Pulwama Attack: ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್..!

0
Spread the love

ಇಸ್ಲಾಮಾಬಾದ್: ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು. ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ.

Advertisement

ಇದೀಗ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿರುವುದು ಹೌದು ಎಂದು ಖುದ್ದಾಗಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ವಾಯುಪಡೆಯ ವಾಯು ವೈಸ್ ಮಾರ್ಷಲ್ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕ (ಡಿಜಿಪಿಆರ್) ಔರಂಗಜೇಬ್ ಅಹ್ಮದ್ ಪತ್ರಿಕಾಗೋಷ್ಠಿಯಲ್ಲಿ, ಪುಲ್ವಾಮಾ ದಾಳಿಯನ್ನು ‘ಯುದ್ಧತಂತ್ರದ ಪ್ರತಿಭೆ’ಗೆ ಒಂದು ಉದಾಹರಣೆ ಎಂದು ಹೇಳಿದ್ದಾರೆ.

ಈ ಹೇಳಿಕೆಯು ಪುಲ್ವಾಮಾ ದಾಳಿಯಲ್ಲಿ ಮಾತ್ರವಲ್ಲದೆ ಇತ್ತೀಚಿನ ಪಹಲ್ಗಾಮ್ ದಾಳಿಯಲ್ಲೂ ಪಾಕಿಸ್ತಾನದ ಪಾತ್ರದ ಬಗ್ಗೆ ಅನುಮಾನಗಳನ್ನು ದೃಢಪಡಿಸುತ್ತಿದೆ. ಔರಂಗಜೇಬ್ ಅಹ್ಮದ್ ಅವರ ಈ ಹೇಳಿಕೆಯು ಪಾಕಿಸ್ತಾನದ ವರ್ಷಗಳ ಹಳೆಯ ಕಥೆಯನ್ನು ತಲೆಕೆಳಗೆ ಮಾಡಿದಂತಾಗಿದೆ. ಪುಲ್ವಾಮಾ ಅಥವಾ ಯಾವುದೇ ಭಯೋತ್ಪಾದಕ ಚಟುವಟಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಪದೇ ಪದೇ ಹೇಳುತ್ತಿದೆ.

ಪುಲ್ವಾಮಾ ಭಯೋತ್ಪಾದಕ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಏರ್ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್, ನಮ್ಮ ಯುದ್ಧತಂತ್ರದ ಪ್ರತಿಭೆಯ ಮೂಲಕ ನಾವು ಇದನ್ನು ಭಾರತಕ್ಕೆ ಹೇಳಲು ಪ್ರಯತ್ನಿಸಿದ್ದೇವೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here