ಬೆಂಗಳೂರಿನಲ್ಲಿ ಪಾಕಿಸ್ತಾನದ ಗೂಢಾಚಾರಿ ಬಂಧನ!

0
Spread the love

ಬೆಂಗಳೂರು: ಕೇಂದ್ರ, ರಾಜ್ಯ ಹಾಗೂ ಗುಪ್ತಚರ ದಳ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಪರವಾಗಿ ಗೂಡಚಾರಿಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ದೀಪರಾಜ್ ಚಂದ್ರನ್ ಬಂಧಿತ ಆರೋಪಿಯಾಗಿದ್ದು, ಈತ ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿಯಾಗಿದ್ದು, ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದನು.

Advertisement

ಬಿಇಎಲ್​ನ ಪ್ರಾಡಕ್ಟ್​​​ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್​​ ಸೆಂಟರ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಮತ್ತಿಕೆರೆ ಬಳಿ ನೆಲೆಸಿದ್ದ. ಈತ ಬಿಇಎಲ್​​​ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ. ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ.


Spread the love

LEAVE A REPLY

Please enter your comment!
Please enter your name here