Home Blog Page 87

ಬದ್ಧತೆ, ಪ್ರಾಮಾಣಿಕತೆಯಿಂದ ಸೇವೆ ಮಾಡುವೆ: ಮೋಹನ ಲಿಂಬಿಕಾಯಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಶ್ಚಿಮ ಪದವೀಧರರ ಕ್ಷೇತ್ರ ಧಾರವಾಡ, ಹಾವೇರಿ, ಗದಗ, ಕಾರವಾರ ಜಿಲ್ಲೆಗಳನ್ನೊಳಗೊಂಡ ವಿಶಾಲ ಕ್ಷೇತ್ರವಾಗಿದ್ದು, ಈ ಬಾರಿ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ನನಗೆ ಅವಕಾಶ ನೀಡಿದ್ದು, ಬದ್ಧತೆ, ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡುವ ಹಾಗೂ ಪದವೀಧರರ ದ್ವನಿಯಾಗಿ ಕಾರ್ಯ ಮಾಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಹೇಳಿದರು.

ಅವರು ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಂಗಣದಲ್ಲಿ ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮುಂಬರುವ ಪಶ್ಚಿಮ ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಈ ಕ್ಷೇತ್ರದಲ್ಲಿ ಈಗಾಗಲೇ 88 ಸಾವಿರಕ್ಕೂ ಅಧಿಕ ಪದವೀಧರರು ನೋಂದಣಿಯಾಗಿದ್ದು, 1984ರಿಂದ 2008ರವರೆಗೆ ಈಗಿನ ಸಚಿವ ಡಾ. ಎಚ್.ಕೆ. ಪಾಟೀಲ ಪ್ರತಿನಿಧಿಸುತ್ತಾ ಬಂದಿದ್ದರು. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ಸಹ ಕ್ಷೇತ್ರದಲ್ಲಿ ಉತ್ತಮ ಕಾರ್ಯವನ್ನು ಮಾಡುವ ಉದ್ದೇಶವನ್ನು ಹೊಂದಿದ್ದು, ಬದ್ಧತೆ, ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡಿದ್ದು, ಪದವೀಧರರ ಕುಂದು-ಕೊರತೆಗಳನ್ನು ಸರ್ಕಾರ ಮಟ್ಟದಲ್ಲಿ ಪ್ರಶ್ನಿಸುವ ನಿಟ್ಟಿನಲ್ಲಿ ವಿಶೇಷವಾಗಿ ಕಾರ್ಯ ಮಾಡಿದ್ದು, ಮುಂದಿನ ದಿನಗಳಲ್ಲಿಯೂ ಈ ಕಾರ್ಯವನ್ನು ಮುಂದುವರೆಸುತ್ತೇನೆ. ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಎಲ್ಲರೂ ಮತ ನೀಡಿ ಆಶೀರ್ವಾದಿಸಿದರೆ, ಎಲ್ಲರ ಪ್ರೀತಿ ವಿಶ್ವಾಸ, ನಂಬಿಕೆಗೆ ದ್ರೋಹ ಬಗೆಯದಂತೆ ಕೆಲಸ ನಿರ್ವಹಿಸುವುದಾಗಿ ಹೇಳಿದರು.

ಮಾಜಿ ಶಾಸಕರುಗಳಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ ಮಾತನಾಡಿ, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆದು ಕ್ರಿಯಾಶೀಲ ವ್ಯಕ್ತಿತ್ವದ ಮೋಹನ ಲಿಂಬಿಕಾಯಿ ಆಯ್ಕೆಯಾಗುವಂತೆ ಎಲ್ಲರೂ ವಿಶೇಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.

ಹಾವೇರಿ ಲೋಕಸಭಾ ಕ್ಷೇತ್ರದ ಯುವ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಪಶ್ಚಿಮ ಪದವೀಧರ ಚುನಾವಣೆ ಒಂದು ರೀತಿ ಮಾರ್ಗಸೂಚಿ ಚುನಾವಣೆ ಇದ್ದಂತೆ. ಈ ಚುನಾವಣೆ ವ್ಯಕ್ತಿತ್ವದ ಮೇಲೆ ಅವಲಂಬಿತವಾಗಿದ್ದು, ಪದವೀಧರರ ಮತಗಳು ಪೊಳ್ಳು ಭರವಸೆಗಳಿಗೆ ಬಲಿಯಾಗದೆ ಅರ್ಹ ಮತ್ತು ಜನಮುಖಿ ವ್ಯಕ್ತಿ ಮೋಹನ್ ಲಿಂಬಿಕಾಯಿಯವರಿಗೆ ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಕೊಪ್ಪದ, ನಗರ ಘಟಕ ಅಧ್ಯಕ್ಷ ಅಮರೇಶ ತೆಂಬದಮನಿ, ಸೋಮಣ್ಣ ಬೆಟಗೇರಿ, ಎಂ.ಎನ್. ಗದಗ, ಸುರೇಶ ನಾವಿ, ಗುರುನಾಥ ದಾನಪ್ಪನವರ, ಮಹೇಶ ಹೊಗೆಸೊಪ್ಪಿನ, ಶರಣು ಗೋಡಿ, ರಂಜನ್ ಪಾಟೀಲ, ಯಲ್ಲಪ್ಪ ತಳವಾರ, ವಿ.ಜಿ. ಪಡಗೇರಿ, ದೀಪಕ ಲಮಾಣಿ, ರಾಜು ಪಾಟೀಲ, ಆದಪ್ಪಗೌಡ್ರ ಪಾಟೀಲ, ಎಂ.ಆರ್. ಸೋಂಪೂರ, ಅಂದಾನಯ್ಯ ಕುರ್ತಕೋಟಿಮಠ, ಮಹೇಶ ಹಾರೋಗೇರಿ, ಎಸ್.ಕೆ. ಹವಾಲ್ದಾರ, ಡಿ.ಜೆ. ಮುಚ್ಚಾಲೆ, ಸತೀಶ ಪಾಟೀಲ, ಪದ್ಮರಾಜ ಪಾಟೀಲ, ಕಮತದ, ರಮೇಶ ಕಲಬುರ್ಗಿ ಸೇರಿದಂತೆ ಅನೇಕರು ಹಾಜರಿದ್ದರು. ಕಿರಣ ನವಲೆ ಕಾರ್ಯಕ್ರಮ ನಿರೂಪಿಸಿದರು.

ಹಿರಿಯ ಮುಖಂಡ ಹಾಗೂ ನಿಗಮ ಮಂಡಳಿ ಅಧ್ಯಕ್ಷ ನಂಜಯ್ಯನಮಠ ಮಾತನಾಡಿ, ಮೋಹನ ಲಿಂಬಿಕಾಯಿಯವರು ಕ್ರಿಯಾಶೀಲ ವ್ಯಕ್ತಿಯಾಗಿದ್ದಾರೆ. ಸಾಮಾಜಿಕ ಕಳಕಳಿ, ಸಮಾಜದ ಬಗ್ಗೆ ಚಿಂತನೆಗಳ ಬಗ್ಗೆ ಕಾಳಜಿ ಹೊಂದಿರುವ ಅಭ್ಯರ್ಥಿಯಾಗಿದ್ದು, ಇವರ ಆಯ್ಕೆ ಪದವೀಧರರಿಗೆ ದೊಡ್ಡ ದ್ವನಿಯಾಗಲಿದೆ ಎಂದರು.

ಬಂಜಾರ ಸಮುದಾಯದ ಚಿಂತನೆ ಅನುಕರಣೀಯ: ಮಿಥುನ್ ಜಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಬಂಜಾರ ಜನಾಂಗವು ತನ್ನ ವಿಶಿಷ್ಟ ಭಾಷೆ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ಸದಾ ಒಳಿತನ್ನು ಬಯಸುವ ಬಂಜಾರ ಸಮುದಾಯದ ಚಿಂತನೆ ಅನುಕರಣೀಯ ಎಂದು ರೋಣ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಹೇಳಿದರು.

ಪಟ್ಟಣದ ಬಂಜಾರ ಸಮಾಜದ ವತಿಯಿಂದ ಜಕ್ಕಲಿ ರಸ್ತೆಯ ಆಶ್ರಯ ಕಾಲೋನಿಯಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಮಾಹಾರಾಜರ 287ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಂಬಾಣಿ ಸಮಾಜದವರು ಶ್ರಮಜೀವಿ, ಪ್ರಾಮಾಣಿಕತೆಗೆ ಹೆಸರುವಾಸಿಯಾದವರು. ಸಂತ ಸೇವಾಲಾಲ್‌ರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ನರೇಗಲ್ಲ ಪಟ್ಟಣದ ಬಂಜಾರ ಜನಾಂಗದ ಅಭಿವೃದ್ಧಿಗಾಗಿ ಶಾಸಕರ ಗಮನಕ್ಕೆ ತಂದು ಅಗತ್ಯತೆಗಳ ಪೂರೈಕೆಗೆ ಪ್ರಯತ್ನಿಸುತ್ತೇನೆ ಎಂದರು.

ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ ಮಾತನಾಡಿ, ಈ ಸಮುದಾಯದ ಸಂಸ್ಕೃತಿ ಶ್ರೀಮಂತವಾಗಿದೆ. ಇಂದಿಗೂ ತಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಸಾಗುತ್ತಿರುವ ಈ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಆಶೀರ್ವಚನ ನೀಡಿದ ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ಸೇವಾಲಾಲ್ ಮಹಾರಾಜರು ಈ ಸಮುದಾಯವನ್ನು ಸತ್ಯದ ಹಾದಿಯಲ್ಲಿ ಮುನ್ನಡೆಸಿದರು. ಅವರು ಸಮಾಜದ ಏಳಿಗೆಗೆ ನಿಸ್ವಾರ್ಥ ಸೇವೆ ಸಲ್ಲಿಸಿದ ಮಹಾನ್ ಸಂತರು. ಬಡವರಿಗಾಗಿ, ಸಮಾಜದ ಹಿತಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ದಾರ್ಶನಿಕರು ಎಂದರು.

ಕೊಡಗಲಿಯ ಸಂತೋಷ ಮಹಾರಾಜ್ ಮತ್ತು ನಿವೃತ್ತ ಶಿಕ್ಷಕ ತಾರಾಸಿಂಗ್ ರಾಠೋಡ ವಿಶ್ವ ಶಾಂತಿಗಾಗಿ ಭೋಗ್ ಸಮರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರದ ಸಾಧಕರನ್ನು, ದಾನಿಗಳನ್ನು ಸನ್ಮಾನಿಸಲಾಯಿತು. ಮುಖಂಡರಾದ ನಿಂಗನಗೌಡ ಲಕ್ಕನಗೌಡ್ರ, ವೀರನಗೌಡ ಪಾಟೀಲ, ಅಲ್ಲಾಬಕ್ಷಿ ನದಾಫ್, ಮೈಲಾರಪ್ಪ ಚಳ್ಳಮರದ, ಹನಮಂತಪ್ಪ ಅಬ್ಬಿಗೇರಿ, ಕಳಕನಗೌಡ ಪೊಲೀಸ್ ಪಾಟೀಲ, ಮೃತ್ಯುಂಜಯ ಧಡೇಸೂರಮಠ, ಉದ್ಯಮಿ ಬಸವರಾಜ ವಂಕಲಕುಂಟಿ, ಕುಮಾರಸ್ವಾಮಿ ಕೋರಧಾನ್ಯಮಠ, ದಾದಾಸಾಬ್ ನದಾಫ್, ಗುಡದಪ್ಪ ಗೋಡಿ, ಸದ್ದಾಂ ನಶೇಖಾನ್, ದೇವಕ್ಕ ರಾಠೋಡ ಇದ್ದರು. ಚಂದ್ರು ರಾಠೋಡ ನಿರ್ವಹಿಸಿದರು.

ಕೊಪ್ಪಳ ಬಹದ್ದೂರಬಂಡಾ ಬಂಜಾರ ಪೀಠದ ಗುರು ಗೋಸಾಯಿಬಾವ ಸ್ವಾಮೀಜಿ ಮಾತನಾಡಿ, ಬಂಜಾರ ಸಮುದಾಯದ ಪವಾಡ ಪುರುಷ ಸೇವಾಲಾಲ್ ಸಮಾಜದಲ್ಲಿನ ಮೌಢ್ಯತೆ ತೊಡೆದು ಹಾಕಿದ ಸಂತರು. ಪ್ರಕೃತಿಯಲ್ಲಿನ ಪ್ರಾಣಿ-ಪಕ್ಷಿಗಳೊಂದಿಗೆ ಸಂಭಾಷಣೆ ನಡೆಸುತ್ತಿದ್ದ ಅವರು ಸಕಲ ಜೀವಜಂತುಗಳಿಗೆ ಒಳ್ಳೆಯದಾಗಲಿ ಎಂದು ಬಯಸಿದರು ಎಂದರು.

ಭವಿಷ್ಯದ ಕಾರ್ಯಯೋಜನೆಗಳ ಕುರಿತು ಸಭೆ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ವಿದ್ಯಾಪೋಷಕ ವತಿಯಿಂದ ಧಾರವಾಡ ಮತ್ತು ಗದಗ ಜಿಲ್ಲೆಗಳ ಸ್ವಯಂಸೇವಕರ ಸಭೆಯನ್ನು ಧಾರವಾಡದ ಜೆಎಸ್‌ಎಸ್ ಕಾಲೇಜು ಆವರಣದಲ್ಲಿರುವ ಉತ್ಸವ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ವಿದ್ಯಾಪೋಷಕದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶರತ್ ಐರಣಿ ಉದ್ಘಾಟಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಸಾವಿರಾರು ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಬದುಕಿಗೆ ಆರ್ಥಿಕವಾಗಿ ಸಹಾಯವನ್ನು ನೀಡುವ ಮೂಲಕ ಬೆಳಕಾದ ಈ ಸಂಸ್ಥೆ 25 ವರ್ಷಗಳನ್ನು ನಿಸ್ವಾರ್ಥ ಸೇವೆಯಿಂದ ಪೂರೈಸಿದ್ದು, ಇದಕ್ಕೆ ಸಮಾಜದ ಭವಿಷ್ಯವನ್ನು ರೂಪಿಸಿದ ಸಾವಿರಾರು ಕೈಗಳ ಸಮೂಹದ ಪ್ರಯತ್ನವೇ ಕಾರಣವಾಗಿದೆ ಎಂದರು.

ವಿದ್ಯಾಪೋಷಕ ಸಂಸ್ಥೆಯ ಗೌರವ ಅಧ್ಯಕ್ಷರಾದ ಡಾ. ರವೀಂದ್ರ ಗುರುವಣ್ಣವರ ಸಂಸ್ಥೆಯ ಕಾರ್ಯಚಟುವಟಿಕೆಗಳು, ಭವಿಷ್ಯದ ಯೋಜನೆಗಳು ಹಾಗೂ ಸ್ವಯಂಸೇವಕರ ಪಾತ್ರದ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಎರಡೂ ಜಿಲ್ಲೆಗಳ ಸಮರ್ಪಿತ ಹಿರಿಯ ಸ್ವಯಂಸೇವಕರು, ದಾನಿಗಳು, ವಿದ್ಯಾಪೋಷಕದ ಮಾಜಿ ಸಿಬ್ಬಂದಿಗಳು ಹಾಗೂ ಯುವ (ಅಲ್ಯೂಮ್ನಿ) ಸದಸ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗದಗ ಜಿಲ್ಲೆಯಿಂದ ಡಾ. ಸಂಗಮೇಶ ಸಜ್ಜನರ, ಡಾ. ಪಿ.ಎಸ್. ಕಣವಿ, ಡಾ. ಪ್ರಭು ಗಂಜಿಹಾಳ, ಆರ್.ಕೆ. ಭಾಗವಾನ, ಪ್ರೊ. ಮಂಜುನಾಥ ಹೊಳ್ಳಿಯವರ, ಪ್ರೊ. ಎಚ್.ಎನ್. ಕಾಳೆ, ವಿಜಯಕುಮಾರ ಸಜ್ಜನರ, ಶಶಿಧರ ಮಳಲಿ ಮೊದಲಾದವರು ಭಾಗವಹಿಸಿದ್ದರು. ವಿದ್ಯಾಪೋಷಕ ಸಂಸ್ಥೆಯ ಫಾತಿಮಾ ಪಠಾಣ, ರತ್ನಾ ಹಿಪ್ಪರಗಿ, ಅನ್ನಪೂರ್ಣ ಯಡ್ರಾವಿ ಮತ್ತು ಸಿಬ್ಬಂದಿವರ್ಗ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಕಲಬುರಗಿ ಕೋರ್ಟ್‌ನಲ್ಲಿ ಆತಂಕ, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ

0

ಕಲಬುರಗಿ: ನ್ಯಾಯಾಂಗ ಸಂಸ್ಥೆಗಳ ಭದ್ರತೆ ಕುರಿತು ಆತಂಕ ಹೆಚ್ಚುತ್ತಿರುವ ನಡುವೆ, ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲಾ ನ್ಯಾಯಾಲಯ ಅಧಿಕಾರಿಗಳಿಗೆ ಬಂದ ಈ ಸಂದೇಶವನ್ನು ಜಿಲ್ಲಾಧಿಕಾರಿ ತಕ್ಷಣ ನ್ಯಾಯಾಂಗ ಅಧಿಕಾರಿಗಳಿಗೆ ರವಾನಿಸಿದ್ದಾರೆ. ಸಂದೇಶದ ಗಂಭೀರತೆಯನ್ನು ಪರಿಗಣಿಸಿ ತಕ್ಷಣವೇ ತುರ್ತು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೋರ್ಟ್ ಹಾಲ್‌ನಲ್ಲಿದ್ದ ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಯಿತು. ನಂತರ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ತಂಡಗಳು ನ್ಯಾಯಾಲಯ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿವೆ.

ಈ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲವಾದರೂ, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೈಬರ್ ಕ್ರೈಂ ವಿಭಾಗದ ಸಹಾಯದಿಂದ ಬೆದರಿಕೆ ಇ-ಮೇಲ್ ಕಳುಹಿಸಿದವರ ಗುರುತು ಪತ್ತೆ ಮಾಡಲು ತನಿಖೆ ಆರಂಭಿಸಲಾಗಿದೆ.

ಘಟನೆಯ ವಿಡಿಯೋದಲ್ಲಿ ಅಧಿಕಾರಿಗಳ ನಡುವೆ ನಡೆದ ಸಂಕ್ಷಿಪ್ತ ಸಂಭಾಷಣೆ ತುಣುಕುಗಳು ಸಹ ಕೇಳಿಬಂದಿದ್ದು, ಭದ್ರತಾ ಎಚ್ಚರಿಕೆ ಸೂಚನೆಗಳು ತಕ್ಷಣ ಜಾರಿಗೊಂಡಿದ್ದನ್ನು ದೃಢಪಡಿಸುತ್ತದೆ.

ಇತಿಹಾಸ ಅರಿವು ಇಲ್ಲದ ನಾಯಕರು: ಅಶೋಕ್ ವಿರುದ್ಧ ಪ್ರಿಯಾಂಕ್ ಖರ್ಗೆ ರಾಜಕೀಯ ದಾಳಿ

0

ಕಲಬುರಗಿ: ಖಮೇನಿ ಸಾವಿನ ಪ್ರತಿಭಟನೆ ವಿಚಾರದಲ್ಲಿ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕರು ಇತಿಹಾಸದ ಅರಿವು ಇಲ್ಲದೆ ಮಾತನಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಿಂದೆ ಇರಾನ್ ಜತೆ ವ್ಯಾಪಾರ ಸಂಬಂಧ ಹೊಂದಿದ್ದನ್ನು ಉಲ್ಲೇಖಿಸಿದ ಖರ್ಗೆ, ಶತ್ರು ರಾಷ್ಟ್ರಗಳು ಎಂದು ಹೇಳಿ ನಂತರ ವ್ಯಾಪಾರ ಮಾಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ವಿದೇಶಾಂಗ ನೀತಿ ವಿಚಾರದಲ್ಲಿ ಸ್ವತಂತ್ರ ನಿರ್ಧಾರಗಳ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಕರ್ನಾಟಕದ ಜನರ ಸುರಕ್ಷತೆ ಬಗ್ಗೆ ರಾಜ್ಯ ಸರ್ಕಾರ ನಿಗಾವಹಿಸಿದೆ ಎಂದು ಸಚಿವರು ತಿಳಿಸಿದರು. ವಿದೇಶದಲ್ಲಿರುವ ಕನ್ನಡಿಗರ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರದ ಜೊತೆ ಸಂಯೋಜನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿದ್ದರೂ, ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ದೇಶದ ಹಿತಾಸಕ್ತಿಯೇ ಮುಖ್ಯ ಎಂದು ಖರ್ಗೆ ಅಭಿಪ್ರಾಯಪಟ್ಟರು.

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ಭವಿಷ್ಯಕ್ಕೆ ಮಾರ್ಚ್ 6 ಮಹತ್ವದ ದಿನ

0

ಯಾದಗಿರಿ: ಪೋಕ್ಸೋ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ ಮುತ್ಯಾ ಅವರ ಮುಂದಿನ ಕಾನೂನು ಭವಿಷ್ಯ ಮಾರ್ಚ್ 6ರಂದು ನಿರ್ಧಾರವಾಗುವ ಸಾಧ್ಯತೆ ಇದೆ.

ಬಾಲಕಿ ಜತೆ ಅನುಚಿತ ವರ್ತನೆ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ಗಂಭೀರ ಸ್ವರೂಪ ಪಡೆದಿತ್ತು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿತ್ತು. ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇನ್ನು ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ರದ್ದು ಮಾಡುವಂತೆ ಬೆಂಬಲಿಗರು ಯಾದಗಿರಿ ಹಾಗೂ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಮುದಾಯಗಳ ಸದಸ್ಯರು ಸಹ ಮುತ್ಯಾ ಪರವಾಗಿ ನಿಂತಿದ್ದು, ಪ್ರಕರಣದ ಬಗ್ಗೆ ರಾಜಕೀಯ ವಲಯದಲ್ಲೂ ಚರ್ಚೆ ಆರಂಭವಾಗಿದೆ.

ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿರುವುದರಿಂದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಬಾಲಕಿ ನೀಡಿದ ಹೇಳಿಕೆಯು ಪ್ರಕರಣದ ಮುಂದಿನ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಒಳರಾಜಕೀಯ ಗೊಂದಲದ ಬಗ್ಗೆ ನಡೆಯುತ್ತಿರುವ ಚರ್ಚೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಡಿಕೆಶಿ ಜೊತೆಗೆ ತಮ್ಮ ಸಂಬಂಧ ಗಟ್ಟಿಯಾಗಿದೆ ಎಂದು ಹೇಳಿದ ಅವರು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್ ವಿರುದ್ಧ ಫೋನ್ ಕದ್ದಾಲಿಕೆ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಾಕ್ಷ್ಯವಿಲ್ಲದ ಆರೋಪಗಳನ್ನು ಮಾಡಬಾರದು ಎಂದು ವಿರೋಧ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಿಗೆ ವೈಯಕ್ತಿಕ ಅಭಿಪ್ರಾಯ ಹೇಳುವ ಅವಕಾಶ ಇದ್ದರೂ, ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ. ಹೈಕಮಾಂಡ್ ಆದೇಶವೇ ಅಂತಿಮ ಎಂದು ಹೇಳುವ ಮೂಲಕ ಪಕ್ಷದ ಏಕತೆಯ ಸಂದೇಶವನ್ನು ರವಾನಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಮುಂದುವರಿಯುವ ಬಗ್ಗೆ ನೇರ ಹೇಳಿಕೆ ನೀಡದ ಸಿಎಂ ನಡೆ ರಾಜಕೀಯ ವಿಶ್ಲೇಷಕರ ಗಮನ ಸೆಳೆದಿದೆ. ಕೆಲ ವಿಶ್ಲೇಷಕರು ಇದನ್ನು ತಂತ್ರ ರಾಜಕೀಯ ಎಂದರೆ, ಮತ್ತೊಂದು ವರ್ಗ ಇದನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿರುವ ನಿಲುವು ಎಂದು ಅಭಿಪ್ರಾಯಪಟ್ಟಿದ್ದಾರೆ.

4 ಲಕ್ಷ ಲಂಚ ಡೀಲ್ ಬಯಲು: 1 ಲಕ್ಷ ಸ್ವೀಕರಿಸುವಾಗಲೇ ಬಿಇಓ ಎ.ಕೆ. ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ

0

ಭದ್ರಾವತಿ: ತಮ್ಮದೇ ಕಚೇರಿಯ ಸಿಬ್ಬಂದಿಯಿಂದ 4 ಲಕ್ಷ ರೂ ಲಂಚ ಬೇಡಿಕೆ ಇಟ್ಟಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ 1 ಲಕ್ಷ ರೂ ಮೊದಲ ಕಂತು ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮಧ್ಯವರ್ತಿ ಮಂಜುನಾಥ್ ಜೊತೆ ಸೇರಿ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಿಂಗರಾಜು ಅವರಿಗೆ 2011 ರಿಂದ 2023 ರವರೆಗೆ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಭತ್ಯೆಗಳ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಲು 4 ಲಕ್ಷ ರೂ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಪೈಕಿ ಇಂದು 1 ಲಕ್ಷ ರೂ ಸ್ವೀಕರಿಸುವಾಗಲೇ ದಾಳಿ ನಡೆದಿದೆ.

ಲಿಂಗರಾಜು ಹಲವು ಬಾರಿ ಬಿಇಓ ಹಾಗೂ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ನಂತರ ಖಾಸಗಿ ವ್ಯಕ್ತಿ ಮಂಜುನಾಥ್ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂಜೆ ಸುಮಾರು 7 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕೊಠಡಿಯಲ್ಲಿ ಲಂಚ ಸ್ವೀಕರಿಸುವಾಗ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಂಜುನಾಥ್ ತನ್ನನ್ನು ಆರ್‌ಟಿಐ ಕಾರ್ಯಕರ್ತ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿದ್ದು, ಆ ಕುರಿತು ತನಿಖೆ ಮುಂದುವರಿದಿದೆ.

ಕಾರ್ಯಾಚರಣೆ ಬಿ ಪಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಿತು. ಪೊಲೀಸ್ ಅಧೀಕ್ಷಕ ಎಮ್ ಎಸ್ ಕೌಲಾಪೂರೆ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ ಎಲ್ ಕುಸಲಾಪುರ, ಗುರುರಾಜ್ ಎನ್ ಮೈಲಾರಿ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಮಂಡ್ಯ ರಾಜಕೀಯ ಸ್ಫೋಟ: “ಅಣ್ಣನ ಮಗನನ್ನೇ ಜೈಲಿಗೆ ಹಾಕಿಸಿದ್ರು” – ಕುಮಾರಸ್ವಾಮಿ ವಿರುದ್ಧ ಉದಯ್ ಗಂಭೀರ ಆರೋಪ

0

ಮಂಡ್ಯ: ರಾಜಕೀಯ ತಾಪಮಾನ ಏರಿಕೆಯಾಗಿದೆ. ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಲು ರಾಜಕೀಯ ಷಡ್ಯಂತ್ರವೇ ಕಾರಣ ಎಂದು ಉದಯ್ ನೇರ ಆರೋಪ ಹೊರಿಸಿದ್ದಾರೆ.

ಮದ್ದೂರಿನಲ್ಲಿ ಮಾತನಾಡಿದ ಅವರು, “ತಮ್ಮ ಮಗ ಗೆದ್ದಿಲ್ಲ ಎಂಬ ಕಾರಣಕ್ಕೆ ಅಣ್ಣನ ಮಗನನ್ನೇ ಜೈಲಿಗೆ ಹಾಕಿಸಿದ್ರು. ಅಣ್ಣನ ಮಗನನ್ನೇ ಸಹಿಸಿಕೊಳ್ಳದವರು ನಮ್ಮನ್ನು ಸಹಿಸಿಕೊಳ್ತಾರಾ?” ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮನಸ್ಸು ಮಾಡಿದ್ದರೆ ಪರಿಸ್ಥಿತಿ ಬೇರೆ ಆಗಬಹುದಿತ್ತು ಎಂದೂ ಹೇಳಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಕುಮಾರಸ್ವಾಮಿಗೆ ನೇರ ಸವಾಲು ಹಾಕಿದ ಉದಯ್, “ತಾಕತ್ತಿದ್ದರೆ ಮಂಡ್ಯಕ್ಕೆ ಕೈಗಾರಿಕೆ ತರಲಿ. ನಾನು 60-70 ಎಕರೆ ಜಮೀನು ಕೊಡ್ತೀನಿ. ಸರ್ಕಾರದ ಭಾಗವಾಗಿ ಜಾಗ ಕೊಡ್ತೇವೆ. ಮೊದಲು ಯಾವ ಕೈಗಾರಿಕೆ ತರುತ್ತಾರೆ ಅಂತ ಹೇಳಲಿ” ಎಂದು ಕಿಡಿಕಾರಿದ್ದಾರೆ.

ರೈತರ ಸಂಕಷ್ಟ ಅರಿತು ಕೆಲಸ ಮಾಡಬೇಕು, ಟಿವಿ ಭಾಷಣಗಳಿಂದ ಅಭಿವೃದ್ಧಿ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಆಸ್ಟಿನ್‌ನಲ್ಲಿ ಗುಂಡಿನ ನರಮೇಧ: ಭಾರತೀಯ ವಿದ್ಯಾರ್ಥಿನಿ ಬಲಿ, ಭಯೋತ್ಪಾದಕ ಸಂಪರ್ಕ ಶಂಕೆ

0

ನ್ಯೂಯಾರ್ಕ್‌: ಆಸ್ಟಿನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 2 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 14ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಸವಿತಾ ಶಾನ್ ಇದ್ದಾರೆ.

ದಾಳಿ ನಡೆಸಿದ ನ್ಡಿಯಾಗಾ ಡಯಾಗ್ನೆ, ಸಾರ್ವಜನಿಕ ಪ್ರದೇಶದಲ್ಲಿ ನಿಂತು ಜನರ ಮೇಲೆ ನಿರಂತರವಾಗಿ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇರಾನ್ ಧ್ವಜ ಚಿಹ್ನೆ ಧರಿಸಿದ್ದನೆಂಬ ಮಾಹಿತಿ ಕೂಡ ಹೊರಬಂದಿದ್ದು, ದಾಳಿಯ ಹಿಂದೆ ರಾಜಕೀಯ ಪ್ರತೀಕಾರದ ಉದ್ದೇಶ ಇರಬಹುದು ಎಂದು ಶಂಕಿಸಲಾಗಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮತ್ತು ಸ್ಥಳೀಯ ಪೊಲೀಸರು ಈ ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಟೆಕ್ಸಾಸ್ ವಿಶ್ವವಿದ್ಯಾಲಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯಿಂದ ಅಮೆರಿಕದಲ್ಲಿ ವಿದ್ಯಾರ್ಥಿ ಸುರಕ್ಷತೆ ಕುರಿತು ಹೊಸ ಚರ್ಚೆ ಆರಂಭವಾಗಿದೆ.

error: Content is protected !!