Home Blog Page 84

ಇತಿಹಾಸ ಅರಿವು ಇಲ್ಲದ ನಾಯಕರು: ಅಶೋಕ್ ವಿರುದ್ಧ ಪ್ರಿಯಾಂಕ್ ಖರ್ಗೆ ರಾಜಕೀಯ ದಾಳಿ

0

ಕಲಬುರಗಿ: ಖಮೇನಿ ಸಾವಿನ ಪ್ರತಿಭಟನೆ ವಿಚಾರದಲ್ಲಿ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕರು ಇತಿಹಾಸದ ಅರಿವು ಇಲ್ಲದೆ ಮಾತನಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಿಂದೆ ಇರಾನ್ ಜತೆ ವ್ಯಾಪಾರ ಸಂಬಂಧ ಹೊಂದಿದ್ದನ್ನು ಉಲ್ಲೇಖಿಸಿದ ಖರ್ಗೆ, ಶತ್ರು ರಾಷ್ಟ್ರಗಳು ಎಂದು ಹೇಳಿ ನಂತರ ವ್ಯಾಪಾರ ಮಾಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ವಿದೇಶಾಂಗ ನೀತಿ ವಿಚಾರದಲ್ಲಿ ಸ್ವತಂತ್ರ ನಿರ್ಧಾರಗಳ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಕರ್ನಾಟಕದ ಜನರ ಸುರಕ್ಷತೆ ಬಗ್ಗೆ ರಾಜ್ಯ ಸರ್ಕಾರ ನಿಗಾವಹಿಸಿದೆ ಎಂದು ಸಚಿವರು ತಿಳಿಸಿದರು. ವಿದೇಶದಲ್ಲಿರುವ ಕನ್ನಡಿಗರ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರದ ಜೊತೆ ಸಂಯೋಜನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿದ್ದರೂ, ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ದೇಶದ ಹಿತಾಸಕ್ತಿಯೇ ಮುಖ್ಯ ಎಂದು ಖರ್ಗೆ ಅಭಿಪ್ರಾಯಪಟ್ಟರು.

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ಭವಿಷ್ಯಕ್ಕೆ ಮಾರ್ಚ್ 6 ಮಹತ್ವದ ದಿನ

0

ಯಾದಗಿರಿ: ಪೋಕ್ಸೋ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ ಮುತ್ಯಾ ಅವರ ಮುಂದಿನ ಕಾನೂನು ಭವಿಷ್ಯ ಮಾರ್ಚ್ 6ರಂದು ನಿರ್ಧಾರವಾಗುವ ಸಾಧ್ಯತೆ ಇದೆ.

ಬಾಲಕಿ ಜತೆ ಅನುಚಿತ ವರ್ತನೆ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ಗಂಭೀರ ಸ್ವರೂಪ ಪಡೆದಿತ್ತು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿತ್ತು. ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇನ್ನು ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ರದ್ದು ಮಾಡುವಂತೆ ಬೆಂಬಲಿಗರು ಯಾದಗಿರಿ ಹಾಗೂ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಮುದಾಯಗಳ ಸದಸ್ಯರು ಸಹ ಮುತ್ಯಾ ಪರವಾಗಿ ನಿಂತಿದ್ದು, ಪ್ರಕರಣದ ಬಗ್ಗೆ ರಾಜಕೀಯ ವಲಯದಲ್ಲೂ ಚರ್ಚೆ ಆರಂಭವಾಗಿದೆ.

ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿರುವುದರಿಂದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಬಾಲಕಿ ನೀಡಿದ ಹೇಳಿಕೆಯು ಪ್ರಕರಣದ ಮುಂದಿನ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಒಳರಾಜಕೀಯ ಗೊಂದಲದ ಬಗ್ಗೆ ನಡೆಯುತ್ತಿರುವ ಚರ್ಚೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಡಿಕೆಶಿ ಜೊತೆಗೆ ತಮ್ಮ ಸಂಬಂಧ ಗಟ್ಟಿಯಾಗಿದೆ ಎಂದು ಹೇಳಿದ ಅವರು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್ ವಿರುದ್ಧ ಫೋನ್ ಕದ್ದಾಲಿಕೆ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಾಕ್ಷ್ಯವಿಲ್ಲದ ಆರೋಪಗಳನ್ನು ಮಾಡಬಾರದು ಎಂದು ವಿರೋಧ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಿಗೆ ವೈಯಕ್ತಿಕ ಅಭಿಪ್ರಾಯ ಹೇಳುವ ಅವಕಾಶ ಇದ್ದರೂ, ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ. ಹೈಕಮಾಂಡ್ ಆದೇಶವೇ ಅಂತಿಮ ಎಂದು ಹೇಳುವ ಮೂಲಕ ಪಕ್ಷದ ಏಕತೆಯ ಸಂದೇಶವನ್ನು ರವಾನಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಮುಂದುವರಿಯುವ ಬಗ್ಗೆ ನೇರ ಹೇಳಿಕೆ ನೀಡದ ಸಿಎಂ ನಡೆ ರಾಜಕೀಯ ವಿಶ್ಲೇಷಕರ ಗಮನ ಸೆಳೆದಿದೆ. ಕೆಲ ವಿಶ್ಲೇಷಕರು ಇದನ್ನು ತಂತ್ರ ರಾಜಕೀಯ ಎಂದರೆ, ಮತ್ತೊಂದು ವರ್ಗ ಇದನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿರುವ ನಿಲುವು ಎಂದು ಅಭಿಪ್ರಾಯಪಟ್ಟಿದ್ದಾರೆ.

4 ಲಕ್ಷ ಲಂಚ ಡೀಲ್ ಬಯಲು: 1 ಲಕ್ಷ ಸ್ವೀಕರಿಸುವಾಗಲೇ ಬಿಇಓ ಎ.ಕೆ. ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ

0

ಭದ್ರಾವತಿ: ತಮ್ಮದೇ ಕಚೇರಿಯ ಸಿಬ್ಬಂದಿಯಿಂದ 4 ಲಕ್ಷ ರೂ ಲಂಚ ಬೇಡಿಕೆ ಇಟ್ಟಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ 1 ಲಕ್ಷ ರೂ ಮೊದಲ ಕಂತು ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮಧ್ಯವರ್ತಿ ಮಂಜುನಾಥ್ ಜೊತೆ ಸೇರಿ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಿಂಗರಾಜು ಅವರಿಗೆ 2011 ರಿಂದ 2023 ರವರೆಗೆ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಭತ್ಯೆಗಳ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಲು 4 ಲಕ್ಷ ರೂ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಪೈಕಿ ಇಂದು 1 ಲಕ್ಷ ರೂ ಸ್ವೀಕರಿಸುವಾಗಲೇ ದಾಳಿ ನಡೆದಿದೆ.

ಲಿಂಗರಾಜು ಹಲವು ಬಾರಿ ಬಿಇಓ ಹಾಗೂ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ನಂತರ ಖಾಸಗಿ ವ್ಯಕ್ತಿ ಮಂಜುನಾಥ್ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂಜೆ ಸುಮಾರು 7 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕೊಠಡಿಯಲ್ಲಿ ಲಂಚ ಸ್ವೀಕರಿಸುವಾಗ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಂಜುನಾಥ್ ತನ್ನನ್ನು ಆರ್‌ಟಿಐ ಕಾರ್ಯಕರ್ತ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿದ್ದು, ಆ ಕುರಿತು ತನಿಖೆ ಮುಂದುವರಿದಿದೆ.

ಕಾರ್ಯಾಚರಣೆ ಬಿ ಪಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಿತು. ಪೊಲೀಸ್ ಅಧೀಕ್ಷಕ ಎಮ್ ಎಸ್ ಕೌಲಾಪೂರೆ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ ಎಲ್ ಕುಸಲಾಪುರ, ಗುರುರಾಜ್ ಎನ್ ಮೈಲಾರಿ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಮಂಡ್ಯ ರಾಜಕೀಯ ಸ್ಫೋಟ: “ಅಣ್ಣನ ಮಗನನ್ನೇ ಜೈಲಿಗೆ ಹಾಕಿಸಿದ್ರು” – ಕುಮಾರಸ್ವಾಮಿ ವಿರುದ್ಧ ಉದಯ್ ಗಂಭೀರ ಆರೋಪ

0

ಮಂಡ್ಯ: ರಾಜಕೀಯ ತಾಪಮಾನ ಏರಿಕೆಯಾಗಿದೆ. ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಲು ರಾಜಕೀಯ ಷಡ್ಯಂತ್ರವೇ ಕಾರಣ ಎಂದು ಉದಯ್ ನೇರ ಆರೋಪ ಹೊರಿಸಿದ್ದಾರೆ.

ಮದ್ದೂರಿನಲ್ಲಿ ಮಾತನಾಡಿದ ಅವರು, “ತಮ್ಮ ಮಗ ಗೆದ್ದಿಲ್ಲ ಎಂಬ ಕಾರಣಕ್ಕೆ ಅಣ್ಣನ ಮಗನನ್ನೇ ಜೈಲಿಗೆ ಹಾಕಿಸಿದ್ರು. ಅಣ್ಣನ ಮಗನನ್ನೇ ಸಹಿಸಿಕೊಳ್ಳದವರು ನಮ್ಮನ್ನು ಸಹಿಸಿಕೊಳ್ತಾರಾ?” ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮನಸ್ಸು ಮಾಡಿದ್ದರೆ ಪರಿಸ್ಥಿತಿ ಬೇರೆ ಆಗಬಹುದಿತ್ತು ಎಂದೂ ಹೇಳಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಕುಮಾರಸ್ವಾಮಿಗೆ ನೇರ ಸವಾಲು ಹಾಕಿದ ಉದಯ್, “ತಾಕತ್ತಿದ್ದರೆ ಮಂಡ್ಯಕ್ಕೆ ಕೈಗಾರಿಕೆ ತರಲಿ. ನಾನು 60-70 ಎಕರೆ ಜಮೀನು ಕೊಡ್ತೀನಿ. ಸರ್ಕಾರದ ಭಾಗವಾಗಿ ಜಾಗ ಕೊಡ್ತೇವೆ. ಮೊದಲು ಯಾವ ಕೈಗಾರಿಕೆ ತರುತ್ತಾರೆ ಅಂತ ಹೇಳಲಿ” ಎಂದು ಕಿಡಿಕಾರಿದ್ದಾರೆ.

ರೈತರ ಸಂಕಷ್ಟ ಅರಿತು ಕೆಲಸ ಮಾಡಬೇಕು, ಟಿವಿ ಭಾಷಣಗಳಿಂದ ಅಭಿವೃದ್ಧಿ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಆಸ್ಟಿನ್‌ನಲ್ಲಿ ಗುಂಡಿನ ನರಮೇಧ: ಭಾರತೀಯ ವಿದ್ಯಾರ್ಥಿನಿ ಬಲಿ, ಭಯೋತ್ಪಾದಕ ಸಂಪರ್ಕ ಶಂಕೆ

0

ನ್ಯೂಯಾರ್ಕ್‌: ಆಸ್ಟಿನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 2 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 14ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಸವಿತಾ ಶಾನ್ ಇದ್ದಾರೆ.

ದಾಳಿ ನಡೆಸಿದ ನ್ಡಿಯಾಗಾ ಡಯಾಗ್ನೆ, ಸಾರ್ವಜನಿಕ ಪ್ರದೇಶದಲ್ಲಿ ನಿಂತು ಜನರ ಮೇಲೆ ನಿರಂತರವಾಗಿ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇರಾನ್ ಧ್ವಜ ಚಿಹ್ನೆ ಧರಿಸಿದ್ದನೆಂಬ ಮಾಹಿತಿ ಕೂಡ ಹೊರಬಂದಿದ್ದು, ದಾಳಿಯ ಹಿಂದೆ ರಾಜಕೀಯ ಪ್ರತೀಕಾರದ ಉದ್ದೇಶ ಇರಬಹುದು ಎಂದು ಶಂಕಿಸಲಾಗಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮತ್ತು ಸ್ಥಳೀಯ ಪೊಲೀಸರು ಈ ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಟೆಕ್ಸಾಸ್ ವಿಶ್ವವಿದ್ಯಾಲಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯಿಂದ ಅಮೆರಿಕದಲ್ಲಿ ವಿದ್ಯಾರ್ಥಿ ಸುರಕ್ಷತೆ ಕುರಿತು ಹೊಸ ಚರ್ಚೆ ಆರಂಭವಾಗಿದೆ.

“ನಿಧಾನವಾಗಿ ಓಡಿಸು” ಎಂದ ಯುವಕನಿಗೆ ಕಾರು ಡಿಕ್ಕಿ: ಹೊಳೆನರಸೀಪುರದಲ್ಲಿ ಯುವಕನ ಹತ್ಯೆ

0

ಹಾಸನ: ಅತಿವೇಗದ ವಾಹನ ಚಾಲನೆಯ ವಿರುದ್ಧ ಎಚ್ಚರಿಕೆ ನೀಡಿದ ಕಾರಣಕ್ಕೆ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮನು (27) ಸೇರಿದಂತೆ ನಾಲ್ವರು ಯುವಕರು ನಡುರಾತ್ರಿ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ KA-01-MF-2883 ಸಂಖ್ಯೆಯ ಕಾರು ಅತಿವೇಗದಲ್ಲಿ ಬಂದಿದೆ. ಚಾಲಕನಿಗೆ ನಿಧಾನವಾಗಿ ಹೋಗುವಂತೆ ಹೇಳಿದ ಹಿನ್ನೆಲೆಯಲ್ಲಿ ಆತ ಕೋಪಗೊಂಡು, ಸ್ವಲ್ಪ ದೂರ ಹೋಗಿ ಮತ್ತೆ ತಿರುಗಿ ಬಂದು ಯುವಕರ ಮೇಲೆ ಕಾರು ಹರಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯಲ್ಲಿ ಮನು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಪರಾರಿಯಾಗಿರುವ ಚಾಲಕನ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಈ ಘಟನೆ ರಸ್ತೆ ಸುರಕ್ಷತೆ ಮತ್ತು ಅತಿವೇಗ ಚಾಲನೆಯ ಅಪಾಯವನ್ನು ಮತ್ತೊಮ್ಮೆ ನೆನಪಿಸಿದೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.

‘ಹಬ್ಬದ ಹೆಸರಿನಲ್ಲಿ ಹಿಂಸೆ’: ಹರಿಯಾಣದಲ್ಲಿ ಗೋವಿಗೆ ಮದ್ಯ ಕುಡಿಸಿದ ವಿಡಿಯೋ ವೈರಲ್

0

ಹರಿಯಾಣ: ಹೋಳಿ ಸಂಭ್ರಮದ ನಡುವೆ ಅಮಾನವೀಯ ಘಟನೆೊಂದು ಬೆಳಕಿಗೆ ಬಂದಿದೆ. ಹರಿಯಾಣದಲ್ಲಿ ಕೆಲವರು ಕುಡಿದ ಮತ್ತಿನಲ್ಲಿ ಗೋವಿಗೆ ಬಲವಂತವಾಗಿ ಮದ್ಯ ಕುಡಿಸಿ, ಬಳಿಕ ಅದರಿಂದ ಗಾಡಿ ಎಳೆಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಹಸುವಿನ ಬಾಯಿಯನ್ನು ಬಲವಂತವಾಗಿ ತೆರೆದು ಮದ್ಯ ಸುರಿಸುತ್ತಿರುವುದು ಕಂಡುಬರುತ್ತದೆ. ಇತರರು ಅದನ್ನು ವೀಕ್ಷಿಸುತ್ತಾ ನಗುತ್ತಿರುವ ದೃಶ್ಯವೂ ಗಮನ ಸೆಳೆಯುತ್ತಿದೆ. ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಹಸುವಿನಿಂದ ಬಂಡಿ ಎಳೆಯಿಸುವ ದೃಶ್ಯ ವೈರಲ್ ಆಗಿದೆ.

‘StreetdogsofBombay’ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೆಯಾಗಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಸಾವಿರಾರು ವೀಕ್ಷಣೆಗಳನ್ನು ಪಡೆದಿದೆ.

ಹೋಳಿ ಹಬ್ಬವು ಒಳ್ಳೆಯದರ ಜಯದ ಸಂಕೇತ. ಮಾರ್ಚ್ 2ರಂದು ಹೋಳಿಕಾ ದಹನ್ ಹಾಗೂ ಮಾರ್ಚ್ 3ರಂದು ಬಣ್ಣಗಳ ಹಬ್ಬವಾಗಿ ಆಚರಿಸಲಾಗುತ್ತಿದೆ. ಗುಜಿಯಾ, ಮಾಲ್ಪುವಾ, ಥಂಡೈ ಮುಂತಾದ ಸಾಂಪ್ರದಾಯಿಕ ಆಹಾರಗಳೊಂದಿಗೆ ಸಂಭ್ರಮಿಸುವ ಹಬ್ಬದಲ್ಲಿ ಇಂತಹ ಪ್ರಾಣಿ ಹಿಂಸಾಚಾರ ನಡೆದಿರುವುದು ಸಮಾಜದಲ್ಲಿ ಆತಂಕ ಹುಟ್ಟಿಸಿದೆ.

ಪ್ರಾಣಿ ಹಿಂಸೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿದೆ.

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

0

ಗಜೇಂದ್ರಗಡ: ತಾಲ್ಲೂಕಿನ ಗುಳಗುಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿವಿಧ ದಲಿತ ಸಂಘಟನೆಗಳು ಆರೋಪಿಗಳ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿವೆ.

ಆದಿಜಾಂಬವ ಯುವ ಬ್ರಿಗೇಡ್ ಬೆಳಗಾವಿ ವಿಭಾಗೀಯ ಸಂಚಾಲಕ ಮಂಜುನಾಥ ಎಂ. ಬುರಡಿ ಪ್ರತಿಕ್ರಿಯಿಸಿ, “ಡಾ. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬರಿಗೂ ಆರಾಧ್ಯ ವ್ಯಕ್ತಿ. ಇಂತಹ ಮಹನೀಯರಿಗೆ ಅವಮಾನ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಅಮಾನುಷ ಘಟನೆಗಳು ಮರುಕಳಿಸದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು,” ಎಂದು ಒತ್ತಾಯಿಸಿದರು.

ಎನ್. ಮೂರ್ತಿ ಬಣದ ಜಿಲ್ಲಾ ಅಧ್ಯಕ್ಷ ಡಿ.ಜಿ. ಕಟ್ಟಿಮನಿ ಮಾತನಾಡಿ, “ಅಂಬೇಡ್ಕರ್ ಅವರು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪ್ರತೀಕ. ದಲಿತಕೇರಿಯಲ್ಲಿ ನಡೆದಿರುವ ಈ ಕೃತ್ಯ ಮಾನವೀಯ ಮೌಲ್ಯಗಳಿಗೆ ವಿರುದ್ಧ. ಆರೋಪಿಗಳಿಗೆ ಉದಾಹರಣೀಯ ಶಿಕ್ಷೆ ಆಗಬೇಕು,” ಎಂದು ಹೇಳಿದರು.

ಘಟನೆ ತಿಳಿದ ತಕ್ಷಣ ತಹಶೀಲ್ದಾರ ಕಿರಣಕುಮಾರ್ ಕುಲಕರ್ಣಿ, ಡಿವೈಎಸ್‌ಪಿ ಪ್ರಭುಗೌಡ ಕಿರೇದಳ್ಳಿ, ಸಿಪಿಐ ವಿಜಯಕುಮಾರ್ ನಾಯಕ ಹಾಗೂ ಪಿಎಸ್‌ಐ ಪ್ರಕಾಶ್ ಡಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೋಮು ನಾಗರಾಜ್, ದುರುಗೇಶ್ ಹಿರೇಮನಿ, ಪುಂಡಲೀಕ್ ಮಾದರ, ಯಮನಪ್ಪ ಪುರ್ತಿಗೇರಿ, ಯಮನೂರಪ್ಪ ಅಬ್ಬಿಗೇರಿ, ಅಶೋಕ್ ಮಾದರ, ಹಣಮಂತ ಪೂಜಾರ್, ಮಹೇಶ ಕುರಬನಹಳ, ಭೀಮಪ್ಪ ದೊಡ್ಡಮನಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಇರಾನ್ ವಿರುದ್ಧ ಯುದ್ಧ ಇನ್ನೂ 4-5 ವಾರ ಮುಂದುವರಿಕೆ; ಶರಣಾಗದಿದ್ದರೆ ಭೀಕರ ದಾಳಿ – ಟ್ರಂಪ್ ಎಚ್ಚರಿಕೆ

0

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುದ್ಧಕ್ಕೆ ಸಂಬಂಧಿಸಿದಂತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಳೆದ ಐದು ವಾರಗಳಿಂದ ಇರಾನ್ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆದಿದ್ದು, ಈಗಾಗಲೇ ಕಾರ್ಯಾಚರಣೆ ಆರಂಭವಾಗಿದೆ. ಅಗತ್ಯವಿದ್ದರೆ ಯುದ್ಧವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಇರಾನ್ ವಿರುದ್ಧದ ಈ ಯುದ್ಧ ಇನ್ನೂ ನಾಲ್ಕು ರಿಂದ ಐದು ವಾರಗಳವರೆಗೆ ಮುಂದುವರಿಯಲಿದೆ ಎಂದು ಟ್ರಂಪ್ ಸ್ಪಷ್ಟಪಡಿಸಿದರು. “ಇರಾನ್ ತನ್ನ ಶಸ್ತ್ರಾಸ್ತ್ರಗಳನ್ನು ಶರಣಾಗಿಸಬೇಕು. ಇಲ್ಲದಿದ್ದರೆ ಜಗತ್ತು ಹಿಂದೆಂದೂ ನೋಡಿರದ ಮಟ್ಟದ ಕಾರ್ಯಾಚರಣೆ ನಡೆಯಲಿದೆ,” ಎಂದು ಎಚ್ಚರಿಸಿದರು.

ಇರಾನ್ ಜಾಗತಿಕ ಭಯೋತ್ಪಾದನೆಯ ಪ್ರಾಯೋಜಕ ರಾಷ್ಟ್ರ ಎಂದು ಆರೋಪಿಸಿದ ಟ್ರಂಪ್, “ಇರಾನ್ ಅಮೆರಿಕದ ಮೇಲೆ ದಾಳಿ ಮಾಡಲು ಯತ್ನಿಸಿತ್ತು. ನಾನು ಜನರಲ್ ಸೊಲೈಮಾನಿಯನ್ನು ಕೊಂದೆ,” ಎಂದು ಹೇಳಿದರು. ಇತ್ತಿಚೆಗೆ ನಡೆದ ದಾಳಿಗಳಲ್ಲಿ ಇರಾನಿನ 10 ಯುದ್ಧನೌಕೆಗಳನ್ನು ನಾಶಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇರಾನ್ ಮಾಧ್ಯಮ ವರದಿ ಪ್ರಕಾರ, ದಾಳಿಗಳಲ್ಲಿ ಕನಿಷ್ಠ 555 ಜನರು ಸಾವನ್ನಪ್ಪಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಿನಾಬ್‌ನಲ್ಲಿ ಬಾಲಕಿಯರ ಶಾಲೆಯ ಮೇಲೆ ನಡೆದ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಸುಮಾರು 115 ಜನರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.

ಇದಕ್ಕೆ ಪ್ರತಿಯಾಗಿ ಅಮೆರಿಕ ಸೇನೆ ಮೂರು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೃಢಪಡಿಸಿದೆ.

ಇಸ್ರೇಲ್ ಹಾಗೂ ಹೆಜ್ಬೊಲ್ಲಾ ನಡುವಿನ ಸಂಘರ್ಷವೂ ತೀವ್ರಗೊಂಡಿದೆ. ಲೆಬನಾನ್ ದಕ್ಷಿಣ ಭಾಗದಲ್ಲಿ ಇಸ್ರೇಲಿ ದಾಳಿಯಿಂದ 31 ಮಂದಿ ಸಾವನ್ನಪ್ಪಿದ್ದು, 149 ಮಂದಿ ಗಾಯಗೊಂಡಿದ್ದಾರೆ.

ಇದೇ ವೇಳೆ ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ನಡೆದ ದಾಳಿಯಲ್ಲಿ ಒಬ್ಬ ಪಾಕಿಸ್ತಾನಿ, ಒಬ್ಬ ನೇಪಾಳಿ ಮತ್ತು ಒಬ್ಬ ಬಾಂಗ್ಲಾದೇಶಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಯುದ್ಧದ ತೀವ್ರತೆಯನ್ನು ಹೆಚ್ಚಿಸುವ ಮುನ್ನವೇ ಟ್ರಂಪ್, “ಇರಾನಿನ ನಾಗರಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ಮನೆಯೊಳಗೆ ಇರಬೇಕು,” ಎಂದು ಮನವಿ ಮಾಡಿದ್ದಾರೆ. ಇರಾನ್ ಶರಣಾಗುವವರೆಗೆ ದಾಳಿ ನಿಲ್ಲುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ.

error: Content is protected !!