ಪಾಕಿಸ್ತಾನದವರು ಪ್ರಚೋದಿಸುವ ಕೆಲಸ ಮಾಡಿದ್ದು, ಖಂಡನೀಯ: ಸಚಿವ ಕೆ. ಹೆಚ್. ಮುನಿಯಪ್ಪ

0
Spread the love

ಬೆಳಗಾವಿ: ಪಾಕಿಸ್ತಾನದವರು ಪ್ರಚೋದಿಸುವ ಕೆಲಸ ಮಾಡಿದ್ದು, ಖಂಡನೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,

Advertisement

ಈಗಾಗಲೇ ನಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಹ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಒಮ್ಮತದ ಬೆಂಬಲ ಕೊಡುವುದಾಗಿ ಹೇಳಿದ್ದಾರೆ. ಹಾಗಾಗಿ, ನಮಗೆ ಮೊದಲು ದೇಶ ಮುಖ್ಯ. ಪಾಕಿಸ್ತಾನದವರು ಪ್ರಚೋದಿಸುವ ಕೆಲಸ ಮಾಡಿದ್ದು, ಖಂಡನೀಯ ಎಂದು ಕಿಡಿಕಾರಿದರು.

ದೇಶದಲ್ಲಿ ಇಂಥ ಘಟನೆಗಳು ಆಗಬಾರದು. ಇಂಥ ಘಟನೆಗಳು ಸಂಭವಿಸಿದಾಗ ಖಂಡಿಸಬೇಕಿತ್ತು. ಇದನ್ನು ಖಂಡಿಸಿರುವ ಕೇಂದ್ರ ಸರ್ಕಾರ ಭಯೋತ್ಪಾದಕರ ಮೇಲೆ ಕ್ರಮ ಜರುಗಿಸಬೇಕು.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎಂದು ನೀಡಿದ ಹೇಳಿಕೆಗೆ ಅವರೇ‌ ನಿನ್ನೆ ಉತ್ತರ ಕೊಟ್ಟಿದ್ದಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.


Spread the love

LEAVE A REPLY

Please enter your comment!
Please enter your name here