Home Blog Page 6

ಅಮೆರಿಕಾ ಪ್ರವಾಸದಲ್ಲಿ ಯಶ್‌ ಜೋಡಿ: ಪತ್ನಿಯನ್ನು ಎತ್ತಿ ಮುದ್ದಾಡಿದ ರಾಕಿಂಗ್‌ ಸ್ಟಾರ್‌

ಸ್ಯಾಂಡಲ್‌ ವುಡ್‌ ನ ಮುದ್ದಾದ ಜೋಡಿ ಯಶ್‌ ಹಾಗೂ ರಾಧಿಕಾ ಪಂಡಿತ್‌ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಸದ್ಯ ರಾಧಿಕ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಮುದ್ದಾದ ಫೋಟೋವೊಂದನ್ನ ಹಂಚಿಕೊಂಡಿದ್ದು ಈ ಪೊಟೋ ನೋಡಿ ಅಭಿಮಾನಿಗಳು ಸಖತ್‌ ಖುಷಿಯಾಗಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ವೆಕೇಶನ್​ಗೆ ಅಮೆರಿಕಾಗೆ ತೆರಳಿದ್ದಾರೆ. ಯಶ್ ಅವರು ಇಷ್ಟು ದಿನ ‘ಟಾಕ್ಸಿಕ್‘ ಹಾಗೂ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು. ಈ ಕಾರಣದಿಂದ ಬ್ರೇಕ್ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಇಬ್ಬರೂ ಎಲ್ಲಿಯೂ ಹೊರಗೆ ತೆರಳಿ ಸುತ್ತಾಡಲು ಸಾಧ್ಯ ಆಗಿರಲಿಲ್ಲ. ಇದೀಗ ಯಶ್‌ ಬಿಡುವು ಪಡೆದುಕೊಂಡಿದ್ದು ಪತ್ನಿಯೊಂದಿಗೆ ವಿದೇಶಕ್ಕೆ ತೆರಳಿದ್ದಾರೆ.

ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಯಶ್‌ ಹಾಗೂ ರಾಧಿಕಾಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಇವರ ದಾಂಪತ್ಯಕ್ಕೆ 9 ವರ್ಷ ತುಂಬುತ್ತಾ ಬಂದಿದ್ರು ಪ್ರೀತಿ ಮಾತ್ರ ಕೊಂಚವೂ ಕಮ್ಮಿಯಾಗಿಲ್ಲ. ಶೂಟಿಂಗ್‌ ನಲ್ಲಿ ಯಶ್‌ ಎಷ್ಟೇ ಬ್ಯುಸಿಯಾಗಿದ್ರು ಕುಟುಂಬಕ್ಕೆ ಸದಾ ಸಮಯ ನೀಡುತ್ತಾರೆ. ಸಮಯ ಸಿಕ್ಕಾಗೆಲ್ಲ ಹೆಂಡತಿ ಮಕ್ಕಳ ಜೊತೆ ಸಮಯ ಕಳೆಯುತ್ತಾರೆ.

ಗಣೇಶ್‌ ಹುಟ್ಟುಹಬ್ಬಕ್ಕೆ ‘Yours Sincerely Raamʼ ಚಿತ್ರದ ಪೋಸ್ಟರ್‌ ರಿಲೀಸ್‌

ಇಂದು ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಖುಷಿಯನ್ನು ಮತ್ತಷ್ಟು ಹೆಚ್ಚಿಸಲು ಗಣೇಶ್‌ ಹಾಗೂ ರಮೇಶ್ ಅರವಿಂದ್ ನಟನೆಯ ‘Yours Sincerely Raamʼ ಚಿತ್ರತಂಡ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದೆ. ಈ ಮೂಲಕ ಗಣೇಶ್‌ ಬರ್ತಡೇಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದೆ.

‘Yours Sincerely Raamʼ ಸಿನಿಮಾದಲ್ಲಿ ಗಣೇಶ್‌ ಹಿಂದೆಂದೂ ಕಾಣದ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಂಜನೇಯನ ಅವತಾರದಲ್ಲಿ ಗಣೇಶ್‌ ಕಾಣಿಸಿಕೊಂಡಿದ್ದಾರೆ. ಹಿಮಾಲಯದ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ರಾಮ ಸೈಕಲ್ ಮೇಲೆ ಕುಳಿತಿದ್ದು, ಭಜರಂಗಿ ಭುಜದಲ್ಲಿ ಪೋಸ್ಟ್ ಮ್ಯಾನ್ ಬ್ಯಾಗ್ ಕಾಣಿಸುತ್ತದೆ. ಸದ್ಯ ಚಿತ್ರತಂಡ ಬಿಡುಗಡೆ ಮಾಡಿರುವ ಪೋಸ್ಟರ್‌ ಸಾಕಷ್ಟು ಕುತೂಹಲ ಮೂಡಿಸಿದೆ.

ʻಪುಷ್ಪಕ ವಿಮಾನ’, ʻಇನ್ಸ್ಪೆಕ್ಟರ್ ವಿಕ್ರಮ್ʼ, ʻಮಾನ್ಸೂನ್ ರಾಗʼದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಎ ಆರ್ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳ್ತಿದ್ದಾರೆ. ಇನ್ನೂ ಐರಾ ಫಿಲ್ಮ್ಸ್ ಮತ್ತು ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ಅಡಿ ಸತ್ಯ ರಾಯಲ Your’s sincerely ರಾಮ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಪೂಜೆ ಸಲ್ಲಿಸಿ, ಅಣ್ಣಾವ್ರ ಆಶೀರ್ವಾದ ಪಡೆದ ಯಶ್‌ ತಾಯಿ

ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ನಿರ್ಮಾಪಕಿಯಾಗಿ ಈಗಾಗಲೇ ಸ್ಯಾಂಡಲ್‌ ವುಡ್‌ ಗೆ ಎಂಟ್ರಿಕೊಟ್ಟಿದ್ದಾರೆ. ಪುಷ್ಪಾ ಅವರು ನಿರ್ಮಾಣ ಮಾಡಿರುವ ಮೊಟ್ಟ ಮೊದಲ ಸಿನಿಮಾ ಬಿಡುಗಡಗೆ ಸಜ್ಜಾಗಿದ್ದ ಇದೇ ವೇಳೆ ರಾಜ್‌ ರಾಜ್‌ ಕುಮಾರ ಸಮಾಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಪುಷ್ಪ ಅವರು ನಿರ್ಮಾಣ ಮಾಡಿರುವ ಮೊದಲ ಸಿನಿಮಾ ‘ಕೊತ್ತಲವಾಡಿ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು (ಜುಲೈ 2) ರಾಜ್‌ ಕುಮಾರ್‌ ಹಾಗೂ ಪುನೀತ್ ರಾಜ್​ಕುಮಾರ್ ಸಮಾಧಿಗೆ ಪುಷ್ಪ ಅವರು ಭೇಟಿ ನೀಡಿ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಪುಷ್ಪ ಅವರು, ‘ಇದೇ ನಮ್ಮ ದೇವಸ್ಥಾನ. ಕನ್ನಡ ಚಿತ್ರರಂಗಕ್ಕೆ ಬುನಾದಿ ಹಾಕಿಕೊಟ್ಟು, ನಮ್ಮನ್ನೆಲ್ಲ ಬೆಳೆಸಿ ಹೋದವರು ಅಣ್ಣಾವ್ರು. ಇವತ್ತಿನಿಂದ ನಮ್ಮ ಸಿನಿಮಾದ ಪ್ರಚಾರ ಶುರು. ಮೊದಲು ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿ ಕೆಲಸ ಆರಂಭಿಸೋಣ ಅಂತ ನಮ್ಮ ತಂಡದ ಜೊತೆ ಚರ್ಚೆ ಮಾಡಿದೆ. ಅವರು ಸರಿ ಎಂದರು’ ಎಂದಿದ್ದಾರೆ.

‘ಅಪ್ಪು ಅವರು ಕೂಡ ನಮ್ಮ ಮನೆ ಮಗ ಇದ್ದಂತೆ. ಆದರೆ ದೇವರ ಆಟ, ವಿಧಿ ಏನೂ ಮಾಡೋಕೆ ಆಗಲ್ಲ. ಪಾರ್ವತಮ್ಮನವರ ಆಶೀರ್ವಾದ ಇದೆ. ಯಶ್ 5 ತಿಂಗಳು ಮಗು ಆಗಿದ್ದಾಗ ಅನುರಾಗ ಅರಳಿತು ಸಿನಿಮಾ ತೋರಿಸಿದ್ದೆ. ನಮ್ಮ ಮೊಮ್ಮಗನಿಗೆ ಕಸ್ತೂರಿ ನಿವಾಸ ಹೊಸ ಪ್ರಿಂಟ್ ತೋರಿಸಿದ್ದೇನೆ. ನಮಗೆ ರಾಜ್​ಕುಮಾರ್ ಮೇಲೆ ಅಷ್ಟು ಅಭಿಮಾನ’ ಎಂದು ಪುಷ್ಪ ಹೇಳಿದ್ದಾರೆ.

‘ಕೊತ್ತಲವಾಡಿ ಸಿನಿಮಾಗೆ ನಮ್ಮ ಪ್ರಚಾರದ ಪ್ಲ್ಯಾನ್ ಏನೂ ಇಲ್ಲ. ಜನರೇ ಪ್ರಚಾರ ಮಾಡುತ್ತಾರೆ. ನೀವು ಅಂದುಕೊಂಡ ತಕ್ಷಣ ಪ್ರಚಾರ ಆಗಲ್ಲ. ಇಲ್ಲಿ ನಮ್ಮದು ಏನೂ ನಡೆಯಲ್ಲ. ಇಷ್ಟ ಆಗಲಿಲ್ಲ ಎಂದರೆ ಇಂಥ ನೂರಾರು ಸಿನಿಮಾಗಳನ್ನು ಜನರು ಮೂಲೆಗೆ ಎಸೆಯುತ್ತಾರೆ. ಜನರಿಗೆ ಬುದ್ಧಿ ಇದೆ. ಪ್ರಚಾರ ಮಾಡಿದ ಮಾತ್ರಕ್ಕೆ ಜನರು ಬಂದು ಸಿನಿಮಾ ನೋಡುತ್ತಾರೆ ಅಂದುಕೊಂಡರೆ ನಾವು ತುಂಬಾ ದಡ್ಡರು’ ಎಂದಿದ್ದಾರೆ.

‘ಸಿನಿಮಾ ಚೆನ್ನಾಗಿ ಇದ್ದರೆ ಜನರು ಚಿತ್ರಮಂದಿರದಲ್ಲಿ ನೋಡುತ್ತಾರೆ. ಮೊದಲ ಮೂರು ದಿನ ನಮಗೆ ಚಾನ್ಸ್ ಕೊಡುತ್ತಾರೆ. ಸಿನಿಮಾದಲ್ಲಿ ಕಂಟೆಂಟ್ ಇದ್ದರೆ ಜನರು ಬಾಯಿ ಮಾತಿನ ಪ್ರಚಾರ ನೀಡುತ್ತಾರೆ. ಇಲ್ಲದಿದ್ದರೆ, ನೆಗೆಟಿವ್ ಕೂಡ ಅಷ್ಟೇ ಬೇಗ ಮಾಡುತ್ತಾರೆ. ನಮ್ಮ ಮೊದಲ ಸಿನಿಮಾಗೆ ಜನರು ತಪ್ಪು-ಸರಿ ಎರಡನ್ನೂ ಹೇಳಲಿ. ನನ್ನ ಪ್ರಕಾರ ನಮ್ಮ ಡೈರೆಕ್ಟರ್ ಚೆನ್ನಾಗಿ ಮಾಡಿದ್ದಾರೆ. ನೀವೆಲ್ಲ ನೋಡಿ ಹೇಳಿ’ ಎಂದು ಪುಷ್ಪ ಹೇಳಿದ್ದಾರೆ.

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದ ಸಾವು!

ಹಾಸನ; ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮದುವೆಯಾದ ಆರು ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ವಿದ್ಯಾ ಮೃತ ನವವಿವಾಹಿತೆ. ಸೋಮಲಾಪುರ ಗ್ರಾಮದ ಶಿವು ಎಂಬುವವರ ಜೊತೆ ವಿವಾಹವಾಗಿದ್ದರು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು,

ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು. ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಮಂಗಳವಾರ ಸಂಜೆ ಅರಸೀಕೆರೆ ರೈಲ್ವೆ ಟ್ರ‍್ಯಾಕ್ ಬಳಿ ವಿದ್ಯಾ ಶವವಾಗಿ ಪತ್ತೆಯಾಗಿದ್ದಾರೆ.

ಮದುವೆಯಾದ ಆರಂಭದಿಂದಲೂ ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು. ಇದೀಗ ಮಗಳನ್ನು ಅವರೇ ಹತ್ಯೆ ಮಾಡಿದ್ದಾರೆ ಎಂದು ಮೃತ ವಿದ್ಯಾಳ ಕುಟುಂಬಸ್ಥರು ಆರೋಪಿಸಿದ್ದಾರೆ.

ನನ್ನ ಹೇಳಿಕೆಗೆ ಈಗಲೂ ಬದ್ಧ: ಶಿವಕುಮಾರ್ ಕೊಟ್ಟಿರುವ ನೋಟಿಸ್’ಗೆ ಉತ್ತರಿಸುತ್ತೇನೆ – ಇಕ್ಬಾಲ್ ಹುಸ್ಸೇನ್!

ರಾಮನಗರ:- ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆ ಡಿಕೆ ಶಿವಕುಮಾರ್ ಹೊರಡಿಸಿರುವ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಇಕ್ಬಾಲ್ ಹುಸ್ಸೇನ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಶಿವಕುಮಾರ್​ ನಮ್ಮ ಅಧ್ಯಕ್ಷರು, ಪಕ್ಷದ ಸದಸ್ಯರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸ್ವಾತಂತ್ರ್ಯ ಅವರಿಗಿದೆ, ನನಗೆ ನೋಟೀಸ್ ನೀಡಿ 7ದಿನಗೊಳಗೆ ಉತ್ತರ ನೀಡುವಂತೆ ಹೇಳಿದ್ದಾರೆ, ಉತ್ತರ ಕೊಡುತ್ತೇನೆ,

ಅದರೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಹೇಳಿದರು. ಬೇರೆ ಶಾಸಕರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತಾಡಿದ್ದಾರೆ, ಅವರಿಗಿಲ್ಲದ ನೋಟೀಸ್ ನಿಮಗ್ಯಾಕೆ ಅಂತ ಕೇಳಿದರೆ, ಮಾಧ್ಯಮದವರು ಅವರನ್ನೇ ಕೇಳಬೇಕು ಅಂತ ಇಕ್ಬಾಲ್ ಹೇಳಿದರು.

ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ: ಯತ್ನಾಳ್ ಆರೋಪ

ವಿಜಯಪುರ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರಲ್ಲಿ ಮಾತಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ನಮ್ಮ ಹೋರಾಟವನ್ನು ತಡೆಯಲು ಪ್ರಯತ್ನಿಸಿದ್ರೂ,

ನಾವು ಕೋರ್ಟ್ ಮುಖಾಂತರ ಹೋರಾಟ ಮುಂದುವರೆಸಿದ್ದೇವೆ. ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಕಾನೂನು ಹೋರಾಟ ಮಾಡಿದ್ದಕ್ಕೆ ಈಗ ಜಯ ಸಿಕ್ಕಿದೆ ಎಂದ್ರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆನಾನು, ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಕಾನೂನು ಹೋರಾಟ ಮಾಡಿದ್ದೇವೆ. ನಮ್ಮ ಹೋರಾಟದ ಫಲವಾಗಿ ಇಂದು ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ ಎಂದು ಹೇಳಿದರು.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಸರ್ಕಾರದ ಅಮಾನತು ಆದೇಶ ಸರಿ ಇದೆ – ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ ಮೆಟ್ಟಿಲೇರಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

ನಾವು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದೇವೆ,  ಸರ್ಕಾರದ ಅಮಾನತು ಆದೇಶ ಸರಿ ಇದೆ ಅನ್ನೋದು ನಮ್ಮ ವಾದ ಎಂದರು. ಬಳ್ಳಾರಿ ಜೈಲಿನಲ್ಲಿ ಕೈದಿಗಳ ಗದ್ದಲ, ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮತ್ತೆ ಆ ರೀತಿ ಆಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಧಾರವಾಡ ಎಸಿಪಿ ನಾರಾಯಣ ಬರಮಣ್ಣಿ ವಿಆರ್​ಎಸ್ ವಿಚಾರವಾಗಿ ಮಾತನಾಡಿ, ಅವರು ಹಾಗೇನೂ ಮಾಡಲ್ಲ, ಆ ರೀತಿ ಏನೂ ಇಲ್ಲ. ಸಚಿವ ಹೆಚ್.ಕೆ. ಪಾಟೀಲ್ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಪೋಸ್ಟಿಂಗ್ ಕೊಡ್ತೇವೆ. ಮುಖ್ಯಮಂತ್ರಿಗಳು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಲಿಲ್ಲ. ಆ ಸಂದರ್ಭದಲ್ಲಿ ಸಿಎಂ ಹಾಗೆ ನಡೆದುಕೊಂಡರು ಅಷ್ಟೇ ಎಂದರು.

ಪತ್ನಿ, ಮಗಳ ಜೀವನ ನಿರ್ವಹಣೆಗೆ ಮಾಸಿಕ 4 ಲಕ್ಷ ನೀಡಲು ಮೊಹಮ್ಮದ್ ಶಮಿಗೆ ಕೋರ್ಟ್ ಆದೇಶ!

ಕೊಲ್ಕತ್ತಾ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ಶಮಿ ಅವರು ತಮ್ಮ ಮಾಜಿ ಪತ್ನಿ ಹಸೀನ್ಜಹಾನ್ಅವರಿಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡಬೇಕೆಂದು ಕೊಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ.

ಮೊಹಮ್ಮದ್ ಶಮಿ 2014 ರಲ್ಲಿ ಹಸಿನ್ ಜಹಾನ್ ಅವರನ್ನು ವಿವಾಹವಾಗಿದ್ದರು. 2015 ರಲ್ಲಿ ದಂಪತಿಗೆ ಮಗಳು ಜನಿಸಿದ್ದರು. ಆದರೆ 2018 ರಲ್ಲಿ ಶಮಿ ವಿರುದ್ಧ ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ ಮತ್ತು ಮ್ಯಾಚ್ ಫಿಕ್ಸಿಂಗ್ನಂತಹ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಹಸಿನ್ ಜಹಾನ್ ಸುದ್ದಿಯಾಗಿದ್ದರು.

ಅಷ್ಟೇ ಅಲ್ಲದೆ ಶಮಿ ಮತ್ತು ಅವರ ಕುಟುಂಬದ ವಿರುದ್ಧ ಹಸಿನ್ ಕೋಲ್ಕತ್ತಾದ ಜಾದವ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ವೇಳೆ ಮಾಸಿಕ 10 ಲಕ್ಷ ರೂ. ಜೀವನಾಂಶವನ್ನು ಸಹ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಪ್ರಕರಣದ ತೀರ್ಪು ಬಂದಿದ್ದು, ತನ್ನಿಂದ ದೂರವಾಗಿರುವ ಪತ್ನಿ ಹಸಿನ್ ಜಹಾನ್ ಮತ್ತು ಅವರ ಮಗಳಿಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡುವಂತೆ ಕೊಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಮೊತ್ತವು ಕಳೆದ ಏಳು ವರ್ಷಗಳವರೆಗೆ ಅನ್ವಯವಾಗುತ್ತದೆ. ಅಂದರೆ ಶಮಿ ಅವಧಿಗೆ ಬಾಕಿ ಹಣವನ್ನು ಸಹ ಪಾವತಿಸಬೇಕಾಗುತ್ತದೆ. ಅಂದರೆ ಅವರು ಹಸಿನ್ ಜಹಾನ್ ಗೆ 3 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರ ಪೀಠವು ಜುಲೈ 1, 2025 ರಂದು ತೀರ್ಪು ನೀಡಿದ್ದು. ಶಮಿ ತನ್ನ ಪತ್ನಿ ಹಸಿನ್ ಜಹಾನ್ಗೆ ಪ್ರತಿ ತಿಂಗಳು 1.5 ಲಕ್ಷ ರೂ. ಮತ್ತು ಮಗಳು ಐರಾಗೆ 2.5 ಲಕ್ಷ ರೂ. ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

 

ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಕೊನೆಗೂ ಮುಹೂರ್ತ ಫಿಕ್ಸ್: ಭಾರತ-ಪಾಕ್ ಮುಖಾಮುಖಿ ಯಾವಾಗ..?

ಏಷ್ಯಾಕಪ್ ಟೂರ್ನಿಯ 17ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಟೂರ್ನಿ ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಅದರಂತೆ ಸೆಪ್ಟೆಂಬರ್​ ಮೊದಲ ವಾರದಿಂದ ಏಷ್ಯಾಕಪ್ ಶುರುವಾಗುವುದು ಬಹುತೇಕ ಖಚಿತವಾಗಿದೆ.

ಹೌದು ಸೆ.21 ರಂದು ಫೈನಲ್‌ ಪಂದ್ಯ ನಡೆಯಲಿದೆ. 17 ದಿನಗಳ ಟೂರ್ನಿಯ ವೇಳಾಪಟ್ಟಿ ಬಹುತೇಕ ಪೂರ್ಣಗೊಂಡಿದೆ. ಭಾರತ ಸೇರಿದಂತೆ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ರಾಷ್ಟ್ರಗಳು ತಮ್ಮ ಸರ್ಕಾರಗಳಿಂದ ಅನುಮತಿ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ.

ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಯುಎಇ ಟೂರ್ನಿಯಲ್ಲಿ ಭಾಗವಹಿಸಲಿವೆ. ಗುಂಪುಹಂತ ಮತ್ತು ಸೂಪರ್‌ ಫೋರ್‌ ವಿಧಾನದಲ್ಲಿ ಸ್ಪರ್ಧೆಗಳು ನಡೆಯಲಿವೆ. ಪಹಲ್ಗಾಮ್‌ ಘಟನೆ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದು ಉಭಯ ದೇಶಗಳ ನಡುವಿನ ಕ್ರಿಕೆಟ್‌ ಪಂದ್ಯದ ಬಗ್ಗೆಯೂ ಪ್ರಶ್ನಾರ್ಥಕ ಚಿಹ್ನೆ ಇತ್ತು. ಈ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ!

ಚಿಕ್ಕಬಳ್ಳಾಪುರ:- ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ. ನಿಮಗ್ಯಾಕೆ ಅನುಮಾನ ಬಂದಿದೆ? ಅಂತ ಪ್ರಶ್ನಿಸಿದ್ರು.

ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು, ಸತ್ಯ ಹೇಳೋದು ಅವರಿಗೆ ಗೊತ್ತೇ ಇಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. 5 ವರ್ಷ ನಾವೇ ಅಧಿಕಾರದಲ್ಲಿ ಇರ್ತೇವೆ. ನಮ್ಮ ಸರ್ಕಾರ ಬಂಡೆ ತರ ಇರುತ್ತೆ ಎಂದರು. ಬಿಜೆಪಿಯವರು ಹಗಲು ಕನಸು ಕಾಣ್ತಿದ್ದಾರೆ.

ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಡಿಕೆ ಶಿವಕುಮಾರ್ ಹೇಳೋ ಹಾಗೆ ಏನೂ ಸಾಕ್ಷಿ ಗುಡ್ಡೆ ಬಿಟ್ಡು ಹೋಗಿದ್ದಾರೆ. ಕುಮಾರಸ್ವಾಮಿ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಏನು ಮಾಡಿದ್ರು? ಸುಳ್ಳು ಹೇಳಿಕೊಂಡು ಜನರನ್ನ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಬಿಟ್ರೆ, ಬೇರೆನೂ ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.

error: Content is protected !!