Home Blog Page 9

ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಬಗ್ಗೆ ಚರ್ಚೆ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲಾ ನಗರ ಪ್ರದೇಶಗಳಿಗೆ ಸಂಚಾರ ಯೋಜನೆ ರೂಪಿಸಬೇಕು.

ಮುಂದಿನ 25 ವರ್ಷಕ್ಕೆ ಅಗತ್ಯವಿರುವ ಸಂಚಾರಿ ಮಾರ್ಗದ ಯೋಜನೆ ರೂಪಿಸಬೇಕು. ಎಲ್ಲಾ ನಗರ ಪ್ರದೇಶಗಳಲ್ಲಿ ವರ್ತುಲ ರಸ್ತೆಗಳಿಗೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಸಮಯವೇ ಹಣ, ಯಾರೂ ಸಹ ಸಮಯ ವ್ಯರ್ಥ ಮಾಡಿಕೊಳ್ಳಲು ಬಯಸುವುದಿಲ್ಲ. ಹೀಗಾಗಿ ನಾವು ಈಗಿನಿಂದಲೇ ಯೋಜನೆ ರೂಪಿಸಬೇಕಿದೆ. ಈ ಬಗ್ಗೆ ನಾನು, ನಗರಾಭಿವೃದ್ಧಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಪೌರಾಡಳಿತ ಸಚಿವರು ಸಭೆ ಸೇರಿ, ನಗರ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ” ಎಂದು ತಿಳಿಸಿದರು.

“ಮುಂದಿನ 25 ವರ್ಷಗಳಲ್ಲಿ ಕರ್ನಾಟಕದ ಜನಸಂಖ್ಯೆಯಲ್ಲಿ ಸುಮಾರು 70% ನಗರ ಪ್ರದೇಶಕ್ಕೆ ವರ್ಗಾವಣೆಯಾಗುವ ಲೆಕ್ಕಾಚಾರ ಅವರದ್ದಾಗಿದೆ. ನಮ್ಮ ಪ್ರಗತಿ ನೋಡಿ ಅವರು ಈ ಲೆಕ್ಕಾಚಾರ ಮಾಡಿದ್ದಾರೆ. ಇದಕ್ಕೆ ಯಾವ ತಯಾರಿ ನಡೆಸಿದ್ದೀರಿ ಎಂದು ಕೇಳಿದರು. ಹೀಗಾಗಿ ನಾವು ಸಮಯ ವ್ಯರ್ಥ ಮಾಡದೇ ಇಡೀ ರಾಜ್ಯದಲ್ಲಿ ಸಂಚಾರಿ ಗ್ರಿಡ್ ರೂಪಿಸಬೇಕು ಎಂದು ತೀರ್ಮಾನಿಸಿದ್ದೇವೆ.

ಎಲ್ಲಿ ರಸ್ತೆ ಬರುತ್ತದೆ, ರಸ್ತೆ ಅಗಲೀಕರಣ ಎಷ್ಟಿರಬೇಕು ಎಂಬುದರ ಬಗ್ಗೆ ಕಾನೂನಾತ್ಮಕವಾಗಿ ಚರ್ಚೆ ಮಾಡಿ ಹೊಸ ತೀರ್ಮಾನ ಮಾಡಬೇಕಿದೆ. ಬೆಂಗಳೂರಿನಲ್ಲಿ ಪೆರಿಫೆರಲ್ ರಿಂಗ್ ರಸ್ತೆಗೆ ಅಧಿಸೂಚನೆ ಹೊರಡಿಸಿ ನಂತರ ಅದನ್ನು ಕಾರ್ಯರೂಪಕ್ಕೆ ತರಲು ತಡವಾಗಿದೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕು” ಎಂದರು.

45ಕ್ಕೂ ಹೆಚ್ಚು ಕಂಪನಿಗಳ ಜೊತೆ ಹೂಡಿಕೆ ಬಗ್ಗೆ ಚರ್ಚೆ

“ದಾವೋಸ್ ಕಾರ್ಯಕ್ರಮದಲ್ಲಿ ಡಾಟಾ ಸೆಂಟರ್, ಗ್ಲೋಬಲ್ ಕೇಪಬಲ್ ಸೆಂಟರ್, ಆಹಾರ ಮತ್ತು ಪಾನೀಯ, ಏವಿಯೇಷನ್, ನವೀಕೃತ ಇಂಧನ, ಇವಿ, ಎಲೆಕ್ಟ್ರಾನಿಕ್ಸ್, ಅಡ್ವಾನ್ಸ್ ಮ್ಯಾನ್ಯುಫ್ಯಾಕ್ಚರ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 45ಕ್ಕೂ ಹೆಚ್ಚು ಕಂಪನಿಗಳ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಾಗಿದೆ. ನಮ್ಮಲ್ಲಿ ಲಭ್ಯವಿರುವ ನೀರು,

ವಿದ್ಯುತ್ ಪ್ರಮಾಣ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಗಳನ್ನು ಕಂಪನಿಗಳು ಪಡೆದಿವೆ. ಹೊರ ದೇಶಗಳಲ್ಲಿ ಉದ್ಯಮ ಮಾಡುತ್ತಿರುವ ಅನಿವಾಸಿ ಭಾರತೀಯರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರುಗಳು ಕೂಡ ನಮ್ಮ ಕೈಗಾರಿಕ ಸಚಿವರಾದ ಎಂ.ಬಿ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ” ಎಂದು ವಿವರಿಸಿದರು.

“ಈ ಬಾರಿಯ ಕಾರ್ಯಕ್ರಮದಲ್ಲಿ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡುವ ಕಂಪನಿಗಳ ಜೊತೆಗಿನ ಒಪ್ಪಂದಕ್ಕೆ ಅಲ್ಲಿ ಸಹಿ ಹಾಕುವುದು ಬೇಡ ಎಂದು ನಿರ್ಧರಿಸಿದ್ದೇವೆ. ಹೊರ ದೇಶಗಳ ಕಂಪನಿಗಳು ಇಲ್ಲಿಗೆ ಬಂದು, ಇಲ್ಲಿನ ವಾತಾವರಣ, ಯುವ ಪ್ರತಿಭೆ, ಇಲ್ಲಿನ ಸೌಲಭ್ಯ, ಇಂಧನ, ನೀರಿನ ಸೌಲಭ್ಯ ಗಮನಿಸಬೇಕು. ಇನ್ನು ನಮ್ಮ ರಾಜ್ಯದ ಉದ್ಯಮಿಗಳು ಕೂಡ ಅಲ್ಲಿಗೆ ಬಂದು ತಮ್ಮ ಉದ್ಯಮ ವಿಸ್ತರಣೆಗೆ ತಮ್ಮ ಆಲೋಚನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 11 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಪ್ರಸ್ತಾವನೆ ಬಂದಿದ್ದು, ಇದರಲ್ಲಿ 50% ನಷ್ಟು ಹೂಡಿಕೆ ಕಾರ್ಯಗತಗೊಳ್ಳುತ್ತಿದೆ. ಹೀಗಾಗಿ ದಾವೋಸ್ ನಲ್ಲಿ ಒಪ್ಪಂದಕ್ಕೆ ಸಹಿ ಹಾಕದೇ, ಇಲ್ಲೇ ಸಹಿ ಹಾಕಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಮೈಸೂರು: ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದರು.ಅವರು‌ ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿದರು.‌

ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದರು.

ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿ ಗಳಿಗೆ ವರದಿ ನೀಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿದ್ಯಮಾನಗಳ ಬಗ್ಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ.

ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು. ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎಂದರು.

Sri Lanka vs England: ಕೆವಿನ್ ಪೀಟರ್ಸನ್ ಹೆಸರಿನಲ್ಲಿದ್ದ ದಾಖಲೆ ಮುರಿದ ಜೋ ರೂಟ್!

0

ಇಂಗ್ಲೆಂಡ್ ಬ್ಯಾಟಿಂಗ್ ಸ್ಟಾರ್ ಜೋ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅವರು ಕೆವಿನ್ ಪೀಟರ್ಸನ್ ಹೊಂದಿದ್ದ ದಾಖಲೆ ಮುರಿದು, ಇಂಗ್ಲೆಂಡ್ ಪರ ಅತಿ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರರಾಗಿದ್ದಾರೆ.

ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರೂಟ್ ಭರ್ಜರಿ ಪ್ರದರ್ಶನ ನೀಡಿದರು. ಶ್ರೀಲಂಕಾ ನೀಡಿದ 220 ರನ್ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಪರ, ರೂಟ್ 90 ಎಸೆತಗಳಲ್ಲಿ 75 ರನ್ ಗಳಿಸಿದ್ದರು.

ಬ್ಯಾಟಿಂಗ್ ಜೊತೆಗೆ ಅವರು ಬೌಲಿಂಗ್ನಲ್ಲಿ 2.3 ಓವರ್ಗಳಲ್ಲಿ 13 ರನ್ ನೀಡಿ 2 ವಿಕೆಟ್ ಗಳನ್ನು ಕಬಳಿಸಿದ್ದರು. ಈ ಪ್ರಯತ್ನದ ಮೂಲಕ ಇಂಗ್ಲೆಂಡ್ ಗೆಲುವಿನಲ್ಲಿ ರೂಟ್ ಪ್ರಮುಖ ಪಾತ್ರವಹಿಸಿದ್ದರು. ಈ ಕಾರಣದಿಂದಲೇ ಅವರು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಜಯಿಸಿದರು.

ಇಂಗ್ಲೆಂಡ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 383 ಪಂದ್ಯಗಳ ಆಡಿದ ರೂಟ್ ಒಟ್ಟು 27 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆಯನ್ನು 277 ಪಂದ್ಯಗಳಲ್ಲಿ 26 ಬಾರಿ ಪ್ರಶಸ್ತಿ ಪಡೆದಿದ್ದ ಕೆವಿನ್ ಪೀಟರ್ಸನ್ ಅವರಿಗಿತ್ತು. ಈ ಮೂಲಕ ಜೋ ರೂಟ್ ಇಂಗ್ಲೆಂಡ್ ಪರ ಅತಿ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರರಾಗಿದ್ದಾರೆ.

ವಿಕಾಸ್ ಪುತ್ತೂರುಗೆ ದ್ವೇಷ ಭಾಷಣ ನೋಟಿಸ್ ನೀಡುವುದು ತಪ್ಪು: ಗೃಹ ಸಚಿವ ಪರಮೇಶ್ವರ್

0

ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣ ಮಸೂದೆಯ ಅಡಿ ಪೊಲೀಸ್ ನೋಟಿಸ್ ನೀಡಿರುವುದು ತಪ್ಪಾಗಿದೆ ಎಂದು ಕರ್ನಾಟಕದ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮಗಳು ಈ ಸಂಬಂಧ ಪ್ರಶ್ನಿಸಿದಾಗ, ಈ ವಿಚಾರದಲ್ಲಿ ಮಾಹಿತಿ ಪರಿಶೀಲಿಸಿ ನಂತರ ಸ್ಪಷ್ಟನೆ ನೀಡುತ್ತೇನೆ ಎಂದು ಸಚಿವರು ಹೇಳಿದ್ದಾರೆ. ಅವರು ವಿವರಿಸಿದಂತೆ, ಈ ಮಸೂದೆಗೆ ಇನ್ನೂ ರಾಜ್ಯಪಾಲರ ಸಹಿ ಬಿದ್ದಿಲ್ಲ. ಭಾರತೀಯ ನ್ಯಾಯಸಂಹಿತೆಯ ಅಡಿ ವಿವಿಧ ಸೆಕ್ಷನ್ಗಳಲ್ಲಿ ನೋಟಿಸ್ ನೀಡಲು ಸಾಧ್ಯವಿರುವಾಗ, ಈಗಿನ ಪ್ರಕರಣದಲ್ಲಿ ಕಾನೂನಾತ್ಮಕ ಸ್ಥಿತಿ ಸ್ಪಷ್ಟವಾಗಿಲ್ಲ.

ಸಚಿವರು ಪೊಲೀಸರು ಏಕೆ ಈ ರೀತಿಯ ನೋಟಿಸ್ ನೀಡಿದರೆಂದು ಪರಿಶೀಲನೆ ಮಾಡಬೇಕಾಗಿರುವುದಾಗಿ, ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

ಗಣರಾಜ್ಯೋತ್ಸವ: 982 ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಶೌರ್ಯ ಹಾಗೂ ಸೇವಾ ಪದಕಕ್ಕೆ ಆಯ್ಕೆ

0

ನವದೆಹಲಿ: ಈ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ, ನಾಗರಿಕ ರಕ್ಷಣಾ ಮತ್ತು ತಿದ್ದುಪಡಿ ಸೇವೆಗಳ 982 ಸಿಬ್ಬಂದಿಯನ್ನು ಶೌರ್ಯ ಮತ್ತು ಸೇವಾ ಪದಕಗಳಿಗಾಗಿ ಆಯ್ಕೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿರುವಂತೆ, ಈ 982 ಪದಕಗಳಲ್ಲಿ 125 ಶೌರ್ಯ ಪದಕಗಳಿವೆ.

ಈ ಬಾರಿ ಶೌರ್ಯ ಮತ್ತು ಸೇವಾ ಪದಕಗಳಿಗೆ ಆಯ್ಕೆಯಾದವರಲ್ಲಿ ಹೆಚ್ಚು ಜಮ್ಮು ಮತ್ತು ಕಾಶ್ಮೀರದ ಸಿಬ್ಬಂದಿಯವರಿದ್ದಾರೆ. ವಿಶೇಷವಾಗಿ, ನಕ್ಸಲ್ ಪೀಡಿತ ಹಿಂಸಾಚಾರ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ 35, ಶಸ್ತ್ರಾಸ್ತ್ರ ಕಾರ್ಯಾಚರಣೆಯಲ್ಲಿ ನಿಯೋಜಿಸಲಾದ 45 ಹಾಗೂ ಈಶಾನ್ಯ ಪ್ರದೇಶದಲ್ಲಿ ನಿಯೋಜಿಸಲಾದ ಐವರು ಸಿಬ್ಬಂದಿ ಶೌರ್ಯ ಪದಕಕ್ಕೆ ಆಯ್ಕೆಯಾಗಿದ್ದಾರೆ. ಇಕ್ಕಡ ಹೆಚ್ಚಾಗಿ ನಾಲ್ವರಿ ಅಗ್ನಿಶಾಮಕ ಸಿಬ್ಬಂದಿಯವರೂ ಶೌರ್ಯ ಪದಕಕ್ಕೆ ಭಾಜನರಾಗಿದ್ದಾರೆ.

ಅಧಿಕೃತ ಹೇಳಿಕೆಯ ಪ್ರಕಾರ, ಈ ಬಾರಿ ಶೌರ್ಯ ಮತ್ತು ಸೇವಾ ಪದಕಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು 33 ಶೌರ್ಯ ಪದಕಗಳನ್ನು ಪಡೆದಿದ್ದಾರೆ. ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರ ಪೊಲೀಸ್ (31), ತೃತೀಯ ಸ್ಥಾನದಲ್ಲಿ ಉತ್ತರ ಪ್ರದೇಶ ಪೊಲೀಸ್ (18) ಹಾಗೂ ನಾಲ್ಕನೇ ಸ್ಥಾನದಲ್ಲಿ ದೆಹಲಿ ಪೊಲೀಸ್ (14) ಇದ್ದಾರೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಪೈಕಿ CRPF 12 ಶೌರ್ಯ ಪ್ರಶಸ್ತಿಗಳನ್ನು ಪಡೆದ ಏಕೈಕ ಪಡೆ ಆಗಿದೆ. ಈ ಬಾರಿ ಘೋಷಿತ ಪಟ್ಟಿಯಲ್ಲಿ ಒಟ್ಟು 101 ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ (PSM) ಹಾಗೂ 756 ವಿಶಿಷ್ಟ ಸೇವಾ ಪದಕ (MSM) ಸಹ ಸೇರಿವೆ.

ಸ್ವಿಮ್ಮಿಂಗ್ ಪೂಲ್‌ʼನಲ್ಲಿ ಮಹಿಳೆಯ ಶವ ಪತ್ತೆ: ಪತಿಯಿಂದಲೇ ಕೊಲೆ, ಆರೋಪ

0

ರಾಮನಗರ: ಕನಕಪುರ ತಾಲ್ಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಳನ್ನು ಪ್ರತಿಭಾ (29) ಎಂದು ಗುರುತಿಸಲಾಗಿದೆ.

ಪ್ರತಿಭಾ ಮತ್ತು ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸಿಸುತ್ತಿದ್ದರು. ಪ್ರತಿಭಾ ಬಾಬುಗೆ ಎರಡನೇ ಪತ್ನಿಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇನ್ನೂ ಕೌಟುಂಬಿಕ ಕಲಹ ಮತ್ತು ಗಲಾಟೆ ಹಿನ್ನೆಲೆಯಲ್ಲಿ ಪತಿ ಬಾಬು ಪ್ರತಿಭಾವನ್ನು ಕೊಲೆ ಮಾಡಿದಾಗಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಕುಟುಂಬಸ್ಥರ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್

0

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ ಪರಿಣಾಮ ಭಕ್ತನೊಬ್ಬ ಮೃತರಾಗಿದ್ದ ಘಟನೆಯ ಹಿನ್ನೆಲೆಯಲ್ಲಿ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಮತ್ತು ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮವನ್ನು ಜಾರಿಗೊಳಿಸಿದೆ. ಇಂದಿನಿಂದ ಈ ಆದೇಶ ಅನ್ವಯವಾಗಲಿದೆ.

ಜಿಲ್ಲಾಧಿಕಾರಿ ಶ್ರೀ ರೂಪಾ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಪಾದಯಾತ್ರೆ ಮಾಡಬಹುದು. ಇದೇ ವೇಳೆ, ದ್ವಿಚಕ್ರ ವಾಹನಗಳ ಪ್ರವೇಶವೂ ಈ ಸಮಯಕ್ಕೆ ಮಾತ್ರ ಸೀಮಿತವಾಗಲಿದೆ.

ಬುಧವಾರ ಬೆಳಿಗ್ಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಅವರ ಆತ್ಮಹತ್ಯೆ ಸಂಭವಿಸಿತ್ತು. ಈ ಘಟನೆ ನಂತರ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಮೊದಲು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಪಾದಯಾತ್ರೆಗೆ ನಿರ್ಬಂಧ ಹೇರಿತ್ತು.

ಈ ಹೊಸ ನಿಯಮದೊಂದಿಗೆ ಭಕ್ತರ ಸುರಕ್ಷತೆ ದೃಷ್ಟಿಯಿಂದ ಪಾದಯಾತ್ರೆ ಮತ್ತು ವಾಹನ ಸಂಚಾರ ಸಮಯವನ್ನು ನಿಗದಿಪಡಿಸಲಾಗಿದೆ. ಜಿಲ್ಲಾಡಳಿತ ಎಲ್ಲ ಪಾದಯಾತ್ರಿಕರು ಅಧಿಕೃತ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮನವಿ ಮಾಡಿಕೊಂಡಿದೆ.

ವರ್ತೂರು ಶ್ರೀ ಚನ್ನರಾಯಸ್ವಾಮಿ ಜಾತ್ರೆ| 3 ದಿನ ಸಂಚಾರ ಮಾರ್ಗ ಬದಲಾವಣೆ!

0

ಬೆಂಗಳೂರು: ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರಿನಲ್ಲಿ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ, ದೀಪೋತ್ಸವ ಹಾಗೂ ಪಲ್ಲಕ್ಕಿ ಕರಗ ಮಹೋತ್ಸವವು ಇಂದಿನಿಂದ 27ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಜಾತ್ರಾ ಸ್ಥಳದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೂರ್ವ ವಿಭಾಗ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳು:-

ವೈಟ್‌ಫೀಲ್ಡ್‌ನಿಂದ ಗುಂಜೂರು ಕಡೆಗೆ ಬರುವ ಲಘು ವಾಹನಗಳು ಇಮ್ಮಡಿಹಳ್ಳಿ, ವಾಲೇಪುರ ಸೂರಹುಣಸೆ ರಸ್ತೆಯಿಂದ ಮಧುರನಗರದ ಮೂಲಕ ಹಲಸಹಳ್ಳಿ ಗುಂಜೂರು ಕಡೆಗೆ ಹಾಗೂ ವರ್ತೂರು ಪೊಲೀಸ್ ಠಾಣೆ ಕಡೆಯಿಂದ ಸಂಚರಿಸಬಹುದಾಗಿದೆ.

ಗುಂಜೂರಿನಿಂದ ವೈಟ್‌ ಫೀಲ್ಡ್ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರಿನ ಶ್ರೀರಾಮದೇವಾಲಯದ ಬಳಿ ಬಲ ತಿರುವು ಪಡೆದು ಹಲಸಹಳ್ಳಿ ರಸ್ತೆಯಿಂದ ಮಧುರನಗರದ ಮೂಲಕ ಸೂರಹುಣಸೆ ಮತ್ತು ವಾಲೇಪುರ ಮೂಲಕ ಹಾಗೂ ವರ್ತೂರು ಕಾಲೇಜು ಮೂಲಕ ವೈಟ್ ಫೀಲ್ಡ್ ಕಡೆಗೆ ಸಂಚರಿಸಬಹುದು.

ಗುಂಜೂರು ಕಡೆಯಿಂದ ಬರುವ ವಾಹನ ಸವಾರರು ಕುಂದಲಹಳ್ಳಿ ಮತ್ತು ಮಾರತ್ ಹಳ್ಳಿ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರು ಕೆ.ಎಫ್.ಸಿ ರಸ್ತೆ, ಪಣತ್ತೂರು ರೈಲ್ವೆ ಬ್ರಿಜ್ ಮೂಲಕ ಹಾಗೂ ವಿಬ್ ಗಯಾರ್ ಕಡೆಯಿಂದ ಸಂಚರಿಸವಂತೆ ಸಂಚಾರ ಪೊಲೀಸರು ಕೋರಿದ್ದಾರೆ.

ಮತದಾರರಾಗುವ ಕ್ಷಣವನ್ನು ಸಂಭ್ರಮಿಸಿ; ಯುವಜನತೆಗೆ ಪ್ರಧಾನಿ ಮೋದಿ ಕರೆ

0

ದೆಹಲಿ: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಭಾಗಗಳಲ್ಲಿರುವ ಮೈ-ಭಾರತ್ ಸ್ವಯಂಸೇವಕರು ಹಾಗೂ ಯುವಜನತೆಗೆ ಪತ್ರ ಬರೆದು, ಮತದಾರರಾಗುವ ಕ್ಷಣವನ್ನು ಸಂಭ್ರಮದಿಂದ ಆಚರಿಸುವಂತೆ ಕರೆ ನೀಡಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾರರಾಗಿರುವುದು ಅತ್ಯಂತ ಮಹತ್ವದ ಹಕ್ಕು ಹಾಗೂ ದೊಡ್ಡ ಹೊಣೆಗಾರಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದ್ದು, ವಿದ್ಯಾರ್ಥಿಗಳು ಮತದಾರರಾಗುವ ಸಂದರ್ಭವನ್ನು ಶಿಕ್ಷಣ ಸಂಸ್ಥೆಗಳು ವಿಶೇಷವಾಗಿ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತವನ್ನು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವೆಂದು ಕರೆಯಲಾಗುತ್ತದೆ ಎಂಬುದು ಸತ್ಯವಾಗಿದ್ದು, ಶತಮಾನಗಳ ಪ್ರಜಾಸತ್ತಾತ್ಮಕ ಮೌಲ್ಯಗಳ ಮೂಲಕ ಭಾರತಕ್ಕೆ ‘ಪ್ರಜಾಪ್ರಭುತ್ವದ ತಾಯಿ’ ಎಂಬ ಹೆಮ್ಮೆಯೂ ಇದೆ ಎಂದು ಮೋದಿ ತಿಳಿಸಿದ್ದಾರೆ. 1951ರಲ್ಲಿ ಆರಂಭಗೊಂಡ ಮೊದಲ ಸಾರ್ವತ್ರಿಕ ಚುನಾವಣೆಯ 75 ವರ್ಷಗಳನ್ನು ಈ ವರ್ಷ ಸ್ಮರಿಸಲಾಗುತ್ತಿದ್ದು, ಮತದಾನವು ಪವಿತ್ರ ಸಂವಿಧಾನಾತ್ಮಕ ಹಕ್ಕು ಹಾಗೂ ಭಾರತದ ಭವಿಷ್ಯ ನಿರ್ಮಾಣದಲ್ಲಿ ಸಕ್ರಿಯ ಭಾಗವಹಿಸುವುದರ ಸಂಕೇತವಾಗಿದೆ. ಮತದಾನದ ವೇಳೆ ಬೆರಳಿಗೆ ಹಾಕುವ ಮಸಿ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಜೀವಂತತೆ ಮತ್ತು ಗೌರವದ ಗುರುತಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ರಾಜೀವ್‌ ಗೌಡ ತಪ್ಪಿಸಿಕೊಂಡರೂ ಬಿಡಲ್ಲ; ಶೀಘ್ರವೇ ಬಂಧಿಸಲಾಗತ್ತೆ, ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ!

0

ಬೆಂಗಳೂರು: ರಾಜೀವ್‌ ಗೌಡ ಬಂಧನಕ್ಕೆ ಮೊದಲ ದಿನವೇ ಆದೇಶ ನೀಡಲಾಗಿತ್ತು. ಆದರೆ ಬಂಧಿಸುವಷ್ಟರಲ್ಲಿ ಅವರು ತಪ್ಪಿಸಿಕೊಂಡು ಹೋಗಿದ್ದಾರೆ. ಎಷ್ಟು ದಿನ ಅಡಗಿ ಕುಳಿತರೂ ಖಂಡಿತವಾಗಿಯೂ ಅವರನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜೀವ್‌ ಗೌಡನನ್ನು ತಕ್ಷಣ ಬಂಧಿಸಲಾಗುವುದು, ಯಾವುದೇ ಮುಲಾಜಿಲ್ಲ, ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಬೆಳಗಾವಿಯಲ್ಲಿ ನಡೆದ 400 ಕೋಟಿ ರೂ. ರಾಬರಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಪೊಲೀಸರು ತನಿಖೆಗೆ ಸಹಕಾರ ಕೋರಿ ನಮ್ಮ ಪೊಲೀಸರಿಗೆ ಪತ್ರ ಬರೆದಿದ್ದಾರೆ. ತನಿಖೆ ಇನ್ನೂ ಪ್ರಾರಂಭಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ಸಿಕ್ಕ ಬಳಿಕ ರಾಜ್ಯ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಗಣರಾಜ್ಯೋತ್ಸವದ ವೇಳೆ ರಾಜ್ಯಪಾಲರು ಭಾಷಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಇಂದು ಸಂಜೆಯೊಳಗೆ ಸ್ಪಷ್ಟತೆ ಸಿಗಲಿದೆ, ಭಾಷಣದ ಪ್ರತಿಯನ್ನು ನಾನು ಇನ್ನೂ ನೋಡಿಲ್ಲ, ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದು ತಿಳಿಯಲಿದೆ ಎಂದು ಹೇಳಿದರು.

error: Content is protected !!