Home Blog Page 83

ಆನ್‌ಲೈನ್ ಗೇಮ್ ನಿಷೇಧಿಸಿದ ಪೋಷಕರು… 9ನೇ ಮಹಡಿಯಿಂದ ಹಾರಿ ಮೂವರು ಸಹೋದರಿಯರ ದಾರುಣ ಅಂತ್ಯ!

0

ಗಾಜಿಯಾಬಾದ್: ಆನ್‌ಲೈನ್ ಗೇಮ್ ಆಡಬೇಡಿ ಎಂದು ಪೋಷಕರು ಎಚ್ಚರಿಸಿದ್ದಕ್ಕೆ, ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಈ ಭೀಕರ ಘಟನೆ ನಡೆದಿದ್ದು, ಇಡೀ ಪ್ರದೇಶವನ್ನು ಶೋಕಸಾಗರಕ್ಕೆ ತಳ್ಳಿದೆ.

ಮೃತ ಬಾಲಕಿಯರನ್ನು ಪಾಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ಸಮಯದಿಂದಲೇ ಈ ಮೂವರು ಆನ್‌ಲೈನ್ ವಿಡಿಯೋ ಗೇಮ್‌ಗಳಿಗೆ ತೀವ್ರವಾಗಿ ವ್ಯಸನಿಯಾಗಿದ್ದರು. ವಿಶೇಷವಾಗಿ ಟಾಸ್ಕ್ ಆಧಾರಿತ ಕೊರಿಯನ್ ಲವ್ ಗೇಮ್‌ಗಳನ್ನು ಆಡುತ್ತಿದ್ದರು ಎನ್ನಲಾಗಿದೆ.

ಆಟದ ವ್ಯಸನ ಇಷ್ಟರ ಮಟ್ಟಿಗೆ ತಲುಪಿತ್ತು ಎನ್ನುವುದಕ್ಕೆ, ಹುಡುಗಿಯರು ಶಾಲೆಗೆ ಹೋಗುವುದನ್ನೇ ನಿಲ್ಲಿಸಿ ಹೆಚ್ಚಿನ ಸಮಯವನ್ನು ಮೊಬೈಲ್ ಮತ್ತು ಗೇಮಿಂಗ್‌ನಲ್ಲಿ ಕಳೆಯುತ್ತಿದ್ದರು ಎಂಬುದು ಸ್ಪಷ್ಟ ಸಾಕ್ಷಿ. ಇದನ್ನು ವಿರೋಧಿಸಿ ಪೋಷಕರು ಆನ್‌ಲೈನ್ ಗೇಮಿಂಗ್ ನಿಲ್ಲಿಸುವಂತೆ ಎಚ್ಚರಿಸಿದ್ದರು. ಇದೇ ವಿಚಾರವೇ ಈ ದಾರುಣ ಘಟನೆಯ ಹಿಂದಿನ ಪ್ರಮುಖ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್‌ನ ಭಾರತ್ ಸಿಟಿ ವಸತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಲ್ಕನಿಯಲ್ಲಿ ಪ್ಲಾಸ್ಟಿಕ್ ಕುರ್ಚಿಯನ್ನು ಇಟ್ಟುಕೊಂಡು, ಮೂವರು ಸಹೋದರಿಯರು ಒಬ್ಬೊಬ್ಬರಾಗಿ 9ನೇ ಮಹಡಿಯಿಂದ ಹಾರಿದ್ದಾರೆ. ಕೆಳಗೆ ಬಿದ್ದ ಪರಿಣಾಮ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಕುಟುಂಬ ಸದಸ್ಯರು ಮತ್ತು ಸ್ಥಳೀಯರು ನೋಡುತ್ತಿದ್ದಂತೆಯೇ ಎಲ್ಲವೂ ಮುಗಿದಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ವೈದ್ಯರು ಮೂವರನ್ನೂ ಮೃತರೆಂದು ಘೋಷಿಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಿಶೇಷ ಅಧಿವೇಶನ ಮಧ್ಯೆಯೇ ದಲಿತ ಶಕ್ತಿ ಪ್ರದರ್ಶನ! ಪರಮೇಶ್ವರ್ ನೇತೃತ್ವದಲ್ಲಿ SC–ST ನಾಯಕರ ಗುಪ್ತ ಸಭೆ

0

ಬೆಂಗಳೂರು: ವಿಶೇಷ ಅಧಿವೇಶನದ ಗದ್ದಲದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್‌ನ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಖಾಸಗಿ ಹೋಟೆಲಿನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಸಭೆ ನಡೆದಿರುವುದು ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಂಡಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ್ದ ಸೂಚನೆಯಂತೆ ಈ ಸಭೆ ನಡೆದಿದೆ ಎನ್ನಲಾಗುತ್ತಿದ್ದು, ಪಕ್ಷದ ಒಳಗಿನ ಅಸಮಾಧಾನ ಈಗ ಬಹಿರಂಗ ರೂಪ ಪಡೆಯುತ್ತಿರುವ ಸೂಚನೆಗಳು ಕಾಣಿಸುತ್ತಿವೆ. ಸಭೆಯಲ್ಲಿ ಸಚಿವರಾದ ಪರಮೇಶ್ವರ್, ಮುನಿಯಪ್ಪ, ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿ 20ಕ್ಕೂ ಹೆಚ್ಚು SC, ST ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸಿದ್ದರು.

SCSP–TSP ಅನುದಾನ ಬಳಕೆ ವಿಚಾರವೇ ಸಭೆಯ ಪ್ರಮುಖ ಅಜೆಂಡಾಗಿತ್ತು. ಈ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸ್ತಿರುವುದಕ್ಕೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಬಜೆಟ್‌ನಲ್ಲಿ SC, ST ಸಮುದಾಯಕ್ಕೆ ವಿಶೇಷ ಕೊಡುಗೆ ನೀಡಬೇಕು ಹಾಗೂ SCSP–TSP ಹಣ ಯಾವ ಉದ್ದೇಶಕ್ಕೆ ಮೀಸಲಾಗಿದೆಯೋ ಅದಕ್ಕೆ ಮಾತ್ರ ಬಳಸಬೇಕು ಎಂಬ ಒಗ್ಗಟ್ಟಿನ ಧ್ವನಿ ಸಭೆಯಲ್ಲಿ ಕೇಳಿಬಂದಿದೆ.

ಇದೇ ವೇಳೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ನೇರವಾಗಿ ಮಂಡಿಸುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಜೊತೆಗೆ, ದಲಿತ ಸಿಎಂ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಪ್ರಸ್ತಾಪಿಸುವ ಬಗ್ಗೆ ಸಮುದಾಯದ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಸಚಿವ ಸಂಪುಟ ಸಭೆಯಲ್ಲೇ SCSP–TSP ಅನುದಾನ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದರು. “SCSP–TSP ಹಣ ಯಾಕೆ ನೀಡಿಲ್ಲ? ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ” ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದ್ದ ಪ್ರಸಂಗ ಇನ್ನೂ ತಾಜಾ. ಆ ಘಟನೆಯ ಬೆನ್ನಲ್ಲೇ ಈಗ ಈ ಸಭೆ ನಡೆದಿರುವುದು ಕಾಂಗ್ರೆಸ್ ಒಳರಾಜಕಾರಣದಲ್ಲಿ ಹೊಸ ಬಿರುಕು ಮೂಡಿಸಿದೆ.

ಮೂರುವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಾವಧಿ ಶಿಕ್ಷೆ ಬದಲು ಬಾಲಾಪರಾಧಿಗೆ 35 ವರ್ಷ ಜೈಲು

0

ರಾಜಸ್ಥಾನ: ಮೂರುವರೆ ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಬಂಧನದಲ್ಲಿದ್ದ ಬಾಲಾಪರಾಧಿಯ ಜೀವಾವಧಿ ಶಿಕ್ಷೆಯನ್ನು ಮಾರ್ಪಡಿಸಿ, 35 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ಜೊತೆಗೆ ಆರೋಪಿಗೆ 1.40 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ತನಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಕಡಿತಗೊಳಿಸುವಂತೆ ಕೋರಿ ಬಾಲಾಪರಾಧಿ ಹೈಕೋರ್ಟ್ ಮೆಟ್ಟಿಲೇರಿದ್ದ. ಈ ಅರ್ಜಿಯನ್ನು ಹೈಕೋರ್ಟ್ ಬಾಲ ನ್ಯಾಯಮಂಡಳಿಗೆ ವರ್ಗಾಯಿಸಿತ್ತು. ಅಪರಾಧದ ತೀವ್ರತೆಯನ್ನು ಪರಿಗಣಿಸಿದ ಬಾಲ ನ್ಯಾಯಮಂಡಳಿ, ಪ್ರಕರಣವನ್ನು ಮತ್ತೆ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲೇ ಮರು ವಿಚಾರಣೆ ನಡೆಸುವಂತೆ ಸೂಚನೆ ನೀಡಿತ್ತು.

ನ್ಯಾಯಾಲಯದ ಸೂಚನೆಯಂತೆ ಪೋಕ್ಸೋ ವಿಶೇಷ ನ್ಯಾಯಾಲಯ ಪ್ರಕರಣದ ಮರು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಸಲ್ಲಿಸಿದ 23 ಸಾಕ್ಷಿಗಳು ಹಾಗೂ 40 ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶೆ ಶಹನಾಜ್ ಪರ್ವೀನ್, ಆರೋಪಿಯು ತಪ್ಪಿತಸ್ಥನೆಂದು ನಿರ್ಣಯಿಸಿದರು. ಮೂರೂವರೆ ವರ್ಷದ ಮಗುವಿಗೆ ತೀವ್ರ ಶಾರೀರಿಕ ಹಾಗೂ ಮಾನಸಿಕ ಹಾನಿ ಉಂಟು ಮಾಡಲಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಈ ಹಿನ್ನೆಲೆಯಲ್ಲಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 363ರ ಅಡಿ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಸೆಕ್ಷನ್ 307ರ ಅಡಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 3/4ರ ಅಡಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಒಟ್ಟಾರೆ ಆರೋಪಿಗೆ 35 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1.40 ಲಕ್ಷ ರೂ. ದಂಡ ವಿಧಿಸಲಾಗಿದೆ.

ಬೆಳಗಾವಿ| ಚಲಿಸುತ್ತಿದ್ದ ಲಾರಿ ಏರಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

0

ಬೆಳಗಾವಿ:- ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜರುಗಿದೆ.

ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ ನಿಲ್ಲಿಸದೇ ಬಂದ ಕಾರಣ, ಬೆನ್ನುಹತ್ತಿ ಬಂದು ಚಾಲಕನ ಮೇಲೆ ನಡೆಸಿರುವ ಮಾಹಿತಿ ಲಭ್ಯವಾಗಿದೆ.

ಲಾರಿ ಚಾಲಕ ಅಯಾಜ್ ಸವಣೂರ ತೊಡೆ, ಕಿವಿ, ಬೆನ್ನು ಮತ್ತು ತಲೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಮನಬಂದತೆ ಇರಿದಿದ್ದು, ಲಾರಿ ಮೇಲೂ ಕಲ್ಲು ತೂರಾಟ ನಡೆಸಿ, ಗಾಜು ಒಡೆದು ಅಟ್ಟಹಾಸ ಮೆರೆದಿದ್ದಾರೆ. ಗಂಭೀರ ಗಾಯಗೊಂಡ ಅಯಾಜ್​​ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸರ ತಂಡ ಮತ್ತು ಸೋಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಚಳಿಗಾಲದಲ್ಲಿ ಖರ್ಜೂರ ತಿನ್ನಬೇಕಾ? ಬಾದಾಮಿ ತಿನ್ನಬೇಕಾ? ಯಾವುದು ಹೆಚ್ಚು ಆರೋಗ್ಯಕರ?

0

ಚಳಿಗಾಲದಲ್ಲಿ ದೇಹದ ರೋಗನಿರೋಧಕ ಶಕ್ತಿ ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವುದು ಸಾಮಾನ್ಯ. ಪರಿಣಾಮವಾಗಿ, ಶೀತ, ಜ್ವರ ಸೇರಿದಂತೆ ಕಾಲೋಚಿತ ಕಾಯಿಲೆಗಳು ಬೇಗನೆ ಕಾಡುವ ಸಾಧ್ಯತೆ ಹೆಚ್ಚಾಗುತ್ತದೆ. ಹೀಗಾಗಿ ಈ ಋತುವಿನಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ಖರ್ಜೂರ ಮತ್ತು ಬಾದಾಮಿಯಂತಹ ಒಣಹಣ್ಣುಗಳನ್ನು ನಿಯಮಿತವಾಗಿ ಸೇವಿಸುವಂತೆ ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕ್ಕೆ ಉತ್ತಮವಾದರೂ, ಅವುಗಳ ಪ್ರಯೋಜನಗಳು ವಿಭಿನ್ನವಾಗಿವೆ. ಹಾಗಾದರೆ ಚಳಿಗಾಲದಲ್ಲಿ ಯಾವುದು ಹೆಚ್ಚು ಉಪಯುಕ್ತ? ಅದರ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳೋಣ.

ಚಳಿಗಾಲದಲ್ಲಿ ಖರ್ಜೂರ ಸೇವನೆಯ ಪ್ರಯೋಜನಗಳು

ಖರ್ಜೂರದಲ್ಲಿ ಗ್ಲೂಕೋಸ್ ಮತ್ತು ಫ್ರಕ್ಟೋಸ್‌ನಂತಹ ನೈಸರ್ಗಿಕ ಸಕ್ಕರೆ ಅಂಶಗಳು ಅಧಿಕವಾಗಿವೆ. ಇದರಿಂದ ದೇಹಕ್ಕೆ ತಕ್ಷಣ ಶಕ್ತಿ ದೊರೆಯುತ್ತದೆ. ಬೆಳಿಗ್ಗೆ 2 ರಿಂದ 3 ಖರ್ಜೂರ ತಿನ್ನುವುದರಿಂದ ಆಯಾಸ ಕಡಿಮೆಯಾಗುತ್ತದೆ. ಖರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿರುವುದರಿಂದ, ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ದೌರ್ಬಲ್ಯವನ್ನು ತಡೆಯಲು ಸಹಕಾರಿಯಾಗುತ್ತದೆ.

ಇದಲ್ಲದೆ, ಖರ್ಜೂರದಲ್ಲಿರುವ ನಾರಿನ ಅಂಶ ಜೀರ್ಣಕ್ರಿಯೆಯನ್ನು ಸುಧಾರಿಸಿ ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿಯೂ ಖರ್ಜೂರ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ್ದರಿಂದ, ಮಿತವಾಗಿ ಸೇವಿಸುವುದು ಅಗತ್ಯ.

ಬಾದಾಮಿ ತಿನ್ನುವುದರಿಂದಾಗುವ ಆರೋಗ್ಯ ಲಾಭಗಳು

ಬಾದಾಮಿ ತಕ್ಷಣ ಶಕ್ತಿ ನೀಡದಿದ್ದರೂ, ದೀರ್ಘಕಾಲದವರೆಗೆ ನಿರಂತರ ಶಕ್ತಿ ಒದಗಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಇರುವ ಆರೋಗ್ಯಕರ ಕೊಬ್ಬು, ಪ್ರೋಟೀನ್ ಮತ್ತು ಫೈಬರ್ ಅಂಶಗಳು ಚಳಿಗಾಲದಲ್ಲಿ ದೇಹವನ್ನು ಬಲವಾಗಿ ಹಾಗೂ ಬೆಚ್ಚಗಿಡಲು ಸಹಕಾರಿಯಾಗುತ್ತವೆ. ಬಾದಾಮಿಯಲ್ಲಿ ವಿಟಮಿನ್ ಇ ಸಮೃದ್ಧವಾಗಿದ್ದು, ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಒಣ ಚರ್ಮದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

ಅಷ್ಟೇ ಅಲ್ಲ, ಬಾದಾಮಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಮೆದುಳಿನ ಆರೋಗ್ಯಕ್ಕೂ ಅತ್ಯಂತ ಉಪಯುಕ್ತವಾಗಿದೆ. ರಾತ್ರಿಯಿಡೀ ನೀರಿನಲ್ಲಿ ನೆನೆಸಿದ ಬಾದಾಮಿಯನ್ನು ಬೆಳಿಗ್ಗೆ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಖರ್ಜೂರ ಅಥವಾ ಬಾದಾಮಿ – ಚಳಿಗಾಲಕ್ಕೆ ಯಾವುದು ಉತ್ತಮ?

ಚಳಿಗಾಲದಲ್ಲಿ ಖರ್ಜೂರ ಮತ್ತು ಬಾದಾಮಿ ಎರಡೂ ಆರೋಗ್ಯಕ್ಕೆ ಲಾಭದಾಯಕವಾಗಿವೆ. ಶೀತ, ದಣಿವು ಅಥವಾ ತಕ್ಷಣ ಶಕ್ತಿ ಬೇಕಾದವರಿಗೆ ಖರ್ಜೂರ ಉತ್ತಮ ಆಯ್ಕೆಯಾಗಿದೆ. ಆದರೆ ದೀರ್ಘಕಾಲೀನ ಶಕ್ತಿ, ಉತ್ತಮ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯ ಕಾಪಾಡಿಕೊಳ್ಳಲು ಬಾದಾಮಿ ಹೆಚ್ಚು ಪ್ರಯೋಜನಕಾರಿಯಾಗಿದೆ.

ಆಹಾರದಲ್ಲಿ ಖರ್ಜೂರ ಮತ್ತು ಬಾದಾಮಿ ಎರಡನ್ನೂ ಸಮತೋಲಿತವಾಗಿ ಸೇರಿಸಿಕೊಳ್ಳುವುದು ಅತ್ಯುತ್ತಮ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬೆಳಿಗ್ಗೆ 10 ರಿಂದ 12 ನೆನೆಸಿದ ಬಾದಾಮಿ ಸೇವಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಮಾದರಿ ಪ್ರಯೋಗ: ರಾತ್ರಿ 7ರಿಂದ 9ರವರೆಗೆ ಮೊಬೈಲ್–ಟಿವಿ ಬಂದ್!

0

ಹಾವೇರಿ, ಗದಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಹಾವೇರಿ ಹಾಗೂ ಗದಗ ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಪಂಚಾಯತ್ ವಿನೂತನ ಪ್ರಯತ್ನಕ್ಕೆ ಕೈಹಾಕಿವೆ. ಹಾವೇರಿ ತಾಲೂಕಿನ 33 ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ವಿದ್ಯಾರ್ಥಿಗಳ ಓದಿಗೆ ಅಡ್ಡಿಯಾಗುವ ಮೊಬೈಲ್ ಹಾಗೂ ಟಿವಿಗಳನ್ನು ರಾತ್ರಿ 7ರಿಂದ 9ರವರೆಗೆ ಬಂದ್ ಮಾಡುವಂತೆ ಗ್ರಾಮ ಪಂಚಾಯತ್ ಸಿಬ್ಬಂದಿ ಡಂಗೂರ ಸಾರುತ್ತಿದ್ದಾರೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆ ಹಾಗೂ ತಾಪಂ ಈ ವಿಶೇಷ ಕ್ರಮ ಜಾರಿಗೆ ತಂದಿವೆ. ಮಕ್ಕಳಿಗೆ ಓದುವ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಪಾಲಕರು ಸಹಕರಿಸಬೇಕು ಎಂದು ಮನವಿ ಮಾಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ ಹುಬ್ಬಳ್ಳಿ ಅವರು ಎಲ್ಲಾ ಪಿಡಿಓಗಳಿಗೆ ಸೂಚನೆ ನೀಡಿದ್ದಾರೆ.

ಹಾವೇರಿ ತಾಲ್ಲೂಕಿನ ಪ್ರತಿ ಹಳ್ಳಿಯಲ್ಲೂ ಗ್ರಾಪಂ ಸಿಬ್ಬಂದಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದ್ದು, ಈ ಕ್ರಮಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ. 2024–25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಾವೇರಿ ತಾಲ್ಲೂಕು ರಾಜ್ಯಕ್ಕೆ 13ನೇ ಸ್ಥಾನ ಪಡೆದಿದ್ದ ಹಿನ್ನೆಲೆ, ಈ ಬಾರಿ ಇನ್ನೂ ಉತ್ತಮ ಸಾಧನೆ ಮಾಡುವ ಗುರಿ ಹೊಂದಲಾಗಿದೆ.

ಶಿಕ್ಷಣ ಇಲಾಖೆ ಹಾಗೂ ತಾಪಂನ ಈ ವಿನೂತನ ಪ್ರಯತ್ನಕ್ಕೆ ತಾಲ್ಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪಾಲಕರು ಹಾಗೂ ಶಿಕ್ಷಕರು ಸಹ ಈ ಕ್ರಮವನ್ನು ಸ್ವಾಗತಿಸಿದ್ದಾರೆ.

ಫ್ರೀ ಬಸ್ ಅಂತ ಹಿಂಗೂ ಮಾಡ್ತಾರಾ!? ಪೋಷಕರು ಬೈದಿದಕ್ಕೆ ತಮ್ಮನ ಜೊತೆ ಮನೆ ಬಿಟ್ಟು ಹೋದ ಬಾಲಕಿ!

0

ಬೆಂಗಳೂರು:- ಪೋಷಕರು ಬೈದಿದ್ದಕ್ಕೆ ಬೆಂಗಳೂರಿನ ಅಕ್ಕ-ತಮ್ಮಂದಿರು ಮನೆ ಬಿಟ್ಟು ಹೋಗಿ ಊರೂರು ಸುತ್ತಿರುವ ಅಘಾತಕಾರಿ ಘಟನೆ ನಡೆದಿದೆ.

ಬಡ ಮಹಿಳೆಯರಿಗೆ ಅನುಕೂಲವಾಗಲೆಂದು ಸಾಮಾನ್ಯ ಸರ್ಕಾರಿ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಆದ್ರೆ ಇದೇ ಯೋಜನೆಯಿಂದ ಕುಟುಂಬವೊಂದು ಕಂಗಾಲಾಗಿರುವ ಅಚ್ಚರಿಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಟ್ಯೂಷನ್ ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದ ಕಾರಣ 13 ವರ್ಷದ ಬಾಲಕಿಯೋರ್ವಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್​​ನಲ್ಲಿ ಊರೂರು ಸುತ್ತಿದ್ದಾಳೆ.

ಮಕ್ಕಳು ಕಾಣೆಯಾಗಿರುವ ಬಗ್ಗೆ ಆತಂಕಗೊಂಡ ಪೋಷಕರು ಅವರಿಗಾಗಿ ಹುಡುಕಾಡಿದ್ದಾರೆ. ಬಳಿಕ HAL ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಿಸಿದ್ದಾರೆ. ತಕ್ಷಣ ಅಲರ್ಟ್​​ ಆದ ಪೊಲೀಸರು ಈ ಬಗ್ಗೆ ರಾಜ್ಯಾದ್ಯಂತ ಪೊಲೀಸರಿಗೆ ಮಾಹಿತಿ ನೀಡುವ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿಯೂ ಮಕ್ಕಳ ಕುರಿತು ಮಾಹಿತಿ ಹಂಚಿಕೊಂಡಿದ್ದರು.

ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ನಡೆಸಿದಾಗ ಅಶ್ವತ್ಥನಗರ ಮನೆಯಿಂದ ಬ್ಯಾಗ್ ಹಿಡಿದು ಹೊರಟಿದ್ದ ಮಕ್ಕಳು ಮಾರತ್ತಹಳ್ಳಿ ಬ್ರಿಡ್ಜ್ ಸ್ಕೈ ವಾಕ್ ಹತ್ತಿ ಬಂದಿದ್ದಾರೆ. ಅಲ್ಲಿಂದ ಮೆಜೆಸ್ಟಿಕ್​​ಗೆ ಬಂದು ನೇರವಾಗಿ‌ ಶಿವಮೊಗ್ಗಗೆ ತೆರಳಿದ್ದಾರೆ ಎಂಬುದು ಗೊತ್ತಾಗಿದೆ. ಹೀಗೆ ಬಸ್​​ ಹತ್ತಿಹೋದ ಇವರು ಭದ್ರವಾತಿಯಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದ ಸಂದೇಶ ನೋಡಿ ಪೊಲೀಸರಿಗೆ ಕರೆ ಬಂದಿದೆ. ಫೋಟೊದಲ್ಲಿರುವ ಮಕ್ಕಳ ರೀತಿಯಲ್ಲೇ ಕಾಣುವ ಇಬ್ಬರು ಇಲ್ಲಿದ್ದಾರೆಂಬ ಮಾಹಿತಿ ಸಿಕ್ಕ ಕಾರಣ ವಿಷಯವನ್ನು HAL ಪೊಲೀಸರು ಸ್ಥಳೀಯ ಠಾಣೆಗೆ ತಿಳಿಸಿದ್ದಾರೆ. ಅವರು ಮಕ್ಕಳನ್ನು ರಕ್ಷಿಸಿದ್ದು, ಭದ್ರಾವತಿಯಿಂದ ಹೆಚ್ಎಎಲ್ ಠಾಣೆಗೆ ಮನೆಬಿಟ್ಟು ತೆರಳಿದ್ದ ಅಕ್ಕ ಮತ್ತು ತಮ್ಮನನ್ನು ಕರೆತರಲಾಗಿದೆ.

ಬೆಂಗಳೂರು| ತಡರಾತ್ರಿ ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ

0

ಬೆಂಗಳೂರು:- ಬೆಂಗಳೂರಿನ ವಿಧಾನಸೌಧ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಪುಂಡರು ಬೈಕ್ ವ್ಹೀಲಿಂಗ್ ನಡೆಸಿ ಹುಚ್ಚಾಟ ನಡೆಸಿದ್ದಾರೆ.

ರಾತ್ರಿ 2:30ರ ಸುಮಾರಿಗೆ ಹೈಗ್ರೌಂಡ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರ‍್ಯಾಶ್​ ಡ್ರೈವಿಂಗ್ ಮಾಡಿದ್ದಲ್ಲದೆ, ವ್ಹೀಲಿಂಗ್ ಕೂಡ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ಹೆಲ್ಮೆಟ್ ಧರಿಸದೆ, ತ್ರಿಬಲ್ ರೈಡಿಂಗ್ ಮಾಡಲಾಗಿರುವ ದೃಶ್ಯಗಳು ಕಂಡುಬಂದಿದ್ದು, ಬೈಕ್​​ಗಳ ಸೈಲೆನ್ಸರ್‌ಗಳನ್ನು ಆಲ್ಟರ್ ಮಾಡಿ ಕರ್ಕಶ ಶಬ್ದದೊಂದಿಗೆ ಪುಂಡಾಟ ನಡೆಸಲಾಗಿದೆ. ಅಷ್ಟೇ ಅಲ್ಲ ಕ್ಯಾಮೆರಾ ಕಂಡ ತಕ್ಷಣ ನಂಬರ್ ಪ್ಲೇಟ್‌ಗಳನ್ನು ಕೈಯಿಂದ ಮರೆಮಾಚುವ ಪ್ರಯತ್ನವೂ ನಡೆದಿವೆ ಎಂಬುವುದು ತಿಳಿದು ಬಂದಿದೆ.

ಹೃದಯ ಸಮುದ್ರ ಕಲಕಿದ್ದ ಸಂಗೀತ ಮಾಂತ್ರಿಕ ಎಸ್ಪಿ ವೆಂಕಟೇಶ್ ನಿಧನ

ದಕ್ಷಿಣ ಭಾರತದ ಸಂಗೀತ ಲೋಕಕ್ಕೆ ಆಘಾತಕಾರಿ ಸುದ್ದಿ. ‘ಹೃದಯ ಸಮುದ್ರ ಕಲಕಿ’ ಹಾಡಿನ ಮೂಲಕ ಕನ್ನಡಿಗರ ಹೃದಯಕ್ಕೆ ಶಾಶ್ವತವಾಗಿ ನೆಲೆಸಿದ್ದ ಖ್ಯಾತ ಸಂಗೀತ ನಿರ್ದೇಶಕ ಎಸ್ಪಿ ವೆಂಕಟೇಶ್ ಅವರು ಇಂದು (ಫೆಬ್ರವರಿ 03) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 71 ವರ್ಷದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಗಿಟಾರಿಸ್ಟ್ ಆಗಿ ಸಿನಿ ಜೀವನ ಆರಂಭಿಸಿದ ವೆಂಕಟೇಶ್, ತಮ್ಮ ಸಂಗೀತ ಪಯಣವನ್ನು ಕೇವಲ ಒಂದು ಭಾಷೆಗೆ ಸೀಮಿತಗೊಳಿಸದೆ, ಕನ್ನಡ, ತಮಿಳು, ಮಲಯಾಳಂ, ತೆಲುಗು, ಹಿಂದಿ ಹಾಗೂ ಬೆಂಗಾಲಿ ಚಿತ್ರರಂಗಗಳವರೆಗೆ ವಿಸ್ತರಿಸಿದರು. ಮಲಯಾಳಂ ಮತ್ತು ತಮಿಳಿನ ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಅವರ ಸಂಗೀತವೇ ಚಿತ್ರದ ಶಕ್ತಿಯಾಗಿತ್ತು.

ಕನ್ನಡದಲ್ಲಿ ‘ಪ್ರೇಮ ಯುದ್ಧ’ ಮೂಲಕ ಆರಂಭವಾದ ಅವರ ಪಯಣ ‘ಅಶ್ವಮೇಧ’, ‘ಶರವೇಗದ ಸರದಾರ’, ‘ಸುಂದರಕಾಂಡ’, ‘ಪಂಚಮವೇದ’, ‘ಮೇಘ ಮಂದಾರ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸಂಗೀತದ ಮಾಯಾಜಾಲವನ್ನು ಸೃಷ್ಟಿಸಿತು. ‘ಹೃದಯ ಸಮುದ್ರ ಕಲಕಿ’ ಹಾಡು ಕೇಳದ ಕನ್ನಡಿಗನೇ ಇಲ್ಲ ಎನ್ನುವ ಮಟ್ಟಿಗೆ ಅವರ ಸಂಗೀತ ಜನಮನದಲ್ಲಿ ನೆಲೆಯಾಗಿದೆ.

ಹಿಂದಿ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದ ಎಸ್ಪಿ ವೆಂಕಟೇಶ್, ಸಲ್ಮಾನ್ ಖಾನ್ ನಟನೆಯ ‘ಕ್ಯೂಂಕಿ’, ‘ಥೇವರ್ ಮಗನ್’ ರೀಮೇಕ್ ‘ವಿರಾಸತ್’ ಹಾಗೂ ಕಲ್ಟ್ ಕಾಮಿಡಿ ಸಿನಿಮಾ ‘ಹಂಗಾಮ’ಗಳಿಗೆ ಸಂಗೀತ ನೀಡಿ ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿದ್ದರು. ಮಲಯಾಳಂ ಚಿತ್ರರಂಗದಲ್ಲಂತೂ ಅವರು ಸಂಗೀತದ ಭರವಸೆಯ ಹೆಸರಾಗಿದ್ದರು.

ಅವರ ನಿಧನಕ್ಕೆ ಮಲಯಾಳಂ ನಟ ಸುರೇಶ್ ಗೋಪಿ, ನಿರ್ದೇಶಕ ಉನ್ನಿಕೃಷ್ಣ ಸೇರಿದಂತೆ ಹಲವು ಸಿನಿಮಾ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದು, ತಮಿಳು ಚಿತ್ರರಂಗದ ಗಾಯಕರು ಹಾಗೂ ಸಂಗೀತಕರ್ಮಿಗಳು ಕೂಡ ಭಾವುಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಎಸ್ಪಿ ವೆಂಕಟೇಶ್ ಅವರ ಅಂತಿಮ ಕಾರ್ಯಗಳು ನಾಳೆ (ಫೆಬ್ರವರಿ 04) ಚೆನ್ನೈನಲ್ಲಿ ನಡೆಯಲಿವೆ.

ಸ್ವಚ್ಛತಾ ಕಾರ್ಮಿಕೆಯನ್ನು ಮನೆಗೆ ಕರೆಸಿ ಸನ್ಮಾನಿಸಿದ ರಜನೀಕಾಂತ್: ಕಾರಣವೇನು?

ಸಿನಿಮಾ ಪ್ರಚಾರದ ಸಮಯದಲ್ಲಿ ಮಾತ್ರ ಸ್ವಚ್ಛತಾ ಕಾರ್ಮಿಕರನ್ನು ಹುಡುಕಿ ಫೋಟೋ ತೆಗೆಸಿಕೊಳ್ಳುವ ಸೆಲೆಬ್ರಿಟಿಗಳ ನಡುವೆ, ಸೂಪರ್‌ಸ್ಟಾರ್ ರಜನಿಕಾಂತ್ ನಡೆ ಸಂಪೂರ್ಣ ವಿಭಿನ್ನವಾಗಿದೆ. ಇದು ಯಾವುದೇ ಡೈಲಾಗ್ ಅಲ್ಲ, ನಿಜವಾದ ಜೀವನದ ಹೀರೋಗೆ ಸಲ್ಲಿಸಿದ ಗೌರವ.

ಚೆನ್ನೈನಲ್ಲಿ ಸ್ವಚ್ಛತಾ ಕಾರ್ಮಿಕೆಯಾಗಿ ಕೆಲಸ ಮಾಡುತ್ತಿರುವ ಪದ್ಮ ಅವರು ಇತ್ತೀಚೆಗೆ ಕಸದಲ್ಲಿ ಸಿಕ್ಕಿದ್ದ 40 ಗ್ರಾಂ ಚಿನ್ನವನ್ನು ಪ್ರಾಮಾಣಿಕವಾಗಿ ಅದರ ಮಾಲೀಕರಿಗೆ ಹಿಂತಿರುಗಿಸಿದ್ದರು. ಈ ಒಂದು ಕಾರ್ಯವೇ ಪದ್ಮ ಅವರನ್ನು ರಾಜ್ಯದ ಗಮನ ಸೆಳೆಯುವ ವ್ಯಕ್ತಿಯನ್ನಾಗಿ ಮಾಡಿತು. ಪ್ರಾಮಾಣಿಕತೆಗೆ ಸಾಕ್ಷಿಯಾದ ಈ ಘಟನೆಯನ್ನು ಗಮನಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ಪದ್ಮ ಅವರನ್ನು ಸನ್ಮಾನಿಸಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಿದ್ದರು.

ಈಗ ಅದಕ್ಕಿಂತಲೂ ದೊಡ್ಡ ಗೌರವ ಪದ್ಮ ಅವರಿಗೆ ದೊರೆತಿದೆ. ನಟ ರಜನಿಕಾಂತ್ ಅವರು ಪದ್ಮ ಮತ್ತು ಅವರ ಕುಟುಂಬವನ್ನು ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಹ್ವಾನಿಸಿ, ಹಾರ-ಶಾಲು ಹಾಕಿ ಗೌರವಿಸಿದ್ದಾರೆ. ಜೊತೆಗೆ ಪದ್ಮ ಅವರ ಕೊರಳಿಗೆ ಚಿನ್ನದ ಸರವನ್ನೂ ಉಡುಗೊರೆಯಾಗಿ ನೀಡಿ ಆಶೀರ್ವದಿಸಿದ್ದಾರೆ.

ರಜನಿಕಾಂತ್ ಅವರಿಗೆ ಯಾರಾದರೂ ಮಾಡಿದ ಒಳ್ಳೆಯ ಕೆಲಸ ಮನಸ್ಸಿಗೆ ತಟ್ಟಿದರೆ, ಅವರು ಅದನ್ನು ಮರೆತವರಲ್ಲ. ‘ಕಾಂತಾರ’ ಸಿನಿಮಾ ಮೆಚ್ಚಿದಾಗ ರಿಷಬ್ ಶೆಟ್ಟಿಗೆ ಚಿನ್ನದ ಸರ ಹಾಕಿದ್ದೂ ಇದೆ. ವರ್ಷಗಳಿಂದ ಐದು ರೂಪಾಯಿಗೆ ಪರೋಟ ಮಾರುವ ಅಭಿಮಾನಿಯನ್ನು ಮನೆಗೆ ಕರೆಸಿ ಗೌರವಿಸಿದ್ದೂ ಇದೆ. ಈಗ ಅದೇ ಸಾಲಿಗೆ ಸ್ವಚ್ಛತಾ ಕಾರ್ಮಿಕೆಯಾದ ಪದ್ಮ ಸೇರಿದ್ದಾರೆ.

ಇದು ಪ್ರಚಾರದ ಕಥೆಯಲ್ಲ. ಇದು ಮೌಲ್ಯಗಳ ಕಥೆ. ವೇದಿಕೆ, ಮೈಕ್, ಫ್ಲೆಕ್ಸ್ ಇಲ್ಲದೆ ಒಳ್ಳೆಯತನವನ್ನು ಗುರುತಿಸುವ ಸಂಸ್ಕೃತಿಗೆ ರಜನಿಕಾಂತ್ ಮತ್ತೆ ಜೀವ ನೀಡಿದ್ದಾರೆ. ನಿಜವಾದ ಸ್ಟಾರ್‌ಡಮ್ ಎಂದರೆ ಇದೇ.

error: Content is protected !!