ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಸಂಜೀವಿನಿ, ಬಡ ಜನರ ಆಶಾಕಿರಣವಾಗಿದೆ ಎಂದು ಗದಗ ತಾಲೂಕಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಪ್ರೊ. ಸಂಗಮೇಶ ಹಾದಿಮನಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನುಡಿದಂತೆ ನಡೆದ ಸರಕಾರ ಇದಾಗಿದೆ. ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆಗಳ ಮೂಲಕ ಜನರ ವಿಶ್ವಾಸ ಗಳಿಸುವುದರ ಜೊತೆಗೆ ನಾವು ನಿಮ್ಮ ನೋವಿನಲ್ಲೂ ಜೊತೆಗಿದ್ದೇವೆ ಎಂಬ ಭರವಸೆಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ಆತ್ಮವಿಶ್ವಾಸದಿಂದ ಬದುಕಲು ಸಹಕಾರಿಯಾಗಿದೆ ಎಂದು ಫಲಾನುಭವಿಗಳು ಹೇಳುವಾಗ ಅವರ ಮುಖದಲ್ಲಿನ ಮಂದಹಾಸ ಆತ್ಮತೃಪ್ತಿ ನೀಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.



