Home Blog Page 56

ಪಬ್ಲಿಕ್ ಪ್ಲೇಸ್ ನಲ್ಲಿ ‘ಧಮ್’ ಹೊಡೆಯುತ್ತಾ ಫೋಟೋಶೂಟ್; ರಜತ್ ವಿರುದ್ದ ನೆಟ್ಟಿಗರ ಆಕ್ರೋಶ!

0

ಮೈಸೂರು: ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಬಿಗ್‌ಬಾಸ್ ಸ್ಪರ್ಧಿ ರಜತ್ ಸಿಗರೇಟ್ ಹಿಡಿದು ಬಿಂದಾಸ್ ಫೋಟೋಶೂಟ್ ನಡೆಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾರಿನಿಂದ ಇಳಿಯುತ್ತಲೇ ವಿಲನ್ ಲುಕ್ಕಿನಲ್ಲಿ ನಡೆಸಿದ ಈ ಫೋಟೋಶೂಟ್‌ನ್ನು ರಜತ್ ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ನಿಷೇಧವಾಗಿರುವ ಹಿನ್ನೆಲೆಯಲ್ಲಿ, ಈ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆ ಶೂಟಿಂಗ್ ಸೆಟ್‌ನಲ್ಲಿ ಮಚ್ ಹಿಡಿದು ಜೈಲಿಗೆ ಹೋಗಿ ಬೇಲ್ ಮೇಲೆ ಹೊರಬಂದ ರಜತ್, ಈಗಲೂ ತಮ್ಮ ಹುಚ್ಚಾಟದ ಕಾರಣದಿಂದ ಸದ್ದು ಮಾಡಿದ್ದಾರೆ. ಸಿಗರೇಟ್ ಮತ್ತು ಅತಿ ಧೈರ್ಯಶಾಲಿ ಲುಕ್ಕಿನ ಫೋಟೋಶೂಟ್, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ತೀವ್ರ ಚಳಿ ಹಿನ್ನೆಲೆ: ಜೀವ ಧ್ವನಿ ಫೌಂಡೇಶನ್ ವತಿಯಿಂದ 400 ಸ್ವೆಟರ್ ವಿತರಣೆ

0

ಸವದತ್ತಿ: ತೀವ್ರ ಚಳಿ ಪರಿಸ್ಥಿತಿಯಿಂದ ಬಳಲುತ್ತಿರುವ ವೃದ್ಧರು ಹಾಗೂ ನಿರ್ಗತಿಕರಿಗೆ ನೆರವಾಗುವ ಉದ್ದೇಶದಿಂದ ಜೀವ ಧ್ವನಿ ಫೌಂಡೇಶನ್ ವತಿಯಿಂದ ಸಾಮಾಜಿಕ ಜವಾಬ್ದಾರಿಯ ಅಂಗವಾಗಿ ಸ್ವೆಟರ್ ವಿತರಣಾ ಕಾರ್ಯಕ್ರಮ ನಡೆಸಲಾಯಿತು.

ಮಹಾಂತೇಶ ಕಟ್ಟಿಕರ್ ಅವರ ಉಪಸ್ಥಿತಿಯಲ್ಲಿ, ಸಂಸ್ಥಾಪಕ ನಿಖಿಲ್ ಹಂಜಗಿ ಅವರ ನೇತೃತ್ವದಲ್ಲಿ ಹಾಗೂ ಗೌರವಾಧ್ಯಕ್ಷ ಸಂತೋಷ್ ಆರ್. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಸೇವಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈ ಕಾರ್ಯಕ್ರಮದಡಿ ಒಟ್ಟು 400 ಸ್ವೆಟರ್‌ಗಳನ್ನು ಸವದತ್ತಿ ತಾಲೂಕು ಸೇರಿದಂತೆ ಹುಬ್ಬಳ್ಳಿಯ ಸಿದ್ಧಿವಿನಾಯಕ ವೃದ್ಧಾಶ್ರಮ, ಧಾರವಾಡದ ದಯಾಶಂಕರ ಆಶ್ರಮ, ಛಬ್ಬಿಯ ಸಮೃದ್ಧಿ ವೃದ್ಧಾಶ್ರಮ, ಸಿದ್ದರೂಢ ಆಶ್ರಮ (ಬಗಡಗೇರಿ–ಮಿಶ್ರಿಕೋಟಿ) ಹಾಗೂ ವಿವಿಧೆಡೆ ಇರುವ ನಿರ್ಗತಿಕರು ಮತ್ತು ಆಶ್ರಯವಿಲ್ಲದ ಜನರಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಫೌಂಡೇಶನ್‌ನ ಗುರು ಉಂಕಿ, ಪರೋಕ್ಷ ಹೂಲಿ, ಜಾನ್ವಿ ಸುನಗರ, ಕಾರ್ತಿಕ್ ಕಿಂಟಿಗೊಂಡ್, ರಾಘವೇಂದ್ರ ಬಳ್ಳಾರಿ, ಅವಿನಾಶ್ ತೆಗ್ಗಿಹಳ್ಳಿ, ಕಿರಣ್ ಕೊಪ್ಪದ್, ಕೃಷ್ಣ ಸಾಬೋಜಿ, ಅನಿಕೇತ್ ಅರ್ಚಕ, ಶ್ರೀನಿವಾಸ್, ಶರವಣ, ಪರಮ್, ವಿನಾಯಕ್, ಉಮೇಶ್ ಬದ್ದಿ, ರೋಹಿತ್, ವಿಜಯ ಮೆಹರ್‌ವಾಡೆ, ಅಪೇಕ್ಷ ಹೂಲಿ, ಬೂಮಿಕಾ ಮಂಡ್ರೆ, ರೇಣುಕಾ, ಶಾಹೀನ್ ಕಿರೆಸೂರ್, ವೈಷ್ಣವಿ ಹಣಬರತ್ತಿ, ಅರುಣ್, ಪ್ರೀತಿ, ಸಂಜನಾ ಸೇರಿದಂತೆ ಕಮಿಟಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಚಳಿಯಿಂದ ಬಳಲುತ್ತಿರುವ ಸಮಾಜದ ದುರ್ಬಲ ವರ್ಗಗಳಿಗೆ ಅಗತ್ಯ ಸಹಾಯ ಒದಗಿಸುವ ನಿಟ್ಟಿನಲ್ಲಿ ಇಂತಹ ಸೇವಾ ಚಟುವಟಿಕೆಗಳನ್ನು ಮುಂದುವರಿಸಲಾಗುವುದು ಎಂದು ಜೀವ ಧ್ವನಿ ಫೌಂಡೇಶನ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

ದೇವನಹಳ್ಳಿ: ಪ್ರಿಯಕರನಿಗಾಗಿ ಪತಿಯ ಹತ್ಯೆ; ಅಪಘಾತ ನಾಟಕ ಬಯಲು, ಪತ್ನಿ ಸೇರಿ ನಾಲ್ವರು ಅರೆಸ್ಟ್

0

ದೇವನಹಳ್ಳಿ: ಪ್ರಿಯಕರನಿಗಾಗಿ ಹೆಂಡತಿಯೇ ತನ್ನ ಪತಿಯನ್ನು ಹತ್ಯೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಪ್ರಕರಣವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಜನವರಿ 24ರಂದು ನಡೆದ ಅಶೋಕ್ (40) ಹತ್ಯೆಯ ರಹಸ್ಯ ಇದೀಗ ಬಹಿರಂಗವಾಗಿದೆ.

ಮೃತನ ಪತ್ನಿ ಪುಷ್ಪಾ ಹಾಗೂ ಆಕೆಯ ಪ್ರಿಯಕರ ದೇವರಾಜ್ ಅವರನ್ನು ಪೊಲೀಸರು ಬಂಧಿಸಿದ್ದು, ಇವರ ಜೊತೆಗೆ ಸಹಚರರಾದ ಮುನಿಂದ್ರ ಮತ್ತು ಸಿದ್ದಪ್ಪನನ್ನೂ ವಶಕ್ಕೆ ಪಡೆಯಲಾಗಿದೆ. ಲವರ್ ದೇವರಾಜ್ಗಾಗಿ ಪುಷ್ಪಾ ಪೂರ್ವಯೋಜಿತವಾಗಿ ಪತಿ ಅಶೋಕ್‌ನ ಹತ್ಯೆಗೆ ಸಂಚು ರೂಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 24ರಂದು ಗ್ರಾಮದ ಸಮೀಪದ ರಸ್ತೆಯ ತಿರುವಿನಲ್ಲಿ ಅಶೋಕ್ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಇದು ರಸ್ತೆ ಅಪಘಾತವೆಂದು ಹೇಳಲಾಗಿತ್ತು. ಆದರೆ ಘಟನೆಯ ಸನ್ನಿವೇಶಗಳು ಸಂಶಯ ಹುಟ್ಟಿಸಿದ್ದರಿಂದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತನಿಖೆ ನಡೆಸಿದ ಸೂಲಿಬೆಲೆ ಪೊಲೀಸರು ಇದು ಕೊಲೆ ಎಂಬುದನ್ನು ಪತ್ತೆಹಚ್ಚಿದ್ದಾರೆ.

ಪೊಲೀಸರ ಪ್ರಕಾರ, ಎಣ್ಣೆ ಪಾರ್ಟಿ ಮಾಡುವ ನೆಪದಲ್ಲಿ ಅಶೋಕ್ರನ್ನು ಕರೆದುಕೊಂಡು ಹೋಗಿ, ಕೆರೆಯ ಬಳಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಬಳಿಕ ಶವವನ್ನು ರಸ್ತೆಯ ತಿರುವಿನಲ್ಲಿ ಬಿಸಾಡಿ ಅಪಘಾತದಂತೆ ಬಿಂಬಿಸಲು ಯತ್ನಿಸಲಾಗಿದೆ.

ಪ್ರಕರಣದ ಬಳಿಕ ಪತ್ನಿ ಹಾಗೂ ಪ್ರಿಯಕರ ಅನುಮಾನ ತಪ್ಪಿಸಲು ಹೈಡ್ರಾಮಾ ನಡೆಸಿದ್ದರು ಎನ್ನಲಾಗಿದೆ. ಸದ್ಯ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರ ವಿಚಾರಣೆ ಮುಂದುವರೆದಿದೆ.

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ; ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

0

ಚಾಮರಾಜನಗರ: ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದಲ್ಲಿ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಮೊದಲ ಆರೋಪಿಯಾಗಿ ಹೆಸರು ಬಂದ ಇಮ್ಮಡಿ ಮಹದೇವಸ್ವಾಮಿ ಅವರ ಬಗ್ಗೆ ಹೈಕೋರ್ಟ್‌ ಅನಾರೋಗ್ಯದ ಕಾರಣದಿಂದ ಜಾಮೀನು ನೀಡಿದ್ದಿತ್ತು. ಎರಡನೇ ಆರೋಪಿ ಅಂಬಿಕಾ, ಮೂರನೇ ಆರೋಪಿ ಮಾದೇಶ ಮತ್ತು ನಾಲ್ಕನೇ ಆರೋಪಿ ದೊಡ್ಡಯ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾ ನ್ಯಾಯಾಲಯವು ಈ ಅರ್ಜಿಗಳನ್ನು ನಿರಾಕರಿಸಿದೆ. ಹೀಗಾಗಿ ಮೊದಲ ಆರೋಪಿಗೆ ಜಾಮೀನು ನೀಡಿದ ಬಳಿಕ ಸಂತ್ರಸ್ತರು ಪ್ರತಿಭಟನೆ ನಡೆಸಿದ್ದರು.

ಚಿಕ್ಕಮಗಳೂರು: ಹಿಂದೂ ಮಹಿಳೆಯ ಮನೆದಲ್ಲಿ ಕಾಂಗ್ರೆಸ್ ಮುಖಂಡ ಪತ್ತೆ, ಯುವಕರಿಂದ ಹಲ್ಲೆ; ವಿಡಿಯೋ ವೈರಲ್

0

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ವಿವಾಹಿತ ಹಿಂದೂ ಮಹಿಳೆಯ ಮನೆಗೆ ತೆರಳಿದ್ದ ಕಾಂಗ್ರೆಸ್ ಮುಖಂಡನೊಬ್ಬ ಸ್ಥಳೀಯ ಯುವಕರಿಂದ ಹಲ್ಲೆಗೆ ಒಳಗಾದ ಘಟನೆ ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಚಿಕ್ಕಮಗಳೂರು ನಗರದ ಗಾಂಧಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಇದ್ದುದನ್ನು ಗಮನಿಸಿದ ಅಕ್ಕಪಕ್ಕದ ಮನೆಯ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಪ್ರಶ್ನಿಸಿ ಯುವಕರು ಮುಖಂಡನಿಗೆ ಥಳಿಸಿರುವುದಾಗಿ ತಿಳಿದುಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಘಟನೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ಈ ಪ್ರಕರಣದ ಬಗ್ಗೆ ಮಹಿಳೆಯು ಸ್ವತಃ ಒಂದು ವಿಡಿಯೋ ಹಂಚಿಕೊಂಡಿದ್ದು, ರಾಹಿಲ್ ಶರೀಫ್ ತನ್ನ ಸ್ನೇಹಿತನಾಗಿದ್ದು, ತಾನು ಅಸ್ವಸ್ಥರಾಗಿದ್ದ ಕಾರಣ ಔಷಧಿ ನೀಡಲು ಮನೆಗೆ ಬಂದಿದ್ದರು ಎಂದು ಸ್ಪಷ್ಟನೆ ನೀಡಿದ್ದಾಳೆ. ಆ ಸಮಯದಲ್ಲಿ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ವೈರಲ್ ಆಗಿರುವ ವಿಡಿಯೋ ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ಅಪರಾಧಗಳು ಇಳಿಕೆಯಾಗಿವೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ” – ಬಿಜೆಪಿ ಆರೋಪಕ್ಕೆ ಗೃಹ ಸಚಿವ ಪರಮೇಶ್ವರ ತಿರುಗೇಟು

0

ಬೆಂಗಳೂರು, ಫೆ.5: ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ಭಾರೀ ಗದ್ದಲದ ನಡುವೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ತೀವ್ರವಾಗಿ ತಿರಸ್ಕರಿಸಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ ಪ್ರಶ್ನೆಗಳಿಗೆ ಅಧಿಕೃತ ಅಪರಾಧ ಅಂಕಿಅಂಶಗಳ ಮೂಲಕ ಉತ್ತರ ನೀಡಿದ್ದಾರೆ.

ಬಿಜೆಪಿ ನಾಯಕರು ತಮ್ಮ ಗೃಹ ಸಚಿವರ ಅವಧಿಯ ಅಂಕಿಅಂಶಗಳನ್ನು ಮರೆತಂತೆ ಕಾಣುತ್ತಿದ್ದಾರೆ ಎಂದು ಪರಮೇಶ್ವರ ಹೇಳಿದರು. ಆರ್. ಅಶೋಕ ಗೃಹ ಸಚಿವರಾಗಿದ್ದ 2011–2013ರ ಅವಧಿಯಲ್ಲಿ ರಾಜ್ಯದಲ್ಲಿ 4,121 ಕೊಲೆ ಪ್ರಕರಣಗಳು, 582 NDPS ಪ್ರಕರಣಗಳು ಹಾಗೂ 995 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು. ಬಸವರಾಜ ಬೊಮ್ಮಾಯಿ (2019–20) ಅವಧಿಯಲ್ಲಿ 2,554 ಕೊಲೆಗಳು, 8,317 NDPS ಪ್ರಕರಣಗಳು ಮತ್ತು 19,157 ಸೈಬರ್ ಅಪರಾಧ ಪ್ರಕರಣಗಳು ನಡೆದಿವೆ. ಆರಗ ಜ್ಞಾನೇಂದ್ರ ಅವರ ಅವಧಿಯಲ್ಲಿ 2,417 ಕೊಲೆಗಳು ಮತ್ತು 24,486 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಇದಕ್ಕೆ ಹೋಲಿಸಿದರೆ, ನಾನು ಗೃಹ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕೊಲೆ ಪ್ರಕರಣಗಳು ಕ್ರಮೇಣ ಇಳಿಕೆಯಾಗಿವೆ. ಮೊದಲ ವರ್ಷ 1,322, ನಂತರ 1,308 ಮತ್ತು ಇತ್ತೀಚೆಗೆ 1,131ಕ್ಕೆ ಇಳಿದಿವೆ. ಕಳೆದ ಎರಡು ವರ್ಷಗಳಲ್ಲಿ ಅಪರಾಧ ಪ್ರಮಾಣ ಹೆಚ್ಚಾಗಿಲ್ಲ ಎಂಬುದಕ್ಕೆ ಇದು ಸ್ಪಷ್ಟ ಸಾಕ್ಷಿ ಎಂದು ಪರಮೇಶ್ವರ ತಿಳಿಸಿದರು.

ಮಾದಕ ವಸ್ತುಗಳ ವಿರುದ್ಧ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, 2023ರಲ್ಲಿ 133 ಕೋಟಿ ರೂ. ಮೌಲ್ಯದ 10,630 ಕೆಜಿ ಗಾಂಜಾ, 2024ರಲ್ಲಿ 264 ಕೋಟಿ ರೂ. ಮೌಲ್ಯದ 6,136 ಕೆಜಿ ಮತ್ತು 2025ರಲ್ಲಿ 308 ಕೋಟಿ ರೂ. ಮೌಲ್ಯದ 6,219 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಸುಳ್ವಾಡಿ ವಿಷಪ್ರಸಾದ ದುರಂತ: ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಜಿಲ್ಲಾ ನ್ಯಾಯಾಲಯ

0

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಈ ಪ್ರಕರಣದ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಅನಾರೋಗ್ಯದ ಹಿನ್ನೆಲೆ ಈಗಾಗಲೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಎರಡನೇ ಆರೋಪಿ ಅಂಬಿಕಾ, ಮೂರನೇ ಆರೋಪಿ ಮಾದೇಶ ಹಾಗೂ ನಾಲ್ಕನೇ ಆರೋಪಿ ದೊಡ್ಡಯ್ಯ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಮೊದಲ ಆರೋಪಿಗೆ ಜಾಮೀನು ನೀಡಿದ ನಂತರ ಸಂತ್ರಸ್ತ ಕುಟುಂಬಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಪ್ರಕರಣದ ಗಂಭೀರತೆ, ಸಾರ್ವಜನಿಕ ಭದ್ರತೆ ಹಾಗೂ ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ಪರಿಗಣಿಸಿ ನ್ಯಾಯಾಲಯ ಉಳಿದ ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ ಎನ್ನಲಾಗಿದೆ.

ಸುಳ್ವಾಡಿ ವಿಷಪ್ರಸಾದ ದುರಂತ ರಾಜ್ಯವನ್ನೇ ಬೆಚ್ಚಿಬೀಳಿಸಿದ ಪ್ರಕರಣವಾಗಿದ್ದು, ನ್ಯಾಯಾಲಯದ ಈ ಆದೇಶವು ಸಂತ್ರಸ್ತ ಕುಟುಂಬಗಳಿಗೆ ಸ್ವಲ್ಪಮಟ್ಟಿನ ನೆಮ್ಮದಿ ತಂದಿದೆ.

ಭದ್ರಪ್ಪ ಲೇಔಟ್ ಬಳಿ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ!

0

ಬೆಂಗಳೂರು:- ಭದ್ರಪ್ಪ ಲೇಔಟ್ ಸಮೀಪ ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಂಪನಿಯ ಬಸ್ ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ವೇಳೆ ಕೆಲ ಉದ್ಯೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳಿಗೆ ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಈ ಸಂಬಂಧ ಸಂಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯಪುರ| ಅಗ್ನಿ ಅವಘಡಕ್ಕೆ ಸುಟ್ಟು ಕರಕಲಾದ ಸರ್ವಿಸ್ ಸೆಂಟರ್; 20ಕ್ಕೂ ಹೆಚ್ಚು ಕಾರುಗಳು ಭಸ್ಮ!

0

ವಿಜಯಪುರ:- ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದಲ್ಲಿ ಜರುಗಿದೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್‌ ಸೆಂಟರ್‌ನಲ್ಲಿ ಈ ಬೆಂಕಿ ದುರಂತ ಸಂಭವಿಸಿದೆ. ಘಟನೆಯಲ್ಲಿ ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವೀಸ್ ಸೆಂಟರ್ ಸುಟ್ಟು ಭಸ್ಮವಾಗಿದೆ. ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಕಾರುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಗದಗ|ಕ್ರೂಸರ್- ಕ್ಯಾಂಟರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ | ಮೂವರು ಸ್ಥಳದಲ್ಲೇ ಸಾವು, 15 ಜನರಿಗೆ ಗಾಯ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ, ಪರಿಶೀಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ  ಸಾವನ್ನಪ್ಪಿ, ಹದಿನೈದಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ಗಜೇಂದ್ರಗಡದ ಶಿವಾಜಿಪೇಟಿಯ
55 ವರ್ಷದ ಮರಿಯಂಬ ದಾದೇಸಾಬ್ ಹುನಗುಂದ, 45 ವರ್ಷದ ಅನ್ನಪೂರ್ಣ ಲಕ್ಷ್ಮಣ ಚಂಗಳಿ ಹಾಗೂ 30ವರ್ಷದ ಸುಜಾತ ರಾಜಪ್ಪ ಹೊಸಮನಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೂಸರ್ ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ, ಕ್ರೂಸರ್ ವಾಹನದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಮೃತರು ಗಜೇಂದ್ರಗಡ ಶಿವಾಜಿ ಪೇಟೆಯ ಕಾರ್ಮಿಕರಾಗಿದ್ದು, ಗಜೇಂದ್ರಗಡದಿಂದ ರೋಣ ಕಡೆಗೆ ಕಡಲೆ ಕೀಳುವ ಕೆಲಸಕ್ಕಾಗಿ ತೆರಳುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ ರೋಣದಿಂದ ಗಜೇಂದ್ರಗಡದತ್ತ ಹೊರಟಿದ್ದ ಕ್ಯಾಂಟರ್ ಲಾರಿ ಅಪಘಾತಕ್ಕೆ ಕಾರಣವಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ರೋಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!