Home Blog Page 8

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿವಾದದ ಬಗ್ಗೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಸೋಮಣ್ಣ

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿವಾದದ ಬಗ್ಗೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಹೇಮಾವತಿ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ.

ಎಕ್ಸ್ಪ್ರೆಸ್ಕೆನಾಲ್ ನಿರ್ಮಾಣದಿಂದ ತುಮಕೂರು ಜಿಲ್ಲೆಗೆ ಅನ್ಯಾಯ ಆಗೋದನ್ನು ಮನವರಿಕೆ ಮಾಡಿದ್ದೇವೆ. ಕುಣಿಗಲ್ ತಾಲೂಕಿಗೆ ಹೋಗಬೇಕಾದ 3 ಟಿಎಮ್ ಸಿ ನೀರು ಹರಿಯಲು ನಮ್ಮ ಅಡ್ಡಿಯಿಲ್ಲ. ನಿಮ್ಮ ಪಾಲಿನ ನೀರು ನೀವು ಪಡೆಯುವುದಕ್ಕೆ ಯಾರ ತಕರಾರೂ ಇಲ್ಲ. ಅದನ್ನು ತೆಗೆದುಕೊಂಡು ಹೋಗಲು ನೀವು ಮಾಡಿರುವ ವ್ಯವಸ್ಥೆ ಸರಿ ಇಲ್ಲ, ಅದನ್ನ ಸರಿ ಮಾಡಿ ಅಂದಿದ್ದೇವೆ ಅಷ್ಟೇ ಎಂದರು.

ಚಾಕುವಿನಿಂದ ಇರಿದು ಶಿಕ್ಷಕಿ ಕೊಲೆಗೈದ ಯುವಕ!

ಮೈಸೂರು:- ಮೈಸೂರಿನ ಅಶೋಕಪುರಂನಲ್ಲಿ ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜರುಗಿದೆ.

ಪೂರ್ಣಿಮಾ (36) ಹತ್ಯೆಯಾದ ಮಹಿಳೆ. ಇವರು ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದವರು ಎನ್ನಲಾಗಿದೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಹತ್ಯೆ ಆರೋಪಿಯಾಗಿದ್ದಾನೆ. ಶುಕ್ರವಾರ ಆರೋಪಿ, ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದ. ಚಾಕು ಇರಿತದಿಂದ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.

ಪ್ರೀತಿ ವಿಚಾರದಲ್ಲಿ ಕೋಪದಿಂದ ಯುವಕ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದೆ.

ಗದಗ: ಆಂಬ್ಯುಲೆನ್ಸ್‌’ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ!

ಗದಗ: ಆಸ್ಪತ್ರೆಗೆ ಹೋಗುತ್ತಿದ್ದಾಗ ಗರ್ಭಿಣಿಯೊಬ್ಬರು ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಗದಗ ತಾಲೂಕಿನಲ್ಲಿ ನಡೆದಿದೆ.

ಹೆರಿಗೆ ನೋವಿನಿಂದ ಬಳಲುತ್ತಿದ್ದ ಸಾವಿತ್ರಿ ಲಮಾಣಿ ಅವರನ್ನು108 ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆಯೇ ಹೆರಿಗೆ ನೋವು ಜಾಸ್ತಿಯಾಯಿತು.

ಹೀಗಾಗಿ ಆಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದ್ದು, ಸಾವಿತ್ರಿ ಲಮಾಣಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 108 ಸಿಬ್ಬಂದಿ ರವಿ ಬಡಿಗೇರ ಹಾಗೂ ಮಹೇಶ ರಾಮಣ್ಣವರ ಅವರಿಗೆ ಸಾರ್ವಕನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ತಾಯಿ ಮತ್ತು ಮಗುವಿನ ಸ್ಥಿತಿ ಆರೋಗ್ಯವಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದುವರೆದ ಹೃದಯಘಾತ; ಗದಗ ಮೂಲದ ಕರ್ತವ್ಯ ನಿರತ ಎಎಸ್ಐ ಮೀರಾನಾಯ್ಕ ಹೃದಯಘಾತಕ್ಕೆ ಬಲಿ

ಬೆಳಗಾವಿ/ಹುಬ್ಬಳ್ಳಿ: ದಿನಹೋದಂತೆ ವೈರಸ್‌ನಂತೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಅಲ್ಲದೇ ಹೃದಯಾಘಾತದಿಂದ ಸಾವನ್ನಪ್ಪಿದ್ದವರ ಬಗ್ಗೆ ತನಿಖೆ ನಡೆಸಲು ಸರ್ಕಾರ ವಿಶೇಷ ಸಮಿತಿಯನ್ನೂ ರಚಿಸಿದೆ. ಇದೀಗ ಹಠಾತ್ ಹೃದಯಾಘಾತದಿಂದ ಕರ್ತವ್ಯನಿರತ ಎಎಸ್ಐಯೊಬ್ಬರು ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ನಡೆದಿದೆ.

ಮೂಲತಃ ಗದಗ ಜಿಲ್ಲೆಯ ಕೋಟುಮಚಗಿ ಗ್ರಾಮದ ಲಾಲ್‌ಸಾಬ ಮೀರಾನಾಯ್ಕ (55) ಮೃತ ಎಎಸ್ಐಯಾಗಿದ್ದು, ಹುಬ್ಬಳ್ಳಿಯ ನವನಗರ ಎಪಿಎಂಸಿ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೀರಾನಾಯ್ಕ ಅವರನ್ನು ಕಳೆದ ಐದು ದಿನಗಳಿಂದ ಗೋಕಾಕ್‌ನ ಮಹಾಲಕ್ಷ್ಮಿ ಜಾತ್ರೆಯ ಬಂದೋಬಸ್ತಿಗಾಗಿ ನಿಯೋಜನೆ ಮಾಡಲಾಗಿತ್ತು.

ಜುಲೈ 5ರಂದು ಬೆಳಗ್ಗೆ ಮೀರಾನಾಯ್ಕ್ ಅವರು ತೀವ್ರ ಎದೆನೋವಿನಿಂದ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಇತರೆ ಸಿಬ್ಬಂದಿ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.

ಆದರೆ ವೈದ್ಯರು ಪರೀಕ್ಷಿಸಿದಾಗ ಅವರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು- ಬಳಗವಿದೆ.

ಮಹಿಳೆಯ ದುರಂತ ಅಂತ್ಯ: ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಸಾವು!

ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ಇರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ತೋಟದಲ್ಲಿ ಆಘಾತಕಾರಿ ಘಟನೆ ಜರುಗಿದೆ.

ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಮಂಗಮ್ಮ ಮೃತ ಮಹಿಳೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಾತ್ ಆಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ .ಘಟನೆ ನಡೆದ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಗೌನಿಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

India vs England: ಭರ್ಜರಿ ಬೌಲಿಂಗ್: ವಿಶೇಷ ದಾಖಲೆ ಬರೆದ ಮೊಹಮ್ಮದ್ ಸಿರಾಜ್!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 587 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 407 ರನ್ಗಳಿಸಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು,

ಭರ್ಜರಿ ಬೌಲಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್, ಆಸ್ಟ್ರೇಲಿಯಾ,

ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾದಲ್ಲಿ ಇನಿಂಗ್ಸ್ ವೊಂದರಲ್ಲಿ 5 ವಿಕೆಟ್ ಗಳನ್ನು (ಫೈಫರ್) ಕಬಳಿಸಿದ ಭಾರತದ 2ನೇ ವೇಗಿ ಎಂಬ ದಾಖಲೆಯನ್ನು ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಇದೀಗ 6 ವಿಕೆಟ್ ಗಳೊಂದಿಗೆ ಈ ದಾಖಲೆ ಪಟ್ಟಿಗೆ ಮೊಹಮ್ಮದ್ ಸಿರಾಜ್ ಸೇರ್ಪಡೆಯಾಗಿದ್ದಾರೆ.

ಕೊಪ್ಪಳದಲ್ಲಿ ಹೃದಯಾಘಾತದ ಮರಣ ಮೃದಂಗ: ರಸ್ತೆಯಲ್ಲೇ ಕುಸಿದು ರಂಗಭೂಮಿ ಕಲಾವಿದ ಸಾವು!

ಕೊಪ್ಪಳ:- ಜಿಲ್ಲೆಯಲ್ಲಿ ಹೃದಯಾಘಾತದ ಮರಣ ಮೃದಂಗ ಆವರಿಸಿದ್ದು, ರಸ್ತೆಯಲ್ಲಿಯೇ ಕುಸಿದು ರಂಗಭೂಮಿ ಕಲಾವಿದ ಸಾವನ್ನಪ್ಪಿರುವ ಘಟನೆ ಜರುಗಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಈ ಘಟನೆ ಜರುಗಿದೆ. ರಂಗಭೂಮಿ ಕಲಾವಿದ ನಿಂಗನಗೌಡ (65 )ಸಾವನ್ನಪ್ಪಿರುವ ಮೃತ ದುರ್ದೈವಿ.

ಗ್ರಾಮದಲ್ಲಿ ಓಡಾಡುವಾಗ ನಿಂಗನಗೌಡಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಗ್ರಾಮದ ರಸ್ತೆ ಪಕ್ಕ ಮಲಗಿ ಸುಧಾರಿಸಿಕೊಂಡು ಮನೆಗೆ ತೆರಳಿದ್ದಾರೆ. ಮನೆಗೆ ತೆರಳುತ್ತಿದ್ದಂತೆಯೇ ಕುಸಿದು ಸಾವನ್ನಪ್ಪಿದ್ದಾರೆ. ಇನ್ನೂ ನಿಂಗನಗೌಡ ಎದೆ ನೋವಿನಿಂದ ಪರದಾಡಿದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಇನ್ನೂ ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ.

ಗೋಲ್ಡ್ ಪ್ರಿಯರಿಗೆ ಭರ್ಜರಿ ನ್ಯೂಸ್: ಚಿನ್ನದ ದರ ಏಕಾಏಕಿ ಕುಸಿತ!

ಕಳೆದ ಎರಡು ದಿನಗಳಿಂದ ಸತತ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಏಕಾಏಕಿ ಕುಪಿತಗೊಂಡಿದ್ದು, ಗೋಲ್ಡ್ ಪ್ರಿಯರು ಸಂತಸಗೊಂಡಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಅನುಕೂಲಕರ ಪರಿಸ್ಥಿತಿ ಮತ್ತು ಹೂಡಿಕೆದಾರರ ಷೇರು ಮಾರುಕಟ್ಟೆಗಳಲ್ಲಿ ಆಸಕ್ತಿಯಿಂದಾಗಿ ಚಿನ್ನದ ಬೆಲೆ ಇಳಿಕೆಯಾಗಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ದೆಹಲಿಯಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ 98,870 ರೂ., 22 ಕ್ಯಾರೆಟ್ ಬೆಲೆ 90,640 ರೂ., ಒಂದು ಕಿಲೋ ಬೆಳ್ಳಿಯ ಬೆಲೆ 1,09,900 ರೂ. ನಿಗದಿಯಾಗಿದೆ.. ಮುಂಬೈನಲ್ಲಿ 24 ಕ್ಯಾರೆಟ್ ಬೆಲೆ ರೂ.98,720 ಮತ್ತು 22 ಕ್ಯಾರೆಟ್ ಬೆಲೆ ರೂ.90,490. ಬೆಳ್ಳಿ ಬೆಲೆ ಕೆಜಿಗೆ ರೂ.1,09,900 ಆಗಿದೆ.

ಚೆನ್ನೈನಲ್ಲಿ 24 ಕ್ಯಾರೆಟ್ ಬೆಲೆ ರೂ.98,720 ಆಗಿದ್ದರೆ, 22 ಕ್ಯಾರೆಟ್ ಬೆಲೆ ರೂ.90,490 ಆಗಿದೆ. ಬೆಳ್ಳಿ ಬೆಲೆ ಕೆಜಿಗೆ ರೂ.1,19,900 ಆಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಬೆಲೆ ರೂ.98,720 ಮತ್ತು 22 ಕ್ಯಾರೆಟ್ ಬೆಲೆ ರೂ.90,490. ಬೆಳ್ಳಿ ಬೆಲೆ ಕೆಜಿಗೆ ರೂ.1,09,900 ಆಗಿದೆ.

ಹೈದರಾಬಾದ್‌ನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 98,720 ರೂ., 22 ಕ್ಯಾರೆಟ್ ಚಿನ್ನದ ಬೆಲೆ 90,490 ರೂ., ಒಂದು ಕಿಲೋ ಬೆಳ್ಳಿ ಬೆಲೆ 1,19,900 ರೂ. ವಿಜಯವಾಡದಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ 98,720 ರೂ., 22 ಕ್ಯಾರೆಟ್ ಚಿನ್ನದ ಬೆಲೆ 90,490 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 1,19,900 ರೂ. ಆಗಿದೆ.

ಅಶ್ಲೀಲ ವಿಡಿಯೋ: ಪೊಲೀಸರ ತನಿಖೆಯಲ್ಲಿ ಹಿಂದೂ ಮುಖಂಡನ ಕರ್ಮಕಾಂಡ ಬಟಾ ಬಯಲು!

ಮಂಗಳೂರು:- ಹಿಂದೂ ಮುಖಂಡನೋರ್ವನ ಫೋನ್ ನಲ್ಲಿ 50 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು, ಅಚ್ಚರಿ ಅಂದ್ರೆ ಇದರಲ್ಲಿ ರಾಜಕಾರಣಿಯೋರ್ವರ ವಿಡಿಯೋ ಕೂಡ ಸೆರೆಯಾಗಿದೆ.

ಈ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ಜರುಗಿದೆ. ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ತುಣುಕುಗಳು ಪತ್ತೆ ಆಗಿವೆ.

ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್​ರಿಂದ ದೂರು ನೀಡಲಾಗಿದ್ದು, ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಳುಹಿಸುವ ಅಥವಾ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.

ಸದ್ಯ ಮೂಡಬಿದಿರೆ ಪೊಲೀಸರು ವಿಡಿಯೋದ ಮೂಲ ಪತ್ತೆ ಹಚ್ಚಲು ಮುಂದಾಗಿದ್ದಾರೆ.

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು!

ಬೆಳಗಾವಿ:- ಬೆಳಗಾವಿ ನಗರ ಕೇಂದ್ರ ಬಸ್ ನಿಲ್ದಾಣ ಬಳಿ ಕಾರೊಂದು ಹೊತ್ತಿ ಉರಿದ ಘಟನೆ ಜರುಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.

ಬೆಂಕಿ ಅವಘಡಕ್ಕೆ ಒಳಗಾದ ಕಾರು ವಿನಯ ನೂಲಿ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ. ಕಾರು ಸ್ಟಾಪ್ ಮಾಡಿ ಕೆಳಗಡೆ ಇಳಿಯುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಅವಘಡದಿಂದ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

error: Content is protected !!