ಲಕ್ನೋ: ಪಾಕಿಸ್ತಾನ ಎಂದಿಗೂ ನೆಟ್ಟಗಾಗದ ನಾಯಿಯ ಬಾಲ ಇದ್ದಂತೆ, ಅವರಿಗೆ ಅವರದ್ದೇ ಭಾಷೆಯಲ್ಲೇ ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಕ್ನೋದಲ್ಲಿ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,
ಮುಂದೆ ನಡೆಯುವ ಯಾವುದೇ ಭಯೋತ್ಪಾದನಾ ಕೃತ್ಯವನ್ನು ಯುದ್ಧ ಕೃತ್ಯವೆಂದೇ ಪರಿಗಣಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಭಯೋತ್ಪಾದನೆಯನ್ನ ಸಂಪೂರ್ಣವಾಗಿ ಹತ್ತಿಕ್ಕುವವರೆಗೆ ಇಂತಹ ಸಮಸ್ಯೆಗಳನ್ನ ಪರಿಹರಿಸಲಾಗುವುದಿಲ್ಲ. ಆದ್ದರಿಂದ ಮೋದಿಯವರ ನಾಯಕತ್ವದಲ್ಲಿ ನಾವೆಲ್ಲರೂ ಒಂದೇ ಧ್ವನಿಯಲ್ಲಿ ಭಯೋತ್ಪಾದನೆ ಹತ್ತಿಕ್ಕುವ ನಿಟ್ಟಿನಲ್ಲಿ ಹೋರಾಡಬೇಕು ಎಂದು ಕರೆ ನೀಡಿದರು.



