ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ ಘಟನೆ ನಡೆದಿದೆ.
ಡ್ರೋನ್ ದಾಳಿಯ ನಂತರ ಸುರಕ್ಷತಾ ಕ್ರಮವಾಗಿ ದುಬೈ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಡ್ರೋನ್ ಬಿದ್ದ ಪ್ರದೇಶದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸಾವು-ನೋವಿನ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ದುಬೈಗೆ ಆಗಮಿಸುವ ಹಾಗೂ ದುಬೈನಿಂದ ಹೊರಡುವ ಎಲ್ಲಾ ವಿಮಾನಗಳ ಸಂಚಾರವನ್ನು ಮುಂದಿನ ಸೂಚನೆ ಬರುವವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಎಮಿರೇಟ್ಸ್ ಸರ್ಕಾರ ತಿಳಿಸಿದೆ.
ಇದೇ ವೇಳೆ ಫೆಬ್ರವರಿ 28ರಿಂದ ಮಾರ್ಚ್ 31ರವರೆಗೆ ಪ್ರಯಾಣಕ್ಕೆ ಬುಕ್ ಮಾಡಿಕೊಂಡಿರುವ ಪ್ರಯಾಣಿಕರಿಗೆ ಟಿಕೆಟ್ ಮರು ಬುಕ್ ಮಾಡಿಕೊಳ್ಳುವ ಅಥವಾ ಮರುಪಾವತಿ ಪಡೆಯುವ ಅವಕಾಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

