Home Blog Page 8

ಪ್ರೀತಿಸುತ್ತಿದ್ದ ಮಂಗಳಮುಖಿ–ಯುವಕ ಅನುಮಾನಾಸ್ಪದ ಸಾವು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

0

ಬಳ್ಳಾರಿ: ನಗರದ ಕೆಎಂಎಫ್ ಡೈರಿ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ ಮಂಗಳಮುಖಿ ಸುಹಾಸಿನಿ (29) ಮತ್ತು ಯುವಕ ಶೇಖರ್ ಅಲಿಯಾಸ್ ಮಣಿ (31) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಅನೇಕ ಪ್ರಶ್ನೆಗಳನ್ನು ಎಬ್ಬಿಸಿದೆ. ಮನೆಯ ಕಿಟಕಿಗೆ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ.

ಶೇಖರ್ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದವರಾಗಿದ್ದು, ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದರು. ಸುಹಾಸಿನಿ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದವರಾಗಿದ್ದರು. ಕಳೆದ ಆರು ವರ್ಷಗಳಿಂದ ಇಬ್ಬರೂ ಒಟ್ಟಿಗೆ ವಾಸವಾಗಿದ್ದರು ಎನ್ನಲಾಗಿದೆ.

ಘಟನೆಯ ಮಾಹಿತಿ ಸಿಕ್ಕ ತಕ್ಷಣ ಬ್ರೂಸ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ಹಿನ್ನಲೆಯಲ್ಲಿ ಹಲವು ಕೋನಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂಗಳಮುಖಿ ಸಮುದಾಯದ ಸದಸ್ಯರು ಶೇಖರ್ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಉದ್ಭವಿಸಿದ ತಕರಾರಿನಿಂದ ಸುಹಾಸಿನಿ ಕೊಲೆಯಾಗಿರಬಹುದು, ನಂತರ ಶೇಖರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಕುಟುಂಬಸ್ಥರ ದುಃಖ ಮತ್ತು ಆಕ್ರಂದನ ಮನಕಲಕುವಂತಿದೆ. ಆತ್ಮಹತ್ಯೆಯೋ ಅಥವಾ ಪೂರ್ವಯೋಜಿತ ಕೊಲೆಯೋ ಎಂಬುದನ್ನು ಮರಣೋತ್ತರ ವರದಿ ಮತ್ತು ತನಿಖೆಯ ನಂತರವೇ ಸ್ಪಷ್ಟಪಡಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

15.42 ಲಕ್ಷ ಕಳ್ಳತನ: ಅಣ್ಣನ ಮನೆ ದೋಚಿದ ತಮ್ಮನ ಬಂಧನ

0

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣವು ಕುಟುಂಬದ ನಂಬಿಕೆಯನ್ನು ಕದಡುವಂತಾಗಿದೆ. ಅಣ್ಣನ ಮನೆಯನ್ನೇ ಕಳ್ಳತನ ಮಾಡಿದ ಆರೋಪದಲ್ಲಿ ತಮ್ಮ ಮಹಮ್ಮದ ಅಲಿ ಹಂಚಿನಮನಿ (36) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಫೆಬ್ರುವರಿ 14, 2026ರಂದು ಸಂಜೆ 5 ಗಂಟೆಯಿಂದ ರಾತ್ರಿ 11 ಗಂಟೆಯೊಳಗೆ ಈ ಘಟನೆ ನಡೆದಿದೆ. ಮಹಮ್ಮದ ಗೌಸ್ ಹಂಚಿನಮನಿ ಅವರ ಮನೆಗೆ ಕಳ್ಳರು ಅಡುಗೆ ಕೋಣೆಯ ಮೇಲ್ಛಾವಣಿಯ ಹೆಂಚನ್ನು ಕತ್ತರಿಸಿ ಪ್ರವೇಶಿಸಿದ್ದಾರೆ. ಮನೆಯಲ್ಲಿ ಇರಿಸಿದ್ದ 15 ಲಕ್ಷ 42 ಸಾವಿರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ಕದ್ದೊಯ್ದಿದ್ದಾರೆ.

ಪ್ರಕರಣ ಗಂಭೀರವಾಗಿದ್ದರಿಂದ ಹಾನಗಲ್ ಪೊಲೀಸರು ತಕ್ಷಣ ಸ್ಥಳ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು, ಶ್ವಾನದಳ ಹಾಗೂ ಜಿಲ್ಲಾ ತಾಂತ್ರಿಕ ಸಿಬ್ಬಂದಿಯನ್ನು ಕರೆಸಿ ಪರಿಶೀಲನೆ ಕೈಗೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಹೆಚ್ಚುವರಿ ಎಸ್ಪಿ ಎಲ್.ವೈ. ಶಿರಕೋಳ, ಶಿಗ್ಗಾಂವ್ ಡಿವೈಎಸ್‌ಪಿ ಗುರುಶಾಂತಪ್ಪ ಕೆ.ವಿ ಹಾಗೂ ಹಾನಗಲ್ ಸಿಪಿಐ ಬಸವರಾಜ ಹಳಬಣ್ಣ ಮಾರ್ಗದರ್ಶನದಲ್ಲಿ ಪಿಎಸ್‌ಐ ಸಂಪತ್ ಎಸ್ ಆನಿಕಿವಿ ನೇತೃತ್ವದ ತಂಡ ತನಿಖೆ ತೀವ್ರಗೊಳಿಸಿತು.

ತನಿಖೆಯಲ್ಲಿ ಶಂಕೆ ತಮ್ಮ ಮಹಮ್ಮದ ಅಲಿ ಕಡೆ ತಿರುಗಿತು. ವಿಚಾರಣೆ ನಡೆಸಿದಾಗ ಆರೋಪ ಸಾಬೀತಾಗಿದ್ದು, ಅವರನ್ನು ಬಂಧಿಸಲಾಯಿತು.

ಬಂಧಿತನಿಂದ  38 ಗ್ರಾಂ ಚಿನ್ನದ ಮಾಂಗಲ್ಯ ಸರ – 4.56 ಲಕ್ಷ ರೂ, .23 ಗ್ರಾಂ ಚಿನ್ನದ ನೆಕ್ಲೆಸ್ – 2.76 ಲಕ್ಷ ರೂ., 8 ಗ್ರಾಂ ಬಂಗಾರದ ಚೈನ್ – 96 ಸಾವಿರ ರೂ., 15 ಗ್ರಾಂ ಬಂಗಾರದ ಪದಕ ಸರ – 1.8 ಲಕ್ಷ ರೂ., 22 ಗ್ರಾಂ ತೂಕದ 9 ಉಂಗುರಗಳು – 2.5 ಲಕ್ಷ ರೂ., 135 ಗ್ರಾಂ ಬೆಳ್ಳಿ ಕಾಲು ಚೈನ್ – 35 ಸಾವಿರ ರೂ., 2 ಗ್ರಾಂ ಕಿವಿಯೋಲೆ – 24 ಸಾವಿರ ರೂ., ನಗದು ಹಣ – 31 ಸಾವಿರ ರೂ. ಒಟ್ಟು 15 ಲಕ್ಷ 42 ಸಾವಿರ ರೂಪಾಯಿ ಮೌಲ್ಯದ ಆಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.

ಕುಟುಂಬದೊಳಗಿನ ದ್ರೋಹವೇ ಈ ಪ್ರಕರಣದ ಪ್ರಮುಖ ಆಘಾತ. ಹಾನಗಲ್ ಪೊಲೀಸ್ ತಂಡದ ತ್ವರಿತ ಕಾರ್ಯಾಚರಣೆ ಪ್ರಕರಣವನ್ನು ಬೆಳಕಿಗೆ ತಂದಿದೆ.

“ಹೋದ ವರ್ಷ ನಾನು ಬಯಸಿದ್ದು ಸಿಕ್ಕಿಲ್ಲ… ಆದರೆ ಈ ವರ್ಷ ತೊಗೊಳದೆ ಬಿಡಲ್ಲ..” ಮುಂಡರಗಿಯಲ್ಲಿ ಹೀಗೊಂದು ವಾಮಾಚಾರ!

0

ಗದಗ: ತಂತ್ರಜ್ಞಾನ ಚಂದ್ರನ ಮೇಲೆ ಕಾಲಿಡುವ ಮಟ್ಟಕ್ಕೆ ಬೆಳೆದಿದ್ದರೂ ಕೂಡ ಜನ ಮಾತ್ರ ಇನ್ನೂ ಮಾಟ ಮಂತ್ರಗಳ ಮೂಲಕ ಜನರ ಜನರನ್ನ ಹೆದರಿಸುತ್ತಲೇ ಕಾಲ ಕಳೆಯುತ್ತಿದ್ದಾರೆ.

ಇದೀಗ ಜಿಲ್ಲೆಯ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕ ಸ್ಥಳದಲ್ಲೇ ಈ ಕೃತ್ಯ ನಡೆದಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದ ಮಧ್ಯ ಭಾಗದಲ್ಲಿ ನಕ್ಷತ್ರ ಆಕಾರದಲ್ಲಿ ಚಿಹ್ನೆಗಳು ಹಾಕಿರುವುದು ಕಂಡುಬಂದಿದೆ. ಅಲ್ಲದೆ ಕಪ್ಪು ಬಣ್ಣದ ಗೊಂಬೆ, ಮೊಟ್ಟೆ, ಎಲೆ-ಅಡಿಕೆ, ನಿಂಬೆಹಣ್ಣು ಇತ್ಯಾದಿ ವಸ್ತುಗಳನ್ನು ಇಟ್ಟು ಅಸಾಮಾನ್ಯ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

“ಹೋದ ವರ್ಷ ನಾನು ಬಯಸಿದ್ದು ಸಿಕ್ಕಿಲ್ಲ… ಆದರೆ ಈ ವರ್ಷ ತೊಗೊಳದೆ ಬಿಡಲ್ಲ..” ಎಂಬ ರೀತಿಯ ಬರಹವೂ ಸ್ಥಳದಲ್ಲಿ ಕಾಣಿಸಿಕೊಂಡಿದ್ದು, ಇದರಿಂದ ಸ್ಥಳೀಯರು ಮತ್ತಷ್ಟು ಭಯಭೀತರಾಗಿದ್ದಾರೆ.

ಘಟನೆ ತಿಳಿದ ಬಳಿಕ ಹುಡ್ಕೋ ಕಾಲೋನಿ ನಿವಾಸಿಗಳು ಬಸ್ ನಿಲ್ದಾಣದ ಕಡೆಗೆ ಹೋಗಲು ಸಹ ಹಿಂಜರಿಯುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲೇ ಇಂತಹ ಕೃತ್ಯ ನಡೆದಿರುವುದರಿಂದ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

ನೌಕರರಿಂದ ಬೆಂಗಳೂರು ಚಲೋ: ನಾಳೆ ಸಂಜೆಯಿಂದ KSRTC, BMTC ಸಂಚಾರ ಸ್ಥಗಿತ?

0

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ನಾಳೆ ಸಂಜೆ ಬಳಿಕ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಸಾರಿಗೆ ನೌಕರರು ‘ಬೆಂಗಳೂರು ಚಲೋ’ ಕರೆ ನೀಡಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಸಂಜೆ 4 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದ್ದು, ಬೇಡಿಕೆಗಳ ಕುರಿತು ತೀರ್ಮಾನ ಕೈಗೊಳ್ಳದಿದ್ದರೆ ಸಾರಿಗೆ ಬಂದ್ ಮಾಡುವುದಾಗಿ ನೌಕರರು ಎಚ್ಚರಿಸಿದ್ದಾರೆ. ಸರ್ಕಾರದಿಂದ ಅಧಿಕೃತ ನಿರ್ಧಾರ ಹೊರಬಾರದಿದ್ದರೆ ಗುರುವಾರ ಸಂಜೆ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದೀಗ ಮುಷ್ಕರದ ಹಿನ್ನೆಲೆ ಕೆಎಸ್ಆರ್ಟಿಸಿ ಆಡಳಿತ ಮಂಡಳಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕರ್ತವ್ಯಕ್ಕೆ ಹಾಜರಾಗದ ನೌಕರರಿಗೆ ‘ನೋ ವರ್ಕ್, ನೋ ಪೇ’ ಅನ್ವಯಿಸಲಾಗುವುದು ಎಂದು ಸೂಚಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾದರೆ ಸೇವಾ ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷಾ ಎಚ್ಚರಿಸಿದ್ದಾರೆ.

T20 World Cup 2026: ಭಾರತದ “ಸೂಪರ್ 8” ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ ನೋಡಿ!

0

ಟಿ20 ವಿಶ್ವಕಪ್‌ನ ಮೊದಲ ಲೀಗ್ ಹಂತದ ಪಂದ್ಯಗಳು ಅಂತಿಮ ಘಟ್ಟ ತಲುಪಿವೆ. 20 ತಂಡಗಳ ಪೈಕಿ ಈಗಾಗಲೇ 7 ತಂಡಗಳು ಸೂಪರ್-8 ಹಂತಕ್ಕೆ ಪ್ರವೇಶಿಸಿವೆ. ಗ್ರೂಪ್-ಎಯಿಂದ ಭಾರತ ತಂಡವು ಮುಂದಿನ ಸುತ್ತಿಗೆ ಅರ್ಹತೆ ಪಡೆದಿದೆ.

ಇಂದು ನಡೆಯಲಿರುವ ನಮೀಬಿಯಾ ವಿರುದ್ಧ ಪಾಕಿಸ್ತಾನ ನಡುವಿನ ನಿರ್ಣಾಯಕ ಪಂದ್ಯವನ್ನು ಹೊರತುಪಡಿಸಿದರೆ, ಉಳಿದ ಪಂದ್ಯಗಳು ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ ತರಲಾರವು. ಇದೀಗ ಸೂಪರ್-8 ಹಂತದಲ್ಲಿ ಭಾರತ ಎದುರಿಸಲಿರುವ ತಂಡಗಳ ವಿವರ ಹೀಗಿದೆ.

ಫೆಬ್ರವರಿ 22ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಫೆಬ್ರವರಿ 26ರಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತವು ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಮೈದಾನದಲ್ಲಿ ನಡೆಯಲಿದೆ.

ಮಾರ್ಚ್ 1ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸೂಪರ್-8 ಹಂತದಲ್ಲಿ ಎರಡು ಗುಂಪುಗಳಿದ್ದು, ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿವೆ. ಹೀಗಾಗಿ ಭಾರತ ಪಾಲಿಗೆ ಮುಂದಿನ ಮೂರು ಪಂದ್ಯಗಳು ಅತ್ಯಂತ ಮಹತ್ವದ್ದಾಗಿವೆ. ಉತ್ತಮ ಪ್ರದರ್ಶನ ನೀಡಿದರೆ ಟೀಮ್ ಇಂಡಿಯಾ ಸೆಮಿಫೈನಲ್ ಹಂತ ತಲುಪಲಿದೆ.

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಪತ್ನಿ ಕೊಲೆಗೈದ ಪಾಪಿ ಪತಿ

0

ಬೆಂಗಳೂರು: ಹೆಂಡತಿಯ ಶೀಲ ಶಂಕಿಸಿ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ನಗರದಲ್ಲಿ ನಡೆದಿದೆ.

ಘಟನೆಯಲ್ಲಿ 55 ವರ್ಷದ ದೇವಿಕಾ ಮೃತರಾಗಿದ್ದು, ಪತಿ ಕುಮಾರ್ (65) ಮಧ್ಯರಾತ್ರಿ 12:45ರ ಸುಮಾರಿಗೆ ಪತ್ನಿ ಮಲಗಿದ್ದಾಗ ಅವಳ ಕುತ್ತಿಗೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ.

ತಾಜಾ ಮಾಹಿತಿ ಪ್ರಕಾರ, ದೇವಿಕಾ ಸಮೀಪದಲ್ಲಿ ಕುಟುಂಬ ಸಮೇತ ಶಬರಿಮಲೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪತ್ನಿ ಡ್ರೈವರ್ ಜೊತೆ ಮಾತನಾಡುತ್ತಿದ್ದುದರಿಂದ ಪತಿ ಅನುಮಾನಗೊಂಡಿದ್ದರು. ಬಳಿಕ ಹೆಂಡತಿ ಮೇಲೆ ಅನುಮಾನಿಸಿ ಗಲಾಟೆ ಮಾಡುತ್ತಿದ್ದ. ಪತ್ನಿಯನ್ನು ಕೊಂದ ಬಳಿಕ ಆರೋಪಿ ಕುಮಾರ್ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಆರೋಪಿ ಕುಮಾರ್‌ನನ್ನು ಮಕ್ಕಳು ತಡೆದಿದ್ದಾರೆ.

ಘಟನೆ ಸಂಬಂಧ ಗೋವಿಂದರಾಜ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಗಂಡ ಕುಮಾರ್ ಪೊಲೀಸ್ ಬಂಧನದಲ್ಲಿ ಇರಿಸಿಕೊಂಡಿದ್ದಾರೆ.

ನೀನು ಕಳ್ಳ, ಸುಳ್ಳ.. ಅವಾಚ್ಯ ಶಬ್ದಗಳಿಂದ PDO ಅಧಿಕಾರಿಗೆ ನಿಂದನೆ.! ಗ್ರಾ.ಪಂ ಸದಸ್ಯನ ವಿರುದ್ಧ ಆಕ್ರೋಶ – ವಿಡಿಯೋ ವೈರಲ್

0

ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮ ಪಂಚಾಯಿತಿಯಲ್ಲಿ ಸದಸ್ಯನೊಬ್ಬ ಪಿಡಿಒ ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಾನುಕೊಂಡ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಅವರು, ಪಂಚಾಯಿತಿ ಪಿಡಿಒ ಅಧಿಕಾರಿ ಮುಕುಂದ ಅವರನ್ನು ಏರುಧ್ವನಿಯಲ್ಲಿ ತರಾಟೆಗೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಸೋಮವಾರ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಪಂಚಾಯಿತಿಗೆ ಭೇಟಿ ನೀಡಿದ ಅವರು,

“ನೀನು ಕಳ್ಳ, ನೀನು ಸುಳ್ಳ, ನಿನಗೆ ಏನು ಮಾಡಬೇಕು ಅಂತ ನನಗೆ ಗೊತ್ತಿದೆ” ಎಂದು ಬೆದರಿಕೆ ಹಾಕಿರುವ ದೃಶ್ಯಗಳು ವೈರಲ್ ವಿಡಿಯೋದಲ್ಲಿ ದಾಖಲಾಗಿವೆ.

ಈ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಿ ಅಧಿಕಾರಿಗೆ ಅವಮಾನಕ ರವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸಂಬಂಧಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಘಟನೆ ಕುರಿತು ಮೇಲಾಧಿಕಾರಿಗಳು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ: ಚುನಾವಣಾ ಆಯೋಗ ಘೋಷಣೆ

0

ನವದೆಹಲಿ: ಚುನಾವಣಾ ಆಯೋಗ ರಾಜ್ಯಸಭೆಯ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16ರಂದು ನಡೆಯಲಿದೆ ಎಂದು ಬುಧವಾರ ಪ್ರಕಟಿಸಿದೆ.

ಏಪ್ರಿಲ್ ತಿಂಗಳಲ್ಲಿ ವಿವಿಧ ದಿನಾಂಕಗಳಲ್ಲಿ ಈ ಸ್ಥಾನಗಳು ಖಾಲಿಯಾಗಲಿದ್ದು, ಅದಕ್ಕಾಗಿ ಚುನಾವಣೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಬಿಹಾರ ಸೇರಿದಂತೆ ಒಟ್ಟು 10 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.

2026ರ ಫೆಬ್ರವರಿ 26ರಂದು ಅಧಿಸೂಚನೆ ಹೊರಡಿಸುವುದರೊಂದಿಗೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮಾರ್ಚ್ 16ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಸಹ ನಡೆಯಲಿದೆ.

ರಾಜ್ಯಸಭೆಯ 37 ಸದಸ್ಯರ ಅವಧಿ ಏಪ್ರಿಲ್ 2026ರಲ್ಲಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಚುನಾವಣೆಗಳು ನಡೆಯುತ್ತಿವೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಯಾದಗಿರಿಯಲ್ಲಿ ಘೋರ ದುರಂತ: ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು!

0

ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು ನಾಲ್ಕು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಪುನೀತ್ (4) ಮೃತ ದುರ್ದೈವಿ ಬಾಲಕನಾಗಿದ್ದು, ಆತ ಗಾಜರಕೋಟ್ ಗ್ರಾಮದ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.

ಪ್ರತಿದಿನದಂತೆ ಗ್ರಾಮದಿಂದ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ದು, ನಂತರ ಮನೆಗೆ ತಲುಪಿಸುವ ಕೆಲಸವನ್ನು ಶಾಲಾ ಬಸ್ ನಿರ್ವಹಿಸುತ್ತಿತ್ತು. ಅದರಂತೆ ವಿದ್ಯಾರ್ಥಿಗಳನ್ನು ಬಿಡಲು ಬಸ್ ಗ್ರಾಮಕ್ಕೆ ಬಂದಿತ್ತು. ಬಾಲಕ ಬಸ್ಸಿನಿಂದ ಇಳಿದ ಬಳಿಕ ಚಾಲಕ ರಿವರ್ಸ್ ತೆಗೆದುಕೊಳ್ಳಲು ಮುಂದಾಗಿದ್ದಾನೆ.

ಈ ವೇಳೆ ಹಿಂದೆ ನೋಡದೇ ಚಾಲಕ ರಿವರ್ಸ್ ತೆಗೆದುಕೊಂಡಿದ್ದು, ಬಾಲಕನ ಮೇಲೆ ಹರಿದಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.

ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಬೆಳಗಾವಿಯಲ್ಲಿ ಕಾರಿನಲ್ಲಿ ರಿವಾಲ್ವರ್ ಇಟ್ಟು ಸಂಚರಿಸಿದ್ದ ವ್ಯಕ್ತಿ ಅರೆಸ್ಟ್.!

0

ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರದ ಕೋರ್ಟ್ ಸರ್ಕಲ್ ಬಳಿ ಕಾರಿನಲ್ಲಿ ರಿವಾಲ್ವರ್ ಇಟ್ಟು ಸಂಚರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದ ವೇಳೆ, ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಲೈಸನ್ಸ್ ಹೊಂದಿದ್ದ ರಿವಾಲ್ವರ್ ಪತ್ತೆಯಾಗಿದೆ.

ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ನಿವಾಸಿ ರಮೇಶ್ ಕೇಸರಗೊಪ್ಪ ಚೌವಾಣ (52) ಎಂದು ಗುರುತಿಸಲಾಗಿದೆ. ರಿವಾಲ್ವರ್‌ಗೆ ಲೈಸನ್ಸ್ ಇದ್ದರೂ ಅದು ಬಾಗಲಕೋಟೆ ಜಿಲ್ಲೆಗೆ ಮಾತ್ರ ಸೀಮಿತವಾಗಿತ್ತು. ಜೊತೆಗೆ, ಶಸ್ತ್ರಾಸ್ತ್ರ ಪರವಾನಗಿಯ ನವೀಕರಣ ಅವಧಿ ಮುಗಿದಿದ್ದರೂ, ಸಂಬಂಧಿತ ಪೊಲೀಸ್ ಠಾಣೆಗೆ ಶಸ್ತ್ರವನ್ನು ಜಮಾ ಮಾಡದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಹಿನ್ನೆಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಗೋಕಾಕ್ ಶಹರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

error: Content is protected !!