ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ವಿಧಾನಸೌಧ ಮುತ್ತಿಗೆ ಪ್ರತಿಭಟನೆಗೆ ಸರ್ಕಾರ ನಿಷೇಧ ಹೇರಿತ್ತು. ಆದರೆ ಬಿಜೆಪಿ ನಾಯಕರು ಸದನದಲ್ಲಿ ಪ್ರತಿಭಟಿಸಿದರೆ, ಸ್ವಾಮೀಜಿಗಳು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಶಾಂತ ರೀತಿ ಪ್ರತಿಭಟನೆಗೆ ಅನುಮತಿ ನೀಡಲಾಗಿದೆ. ಆದ್ರೆ ಇದೀಗ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ.
ಸುವರ್ಣಸೌಧಕ್ಕೆ ನುಗ್ಗಲು ಪ್ರತಿಭಟನೆಕಾರರು ಯತ್ನಿಸಿದ್ದಾರೆ. ಇದರಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಹೋರಾಟಗಾರರು ಪೊಲೀಸರ ಮೇಲೆಯೇ ಕಲ್ಲು ತೂರಾಟ, ಚಪ್ಪಲಿ ಎಸೆದಿದ್ದಾರೆ.
ಪೊಲೀಸರು ಮತ್ತು ಪಂಚಮಸಾಲಿ ಸಮಾಜದ ಜನರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಆಕ್ರೋಶಗೊಂಡ ಹೋರಾಟಗಾರರು ಸಹ ಪೊಲೀಸರ ಜತೆ ವಾಗ್ದಾದ ನಡೆಸಿದ್ದಾರೆ. ಅಲ್ಲದೇ ಬ್ಯಾರಿಕೇಡ್ಗಳನ್ನು ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸುತ್ತಿದ್ದಾರೆ. ಇನ್ನು ಘಟನೆಯಲ್ಲಿ ಪೊಲೀಸರು ಹಾಗೂ ಹೋರಾಟಗಾರರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.