ಗದಗ: ರೋಗಿಗಳ ರಕ್ಷಣೆಗೆ ಬಳಸಬೇಕಾದ ಆ್ಯಂಬುಲೆನ್ಸ್‌ನಲ್ಲಿ ಜನರನ್ನು ಕುರಿಗಳಂತೆ ತುಂಬಿಕೊಂಡು ಸಾಗಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಗದಗ ನಗರದ ಜಿಮ್ಸ್ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್‌ನಲ್ಲಿ ಜನರನ್ನು ಸಾಗಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕಾರ್ಯವನ್ನು ಆ್ಯಂಬುಲೆನ್ಸ್ ಚಾಲಕನೇ ದುರುಪಯೋಗಪಡಿಸಿಕೊಂಡು ನಡೆಸಿದ್ದಾನೆ ಎನ್ನಲಾಗಿದೆ.
ನಿಯಮಾನುಸಾರ ಆ್ಯಂಬುಲೆನ್ಸ್‌ಗಳನ್ನು ರೋಗಿಗಳ ಸಾಗಾಟಕ್ಕಾಗಿ ಮಾತ್ರ ಬಳಸಬೇಕಾಗಿದೆ. ಆದರೆ ಜಿಮ್ಸ್ ಆಸ್ಪತ್ರೆಯಿಂದ ಗದಗ ನಗರಕ್ಕೆ ಜನರನ್ನು ಸಾಗಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಆ್ಯಂಬುಲೆನ್ಸ್ ಬಂದು ನಿಲ್ಲುತ್ತಿದ್ದಂತೆಯೇ ಜನರು ಮುಗಿಬಿದ್ದು ಏರುತ್ತಿರುವ ದೃಶ್ಯಗಳು ಕಾಣಿಸುತ್ತಿದ್ದು, ನಿತ್ಯವೂ ಇದೇ ರೀತಿಯಲ್ಲಿ ಜನರ ಸಾಗಾಟ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ.

