ಇಸ್ಲಾಮಾಬಾದ್‍ನಲ್ಲಿ ಕಳೆದ ವಾರ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‍ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Advertisement
ಕಳೆದ ವಾರ ಅಡಿಯಾಲಾ ಜೈಲಿನಲ್ಲಿ ಬಂಧನದಲ್ಲಿರುವ ಇಮ್ರಾನ್ ಖಾನ್‍ರ ಬಿಡುಗಡೆಗೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷದ ಸದಸ್ಯರು ಸಾಕಷ್ಟು ಹೋರಾಟ ನಡೆಸಿದ್ದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಹಲವರು ಮೃತಪಟ್ಟಿದ್ದರು.
ಈ ಪ್ರತಿಭಟನೆಗೆ ಇಮ್ರಾನ್ ಖಾನ್ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಲು ಇಮ್ರಾನ್ ಖಾನ್‍ಗೆ ಪೊಲೀಸ್ ಕಸ್ಟಡಿ ವಹಿಸುವಂತೆ ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಇಮ್ರಾನ್‍ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.