲ್ಲಿ ಮೂವರು ಸಾವನ್ನಪ್ಪಿರುವುದಾಗಿ ಚೀನಾದ ಅಧಿಕೃತ ಮಾಧ್ಯಮಗಳು ದೃಢಪಡಿಸಿವೆ. ಜೊತೆಗೆ, ವಿಪತ್ತು ಪೀಡಿತ ಪ್ರದೇಶದಿಂದ 499 ಸ್ಥಳೀಯ ನಿವಾಸಿಗಳು ಹಾಗೂ 555 ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಗೃಹಲಕ್ಷ್ಮಿ ಫಲಾನುಭವಿಗಳ ಮರುನೋಂದಣಿ: ಬಯೋಮೆಟ್ರಿಕ್ ದೃಢೀಕರಣಕ್ಕೆ ಹೊಸ ಆ್ಯಪ್ ಸಿದ್ಧ

0

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ನವೀಕರಣಕ್ಕಾಗಿ ಬಹುವಿಧದ ಮೊಬೈಲ್ ಆ್ಯಪ್/ವೆಬ್ ಆ್ಯಪ್‌ಗಳು ಸಿದ್ಧಗೊಳ್ಳುತ್ತಿದ್ದು, ಶೀಘ್ರದಲ್ಲೇ ಗೃಹಲಕ್ಷ್ಮಿ ಫಲಾನುಭವಿಗಳ ನವೀಕರಣ ಪ್ರಕ್ರಿಯೆಗಳು ನಡೆಯಲಿವೆ.

ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ, ರಾಜ್ಯದ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಆರ್ಥಿಕ ನೆರವು ನೀಡುವ ಯೋಜನೆಯಾಗಿದೆ. ಆದರೆ ಈ ಯೋಜನೆಯಡಿ ಅರ್ಹರಲ್ಲದವರೂ ಹಣ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ, ಇಂತಹ ಸದಸ್ಯರನ್ನು ರದ್ದುಪಡಿಸುವ ಉದ್ದೇಶದಿಂದ ಮರುನವೀಕರಣಕ್ಕೆ ಸರ್ಕಾರ ಮುಂದಾಗಿದೆ. ನವೀಕರಣದ ವೇಳೆ ಫಲಾನುಭವಿಗಳ ಕೆಲವು ವೈಯಕ್ತಿಕ ವಿವರಗಳನ್ನೂ ಸಂಗ್ರಹಿಸಲು ನಿರ್ಧರಿಸಲಾಗಿದೆ.

ರಾಜ್ಯಾದ್ಯಂತ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಮರುಪರಿಶೀಲನೆ ಹಂತದಲ್ಲಿ ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಮುಖಚಹರೆ ದೃಢೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದೂ, ಇದೇ ಉದ್ದೇಶಕ್ಕಾಗಿ ಮೊಬೈಲ್ ಆ್ಯಪ್ ಮತ್ತು ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ ಎಂದೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸರ್ಕಾರದ ನಿಯೋಜಿತ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ನವೀಕರಣ ಕಾರ್ಯ ಕೈಗೊಳ್ಳಲಿದ್ದು, ಇದರಿಂದ ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ದಟ್ಟಣೆ ತಪ್ಪಿಸಬಹುದು. ಫಲಾನುಭವಿಗಳು ಸರ್ಕಾರದ ಅಧಿಕೃತ ಕೇಂದ್ರಗಳಲ್ಲೂ ದಾಖಲೆ ಸಲ್ಲಿಸಿ ನೋಂದಣಿ ಮಾಡಿಸಬಹುದು.

ಯೋಜನೆಯಡಿ ಒಟ್ಟು 1.24 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಅರ್ಹ ಫಲಾನುಭವಿಗಳ ಖಾತೆಗೆ 32 ಕಂತುಗಳಲ್ಲಿ ತಲಾ 2,000 ರೂ.ನಂತೆ ಒಟ್ಟು 76,951 ಕೋಟಿ ರೂ. ಜಮೆ ಮಾಡಲಾಗಿದೆ. ನೋಂದಾಯಿತರ ಪೈಕಿ 3.13 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದು, ಇದರಲ್ಲಿ 1.10 ಲಕ್ಷ ಮಂದಿಯ ಖಾತೆಗೆ 117.31 ಕೋಟಿ ರೂ. ಜಮೆಯಾಗಿದ್ದು, ಇದನ್ನು ಹಿಂಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸದಾಗಿ ಅರ್ಜಿ ತಯಾರಿಸಿದ್ದು, ಸರ್ಕಾರ ಮತ್ತು ಹಣಕಾಸು ಇಲಾಖೆಗೆ ಸಲ್ಲಿಸಿದೆ. ಮನೆ ಯಜಮಾನಿಯ ವಿವರ, ಮತದಾರರ ಗುರುತಿನ ವಿವರ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಈ ಹಿಂದೆ ಮನೆಯಲ್ಲಿ ಎಷ್ಟು ಸದಸ್ಯರಿಗೆ ಹಣ ಬರುತ್ತಿತ್ತು, ಜಾತಿಯ ವಿವರ, ಪತಿಯ ಹೆಸರು-ಆಧಾರ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳನ್ನು ಒಳಗೊಂಡ ಹೊಸ ಅರ್ಜಿ ನಮೂನೆ ತಯಾರಾಗುತ್ತಿದೆ.

ಈಗಾಗಲೇ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಿಂದಾಗಿ ನಕಲಿ ಹಾಗೂ ನಿಧನರಾದವರು ಸೇರಿದಂತೆ ಲಕ್ಷಾಂತರ ಹೆಸರುಗಳನ್ನು ಕೈಬಿಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮರುನೋಂದಣಿಯಿಂದಲೂ ಸಾಕಷ್ಟು ಮಂದಿ ಅನರ್ಹರು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸೆಪ್ಟೆಂಬರ್ ನಂತರ ಈ ನವೀಕರಣ ಪ್ರಕ್ರಿಯೆ ನಡೆಯಲಿದೆ.

ಗೃಹಲಕ್ಷ್ಮಿ ಫಲಾನುಭವಿಗಳ ಮರುನೋಂದಣಿ: ಬಯೋಮೆಟ್ರಿಕ್ ದೃಢೀಕರಣಕ್ಕೆ ಹೊಸ ಆ್ಯಪ್ ಸಿದ್ಧ

0

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ನವೀಕರಣಕ್ಕಾಗಿ ಬಹುವಿಧದ ಮೊಬೈಲ್ ಆ್ಯಪ್/ವೆಬ್ ಆ್ಯಪ್‌ಗಳು ಸಿದ್ಧಗೊಳ್ಳುತ್ತಿದ್ದು, ಶೀಘ್ರದಲ್ಲೇ ಗೃಹಲಕ್ಷ್ಮಿ ಫಲಾನುಭವಿಗಳ ನವೀಕರಣ ಪ್ರಕ್ರಿಯೆಗಳು ನಡೆಯಲಿವೆ.

ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ, ರಾಜ್ಯದ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಆರ್ಥಿಕ ನೆರವು ನೀಡುವ ಯೋಜನೆಯಾಗಿದೆ. ಆದರೆ ಈ ಯೋಜನೆಯಡಿ ಅರ್ಹರಲ್ಲದವರೂ ಹಣ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ, ಇಂತಹ ಸದಸ್ಯರನ್ನು ರದ್ದುಪಡಿಸುವ ಉದ್ದೇಶದಿಂದ ಮರುನವೀಕರಣಕ್ಕೆ ಸರ್ಕಾರ ಮುಂದಾಗಿದೆ. ನವೀಕರಣದ ವೇಳೆ ಫಲಾನುಭವಿಗಳ ಕೆಲವು ವೈಯಕ್ತಿಕ ವಿವರಗಳನ್ನೂ ಸಂಗ್ರಹಿಸಲು ನಿರ್ಧರಿಸಲಾಗಿದೆ.

ರಾಜ್ಯಾದ್ಯಂತ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಮರುಪರಿಶೀಲನೆ ಹಂತದಲ್ಲಿ ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಮುಖಚಹರೆ ದೃಢೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದೂ, ಇದೇ ಉದ್ದೇಶಕ್ಕಾಗಿ ಮೊಬೈಲ್ ಆ್ಯಪ್ ಮತ್ತು ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ ಎಂದೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸರ್ಕಾರದ ನಿಯೋಜಿತ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ನವೀಕರಣ ಕಾರ್ಯ ಕೈಗೊಳ್ಳಲಿದ್ದು, ಇದರಿಂದ ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ದಟ್ಟಣೆ ತಪ್ಪಿಸಬಹುದು. ಫಲಾನುಭವಿಗಳು ಸರ್ಕಾರದ ಅಧಿಕೃತ ಕೇಂದ್ರಗಳಲ್ಲೂ ದಾಖಲೆ ಸಲ್ಲಿಸಿ ನೋಂದಣಿ ಮಾಡಿಸಬಹುದು.

ಯೋಜನೆಯಡಿ ಒಟ್ಟು 1.24 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಅರ್ಹ ಫಲಾನುಭವಿಗಳ ಖಾತೆಗೆ 32 ಕಂತುಗಳಲ್ಲಿ ತಲಾ 2,000 ರೂ.ನಂತೆ ಒಟ್ಟು 76,951 ಕೋಟಿ ರೂ. ಜಮೆ ಮಾಡಲಾಗಿದೆ. ನೋಂದಾಯಿತರ ಪೈಕಿ 3.13 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದು, ಇದರಲ್ಲಿ 1.10 ಲಕ್ಷ ಮಂದಿಯ ಖಾತೆಗೆ 117.31 ಕೋಟಿ ರೂ. ಜಮೆಯಾಗಿದ್ದು, ಇದನ್ನು ಹಿಂಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸದಾಗಿ ಅರ್ಜಿ ತಯಾರಿಸಿದ್ದು, ಸರ್ಕಾರ ಮತ್ತು ಹಣಕಾಸು ಇಲಾಖೆಗೆ ಸಲ್ಲಿಸಿದೆ. ಮನೆ ಯಜಮಾನಿಯ ವಿವರ, ಮತದಾರರ ಗುರುತಿನ ವಿವರ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಈ ಹಿಂದೆ ಮನೆಯಲ್ಲಿ ಎಷ್ಟು ಸದಸ್ಯರಿಗೆ ಹಣ ಬರುತ್ತಿತ್ತು, ಜಾತಿಯ ವಿವರ, ಪತಿಯ ಹೆಸರು-ಆಧಾರ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳನ್ನು ಒಳಗೊಂಡ ಹೊಸ ಅರ್ಜಿ ನಮೂನೆ ತಯಾರಾಗುತ್ತಿದೆ.

ಈಗಾಗಲೇ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಿಂದಾಗಿ ನಕಲಿ ಹಾಗೂ ನಿಧನರಾದವರು ಸೇರಿದಂತೆ ಲಕ್ಷಾಂತರ ಹೆಸರುಗಳನ್ನು ಕೈಬಿಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮರುನೋಂದಣಿಯಿಂದಲೂ ಸಾಕಷ್ಟು ಮಂದಿ ಅನರ್ಹರು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸೆಪ್ಟೆಂಬರ್ ನಂತರ ಈ ನವೀಕರಣ ಪ್ರಕ್ರಿಯೆ ನಡೆಯಲಿದೆ.

BREAKING.. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ಅಂಗೀಕಾರ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಮುಂದುವರಿಯಬೇಕೇ ಎಂಬ ಗೊಂದಲದಲ್ಲಿ ಪಕ್ಷದ ವರಿಷ್ಠರು ಹಾಗೂ ನಾಯಕತ್ವವಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ನಾಗೇಂದ್ರ ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮುಜುಗರವಾಗದಂತೆ ಹೆಜ್ಜೆಯಿಡಲು ಮುಂದಾಗಿದ್ದಾರೆ. ರಾಜೀನಾಮೆ ಅಂಗೀಕಾರದ ಕುರಿತು ಪಕ್ಷದ ಹೈಕಮಾಂಡ್ ಹಾಗೂ ನಾಯಕತ್ವದ ಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದ್ದು, ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರದ ನಂತರವೇ ಅಂತಿಮ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ಕಾಲ ಬಳ್ಳಾರಿ ಚಲೋ ಪಾದಯಾತ್ರೆ ಘೋಷಿಸಿದೆ. ಬಿಜೆಪಿ ಪಾದಯಾತ್ರೆಗೆ ಮುನ್ನವೇ ನಾಗೇಂದ್ರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಸಿಎಂ ಮತ್ತು ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ ಪ್ರಕರಣ: ಸೆಕ್ಷನ್ 79 ರಕ್ಷಣೆ ಕೋರಿದ ಅಮೆಜಾನ್

0

ಬೆಂಗಳೂರು: ದಿವಂಗತ ಪತ್ರಕರ್ತ ರವಿ ಬೆಳಗೆರೆ ಅವರ ‘ಹೇಳಿ ಹೋಗು ಕಾರಣ’ ಕಾದಂಬರಿಯ ನಕಲಿ ಪ್ರತಿಗಳ ಮಾರಾಟ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಮಧ್ಯವರ್ತಿಯಾಗಿರುವ ಅಮೆಜಾನ್ ಕಂಪೆನಿ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 79ರಡಿ ರಕ್ಷಣೆ ಒದಗಿಸಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದೆ.

ಇ-ಕಾಮರ್ಸ್ ವೇದಿಕೆಗಳಲ್ಲಿ ನಕಲಿ ಪುಸ್ತಕಗಳ ಮಾರಾಟಕ್ಕೆ ಸಂಬಂಧಿಸಿದಂತೆ ಪುಸ್ತಕದ ಹಕ್ಕುಸ್ವಾಮ್ಯ ಹೊಂದಿರುವ ಭಾವನಾ ಬೆಳಗೆರೆ ದಾಖಲಿಸಿರುವ ಪ್ರಕರಣ ರದ್ದು ಕೋರಿ ಅಮೆಜಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಅಮೆಜಾನ್ ಈ ಮಾಹಿತಿ ನೀಡಿದೆ.

ವಿಚಾರಣೆ ವೇಳೆ ಅಮೆಜಾನ್ ಪರ ವಕೀಲರು, ಅರ್ಜಿದಾರ ಕಂಪನಿ ಕೇವಲ ಮಾರಾಟಗಾರರು ಮತ್ತು ಖರೀದಿದಾರರನ್ನು ಸಂಪರ್ಕಿಸುವ ಒಂದು ವೇದಿಕೆಯನ್ನಷ್ಟೇ ಒದಗಿಸುತ್ತದೆ ಎಂದೂ, ಮೂರನೇ ವ್ಯಕ್ತಿಯ ಮಾರಾಟಗಾರರು ಎಸಗುವ ಹಕ್ಕುಸ್ವಾಮ್ಯ ಉಲ್ಲಂಘನೆಗೆ ಕಂಪನಿಯನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದೂ ವಾದಿಸಿದರು. ತಮ್ಮ ವೇದಿಕೆಯಲ್ಲಿ ಕಾರ್ಯಾಚರಣೆ ನಡೆಸುವ ಮಾರಾಟಗಾರರ ವಿಚಾರದಲ್ಲಿ ಕಂಪನಿ ಅಗತ್ಯ ನಿಗಾ ಮತ್ತು ತನಿಖಾ ಕ್ರಮಗಳನ್ನು ಪಾಲಿಸಿದೆ ಎಂದು ಸ್ಪಷ್ಟಪಡಿಸಿದರು.

ಇನ್ವೆಂಟರಿ ಆಧಾರಿತ ಮಾದರಿಯಲ್ಲಿ ಕಂಪನಿಗಳೇ ಖುದ್ದಾಗಿ ಉತ್ಪನ್ನ ಖರೀದಿಸಿ, ಸಂಗ್ರಹಿಸಿ, ಬೆಲೆ ನಿಗದಿಪಡಿಸಿ ಮಾರಾಟ ಮಾಡುತ್ತವೆ, ಆದರೆ ಅಮೆಜಾನ್ ಅಂತಹ ಮಾದರಿ ಹೊಂದಿಲ್ಲದೆ ಕೇವಲ ಮೂರನೇ ವ್ಯಕ್ತಿಯ ಮಾರಾಟಗಾರರಿಗೆ ಮುಕ್ತ ಮಾರುಕಟ್ಟೆ ವೇದಿಕೆಯನ್ನಷ್ಟೇ ಕಲ್ಪಿಸುತ್ತದೆ ಎಂದ ವಕೀಲರು, ಈ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79(2) ಮತ್ತು (3)ರ ಪ್ರಕಾರ ಮಧ್ಯವರ್ತಿಯಾಗಿರುವ ಕಂಪನಿ ನಾಗರಿಕ ಅಥವಾ ಕ್ರಿಮಿನಲ್ ಹೊಣೆಗಾರಿಕೆಯಿಂದ ವಿನಾಯಿತಿ ಪಡೆಯಲು ಅರ್ಹವಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಸೆಕ್ಷನ್ 79(3)(b) ಅಡಿ ನ್ಯಾಯಾಲಯದಿಂದ ಆದೇಶ ಬರುವುದಕ್ಕೂ ಮುನ್ನ ದೂರು ಬಂದ ತಕ್ಷಣವೇ ಅಮೆಜಾನ್ ಸ್ವಯಂಪ್ರೇರಿತವಾಗಿ ಎಲ್ಲಾ 12 ಮಾರಾಟಗಾರರ ಉತ್ಪನ್ನಗಳ ಪಟ್ಟಿಯನ್ನು ತೆಗೆದುಹಾಕಿದ್ದು, ತನಿಖಾಧಿಕಾರಿಗೆ ಸಂಬಂಧಪಟ್ಟ ಮಾರಾಟಗಾರರ ಸಂಪೂರ್ಣ ವಿವರಗಳನ್ನೂ ಒದಗಿಸಲಾಗಿದೆ ಎಂದು ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ: ದಿವಂಗತ ಪತ್ರಕರ್ತ ರವಿ ಬೆಳಗೆರೆ ಅವರ ‘ಹೇಳಿ ಹೋಗು ಕಾರಣ’ ಕಾದಂಬರಿಯ ಹಕ್ಕುಸ್ವಾಮ್ಯ ಹೊಂದಿರುವ ಭಾವನಾ ಬೆಳಗೆರೆ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೃತಿಸ್ವಾಮ್ಯ ಕಾಯ್ದೆ-1957ರ ಸೆಕ್ಷನ್ 51(1)(b) ಮತ್ತು 63ರಡಿ ದಾಖಲಾಗಿರುವ ಈ ಪ್ರಕರಣದ ಮುಂದಿನ ವಿಚಾರಣೆ ಹಾಗೂ ಪ್ರಕ್ರಿಯೆಗಳಿಗೆ ಮೇ 19ರಂದು ಹೈಕೋರ್ಟ್ ತಡೆ ನೀಡಿತ್ತು.

ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಭಾರೀ ಕುಸಿತ: ಸದ್ಯ ಡ್ಯಾಂನಲ್ಲಿ ಎಷ್ಟು ನೀರಿದೆ?

0

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಒಳಹರಿವಿನಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

ಕಳೆದ ಕೆಲವು ದಿನಗಳಿಂದ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದರಿಂದ ಕೆಆರ್‌ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗಿತ್ತು. ನಿನ್ನೆ 17,427 ಕ್ಯೂಸೆಕ್ ಇದ್ದ ಒಳಹರಿವು ಇದೀಗ 10,028 ಕ್ಯೂಸೆಕ್‌ಗೆ ಇಳಿಕೆಯಾಗಿದೆ.

ಈ ವಾರದ ಆರಂಭದಲ್ಲಿ ಕೊಡಗು ಭಾಗದಲ್ಲಿ ಭಾರೀ ಮಳೆಯಾಗಿದ್ದ ಪರಿಣಾಮ ಕೆಆರ್‌ಎಸ್‌ಗೆ ನೀರಿನ ಹರಿವು ಹೆಚ್ಚಾಗಿತ್ತು. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು, ನಿರಂತರ ಮಳೆಯ ಹಿನ್ನೆಲೆಯಲ್ಲಿ ಗುರುವಾರ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಇದೀಗ ಮಳೆ ಪ್ರಮಾಣ ತಗ್ಗಿರುವುದರಿಂದ ಒಳಹರಿವು ಮತ್ತೆ ಇಳಿಕೆಯಾಗಿದೆ.

KRS ಡ್ಯಾಂನ ಇಂದಿನ ನೀರಿನ ಮಟ್ಟ:

  • ಗರಿಷ್ಠ ನೀರಿನ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 110.20 ಅಡಿ
  • ಇಂದಿನ ಒಳಹರಿವು: 10,028 ಕ್ಯೂಸೆಕ್
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಪ್ರಸ್ತುತ ನೀರಿನ ಸಂಗ್ರಹ: 31.923 ಟಿಎಂಸಿ

ಒಳಹರಿವು ಕಡಿಮೆಯಾಗಿದ್ದರೂ ಜಲಾಶಯದಲ್ಲಿ ನೀರಿನ ಮಟ್ಟ 110 ಅಡಿ ದಾಟಿದೆ. ಹೀಗಾಗಿ ಸದ್ಯಕ್ಕೆ ರೈತರ ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿನ ಅಗತ್ಯಗಳಿಗೆ ಜಲಾಶಯದಲ್ಲಿ ಸಾಕಷ್ಟು ನೀರು ಲಭ್ಯವಿದೆ.

ಮುಂದಿನ ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೇಗಿರಲಿದೆ ಎಂಬುದರ ಮೇಲೆ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣವೂ ಅವಲಂಬಿತವಾಗಿರಲಿದೆ.

‘ನನ್ನ ಸಾವಿಗೆ ಅವರೇ ಕಾರಣ’! ಡೆತ್‌ನೋಟ್ ಬರೆದಿಟ್ಟು ಕೆರೆಗೆ ಹಾರಿದ ಯುವಕ

0

ಚಾಮರಾಜನಗರ: ಡೆತ್‌ನೋಟ್ ಬರೆದಿಟ್ಟು ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಗುರುಮೂರ್ತಿ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೂ ಮುನ್ನ ಗುರುಮೂರ್ತಿ ಡೆತ್‌ನೋಟ್ ಬರೆದಿಟ್ಟಿದ್ದು, ನಾಲ್ವರು ಬಂದು ಗಲಾಟೆ ನಡೆಸಿ ಅವಮಾನಿಸಿದ್ದೇ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಗುರುಮೂರ್ತಿಯ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಸಂಬಂಧ ಮೃತನ ಕುಟುಂಬಸ್ಥರು ಶ್ರವಣ ಹಾಗೂ ಅಭಿ ಸೇರಿದಂತೆ ಕೆಲವರ ವಿರುದ್ಧ ದೂರು ನೀಡಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

‘ಕೊಲ್ಲದೇ ಬಿಡಲ್ಲ’ ಎಂದು ವಾಯ್ಸ್ ಮೆಸೇಜ್! ಮಂಗಳೂರಿನಲ್ಲಿ ನರ್ಸ್‌ಗೆ ಜೀವ ಬೆದರಿಕೆ?

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಯುವತಿಗೆ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.

ತನ್ನ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದ್ದ ಯುವತಿಗೆ, ಆರೋಪಿ ವಾಟ್ಸ್‌ಆ್ಯಪ್ ಮೂಲಕ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಪುತ್ತೂರು ಮೂಲದ ನಂದಿನಿ ಎಂಬ ನರ್ಸ್ ಮಂಗಳೂರಿನ ನೀರುಮಾರ್ಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆಗಸ್ಟ್ 16ರಂದು ಅವರು ಮೈಸೂರಿಗೆ ತೆರಳುವ ವೇಳೆ ಮನೆಯಲ್ಲಿದ್ದ ನಾಯಿಗೆ ಆಹಾರ ನೀಡಲು ಮನೆಯ ಕೀಯನ್ನು ಸ್ನೇಹಿತೆ ಚಂದನಾ ಅವರಿಗೆ ನೀಡಿದ್ದರು.

ಆಗಸ್ಟ್ 17ರಂದು ಚಂದನಾ ಮತ್ತೊಬ್ಬ ಸ್ನೇಹಿತೆ, ಕೇರಳ ಮೂಲದ ನರ್ಸ್ ಆದಿತ್ಯಾ ಅವರೊಂದಿಗೆ ನಂದಿನಿ ಮನೆಗೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ನೌಶದ್ ಎಂಬಾತ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಇಬ್ಬರೊಂದಿಗೆ ಗಲಾಟೆ ನಡೆಸಿ ಅಶ್ಲೀಲವಾಗಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವಿಚಾರ ತಿಳಿದು ನಂದಿನಿ ಕರೆ ಮಾಡಿದಾಗ, ಫೋನ್ ಸ್ವೀಕರಿಸಿದ್ದ ನೌಶದ್ ಅವರಿಗೂ ಅಶ್ಲೀಲವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

‘ನಿನ್ನ ತಲೆ ತೆಗೀತೀನಿ’ ಎಂದು ವಾಟ್ಸ್‌ಆ್ಯಪ್‌ನಲ್ಲಿ ಬೆದರಿಕೆ?

ನೌಶದ್ ವಿರುದ್ಧ ನಂದಿನಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿರುವ ವಿಚಾರ ತಿಳಿದ ಬಳಿಕ ಆರೋಪಿ ವಾಟ್ಸ್‌ಆ್ಯಪ್‌ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎಂದು ನಂದಿನಿ ಆರೋಪಿಸಿದ್ದಾರೆ.

ಪೊಲೀಸರಿಗೆ ಶರಣಾಗುವ ಮುನ್ನವೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ತೀವ್ರ ಭಯಗೊಂಡ ನಂದಿನಿ, ಆಗಸ್ಟ್ 20ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮತ್ತೊಂದು ದೂರು ನೀಡಿದ್ದರು ಎನ್ನಲಾಗಿದೆ.

ಮತ್ತೊಬ್ಬ ನರ್ಸ್‌ಗೂ ಬ್ಲ್ಯಾಕ್‌ಮೇಲ್ ಆರೋಪ?

ದೂರು ನೀಡಿ ಹಲವು ದಿನಗಳಾದರೂ ಆರೋಪಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿಲ್ಲ ಎಂದು ನಂದಿನಿ ಆರೋಪಿಸಿದ್ದಾರೆ. ಇದರಿಂದ ಆತಂಕಗೊಂಡ ಅವರು ರಕ್ಷಣೆ ಕೋರಿ ವಿಶ್ವ ಹಿಂದೂ ಪರಿಷತ್ ಹಾಗೂ ದುರ್ಗಾವಾಹಿನಿ ಮುಖಂಡರನ್ನು ಸಂಪರ್ಕಿಸಿದ್ದರು.

ಈ ವೇಳೆ ಮತ್ತೊಬ್ಬ ನರ್ಸ್ ಆದಿತ್ಯಾ ಅವರನ್ನೂ ಸಂಘಟನೆಯ ಮುಖಂಡರು ಸಂಪರ್ಕಿಸಿದ್ದು, ನೌಶದ್ ಬಳಿ ತಮ್ಮ ಫೋಟೋ ಹಾಗೂ ವಿಡಿಯೋಗಳಿವೆ ಎಂದು ಅವರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಫೋಟೋ-ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿತ್ತೇ ಎಂಬ ಅನುಮಾನವೂ ವ್ಯಕ್ತವಾಗಿದೆ.

ಸದ್ಯ ಆದಿತ್ಯಾ ಕೇರಳಕ್ಕೆ ತೆರಳಿದ್ದು, ಅವರ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ.

ದೂರು ನೀಡಿದ ನರ್ಸ್‌ಗಳಿಗೆ ಕೆಲಸದಿಂದ ವಜಾ?

ಇನ್ನೊಂದೆಡೆ, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಬೆನ್ನಲ್ಲೇ ನಂದಿನಿ ಹಾಗೂ ಆದಿತ್ಯಾ ಇಬ್ಬರನ್ನೂ ಆಸ್ಪತ್ರೆ ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಆತಂಕ ವ್ಯಕ್ತಪಡಿಸಿರುವ ನಂದಿನಿ, ಮಂಗಳೂರಿನಲ್ಲಿ ಇತ್ತೀಚೆಗೆ ನಡೆಯುತ್ತಿರುವ ಘಟನೆಗಳಿಂದಾಗಿ ಹೊರಗೆ ಓಡಾಡಲು ಭಯವಾಗುತ್ತಿದೆ. ತಮ್ಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪೊಲೀಸ್ ಕಮಿಷನರ್ ಹೇಳಿದ್ದೇನು?

ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗಿದೆ ಎಂಬ ಆರೋಪಗಳು ಹಾಗೂ ವಿವಿಧ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಆರೋಪಿಯನ್ನು ಬಂಧಿಸುವ ಉದ್ದೇಶ ಪೊಲೀಸರಿಗೆ ಇದೆ. ಪ್ರಕರಣದಲ್ಲಿ ಯಾವುದೇ ವಿನಾಯಿತಿ ನೀಡಿಲ್ಲ. ಆದರೆ ಇದು ದೂರವಾಣಿ ಮೂಲಕ ಬೆದರಿಕೆ ಹಾಕಿದ ಪ್ರಕರಣವಾಗಿದ್ದು, ಕಾನೂನಿನಡಿ ಈ ಅಪರಾಧಕ್ಕೆ ನಿಗದಿಯಾಗಿರುವ ಶಿಕ್ಷೆಯ ಮಿತಿ ನಿರ್ದಿಷ್ಟ ಮಟ್ಟಕ್ಕಿಂತ ಕಡಿಮೆಯಿರುವ ಹಿನ್ನೆಲೆಯಲ್ಲಿ ತಕ್ಷಣ ಬಂಧಿಸಲು ಅವಕಾಶವಿಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ ಎನ್ನಲಾಗಿದೆ.

ಪೊಲೀಸ್ ಕಮಿಷನರ್ ಅವರ ಈ ಸ್ಪಷ್ಟನೆಯ ಬೆನ್ನಲ್ಲೇ ಆರೋಪಿ ನೌಶದ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಮುಂದುವರಿದಿದೆ.

ರಕ್ಷಾ ಬಂಧನ 2026: ರಾಖಿ ಕಟ್ಟಲು ಶುಭ ಸಮಯ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ!

0

ಸಹೋದರ-ಸಹೋದರಿಯರ ನಡುವಿನ ಪ್ರೀತಿ, ಬಾಂಧವ್ಯ ಮತ್ತು ಕಾಳಜಿಯ ಸಂಕೇತವಾಗಿರುವ ರಕ್ಷಾ ಬಂಧನ ಹಬ್ಬವನ್ನು ಇಂದು ಆಚರಿಸಲಾಗುತ್ತಿದೆ.

ಈ ದಿನ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟಿ, ಅವರ ದೀರ್ಘಾಯುಷ್ಯ ಹಾಗೂ ಒಳಿತಿಗಾಗಿ ಪ್ರಾರ್ಥಿಸುತ್ತಾರೆ. ಹೀಗಾಗಿ ರಾಖಿ ಕಟ್ಟಲು ಶುಭ ಸಮಯ ಯಾವುದು ಎಂಬ ಕುತೂಹಲ ಹಲವರಲ್ಲಿದೆ.

ಈ ಬಾರಿ ರಕ್ಷಾ ಬಂಧನವನ್ನು ಆಗಸ್ಟ್ 28ರಂದು ಆಚರಿಸಲಾಗುತ್ತಿದೆ. ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಈ ಬಾರಿ ರಾಖಿ ಕಟ್ಟಲು ಭದ್ರೆಯ ಅಡ್ಡಿ ಇಲ್ಲದಿರುವುದರಿಂದ ದಿನದ ಬಹುತೇಕ ಸಮಯವನ್ನು ಶುಭವೆಂದು ಪರಿಗಣಿಸಬಹುದು ಎಂದು ಹೇಳಲಾಗಿದೆ.

ಹುಣ್ಣಿಮೆ ತಿಥಿ ಯಾವಾಗ ಮುಕ್ತಾಯ?

ಹಿಂದೂ ಪಂಚಾಂಗದ ಪ್ರಕಾರ, ರಕ್ಷಾ ಬಂಧನದ ದಿನವಾದ ಆಗಸ್ಟ್ 28ರಂದು ಬೆಳಿಗ್ಗೆ ಹುಣ್ಣಿಮೆ ತಿಥಿ ಮುಕ್ತಾಯವಾಗಲಿದೆ. ಬಳಿಕ ಪ್ರತಿಪದ ತಿಥಿ ಆರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಖಿ ಕಟ್ಟಲು ಯಾವ ಸಮಯ ಸೂಕ್ತ ಎಂಬ ಬಗ್ಗೆ ಗೊಂದಲ ಮೂಡಿದೆ.

ಹಿಂದೂ ಪಂಚಾಂಗದಲ್ಲಿ ಉದಯ ತಿಥಿಗೆ ವಿಶೇಷ ಮಹತ್ವವಿದೆ. ಸೂರ್ಯೋದಯದ ವೇಳೆಯಲ್ಲಿ ಯಾವ ತಿಥಿ ಇರುತ್ತದೆಯೋ ಅದನ್ನೇ ಆ ದಿನದ ತಿಥಿಯಾಗಿ ಪರಿಗಣಿಸುವುದು ಸಂಪ್ರದಾಯ. ಇದೇ ಕಾರಣಕ್ಕೆ ಈ ಬಾರಿ ರಕ್ಷಾ ಬಂಧನವನ್ನು ಆಗಸ್ಟ್ 28ರಂದು ಆಚರಿಸಲಾಗುತ್ತಿದೆ.

ರಾಖಿ ಕಟ್ಟಲು ಶುಭ ಸಮಯ:

ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಆಗಸ್ಟ್ 28ರಂದು ಬೆಳಿಗ್ಗೆ 6:22ರಿಂದ 9:48ರವರೆಗೆ ರಾಖಿ ಕಟ್ಟಲು ಶುಭ ಸಮಯವಿದೆ ಎಂದು ಹೇಳಲಾಗಿದೆ.

ಹುಣ್ಣಿಮೆ ತಿಥಿ ಮುಕ್ತಾಯಕ್ಕೂ ಮುನ್ನ ರಾಖಿ ಕಟ್ಟಲು ಬಯಸುವವರು ಈ ಅವಧಿಯಲ್ಲಿ ರಾಖಿ ಕಟ್ಟಬಹುದು. ಆದರೆ ಭದ್ರೆಯ ಅಡ್ಡಿ ಇಲ್ಲದಿರುವುದರಿಂದ ದಿನದ ಇತರ ಸಮಯದಲ್ಲಿಯೂ ರಾಖಿ ಕಟ್ಟಬಹುದು ಎಂಬ ಅಭಿಪ್ರಾಯವಿದೆ.

ಹೀಗಾಗಿ ಕುಟುಂಬದ ಸಂಪ್ರದಾಯ ಹಾಗೂ ಸ್ಥಳೀಯ ಪಂಚಾಂಗದ ಆಧಾರದ ಮೇಲೆ ರಾಖಿ ಕಟ್ಟುವ ಸಮಯವನ್ನು ಆಯ್ಕೆ ಮಾಡಬಹುದು.

ರಾಖಿ ಕಟ್ಟುವ ಸಂಪ್ರದಾಯ ಹೇಗೆ?

ರಕ್ಷಾ ಬಂಧನದಂದು ಬೆಳಗ್ಗೆ ಸ್ನಾನ ಮಾಡಿ ಸ್ವಚ್ಛವಾದ ಬಟ್ಟೆ ಧರಿಸಿ ಪೂಜೆಯ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಬಳಿಕ ರಾಖಿ, ಕುಂಕುಮ, ಅಕ್ಷತೆ, ದೀಪ ಹಾಗೂ ಸಿಹಿತಿಂಡಿಗಳನ್ನು ತಟ್ಟೆಯಲ್ಲಿ ಸಿದ್ಧಪಡಿಸಿಕೊಳ್ಳಬೇಕು.

ಮೊದಲು ಸಹೋದರನ ಹಣೆಗೆ ಕುಂಕುಮದ ತಿಲಕ ಹಚ್ಚಿ, ಅಕ್ಷತೆ ಹಾಕಿ ಬಳಿಕ ರಾಖಿ ಕಟ್ಟುವುದು ಸಂಪ್ರದಾಯ. ನಂತರ ಸಹೋದರನಿಗೆ ಸಿಹಿ ತಿನ್ನಿಸಿ, ಆತನ ದೀರ್ಘಾಯುಷ್ಯ, ಆರೋಗ್ಯ ಮತ್ತು ಒಳಿತಿಗಾಗಿ ಸಹೋದರಿ ಪ್ರಾರ್ಥಿಸುತ್ತಾರೆ.

ಪಂಚಾಂಗ ಪರಿಶೀಲಿಸುವುದು ಉತ್ತಮ:

2026ರ ರಕ್ಷಾ ಬಂಧನದಂದು ಭದ್ರೆಯ ಅಡ್ಡಿ ಇಲ್ಲದಿರುವುದರಿಂದ ರಾಖಿ ಕಟ್ಟಲು ಅನುಕೂಲಕರ ಸಮಯವಿದೆ ಎಂದು ಜ್ಯೋತಿಷ್ಯ ಮೂಲಗಳು ಹೇಳುತ್ತವೆ. ವಿಶೇಷವಾಗಿ ಬೆಳಿಗ್ಗೆ 6:22ರಿಂದ 9:48ರವರೆಗಿನ ಅವಧಿಯನ್ನು ಶುಭ ಸಮಯವೆಂದು ಪರಿಗಣಿಸಲಾಗಿದೆ.

ಆದರೆ ತಿಥಿ ಹಾಗೂ ಶುಭ ಸಮಯದಲ್ಲಿ ಪ್ರದೇಶಾನುಸಾರ ಸ್ವಲ್ಪ ವ್ಯತ್ಯಾಸ ಇರಬಹುದು. ಹೀಗಾಗಿ ರಾಖಿ ಕಟ್ಟುವ ಮುನ್ನ ನಿಮ್ಮ ಪ್ರದೇಶದ ಪಂಚಾಂಗವನ್ನು ಪರಿಶೀಲಿಸುವುದು ಅಥವಾ ಸ್ಥಳೀಯ ಜ್ಯೋತಿಷ್ಯ ತಜ್ಞರ ಸಲಹೆ ಪಡೆಯುವುದು ಸೂಕ್ತ.

ತೆರಿಗೆ ತಪ್ಪಿಸಿಕೊಳ್ಳೋಕೆ ಸಾಧ್ಯವಿಲ್ಲ! ಬೆಂಗಳೂರಿನ ಲಕ್ಷಾಂತರ ಆಸ್ತಿಗಳ ಮೇಲೆ GBA ಕಣ್ಣು

0

ಬೆಂಗಳೂರು: ಆಸ್ತಿ ವಿವರಗಳನ್ನು ಮರೆಮಾಚಿ ತೆರಿಗೆ ವಂಚಿಸುತ್ತಿರುವವರಿಗೆ ಬಿಸಿ ಮುಟ್ಟಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬೃಹತ್ ಆಸ್ತಿ ಸರ್ವೆಗೆ ಸಜ್ಜಾಗಿದೆ.

ಬೆಂಗಳೂರಿನಾದ್ಯಂತ ಪ್ರತಿಯೊಬ್ಬರ ಹೆಸರಿನಲ್ಲಿರುವ ಆಸ್ತಿ ಹಾಗೂ ಕಟ್ಟಡಗಳ ನೈಜ ವಿಸ್ತೀರ್ಣದ ವಿವರಗಳನ್ನು ಪತ್ತೆಹಚ್ಚಲು ಸಮಗ್ರ ಸಮೀಕ್ಷೆ ನಡೆಸಲು ಪ್ರಾಧಿಕಾರ ನಿರ್ಧರಿಸಿದೆ.

ಆಸ್ತಿ ತೆರಿಗೆ ವಂಚನೆಗೆ ಕಡಿವಾಣ ಹಾಕುವುದು ಹಾಗೂ ಖಾತಾ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸುವುದು ಸರ್ವೆಯ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ನಗರದ ಎಲ್ಲ ಆಸ್ತಿಗಳನ್ನು ಸಮೀಕ್ಷೆ ನಡೆಸಿ, ಅವುಗಳಿಗೆ GPS ಟ್ಯಾಗಿಂಗ್ ಅಳವಡಿಸಲು ಸಿದ್ಧತೆ ನಡೆದಿದೆ.

ಬೆಂಗಳೂರಿನ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಈ ಬೃಹತ್ ಆಸ್ತಿ ಸರ್ವೆ ನಡೆಯಲಿದೆ ಎನ್ನಲಾಗಿದೆ.

ಮಾಲ್‌ಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಬಹುಮಹಡಿ ವಸತಿ ಸಮುಚ್ಚಯಗಳ ಮಾಲೀಕರು ಕಟ್ಟಡದ ನೈಜ ವಿಸ್ತೀರ್ಣಕ್ಕಿಂತ ಕಡಿಮೆ ವಿಸ್ತೀರ್ಣ ತೋರಿಸಿ ತೆರಿಗೆ ವಂಚಿಸುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಲು ಸಮೀಕ್ಷೆ ನೆರವಾಗಲಿದೆ.

ಸರ್ವೆ ವೇಳೆ ಪ್ರತಿಯೊಂದು ಆಸ್ತಿಯ ವಿವರಗಳನ್ನು ಡಿಜಿಟಲ್ ಇ-ಖಾತಾ ವ್ಯವಸ್ಥೆಗೆ ಸೇರ್ಪಡೆಗೊಳಿಸಿ, GPS ಲೊಕೇಶನ್‌ನೊಂದಿಗೆ ಲಿಂಕ್ ಮಾಡಲಾಗುತ್ತದೆ. ಅಧಿಕೃತ ದಾಖಲೆಗಳಿಲ್ಲದೆ ನಿರ್ಮಿಸಲಾಗಿರುವ ಅನಧಿಕೃತ ಆಸ್ತಿಗಳನ್ನೂ ಗುರುತಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಸದ್ಯ ಜಿಬಿಎ ವ್ಯಾಪ್ತಿಯ ಆಸ್ತಿ ತೆರಿಗೆ ವ್ಯವಸ್ಥೆಯಿಂದ ಹೊರಗುಳಿದಿರುವ ಲಕ್ಷಾಂತರ ಆಸ್ತಿಗಳನ್ನು ಪತ್ತೆಹಚ್ಚಿ, ಅವುಗಳನ್ನು ಅಧಿಕೃತ ಕಂದಾಯ ದಾಖಲೆಗಳಿಗೆ ಸೇರ್ಪಡೆಗೊಳಿಸುವ ಮೂಲಕ ತೆರಿಗೆ ಸಂಗ್ರಹ ಹೆಚ್ಚಿಸುವ ಗುರಿಯನ್ನು ಪ್ರಾಧಿಕಾರ ಹೊಂದಿದೆ.

ಸಮೀಕ್ಷೆ ಪೂರ್ಣಗೊಂಡ ಬಳಿಕ ಬೆಂಗಳೂರಿನ ಆಸ್ತಿ ಮಾಲೀಕತ್ವದ ನಿಖರ ಮಾಹಿತಿಯೊಂದಿಗೆ ಸಮಗ್ರ ಡಿಜಿಟಲ್ ದಾಖಲೆ ಸಿದ್ಧವಾಗಲಿದೆ. ಆಸ್ತಿ ವಿವರಗಳನ್ನು ಸುಳ್ಳಾಗಿ ನೀಡಿ ತೆರಿಗೆ ವಂಚಿಸಿರುವುದು ಪತ್ತೆಯಾದರೆ ಅಂತಹ ಮಾಲೀಕರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.