ಬಾಗಲಕೋಟೆ:- ಪಂಚಮಸಾಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬಿಜೆಪಿ ನಾಯಕರು ಆಸ್ಪತ್ರೆಗೆ ದೌಡಾಯಿಸಿದರು.
Advertisement
ಲೋ ಬಿಪಿ, ವಾಂತಿ, ಎದೆ ನೋವು, ತಲೆ ನೋವಿನಿಂದ ಬಳಲುತ್ತಿರುವ ಸ್ವಾಮೀಜಿ ಗಳನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯಕ್ಕೆ ತುತ್ತಾಗಿದ್ದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡು ಬಂದಿದೆ. ಬಾಗಲಕೋಟೆ ಕೆರೂಡಿ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡ ಬಂದ ಹಿನ್ನೆಲೆಯಲ್ಲಿ ಭಕ್ತರು ಅವರನ್ನು ಭೇಟಿ ಮಾಡಿ ವಿಚಾರಿಸುತ್ತಿದ್ದಾರೆ.
ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ, ಸಂಸದ ಪಿಸಿ ಗದ್ದಿಗೌಡರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


