Home Blog Page 9

ನನ್ನ ಹೇಳಿಕೆಗೆ ಈಗಲೂ ಬದ್ಧ: ಶಿವಕುಮಾರ್ ಕೊಟ್ಟಿರುವ ನೋಟಿಸ್’ಗೆ ಉತ್ತರಿಸುತ್ತೇನೆ – ಇಕ್ಬಾಲ್ ಹುಸ್ಸೇನ್!

ರಾಮನಗರ:- ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆ ಡಿಕೆ ಶಿವಕುಮಾರ್ ಹೊರಡಿಸಿರುವ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಇಕ್ಬಾಲ್ ಹುಸ್ಸೇನ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಶಿವಕುಮಾರ್​ ನಮ್ಮ ಅಧ್ಯಕ್ಷರು, ಪಕ್ಷದ ಸದಸ್ಯರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸ್ವಾತಂತ್ರ್ಯ ಅವರಿಗಿದೆ, ನನಗೆ ನೋಟೀಸ್ ನೀಡಿ 7ದಿನಗೊಳಗೆ ಉತ್ತರ ನೀಡುವಂತೆ ಹೇಳಿದ್ದಾರೆ, ಉತ್ತರ ಕೊಡುತ್ತೇನೆ,

ಅದರೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಹೇಳಿದರು. ಬೇರೆ ಶಾಸಕರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತಾಡಿದ್ದಾರೆ, ಅವರಿಗಿಲ್ಲದ ನೋಟೀಸ್ ನಿಮಗ್ಯಾಕೆ ಅಂತ ಕೇಳಿದರೆ, ಮಾಧ್ಯಮದವರು ಅವರನ್ನೇ ಕೇಳಬೇಕು ಅಂತ ಇಕ್ಬಾಲ್ ಹೇಳಿದರು.

ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ: ಯತ್ನಾಳ್ ಆರೋಪ

ವಿಜಯಪುರ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರಲ್ಲಿ ಮಾತಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ನಮ್ಮ ಹೋರಾಟವನ್ನು ತಡೆಯಲು ಪ್ರಯತ್ನಿಸಿದ್ರೂ,

ನಾವು ಕೋರ್ಟ್ ಮುಖಾಂತರ ಹೋರಾಟ ಮುಂದುವರೆಸಿದ್ದೇವೆ. ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಕಾನೂನು ಹೋರಾಟ ಮಾಡಿದ್ದಕ್ಕೆ ಈಗ ಜಯ ಸಿಕ್ಕಿದೆ ಎಂದ್ರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆನಾನು, ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಕಾನೂನು ಹೋರಾಟ ಮಾಡಿದ್ದೇವೆ. ನಮ್ಮ ಹೋರಾಟದ ಫಲವಾಗಿ ಇಂದು ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ ಎಂದು ಹೇಳಿದರು.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಸರ್ಕಾರದ ಅಮಾನತು ಆದೇಶ ಸರಿ ಇದೆ – ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ ಮೆಟ್ಟಿಲೇರಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

ನಾವು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದೇವೆ,  ಸರ್ಕಾರದ ಅಮಾನತು ಆದೇಶ ಸರಿ ಇದೆ ಅನ್ನೋದು ನಮ್ಮ ವಾದ ಎಂದರು. ಬಳ್ಳಾರಿ ಜೈಲಿನಲ್ಲಿ ಕೈದಿಗಳ ಗದ್ದಲ, ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮತ್ತೆ ಆ ರೀತಿ ಆಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಧಾರವಾಡ ಎಸಿಪಿ ನಾರಾಯಣ ಬರಮಣ್ಣಿ ವಿಆರ್​ಎಸ್ ವಿಚಾರವಾಗಿ ಮಾತನಾಡಿ, ಅವರು ಹಾಗೇನೂ ಮಾಡಲ್ಲ, ಆ ರೀತಿ ಏನೂ ಇಲ್ಲ. ಸಚಿವ ಹೆಚ್.ಕೆ. ಪಾಟೀಲ್ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಪೋಸ್ಟಿಂಗ್ ಕೊಡ್ತೇವೆ. ಮುಖ್ಯಮಂತ್ರಿಗಳು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಲಿಲ್ಲ. ಆ ಸಂದರ್ಭದಲ್ಲಿ ಸಿಎಂ ಹಾಗೆ ನಡೆದುಕೊಂಡರು ಅಷ್ಟೇ ಎಂದರು.

ಪತ್ನಿ, ಮಗಳ ಜೀವನ ನಿರ್ವಹಣೆಗೆ ಮಾಸಿಕ 4 ಲಕ್ಷ ನೀಡಲು ಮೊಹಮ್ಮದ್ ಶಮಿಗೆ ಕೋರ್ಟ್ ಆದೇಶ!

ಕೊಲ್ಕತ್ತಾ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ಶಮಿ ಅವರು ತಮ್ಮ ಮಾಜಿ ಪತ್ನಿ ಹಸೀನ್ಜಹಾನ್ಅವರಿಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡಬೇಕೆಂದು ಕೊಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ.

ಮೊಹಮ್ಮದ್ ಶಮಿ 2014 ರಲ್ಲಿ ಹಸಿನ್ ಜಹಾನ್ ಅವರನ್ನು ವಿವಾಹವಾಗಿದ್ದರು. 2015 ರಲ್ಲಿ ದಂಪತಿಗೆ ಮಗಳು ಜನಿಸಿದ್ದರು. ಆದರೆ 2018 ರಲ್ಲಿ ಶಮಿ ವಿರುದ್ಧ ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ ಮತ್ತು ಮ್ಯಾಚ್ ಫಿಕ್ಸಿಂಗ್ನಂತಹ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಹಸಿನ್ ಜಹಾನ್ ಸುದ್ದಿಯಾಗಿದ್ದರು.

ಅಷ್ಟೇ ಅಲ್ಲದೆ ಶಮಿ ಮತ್ತು ಅವರ ಕುಟುಂಬದ ವಿರುದ್ಧ ಹಸಿನ್ ಕೋಲ್ಕತ್ತಾದ ಜಾದವ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ವೇಳೆ ಮಾಸಿಕ 10 ಲಕ್ಷ ರೂ. ಜೀವನಾಂಶವನ್ನು ಸಹ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಪ್ರಕರಣದ ತೀರ್ಪು ಬಂದಿದ್ದು, ತನ್ನಿಂದ ದೂರವಾಗಿರುವ ಪತ್ನಿ ಹಸಿನ್ ಜಹಾನ್ ಮತ್ತು ಅವರ ಮಗಳಿಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡುವಂತೆ ಕೊಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಮೊತ್ತವು ಕಳೆದ ಏಳು ವರ್ಷಗಳವರೆಗೆ ಅನ್ವಯವಾಗುತ್ತದೆ. ಅಂದರೆ ಶಮಿ ಅವಧಿಗೆ ಬಾಕಿ ಹಣವನ್ನು ಸಹ ಪಾವತಿಸಬೇಕಾಗುತ್ತದೆ. ಅಂದರೆ ಅವರು ಹಸಿನ್ ಜಹಾನ್ ಗೆ 3 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರ ಪೀಠವು ಜುಲೈ 1, 2025 ರಂದು ತೀರ್ಪು ನೀಡಿದ್ದು. ಶಮಿ ತನ್ನ ಪತ್ನಿ ಹಸಿನ್ ಜಹಾನ್ಗೆ ಪ್ರತಿ ತಿಂಗಳು 1.5 ಲಕ್ಷ ರೂ. ಮತ್ತು ಮಗಳು ಐರಾಗೆ 2.5 ಲಕ್ಷ ರೂ. ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

 

ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಕೊನೆಗೂ ಮುಹೂರ್ತ ಫಿಕ್ಸ್: ಭಾರತ-ಪಾಕ್ ಮುಖಾಮುಖಿ ಯಾವಾಗ..?

ಏಷ್ಯಾಕಪ್ ಟೂರ್ನಿಯ 17ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಟೂರ್ನಿ ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಅದರಂತೆ ಸೆಪ್ಟೆಂಬರ್​ ಮೊದಲ ವಾರದಿಂದ ಏಷ್ಯಾಕಪ್ ಶುರುವಾಗುವುದು ಬಹುತೇಕ ಖಚಿತವಾಗಿದೆ.

ಹೌದು ಸೆ.21 ರಂದು ಫೈನಲ್‌ ಪಂದ್ಯ ನಡೆಯಲಿದೆ. 17 ದಿನಗಳ ಟೂರ್ನಿಯ ವೇಳಾಪಟ್ಟಿ ಬಹುತೇಕ ಪೂರ್ಣಗೊಂಡಿದೆ. ಭಾರತ ಸೇರಿದಂತೆ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ರಾಷ್ಟ್ರಗಳು ತಮ್ಮ ಸರ್ಕಾರಗಳಿಂದ ಅನುಮತಿ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ.

ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಯುಎಇ ಟೂರ್ನಿಯಲ್ಲಿ ಭಾಗವಹಿಸಲಿವೆ. ಗುಂಪುಹಂತ ಮತ್ತು ಸೂಪರ್‌ ಫೋರ್‌ ವಿಧಾನದಲ್ಲಿ ಸ್ಪರ್ಧೆಗಳು ನಡೆಯಲಿವೆ. ಪಹಲ್ಗಾಮ್‌ ಘಟನೆ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದು ಉಭಯ ದೇಶಗಳ ನಡುವಿನ ಕ್ರಿಕೆಟ್‌ ಪಂದ್ಯದ ಬಗ್ಗೆಯೂ ಪ್ರಶ್ನಾರ್ಥಕ ಚಿಹ್ನೆ ಇತ್ತು. ಈ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ!

ಚಿಕ್ಕಬಳ್ಳಾಪುರ:- ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ. ನಿಮಗ್ಯಾಕೆ ಅನುಮಾನ ಬಂದಿದೆ? ಅಂತ ಪ್ರಶ್ನಿಸಿದ್ರು.

ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು, ಸತ್ಯ ಹೇಳೋದು ಅವರಿಗೆ ಗೊತ್ತೇ ಇಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. 5 ವರ್ಷ ನಾವೇ ಅಧಿಕಾರದಲ್ಲಿ ಇರ್ತೇವೆ. ನಮ್ಮ ಸರ್ಕಾರ ಬಂಡೆ ತರ ಇರುತ್ತೆ ಎಂದರು. ಬಿಜೆಪಿಯವರು ಹಗಲು ಕನಸು ಕಾಣ್ತಿದ್ದಾರೆ.

ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಡಿಕೆ ಶಿವಕುಮಾರ್ ಹೇಳೋ ಹಾಗೆ ಏನೂ ಸಾಕ್ಷಿ ಗುಡ್ಡೆ ಬಿಟ್ಡು ಹೋಗಿದ್ದಾರೆ. ಕುಮಾರಸ್ವಾಮಿ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಏನು ಮಾಡಿದ್ರು? ಸುಳ್ಳು ಹೇಳಿಕೊಂಡು ಜನರನ್ನ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಬಿಟ್ರೆ, ಬೇರೆನೂ ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.

ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಒಂದೇ ದಿನ ಇಬ್ಬರು ಸಾವು..!

ಧಾರವಾಡ: ಹಾಸನದಲ್ಲಿ ಹೃದಯಾಘಾತದ ಮರಣ ಮೃದಂಗ ನಿಲ್ಲದಾಗಿದ್ದು ಇದು ಬೇರೆ ಜಿಲ್ಲೆಗಳಲ್ಲೂ ಆತಂಕ ಮೂಡಿಸಿದೆ. ಈ ನಡುವೆ ಧಾರವಾಡ ಜಿಲ್ಲೆಯಲ್ಲಿ ಕೂಡ ಹೃದಯಾಘಾತದ ಪ್ರಕರಣಗಳು ಆರಂಭವಾಗಿದೆ. ಒಂದೇ ದಿನ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಡೆದಿದೆ.

ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ (45) ಮೃತ ದುರ್ಧೈವಿಗಳಾಗಿದ್ದು,

ಸೋಮವಾರ ರಾತ್ರಿ ಇಬ್ಬರು ಕೂಡ ಮಲಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ

ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ಐಸಿಎಂಆರ್

ನವದೆಹಲಿ: ಹಠಾತ್ಹೃದಯಾಘಾತ ಈಗಾಗಲೇ ಅನೇಕರನ್ನ ಬಲಿ ಪಡೆದಿದೆ. ರಾಜ್ಯದಲ್ಲಿ ಹೆಚ್ಚಾಗ್ತಿರುವ ಹಾರ್ಟ್ ಅರ್ಟಾಕ್ ಕೇಸ್ಗಳಿಗೆ ಕಾರಣ ಏನು ಅನ್ನೋದೇ ದೊಡ್ಡ ಪ್ರಶ್ನೆ ಆಗಿದೆ. ಕೊರೊನಾ ಬಂದ ಬಳಿಕ ಬಿಪಿ, ಶುಗರ್ ಜೊತೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಿದವು.

ಇದಕ್ಕೆಲ್ಲಾ ಕೋವಿಡ್ಲಸಿಕೆಯೇ ಕಾರಣ ಎಂಬ ಊಹಾಪೋಹದ ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಇದರ ನಡುವೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಅನೇಕರು ಬಲಿಯಾಗಿದ್ದು. ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ.

ಬಗ್ಗೆ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದೆ.

ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆ ಇಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: “ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಹಾಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ‌ ಎ‌ದುರು ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂದು ಕೇಳಿದಾಗ, “ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು, ಜವಾಬ್ದಾರಿ ವಹಿಸಲು ಸುರ್ಜೆವಾಲ ಅವರು ಬಂದಿದ್ದಾರೆ” ಎಂದರು.

ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಶಿಸ್ತು ಮುಖ್ಯ. ಅವರಿಗೂ ನೋಟಿಸ್ ನೀಡುವೆ, ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಏಕೆ?” ಎಂದರು.

ನೀವು ಪಕ್ಷ‌ ಕಟ್ಟಲು ಕಷ್ಟಪಟ್ಟಿದ್ದೀರಿ ಆ ಕಾರಣಕ್ಕೆ ನಿಮ್ಮ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಕೇಳಿದಾಗ, “ನಾನೊಬ್ಬನೆ‌ ಪಕ್ಷ‌ ಕಟ್ಟಿದ್ದೇನೆಯೇ? ನನ್ನಂತೆ ನೂರಾರು, ಸಾವಿರಾರು ಲಕ್ಷಾಂತರ ಜನ ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆ ಉಳಿಸಿಕೊಳ್ಳೋಣ” ಎಂದು ಹೇಳಿದರು.

ಸಚಿವ ಸಂಪುಟ ಸಭೆ ವಿಚಾರವಾಗಿ ಕೇಳಿದಾಗ, “ನಾಡಪ್ರಭು ಕೆಂಪೇಗೌಡರ ಮಾಗಡಿ ಸ್ಮಾರಕ ಅಭಿವೃದ್ಧಿ ಸೇರಿದಂತೆ ಬೆಂಗಳೂರಿಗೆ ಒಂದಷ್ಟು ಚಿಕ್ಕಪುಟ್ಟ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

“ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಈಗಾಗಲೇ ಕುಡಿಯುವ ನೀರಿನ ಯೋಜನೆಗಳನ್ನು ನೀಡಿದ್ದೇವೆ. ಬೆಂಗಳೂರು ಗ್ರಾಮಾಂತರವನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಇದನ್ನೂ ಪ್ರಸ್ತಾವನೆ ಮಾಡಲಾಗುವುದು” ಎಂದು ಹೇಳಿದರು.

ಬೆಂಗಳೂರು ‌ಉತ್ತರ ಜಿಲ್ಲೆ ಮರುನಾಮಕರಣದ ಬಗ್ಗೆ ಕೇಳಿದಾಗ, “ಈ ಮೊದಲು ಕನಕಪುರ, ಚನ್ನಪಟ್ಟಣ, ರಾಮನಗರ ಭಾಗಗಳು ಹಾಗೂ ನಾನು ಪ್ರತಿನಿಧಿಸಿದ್ದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದಾಗ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿತ್ತು. ಬೆಂಗಳೂರು ದಕ್ಷಿಣ ಎಂದು ನಾಮಕರಣವಾದ ನಂತರ ಈ ಭಾಗದ ಶಾಸಕರ ಮನವಿ ಮೇರೆಗೆ ತೀರ್ಮಾನಕ್ಕೆ ಬರಲಾಗುವುದು” ಎಂದರು.

Bike Taxis: ಬೈಕ್ ಟ್ಯಾಕ್ಸಿಗೆ ಚಾಲಕರಿಗೆ ಕೇಂದ್ರದಿಂದ ಅನುಮತಿ..! ರಾಜ್ಯ ಸರ್ಕಾರ ಒಪ್ಪಿಗೆ ನೀಡುತ್ತಾ?

ನವದೆಹಲಿ: ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಗಳು ಸ್ಥಗಿತಗೊಳಿಸಲಾಗಿತ್ತು. ಈ ವಿಷಯವಾಗಿ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಜೊತೆಗೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು,

ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿ ಏನಿದೆ?
– ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
– ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
– ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
– ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು.

 

error: Content is protected !!