ಕಂಪ್ಲಿ: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಸಮೀಪ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ರಸ್ತೆಗೆ ಸೋರಿಕೆಯಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ, ಬಕೆಟ್, ಕ್ಯಾನ್ಗಳು ಮತ್ತು ವಿವಿಧ ಪಾತ್ರೆಗಳನ್ನು ಹಿಡಿದು ಸೋರಿದ ಪಾಮ್ ಆಯಿಲ್ ಅನ್ನು ಸಂಗ್ರಹಿಸಿಕೊಂಡಿದ್ದಾರೆ.
ಅಪಘಾತದಲ್ಲಿ ಅದೃಷ್ಟವಶಾತ್ ಲಾರಿಯ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಂಪ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟ್ಯಾಂಕರ್ ಪಲ್ಟಿಯಾಗಲು ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



