ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನವು ಪಿಒಕೆಯನ್ನು ಭಯೋತ್ಪಾದಕ ಕೇಂದ್ರವಾಗಿ ಬಳಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು,
ಜಮ್ಮು ಮತ್ತು ಕಾಶ್ಮೀರ ಹಾಗೂ ದೆಹಲಿಯ ಜನರ ಹೃದಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಪಾಕಿಸ್ತಾನವು ಪಿಒಕೆಯನ್ನು ಭಯೋತ್ಪಾದಕ ಕೇಂದ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದರು.
ಇನ್ನೂ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರವನ್ನು ಅಸ್ಥಿರಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಅದಲ್ಲದೆ ಪಿಒಕೆ ಇಲ್ಲದೆ ಜಮ್ಮು ಮತ್ತು ಕಾಶ್ಮೀರ ಅಪೂರ್ಣ ಎಂದು ಹೇಳಿದರು.



