ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಜುಲೈ 28ರಂದು ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪಂಚಮಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಜರುಗಲಿದೆ.
ಸಮಾರಂಭದ ಸಾನ್ನಿಧ್ಯವನ್ನು ಕೂಡಲಸಂಗಮ ಧರ್ಮಪೀಠದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ವಹಿಸುವರು. ಪ್ರತಿಭಾವಂತ ವಿದ್ಯಾರ್ಥಿಗಳು, ಸಮಾಜದ ಹಿರಿಯರು, ಮುಖಂಡರು, ಮಹಿಳೆಯರು, ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶಿವು ಹಿರೇಮನಿಪಾಟೀಲ ಮನವಿ ಮಾಡಿಕೊಂಡಿದ್ದಾರೆ.



